ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ಜನತಾ ಪಕ್ಷದ ಧ್ವಜ ಮತ್ತು ಭಾರತ ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರನ್ನು ಹೋಲುವ ಹಾಗೂ ದಂಗೆ ಎದ್ದಿರುವ ಜನರ ವ್ಯಂಗ್ಯ ಚಿತ್ರವನ್ನು ಫೇಸ್ ಬುಕ್, ಇನ್ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಸಂದೇಶಗಳನ್ನು ಹಂಚಿಕೊಂಡ ದೇಶದ್ರೋಹಿ ಪ್ರಚಾರ ಮಾಡುವ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕ ರೋಷನ್ ಶೆಟ್ಟಿ ಅವರ ವಿರುದ್ಧ ಕುಂದಾಪುರ ಮಂಡಲ ಬಿಜೆಪಿ ಯುವಮೋರ್ಚ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ ನೇತೃತ್ವದ ತಂಡದಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಕುಂದಾಪುರ ಠಾಣಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ, ಗೋಪಾಡಿ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ವಕ್ವಾಡಿ ಸುಧೀರ್ ಕೆಎಸ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಕುಂದಾಪುರ ಮಂಡಲ ಯುವ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಶ್ರೀ ನಾರಾಯಣ ಗುರುಗಳು ಯಾವುದೇ ಪ್ರತ್ಯೇಕ ಧರ್ಮಕ್ಕೆ ಮಾತ್ರ ಸೀಮಿತವಾದ ಯುಗ ಪುರುಷರಾಗದೆ ಎಲ್ಲಾ ಜಾತಿ ಧರ್ಮದ ನಾಯಕರಾಗಿದ್ದು ಎಲ್ಲರ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದರು. ಜಾತಿ ದ್ವೇಷದ ಗೋಡೆಯನ್ನು ಒಡೆದು ಎಲ್ಲರಲ್ಲಿ ಭಾತೃತ್ವ ಮತ್ತು ಸಮಾನತೆಯ ಪರಿಕಲ್ಪನೆಯನ್ನು ಬಿತ್ತಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ ಮತ್ತು ಹೋರಾಟ ಆದರ್ಶ ಪೂರ್ಣವಾದದ್ದು ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು. ಅವರು ಕುಂದಾಪುರ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಕುಂದಾಪುರ ಮಂಡಲ ಇವರ ವತಿಯಿಂದ ಆಯೋಜಿಸಲಾದ ಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ರಾಣಿ ಅಬ್ಬಕ್ಕ ಜಯಂತಿಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು. ಎಲ್ಲರಲ್ಲೂ ಮಾನವೀಯತೆಯ ಸದಾಶಯವನ್ನ ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ವ ಎಂದು ನುಡಿದ ಅವರು ರಾಣಿ ಅಬ್ಬಕ್ಕರ ಹೋರಾಟದ ರೂಪುರೇಷೆಗಳ ಬಗ್ಗೆ ಸಮಗ್ರ ವಿಚಾರಧಾರೆಗಳನ್ನು ಹಂಚಿಕೊಂಡರು. ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇವಸ್ಥಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತರು ದೇವರ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ತಾರೆಕೊಡ್ಲು ಬಳಿ ಕಡವೆಯೊಂದು ಚಲಿಸುವ ಬೈಕಿಗೆ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಶ್ರೇಯಸ್ ಮೊಗವೀರ (22) ಮೃತಪಟ್ಟ ಘಟನೆ ವರದಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸಹಸವಾರ ವಿಘ್ನೇಶ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ ಮಧ್ಯಾಹ್ನ ಕಾವ್ರಾಡಿಯ ಶ್ರೇಯಸ್ ಹಾಗೂ ವಿಘ್ನೇಶ್ ಇಬ್ಬರು ಬೈಕಿನಲ್ಲಿ ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜಿ ಮುಗಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಕಮಲೆಶಿಲೆ – ಸಿದ್ಧಾಪುರ ರಸ್ತೆಯಲ್ಲಿ ಬೈಕಿನಲ್ಲಿ ಬರುತ್ತಿದ್ದ ಸಂದರ್ಭ ತಾರೆಕೊಡ್ಲು ಎಂಬಲ್ಲಿ ಕಡವೆಯೊಂದು ಬೈಕ್ ಮೇಲೆ ಹಾರಿದ್ದು, ನಿಯಂತ್ರಣ ತಪ್ಪಿದ ಬೈಕ್ ರಸ್ತೆಯ ಪಕ್ಕದಲ್ಲಿ ಬಿದ್ದಿದೆ. ಸ್ಥಳೀಯರು ತಕ್ಷಣ ಇಬ್ಬರನ್ನೂ ಸಿದ್ಧಾಪುರ ಪ್ರಾಥಮಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಶ್ರೇಯಸ್ʼನನ್ನು ಕುಂದಾಪುರ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗ ಮಾರ್ಗ ಮಧ್ಯೆಯೇ ಶ್ರೇಯಸ್ ಮೃತಪಟ್ಟಿದ್ದಾರೆ. ಬೈಕ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತೂದಳ್ಳಿ ಸಮೀಪದ ದೇವರುಗದ್ದೆಯಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ಕುಡಿದ ಮತ್ತಿನಲ್ಲಿ ಇಬ್ಬರು ಕೆಲಸಗಾರರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ಕೇರಳದ ಬಿನು ಪಿಲಿಫ್ (45) ಮೃತ ವ್ಯಕ್ತಿಯಾಗಿದ್ದು ಚೂರಿ ಇರಿತದಿಂದ ಗಾಯಗೊಂಡು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉದಯ ಕುಮಾರ್ (42) ಕೊಲೆ ಆರೋಪಿ. ಯಡ್ತರೆ ಗ್ರಾಮದ ಕೊಸಳ್ಳಿ ಸಮೀಪದ ದೇವರಗದ್ದೆಯಲ್ಲಿ ಕೇರಳದ ಬಿನು ಪಿಲಿಫ್ ಹಾಗೂ ಉದಯ ಕುಮಾರ್ ಇಬ್ಬರು ಕಳೆದ ಎರಡು ವರ್ಷಗಳಿಂದ ಥೋಮಸ್ ಎಂಬುವವರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದು ಕೂಲಿ ಹಣದ ವಿಚಾರದಲ್ಲಿ ಪರಸ್ಪರ ಜಗಳ ಮಾಡಿಕೊಳ್ಳುತ್ತಿದ್ದರು. ಉದಯ ಎಂಬಾತ ತಾನೋಬ್ಬನೇ ಇಲ್ಲಿ ಕೆಲಸ ಮಾಡುತ್ತೇನೆ ನೀನು ಊರಿಗೆ ಹೋಗು ಎಂದು