ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ನಿರೀಕ್ಷೆಯಂತೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಕಾರದಿಂದ ರಾಜ್ಯ ವಿಧಾನ ಪರಿಷತ್ಗೆ ಚುನಾಯಿತರಾಗಿದ್ದಾರೆ. ಅವರು ಪ್ರಥಮ ಪ್ರಶಸ್ತ್ಯದ ಮತಗಳಿಂದ ಗೆಲುವು ಸಾಧಿಸಿದ್ದಾರೆ. ಒಟ್ಟು 6,011 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು 3,672 ಗಳಿಸಿದ್ದು, ಈ ಗೆಲುವಿನ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವರು ಸತತ ನಾಲ್ಕನೇ ಬಾರಿಗೆ ಪರಿಷತ್ ಪ್ರವೇಶ ಮಾಡಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇನ್ನೊಬ್ಬರ ಕಷ್ಟಗಳನ್ನು ನಮ್ಮ ಕಷ್ಟ ಎಂಬ ಭಾವನೆಯೊಂದ ಸೇವೆ ಸಲ್ಲಿಸಿದಾಗ ಸಾರ್ಥಕ್ಯ ದೊರೆಯುತ್ತದೆ. ನಾವು ದುಡಿದ ಒಂದು ಭಾಗವನ್ನು ಸಮಾಜಕ್ಕೆ ನೀಡಿದಾಗ ಅದರ ಪ್ರತಿಫಲವೂ ಸಿಕ್ಕೆ ಸಿಗುತ್ತದೆ ಎಂದು ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ಅವರು ಬೈಂದೂರಿನ ಶಾರದಾ ವೇದಿಕೆಯಲ್ಲಿ ಜೇಸಿಐ ಬೈಂದೂರು ಸಿಟಿ ಇದರ ಮೂರನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿದ ಜೇಸಿ ಸಂಭ್ರಮ 2021 ಉದ್ಘಾಟಿಸಿ ಮಾತನಾಡಿ ಜೇಸಿ ಸಂಸ್ಥೆ ಯುವ ಜನತೆಯಲ್ಲಿ ವ್ಯಕ್ತಿತ್ವ ನಿರ್ಮಾಣ ಮಾಡುವ ಮೂಲಕ ಸದೃಢ ಸಮಾಜ ನಿರ್ಮಾಣ ಮಾಡಲು ಶ್ರಮವಹಿಸುತ್ತಿರುವುದು ಶ್ಲಾಘನೀಯ ಎಂದರು. ಮಂಗಳೂರು ವಲಯ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಶ್ರೀಧರ ಪಿ ಅವರಿಗೆ ಈ ಬಾರಿ ಜೇಸಿ ಸಾಧನಶ್ರೀ ಪ್ರಶಸ್ತಿ ಪುರಸ್ಕಾರ ನೀಡಿ, ಗೌರವಿಸಲಾಯಿತು. ಡಾ. ಗೋವಿಂದ ಬಾಬು ಪೂಜಾರಿ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಜೇಸಿಐ ಬೈಂದೂರು ಸಿಟಿಯ ಅಧ್ಯಕ್ಷ ಪಿ ಶ್ರೀಧರ ಆಚಾರ್ಯ…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ವಿಫುಲ ಅವಕಾಶಗಳಿವೆ ಎನ್ನುವ ಮಾತು ಯಾವಾಗಲೂ ಕೇಳಿ ಬರುತ್ತದೆ ಇತ್ತೀಚೆಗೆ ಜಿಲ್ಲೆಯ ಹಿನ್ನೀರಿನ ಪ್ರದೇಶಗಳನ್ನು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿದ್ದು, ಹೌಸ್ ಬೋಟ್, ಕುದ್ರುಗಳಿಗೆ ಪ್ರವಾಸ, ಕಯಾಕಿಂಗ್ ಚಟುವಟಿಕೆಯಂತಹ ಹೊಸ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕೆ ಪೂರಕವೆಂಬಂತೆ ಜಿಲ್ಲೆಯ ಸಾಲಿಗ್ರಾಮ ಸಮೀಪದಲ್ಲಿ ಸೀತಾ ನದಿಯ ಹಿನ್ನೀರಿನಲ್ಲಿನ ಕಾಂಡ್ಲಾ ವನದ ಮಧ್ಯದಲ್ಲಿ ಸಂಚರಿಸುವ ಕಯಾಕಿಂಗ್ ಸಾಹಸ ಯಾನ, ಪ್ರವಾಸಿಗರಿಗೆ ಪ್ರವಾಸದ ಹೊಸ ಅನುಭವ ನೀಡಲಿದೆ. ಸ್ಥಳೀಯ ಯುವಕರಾದ ಮಿಥುನ್ ಕೋಡಿ ಮತ್ತು ಲೋಕೇಶ್ ಈ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದು, ಸಾಲಿಗ್ರಾಮದ ಪಾರಂಪಳ್ಳಿ ಬ್ರಿಡ್ಜ್ ಬಳಿ, ಸೀತಾನದಿಯ ಹಿನ್ನಿರಿನ ಕಾಂಡ್ಲಾ ವನದಲ್ಲಿ ಕಯಾಕಿಂಗ್ ಚಟುವಟಿಕೆಗಳನ್ನು ಆರಂಭಿಸಿದ್ದು, ಪ್ರವಾಸಿಗರಿಗೆ, ಸಾಹಸ ಚಟುವಟಿಕೆ ಕೈಗೊಳ್ಳುವ ಆಸಕ್ತರಿಗೆ ಇದು ಅತ್ಯಂತ ಪ್ರಶಸ್ತವಾದ ತಾಣವಾಗಿದೆ. ದಟ್ಟ ಕಾಂಡ್ಲಾವನದ ಮಧ್ಯೆದಲ್ಲಿ ಕಯಾಕಿಂಗ್ ಯಾನ ಆರಂಭಿಸಿರುವುದು ಜಿಲ್ಲೆಯಲ್ಲೆ ಪ್ರಪ್ರಥಮ ಯತ್ನವಾಗಿದೆ. ಇದುವರೆಗೂ ಕಯಾಕಿಂಗ್ ಮಾಡಿ ಯಾವುದೇ ಅನುಭವ ಇಲ್ಲದವರಿಗೂ ಸಹ, ಇಲ್ಲಿನ ತರಬೇತುದಾರರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಒಂದು ಆಂದೋಲ ಪ್ರಾರಂಭ ಮಾಡುವುದು ಸುಲಭ ಆದರೆ ಅದನ್ನು ನಿರಂತರವಾಗಿಸುವುದು ದೊಡ್ಡ ಸಾಧನೆ ಈ ನಿಟ್ಟಿನಲ್ಲಿ ಪಂಚವರ್ಣ ಯುವಕ ಮಂಡಲ ಸೇರಿದಂತೆ ಎಲ್ಲಾ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದ್ದಾರೆ ಪಂಚವರ್ಣ ಯುವಕ ಮಂಡಲ ಕೋಟ ಇವರ ನೇತ್ರತ್ವದಲ್ಲಿ ಗಿಳಿಯಾರು ಯುವಕ ಮಂಡಲ ಗಿಳಿಯಾರು, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ, ಮಣೂರು ಫ್ರೆಂಡ್ಸ್ ಮಣೂರು, ಯಕ್ಷಸೌರಭ ಕಲಾರಂಗ ಕೋಟ, ಮಹಿಳಾ ಬಳಗ ಹಂದಟ್ಟು ಇವರುಗಳ ಸಂಯೋಜನೆಯಲ್ಲಿ ಲಕ್ಷ್ಮೀಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಕೋಟ ಪಡುಕರೆ, ಗೀತಾನಂದ ಫೌಂಡೇಶನ್ ಮಣೂರು, ಕೋಟ ಗ್ರಾಮಪಂಚಾಯತ್, ಕ್ಲಿನ್ ಕುಂದಾಪುರ ಪ್ರೊಜೆಕ್ಟ್, ಪರಿಸರಸ್ನೇಹಿ ಬಳಗ ಮಟ್ನಕಟ್ಟೆ ಕೆರ್ಗಾಲ್ ಉಪ್ಪುಂದ, ಕ್ಲಿನ್ ತ್ರಾಸಿ ಪ್ರೊಜೆಕ್ಟ್, ಸ್ವಚ್ಛತಾ ಮಾಸತಂಡ ಮರಂತೆ ಇವರುಗಳ ಸಂಯುಕ್ತ ಸಹಯೋಗದೊಂದಿಗೆ ರಾಷ್ಟ್ರೀಯ ಹೆದ್ದಾರಿ ಮಣೂರು ಮೂಲಕ ಕೋಟ ಹಿರೇಮಹಾಲಿಂಗೇಶ್ವರ ದೇವಸ್ಥಾನದ ವರೆಗೆ ಸುಮಾರು ೩ವರೆ ಕಿಮೀ ದೂರ ಹಮ್ಮಿಕೊಂಡ ನೂರನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ್, ಹಾಸ್ಯನಟ ಚಿಕ್ಕಣ್ಣ ಹಾಗೂ ಅವರ ಸ್ನೇಹಿತರು ಸೋಮವಾರ ಭೇಟಿ ನೀಡಿದರು. ದೇವಳದಲ್ಲಿ ನವಚಂಡಿಕಾ ಯಾಗದಲ್ಲಿ ಪಾಲ್ಗೊಂಡ ಅವರು, ಬಳಿಕ ದೇವಿಯ ದರ್ಶನ ಪಡೆದರು. ದೇವಳದ ಟ್ರಸ್ಟೀಗಳಾದ ಜಯಾನಂದ ಹೋಬಳಿದಾರ್, ಗೋಪಾಲಕೃಷ್ಣ ಹಾಗೂ ಇನ್ನಿತರರು ನಟರನ್ನು ಗೌರವಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಲ್ಬಾಡಿ-ಆರ್ಡಿ ಚಾರ್ಮಕ್ಕಿ ನಾರಾಯಣ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ‘ಟೀಂ ಅಲ್ಬಾಡಿ-ಆರ್ಡಿ’ಯ ನೇತೃತ್ವದಲ್ಲಿ ವರ್ಗಾವಣೆಗೊಂಡ ಕನ್ನಡ ಶಿಕ್ಷಕಿ ಮಾಲತಿ ವಕ್ವಾಡಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿತ್ತು. ಶಿಕ್ಷಕಿ ಮಾಲತಿ ಅವರು ಮಲ್ಪೆ ಸರಕಾರಿ ಪ್ರೌಢ ಶಾಲೆಗೆ ವರ್ಗಾವಣೆಗೊಂಡಿದ್ದು ಅಲ್ಬಾಡಿ-ಆರ್ಡಿ’ಯ ಮಕ್ಕಳು ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ, ಹಳೆವಿದ್ಯಾರ್ಥಿ ಸಂಘ ಹಾಗೂ ಊರವರು ಶಿಕ್ಷಕಿಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟಾರ್ಪೆಡೊಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಇಲ್ಲಿನ ಹರಿಪ್ರಸಾದ್ ಹೊಟೇಲಿನ ಆತಿಥ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಟಾರ್ಪೆಡೊಸ್ ರಶ್ಮೀ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟಿಂಗ್ ಚೆಸ್ ಚಾಂಪಿಯನ್ಷಿಪ್ನಲ್ಲಿ ತಮಿಳುನಾಡಿನ ಚಾಂಪಿಯನ್ ಆಟಗಾರ, ಎಲೋ ರೇಟಿಂಗ್ನಲ್ಲಿನ 2177 ಅಂಕಗಳನ್ನು ಹೊಂದಿರುವ ಮುತ್ತಯ್ಯ ಒಂಬತ್ತು ಸುತ್ತಿನ ಪಂದ್ಯದಲ್ಲಿ 8.5 ಅಂಕಗಳನ್ನು ಗಳಿಸಿ ಅಗ್ರ ಸ್ಥಾನಿಯಾದರು, ಆಕರ್ಷಕ ಟ್ರೋಫಿಯೊಂದಿಗೆ 30,000 ರೂ, ನಗದು ಬಹುಮಾನ ಪಡೆದರು. ಕರ್ನಾಟಕ ವಿವಿಧ ವಿಭಾಗಗಳಲ್ಲಿ ಮೇಲುಗೈ ಸಾಧಿಸಿ ಸಮಗ್ರ ಚಾಂಪಿಯನ್ ಪಟ್ಟ ತನ್ನದಾಗಿಸಿಕೊಂಡಿತು. ಅಖಿಲ ಭಾರತ ಫಿಡೆ ರೇಟಿಂಗ್ ಚೆಸ್ ಚಾಂಪಿಯನ್ಷಿಪ್ನಲ್ಲಿ ತಮಿಳುನಾಡಿನ ಐಎಂ ಮುತ್ತಯ್ಯ ಎಎಲ್ ಅವರು ಅಗ್ರ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟ ಗೆದ್ದುಕೊಂಡರೆ, 2363 ಎಲೋ ರೇಟಿಂಗ್ ಅಂಕಗಳನ್ನು ಹೊಂದಿರುವ ಕರ್ನಾಟಕದ ಐಎಂ ಮಂಗಳೂರಿನ ವಿಯಾನಿ ಅಂಥೋನಿಯೋ ಡಿʼಕುನ್ಹಾ 8 ಅಂಕಗಳನ್ನು ಗಳಿಸಿ ರನ್ನರ್ಅಪ್ ಗೌರವಕ್ಕೆ ಪಾತ್ರರಾದರು. ಎರಡನೇ ಸ್ಥಾನ ಪಡೆದ ವಿಯಾನಿ 20,000 ರೂ.ಗಳೊಂದಿಗೆ ಆಕರ್ಷಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೋವಿಡ್ 19 ಮೂರನೇ ಅಲೆಯನ್ನು ಸಮರ್ಥವಾಗಿ ತಡೆಯಲು ಡಿಸೆಂಬರ್ ಅಂತ್ಯದೊಳಗೆ 18 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ 90% ಎರಡೂ ಡೋಸ್ ಕೋವಿಡ್ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ತಕ್ಷಣದಿಂದ ಕಾರ್ಯ ಪ್ರವೃತ್ತರಾಗುವಂತೆ ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಕೋವಿಡ್ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣದ ಪ್ರಗತಿಯ ಕುರಿತು ಪರಿಶೀಲನಾ ಸಭೆ ನಡೆಸಿದರು. ಈಗಾಗಲೇ ಜಿಲ್ಲೆಯಲ್ಲಿ 95% ಪ್ರಥಮ ಡೋಸ್ ಲಸಿಕೆ ನೀಡಲಾಗಿದ್ದು, 2 ನೇ ಡೋಸ್ ಪಡೆಯಲು ಅರ್ಹರಿರುವವರನ್ನು ಮತ್ತು ಅವಧಿ ಮೀರಿದ್ದರೂ ಲಸಿಕೆ ಪಡೆಯದವವರನ್ನು ಗುರುತಿಸಿ, ಕೂಡಲೇ ಅವರಿಗೆ ಲಸಿಕೆ ನೀಡಿ, ಲಸಿಕೆ ಪಡೆಯಲು ನಿರಾಕರಣೆ ಇರುವ ಪ್ರದೇಶಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಲಸಿಕೆ ಪಡೆಯುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವನಕೊಡ್ಲು ಗಂಗಾನಾಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಅಥರ್ವ ಶೇಷ ಗಣಪತಿ ಹೋಮ, ಚಂಡಿಕಾಹೋಮ, 9 ಕಲಸ ಸಹಿತ ರುದ್ರಾಭಿಷೇಕ, ಅನ್ನಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಹೆರ್ಗ ಜಯರಾಮ ತಂತ್ರಿಗಳ ಮಾರ್ಗದರ್ಶನದಲ್ಲಿ ಜರುಗಿತು. ಈ ಸಂದರ್ಭ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ. ವೈ. ಭರತ್ ಶೆಟ್ಟಿ, ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ, ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ. ಯಡ್ತರೆ ರಾಜಮೋಹನ್ ಶೆಟ್ಟಿ, ಯಡ್ತರೆ ಮನೆ ಕುಟುಂಬಿಕರಾದ ಅರ್ಜುನ್ ಶೆಟ್ಟಿ, ಡಾ. ತಿಲಕ್ ಶೆಟ್ಟಿ, ಡಾ. ಮಿಥುನ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಧಾರ್ಮಿಕ ಕಾರ್ಯಕ್ರಮಗಳ ಕೊನೆಯಲ್ಲಿ ಗಂಗಾನಾಡಿನ ಮರಾಠಿ ಸಮುದಾಯದವರು ಶಿವನಿಗೆ ಪ್ರಿಯವಾದ ಹೋಳಿಕುಣಿತ ಸೇವೆ ಸಲ್ಲಿಸಿದ್ದು, ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಮದ್ದಳೆ ಭಾರಿ ಗಮನ ಸೆಳೆದರು. ಇದನ್ನೂ ಓದಿ:► ವನಕೊಡ್ಲು ಶ್ರೀ ಮಹಾಲಿಂಗೇಶ್ವರ ದೇವಳ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ – https://kundapraa.com/?p=55975…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳ ಬದುಕು ಕೇವಲ ಓದಿಗೆ ಮೀಸಲಾಗಬಾರದು, ಕ್ರೀಡೆಯಿಂದಲೂ ಜಾಗತಿಕ ಮಟ್ಟದಲ್ಲಿ ಮಿಂಚಬಹುದು, ಬದುಕನ್ನು ಕಟ್ಟಿಕೊಳ್ಳಬಹುದು. ಒಲಿಂಪಿಕ್ಸ್ನಲ್ಲಿ ಭಾರತ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕಾದರೆ ಪೋಷಕರು ಓದಿನ ಜತೆಯಲ್ಲಿ ತಮ್ಮ ಮಕ್ಕಳನ್ನು ಕ್ರೀಡೆಯಲ್ಲೂ ಪಾಲ್ಗೊಳ್ಳಲು ಪ್ರೋತ್ಸಾಹ ನೀಡಬೇಕು ಎಂದು ಕ್ರೀಡಾ ಪ್ರೋತ್ಸಾಹಕ, ಚೆಸ್ ತಜ್ಞ, ಮುಂಬಯಿಯ ಡಿಜಿ ಫ್ಲಿಕ್ ಇನ್ಷುರೆನ್ಸ್ನ ನಿರ್ದೇಶಕ ರಂಜನ್ ನಾಗರಕಟ್ಟೆ ಅವರು ಅಭಿಪ್ರಾಯಪಟ್ಟರು. ಅವರು ಟಾರ್ಪೆಡೊಸ್ ಸ್ಪೋರ್ಟ್ಸ್ ಕಾರ್ನಿವಲ್ ಇದರ ಅಂಗವಾಗಿ ಕುಂದಾಪುರದಲ್ಲಿ ಶನಿವಾರ ಆರಂಭಗೊಂಡ ಅಖಿಲ ಭಾರತ ಟಾರ್ಪೆಡೊಸ್ ರಶ್ಮೀ ಶೆಟ್ಟಿ ಸ್ಮಾರಕ ಫಿಡೆ ರೇಟೆಡ್ ಚೆಸ್ ಟೂರ್ನಿಯನ್ನು ಉದ್ಘಾಟಿಸಿ ಮಾತನಾಡಿ ಕರಾವಳಿಯ ಕ್ರೀಡಾ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ದಿನ. ಯುನೈಟೆಡ್ ಕರ್ನಾಟಕ ಚೆಸ್ ಸಂಸ್ಥೆ, ಅಖಿಲ ಭಾರತ ಚೆಸ್ ಸಂಸ್ಥೆ, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಟಾರ್ಪೆಡೊಸ್ ಸ್ಪೋರ್ಟ್ಸ್ ಕ್ಲಬ್ನ ಅಧ್ಯಕ್ಷ ಗೌತಮ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಈ ಚಾಂಪಿಯನ್ಷಿಪ್ ನಡೆಯುತ್ತಿದೆ. ಇಲ್ಲಿನ ಹರಿಪ್ರಸಾದ್ ಹೊಟೇಲ್ನ ಆತಿಥ್ಯ ಸಭಾಗಂಣದಲ್ಲಿ…
