ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ್ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ” ಗೆ ಅರ್ಜಿ ಆಹ್ವಾನಿಸಲಾಗಿದೆ. ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಬಾಲಗೌರವ ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಫೆಬ್ರವರಿ 20ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಓಂದನೇ ಮಹಡಿ, 204, ‘ಬಿ ಬ್ಲಾಕ್’ ರಜತಾದ್ರಿ, ಉಡುಪಿ ಜಿಲ್ಲೆ ಅಥವಾ ದೂ.ಸಂಖ್ಯೆ: 0836-2465490 ಅನ್ನು ಸಂಪರ್ಕಿಸಬಹುದಾಗಿದೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಾರಂಪಳ್ಳಿಯ ವಿಷ್ಣುಮೂರ್ತಿ ದೇವಾಲಯದಲ್ಲಿ ಸುಪ್ರಭಾತ ಸೇವೆಯ ಆರಂಭಕ್ಕೆ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಉಪಾಧ್ಯರು ಬುಧವಾರ ಚಾಲನೆ ನೀಡಿದರು. ನಿವೃತ್ತ ಶಿಕ್ಷಕ ನರಸಿಂಹ ಐತಾಳರು ದಶಕಗಳ ಹಿಂದೆಯೇ ಕನ್ನಡದಲ್ಲಿ ರಚಿಸಿದ ಹಾಗೂ ಚಂದ್ರಶೇಖರ ಕೆದ್ಲಾಯ ಮತ್ತು ಪಲ್ಲವಿ ತುಂಗ ಧ್ವನಿ ನೀಡಿದ ಸುಪ್ರಭಾತದ ಆರಂಭೋತ್ಸವದಲ್ಲಿ ಅರ್ಚಕರಾದ ಮಿಥುನ ಆಡಿಗರ ನೇತೃತ್ವದಲ್ಲಿ ಪ್ರಾರ್ಥನೆ ಮಾಡಿ ಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಸುಪ್ರಭಾತ ರಚಿಸಿದ ನರಸಿಂಹ ಐತಾಳರನ್ನು ಹಾಗೂ ಅವರ ಪತ್ನಿ ಶೋಭಾ ಐತಾಳರನ್ನು ಅಭಿನಂದಿಸಲಾಯಿತು. ಈ ಸಮಾರಂಭದಲ್ಲಿ ಕ.ಸಾ.ಪ. ಉಡುಪಿಯ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಉಪೇಂದ್ರ ಸೋಮಯಾಜಿ, ಕೋಟ ವಿದ್ಯಾಸಂಘದ ಜೊತೆ ಕಾರ್ಯದರ್ಶಿ ಮಂಜುನಾಥ ಉಪಾಧ್ಯ, ಅರುಣ ಮಧ್ಯಸ್ಥ, ಬಾಲಚಂದ್ರ ಹೇರ್ಳೆ, ಸುಧಾಕರ ಮಧ್ಯಸ್ಥ, ಸುಧಾಕರ ನಾವಡ, ರಶ್ಮಿ, ಸತ್ಯನಾರಾಯಣ ಭಟ್, ರಾಘವೇಂದ್ರ ಮಧ್ಯಸ್ಥ, ಶ್ರೀಪತಿ ಹೇರ್ಳೆ,ನಾರಾಯಣ ಪೂಜಾರಿ, ಸದಾನಂದ ಅಡಿಗ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಎ.ಆರ್.ಟಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಶುಶ್ರೂಷಕ ಹುದ್ದೆ -1 ಅನ್ನು ಭರ್ತಿ ಮಾಡಲು ಬಿ.ಎಸ್ಸಿ ನರ್ಸಿಂಗ್ ಅಥವಾ ಜಿ.ಎನ್.ಎಂ ವಿದ್ಯಾರ್ಹತೆ ಹೊಂದಿದ್ದು, ರಾಜ್ಯ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಾಯಿಸಿರುವ, ಕಂಪ್ಯೂಟರ್ ಬಳಕೆಯಲ್ಲಿ ಜ್ಞಾನ ಹೊಂದಿರುವ, ಕ್ಷೇತ್ರ ಮಟ್ಟದಲ್ಲಿ ಪ್ರಮುಖ ಜನಸಂಖ್ಯೆ ಮತ್ತು ಬಾಧಿತ ಸಮುದಾಯಗಳೊಂದಿಗೆ ತೊಡಗಿಸಿಕೊಂಡಿರುವ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಧಿತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಫೆಬ್ರವರಿ 6 ರ ಒಳಗಾಗಿ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಅಜ್ಜರಕಾಡು, ಉಡುಪಿ ಕಚೇರಿಗೆ ಕಚೇರಿ ಅವಧಿಯಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ zpudupi.karnataka.gov.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಇತ್ತೀಚಿಗೆ ಇ.ಎಸ್.ಐ ಎಂಪನೆಲ್ಡ್ ಆಸ್ಪತ್ರೆಗಳ ಸಂಖ್ಯೆಯನ್ನು ಕಡಿತ ಗೊಳಿಸಿರುವುದು ಮುಖ್ಯವಾಗಿ ಉಡುಪಿ ಜಿಲ್ಲೆಯಲ್ಲಿರುವ ಕಸ್ತೂರ್ಬಾ ಆಸ್ಪತ್ರೆಯನ್ನು ಇ.ಎಸ್.ಐ ಆರೋಗ್ಯ ಸೇವೆ ನೀಡುವ ಎಂಪನೆಲ್ಡ್ ಆಸ್ಪತ್ರೆಗಳ ಪಟ್ಟಿಯಿಂದ ಕೈ ಬಿಟ್ಟ ಕಾರಣ ಉಡುಪಿ ಜಿಲ್ಲೆ ಸೇರಿದಂತೆ ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯ ಕಾರ್ಮಿಕರು ಮಣಿಪಾಲ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗಳನ್ನು ನಿರಂತರವಾಗಿ ಪಡೆಯುತ್ತಿದ್ದು, ಪ್ರಸ್ತುತ ಸದರಿ ಆಸ್ಪತ್ರೆಯನ್ನು ಕೈ ಬಿಟ್ಟಿರುವುದರಿಂದ ಸಾಕಷ್ಟು ಸಮಸ್ಯೆ ಆಗುತ್ತಿರುವುದರಿಂದ ಸದರಿ ಕೆಎಂಸಿ ಆಸ್ಪತ್ರೆಯನ್ನು ಮುಂದುವರಿಸುವಂತೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಸರಕಾರವನ್ನು ಆಗ್ರಹಿಸಿ ಮಾತನಾಡಿದರು. ಚುಕ್ಕೆ ರಹಿತ ಪ್ರಶ್ನೆಗೆ ಉತ್ತರಿಸಿದ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಕಾರ್ಮಿಕರ ರಾಜ್ಯ ಜೀವ ವಿಮಾ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆ ಗಳೊಂದಿಗೆ ಹೊಸದಾಗಿ ಟೆಂಡರ್ ಮೂಲಕ ಒಡಂಬಡಿಕೆ ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ಇ -ಟೆಂಡರ್ ಪೋರ್ಟಲ್ ನಲ್ಲಿ ಒಂದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಂಘಟನೆಯ ಸುಮಾರು 50ಕ್ಕೂ ಹೆಚ್ಚು ಮಾಜಿ ಸೈನಿಕರು ಬುಧವಾರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ನಿವೃತ್ತ ಯೋಧರಿಗೆ ಜಮೀನು ಮಂಜೂರು ಮಾಡುವ ಕುರಿತು ಮನವಿಯನ್ನು ಸಲ್ಲಿಸಿದರು. ಈ ವೇಳೆ ಸಂಘಟನೆಯಿಂದ ಮಾಜಿ ಸೈನಿಕರಿಗೆ ಜಮೀನು ನೀಡುವ ವಿಚಾರದಲ್ಲಿ ಸುಮಾರು 20 ನಿಮಿಷಗಳ ಕಾಲ ಎಲ್ಲಾ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದುಕೊಂಡು ಈ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಿ ಶೀಘ್ರದಲ್ಲೇ ಭೂ ಮಂಜೂರು ಪ್ರಕ್ರಿಯೆಗೊಳಸಲು ಶ್ರಮಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಕೇಶವ ಮಲ್ಪೆ, ಕಾರ್ಯದರ್ಶಿ ಸುರೇಶ್ ರಾವ್, ಉಪಾಧ್ಯಕ್ಷ ಚಂದ್ರ ಅಮೀನ್ ಮತ್ತಿತರರು ನಿವೃತ್ತ ಯೋಧರ ಸಂಘದ ಪದಾಧಿಕಾರಿಗಳು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರ ಕೊನೆಯ ಕೊಂಡಿ ಎಂದು ಭಾವಿಸಲಾಗಿದ್ದ ಹುಲಿಕಲ್ ನಾಗಭೂಷಣ ರಾವ್ ತಮ್ಮ 105ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ನಿಧನರಾದರು. ಕೋಟೇಶ್ವರದ ಅಂಕದಕಟ್ಟೆಯ ಸರ್ಜನ್ ಆಸ್ಪತ್ರೆಯ ಡಾ| ವನಿತಾಲಕ್ಷ್ಮೀ ಅವರ ತಂದೆ ಹಾಗೂ ಸರ್ಜನ್ ಡಾ| ವಿಶ್ವೇಶ್ವರ ಅವರ ಮಾವನಾಗಿರುವ ಎಚ್. ನಾಗಭೂಷಣ ರಾವ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ, ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ, ಜೈಲು ಶಿಕ್ಷೆ ಅನುಭವಿಸಿದವರು. ದೇಶಕ್ಕಾಗಿ ತಮ್ಮ ಉದ್ಯೋಗವನ್ನೂ ಕಳೆದುಕೊಂಡವರು. ಸಮಾಜವಾದಿಯಾಗಿ ಶಿವಮೊಗ್ಗದ ಪ್ರಮುಖ ಸಾಮಾಜಿಕ ಧುರೀಣರ ಸಾಲಿನಲ್ಲಿ ನಿಂತವರು. ಪ್ರಧಾನಿ ಇಂದಿರಾ ಗಾಂಧಿ ಅವರಿಗೆ “ತಾಮ್ರ ಪತ್ರ” ನೀಡಿ ಸನ್ಮಾನಿಸಿದರೆ, ಕರ್ನಾಟಕ ರಾಜ್ಯಪಾಲರು ಅವರನ್ನು ಹಲವು ಬಾರಿ ಗೌರವಿಸಿದ್ದಾರೆ. ಅವರಲ್ಲಿ ಹನ್ಸರಾಜ್ ಭಾರಧ್ವಾಜ್, ಈಗಿನ ಥಾವರ್ ಚಂದ್ ಗೆಹ್ಲೋಟ್ರಿಗೆ ನಾಗಭೂಷಣ ರಾವ್ ಬಗ್ಗೆ ಅಪಾರ ಗೌರವ. ತೀರ್ಥಹಳ್ಳಿಯಲ್ಲಿ ಜನಿಸಿದ ಅವರು ಶಿಕ್ಷಣ, ಉದ್ಯೋಗ, ಚಳವಳಿಗಾಗಿ ಬೆಂಗಳೂರು, ಮೈಸೂರು ತಿರುಗಿದವರು. ಸಾಲಿಗ್ರಾಮ ಕಾರ್ಕಡದ ನಿರ್ಮಲಾ ಉಪಾಧ್ಯಾಯರೊಂದಿಗೆ ವಿವಾಹವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕೃಷಿ ಉಳಿಯಬೇಕಾದರೆ ಪರಿಸರ ಉಳಿಸಿ ಬೆಳೆಸಬೇಕು ಎಂದು ಸಹಕಾರಿ ಧುರೀಣ ಜಿ. ತಿಮ್ಮ ಪೂಜಾರಿ ಹೇಳಿದರು. ಅವರು ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 51ರ ಸರಣಿಯ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೃಷಿ ಭೂಮಿಗೆ ಕಂಠಕವಾಗಿ ಪರಿಣಮಿಸಿದ ಪ್ಲಾಸ್ಟಿಕ್ ತ್ಯಾಜ್ಯದಿಂದ ಕೃತಕ ನೆರೆ ಸೃಷ್ಠಿಯಾಗುತ್ತಿದೆ. ಇದರಿಂದ ಕೃಷಿ ಮಾಡಲಾಗದೆ ಹಡಿಲು ಬಿಡುವ ಸ್ಥಿತಿ ನಿರ್ಮಾಣಗೊಂಡಿದೆ. ಈ ಹಿನ್ನಲ್ಲೆಯಲ್ಲಿ ಪರಿಸರವನ್ನು ಶುಚಿಯಾಗಿರಿಸಿಕೊಂಡರೆ ಕೃಷಿ ಸಂಕುಲ ಉಳಿಯಲು ಸಾಧ್ಯ ಎಂದ ಅವರು ಪಂಚವರ್ಣ ರೈತರೆಡೆಗೆ ಕಾರ್ಯ ಮನೆ ಮನಗಳನ್ನು ತಲುಪುತ್ತಿದೆ. ಇವರ ಪ್ಲಾಸ್ಟಿಕ್ ಮುಕ್ತ ಪರಿಸರ ಕಾಳಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ ಪೂಜಾರಿ (40) ಎಂಬ ವ್ಯಕ್ತಿಯು 2024ರ ಫೆಬ್ರವರಿ 18 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಮನೆಯಿಂದ ಕೆಲಸಕ್ಕೆಂದು ಹೋದವರು ವಾಪಾಸು ಬಾರದೇ ಸಂಬಂಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ: 08254-251033, ಮೊ.ನಂ: 9480805459, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08254-251031, ಮೊ.