ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿ ಹೊಂದಿರುವ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸರಕಾರದ ಸೇವೆ, ಸವಲತ್ತುಗಳನ್ನು ಜನಸಾಮಾನ್ಯರಿಗೆ ಸಕಾಲದಲ್ಲಿ ತಲುಪಿಸಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಬೈಂದೂರು ತಾಲೂಕು ಬಿಜೂರು ಗ್ರಾಮದ ಮುರ್ಗೋಳಿಹಕ್ಲು ನಂದಿಕೇಶ್ವರ ಸಭಾಭವನದಲ್ಲಿ, ಪ್ರಜಾಸೇವಾ ಇಲಾಖೆ ತಾಲೂಕು ಆಡಳಿತ ಬೈಂದೂರು ಇವರ ವತಿಯಿಂದ ಬೈಂದೂರು ಹೋಬಳಿಯ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾಸೇವಾ ಆಂದೋಲನ ಸಭೆಯು ಸರಕಾರದ ಒಂದು ಉತ್ತಮ ಕಲ್ಪನೆಯಾಗಿದ್ದು, ಸಭೆಯ ಬಗ್ಗೆ ಹೆಚ್ಚಿನ ಪ್ರಚಾರ ಮೂಡಿಸುವುದರೊಂದಿಗೆ ಜನರು ಈ ಕಾರ್ಯಕ್ರಮದ ಬಗ್ಗೆ ವಿಶ್ವಾಸ ಹೊಂದುವಂತೆ ಮಾಡಿ, ಕಾರ್ಯಕ್ರಮದ ಲಾಭ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಸಭೆಗಳಲ್ಲಿ ಸ್ವೀಕೃತವಾಗುವ ಸಾರ್ವಜನಿಕರ ಸಮಸ್ಯೆಗಳನ್ನು ಅತ್ಯಂತ ಗಂಭೀರವಾಗಿ ಆಲಿಸಿ, ಅವುಗಳಿಗೆ ಪರಿಣಾಮಕಾರಿ ಹಾಗೂ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಡುಬಡತನ, ಜೀವನದ ಸಂಕಷ್ಟಗಳು ಹಾಗೂ ಉದ್ಯಮದಲ್ಲಿನ ಹಿನ್ನಡೆಗಳನ್ನು ಪರಿಶ್ರಮ, ಆತ್ಮವಿಶ್ವಾಸ ಮತ್ತು ಛಲದಿಂದ ಮೆಟ್ಟಿನಿಂತು ಯಶಸ್ಸಿನ ಶಿಖರಕ್ಕೇರಿದ ವ್ಯಕ್ತಿತ್ವ ಕೋತ್ವಾಲ್ ಪದ್ಮನಾಭ ಶೇರುಗಾರ್. ಸಮಾಜಸೇವಕ ಹಾಗೂ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿರುವ ಅವರು, ತಮ್ಮ ಜೀವನಗಾಥೆಯ ಮೂಲಕ ಯುವಜನತೆಗೆ ಪ್ರೇರಣೆಯಾಗಿದ್ದಾರೆ. ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕೋಟೇಕೇರಿಯ ಕುಟುಂಬದಲ್ಲಿ 1968ರ ಜುಲೈ 22ರಂದು ವೆಂಕಟರಮಣ ಶೇರುಗಾರ್ ಮತ್ತು ಗಿರಿಜಾ ದಂಪತಿಯ ಪುತ್ರನಾಗಿ ಪದ್ಮನಾಭ ಶೇರುಗಾರ್ ಜನಿಸಿದರು. ಕೋತ್ವಾಲ್ ಕುಟುಂಬದ ಹಿನ್ನೆಲೆ ಹೊಂದಿದ್ದರೂ ಬಾಲ್ಯದಲ್ಲಿ ಆರ್ಥಿಕ ಸಂಕಷ್ಟಗಳನ್ನು ಎದುರಿಸಿದರು. ಗುಜ್ಜಾಡಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು, ಗಂಗೊಳ್ಳಿಯ ಎಸ್.