ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವೃತ್ತಿಗೆ ಅನುಗುಣವಾಗಿ ಸಂಘಟನೆಗಳ ಸದಸ್ಯರ ವೃತ್ತಿ ಕೌಶಲ್ಯ ಹೆಚ್ಚಿಸಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ ಅತ್ಯಗತ್ಯ. ಧ್ವನಿ – ಬೆಳಕು ವೃತ್ತಿ ನಿರತರು ಅಪಾಯದ ನಡುವೆ ಕೆಲಸ ಮಾಡಬೇಕು. ಅವರಲ್ಲಿ ವೃತ್ತಿ ಕೌಶಲ್ಯಗಳಿದ್ದರೆ ಅದರ ಬಗೆಗೆ ಮುನ್ನೆಚ್ಚರಿಕೆ ವಹಿಸಬಹುದು ಮತ್ತು ಗ್ರಾಹಕರ ನಿರೀಕ್ಷೆಯ ಮಟ್ಟದ ಸೇವೆ ನೀಡಬಹುದು ಎಂದು ರಾಜ್ಯ ವೈದ್ಯ ಸಂಘ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಸುಬ್ರಹಣ್ಯ ಭಟ್ ಹೇಳಿದರು. ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಭಾನುವಾರ ಬೈಂದೂರು ವಲಯದ ಧ್ವನಿ ಮತ್ತು ಬೆಳಕು ಸಂಯೋಜಕರ ಸಂಘಟನೆಯ ದಶಮಾನೋತ್ಸವ ಸಮಾರಂಭ ಹಾಗೂ 11ನೇ ಮಹಾಸಭೆ ಉದ್ಘಾಟಿಸಿ ಮಾತನಾಡಿದರು. ಯಾವುದೇ ಕಾರ್ಯಕ್ರಮದ ಯಶಸ್ಸಿನ ಹಿಂದೆ ಈ ಸಂಘಟನೆ ಕೆಲಸ ಮಾಡುತ್ತದೆ. ಧ್ವನಿ ಇಲ್ಲದವರ ಧ್ವನಿಯಾಗುವ ಹಾಗೂ ವೇದಿಕೆಯಲ್ಲಿರುವವರ ಧ್ವನಿಯನ್ನು ಸಮಾಜಕ್ಕೆ ತಲುಪಿಸುವ ಕೆಲಸ ಮಾಡುತ್ತಿದೆ. ಹಾಗಂತ ಮೆಹಂದಿ, ಧಾರ್ಮಿಕ ಹಾಗೂ ಇತರೇ ಉತ್ಸವಗಳಲ್ಲಿ ಹೆಚ್ಚು ಧ್ವನಿ (ಡಿಜೆ ಮೂಲಕ) ಏರಿಸಿದರೂ ಕೂಡ ಇದರಿಂದ ಸಮಾಜಕ್ಕೆ ಸಮಸ್ಯೆಯಾಗುತ್ತದೆ. ಇದರಿಂದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಿಬಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು, ಬೈಂದೂರು ಸೈಂಟ್ ಥಾಮಸ್ ಶಾಲೆಯ ವಿದ್ಯಾರ್ಥಿ ಸೃಜನ್ ಕುಮಾರ್ ಶೇ.93.20 ಫಲಿತಾಂಶ ಪಡೆದಿದ್ದು, ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಸೃಜನ್ ಕುಮಾರ್ ಬೈಂದೂರು ಅಂಚೆ ಕಛೇರಿಯಲ್ಲಿ ಉದ್ಯೋಗಿಯಾಗಿರುವ ಸುರೇಶ್ ಕುಮಾರ್ ಹಾಗೂ ಗೀತಾ ಎಸ್. ಅವರ ಪುತ್ರನಾಗಿದ್ದಾರೆ. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯನಾಗಿರುವ ಸೃಜನ್ ಅನೇಕ ಯಕ್ಷಗಾನ ಪ್ರದರ್ಶನ ನೀಡಿದ್ದಾನೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಮಕ್ಷತ್ರಿಯ ಸಮಾಜ ಸಣ್ಣ ಸಮುದಾಯವಾಗಿದ್ದು, ಸಮಾಜದಲ್ಲಿ ಗುರುತಿಸುವಂತೆ ಬೆಳೆದು ನಿಲ್ಲುವ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ. ನಾವು ಬೆಳೆಯುತ್ತಾ ನಮ್ಮಿಂದಾದ ಸಹಕಾರವನ್ನು ಸಮಾಜಕ್ಕೆ ನೀಡುತ್ತಾ ಬದುಕುವ ಗುಣ ಮುಖ್ಯ ಎಂದು ಮಂಗಳೂರು ರಾಮಕ್ಷತ್ರಿಯ ಸೇವಾ ಸಂಘದ ಗೌರವಾಧ್ಯಕ್ಷರಾದ ಜೆ.