ನಂ: 9480805434 ಹಾಗೂ ಕಂಟ್ರೋಲ್ ರೂಂ ದೂ.ಸಂಖ್ಯೆ: 100 (0820-2526444) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಹುಲುಸಾದ ಸಾಹಿತ್ಯದ ಹರವುಗಳನ್ನು ಮಕ್ಕಳ ಮೂಲಕ ರವಾನಿಸಿ ಆ ಮೂಲಕ ಸಂಸ್ಕೃತಿಯನ್ನು ಬುನಾದಿಯಾಗಿಸುವ ದೊಡ್ಡ ಹೊಣೆ ಶಿಕ್ಷಕರ ಮೇಲಿದೆ. ಈ ದಿಸೆಯಲ್ಲಿ ಕಾರ್ಯತತ್ಪರರಾದರೆ ಸಾಹಿತ್ಯ ಸಮೃದ್ದವಾಗಿ ಸೃಷ್ಟಿಯಾಗಬಹುದು ಎಂದು ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಲೋಕೇಶ ಸಿ. ನುಡಿದರು. ಅವರು ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ರೋಟರಿ ಕ್ಲಬ್ ಹಂಗಾರಕಟ್ಟೆ – ಸಾಸ್ತಾನ, ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ, ನೆನಪು ಮೂವೀಸ್ ಮತ್ತು ಉಸಿರು ಕೋಟ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ಕಾಲಮಿತಿ ಸಾಹಿತ್ಯ ಸಮ್ಮೇಳನ ಉತ್ತರೋತ್ತರದಲ್ಲಿ ಮಾತನಾಡಿದರು. ಶಭ ಹಾರೈಸಿದ ಟ್ರಸ್ಟ್ನ ಗೌರವ ಅಧ್ಯಕ್ಷ ಆನಂದ ಸಿ. ಕುಂದರ್ ಕಾಲಮಿತಿಯ ಸಾಹಿತ್ಯ ಸಮ್ಮೇಳನ ಅಪೂರ್ವವಾದದು ಸಮಯದ ಸಮನ್ವಯತೆಗೆ ಇದು ಪೂರಕ ಎಂದರು. ಇದೇ ಸಂದರ್ಭದಲ್ಲಿ ಸಮ್ಮೇಳನ ಅಧ್ಯಕ್ಷ ಸುರೇಶ ಮರಕಾಲ ಸೇರಿದಂತೆ ಕಾರ್ಯಕ್ರಮ ಪೋಷಕರಾದ ರೋಟರಿ ಕ್ಲಬ್ ಹಂಗಾರಕಟ್ಟೆಯ ಅಧ್ಯಕ್ಷೆ ಜ್ಯೋತಿ ಉದಯ ಪೂಜಾರಿ, ಕಾರ್ಯದರ್ಶಿ ಮುರಲೀಧರ ನಾಯರಿ, ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ 115ನೇ ತಿಂಗಳ ಕಾರ್ಯಕ್ರಮ, ಹನ್ನೊಂದನೇ ವಾರ್ಷಿಕೋತ್ಸವ ಹಾಗೂ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ- 2026 ಪ್ರದಾನ ಸಮಾರಂಭ ಇತ್ತೀಚೆಗೆ ಗೊಂಬೆ ಮನೆಯಲ್ಲಿ ವಿಜೃಂಭಣೆಯಿಂದ ಜರುಗಿತು. ಶ್ರೀ ಏಕನಾಥೇಶ್ವರಿ ಭಜನಾ ಮಂಡಳಿ, ಕುಂದೇಶ್ವರ ಅವರು ವಿಷ್ಣು ಸಹಸ್ರನಾಮ ಪಠಿಸಿದರು. ವಸಂತಿ ಆರ್. ಪಂಡಿತ್ ಹಾಗೂ ಹಾಲ್ಮಕ್ಕಿ ಶ್ರೀ ಜಟ್ಟಿಗೇಶ್ವರ ಭಜನಾ ಮಂಡಳಿ, ಗಂಗೊಳ್ಳಿ ಇವರ ಭಜನಾ ಕಾರ್ಯಕ್ರಮ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ. ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಪ್ರಾರಂಭವಾಯಿತು. ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನ್ಯಾಸಕ ಡಾ. ಕೆ. ಕಿಶೋರ್ ಕುಮಾರ್ ಶೆಟ್ಟಿ ಅವರು ದೀಪ ಬೆಳಗಿಸಿ, ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -2026ನ್ನು ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನ್ದಾಸ್ ಶೆಣೈ ಅವರಿಗೆ ಪ್ರದಾನ ಮಾಡಲಾಯಿತು. ನಂತರ ಅಂತರಾಷ್ಟ್ರೀಯ ಜಾದೂಗಾರ ಸತೀಶ್ ಹೆಮ್ಮಾಡಿ, ಕುಂದಾಪುರ ಪೇಟೆ…
