Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ ಬಿ. ಹೆಗ್ಡೆ ಕಾಲೇಜು ಇದರ ರೋವರ್ಸ್ & ರೇಂಜರ್ಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಎ. ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ ಸದಸ್ಯರಾದ ಶ್ರೀ ಸುಬ್ರಮಣ್ಯ ಶೆಟ್ಟಿಯವರು ಉದ್ಘಾಟಕರಾಗಿ ಆಗಮಿಸಿ ಸ್ವಯಂ ಸೇವಕ ಜವಾಬ್ದಾರಿ ಹಾಗೂ ಸೇವೆಯ ಮಹತ್ವ ದ ಕುರಿತು ತಿಳಿಸಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಬಿಸಿ ಟ್ರಸ್ಟ್ ಇದರ ಕಾರ್ಯಕ್ರಮ ಅಧಿಕಾರಿಗಳಾದ ಉಮೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿ, ರೇಂಜರ್ ಲೀಡರ್ ಜೋಸ್ಲಿನ್ ರೇನಿಟಾ ಅಲ್ಮೆಡಾ ನಿರೂಪಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮನುಷ್ಯನಿಗೆ ಕಣ್ಣು ಅತ್ಯವಶ್ಯಕ. ಕಣ್ಣಿನ ತೊಂದರೆ ಬರುವ ತನಕ ಕಾಯದೆ ಕಾಲ ಕಾಲಕ್ಕೆ ಕಣ್ಣುಗಳನ್ನು ತಪಾಸಣೆ ಮಾಡಿಸಬೇಕು. ಕಣ್ಣಿನ ದೋಷಗಳ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ನಿಯಮಿತ ಆಹಾರ, ತಪಾಸಣೆ ಹಾಗೂ ಚಿಕಿತ್ಸೆ ಇವುಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಮರಣಾನಂತರ ಕಣ್ಣುಗಳನ್ನು ದಾನ ಮಾಡಲು ಮುಂದಾಗಬೇಕು. ಆ ಮೂಲಕ ಇನ್ನೊಬ್ಬರ ಬಾಳಿನಲ್ಲಿ ಬೆಳಕಾಗಬೇಕು ಎಂದು ತ್ರಾಸಿ ಕ್ರೈಸ್ಟ್ ಕಿಂಗ್ ಚರ್ಚ್‌ನ ಧರ್ಮಗುರು ರೋಜಾರಿಯೊ ಫೆರ್ನಾಂಡಿಸ್ ಹೇಳಿದರು. ಅವರು ರೋಟರಿ ಕ್ಲಬ್ ಗಂಗೊಳ್ಳಿ, ಗ್ರಾಮ ಪಂಚಾಯತ್ ತ್ರಾಸಿ, ಕ್ರೈಸ್ಟ್ ಕಿಂಗ್ ಚರ್ಚ್ ತ್ರಾಸಿ ಆರೋಗ್ಯ ಆಯೋಗ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಮತ್ತು ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ತ್ರಾಸಿ ಮಿಲೇನಿಯಂ ಹಾಲ್‌ನಲ್ಲಿ ಭಾನುವಾರ ನಡೆದ ನೇತ್ರ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಡಿ.ಬಿಜೂರು ಮತ್ತು ಕ್ರೈಸ್ಟ್ ಕಿಂಗ್ ಚರ್ಚ್ ತ್ರಾಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿಶ್ವ ರಾಮಕ್ಷತ್ರಿಯ ಮಹಾಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಕುಂದಾಪುರ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿತು. ಈ ವೇಳೆ ವಿಶ್ವ ರಾಮಕ್ಷತ್ರಿಯ ಮಹಾಸಂಘದ ಕಾರ್ಯಾಧ್ಯಕ್ಷರಾಗಿ ಶ್ರೀನಿವಾಸ ಕೆ. ಅವರು ಅವಿರೋಧವಾಗಿ ಆಯ್ಕೆಯಾದರು. ಅವರು ಹೆಬ್ರಿ ರಾಮಕ್ಷತ್ರಿಯ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮಹಾಸಂಘದ ಅಧ್ಯಕ್ಷರಾಗಿ ಎಚ್.