ಕೆ. ರಾವ್ ಹೇಳಿದರು. ಇಲ್ಲಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್ ಬೈಂದೂರು ಇದರ 10ನೇ ವರ್ಷದ ಟ್ರಸ್ಟ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಭೂಮಿಯ ಮೇಲೆ ಬಾಡಿಗೆಗೆ ಬಂದವರು ಎಂಬ ಅರಿವಿದ್ದರೇ ಪರಸ್ಪರ ಸಹಾಯದ ಮನೋಭಾವ ನಮ್ಮದಾಗುತ್ತದೆ ಎಂದ ಅವರು ಆಧುನಿಕ ಸಮಾಜದ ಜಂಜಾಟದ ನಡುವೆ ತಂದೆ ತಾಯಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪ್ರವೃತ್ತಿ ಹೆಚ್ಚುತ್ತಿರುವುದು ಖೇದಕರ. ವಿದ್ಯಾವಂತರಾಗುವಂತೆ ಸಂಬಂಧಗಳನ್ನು ಗಟ್ಟಿಗೊಳಿಸುವ ಗುಣವೂ ವಿದ್ಯಾರ್ಥಿಗಳಲ್ಲಿ ಬೆಳೆಯಲಿ ಎಂದರು. ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಬಿ. ರಾಮಕೃಷ್ಣ ಶೇರೆಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಮಕ್ಷತ್ರಿಯ ಸಮುದಾಯದ ಅಭ್ಯುದಯಕ್ಕಾಗಿ ಒಂದು ದಶಕದ ಹಿಂದೆ…
ದೇಹದಲ್ಲಿ ಕೆಂಪು ರಕ್ತ ಕಣಗಳು ಕಡಿಮೆ ಆದಾಗ ರಕ್ತಹೀನತೆ ಸಮಸ್ಯೆ ತಲೆದೂರುತ್ತದೆ. ಹಿಮೋಗ್ಲೋಬಿನ್ ಕೊರತೆಯಿಂದಾಗಿ, ರೋಗಗಳ ವಿರುದ್ಧ ಹೋರಾಡುವ ಸಾಮರ್ಥ್ಯವು ಕಡಿಮೆಯಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ಅನೇಕ ಗಂಭೀರ ಕಾಯಿಲೆಗಳು ವ್ಯಕ್ತಿಯನ್ನು ಸುತ್ತುವರಿಯಲು ಪ್ರಾರಂಭಿಸುತ್ತವೆ. ಆಗ ದೇಹದಲ್ಲಿ ಕಬ್ಬಿಣದ ಅಂಶವನ್ನು ಹೆಚ್ಚಿಸುವ ಮೂಲಕ, ವ್ಯಕ್ತಿಯ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚು ಮಾಡಬಹುದು. ದೇಹದಲ್ಲಿ ಕಬ್ಬಿಣದ ಕೊರತೆಯನ್ನು ನಿವಾರಿಸಲು ಸಹಾಯ ಮಾಡುವ ಕೆಲವು ನೈಸರ್ಗಿಕ ಮನೆಮದ್ದುಗಳನ್ನ ತಿಳಿದುಕೊಳ್ಳುವುದು ಮುಖ್ಯ. ಹಿಮೋಗ್ಲೋಬಿನ್ ಕೊರತೆಗೆ ಕಾರಣ: ಹೊಟ್ಟೆಗೆ ಸಂಬಂಧಿಸಿದ ಸೋಂಕುಗಳಿಂದ ಹಿಮೋಗ್ಲೋಬಿನ್ ಕೊರತೆ ಉಂಟಾಗುವುದು.ಆಹಾರದಲ್ಲಿ ಪೌಷ್ಠಿಕಾಂಶದ ಕೊರತೆಯಿಂದ ಅಗತ್ಯ ಪ್ರಮಾಣದ ಕಬ್ಬಿಣ ಸಿಗದೇ ಇದ್ದಾಗ, ದೇಹದಿಂದ ಅಧಿಕ ಪ್ರಮಾಣದ ರಕ್ತಸ್ರಾವ ಆದಾಗಗಂಭೀರ ಕಾಯಿಲೆಯಿಂದಾಗಿ ದೇಹದಲ್ಲಿ ರಕ್ತದ ಕೊರತೆ. ರಕ್ತದ ಕೊರತೆಯಿಂದಾಗುವ ಸಮಸ್ಯೆ?: ದೇಹ, ತಲೆ ಮತ್ತು ಎದೆಯಲ್ಲಿ ನೋವುರಕ್ತಹೀನತೆಯಿಂದ ಹೃದಯ,ಕಿಡ್ನಿ ಮತ್ತು ಪಿತ್ತಜನಕಾಂಗಕ್ಕೆ ಸಂಬಂಧಿಸಿದ ಕಾಯಿಲೆಗಳ ಉದ್ಭವಸ್ನಾಯುವಿನ ದೌರ್ಬಲ್ಯಚರ್ಮದ ಬಣ್ಣ ಬದಲಾವಣೆಗಾಯಗಳು ಬೇಗನೆ ಗುಣವಾಗುವುದಿಲ್ಲ, ಮುಟ್ಟಿನ ಅವಧಿಗಳಲ್ಲಿ ಹೆಚ್ಚು ನೋವುಕೈಕಾಲುಗಳು ತಣ್ಣಗಾಗುವುದು ಹಿಮೋಗ್ಲೋಬಿನ್ ಕೊರತೆ ಲಕ್ಷಣ: ಬೇಗ ಆಯಾಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕ ನೆಲ್ಯಾಡಿ ಮೂಲದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಸಮೀಪದ ಅಂಕದಕಟ್ಟೆಯಲ್ಲಿ ನಡೆದಿದೆ. ಕಡಬ ಸಮೀಪದ ನೆಲ್ಯಾಡಿ ನಿವಾಸಿ ಆನಂದ ಗೌಡ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಕುಂದಾಪುರದ ಖಾಸಗಿ ಕಾಲೇಜೊಂದರ ಗಣಿತ ಉಪನ್ಯಾಸಕರಾಗಿದ್ದ ಆನಂದ ಗೌಡ ಶುಕ್ರವಾರ ರಾತ್ರಿ ಪರೀಕ್ಷೆಗೆಂದು ಪ್ರಶ್ನೆಪತ್ರಿಕೆ ಸಿದ್ಧಪಡಿಸಿಟ್ಟು ಮಲಗಿದ್ದರು. ಶನಿವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅವರ ಪತ್ನಿ ಅಡುಗೆ ಮನೆಗೆ ಬಂದು ನೋಡಿದಾಗ ಅಡುಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಹೆಬ್ರಿ ಮೂಲದ ಉಪನ್ಯಾಸಕಿಯನ್ನು ಮದುವೆಯಾಗಿ ಅಂಕದಕಟ್ಟೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ ಮೂಡಬಿದ್ರೆಯ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದ ಆನಂದ್ ಗೌಡ ಇತ್ತೀಚೆಗೆ ಅವರು ಹೊಸದಾಗಿ ಕಾರು ಖರೀದಿಸಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ, ಫೋಕ್ಸೋ ಕಾಯ್ದೆ, ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟ ತಡೆ ಹಾಗೂ ಮಕ್ಕಳ ಸಹಾಯವಾಣಿಯ ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಕಂಡ್ಲೂರು ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕರಾದ ನಿರಂಜನ್ ಅವರು ಸೈಬರ್ ಕ್ರೈಮ್ ಹಾಗೂ ಸಾಮಾಜಿಕ ಜಾಲತಾಣಗಳ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳಾದ ಮಹೇಶ ದೇವಾಡಿಗ ಅವರು ಬಾಲ್ಯ ವಿವಾಹ ತಡೆ ಕುರಿತು ಮಾಹಿತಿ ನೀಡಿದರು. 1098 ಮಕ್ಕಳ ಸಹಾಯವಾಣಿ ಕೇಂದ್ರ ಸಂಯೋಜಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗರ್ಭದಿಂದ ಗೋರಿಯ ತನಕ ಕಾನೂನು ಎಲ್ಲರಿಗೂ ಮುಖ್ಯವಾಗಿದೆ. ಮಕ್ಕಳಿಗೂ ಸಂವಿಧಾನಾತ್ಮಕವಾಗಿ ಹಲವು ಹಕ್ಕುಗಳನ್ನು ನೀಡಲಾಗಿದ್ದು ಅದರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಶರ್ಮಿಳಾ ಎಸ್. ಅವರು ಹೇಳಿದರು. ಅವರು ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ವಕೀಲರ ಸಂಘ, ಇಂಡಿಯನ್ ಸೀನಿಯರ್ ಚೆಂಬರ್ಸ್ ಬೈಂದೂರು, ರತ್ತೂಬಾಯಿ ಜನತಾ ಪ್ರೌಢಶಾಲೆ ಸಹಯೋಗದೊಂದಿಗೆ ರತ್ತೂಬಾಯಿ ಜನತಾ ಪ್ರೌಢಶಾಲೆ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ 3ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಇರುವರಿಗೆ ಅಗತ್ಯವಿದ್ದಲ್ಲಿ ವಕೀಲರ ಮೂಲಕ ಉಚಿತವಾಗಿ ಅರಿವು ಮತ್ತು ನೆರವು ನೀಡುವ ವ್ಯವಸ್ಥೆ, ಲೋಕ್ ಅದಾಲತ್ ಮೂಲಕ ರಾಜಿ ಸಂಧಾನದ ಮಾಡಿ ಪ್ರಕರಣ ಇತ್ಯರ್ಥಗೊಳಿಸುವ ವ್ಯವಸ್ಥೆ ನ್ಯಾಯಾಂಗದಲ್ಲಿದ್ದು ಅಗತ್ಯವುಳ್ಳವರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದರು. ಶಾಲಾ ಮುಖ್ಯೋಪಾಧ್ಯಾಯರಾದ ಆನಂದ ಮದ್ದೋಡಿ ಸ್ವಾಗತಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜು ಅವಧಿಯಲ್ಲಿ ಹೆಚ್ಚುವರಿ ಸರಕಾರಿ ಬಸ್ ಸೌಲಭ್ಯ ಒದಗಿಸುವಂತೆ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಕುಂದಾಪುರ ಡಿಪೋ ವ್ಯವಸ್ಥಾಪಕರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಪ್ರತಿನಿತ್ಯ ಬೈಂದೂರಿನಿಂದ ಕುಂದಾಪುರದ ತನಕ ವಿವಿಧ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸರಕಾರಿ ಬಸ್ಸಿನಲ್ಲಿ ಸ್ಥಳಾವಕಾಶ ಸಿಗದೇ ಪುಟ್ ಬೋರ್ಡ್ ಮೇಲೆಗೆ ನಿಂತು ಪ್ರಯಾಣಿಸುತ್ತಿರುವುದನ್ನು ನೋಡುತ್ತಿದ್ದೇವೆ. ಇದು ಅತ್ಯಂತ ಅಪಾಯಕಾರಿ ಆದರೆ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜಿಗೆ ತೆರಳುವುದು ಅನಿವಾರ್ಯವಾಗಿದೆ. ಆದ್ದರಿಂದ ಈ ಅವಧಿಯಲ್ಲಿ ಬೈಂದೂರಿನಿಂದ ಕುಂದಾಪುರಕ್ಕೆ ಹೆಚ್ಚುವರಿ ಸರಕಾರಿ ಬಸ್ಸುಗಳನ್ನು ಓಡಿಸಬೇಕು. ಇಲ್ಲವಾದಲ್ಲಿ ವಿದಾರ್ಥಿಗಳು ಅಪಾಯಕಾರಿ ಸ್ಥಿತಿಯಲ್ಲಿ ತೆರಳುವ ಸರಕಾರಿ ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭ ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ, ಯುವ ಕಾಂಗ್ರೆಸ್ ನಾಯಕರಾದ ಉದಯ್ ಪೂಜಾರಿ, ವಸಂತ ಉಪ್ಪುಂದ, ಸಂತೋಷ ಹೊಸ್ಕೊಟೆ, ಸುಬ್ರಹ್ಮಣ್ಯ ದೇವಾಡಿಗ, ಸಚಿನ್ ಹೊಸ್ಕೋಟೆ ಹಾಜರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.23: ತಾಲೂಕಿನ ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 10ನೇ ತರಗತಿಯ ವ್ಯಾಸಂಗ ಮಾಡುತ್ತಿರುವ ಬಿಜೂರು ಗ್ರಾಮದ ಬವಳಾಡಿಯ ಲತಾಳನ್ನು ಬಿಜೂರು ಗ್ರಾಮ ಪಂಚಾಯತ್, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಬವಳಾಡಿ ಸ.