Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗಳು ಸಾವಿರಾರು ಕುಟುಂಬಗಳಿಗೆ ಬೆಳಕಾಗಿದೆ. ಸದಾ ಮನೆ ಕೆಲಸಗಳಲ್ಲಿ ತಲ್ಲೀನರಾಗಿರುತ್ತಿದ್ದ ಸ್ವಸಹಾಯ ಸಂಘದ ಮಹಿಳಾ ಸದಸ್ಯರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡಿರುವುದು ಹಾಗೂ ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗಾಗಿ ಕ್ರೀಡಾಕೂಟವನ್ನು ಆಯೋಜಿಸಿರುವುದು ಸ್ತುತ್ಯಾರ್ಹವಾದುದು ಎಂದು ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಗೌರವಾಧ್ಯಕ್ಷ ಉಮೇಶ ಮೇಸ್ತ ಹೇಳಿದರು. ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಸ್ವಸಹಾಯ ಸಂಘಗಳ ಸದಸ್ಯರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಎಚ್.ರಮೇಶ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ.,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬೈಂದೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನರಿಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಸರಕಾರದಿಂದ ಸುಮಾರು 2 ಸಾವಿರ ಕೋಟಿ ರೂ. ಅನುದಾನ ಬಂದಿದ್ದು, ರಸ್ತೆ, ಕುಡಿಯುವ ನೀರು, ಶಾಲೆ ಕಟ್ಟಡ ನಿರ್ಮಾಣ ಸಹಿತ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಬಳಸಿಕೊಳ್ಳಲಾಗಿದೆ. ಮೀನುಗಾರಿಕಾ ಬಂದರು ಪ್ರದೇಶವಾಗಿರುವ ಗಂಗೊಳ್ಳಿ ಗ್ರಾಮದ ಅಭಿವೃದ್ಧಿ ಕಡೆಗೂ ಗಮನ ನೀಡಲಾಗಿದ್ದು, ಮೀನುಗಾರಿಕಾ ಜೆಟ್ಟಿ ಪುನರ್ ನಿರ್ಮಾಣ, ಚರಂಡಿಗಳ ಅಭಿವೃದ್ಧಿ, ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಮಾಡಲಾಗಿದೆ ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಗಂಗೊಳ್ಳಿಯ ಮಲ್ಯರಬೆಟ್ಟು ಶ್ರೀ ಗ್ರಾಮ ಜಟ್ಟಿಗೇಶ್ವರ ದೇವಸ್ಥಾನದ ಬಳಿ ವಾರಾಹಿ ನೀರಾವರಿ ಇಲಾಖೆ ಮೂಲಕ ಸುಮಾರು ೪೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕೊಂಕಣ ಖಾರ್ವಿ ಸಮುದಾಯ ಭವನಕ್ಕೆ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮೀನುಗಾರಿಕೆಯನ್ನೇ ನಂಬಿ ಬಹಳ ಕಷ್ಟದಿಂದ ಜೀವನ ನಡೆಸುತ್ತಿರುವ ಕೊಂಕಣ ಖಾರ್ವಿ ಸಮುದಾಯದ ಅಗತ್ಯತೆ ಮತ್ತು ಬೇಡಿಕೆಗಳನ್ನು ಆದ್ಯತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥೋಮಸ್ ಶಾಲೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಸಮಾರಂಭ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪುತ್ತೂರು ಧರ್ಮ ಪ್ರಾಂತ್ಯದ ಧರ್ಮ ಗುರುಗಳಾದ ವಂದನಿಯ ಬಿಷಪ್ ಗಿವರ್ಗಿಸ್ ಮಾರ್ ಮಕೋರಿಯಸ್ ಅವರು ಮಾತನಾಡಿ ನಮ್ಮ ಸಂಸ್ಥೆಗಳು ಕೇವಲ ವಿದ್ಯಾ ಸಂಸ್ಥೆಗಳಲ್ಲ ಬದಲಾಗಿ ವಿದ್ಯಾ ದೇಗುಲಗಳಾಗಿ ಬದಲಾಗಿದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಮಹತ್ವವನ್ನು ಅರಿತು ಜೊತೆ – ಜೊತೆಯಲ್ಲಿ ಉತ್ತಮ ಸಂಸ್ಕಾರ ಮತ್ತು ಸಂಸ್ಕ್ರತಿಗಳ ಬಗ್ಗೆ ಅರಿತಿರಬೇಕು. ಸಂಕಷ್ಟದ ಸಮಯದಲ್ಲಿ ಸಂಸ್ಥೆ ಮಕ್ಕಳಿಗೆ ವಿವಿಧ ಸ್ಥರದಲ್ಲಿ ಉತ್ತಮ ಶಿಕ್ಷಣವನ್ನು ನೀಡಿದೆ ಮುಂದೆ ಬರುವ ದಿನಗಳಲ್ಲಿ ನಮ್ಮ ಎಲ್ಲಾ ಸಂಸ್ಥೆಗಳು ಇನ್ನಷ್ಟೂ ಎತ್ತರಕ್ಕೆ ಸಾಗಲಿದೆ ಎಂದು ಹಾರೈಸಿದರು. ಪತ್ರಕರ್ತ ವಸಂತ ಗಿಳಿಯಾರ್ ಮಾತನಾಡಿ ಬದಲಾಗುತ್ತಿರುವ ಕಾಲದಲ್ಲಿ ಮಕ್ಕಳು ತಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕಿದೆ. ಒಂದು ನಿರ್ದಿಷ್ಟ ಗುರಿಯೆಡೆಗೆ ಸಾಗುವಾಗ ತಮ್ಮ ಪ್ರಯತ್ನ ಕೂಡ ಉತ್ಕೃಷ್ಟವಾಗಿರಬೇಕು ಹಾಗೆ ಪಾಲಕರು ಕೂಡ ಮಕ್ಕಳ ಮೇಲೆ ಹೆಚ್ಚಿನ ಒತ್ತಡವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿವೃತ್ತ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡ ಅವರ ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್’ ಕೃತಿ ಲೋಕಾರ್ಪಣೆ ಸಮಾರಂಭ ಭಾನುವಾರ ಉಪ್ಪುಂದ ರೈತಸಿರಿ ಸಭಾಭವನದಲ್ಲಿ ನಡೆಯಿತು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ, ಕನ್ನಡ ಸಾಹಿತ್ಯ ಪರಿಷತ್ತು ಬೈಂದೂರು ತಾಲೂಕು ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ, ಉಪ್ಪುಂದ ಇದರ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಿ, ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್’ ಕೃತಿಯನ್ನು ಲೋಕಾರ್ಪಣೆ ಮಾಡಿದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ಕೃತಿ ಪರಿಚಯಿಸಿದರು. ಸಾಹಿತಿ ಪುಂಡಲೀಕ ನಾಯಕ್ ನಾಯ್ಕನಕಟ್ಟೆ ರೋಟರಿ ಕ್ಲಬ್ ಬೈಂದೂರು ಇದರ ಅಧ್ಯಕ್ಷ ಡಾ ಪ್ರವೀಣ್ ಶೆಟ್ಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸ್ನೇಹಿತರೊಂದಿಗೆ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಘಟನೆ ತಾಲೂಕಿನ ಸೋಮೇಶ್ವರ ಬೀಚ್ ಬಳಿ ನಡೆದಿದೆ. ಬವಳಾಡಿಯ ಮಂಜುನಾಥ ದೇವಾಡಿಗ ಎಂಬುವವರ ಪುತ್ರ ಶಶಿಧರ್ (22) ಮೃತ ದುರ್ದೈವಿ. ಉಳಿದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಜೂರು ಗ್ರಾಮದ ಬವಳಾಡಿಯ ಶಶಿಧರ್ ಎಂಬ ಯುವಕ ತನ್ನ ನಾಲ್ವರು ಸ್ನೇಹಿತರೊಂದಿಗೆ ಸೋಮೇಶ್ವರ ದೊಂಬೆ ನಡುವಿನ ಪ್ರದೇಶದ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಅಲೆಗಳ ರಭಸಕ್ಕೆ ನಿಯಂತ್ರಣ ಕಳೆದುಕೊಂಡು ತೆರೆಯೊಂದಿಗೆ ತೇಲಿಹೊಗಿದ್ದಾರೆ. ಕೂಡಲೇ ಸ್ನೇಹಿತನೋರ್ವ ಆತನ ರಕ್ಷಣೆಗೆ ಧಾವಿಸಿ ಹಿಡಿದುಕೊಂಡರೂ, ದಡಕ್ಕೆ ತರಲು ಸಾಧ್ಯವಾಗದೇ ಸಹಾಯಕ್ಕಾಗಿ ಯಾಚಿಸಿದ್ದಾನೆ. ಸ್ಥಳೀಯರು ರೋಪ್ ಮೂಲಕ ಇಬ್ಬರನ್ನು ದಡಕ್ಕೆ ತಂದಿದ್ದಾರೆ. ಅಷ್ಟರಲ್ಲಾಗಲೇ ಶಶಿಧರ್ ಮೃತಪಟ್ಟಿದ್ದ ಎನ್ನಲಾಗಿದೆ. ಸೌಮ್ಯ ಸ್ವಭಾವದವನಾಗಿದ್ದ ಶಶಿಧರ್ ಒಂದು ವರ್ಷದ ಹಿಂದೆ ಪದವಿ ಮುಗಿಸಿದ್ದು ಸ್ವಲ್ಪ ಸಮಯ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಿ ಸದ್ಯ ಊರಿನಲ್ಲಿಯೇ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಶಶಿಧರ್ ತಂದೆ, ತಾಯಿ ಹಾಗೂ ಸಹೋದರಿಯನ್ನು…

Read More

ಸುರದ್ರೂಪಿ ಯುವಕ ಈಗ ನಾಯಕ ನಟ | ಸಿನೆಮಾ ಕ್ಷೇತ್ರದ ಬಗ್ಗೆ ನೂರಾರು ಕನಸು ಹೊತ್ತ ಯುವ ವಕೀಲ, ಕುಂದಾಪುರದ ಹುಡುಗ ರಥೀಕ್ ಮುರ್ಡೇಶ್ವರ್ ಸಿನೆಮಾ – ಬದುಕಿನ ಪಯಣದ ಅನುಭವಗಳನ್ನು ಕುಂದಾಪ್ರ ಡಾಟ್ ಕಾಂ ಜೊತೆಗೆ ಹಂಚಿಕೊಂಡಿದ್ದಾರೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಮಸ್ಯೆಗಳ ಬಗೆಗೆ ಸುದ್ದಿ ಪ್ರಕಟಿಸಿ ಸುದ್ದಿಯಾಗುವ ಬದಲು ಸಮಸ್ಯೆಯನ್ನು ಬಗೆಹರಿಸಿ ಸುದ್ದಿಯಾಗುವುದು ಶ್ರೇ? ಎಂದು ಹಿರಿಯ ಉಪಸಂಪಾದಕ ಮೋಹನ ದಾಸ್ ಮರಕಡ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಅಭಿವ್ಯಕ್ತಿ ಫೋರಂ ವತಿಯಿಂದ ನಡೆದ ವಿಶೇ? ಅತಿಥಿ ಉಪನ್ಯಾಸ ಕಾರ್ಯಕ್ರಮದಲ್ಲಿ ’ಪತ್ರಕರ್ತರು ಹಾಗೂ ಸಾಮಾಜಿಕ ಹೊಣೆಗಾರಿಕೆ’ ವಿಷಯದ ಕುರಿತು ಮಾತನಾಡಿದರು. ಹೊಣೆಗಾರಿಕೆಯುಳ್ಳ ಪತ್ರಕರ್ತ ಸುದ್ದಿ ಪ್ರಕಟಣೆಯ ಬಳಿಕ ಸುದ್ದಿಯನ್ನು ಬೆಂಬಿಡದೆ ಪುನರ್‌ಪರಿಶೀಲಿಸಿ ಸಮಸ್ಯೆ ಬಗೆಹರಿದಿದೆಯೇ ಎಂದು ಖಾತ್ರಿ ಪಡಿಸಿಕೊಳ್ಳಬೇಕು ಹಾಗೂ ಅಂತವರಿಂದ ಮಾತ್ರ ಸಮಾಜಕ್ಕೆ ಅದ್ಬುತವಾದದ್ದನ್ನು ಕೊಡುಗೆ ನಿರೀಕ್ಷಿಸಬಹುದು ಎಂದರು. ಪತ್ರಿಕೋದ್ಯಮ ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿನ ಸಮಸ್ಯೆಗಳಿಗೆ ಸ್ಪಂದಿಸುವ ಕಾರ‍್ಯಕ್ಕೆ ಮುಂದಾಗಬೇಕು ಹಾಗೂ ತನ್ನ ವೈಯಕ್ತಿಕ ನೆಲೆಯಲ್ಲಿ ಎಲ್ಲಾ ರೀತಿಯ ಮಾರ್ಗದರ್ಶನ, ಸಹಕಾರ ನೀಡುವುದಾಗಿ ತಿಳಿಸಿದರು. ಪತ್ರಿಕೋದ್ಯಮದಲ್ಲಿ ವಿಷಯವನ್ನು ಕೆಣಕುವುದು ಅನಿವಾರ್ಯ, ಆದರೆ ಭಾವನೆಯನ್ನು ಕೆಣಕುವುದು ಸಮಂಜಸವಲ್ಲ. ಸೂಕ್ಷ ಸಂಧರ್ಭಗಳಲ್ಲಿ ಅದು ಸಾವಿನ ಮನೆಯಾಗಿರಬಹುದು ಅಥವಾ ಅಪಘಾತದ ಕ್ಷಣವಾಗಿರಬಹುದು ಅಲ್ಲಿ ಮಾನವೀಯತೆಯೇ ಮುಖ್ಯವಾಗಿರುತ್ತದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಿಂದು ಧರ್ಮ ಶ್ರೇಷ್ಠ ಧರ್ಮ. ನಮ್ಮ ದೇಶದ ಭವ್ಯ ಪರಂಪರೆ, ಸನಾತನ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದ ಸನ್ನಿವೇಶ ಬಂದಿರುವುದು ಅತ್ಯಂತ ದುರದೃಷ್ಟಕರ. ಜಿಹಾದಿ ಶಕ್ತಿಗಳು ಪ್ರಪಂಚವನ್ನೇ ನಾಶ ಮಾಡುತ್ತಿದ್ದು, ನನ್ನ ದೇಶದಲ್ಲಿ ಕೂಡ ಇವರ ಅಟ್ಟಹಾಸ ಪ್ರಾರಂಭವಾಗಿದ್ದು, ಭಾರತವನ್ನು ಇಸ್ಲಾಮೀಕರಣ ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಇದರ ಒಂದು ಭಾಗವಾಗಿ ಹಿಂದು ಕಾರ್ಯಕರ್ತರ ಕೊಲೆಗಳು ನಡೆಯುತ್ತಿದೆ. ಸರಕಾರ ಇಂತಹ ಸಂಘಟನೆ ಹಾಗೂ ದೇಶ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಉದ್ಯಮಿ ರತ್ನಾಕರ ಶೆಟ್ಟಿ ಬಡಾಮನೆ ಆಗ್ರಹಿಸಿದರು. ಗಂಗೊಳ್ಳಿ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಹಿಂದು ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಗಂಗೊಳ್ಳಿ ಪೋಸ್ಟ್ ಆಫೀಸಿನ ಬಳಿ ಸೋಮವಾರ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಹಿಂಜಾವೇ ಮುಖಂಡ ಯಶವಂತ ಗಂಗೊಳ್ಳಿ, ದೇಶವನ್ನು ಇಸ್ಲಾಂ ದೇಶವನ್ನಾಗಿ ಮಾಡುವ ಪ್ರಯತ್ನಗಳು ಆರಂಭವಾಗಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆರ್ಥಿಕವಾಗಿ ಹಿಂದುಳಿದವರಿಗೆ ಸ್ವಾವಲಂಭನೆಯ ಬದುಕು ರೂಪಿಸುವ ಜೊತೆಗೆ ಜನರಲ್ಲಿ ಉಳಿತಾಯದ ಮನೋಭಾವನೆ ಹೆಚ್ಚಿಸುವ ಉದ್ದೇಶದೊಂದಿಗೆ ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ನಾವುಂದ ಶಾಖೆ ನಾಲ್ಕು ವರ್ಷ ಪೂರೈಸಿದ ಅಂಗವಾಗಿ ನಾವುಂದ ಸ್ಕಂದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಹಕರ ವಿಶ್ವಾಸದೊಂದಿಗೆ ನಮ್ಮ ಸಂಸ್ಥೆ ಉತ್ತಮ ಆರ್ಥಿಕ ವ್ಯವಹಾರ ಹೊಂದಿರುವುದಲ್ಲದೇ ಪರಿಸರದ ವಿವಿಧ ಅಗತ್ಯತೆಗಳಿಗೆ ನೆರವಾಗುವ ಮೂಲಕ ಸಾಮಾಜಿಕ ಬದ್ಧತೆಯನ್ನು ಪಾಲಿಸಿಕೊಂಡು ಬಂದಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ಉಪಸ್ಥಿತರಿದ್ದರು. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಉಪಾಧ್ಯಕ್ಷ ಎಂ. ವಿನಾಯಕ ರಾವ್ ಸ್ವಾಗತಿಸಿ, ಶಾಖಾ ಪ್ರಬಂಧಕ ಶ್ರೀನಿವಾಸ್ ಎಂ. ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು. ಗೋಳಿಹೊಳೆ ಶಾಖಾ ಪ್ರಬಂಧಕ ರಾಘವೇಂದ್ರ ಸಹಕರಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶೇಷ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಹಾಗೂ ಪಾಲಕರ ಸಭೆ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ನ್ಯಾಯವಾದಿ ಶರತ್ಚಂದ್ರ ಶೆಟ್ಟಿ ಅವರು ವಿಶೇಷ ಮಕ್ಕಳ ಹಕ್ಕುಗಳು, ಪೋಷಕರ ಮತ್ತು ಸಂಸ್ಥೆಯ ಜವಾಬ್ದಾರಿಗಳ ಬಗ್ಗೆ ಹಾಗೂ ವಿಶೇಷ ಮಕ್ಕಳಿಗೆ ಕಾನೂನಿನಲ್ಲಿ ಇರುವ ಅವಕಾಶಗಳ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ವಕೀಲರಾದ ಟಿ. ಬಿ ಶೆಟ್ಟಿ ಮಾತನಾಡಿ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ವಕೀಲರ ಸಂಘದ ಅಧ್ಯಕ್ಷರಾದ ಸಳ್ವಾಡಿ ನಿರಂಜನ ಹೆಗ್ಡೆ, ವಕೀಲರಾದ ರಾಜು ಪೂಜಾರಿ, ಪಂಚಾಯತ್ ಸದಸ್ಯ ಜುಡಿತ್ ಮೆಂಡೋನ್ಸಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ರೇಮ ಸ್ವಾಗತಿಸಿದರು .ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಶ್ರೃತಿ ವಂದಿಸಿದರು. ಸಹ ಶಿಕ್ಷಕಿ ದೀಪಾ ಕಾರ್ಯಕ್ರಮ ನಿರೂಪಿಸಿದರು.

Read More