‌ಆರ್. ಶಶಿಧರ ನಾಯ್ಕ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಪಿ. ಎಸ್ ಅವರು ಮೂರನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ. ಉಪಾಧ್ಯಕ್ಷರುಗಳಾಗಿ ನಾಗರಾಜ ಕಾಮಧೇನು, ಸೀತಾರಾಮ‌ಹಳದಿಪುರ, ಮಂಜುನಾಥ ಕೆ.ಎನ್., ವಾಮನ ರಾವ್ ಬೇಕಲ್, ಬಿ.ಎಂ.‌ನಾಥ್, ಕಾರ್ಯದರ್ಶಿಗಳಾಗಿ ಷಣ್ಮುಕ, ಡಿ. ಸತೀಶ್, ಅಣ್ಣಪ್ಪ ನಾಯ್ಕ್, ಗಣಪತಿ ಹೋಬಳಿದಾರ್, ರಶ್ಮಿರಾಜ್ ಕುಂದಾಪುರ, ಕೋಶಾಧಿಕಾರಿಯಾಗಿ ಕರುಣಾಕರ ಯು, ಸಂಘಟನಾ ಕಾರ್ಯದರ್ಶಿಗಳಾಗಿ ಬಾಲಕೃಷ್ಣ ಪಿ. ನಾಯ್ಕ್, ಅನಿಲ್ ಹೊಸನಗರ, ಪದ್ಮನಾಭ ಕೊತ್ವಾಲ್, ಮಂಜುನಾಥ ಎನ್, ಲೆಕ್ಕ ಪರಿಶೋಧಕರಾಗಿ ಗಣಪತಿ ಎನ್. ಶೇರುಗಾರ್, ಕಾನೂನು‌ಸಲಹೆಗಾರರಾಗಿ ಹೂವಯ್ಯ ಶೇರುಗಾರ್, ಸಂಪಾದಕರುಗಳಾಗಿ ರೇಖಾ‌ಸುದೇಶ್ ಆಯ್ಕೆಯಾಗಿದ್ದಾರೆ. ಒಟ್ಟು 45 ಮಂದಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಾವೆಲ್ಲ ಒಂದೇ ಎನ್ನುವ ಭಾವನೆಯಿಂದ ಸಾಮರ್ಥ್ಯ, ದೌರ್ಬಲ್ಯ, ಅವಕಾಶ, ವಿಪ್ಪತ್ತುಗಳ ಬಗ್ಗೆ ಪರಾಮರ್ಶೆ ಮಾಡಿ ಧನಾತ್ಮಕ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಸಾಧನೆ ಖಂಡಿತ ಸಾಧ್ಯ ಎಂದು ಬೆಂಗಳೂರಿನ ಸೋನಾ ಸಮೂಹ ಸಂಸ್ಥೆಗಳ ಸಿ.ಇ.ಓ ಕಮ್ಮಾಜೆ ಯಜ್ಞನಾರಾಯಣ ಹೇರ್ಳೆ ಹೇಳಿದರು. ಅವರು ಸಾಲಿಗ್ರಾಮ ಗುರುನರಸಿಂಹ ಸಭಾಭವನದ ಡಾ. ಕೋಟ ಶಿವರಾಮ ಕಾರಂತ ವೇದಿಕೆಯಲ್ಲಿ ಭಾನುವಾರ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ, ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆಯ ಸಹಯೋಗದಲ್ಲಿ ನಡೆದ ಕೂಟ ಮಹಾಜಗತ್ತು ಸಾಲಿಗ್ರಾಮ ಕೇಂದ್ರ ಸಂಸ್ಥೆಯ ಕೇಂದ್ರೀಯ ಮಹಾಧಿವೇಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರಲ್ಲಿ ಸಂಘಟನಾ ಶಕ್ತಿ ಹೆಚ್ಚಿದೆ. ಸಂಪನ್ಮೂಲದ ಕೊರತೆ ಇಲ್ಲ. ಆದರೆ ಕಾಲು ಎಳೆಯುವವರ ಸಂಖ್ಯೆ ಹೆಚ್ಚಿದೆ. ಇದನ್ನೆಲ್ಲ ಮೀರಿ ನಾವು ಮುಂದೆ ಬರುವಂತೆ ಯುವ ಜನಾಂಗಕ್ಕೆ ತಿಳಿಸಿಕೊಡುವ ಅಗತ್ಯತೆ ಇದೆ ಎಂದ ಅವರು ನಮ್ಮ ಬ್ಯ್ಯಾಂಡ್‌ನಾವೇ ಸೃಷ್ಟಿಸಬೇಕು. ನಾವು ಕೋಟ ಬ್ರಾಹ್ಮಣರು ಎನ್ನುವುದನ್ನು ಹೆಮ್ಮೆಯಿಂದ ಹೇಳಿಕೊಳ್ಳಬೇಕು. ಇದರಿಂದ ಕೂಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ಸಕ್ಕರೆ ಕಾರ್ಖಾನೆ ರೈತಾಪಿ ವರ್ಗಗಳ ಅನುಕೂಲಕ್ಕಾಗಿ ಸ್ಥಾಪನೆಗೊಂಡ ಸಕ್ಕರೆ ಕಾರ್ಖಾನೆಯಾಗಿದೆ. ಕಾರಾವಳಿ ಜಿಲ್ಲೆಯಲ್ಲಿ ಸಾಕಷ್ಟು ಹಡಲು ಭೂಮಿಗಳಿವೆ. ಆ ಭೂಮಿಗಳಲ್ಲಿ ಜಿಲ್ಲೆಯ ರೈತರಿಗೆ ಕಬ್ಬು ಬೆಳೆಯಲು ಉತ್ತೇಜನ ನೀಡುವ ಜತೆಗೆ ಸಾಲ ಸೌಲಭ್ಯಗಳನ್ನು ನೀಡುವ ಯೋಜನೆಯನ್ನು ಹಾಕಿಕೊಳ್ಳಬೇಕು ಎಂದು ಕಮಲಶಿಲೆ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಎಸ್. ಸಚ್ಚಿದಾನಂದ ಚಾತ್ರ ಹೇಳಿದರು. ಅವರು ನಾಗರಿಕ ಸಮ್ಮಾನ ಸಮಿತಿ ಸಿದ್ದಾಪುರ ಇವರ ವತಿಯಿಂದ ದ.ಕ. ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರ ಇದರ ಅಧ್ಯಕ್ಷರಾಗಿ ಚುನಾಯಿತರಾದ ಬಿ. ಸತೀಶ್ ಕಿಣಿ ಬೆಳ್ವೆ ಹಾಗೂ ಉಪಾಧ್ಯಕ್ಷ ಎಸ್. ಸಂಜೀವ ಶೆಟ್ಟಿ ಸಂಪಿಗೇಡಿ ಅವರಿಗೆ ಸಿದ್ದಾಪುರ ಶ್ರೀ ರಂಗನಾಥ ಸಭಾಭವನದಲ್ಲಿ ನಾಗರಿಕ ಸನ್ಮಾನ ಕಾರ್ಯಕ್ರಮ ನೆರವೇರಿಸಿ, ಮಾತನಾಡಿದರು. ಹಲವಾರು ವರ್ಷಗಳಿಂದ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಸತೀಶ್ ಕಿಣಿ ಬೆಳ್ವೆ ಮತ್ತು ಸಂಪಿಗೇಡಿ ಸಂಜೀವ ಶೆಟ್ಟಿ ಅವರು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಚುನಾಯಿತರಾಗಿದ್ದು ರೈತಾಪಿ ವರ್ಗದಲ್ಲಿ ಆಶಾದಾಯಕಾಗಿದೆ ದ.ಕ.ಸಹಕಾರಿ ಸಕ್ಕರೆ ಕಾರ್ಖಾನೆ ಬ್ರಹ್ಮಾವರದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಿಐಎಸ್‌ಸಿಇ ನಡೆಸುತ್ತಿರುವ ಗೇಮ್ಸ್ ಮತ್ತು ಸ್ಪೋರ್ಟ್ಸ್ 2025-26ರ ಸ್ಪರ್ಧೆಗಳ ಅಂಗವಾಗಿ ಸೈಂಟ್ ಜೋಸೆಫ್ ಸ್ಕೂಲ್ ಹೈದರಾಬಾದಿನ ಹಬ್ಸಿಗೋಡಾದಲ್ಲಿ ನಡೆದ ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಕರ್ನಾಟಕ ತಂಡದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಈ ತಂಡದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಅಂಗಡಿಯ 9ನೇಯ ತರಗತಿಯ ವಿದ್ಯಾರ್ಥಿ ಸಚೇತ್ ಎ ಪಿ ಪಾಲ್ಗೊಂಡಿದ್ದು ಶಾಲೆಗೆ ಕೀರ್ತಿಯನ್ನು ತಂದಿದ್ದಾನೆ. ಅವನು ಬಾಗಲಕೋಟೆಯ ನಿವಾಸಿಗಳಾದ ಅದೀವೆಪ್ಪ ಎಸ್. ಪಡದಾಲಿ ಮತ್ತು ಕಮಲ ಕೆ ದಂಪತಿಗಳ ಸುಪುತ್ರನಾಗಿದ್ದಾನೆ. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಮತ್ತು ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ವಿದ್ಯಾರ್ಥಿಯನ್ನು ಹಾಗೂ ತರಬೇತಿ ನೀಡಿ ಪ್ರೋತ್ಸಾಹಿಸಿದ ದೈಹಿಕ ಶಿಕ್ಷಣ ಶಿಕ್ಷಕರನ್ನೂ, ಅಭಿನಂದನೆ ಸಲ್ಲಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆಯೇ ಶಾಲೆಯ ಸಾಧನೆ. ಶಾಲೆಯ ಪ್ರತಿಯೊಬ್ಬ ಸದಸ್ಯನೂ ಸದಾ ವಿದ್ಯಾರ್ಥಿಗಳ ಹಿತಚಿಂತನೆಯಲ್ಲಿ ತೊಡಗಿಸಿಕೊಂಡಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಸಾಧಕರಾದ ಮಿತ್ರರಿಂದ ಸಾಧನೆಯ ಹೆಜ್ಜೆಗಳ ಬಗ್ಗೆ ತಿಳಿದುಕೊಳ್ಳಬೇಕು. ಸಿಕ್ಕ ಅವಕಾಶವನ್ನು ಚೊಕ್ಕವಾಗಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ, ಮಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು, ಉತ್ತರವಲಯ ಹಾಗೂ ಲೇಡಿಹಿಲ್ ವಿಕ್ಟೋರಿಯಾ ಪ್ರೌಢ ಶಾಲೆ, ಊರ್ವ ಮಂಗಳೂರು ಇವರ ಸಹಯೋಗದಲ್ಲಿ 2025-26ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಬಾಲಕ – ಬಾಲಕಿಯರ ಈಜು ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು 1 ಚಿನ್ನ, 2 ಬೆಳ್ಳಿ, 5 ಕಂಚಿನ ಪದಕಗಳೊಂದಿಗೆ ಒಟ್ಟು 8 ಪದಕಗಳನ್ನು ಗಳಿಸಿದರು. ಈ ಮೂಲಕ ಮುಂದೆ ನಡೆಯುವ ರಾಜ್ಯ ಮಟ್ಟದ ಈಜು ಸ್ಪರ್ಧೆಗೆ ಆಳ್ವಾಸ್ ಶಾಲೆಯಿಂದ ಇಬ್ಬರು ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಫಲಿತಾಂಶ: ಅಭಿಷೇಕ್ 4000 ಮೀ. ವೈಯಕ್ತಿಕ ಈಜು (ಪ್ರಥಮ ಸ್ಥಾನ), 50 ಮೀ. ಬಟರ್ ಪ್ಲೆಂ (ತೃತೀಯ ಸ್ಥಾನ), 100 ಮೀ. ಫ್ರೀ ಸ್ಟೆಂಲ್ (ದ್ವಿತೀಯ ಸ್ಥಾನ), ಅಭಿನವ್ ಕೃಷ್ಣ ಎಚ್ ಆರ್ 100 ಮೀ. ಬ್ಯಾಕ್ ಸ್ಟ್ರೋಕ್ (ದ್ವಿತೀಯ ಸ್ಥಾನ),…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಗ್ರಾಮೀಣ ಜನರ ಆರ್ಥಿಕ ಕೊಂಡಿಯಾಗಿ ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದೆ. ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಕೋಟದ ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸಿದ್ಧಿ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಕೋಟದ ವಾಸುದೇವ ಮಂಟಪದಲ್ಲಿ ಕೋಟಿ ಚೆನ್ನಯ್ಯ ಸೌಹಾರ್ದ ಸಹಕಾರಿ ಸಂಘ ಇದರ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯ ಜನರಿಗೆ ಅತಿ ಸುಲಭದಲ್ಲಿ ಸಾಲದ ಸೌಲಭ್ಯ ಸಿಗುವುದು. ಸಹಕಾರಿ ಸಂಘದಲ್ಲಿ ಈ ಮೂಲಕ ಬದುಕಿನ ಯಶಸ್ಸಿನ ಘಟ್ಟ ತಲುಪಲು ಸಾಧ್ಯ ಎಂದು ತಮ್ಮ ಸಂಘ ಅಭಿವೃದ್ಧಿ ಪಥಕ್ಕೆ ಮುನ್ನುಡಿ ಬರೆಯುತ್ತಿದೆ ಎಂದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಪೂಜಾರಿ ಹಂದಟ್ಟು ವಾರ್ಷಿಕ ವರದಿ, ಜಮಾಕರ್ಚು ಸೇರಿದಂತೆ ವಿವಿಧ ವರದಿಗಳನ್ನು ಸಭೆಯಲ್ಲಿ ಮಂಡಿಸಿದರು. ಈ ಸಂದರ್ಭದಲ್ಲಿ ಭರತನಾಟ್ಯದಲ್ಲಿ ವಿಶ್ವದಾಖಲೆ ಬರೆದ ದಿಕ್ಷಾವಿ. ಬ್ರಹ್ಮಾವರ ಹಾಗೂ ಪರಿಸರಸ್ನೇಹಿ ಸಾಮಾಜಿಕ ಸಂಘಟನೆ ಕೋಟದ ಪಂಚವರ್ಣ ಯುವಕ ಮಂಡಲವನ್ನು ಗುರುತಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷೆ ಸರೋಜ ಮನೋಹರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಭಾರತೀಯ ಜನತಾ ಪಕ್ಷದ ಧ್ವಜ ಮತ್ತು ಭಾರತ ದೇಶದ  ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರನ್ನು ಹೋಲುವ ಹಾಗೂ ದಂಗೆ ಎದ್ದಿರುವ ಜನರ ವ್ಯಂಗ್ಯ ಚಿತ್ರವನ್ನು ಫೇಸ್ ಬುಕ್, ಇನ್ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಸಂದೇಶಗಳನ್ನು ಹಂಚಿಕೊಂಡ ದೇಶದ್ರೋಹಿ ಪ್ರಚಾರ ಮಾಡುವ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕ ರೋಷನ್ ಶೆಟ್ಟಿ ಅವರ ವಿರುದ್ಧ ಕುಂದಾಪುರ ಮಂಡಲ ಬಿಜೆಪಿ ಯುವಮೋರ್ಚ ಅಧ್ಯಕ್ಷ  ಕಿರಣ್ ಪೂಜಾರಿ ತೆಕ್ಕಟ್ಟೆ ನೇತೃತ್ವದ ತಂಡದಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಕುಂದಾಪುರ ಠಾಣಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ, ಗೋಪಾಡಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ವಕ್ವಾಡಿ ಸುಧೀರ್ ಕೆಎಸ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಕುಂದಾಪುರ ಮಂಡಲ ಯುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ಯಾವುದೇ ಪ್ರತ್ಯೇಕ ಧರ್ಮಕ್ಕೆ ಮಾತ್ರ ಸೀಮಿತವಾದ ಯುಗ ಪುರುಷರಾಗದೆ ಎಲ್ಲಾ ಜಾತಿ ಧರ್ಮದ ನಾಯಕರಾಗಿದ್ದು ಎಲ್ಲರ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದರು. ಜಾತಿ ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭಾತೃತ್ವ ಮತ್ತು ಸಮಾನತೆಯ ಪರಿಕಲ್ಪನೆಯನ್ನು  ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಆದರ್ಶ ಪೂರ್ಣವಾದದ್ದು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಕುಂದಾಪುರ ಮಂಡಲ ಇವರ ವತಿಯಿಂದ ಆಯೋಜಿಸಲಾದ ಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ರಾಣಿ ಅಬ್ಬಕ್ಕ ಜಯಂತಿಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಎಲ್ಲರಲ್ಲೂ ಮಾನವೀಯತೆಯ ಸದಾಶಯವನ್ನ ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವ ಎಂದು ನುಡಿದ ಅವರು ರಾಣಿ ಅಬ್ಬಕ್ಕರ ಹೋರಾಟದ ರೂಪುರೇಷೆಗಳ ಬಗ್ಗೆ ಸಮಗ್ರ ವಿಚಾರಧಾರೆಗಳನ್ನು ಹಂಚಿಕೊಂಡರು. ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ…

Read More