ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.18: ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಕಾರ್ಯಕ್ರಮವು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಎಸ್. ನಾಯಕ್ ಹೇಳಿದರು. ಅವರು ದೊಡ್ಡಣ ಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು. ರೈತರು ತಾವು ಬೆಳದಂತಹ ಹಲಸನ್ನು ಸಗಟು ಮಾರಾಟಗಾರರಿಗೆ ಅಲ್ಪ ಮೊತ್ತಕ್ಕೆ ಮಾರಾಟ ಮಾಡಿ ಆರ್ಥಿಕ ನಷ್ಠವನ್ನು ಹೊಂದುತ್ತಿದ್ದರು. ಇವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂಧ ಹಲಸು, ಮಾವು ಸೇರಿದಂತೆ ಮತ್ತಿತರ ಉತ್ಪನ್ನಗಳ ಮೆಳಗಳನ್ನು ನಡೆಸುತ್ತಿದೆ . ರೈತ ಭಾಂಧವರು ಇಂತಹ ಮೇಳಗಳ ಲಾಭ ಪಡೆದುಕೊಳ್ಳಬೇಕು ಎಂದರು . ಮೇಳದಲ್ಲಿ ತೂಬುಗೆರೆಯ ಹಲಸು , ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಜೊತೆಗೆ ಹಲಸಿನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೂಪರ್ ಸ್ಪೋರ್ಟ್ಸ್ ಶೋಟೋಕನ್ ಕರಾಟೆ ಅಕಾಡೆಮಿ ಆಯೋಜಿಸಿದ್ದ ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್ 2022 ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ನೀತಾ ಬಿಲ್ಲವ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ನೀತಾ, ಉಪ್ರಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪ ಬಿಲ್ಲವ ಮತ್ತು ಕೇಶವತಿ ದಂಪತಿ ಪುತ್ರಿ. ಕರಾಟೆ ಶಿಕ್ಷಕರಾದ ವಿಜಯ ಶೆಟ್ಟಿ ತರಬೇತಿ ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿ.ಎ., ಸಿ.ಎಸ್. ಪರೀಕ್ಷೆ ಬರೆಯಲಿಚ್ಚಿಸುವ ವಿದ್ಯಾರ್ಥಿಗಳು ಸಾಕಷ್ಟು ಪೂರ್ವ ಸಿದ್ದತೆ ನಡೆಸಬೇಕು. ನಿರಂತರ ಪರಿಶ್ರಮ ಮತ್ತು ಸಾಧಿಸುವ ತುಡಿತವಿದ್ದರೆ ಖಂಡಿತವಾಗಿಯೂ ಸಿ.ಎ., ಸಿ.ಎಸ್. ಕನಸನ್ನು ನನಸಾಗಿಸಿಕೊಳ್ಳಲು ಸಾಧ್ಯ ಎಂದು ಐ.ಸಿ.ಎ.ಐ. ಸೆಂಟ್ರಲ್ ಕೌನ್ಸಿಲ್ ಮೆಂಬರ್ ಸಿ.ಎ. ಕೋತಾ ಎಸ್. ಶ್ರೀನಿವಾಸ ಹೇಳಿದರು. ಅವರು ಐ.ಸಿ.ಎ.ಐ. ಉಡುಪಿ ಶಾಖೆಯ ಎಸ್.ಐ.ಆರ್.ಸಿ. ಹಾಗೂ ಕಾಲೇಜಿನ ವಾಣಿಜ್ಯ ವಿಭಾಗ ಆಯೋಜಿಸಿದ್ದ ಮೆಗಾ ಕೆರಿಯರ್ ಕೌನ್ಸಿಲಿಂಗ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನಿವೃತ್ತ ಸೇನಾನಿ ಸುಬೇದಾರ್ ಮೇಜರ್ ಲೆಪ್ಟಿನೆಂಟ್ ಗಣೇಶ್ ಅಡಿಗರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಜೀವನದಲ್ಲಿ ಸಾಧಿಸುವ ಛಲ ಮತ್ತು ಗುರಿಯೆಡೆಗಿನ ನಿರಂತರತೆಯನ್ನು ಯುವ ಸಮುದಾಯ ಕಾಯ್ದುಕೊಳ್ಳಬೇಕು. ಭಾರತೀಯ ಸೇನೆಗೆ ನಮ್ಮ ಕರಾವಳಿ ಭಾಗದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರ್ಪಡೆಗೊಂಡು ದೇಶ ಸೇವೆಗೆ ಸನ್ನದ್ಧರಾಗಬೇಕೆಂದು ಹೇಳಿದರು. ಸಿ.