ಬಿನು ಪಿಲಿಫ್ ಬಳಿ ಹೇಳುತ್ತಲೇ ಬಂದಿದ್ದ. ತೋಟದ ಮಾಲೀಕ ಥೋಮಸ್ ಇಬ್ಬರನ್ನು ಹೊಂದಿಕೊಂಡು ಕೆಲಸ ಮಾಡಿಕೊಂಡಿರುವಂತೆ ಸೂಚಿಸಿದ್ದರು. ಶನಿವಾರ ರಾತ್ರಿ 12ಗಂಟೆಯ ವೇಳೆಗೆ ತೋಟದಲ್ಲಿರುವ ಶೆಡ್ಡಿನಲ್ಲಿ ಈ ಇಬ್ಬರು ಕೆಲಸಗಾರರು ಜಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಸಾರ್ವಜನಿಕ ಸೇವೆಯಲ್ಲಿ ಸುದೀರ್ಘಕಾಲ ಗುರುತಿಸಿಕೊಂಡಿರುವ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಈ ಸಾಲಿನಲ್ಲಿ ರೂ.1140 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ ರೂ.6.15 ಕೋಟಿ ಲಾಭಗಳಿಸಿದ್ದು, ಸದಸ್ಯರಿಗೆ ಶೇ.15 ಡೆವಿಡೆಂಡ್ ನೀಡಲಾಗುವುದು ಎಂದು ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಉಪ್ಪುಂದ ದುರ್ಗಾಪರಮೇಶ್ವರೀ ಸಭಾಂಗಣದಲ್ಲಿ ಭಾನುವಾರ ನಡೆದ 2024-25ನೇ ಸಾಲಿನ 48ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಸಂಘವು ವೈವಿಧ್ಯಮಯ ಯೋಜನೆಗಳನ್ನು ಕಾರ್ಯಗತಗೊಳಿಸಿದೆ. ರೈತಾಪಿ ವರ್ಗದ ಹಾಗೂ ಗ್ರಾಹಕರ ಸೇವೆಯಲ್ಲಿ ಜನ ಮನ್ನಣೆಗಳಿಸಿಗೊಂಡು ಸಹಕಾರಿ ರಂಗದಲ್ಲಿ ವಿಶಿಷ್ಟ ವಿನೂತನ ಸಾಧನೆಯಿಂದ ಜನಾನುರಾಗಿಯಾಗಿದೆ. ಕಳೆದ 23 ವರ್ಷಗಳಿಂದ ಸತತವಾಗಿ ’ಎ’ ವರ್ಗದ ಆಡಿಟ್ ವರ್ಗೀಕರಣ ಹೊಂದಿದ್ದು, ಸವಾಂಗೀಣ ನಿರ್ವಹಣೆಗೆ ಈ ವರ್ಷ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ಕೊಡಮಾಡಿದ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಲಭಿಸಿದೆ. ಅಲ್ಲದೇ ಸಂಘವು ಪ್ರಾಯೋಜಿಸಿರುವ ರೈತಸಿರಿ ರೈತಸೇವಾ ಒಕ್ಕೂಟಕ್ಕೆ ಜಿಲ್ಲಾಮಟ್ಟದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಸೆ.14: ವಿಶ್ವ ರಾಮಕ್ಷತ್ರಿಯ ಮಹಾಸಂಘ ರಿ. ಕುಂದಾಪುರದ ಅಧ್ಯಕ್ಷರಾಗಿ ಎಚ್. ಆರ್. ಶಶಿಧರ ನಾಯ್ಕ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ ಪಿ. ಎಸ್ ಅವರು ಮೂರನೇ ಅವಧಿಗೆ ಪುನರಾಯ್ಕೆಯಾಗಿದ್ದಾರೆ. ಭಾನುವಾರ ಕುಂದಾಪುರ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಮಹಾಸಭೆಯ ಬಳಿಕ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಕಾರ್ಯಾಧ್ಯಕ್ಷರಾಗಿ ಶ್ರೀನಿವಾಸ ಶೇರುಗಾರ್ ಹೆಬ್ರಿ, ಉಪಾಧ್ಯಕ್ಷರುಗಳಾಗಿ ನಾಗರಾಜ ಕಾಮಧೇನು, ಸೀತಾರಾಮ ಹಳದಿಪುರ, ಮಂಜುನಾಥ ಕೆ.ಎನ್., ವಾಮನ ರಾವ್ ಬೇಕಲ್, ಬಿ.ಎಂ.ನಾಥ್, ಕಾರ್ಯದರ್ಶಿಗಳಾಗಿ ಷಣ್ಮುಕ, ಡಿ. ಸತೀಶ್, ಅಣ್ಣಪ್ಪ ನಾಯ್ಕ್, ಗಣಪತಿ ಹೋಬಳಿದಾರ್, ರಶ್ಮಿರಾಜ್ ಕುಂದಾಪುರ, ಕೋಶಾಧಿಕಾರಿಯಾಗಿ ಕರುಣಾಕರ ಯು, ಸಂಘಟನಾ ಕಾರ್ಯದರ್ಶಿಗಳಾಗಿ ಬಾಲಕೃಷ್ಣ ಪಿ. ನಾಯ್ಕ್, ಅನಿಲ್ ಹೊಸನಗರ, ಪದ್ಮನಾಭ ಕೊತ್ವಾಲ್, ಮಂಜುನಾಥ ಎನ್, ಲೆಕ್ಕ ಪರಿಶೋಧಕರಾಗಿ ಗಣಪತಿ ಎನ್. ಶೇರುಗಾರ್, ಕಾನೂನು ಸಲಹೆಗಾರರಾಗಿ ಹೂವಯ್ಯ ಶೇರುಗಾರ್, ಸಂಪಾದಕರುಗಳಾಗಿ ರೇಖಾ ಸುದೇಶ್ ಆಯ್ಕೆಯಾಗಿದ್ದಾರೆ. ಒಟ್ಟು 45 ಮಂದಿ ಕಾರ್ಯಕಾರಿ ಮಂಡಳಿಗೆ ನೇಮಕಗೊಂಡಿದ್ದು, ಎಲ್ಲಾ ಪಧಾಧಿಕಾರಿಗಳು ಅವಿರೋಧವಾಗಿ ಆಯ್ಕೆಗೊಂಡರು. /ಕುಂದಾಪ್ರ ಡಾಟ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇತ್ತೀಚಿಗೆ ಭರತನಾಟ್ಯದಲ್ಲಿ ವಿಶ್ವ ದಾಖಲೆ ಬರೆದ ಕಲಾವಿದೆ ದಿಕ್ಷಾ ಬ್ರಹ್ಮಾವರ ಕೋಟದ ಅಮೃತೇಶ್ವರೀ ದೇಗುಲಕ್ಕೆ ಶನಿವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದೇಗುಲದ ಆಡಳಿತ ಮಂಡಳಿಯ ಸದಸ್ಯರಾದ ಸುಭಾಷ್ ಶೆಟ್ಟಿ ಹಾಗೂ ಗಣೇಶ್ ನೆಲ್ಲಿಬೆಟ್ಟು ಶಾಲು ಹೋದಿಸಿ ಪ್ರಸಾದ ವಿತರಿಸಿ ಗೌರವಿಸಿದರು. ದೇಗುಲದ ಅರ್ಚಕರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ದೇಗುಲದ ಪ್ರಧಾನ ಅರ್ಚಕರಾದ ಲಕ್ಷ್ಮಣ್ ಜೋಗಿ, ಅಶ್ವಥ್ ಜೋಗಿ, ಮಹಾಬಲ ಜೋಗಿ, ದೇಗುಲದ ವ್ಯವಸ್ಥಾಪಕ ಗಣೇಶ್ ಹೊಳ್ಳ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ, ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಮತ್ತಿತರರು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುರಭಿ ರಿ. ಬೈಂದೂರು ಸಂಸ್ಥೆಯು ರಜತ ಸಂಭ್ರಮದ ಅಂಗವಾಗಿ ರಾಜ್ಯ ಮಟ್ಟದ ʼಕಥಾ ಸ್ಪರ್ಧೆಯನ್ನು ಆಯೋಜಿಸಿದೆ. ರಾಜ್ಯದ ಕಥೆಗಾರರಿಂದ ಸ್ವತಂತ್ರ ರಚನೆಯ, ಪ್ರಕಟವಾಗಿರದ ಕಥೆಗಳನ್ನು ಸ್ಪರ್ಧೆಗೆ ಆಹ್ವಾನಿಸಲಾಗಿದ್ದು, ವಿಜೇತರಿಗೆ ಪ್ರಥಮ ರೂ.10,000, ದ್ವೀತಿಯ ರೂ.8,000, ಹಾಗೂ ತೃತೀಯ ರೂ.5,000 ಸಮಾಧಾನಕರ ಬಹುಮಾನ ನೀಡಲಾಗುತ್ತಿದೆ. ನಿಮ್ಮ ಕಥೆಗಳನ್ನು 20 ಸೆಪ್ಟೆಂಬರ್ 2025ರ ಒಳಗೆ ಕಳಹಿಸಬಹುದಾಗಿದೆ. ಅಕ್ಟೋಬರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ನಿಯಮಗಳು: ಹೆಚ್ಚಿನ ಮಾಹಿತಿಗಾಗಿ – 9945944269 ಕಥೆಗಳನ್ನು ಕಳುಹಿಸಬೇಕಾದ ವಿಳಾಸಸುಧಾಕರ ಪಿನಿರ್ದೇಶಕರುಸುರಭಿ ರಿ. ಬೈಂದೂರು,ಬೈಂದೂರು ತಾಲೂಕು, ಉಡುಪಿ ಜಿಲ್ಲೆ – 576214