ಹಿ.ಪ್ರಾ. ಶಾಲೆ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು. ಬವಳಾಡಿಯ ಚನ್ನಮ್ಮ ಅವರ ಪುತ್ರಿಯಾದ ಲತಾ ಬಿಜೂರು ಗ್ರಾಮದಲ್ಲಿ ಎಸ್.ಎಸ್.ಎಲ್.ಸಿ ಪ್ರವೇಶಿಸುತ್ತಿರುವ ಕೊರಗ ಸಮುದಾಯದ ಪ್ರಥಮ ವಿದ್ಯಾರ್ಥಿನಿಯಾಗಿದ್ದಾಳೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಶಿಕ್ಷಣ ಸಂಯೋಜಕ ಚಂದ್ರ ದೇವಾಡಿಗ ಅವರು ಕೊರಗ ಸಮುದಾಯವನ್ನು ಕುರಿತು ಶಿಕ್ಷಣದ ಮಹತ್ವದ ಬಗ್ಗೆ ಮಾತನಾಡಿದರು. ಬಿಜೂರು ಗ್ರಾಮ ಪಂಚಾಯತ್ ಅಧ್ಯಕ್ಷರು, ಪಿಡಿಓ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗ ಶಾಲಾ ಎಸ್ಡಿಎಂಸಿ ಅಧ್ಯಕ್ಷರು, ಶಿಕ್ಷಕ ವೃಂದ ಹಾಗೂ ಕೊರಗ ಸಮುದಾಯದ ಮುಖಂಡ ಲಕ್ಷ್ಮಣ ಕೊರಗ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಸಿಎ ಸಿಎಸ್ ಪ್ರೊಫೆಷನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಶಿಕ್ಷಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಂಸ್ಥೆಯ ವಿದ್ಯಾರ್ಥಿಗಳು ಮೇ ಮತ್ತು ಜುಲೈ 2022ರಲ್ಲಿ ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸಿದ ಸಿ ಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತೇರ್ಗಡೆ ಹೊಂದುವುದರ ಮೂಲಕ ಉತ್ತಮ ಸಾಧನೆಗೈದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಕೃತಿಕ್ ಶೆಟ್ಟಿ (163), ಶ್ರವಣ್ ಕಾಮತ್ (161), ಅಜಯ್ (147), ಮಹೇಶ (138), ದೇವಿಕ ಎನ್ (132), ರೋಹಿತ್ ಆಚಾರ್ಯ (130), ಅಂಜಲಿ (128) ಅಂಕಗಳಿಸುವುದರೊಂದಿಗೆ ಸಿ ಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ಪೂರ್ಣಗೊಳಿಸಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳಾದ ಜ್ಯೋತಿ ಎನ್ (205), ವರುಣ್ ಆಚಾರ್ಯ (201) ಸಿ.ಎಸ್ ಎಕ್ಸಿಕ್ಯೂಟಿವ್ ಪರೀಕ್ಷೆಯ ಪ್ರಥಮ ಗ್ರೂಪ್ ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದಿದ್ದಾರೆ. ಸಂಸ್ಥೆಯ ವಿದ್ಯಾರ್ಥಿಗಳು ಈಗಾಗಲೇ ಅಖಿಲ ಭಾರತ ಮಟ್ಟದಲ್ಲಿ ಸಿಎ ಸಿಎಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ…
