Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೇಶ ಭಾಷೆಗಳ ಉಪಯೋಗ ಹೇಗೆ ಆಗಬೇಕೆಂಬ ಉನ್ನತ ಯೋಚನೆಗಳು ನಮ್ಮ ನಡುವೆ ಜರಗುತಿದ್ದರೂ, ಅವುಗಳನ್ನು ಕಾರ್ಯಗೊಳಿಸಲು ಇರುವ ಯೋಜನೆಗಳು ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ ಎಂದು ಕನ್ನಡ ಕೀಬೋರ್ಡ ಜನಕ ಹಾಗೂ ಮಣಿಪಾಲ ಎಂಐಟಿ ನಿವೃತ್ತ ಪ್ರಾಧ್ಯಾಪಕ ಡಾ. ಕೆ.ಪಿ ರಾವ್ ನುಡಿದರು. ಅವರು ಮಿಜಾರಿನ ಆಳ್ವಾಸ್ ತಾಂತ್ರಿಕ ವಿದ್ಯಾಲಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಮೂಡುಬಿದಿರೆ ತಾಲೂಕು ಘಟಕದ ಸಹಯೋಗದೊಂದಿಗೆ ಕನ್ನಡ ಸಂಘದ ವಾರ್ಷಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ 2022ರಲ್ಲಿ ಮುಖ್ಯ ಅತಿಥಿಗಳಾಗಿ “ಭಾರತೀಯ ಭಾಷೆಗಳು ಮತ್ತು ತಾಂತ್ರಿಕ ಶಿಕ್ಷಣ” ವಿಷಯದ ಕುರಿತು ಮಾತನಾಡಿದರು. ನಮ್ಮ ಸರ್ಕಾರಗಳ ಕನ್ನಡ ಸಂವೇಧಿ ನಿಲುವು ಸಂಶಯಾಸ್ಪದವಾಗಿದೆ. ಭಾಷೆಯನ್ನು ಉಳಿಸಿ ಬೆಳಸುವಲ್ಲಿ ಕೆಲಸಗಳಾಗಬೇಕು. ಆಗ ಭಾಷೆಯ ಜತೆಗೆ ಸೇರಿಕೊಂಡಿರುವ ಆಚಾರ, ವಿಚಾರ, ಸಂಸ್ಕೃತಿಗಳು ಉಳಿಯಲು ಸಾಧ್ಯ ಎಂದರು. ಸೃಜನಾತ್ಮಕ ಶಿಸ್ತಿನ ಮೂಲಕ ತೊಡಗುವ ಯಾವುದೇ ಕೆಲಸ ಸಫಲವಾಗಬಲ್ಲದು. ತಾವು ಕೆ ಪಿ ರಾವ್ ಕೀಬೋರ್ಡ ತಯಾರಿಸದ ಬಗೆಯನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ವೆಂಟನಾ ಫೌಂಡೇಶನ್ ವತಿಯಿಂದ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 15 ಕೆ.ವಿ.ಯ ಜೆನರೇಟರನ್ನು ಇತ್ತೀಚಿಗೆ ಕೊಡುಗೆಯಾಗಿ ನೀಡಲಾಯಿತು. ಉಡುಪಿಯ ಮಾಹಿತಿ ತಂತ್ರಜ್ಞಾನದ ದಿಗ್ಗಜ ಸಂಸ್ಥೆ 99 ಗೇಮ್ಸ್ ಆನ್‌ಲೈನ್ ಉಪಾಧ್ಯಕ್ಷೆ ಹಾಗೂ ವೆಂಟನಾ ಫೌಂಡೇಶನ್ ಟ್ರಸ್ಟಿ ಶಿಲ್ಪಾ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಜೆನರೇಟರ್ ಹಸ್ತಾಂತರಿಸಿ ಮಾತನಾಡಿ ವೆಂಟನಾ ಫೌಂಡೇಶನ್ ಮೂಲಕ ಉಡುಪಿ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಸರಕಾರಿ ಕನ್ನಡ ಮಾಧ್ಯಮ ಶಾಲೆಗೆ ಮೂಲ ಸೌಕರ್ಯವನ್ನು ಒದಗಿಸುವುದು. ಪರಿಸರ ಹಾಗೂ ಜಲ ಸಂರಕ್ಣಣೆ ವಿಭಾಗದಲ್ಲಿ ಕೆರೆಯ ಸ್ವಚ್ಚತೆ, ಗಿಡಗಳನ್ನು ಬೆಳೆಸಿ ಕಾಡಿನ ನಿರ್ಮಾಣ, ಕಲೆ, ಸಂಸ್ಕೃತಿಯ ಉಳಿವು ಮುಂತಾದ ಆಯಾಮದಲ್ಲಿ ಧನಸಹಾಯ ನೀಡಲಿದ್ದೇವೆ. ರೋಹಿತ್ ಭಟ್ ಅವರ ನೇತೃತ್ವದಲ್ಲಿರುವ ಈ ಫೌಂಡೇಶನ್ ಸಮಾನ ಮನಸ್ಕರೊಂದಿಗೆ ಆರಂಭಗೊಂಡಿದೆ ಎಂದರು. ಗ್ರಾಮೀಣ ಭಾಗದಲ್ಲಿರುವ ಈ ಅಕಾಡೆಮಿ ದೇಶ ವಿದೇಶಗಳಲ್ಲಿ ಯಕ್ಷಗಾನ ಗೊಂಬೆಯಾಟದ ಪ್ರದರ್ಶನ ನೀಡಿ ಹೆಸರುವಾಸಿಯಾಗಿದೆ. ಈ ಅಕಾಡೆಮಿಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚು ಕಾರ್ಯಕ್ರಮ ನಡೆಯಲಿ. ಗೊಂಬೆಯಾಟಕ್ಕೆ ಸಂಬಂದಿಸಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಮತ್ತು ಮಾನವೀಯ ಮೌಲ್ಯಗಳು’ ಎಂಬ ವಿಷಯದ ಕುರಿತು ಕಾರ್ಯಾಗಾರ ನಡೆಯಿತು. ಸಿದ್ಧಾಪುರ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ರಮಾನಂದ ನಾಯಕ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ವ್ಯಕ್ತಿತ್ವ ವಿಕಸನ ಹಾಗೂ ಜೀವನ ಮೌಲ್ಯಗಳಿಗೆ ಸಂಬಂಧಿಸಿದಂತೆ ಪರಿಣಾಮಕಾರಿಯಾಗಿ ಮಾತನಾಡಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿರುವ ಮಂಜು ಕಾಳಾವರರವರು ಉಪಸ್ಥಿತರಿದ್ದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಸ್ತು, ಸನ್ನಡತೆ, ಸಂಸ್ಕಾರ, ಮಾವೀಯತೆಯ ಗುಣಗಳನ್ನು ಅಳವಡಿಸಿಕೊಂಡು ಸತ್ಪ್ರಜೆಯಾಗಿ ಬಾಳುವಂತೆ ಕರೆ ನೀಡಿದರು. ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ,ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕರಾಗಿರುವ ಉದಯ್ ನಾಯ್ಕ್ ರವರು ಅತಿಥಿಗಳನ್ನು ಪರಿಚಯಿಸಿ, ವಿದ್ಯಾರ್ಥಿನಿಯರಾದ ಲಾವಣ್ಯ ಸ್ವಾಗತಿಸಿ, ನಿಖಿತಾ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿ ಶ್ರೀಶ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಂತಾರ ಸಿನಿಮಾದಲ್ಲಿ ದೈವ ನರ್ತನದಲ್ಲಿ ಕಾಣಿಸಿಕೊಳ್ಳುವ ನಿರ್ದೇಶಕ, ನಟ ರಿಷಬ್ ಶೆಟ್ಟಿ ಅವರನ್ನು ಕೇಂದ್ರವಾಗಿರಿಸಿಕೊಂಡು ಸ್ಯಾಂಡ್ ಥೀಮ್ ಉಡುಪಿ ತಂಡದ ಕಲಾವಿದರಾದ ಹರೀಶ್ ಸಾಗಾ, ಸಂತೋಷ ಭಟ್ ಹಾಲಾಡಿ, ಪ್ರಸಾದ್ ಆರ್ ಅವರು ಕೋಟೇಶ್ವರದ ಹಳೇ ಅಳಿವೆ ಬೀಚ್ ಬಳಿ ರಚಿಸಿದ 4 ಅಡಿ ಎತ್ತರದ ಮರಳುಶಿಲ್ಪ ಪ್ರವಾಸಿಗರ ಗಮನ ಸೆಳೆಯುತ್ತಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪಶುಪಾಲನಾ ಇಲಾಖೆ ಹಾಗೂ ಗ್ರಾಮ ಪಂಚಾಯತ್ ತ್ರಾಸಿ ವತಿಯಿಂದ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಉಚಿತವಾಗಿ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ನೀಡುವ ಕಾರ್ಯಕ್ರಮ ತ್ರಾಸಿ ಗ್ರಾಮ ಪಂಚಾಯತ್ ವಠಾರದಲ್ಲಿ ಶುಕ್ರವಾರ ನಡೆಯಿತು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದೇವಾಡಿಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಶು ವೈದ್ಯಾಧಿಕಾರಿ ಡಾ.ಅರುಣ್ ಕೆ.ಪಿ. ಹಾಗೂ ಸಿಬ್ಬಂದಿಗಳು ನಾಯಿಗಳಿಗೆ ಹುಚ್ಚು ನಾಯಿ ರೋಗ ನಿರೋಧಕ ಲಸಿಕೆ ನೀಡಿದರು. ಗ್ರಾಮಸ್ಥರು ತಮ್ಮ ಸಾಕು ನಾಯಿಗಳಿಗೆ ಲಸಿಕೆ ಹಾಕಿಸಿ ಸಹಕರಿಸಿದರು. ಲೆಕ್ಕ ಸಹಾಯಕ ಶಿವಾನಂದ, ಸದಸ್ಯರಾದ ರೆನ್ಸಮ್ ಪಿರೇರಾ, ಮಿಥುನ್ ದೇವಾಡಿಗ, ವಿಜಯ ಪೂಜಾರಿ, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಯ ಸಮಗ್ರ ಅಭಿವೃದ್ಧಿಯ ಜತೆಗೆ ಶೈಕ್ಷಣಿಕ ಪ್ರಗತಿ ಸಾಧಿಸಲು ಸ್ಥಿರವಾದ ಮಾನಸಿಕ ಆರೋಗ್ಯ ಇರಬೇಕಾದುದು ಅಗತ್ಯ. ನಮ್ಮ ದೇಹವು ಮನಸ್ಸಿನಿಂದ ನಿಯಂತ್ರಿಸಲ್ಪಡುತ್ತದೆ. ಆದುದರಿಂದ ಮನಸ್ಸು ಆರೋಗ್ಯಪೂರ್ಣವಾಗಿದ್ದರೆ ಮಾತ್ರ ಆರೋಗ್ಯಯುತ ದೇಹ, ಆರೋಗ್ಯಯುತ ಚಟುವಟಿಕೆ ಇರಲು ಸಾಧ್ಯ. ಇವೆರಡಕ್ಕೂ ಸಮಾನ ಮಹತ್ವ ನೀಡಬೇಕಾಗುತ್ತದೆ ಎಂದು ತ್ರಾಸಿಯ ಡಾನ್ ಬಾಸ್ಕೊ ಶಾಲೆಯ ರೆಕ್ಟರ್ ಫಾ. ಮ್ಯಾಕ್ಸಿಮ್ ಡಿಸೋಜ ಹೇಳಿದರು. ಈಚೆಗೆ ಶಾಲೆಯಲ್ಲಿ ನಡೆದ ಮಾನಸಿಕ ಆರೋಗ್ಯ ಅರಿವು ದಿನಾಚರಣೆಯನ್ನು ಸಂಬಂಧಿತ ಭಿತ್ತಿಚಿತ್ರವನ್ನು ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಆಚರಣೆ ನಿಮಿತ್ತ ಒಂದು ವಾರ ನಡೆಯುವ ಚಟುವಟಿಕೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿ, ಅದರ ಅರಿವು ಗಳಿಸಬೇಕು ಎಂದರು. ಶಾಲೆಯ ’ಜೀವನ ವಿಭಾಗ’ದ ಆಶ್ರಯದಲ್ಲಿ ಸ್ವಾಸ್ಥ್ಯ ವಿಭಾಗದ ಮುಖ್ಯಸ್ಥರ ಮಾರ್ಗದರ್ಶನ ಮತ್ತು ಸೀನಿಯರ್ ಸೆಕೆಂಡರಿ ವಿದ್ಯಾರ್ಥಿಗಳ ಸಹಯೋಗದಲ್ಲಿ ಜಾಗತಿಕ ಮಾನಸಿಕ ಆರೋಗ್ಯ ದಿನದಂದು ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಮಾನಸಿಕ ಆರೋಗ್ಯದ ಮಹತ್ವ ಹಾಗೂ ಸ್ವಾಸ್ಥ್ಯ ಮತ್ತು ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತೋಟದಲ್ಲಿ ಏಣಿ ಹಿಡಿದು ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ತಾಲೂಕಿನ ಶಿರೂರು ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ ಉದ್ಯಮಿ, ಸಾಮಾಜಿಕ ಮುಂದಾಳು ಸತೀಶ ಸುಬ್ರಾಯ ಪ್ರಭು (52) ದಾರುಣವಾಗಿ ಮೃತಪಟ್ಟಿದ್ದಾರೆ. ಬೆಳಿಗ್ಗೆ ತೋಟಕ್ಕೆ ಬಂದಿದ್ದ ಕೆಲಸದವರ ಜೊತೆ ತೆಂಗಿನಕಾಯಿ ಕಟಾವು ಮಾಡುತ್ತಿದ್ದ ವೇಳೆ ಏಣಿ ಪಕ್ಕಕ್ಕಿಡುವ ಸಂದರ್ಭ ತೋಟದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗೆ ಏಣಿ ತಗುಲಿ ಈ ದುರ್ಘಟನೆ ನಡೆದಿದೆ. ಮಂಗಳವಾರ ಬೆಳಿಗ್ಗೆ ಪವರ್ ಕಟ್ ಇರಲಿಲ್ಲ. ವಿದ್ಯುತ್ ತಂತಿಗಳು ಕೆಳಕ್ಕೆ ಜೋತು ಬಿದ್ದಿದ್ದು ಅವಘಡಕ್ಕೆ ಕಾರಣ ಎನ್ನಲಾಗಿದೆ. ಶಿರೂರಿನಲ್ಲಿ ಹಲವು ವರ್ಷಗಳ ಕಾಲ ಪ್ರಭು ಡ್ರೆಸ್‌ಲ್ಯಾಂಡ್ ಬಟ್ಟೆ ಮಳಿಗೆ ನಡೆಸಿದ್ದ ಸತೀಶ್ ಪ್ರಭು ಅವರು ಸಾಮಾಜಿಕ ರಂಗದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಎಲ್ಲರೊಂದಿಗೂ ಅನ್ಯೂನ್ಯತೆಯಿದ್ದಿದ್ದರು. ಶಿರೂರಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸದಸ್ಯರಾದ ಸತೀಶ್ ಪ್ರಭು ಅವರು ಬಿಜೆಪಿ ಪಕ್ಷದಲ್ಲಿಯೂ ಗುರುತಿಸಿಕೊಂಡಿದ್ದರು. ಶಿರೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗದಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಹೆಚ್‌ಸಿಇಎಸ್ ಪದವಿಪೂರ್ವ ಕಾಲೇಜು ಗದಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಉಡುಪಿ ಜಿಲ್ಲೆಯಿಂದ ಪ್ರತಿನಿಧಿಸಿದ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಶ್ರೀಶ ಶೆಟ್ಟಿ ಪ್ರಥಮ ಪಿ.ಯು.ಸಿ 97ಕೆ.ಜಿ ಮೇಲ್ಪಟ್ಟು ವಿಭಾಗದಲ್ಲಿಬೆಳ್ಳಿ ಪದಕ, ಆರ್ಯ ಮೊಗವೀರ ದ್ವಿತೀಯ ಪಿ.ಯು‌‌.ಸಿ 92 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಹಾಗೂ ರೋಹಿತ್ ದೇವಾಡಿಗ ಪ್ರಥಮ ಪಿ.ಯು.ಸಿ. 97ಕೆ.ಜಿ.ವಿಭಾಗದಲ್ಲಿ ಕಂಚಿನ ಪದಕ ಪಡೆದು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಳ್ಳುವುದರ ಮೂಲಕ ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರುಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದ ಅಖಿಲ ಭಾರತ ಕ್ಲಾಸ್ಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಎಂ-1 66 ಕೆಜಿ ವಿಭಾಗದಲ್ಲಿ ಕುಂದಾಪುರದ ಸತೀಶ್ ಖಾರ್ವಿ ಡೆಡ್ ಲಿಫ್ಟ್’ನಲ್ಲಿ ನೂತನ ದಾಖಲೆ ನಿರ್ಮಿಸಿದ್ದಾರೆ. ಕರ್ನಾಟಕ ತಂಡ ದಲ್ಲಿ ಪ್ರತಿನಿಧಿಸಿದ ಅವರು ಡೆಡ್ ಲಿಫ್ಟ್ ನಲ್ಲಿ 220 ಕೆಜಿ ಭಾರ ಎತ್ತುವ ಮೂಲಕ ಹೊಸ ದಾಖಲೆ ನಿರ್ಮಿಸಿ ಈ ಹಿಂದೆ ತಾವೇ ಮಾಡಿದ್ದ 217.5 ಕೆಜಿ ದಾಖಲೆ ಅಳಿಸಿದರು. ಅವರು ಚಾಂಪಿಯನ್’ಶಿಪ್’ನಲ್ಲಿ ಒಟ್ಟು 4 ಚಿನ್ನದ ಪದಕ ಪಡೆದಿರುತ್ತಾರೆ. ಸತೀಶ್ ಖಾರ್ವಿ ಅವರು ನ.24ರಂದು ನ್ಯೂಜಿಲ್ಯಾಂಡ್ ನಲ್ಲಿ ನಡೆಯುವ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಸ್ಪರ್ದೆಗೆ ಭಾರತ ತಂಡದಿಂದ ಪ್ರತಿನಿಧಿಸುತ್ತಾರೆ. ಈ ಸಾಧನೆಗೈದ ಸತೀಶ್ ಅವರಿಗೆ ಅಖಿಲ ಭಾರತ ಕೊಂಕಣಿ ಖಾರ್ವಿ ಸಮಾಜ, ಕುಂದಾಪುರ ಕೊಂಕಣಿ ಸಮಾಜ, ಕಿಂಗ್ ಫಿಶರ್ ಸ್ಪೋರ್ಟ್ಸ್ ಕ್ಲಬ್ ಖಾರ್ವಿಕೇರಿ ಹಾಗೂ ಹರ್ಕುಲಸ್ ಜಿಮ್ ಸಂಸ್ಥೆಯ ಹಿರಿಯ ಕಿರಿಯ ಕ್ರೀಡಾಪಟುಗಳು ಅಭಿಮಾನಿಗಳು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು: ಯುಎಇನಲ್ಲಿ ನಡೆದ ಅಂತರಾಷ್ಟ್ರೀಯ ಕಿವುಡರ ಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಡಿಐಸಿಸಿ ಟಿ-20 ಚಾಂಪಿಯನ್ ಟ್ರೋಫಿ 2022 ವಿಜೇತ ಭಾರತ ಕಿವುಡರ ಕ್ರಿಕೆಟ್ ತಂಡದ ಸದಸ್ಯ, ಕರ್ನಾಟಕದಿಂದ ಆಯ್ಕೆಯಾದ ಏಕಮಾತ್ರ ಆಟಗಾರ ಪ್ರಥ್ವಿರಾಜ್ ಶೆಟ್ಟಿ ಅವರು ಭಾನುವಾರ ಹುಟ್ಟೂರಿಗೆ ಮರಳುವ ವೇಳೆ ಕುಂದಾಪುರ ಹಾಗೂ ಬೈಂದೂರಿನಲ್ಲಿ ಅದ್ದೂರಿಯಾಗಿ ಸ್ವಾಗತಿಸಿಕೊಳ್ಳಲಾಯಿತು. ಕುಂದಾಪುರದಿಂದ ಗೋಳಿಹೊಳೆ ತನಕ ಬೈಂದೂರು ಮಾರ್ಗವಾಗಿ ಪ್ರಥ್ವಿರಾಜ ಶೆಟ್ಟಿ ಅವರನ್ನು ಪುರಮೆರವಣಿಗೆ ಮೂಲಕ ಕರೆತಂದು ಬಳಿಕ ಕುಂದಾಪುರದಲ್ಲಿ ಯುವ ಬಂಟರ ಸಂಘ ಹಾಗೂ ಚಕ್ರವರ್ತಿ ಸ್ಪೋರ್ಟ್ಸ್ ಕ್ಲಬ್, ಬೈಂದೂರಿನಲ್ಲಿ ಬಂಟರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಗೌರವಿಸಿದವು. ಕುಂದಾಪುರದದ ಆರ್.ಎನ್. ಶೆಟ್ಟಿ ಮಿನಿ ಹಾಲ್’ನಲ್ಲಿ ಜರುಗಿದ ಸನ್ಮಾನ ಕಾರ್ಯಕ್ರಮದಲ್ಲಿ ಯುವ ಬಂಟರ ಸಂಘದ ಅಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ಸುಕೇಶ್ ಶೆಟ್ಟಿ ಹೊಸ್ಮಠ, ಸುನಿಲ್ ಶೆಟ್ಟಿ ಹೆರಿಕುದ್ರು, ಪದಾಧಿಕಾರಿಗಳಾದ ಸಚಿನ್ ಶೆಟ್ಟಿ ಹುಂಚನಿ, ರವಿಶಂಕರ ಹೆಗ್ಡೆ ಸಬ್ಬಾಡಿ, ನಿತಿನ್ ಶೆಟ್ಟಿ ಹುಂಚನಿ, ದಿನಕರ…

Read More