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಜೀವನದಲ್ಲಿ ಸಾಧನೆಗೆ ಗಳಿಸಬೇಕಾದೆರೆ ಗುರಿ ಇರಬೇಕು ಆಗ ಮಾತ್ರ ಯಶಸ್ಸು ತಮ್ಮತ್ತ ಮುಖ ಮಾಡಲು ಸಾಧ್ಯ ಎಂದು ಇತ್ತೀಚಿಗೆ ಭರತನಾಟ್ಯದಲ್ಲಿ ವಿಶ್ವದಾಖಲೆ ಬರೆದ ಕಲಾವಿದೆ ವಿದೂಷಿ ದಿಕ್ಷಾ ಬ್ರಹ್ಮಾವರ ಹೇಳಿದರು. ಶನಿವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಇದರ ವತಿಯಿಂದ ವಿಶ್ವಸಾಧಕಿ ದಿಕ್ಷಾ ಬ್ರಹ್ಮಾವರ ಇವರು ಸನ್ಮಾನ ಸ್ವೀಕರಿಸಿ ಮಾತನಾಡಿ ಪ್ರತಿಯೊಬ್ಬರಲ್ಲೂ ಕಲೆ ಇರುತ್ತದೆ ಅದು ಹೊರಸೂಸಲು ಪೋಷಕರ ಪ್ರೋತ್ಸಾಹ ಅತ್ಯಗತ್ಯ ಈ ನಿಟ್ಟಿನಲ್ಲಿ ನನ್ನ ಈ ಸಾಧನೆಗೆ ಪತಿ ಹಾಗೂ ಕುಟುಂಬಿಕರು,ಗುರುಗಳ ಶ್ರೀ ರಕ್ಷೆ ಜತೆಗೆ ನನ್ನ ಪರಿಶ್ರಮ ಈ ಹಂತಕ್ಕೆ ತಲುಪಲು ಸಾಧ್ಯವಾಗಿದೆ ಎಂದು ಪರಿಸರಸ್ನೇಹಿ ಪಂಚವರ್ಣ ಸಂಘಟನೆಯಿಂದ ಸ್ವೀಕರಿಸುವ ಭಾಗ್ಯ ಧನ್ಯತೆಯನ್ನು ಕಾಣುವಂತ್ತಾಗಿದೆ ಎಂದರು. ಈ ಸಂದರ್ಭದಲ್ಲಿ ಕೋಟದ ಅಮೃತೇಶ್ವರೀ ದೇಗುಲದ ಟ್ರಸ್ಟಿಗಳಾದ ಸುಭಾಷ್ ಶೆಟ್ಟಿ ಮತ್ತು ಗಣೇಶ್ ನೆಲ್ಲಿಬೆಟ್ಟು ಇವರು ದಿಕ್ಷಾ ಬ್ರಹ್ಮಾವರ ಇವರನ್ನು ಸನ್ಮಾನಿಸಿದರು. ದಿಕ್ಷಾ ಇವರ ಪತಿ ರಾಹುಲ್,ಪಂಚವರ್ಣದ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಂಡ್ಮಿ ಸಾಸ್ತಾನ ಇಲ್ಲಿ ಎಲ್.ಕೆ.ಜಿ., ಯು. ಕೆ. ಜಿ.ಹಾಗೂ ದ್ವಿಭಾಷಾ ಮಾಧ್ಯಮ ಉದ್ಘಾಟನಾ ಕಾರ್ಯಕ್ರಮವು ನಡೆಯಿತು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸರಕಾರಿ ಶಾಲೆಗಳಲ್ಲಿ ಬಹುತೇಕ ಪದವೀಧರ ಶಿಕ್ಷಕರಿದ್ದು, ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಶ್ಲಾಘಿಸಿದರು. ಇದೇ ವೇಳೆ ಶಾಲಾ ಮಕ್ಕಳಿಗೆ ನೀಡಿದ ಕೊಡುಗೆಗಳನ್ನು ಮಕ್ಕಳಿಗೆ ವಿತರಿಸಲಾಯಿತು. ವೇದಿಕೆಯಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ವಿಜಯಲಕ್ಷ್ಮಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮನೋಜ್ ಕುಮಾರ್, ಸಾಸ್ತಾನ ಸಿಎ ಬ್ಯಾಂಕ್ ಅಧ್ಯಕ್ಷ ಸುರೇಶ್ ಅಡಿಗ, ಎಸ್‌ಡಿಎಂಸಿ ಸಮನ್ವಯ ವೇದಿಕೆ ಬ್ರಹ್ಮಾವರ ತಾಲೂಕಿನ ಅಧ್ಯಕ್ಷ ಬಾಲಕೃಷ್ಣ ಪೂಜಾರಿ, ಉದ್ಯಮಿ ಸುರೇಶ್ ಕುಂದರ್ ಐರೋಡಿ, ಪಟ್ಟಣ ಪಂಚಾಯತ್ ಸಾಲಿಗ್ರಾಮದ ಸದಸ್ಯೆ ಸುಲತಾ ಹೆಗ್ಡೆ, ನಿವೃತ್ತ ಮುಖ್ಯೋಪಾಧ್ಯಾಯ ಗಣೇಶ್. ಜಿ.,ನಿವೃತ್ತ ಪೊಲೀಸ್ ಅಧಿಕಾರಿ ಲಕ್ಷ್ಮೀನಾರಾಯಣ, ದಾನಿಗಳಾದ ಪ್ರತಾಪ್ ಖಾರ್ವಿ ಹಾಗೂ ಅಮಿತ್ ಕುಮಾರ್. ಸಾಮಾಜಿಕ ಕಾರ್ಯಕರ್ತ ಶಂಕರ್ ಕುಲಾಲ್,…