ವಿ. ಜೂನಿಯರ್ ಕಾಲೇಜಿನಲ್ಲಿ ಹತ್ತನೇ ತರಗತಿವರೆಗೆ ವ್ಯಾಸಂಗ ಮಾಡಿದರು. ಹೆಚ್ಚಿನ ಶಿಕ್ಷಣ ಪಡೆಯುವ ಆಸೆಯಿದ್ದರೂ ಕುಟುಂಬದ ಆರ್ಥಿಕ ಪರಿಸ್ಥಿತಿ ಅವರನ್ನು ಉದ್ಯೋಗದತ್ತ ಕರೆದೊಯ್ದಿತು. ಜೀವನದಲ್ಲಿ ಸಾಧಿಸಬೇಕೆಂಬ ದೃಢ ಸಂಕಲ್ಪದೊಂದಿಗೆ ಮುಂಬೈಗೆ ತೆರಳಿದ ಅವರು, ಡೈ ಮೇಕಿಂಗ್ ಸಂಸ್ಥೆಯೊಂದರಲ್ಲಿ ಕೆಲಸಕ್ಕೆ ಸೇರಿ ಕಠಿಣ ಪರಿಶ್ರಮದಿಂದ ದುಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಯುರ್ವೇದ ಎಂದರೆ ಕೇವಲ ರೋಗ ಬಂದಾಗ ಕುಡಿಯುವ ಕಹಿ ಕಷಾಯ ಅಥವಾ ಕಟ್ಟುನಿಟ್ಟಿನ ಪಥ್ಯವಲ್ಲ; ಅದು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಸಮಗ್ರ ಜೀವನಶೈಲಿ ಎಂದು ತಜ್ಞರು ಪ್ರತಿಪಾದಿಸಿದ್ದಾರೆ. ಚಿತ್ರಕೂಟ ಆಯುರ್ವೇದ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ಆಯುರ್ವೇದ ಹಬ್ಬದ ಅಂಗವಾಗಿ ನಡೆದ ‘ಚಿತ್ರಕೂಟ ಜೆನ್ ಜೀ ಆಯುರ್ವೇದ ಸಂವಾದ’ ಕಾರ್ಯಕ್ರಮದಲ್ಲಿ ವೈದ್ಯರು ಹಾಗೂ ಪ್ರಮುಖ ಕಂಟೆಂಟ್ ಕ್ರಿಯೇಟರ್‌ಗಳು ಭಾಗವಹಿಸಿ ಯುವಪೀಳಿಗೆ ಮತ್ತು ಆರೋಗ್ಯದ ಕುರಿತು ಮಹತ್ವದ ವಿಚಾರಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಮಾತನಾಡಿದ ಚಿತ್ರಕೂಟ ಆಯುರ್ವೇದದ ಸಂಸ್ಥಾಪಕ ಡಾ. ರಾಜೇಶ್ ಬಾಯರಿ ಅವರು, “ಆಯುರ್ವೇದ ಶಾಸ್ತ್ರವು ಮೊದಲು ‘ಸ್ವಸ್ಥಸ್ಯ ಸ್ವಾಸ್ಥ್ಯ ರಕ್ಷಣಂ’ ಎಂದು ಹೇಳುತ್ತದೆ. ಅಂದರೆ ಒಬ್ಬ ಆರೋಗ್ಯವಂತ ವ್ಯಕ್ತಿಯು ತನ್ನ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಎಂದು ತಿಳಿಸುವುದೇ ಇದರ ಮೂಲ ಉದ್ದೇಶವಾಗಿದ್ದು, ಕಾಯಿಲೆ ಬಂದ ಮೇಲೆ ಗುಣಪಡಿಸುವ ‘ಆತುರಸ್ಯ ವಿಕಾರ ಪ್ರಶಮನಂ’ ನಂತರದ ಹಂತವಾಗಿದೆ. ಮುಂಜಾನೆ ಬ್ರಾಹ್ಮೀ ಮುಹೂರ್ತದಲ್ಲಿ ಏಳುವುದು, ನಾಲಿಗೆ ಸ್ವಚ್ಛಗೊಳಿಸುವುದು, ಋತುಮಾನಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆಲೂರಿನ ಚಿತ್ರಕೂಟ ಆಯುರ್ವೇದ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಳ್ಳಲಾದ “ಚಿತ್ರಕೂಟ ಆಯುರ್ವೇದ ಹಬ್ಬ”ದ ಉದ್ಘಾಟನಾ ಸಮಾರಂಭವು ಗಣ್ಯರ ಉಪಸ್ಥಿತಿಯಲ್ಲಿ ಅತ್ಯಂತ ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ನೆರವೇರಿತು. ಗ್ರಾಮೀಣ ಭಾಗದಲ್ಲಿ ಪ್ರಾಚೀನ ಆಯುರ್ವೇದ ಪರಂಪರೆಯನ್ನು ಜನಸ್ನೇಹಿಯಾಗಿ ಉಳಿಸಿ ಬೆಳೆಸುತ್ತಿರುವ ಸಂಸ್ಥಾಪಕ ಡಾ. ರಾಜೇಶ್ ಬಾಯರಿ ಮತ್ತು ವೈದ್ಯರ ತಂಡದ ಕಾರ್ಯವೈಖರಿಯನ್ನು ಸಮಾರಂಭದಲ್ಲಿ ಭಾಗವಹಿಸಿದ ಗಣ್ಯರು ಮುಕ್ತಕಂಠದಿಂದ ಶ್ಲಾಘಿಸಿದರು. ರೋಗಿಗಳನ್ನು ಕುಟುಂಬದ ಸದಸ್ಯರಂತೆ ಕಾಣುವ ಸಂಸ್ಥೆ:ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪ್ರಾಧ್ಯಾಪಕ ಡಾ. ಪ್ರದೀಪ್ ಕೆಂಚನೂರು ಮಾತನಾಡಿ, “ಚಿತ್ರಕೂಟದಲ್ಲಿ ರೋಗಿಗಳನ್ನು ಗ್ರಾಹಕರಂತಾಗಲಿ, ರೋಗಿಗಳಂತಾಗಲಿ ಕಾಣದೆ ಮನೆಯ ಸದಸ್ಯರಂತೆ ಅಕ್ಕರೆಯಿಂದ ಉಪಚರಿಸುವ ಅಪರೂಪದ ವಾತಾವರಣವಿದೆ. ‘ಹತ್ತು ಸಮಸ್ತರು’ ಎಂಬಂತೆ ಸಮಾಜದ ಎಲ್ಲ ವರ್ಗ, ಜಾತಿ-ಧರ್ಮದ ಜನರನ್ನು ಪ್ರೀತಿಯಿಂದ ಒಳಗೊಂಡು ಮುನ್ನಡೆಯುತ್ತಿರುವುದು ಇಲ್ಲಿನ ವೈಶಿಷ್ಟ್ಯ. ದೇಶ-ವಿದೇಶಗಳ (ಸುಮಾರು 40-50 ರಾಷ್ಟ್ರಗಳ) ಅತಿಥಿಗಳು ಇಲ್ಲಿಗೆ ಬಂದು ಸ್ವಾಸ್ಥ್ಯ ಕಂಡುಕೊಳ್ಳುತ್ತಿರುವುದು ಸಂಸ್ಥೆಯ ಪ್ರಾಮಾಣಿಕ ಸೇವೆಗೆ ಸಾಕ್ಷಿ” ಎಂದರು. ಜನರ ಒಡನಾಟದಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ನಡೆದ ‘ವಿಧಿಕ್ತ–2026’ ಕಾನೂನು ಅರಿವು ಮೂಡಿಸುವ ಮೂಟ್ ಕೋರ್ಟ್ ಮಾದರಿಯ ಅಂತರ್ ತರಗತಿ ಸ್ಪರ್ಧೆಯ ಸಮಾರೋಪ ಸಮಾರಂಭ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳು ಕಾನೂನಿನ ಮೂಲಭೂತ ಅರಿವನ್ನು ಹೊಂದಿರುವುದು ಅತ್ಯಂತ ಅಗತ್ಯ. ಕಾನೂನಿನ ಅರಿವು ಕೇವಲ ನ್ಯಾಯಾಲಯದ ವಿಚಾರಗಳಿಗೆ ಸೀಮಿತವಾಗಿರದೆ, ನಮ್ಮ ದೈನಂದಿನ ಜೀವನದಲ್ಲಿಯೂ ಅನ್ವಯವಾಗುತ್ತದೆ. ಪ್ರತಿಯೊಬ್ಬರೂ ತಮ್ಮ ಹಕ್ಕುಗಳು ಮತ್ತು ಕರ್ತವ್ಯಗಳನ್ನು ತಿಳಿದುಕೊಂಡು, ಜವಾಬ್ದಾರಿಯುತ ಹಾಗೂ ಉತ್ತಮ ಮಾನವರಾಗಿ ಬದುಕಬೇಕು ಎಂದು ಉಡುಪಿಯ ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಖಾ ಕೆ. ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಸ್ಪರ್ಧೆಯ ತೀರ್ಪುಗಾರರಾದ ಉಡುಪಿ ಬಾರ್ ಅಸೋಸಿಯೇಷನ್‌ನ ವಕೀಲರಾದ ಪ್ರಸಾದಿ ಎಸ್. ಸುವರ್ಣ, ಪವರ್ ಟಿವಿ ನ್ಯೂಸ್ ನಿರೂಪಕರಾದ ಪ್ರಣುತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸೇವೆ ಮತ್ತು ಸಂಸ್ಕೃತಿ ಅನಾವರಣಕ್ಕೆ ಸೇವಾ ಸಂಗಮ ಪೂರಕ ವಾತಾವರ ಕಲ್ಪಿಸಿದೆ ಎಂದು ಸಾಮಾಜಿಕ ಮುಖಂಡ ಚೇಂಪಿ ವೆಂಕಟೇಶ ಭಟ್ ಹೇಳಿದರು. ಅವರು ಶನಿವಾರ ಇಲ್ಲಿನ ಕೋಟದ ಸೇವಾ ಸಂಗಮ ಶಿಶು ಮಂದಿರದ ನೇತೃತ್ವದಲ್ಲಿ 4ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗಾಗಿ “ದಸರಾ ಶಿಬಿರ 2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳಲ್ಲಿ ಕೌಶಲ್ಯ ಅಭಿವೃದ್ಧಿ ಶಿಬಿರಗಳು ಪರಿಣಾಮಕಾರಿ ಈ ನಿಟ್ಟಿನಲ್ಲಿ ಸೇವಾಸಂಗಮ ಅರ್ಥಪೂರ್ಣ ಶಿಬಿರಕ್ಕೆ ಮುನ್ನುಡಿ ಬರೆಯಲಿದೆ ಎಂದರು. ಈ ಸಂದರ್ಭದಲ್ಲಿ ಸೇವಾಸಂಗಮ ಶಿಶುಮಂದಿರದ ಮಾಜಿ ಅಧ್ಯಕ್ಷೆ ನಾಗಲಕ್ಷ್ಮೀ ಹೆಗ್ಡೆ, ಶಿಶುಮಂದಿರದ ಮಾತಾಜಿ ಸಹನಾ ಆಚಾರ್ಯ, ದೀಪ ಮಾತಾಜಿ, ಸಹಾಯಕಿ ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಶು ಮಂದಿರದ ಕಾರ್ಯದರ್ಶಿ ಕಲಾವತಿ ಅಶೋಕ್ ನಿರೂಪಿಸಿ, ವಂದಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಚೇಂಪಿ ವೆಂಕಟೇಶ ಭಟ್ ಹಾಗೂ ಶಿಕ್ಷಕಿ ನಾಗರತ್ನ ಹೇರ್ಳೆ ಭಾಗವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಕ್ಕಳ ಪ್ರಾಥಮಿಕ ಹಂತದಲ್ಲಿ ಸಾಹಿತ್ಯದ ಅಭಿರುಚಿ ಬೆಳೆಸುವ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು. ಅವರು ಶನಿವಾರ ಗುಂಡ್ಮಿ ವೇ.ಮೂ. ಸತ್ಯನಾರಾಯಣ ಉಪಾಧ್ಯಾಯ ಮನೆಯಂಗಳದಲ್ಲಿ ಸಾಲಿಗ್ರಾಮದ ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ, ಸಾಹಿತ್ಯ ಸಂಘ ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ ಇವರ ಆಶ್ರಯದಲ್ಲಿ ವರ್ಷ ಸಂಭ್ರಮ – ಕೃತಿ ಬಿಡುಗಡೆ ಮತ್ತು ಅಂಬಲಪಾಡಿ ಡಾ.ನಿ.ವಿಜಯ ಬಲ್ಲಾಳರು ತಮ್ಮ ತಂದೆಯ ನೆನಪಿನಲ್ಲಿ ಸಾಹಿತ್ಯ ಕೃಷಿಗಾಗಿ ಕೊಡಮಾಡುತ್ತಿರುವ 17ನೇ ವರ್ಷದ ಅಣ್ಣಾಜಿ ಬಲ್ಲಾಳ ಸ್ಮಾರಕ ಬಾಲ ಪುರಸ್ಕಾರ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನಿಸಿ ಮಾತನಾಡಿದರು. ಪ್ರಸ್ತುತ ಆಧುನಿಕ ಕಾಲಘಟ್ಟದಲ್ಲಿ ಮಕ್ಕಳನ್ನು ಕೇಂದ್ರಿಕರಿಸಿ ಹಲವು ರೀತಿಯ ಸಾಹಿತ್ಯಿಕ ಕಾರ್ಯಕ್ರಮ ಆಯೋಜಿಸಿ ಪರಿಸರದಲ್ಲಿ ಸಾಹಿತ್ಯಿಕ ಕಂಪು ಪಸರಿಸಲಾಗುತ್ತಿದೆ ಅಲ್ಲದೆ ಡಾ.