ಎ. ಲೋಕೇಶ್ ಶೆಟ್ಟಿ ಸ್ವಾಗತದ ಮಾತುಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.17: ಜಿಲ್ಲೆಯಲ್ಲಿ ಸರ್ಕಾರಿ ಗೋಶಾಲೆಯನ್ನು ಇತರರ ಸಹಭಾಗಿತ್ವದಲ್ಲಿ ರಾಜ್ಯಕ್ಕೇ ಮಾದರಿಯಾಗುವ ರೀತಿಯಲ್ಲಿ, ಗೋವುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ ಶೀಘ್ರದಲ್ಲಿ ನಿರ್ಮಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಕೋರ್ಟ್ಹಾಲ್ ನಲ್ಲಿ ನಡೆದ, ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಸಕ್ತ ಆಯವ್ಯಯದಲ್ಲಿ ಗೋಶಾಲೆಯನ್ನು ಪ್ರಾರಂಭಿಸಲು ಸರ್ಕಾರ ಘೋಷಿಸಿ, ಸಾಕಷ್ಟು ಅನುದಾನವನ್ನು ನೀಡಿದೆ. ಇದಕ್ಕೆ ಪೂರಕವಾಗಿ ಜಿಲ್ಲಾಡಳಿತ ಅಗತ್ಯವಿರುವ ಭೂಮಿಯನ್ನು ಸಹ ನೀಡಿದೆ , ಗೋಶಾಲೆಯು ಆಧುನಿಕ ಶೈಲಿಯಲ್ಲಿ, ವೈಜ್ಞಾನಿಕ ರೀತಿಯ ಅಗತ್ಯ ಮೂಲಭೂತ ಸೌಕರ್ಯಗಳನ್ನು ಲಭ್ಯವಾಗುವ ಹಾಗೆ ನೀಲಿನಕ್ಷೆಯನ್ನು ತಯಾರಿಸಿ, ಗೋಶಾಲೆಯನ್ನು ನಿರ್ಮಿಸಿ, ಶೀಘ್ರದಲ್ಲಿಯೇ ಪ್ರಾರಂಭಿಸಬೇಕೆAದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಬ್ರಿ ತಾಲೂಕಿನ ಕೆರೆಬೆಟ್ಟು ಗ್ರಾಮದ ಸರ್ವೇ ನಂ.79/2 ರಲ್ಲಿ 13.24 ಎಕ್ರೆ ಜಮೀನನ್ನು ಹಾಗೂ ಕುಂದಾಪುರದ ಗೋಳಿಹೊಳೆ ಗ್ರಾಮದ ಸರ್ವೆ ನಂ.279 ರಲ್ಲಿ 9.85 ಎಕ್ರೆ ಜಮೀನನ್ನು ಸರ್ಕಾರಿ ಗೋಶಾಲೆ ನಿರ್ಮಿಸಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಂವಿಧಾನ ದೇಶದ ಎಲ್ಲಾ ಚಟುವಟಿಕೆಗಳ ಭದ್ರಬುನಾದಿಯಾಗಿದ್ದು, ಇಡೀ ಸಂವಿಧಾನದ ಅಂತಃಸತ್ವ ಸಂವಿಧಾನದ ಪ್ರಸ್ತಾವನೆಯಲ್ಲಿದೆ ಎಂದು ಮಂಗಳೂರಿನ ನಿವೃತ್ತ ಪ್ರೊಫೆಸರ್ ಡಾ. ಪಿ. ಅನಂತ ಕೃ? ಭಟ್ ಹೇಳಿದರು. ಆಳ್ವಾಸ್ ಕಾಲೇಜಿನ ಹ್ಯೂಮಾನಿಟೀಸ್ ವಿಭಾಗವು ಆಯೋಜಿಸಿದ್ದ ’ಭಾರತದ ಸಂವಿಧಾನ’ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಭಾರತ ಸಂವಿಧಾನವು ವಿಶ್ವದಲ್ಲೇ ಅತ್ಯಂತ ದೊಡ್ಡ ಸಂವಿಧಾನ ವಾಗಿದ್ದು, ಸಂವಿಧಾನ ರಚನಾ ಸಭೆಯಲ್ಲಿ ಅವಿಭಜಿತ ದಕ್ಷಿಣ ಕನ್ನಡದ ೫ ಮಂದಿ ಸದಸ್ಯರಾಗಿದ್ದದ್ದು ವಿಶೇಷ ಎಂದರು. ಸಕಾರಾತ್ಮಕ ಆಲೋಚನೆ ಹಾಗೂ ಆತ್ಮ ವಿಶ್ವಾಸದಿಂದ ಯುವ ಜನತೆ ಮುನ್ನಡೆದರೆ, ಜೀವನದಲ್ಲಿ ಯಾವುದೂ ಅಸಾಧ್ಯವಲ್ಲ ಎಂದು ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಆಳ್ವಾಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಸಂವಿಧಾನದ ಬಗ್ಗೆ ಅರಿವು ಮೂಡಿಸಿಕೊಂಡಿರುವುದು ಅತೀ ಮುಖ್ಯ. ನಮ್ಮ ದೇಶವು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ವಿವಿಧತೆಯನ್ನು ಹೊಂದಿದೆ. ಈ ಎಲ್ಲಾ ವಿವಿಧತೆಯನ್ನು ನಾವು ಸಂಚರಿಸುವ ಮೂಲಕ ಗ್ರಹಿಸಬೇಕು’ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಕಾರು ಡಿಕ್ಕಿಯಾದ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಸಂಜೆ ನಡೆದಿದೆ. ಅಪಘಾತದಲ್ಲಿ ನಾಗೂರಿನ ನಿವಾಸಿ ಸದಾಶಿವ ಶ್ಯಾನುಭೋಗ್ (45) ಎಂದು ಮೃತಪಟ್ಟಿದ್ದಾರೆ. ► ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಗುತ್ತಿಗೆದಾರ ಸಾವು – https://kundapraa.com/?p=59900 . ಭಟ್ಕಳ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ವ್ಯಾಕ್ಸ್ ವೋಗನ್ ಪೋಲೋ ಕಾರು ರಸ್ತೆ ದಾಟಿಸಲು ಯತ್ನಿಸುತ್ತಿದ್ದ ಸದಾಶಿವ ಶ್ಯಾನುಭೋಗ ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸದಾಶಿವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಸಮಾರಂಭ ಇತ್ತಿಚಿಗೆ ಜರುಗಿತು. ಕರ್ನಾಟಕ ಬ್ಯಾಂಕ್ ಎಮ್.ಡಿ. ಮತ್ತು ಸಿ.ಇ.ಒ. ಮಹಾಬಲೇಶ್ವರ ಎಮ್.ಎಸ್., ಉದ್ಘಾಟಿಸಿ ಮಾತನಾಡಿ, ಅವರು ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಡಿ, ಇಷ್ಟಪಟ್ಟು ಓದಿ, ಆದರೆ ಚಾತುರ್ಯತೆಯಿಂದ ಕೆಲಸ ಮಾಡಲು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಉಪಸ್ಥಿತರಿದ್ದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಮ್. ಸುಕುಮಾರ್ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ವ್ಯವಸ್ಥಾಪನಾ ಸಮಿತಿಯ ಕಾರ್ಯದರ್ಶಿ ಕೆ. ಸೀತಾರಾಮ ನಕ್ಕತ್ತಾಯ, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ. ಸುಧಾಕರ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲ ಪ್ರೊ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು, ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಗೋಳಿಹೊಳೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಕನ್ನಡ) ಮಂಗಳವಾರ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ, ಸಮವಸ್ತ್ರ, ಲೇಖನಿ ಸಾಮಗ್ರಿಗಳು, ಟೈ. ಬೆಲ್ಟ್ ವಿತರಣಾ ಕಾರ್ಯಕ್ರಮ ಜರುಗಿತು. ಎಸ್.ಡಿ.ಎಂ.ಸಿ ಅಧ್ಯಕ್ಷ ಶಂಕರಗೌಡ ಅಧ್ಯಕ್ಷತೆ ವಹಿಸಿದ್ದರು. ದಿವಂಗತ ರಾಮ ಪೂಜಾರಿ ಯಾಲಕ್ಕಿ ಇವರ ಸ್ಮರಣಾರ್ಥ ಪತ್ನಿ ಲಕ್ಷ್ಮೀ ಹಾಗೂ ಅಳಿಯ ನರೇಂದ್ರ ರಾಜ್ ಅವರು ಶಾಲೆಗೆ ದೇಣಿಗೆ ನೀಡಿದ್ದು, ಅವರನ್ನು ಸನ್ಮಾನಿಸಲಾಯಿತು. ಅತಿಥಿಗಳಾಗಿ ನಾಗರಾಜ ಯಾಲಕ್ಕಿ, ಆರೀಫ್ ಹಾಗೂ ಪ್ರಭಾಕರ ಹಂದೆ ಉಪಸ್ಥಿತರಿದ್ದರು. ಸಹ ಶಿಕ್ಷಕ ವೆಂಕಟ್ರಮಣ ಹೋಬಳಿದಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಗೊಳಿಹೊಳೆ ಬಿಳಿಶಿಲೆ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವರಾಜ ಪೂಜಾರಿ ದಾನಿಗಳ ಪರಿಚಯ ಮಾಡಿದರು. ಮುಖ್ಯೋಪಧ್ಯಾಯರಾದ ಶೇಷು ಮರಾಠಿ ಸ್ವಾಗತಿಸಿದರು. ಶಿಲ್ವಾ ವಂದಿಸಿದರು. ಸಹಶಿಕ್ಷಕಿ ಭಾಗೀರಥಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನವ ಭಾರತವು ನವ ಶಕ್ತಿಯೊಂದಿಗೆ ಮುನ್ನಡೆಯಲಿದೆ, ಯುವಕರ ಸಬಲೀಕರಣಕ್ಕೆ ಶ್ರೀ ನರೇಂದ್ರ ಮೋದೀಜಿ ನೇತೃತ್ವದ ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ನೀಡಿದೆ. ಕೇಂದ್ರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 10 ಲಕ್ಷ ಹುದ್ದೆಗೆ ಒಂದೂವರೆ ವರ್ಷದೊಳಗೆ ತುರ್ತು ನೇಮಕಾತಿ ಮಾಡುವಂತೆ ಸೂಚಿಸಿದ್ದಾರೆ ಹಾಗೂ ಸೇನೆಗೆ 46000 ಅಗ್ನಿ ವೀರರನ್ನು 4 ವರ್ಷದ ಸೇವಾವಧಿಗೆ ನೇಮಕ ಮಾಡಿಕೊಳ್ಳಲಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ತಿಳಿಸಿದ್ದಾರೆ. ‘ಅಗ್ನಿ ಪಥ್’ ಯೋಜನೆ ಜಾರಿಗೆ ತಂದಿರುವುದು ನಮ್ಮ ಉತ್ಸಾಹಿ ದೇಶಭಕ್ತ ಯುವಕರಿಗೆ ಸೇನೆಗೆ ಸೇರುವ ಸದಾವಕಾಶವನ್ನು ಕಲ್ಪಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದೀಜಿ ಅವರಿಗೆ, ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಹಾಗೂ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ. ಇದು ಯುವಕರ ಪಾಲಿಗೆ ಕೇವಲ ಉದ್ಯೋಗಾವಕಾಶವಲ್ಲ. ಶಿಸ್ತು, ಮ್ಯಾನೇಜೆಂಟ್, ಜೀವನ ಕೌಶಲ್ಯಗಳನ್ನು ಮೈಗೂಡಿಸಿಕೊಳ್ಳೋದಕ್ಕೆ ಭಾರತೀಯ ಸೇನೆಗಿಂತ ಉತ್ತಮ ಸ್ಥಳ ಇನ್ನೊಂದಿಲ್ಲ. ಸದೃಢ ಸಮಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜೂ.15: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡದ ಬಳಕೆ ಆಗುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಟಿ.ಎಸ್. ನಾಗಾಭರಣ ಹೇಳಿದರು. ಅವರು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಆಡಳಿತದಲ್ಲಿ ಕನ್ನಡ ಅನುಷ್ಠಾನಗೊಳಿಸುವುವಾಗ ಇಲಾಖೆಗಳ ಮಧ್ಯೆ ಆಗುವ ಪ್ರತಿಯೊಂದು ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು. ಒಂದೊಮ್ಮೆ ಅಂಗ್ಲಭಾಷೆಯಲ್ಲಿ ಇದ್ದಲ್ಲಿ ಸಂಬAಧಪಟ್ಟ ಇಲಾಖೆಗೆ ಎಚ್ಚರಿಸುವ ಕೆಲಸವನ್ನು ಮಗದೊಂದು ಇಲಾಖೆ ಮಾಡುವುದರೊಂದಿಗೆ ಸಮನ್ವಯ ಸಾಧಿಸಬೇಕು ಎಂದರು. ಸಾರ್ವಜನಿಕರು ತಮ್ಮ ದೈನಂದಿನ ಆರ್ಥಿಕ ಚಟುವಟಿಕೆಗಳನ್ನು ನಡೆಸಿ, ಅಗತ್ಯ ಸೇವೆಗಳನ್ನು ಪಡೆಯಲು ಬ್ಯಾಂಕ್ಗಳಿಗೆ ಭೇಟಿ ನೀಡಿದಾಗ, ಕನ್ನಡ ಭಾಷೆಯಲ್ಲಿ ವ್ಯವಹರಿಸಬೇಕು. ಒಂದೊಮ್ಮೆ ಅಲ್ಲಿ…
