ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎದುರು ರಸ್ತೆಯಲ್ಲಿ ಶುಕ್ರವಾರ ಹಿಜಾಬ್ ಹಾಗೂ ಕೇಸರಿ ಶಾಲು ಧಾರಣೆಯ ವಿಚಾರದಲ್ಲಿ ಪ್ರತಿಭಟನೆ, ಚರ್ಚೆ ನಡೆಯುತ್ತಿರುವಾಗ ಮಾರಕಾಯುಧಗಳೊಂದಿಗೆ ಬಂದಿದ್ದ ಐವರು ಆರೋಪಿಗಳ ಪೈಕಿ ಇಬ್ಬರನ್ನು ಕುಂದಾಪುರ ಪಿಎಸ್ಐ ಸದಾಶಿವ ಗವರೋಜಿ ಹಾಗೂ ಸಿಬ್ಬಂದಿಗಳ ತಂಡ ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲಿ ಒಂದು ಗುಂಪಿನ ವಿದ್ಯಾರ್ಥಿಗಳ ಪರವಾಗಿ 5-6 ವ್ಯಕ್ತಿಗಳು ಮಾರಕಾಯುಧಗಳೊಂದಿಗೆ ಆಗಮಿಸಿದ್ದು, ಯಾವುದೇ ಸಮಯದಲ್ಲಾದರೂ, ಸಾರ್ವಜನಿಕರ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇರುವ ಮಾಹಿತಿ ಪಡೆದುಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಗಂಗೊಳ್ಳಿಯ ಅಬ್ದುಲ್ ಮಜೀದ್ (32) ಹಾಗೂ ರಜಬ್ (41) ಎಂದು ಗುರುತಿಸಲಾಗಿದೆ . ಖಲೀಲ್, ರಿಜ್ವಾನ್ ಹಾಗೂ ಇಫ್ತೀಕರ್ ಬಂಧನಕ್ಕೆ ಬಲೆ ಬೀಸಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕರ್ನಾಟಕದಲ್ಲಿ ಹಿಜಾಬ್- ಕೇಸರಿ ಶಾಲಿನ ವಿವಾದ ಭುಗಿಲೆದ್ದ ಬೆನ್ನಲ್ಲೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರವನ್ನು ಧರಿಸಬೇಕಾದುದುದ ಕಡ್ಡಾಯವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿನ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಮೇಲ್ವಿಚಾರಣಾ ಸಮಿತಿ ನಿರ್ಧರಿಸುವ ಸಮವಸ್ತ್ರ ಧರಿಸಬೇಕು. ಒಂದುವೇಳೆ ಆಡಳಿತ ಮಂಡಳಿ ಸಮವಸ್ತ್ರ ನಿಗದಿಪಡಿಸದೆ ಇದ್ದರೆ ಸಮಾನತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದಿರುವ ಉಡುಪು ಧರಿಸಬೇಕು ಎಂದು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ದೇಶಾದ್ಯಂತ ಕರ್ನಾಟಕದ ಹಿಜಾಬ್ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರಸಂಹಿತೆ ಕುರಿತು ಸುತ್ತೋಲೆ ಹೊರಡಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಸ್. ಪದ್ಮಿನಿ ಇಂದು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದ ಕಾರಣಕ್ಕೆ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ಪ್ರಾಂಶುಪಾಲರು ಕಾಲೇಜು ಗೇಟಿನ ಒಳಗಡೆ ಬಿಡದೆ ತಡೆದಿದ್ದು ಅಮಾನವೀಯ ನಡೆಯಾಗಿದೆ. ಪ್ರಾಂಶುಪಾಲರು ತಮ್ಮ ಹುದ್ದೆಯ ಘನತೆಯನ್ನು ಗಾಳಿಗೆ ತೂರಿ ಸರ್ಕಾರದ ಕೈಗೊಂಬೆಯಂತೆ ವರ್ತಿಸಿ ಆ ಹುದ್ದೆಗೂ ಅಗೌರವ ತೋರಿದ್ದಾರೆ. ಪ್ರಾಂಶುಪಾಲರ ಈ ನಡೆಯನ್ನು ಖಂಡಿಸುವುದಾಗಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ತಬ್ರೇಜ್ ನಾಗೂರು ಹೇಳಿದ್ದಾರೆ. ಪ್ರಾಂಶುಪಾಲರು ವಿದ್ಯಾರ್ಥಿನಿಯರನ್ನು ತಡೆದ ಸಂದರ್ಭದಲ್ಲಿ ಪದೇ ಪದೇ ಶಾಸಕರಿಂದ ಅನುಮತಿ ಇಲ್ಲ ಎಂದು ಹೇಳುತ್ತಿದ್ದುದು ಏನನ್ನು ಸೂಚಿಸುತ್ತದೆ? ಪ್ರಾಂಶುಪಾಲರು ಬಿಜೆಪಿಯ ಏಜೆಂಟ್ ಹಾಗೆ ಏಕೆ ವರ್ತಿಸುತ್ತಿದ್ದಾರೆ? ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಾದುದು ಪ್ರಾಂಶುಪಾಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿ. ಆದರೆ ಕುಂದಾಪುರದ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಖುದ್ದು ಮುಸ್ಲಿಂ ವಿದ್ಯಾರ್ಥಿನಿಯರು ವಿದ್ಯೆಯಿಂದ ವಂಚಿತರಾಗುವ ಹಾಗೆ, ಮುಸ್ಲಿಂ ವಿದ್ಯಾರ್ಥಿನಿಯರು ಗೇಟಿನ ಒಳಗಡೆ ಬಾರದಂತೆ ಕಾವಲು ಕಾಯುತ್ತಿದ್ದಾರೆ. “ನೀವು ಹಾಕುವ ತಲೆವಸ್ತ್ರದ ಕಾರಣ ನಮ್ಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿಜಾಬ್ ಹಾಗೂ ಕೇಸರಿ ಶಾಲು ಸಂಘರ್ಷ ಕುಂದಾಪುರದಲ್ಲಿ 4ನೇ ದಿನಕ್ಕೆ ಕಾಲಿರಿಸಿದ್ದು, ಶನಿವಾರ ಖಾಸಗಿ ಕಾಲೇಜುಗಳಲ್ಲಿ ಕೆಲ ಕಾಲ ಬಿಗುವಿನ ವಾತವರಣ ನಿರ್ಮಾಣವಾಗಿದ್ದು, ಮುಖ್ಯರಸ್ತೆಯಲ್ಲಿ ಕೇಸರಿ ಶಾಲು ಧರಿಸಿ ಮೆರವಣಿಗೆ ಸಾಗಿದ ಘಟನೆ ನಡೆದಿದೆ. ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿ ಪ್ರವೇಶಕ್ಕೆ ಅವಕಾಶ ನೀಡಿದ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಕಾಲೇಜಿಗೆ ರಜೆ ಘೋಷಿಸಲಾಯಿತು. ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕುಂದಾಪುರ ಶಾಸ್ತ್ರೀವೃತ್ತದ ತನಕ ಘೋಷಣೆ ಕೂಗುತ್ತಾ ತೆರಳಿದರು. ಭಂಡಾರ್ಕಾರ್ಸ್ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕುಂದೇಶ್ವರ ದೇವಸ್ಥಾನದಿಂದ ಜೈ ಶ್ರೀರಾಮ್, ಜೈ ಶಿವಾಜಿ ಎಂದು ಘೋಷಣೆ ಕೂಗುತ್ತಾ ಕಾಲೇಜಿನತ್ತ ಹೆಜ್ಜೆ ಹಾಕಿದರು. ಯಾವುದೇ ವಿದ್ಯಾರ್ಥಿಕೇಸರಿ ಶಾಲು, ಹಿಜಾಬ್ ಧರಿಸಿ ಕಾಲೇಜು ಆವರಣ ಪ್ರವೇಶ ಮಾಡಬಾರದೆಂದು ಕಾಲೇಜು ಆಡಳಿತದ ಸೂಚನೆ ಹಿನ್ನೆಲೆಯಲ್ಲಿ ಪ್ರತಿಯೊಂದು ವಿದ್ಯಾರ್ಥಿಯನ್ನು ಕಾಲೇಜು ಸಿಬ್ಬಂದಿಗಳು ಗೇಟ್ ಹತ್ತಿರ ತಪಾಸಣೆ ಮಾಡಿಯೇ ಕಾಲೇಜು ಒಳಬಿಟ್ಟರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಂತಿಯುತವಾಗಿದ್ದ ಕುಂದಾಪುರದಲ್ಲಿ ವಿದ್ಯಾರ್ಥಿಗಳನ್ನು ಬಳಸಿಕೊಂಡು, ಶೈಕ್ಷಣಿಕ ವಾತಾವರಣ ಹದೆಗೆಡಿಸುತ್ತಾ ಅಶಾಂತಿ ಸೃಷ್ಠಿಸಲು ಸಂಘಪರಿವಾರ ಯತ್ನಿಸುತ್ತಿದೆ ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಸಮಿತಿಯ ತೀವ್ರವಾಗಿ ಖಂಡಿಸುತ್ತಿದೆ. ಮೊದಲಿನಿಂದಲೇ ಮುಸಲ್ಮಾನ ಸಮುದಾಯದ ವಿದ್ಯಾರ್ಥಿನಿಯರು ತಮ್ಮ ಶಿರವಸ್ತ್ರವನ್ನು (ಹಿಜಾಬ್) ಧರಿಸಿಯೇ ಕಾಲೇಜುಗಳಿಗೆ ಪ್ರವೇಶಿಸುತ್ತಿದ್ದರು, ಯಾರಿಗೂ ಸಮಾನತೆಗೆ ಧಕ್ಕೆ ಉಂಟಾಗಿಲ್ಲ, ಎಲ್ಲಾ ಧರ್ಮದ ವಿದ್ಯಾರ್ಥಿನಿಯರು ಪರಸ್ಪರ ಸಹೋದರತೆಯಿಂದ ವಿದ್ಯಾಭ್ಯಾಸ ಪಡೆಯುತ್ತಿದ್ದರು. ಈ ಸೌಹಾರ್ದತೆಗೆ ಧಕ್ಕೆ ಮಾಡುವ ಉದ್ದೇಶದಿಂದಲೇ ವಿದ್ಯಾರ್ಥಿಗಳ ಮಧ್ಯೆ ಕೋಮುದ್ವೇಷದ ಭಾವನೆ ಮೂಡಿಸುತ್ತಾ ಏಕಾಏಕಿ ಕಾಲೇಜುಗಳಲ್ಲಿ ಧಾರ್ಮಿಕ ಹಕ್ಕಾದ ಶಿರವಸ್ತ್ರವನ್ನು ನಿಷೇಧ ಮಾಡುವುದರೊಂದಿಗೆ ಕೇಸರಿ ಶಾಲು ಧರಿಸಿ ಘೋಷಣೆಗಳನ್ನು ಕೂಗುತ್ತಾ ಶಿಕ್ಷಣ ಕ್ಷೇತ್ರದಲ್ಲಿ ಅಶಾಂತಿಯನ್ನು ಸಂಘಪರಿವಾರ ನಡೆಸಲು ಯತ್ನಿಸುತ್ತಿದೆ. ಎಂದಿನಂತೆ ಕಾಲೇಜಿಗೆ ಶಿರವಸ್ತ್ರ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟಿನ ಬಳಿಯೇ ತಡೆದು ಸಂಘಪರಿವಾರದ ಕೈಗೊಂಬೆಯಂತೆ ಕುಂದಾಪುರದ ಸರಕಾರಿ ಕಾಲೇಜಿನ ಪ್ರಾಂಶುಪಾಲರು ವರ್ತಿಸುತ್ತಿರುವುದು ಖಂಡನೀಯ, ಶಿಕ್ಷಣ ಇಲಾಖೆಯು ಈ ಪ್ರಾಂಶುಪಾಲರ ಮೇಲೆ ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿನಿಯರನ್ನು ಅವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರಕಾರಿ ಕಾಲೇಜಿನಲ್ಲಿಯೂ ಹಿಜಬ್ ಹಾಗೂ ಕೇಸರಿ ಶಾಲು ವಿವಾದ ನಡೆದಿದೆ. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮುನ್ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾಗಿದರೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರೂ ತರಗತಿಗೆ ಪ್ರವೇಶ ಪಡೆದಿದ್ದಾರೆ. ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಬ್ ಧರಿಸಿ ಕಾಲೇಜು ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕಾಲೇಜಿನ ಸುಮಾರು 300ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಈ ವೇಳೆಯಲ್ಲಿ ಕಾಲೇಜಿನ ಉಪನ್ಯಾಸಕರು ಸಮವಸ್ತ್ರ ಧರಿಸಿದರೆ ಮಾತ್ರವೇ ತರಗತಿಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ. ಈ ವೇಳೆಯಲ್ಲಿ ಉಪನ್ಯಾಸಕರು ಹಾಗೂ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಅಂತಿಮವಾಗಿ ಹಿಜಾಬ್ ಹಾಗೂ ಕೆಸರಿ ಶಾಲು ಧರಿಸಿದವರನ್ನು ತರಗತಿಗೆ ಪ್ರವೇಶ ನೀಡಲಾಗಿದೆ. ಇದನ್ನೂ ಓದಿ ► ಕುಂದಾಪುರ: ಮೂರನೇ ದಿನಕ್ಕೆ ಹಿಜಾಬ್ ವಿವಾದ, ಪೋಷಕರು – ಸಂಘಟಕರ ವಾಗ್ವಾದ – https://kundapraa.com/?p=57132 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.4: ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಇಂದೂ ಕೂಡಾ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದು, ಕಾಲೇಜು ಆವರಣದೊಳಗೆ ಪ್ರವೇಶ ನಿರಾಕರಣೆ ಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಒಂದಷ್ಟು ದ್ಯಾರ್ಥಿಗಳು ಕೆಸರಿ ಶಾಲು ಧರಿಸಿದ ಘಟನೆ ನಡೆದಿದೆ. ಗೇಟ್ ಒಳಕ್ಕೆ ಪ್ರವೇಶಿಸಿದ ವಿದ್ಯಾರ್ಥಿನಿಯರು:ಕಾಲೇಜು ಆವರಣದೊಳಕ್ಕೆ ಪ್ರವೇಶಿಸುವಂತಿಲ್ಲ ಎಂದು ಪ್ರಾಂಶುಪಾಲರು ಸೂಚಿಸಿದ ಹೊರತಾಗಿಯೂ ವಿದ್ಯಾರ್ಥಿಗಳು ಗೇಟ್ ತಳ್ಳಿ ಒಳಕ್ಕೆ ಪ್ರವೇಶಿಸಿ ಕಾಲೇಜು ಆವರಣದಲ್ಲಿ ಇರಲು ಅವಕಾಶ ನೀಡುವಂತೆ ಆಗ್ರಹಿಸಿದರು. ಪೋಷಕರಿಂದ ಆಕ್ಷೇಪ:ವಿದ್ಯಾರ್ಥಿನಿಯರನ್ನು ತರಗತಿಗೆ ಸ್ಕಾರ್ಫ್ ಧರಿಸಿ ತೆರಳು ಅನುಮತಿ ನೀಡದ ಕಾಲೇಜು ಆಡಳಿತದ ವಿರುದ್ಧ ಪೊಷಕರು ಆಕ್ಷೇಪಿಸಿ, ಗೇಟ್ ಹೊರಭಾಗದಲ್ಲಿ ನಿಂತು ಪ್ರತಿಭಟಿಸಿದರು. ಇಲ್ಲಿ ಪ್ರತಿಭಟನೆ ಮಾಡುವಂತಿಲ್ಲ ಎಂದು ಕುಂದಾಪುರ ಡಿವೈಎಸ್‌ಪಿ ಹೇಳಿದಾಗ ಮಾತಿನ ಚಕಮಕಿ ನಡೆಯಿತು. ಕೇಸರಿ ಶಾಲು ಧರಿಸಿ ಘೋಷಣೆ:ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸಿ ಕಾಲೇಜು ಆವರಣ ಪ್ರವೇಶಿಸುತ್ತಿದ್ದಂತೆ ಒಂದಷ್ಟು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತಗರತಿಗಳಲ್ಲಿ ಓಡಾಡಲು ಆರಂಭಿಸಿದರು. ಅವರನ್ನೂ ಹೊರಕ್ಕೆ ಕಳುಹಿಸುವಂತೆ ಪೋಷಕರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.4: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನೆರವಿನೊಂದಿಗೆ ಕೆ-ಸ್ಟೆಪ್ಸ್, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ 9 ರಿಂದ 12 ನೇ ವರ್ಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಫೆಬ್ರವರಿ 9 ರಂದು ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಸ್ಫರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆಯುವ ವಿದ್ಯಾರ್ಥಿಗೆ 5,000 ರೂ. ಹಾಗೂ ದ್ವಿತೀಯ ಬಹುಮಾನ ಪಡೆಯುವ ವಿದ್ಯಾರ್ಥಿಗೆ 3,000 ರೂ. ನಗದು ಹಾಗೂ ಅಭಿನಂದನಾ ಪತ್ರ ನೀಡಲಾಗುವುದು. ಜಿಲ್ಲಾ ಹಂತದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಇಬ್ಬರು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು. ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾಗುವ 4 ಯುವ ವಿಜ್ಞಾನಿಗಳಿಗೆ ತಲಾ 10,000 ರೂ. ನಗದು ಬಹುಮಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.4: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿದೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನ ನಡೆಯಲಿದೆ. ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು- 3 ಹುದ್ದೆ, ಪಂಚಕರ್ಮ ತಜ್ಞ ವೈದ್ಯರು, ಆರ್.ಎಮ್.ಎನ್.ಸಿ.ಹೆಚ್ ಸಮಾಲೋಚಕರು, ನೇತ್ರ ಸಹಾಯಕರು, ಡೆಂಟಲ್ ಹೈಜಿನಿಸ್ಟ್, ಡೆಂಟಲ್ ಟೆಕ್ನೀಷಿಯನ್ ಮತ್ತು ಇನ್ಸ್ಟ್ರಕ್ಟರ್- ಯಂಗ್ ಹಿಯರಿಂಗ್ ಇಂಪಾರ್ಡ್ ಚಿಲ್ಡçನ್ ರ ತಲಾ 1 ಹುದ್ದೆ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ 2 ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಫೆಬ್ರವರಿ 5 ರಂದು ಬೆಳಗ್ಗೆ 10.30 ರಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಳೆದ ಕೆಲವು ವರ್ಷಗಳ ಹಿಂದೆ ಸರಕಾರಿ ಸೌಲಭ್ಯ, ಪ್ರಯೋಜನಗಳನ್ನು ಪಡೆದುಕೊಳ್ಳಲು ಜನಸಾಮಾನ್ಯರು ಕಛೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇದ್ದು, ಇಂದು ಸರಕಾರ ಸೇವಾ ಕೇಂದ್ರಗಳನ್ನು ಸ್ಥಾಪಿಸಿ ಜನಸಾಮಾನ್ಯರಿಗೆ ಸರಕಾರಿ ಸೇವೆ ಒದಗಿಸುವ ಪ್ರಯತ್ನ ಮಾಡುತ್ತಿದೆ. ಜನರು ಸರಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದುಕೊಂಡು ಡಿಜಿಟಲ್ ಸೇವಾ ಕೇಂದ್ರಗಳ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳಲು ಮುಂದಾಗಬೇಕು. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿತ್ವದ ಫಲವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಡಿಜಿಟಲ್ ಸೇವಾ ಕೇಂದ್ರಗಳು ಕಾರ್ಯಾಚರಿಸುತ್ತಿದೆ ಎಂದು ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ ಹೇಳಿದರು. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆ ಸಮೀಪದ ಕಟ್ಟಡದಲ್ಲಿ ಗುರುವಾರ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಅತಿಥಿಯಾಗಿ ಮಾತನಾಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಡಿಜಿಟಲ್ ಸೇವಾ ಕೇಂದ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬಂದರು ಒಕ್ಕೂಟದ ಅಧ್ಯಕ್ಷೆ…