ಅಣ್ಣಾಜೀ ಬಲ್ಲಾಳರ ಹೆಸರಿನಲ್ಲಿ ಕೊಡ ಮಾಡುವ ಸಾಹಿತ್ಯಿಕ ಪ್ರಶಸ್ತಿ ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕವಾಗಿ ಮುನ್ನುಡಿ ಬರೆಯಲಿದೆ ಎಂದರು. ಈ ಸಂದರ್ಭದಲ್ಲಿ ಅವನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸ್ವಚ್ಛತೆ ಎನ್ನುವುದು ಕೇವಲ ತ್ಯಾಜ್ಯ ಸಂಗ್ರಹಿಸುವ ಅಥವಾ ವಿಲೇವಾರಿ ಮಾಡುವ ಕಾರ್ಯವಾಗದೆ, ತ್ಯಾಜ್ಯ ಉತ್ಪತ್ತಿಯಾಗುವುದನ್ನೇ ಕಡಿಮೆ ಮಾಡುವ ಜೀವನಶೈಲಿಯಾಗಿ ರೂಪುಗೊಳ್ಳಬೇಕು. ಪ್ರತಿಯೊಂದು ಗ್ರಾಮದಲ್ಲಿಯೂ ಜನರನ್ನು ಜಾಗೃತಗೊಳಿಸಿ, ಸ್ಥಳೀಯ ಸಮಸ್ಯೆಗಳನ್ನು ಗುರುತಿಸಿ, ಶಾಶ್ವತ ಪರಿಹಾರ ಕಂಡುಕೊಳ್ಳುವ ಮೂಲಕ ಸ್ವಚ್ಛ ಗ್ರಾಮಗಳ ನಿರ್ಮಾಣ ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ ಆಳ್ವ ಹೇಳಿದರು. ಅವರು ಆಳ್ವಾಸ್‌ನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಹಸಿರು ಸಂವಾದ–ಸ್ವಚ್ಛ ಗ್ರಾಮಕ್ಕಾಗಿ ಕಾರ್ಯಯೋಜನೆ’ ಅವಲೋಕನ ಹಾಗೂ ಮುಂದಿನ ಕಾರ್ಯಯೋಜನೆ ರೂಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಈಗಾಗಲೇ ಆಯ್ದ ಗ್ರಾಮಗಳಲ್ಲಿ ಹಸಿರು ಸಂವಾದದ ಚಟುವಟಿಕೆಗಳು ಆರಂಭವಾಗಿದ್ದು, ಮುಂದಿನ ಹಂತದಲ್ಲಿ ಇನ್ನಷ್ಟು ಗ್ರಾಮಗಳನ್ನು ಒಳಗೊಳ್ಳಲಾಗುವುದು. ತುಳುನಾಡಿನ ಗ್ರಾಮಗಳಿಗೆ ಹೊಂದುವಂತಹ ಸ್ಥಳೀಯ ಮಾದರಿಯೊಂದನ್ನು ರೂಪಿಸುವುದು ಹಸಿರು ಸಂವಾದದ ಉದ್ದೇಶವಾಗಿದೆ ಎಂದು ಹೇಳಿದರು. ಸ್ವಚ್ಛತೆಯ ಹೊಣೆಗಾರಿಕೆಯನ್ನು ಒಬ್ಬ ವ್ಯಕ್ತಿ ಅಥವಾ ಒಂದು ಸಂಸ್ಥೆಗೆ ಸೀಮಿತಗೊಳಿಸದೆ ಸಾಮೂಹಿಕ ಮತ್ತು ಸಾಂಸ್ಥಿಕ ವ್ಯವಸ್ಥೆಯಾಗಿ ಬೆಳೆಸಬೇಕು. ತಾತ್ಕಾಲಿಕ ಕ್ರಮಗಳಿಗಿಂತ ಶಾಶ್ವತ ಪರಿಹಾರಗಳಿಗೆ ಆದ್ಯತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ರಕ್ಷಕ – ಶಿಕ್ಷಕರ ಸಂಘದ ಸಭೆಯು ಶನಿವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಉಪಾಧ್ಯಕ್ಷರಾದ ಕೆ. ಶಾಂತಾರಾಮ್ ಪ್ರಭು ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಸೌಲಭ್ಯಗಳಿವೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಂಡು ಅವರು ಭವಿಷ್ಯವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವಂತಾಗಲಿ. ನಾವೆಲ್ಲರೂ ಸೇರಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯವನ್ನು ರೂಪಿಸೋಣ ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಯು.ಎಸ್.ಶೆಣೈ ಮಾತನಾಡಿ, ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದಲ್ಲಯೇ ಅತ್ಯುತ್ತಮ ಸಂಸ್ಥೆಯಾಗಿದೆ. ಎಲ್ಲಾ ರೀತಿಯ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಇಲ್ಲಿ ಅವಕಾಶವಿದೆ. ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವಲ್ಲಿ ಭಂಡಾರ್ಕಾರ್ಸ್ ಕಾಲೇಜು ಮುಂದಿರುತ್ತದೆ. ಅಲ್ಲದೇ ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳಬೇಕು. ಅವರು ಒಳ್ಳೆಯ ಆಸಕ್ತಿದಾಯಕ ಕ್ಷೇತ್ರದಲ್ಲಿ ಅವರನ್ನು ಮುಂದುವರಿಯಲು ಅವು ಮಾಡಿಕೊಡಬೇಕು. ಅವರು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಕಾಲೇಜಿನ ಪ್ರಾಂಶುಪಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತಂದು ಅವರನ್ನು ಸಮಾಜದಲ್ಲಿ ಸತ್ಪ್ರಜೆಗಳನ್ನಾಗಿ ರೂಪಿಸುತ್ತಿರುವ ಸೇವಾ ಸಂಗಮ ಶಿಶು ಮಂದಿರಗಳು, ವಿವಿಧ ಶಿಬಿರಗಳನ್ನು ಆಯೋಜಿಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವುದು ಪ್ರಶಂಸನೀಯ. ದಸರಾ ಶಿಬಿರಗಳ ಮೂಲಕ ಮಕ್ಕಳ ಮಾನಸಿಕ, ಶಾರೀರಿಕ ಹಾಗೂ ಬೌದ್ಧಿಕ ಬೆಳವಣಿಗೆ ಸಾಧ್ಯವಿದ್ದು, ಮಕ್ಕಳು ಇಂತಹ ಶಿಬಿರಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ ಹೇಳಿದರು. ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ವತಿಯಿಂದ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ದಸರಾ ಶಿಬಿರವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. ಶಿಶು ಮಂದಿರದ ಅಧ್ಯಕ್ಷ ಬಿ.ರಾಘವೇಂದ್ರ ಪೈ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ನಿಶ್ಮಿತಾ ಖಾರ್ವಿ, ನರ್ಮದಾ ಪ್ರಭು, ಶಿಶು ಮಂದಿರದ ಸದಸ್ಯರಾದ ವಿಜಯಶ್ರೀ ವಿ.ಆಚಾರ್ಯ, ಗಾಯತ್ರಿ ಕೊಡಂಚ, ಮಾತಾಜಿ ಪ್ರೇಮಾ, ಸಹಾಯಕಿ ರತ್ನ ಉಪಸ್ಥಿತರಿದ್ದರು. ಸಂಚಾಲಕ ಡಾ. ಕಾಶೀನಾಥ ಪೈ ಪ್ರಾಸ್ತಾವಿಕ…
