ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಾ.15ರ ಮಂಗಳವಾರ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ.ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಹಿಜಾಬ್ ವಿವಾದ ಆರಂಭಗೊಂಡ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ತೀರ್ಪು ಹೊರ ಬೀಳುವ ದಿನದಂದು ರಜೆ ಘೋಷಣೆ ಮಾಡಲಾಗಿದೆ. ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಹಾಗೂ ಯಾವುದೇ ಪ್ರಮುಖವಾದ ಪರೀಕ್ಷೆಗಳಿದ್ದಲ್ಲಿ ಅದನ್ನು ನಡೆಸಲು ವಿನಾಯಿತಿ ನೀಡಲಾಗಿದೆ. ಸಭೆ ಸಮಾರಂಭಕ್ಕಿಲ್ಲ ಅವಕಾಶ:ಅಲ್ಲದೇ ಯಾವುದೇ ಸಂಭ್ರಮಾಚರಣೆ, ಸಾರ್ವಜನಿಕ ಸಭೆ, ಪ್ರತಿಭಟನೆ, ಮೆರವಣಿಗೆ, ವಿಜಯೋತ್ಸವವನ್ನು ನಿಷೇಧಿಸಿ ಐಪಿಸಿ ಸೆಕ್ಷನ್ 144 ರಂತೆ ನಿಷೇಧಾಜ್ಞೆಯನ್ನು ಮುಂದಿನ ಆದೇಶದ ತನಕ ಹೊರಡಿಸಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಿದ್ಧ ಸಮಾಧಿ ಯೋಗ ಮತ್ತು ಸಾರ್ವಜನಿಕ ಭಕ್ತಾದಿಗಳಿಂದ ಹಮ್ಮಿಕೊಂಡಿದ್ದ 2ನೇ ವರ್ಷದ ಪಾದಯಾತ್ರೆಯು ಮಾ.13ರಂದು ಯೋಗ ಶಿಕ್ಷಕರಾದ ಆಚಾರ್ಯ ಕೇಶವ ಗುರೂಜಿಯವರ ಸಾರಥ್ಯದಲ್ಲಿ ನಡೆಯಿತು. ಬೆಳಿಗ್ಗೆ 4ಗಂಟೆಗೆ ಉಪ್ಪುಂದ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಪ್ರಾರಂಭವಾದ ಪಾದಯಾತ್ರೆ ಬೆಳಿಗ್ಗೆ 7ಗಂಟೆಗೆ ಬಿಳಿಶಿಲೆ ವಿನಾಯಕ ದೇವಸ್ಥಾನ ತಲುಪಿತು. ಅಲ್ಲಿ ಪೂಜೆ ಅರ್ಚನೆ ಮಂಗಳಾರತಿ ಮುಗಿಸಿ ಭಜನೆ ನರ್ತನದೊಂದಿಗೆ ಯಾತ್ರೆ 9ಗಂಟೆಗೆ 9ಗಂಟೆಗೆ ಹಾಲ್ಕಲ್ ತಲುಪಿತು. ಅಲ್ಲಿ ಬೆಳಿಗಿನ ಫಲಾಹಾರ ಮುಗಿಸಿದ ಯಾತ್ರೆ ಮದ್ಯಾಹ್ನ 12ಗಂಟೆಗೆ ಕೊಲ್ಲೂರು ತಲುಪಿ ಸೌಪಾರ್ಣಿಕ ನದಿಯಲ್ಲಿ ಸ್ನಾನ ಮಾಡಿ ಮುಕಾಂಬಿಕೆಯ ದರ್ಶನ ಪಡೆದು ಪುನೀತಾರಾದರು. ನಂತರ ಯೋಗ ಸಾಧಕರಿಂದ ದೇವರ ನಾಮಸಂಕೀರ್ತನೆ ನರ್ತನ ನಡೆಯಿತು. ಬೆಂಗಳೂರಿನಿಂದ ಬಂದಿದ್ದ ಯೋಗ ಶಿಕ್ಷಕ ಪರಶಿವದಾಸ ಅವರ ಭಜನೆ ಮತ್ತು ನಾಮಸಂಕೀರ್ತನೆ ಪಾದಯಾತ್ರಿಕರಿಗೆ ವಿಶೇಷವಾದ ಶಕ್ತಿ ಮತ್ತು ಸ್ಫೂರ್ತಿ ನೀಡಿತು. ದೇವಸ್ಥಾನದ ಆಡಳಿತ ಮಂಡಳಿ ಕೇಶವ ಗುರೂಜಿ ಮತ್ತು ಪರಶಿವದಾಸ್ ಗುರೂಜಿಯವರನ್ನು ಶಾಲು ಹೊದಿಸಿ ಫಲ ಪ್ರಸಾದ ನೀಡಿ ಗೌರವಿಸಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಗಾಂಧಿ ಮೈದಾನದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿಯೇ ಪುರಭವನ ನಿರ್ಮಾಣಗೊಳ್ಳುತ್ತಿದೆ. ಇದರೊಂದಿಗೆ ಕ್ರೀಡಾಂಗಣ ಅಭಿವೃದ್ಧಿಗೆ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಅನುಮೋದನೆ ದೊರೆಯಲಿದೆ. ಈ ಯೋಜನೆಗಳ ಅನುಷ್ಠಾನದಿಂದಾಗಿ ತಾಲೂಕು ಕೇಂದ್ರಕ್ಕೆ ಜೀವಕಳೆ ಬಂದಂತಾಗಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು. ಸೋಮವಾರ ಅವರು ಬೈಂದೂರು ಗಾಂಧಿ ಮೈದಾನದಲ್ಲಿ ನಿರ್ಮಾಣಗೊಳ್ಳಲಿರುವ ಮೊಗೇರಿ ಗೋಪಾಲಕೃಷ್ಣ ಅಡಿಗ ಪುರಭವನ ಹಾಗೂ ಪ್ರಸ್ತಾವನೆಯಲ್ಲಿರುವ ಸುಸಜ್ಜಿತ ಸ್ಟೇಡಿಯಂ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬೈಂದೂರು ಗಾಂಧಿ ಮೈದಾನದಲ್ಲಿ ಒಟ್ಟು 4.95 ಎಕರೆ ಜಾಗವಿದ್ದು, ಅದರಲ್ಲಿ 1.5 ಎಕರೆ ಜಾಗವನ್ನು ಪುರಭವನ್ನು ಮೀಸಲಿರಿಸಲಾಗಿದೆ. ಪುರಭವನದಲ್ಲಿ 800 ಮಂದಿ ಕುಳಿತುಕೊಳ್ಳಬಹುದಾದ ಹಾಲ್, ಸುಸಜ್ಜಿತ ಸ್ಟೇಜ್, 400 ಮಂದಿ ಕುಳಿತು ಊಟ ಮಾಡಬಹುದಾದ ಹಾಲ್, ಅಡುಗೆ ಕೋಣೆ, ಪಾರ್ಕಿಂಗ್ ವ್ಯವಸ್ಥೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ. ಪುರಭವನ ನಿರ್ಮಾಣದ ಬಗ್ಗೆ ಮೊದಲೇ ಪತ್ರಿಕಾ ಹೇಳಿಕೆಯಲ್ಲಿ ಸಂಸದರು ತಿಳಿಸಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟಿಪ್ಪರ್ ವಾಹನವೊಂದು ಅದೇ ದಿಕ್ಕಿನಲ್ಲಿ ತೆರಳುತ್ತಿದ್ದ ಹೊಂಡಾ ಆಕ್ವಿವ್ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ, ಹೊಂಡಾ ಆಕ್ವಿವ್’ನಲ್ಲಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ಹೆಮ್ಮಾಡಿ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅರೆಹೊಳೆ ರಾಗಿಹಕ್ಲು ನಿವಾಸಿ ಜ್ಯೋತಿ (35) ಮೃತ ದುರ್ದೈವಿ. ಅಪಘಾತದಲ್ಲಿ ಸ್ಕೂಟಿ ಚಲಾಯಿಸುತ್ತಿದ್ದ ಅವರ ಪತಿ ಶರತ್ ಕುಮಾರ್ ಶೆಟ್ಟಿ (45) ಹಾಗೂ ಅವರ ಮಗಳು ಸನ್ನಿಧಿ (7) ಗಾಯಗೊಂಡಿದ್ದಾರೆ. ಕುಂದಾಪುರ ಕಡೆಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ವೇಗದಲ್ಲಿ ಬಂದು ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಹೊಂಡಾ ಆಕ್ವಿವ್ ವಾಹನಕ್ಕೆ ಢಿಕ್ಕಿಯಾಗಿದೆ. ಈ ವೇಳೆ ಹಿಂದೆ ಕುಳಿತಿದ್ದ ಜ್ಯೋತಿ ಎಂಬುವವರು ಕೆಳಕ್ಕೆ ಬಿದ್ದ ಸಂದರ್ಭ, ಟಿಪ್ಪರ್ ಅವರ ಹೊಟ್ಟೆಯ ಮೇಲೆಯೇ ಚಲಿಸಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಹಿಳೆ ಕೆಳಕ್ಕೆ ಬೀಳುತ್ತಿರುವ ಸಂದರ್ಭ ಮಗಳನ್ನು ರಕ್ಷಿಸುವ ಸಲುವಾಗಿ ಇನ್ನೊಂದು ಬದಿಗೆ ಹಾಕಿದ್ದರಿಂದ ಅವರ ಮಗಳ ಕೈಗೆ ತರಚಿದ ಗಾಯ ಹಾಗೂ ಪತಿ ಸಣ್ಣಪುಟ್ಟ ಗಾಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು…
ಉಚಿತ ಶಿಕ್ಷಣ ಸೌಲಭ್ಯದ ಪ್ರವೇಶ ಪರೀಕ್ಷೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2022-23ನೇ ಸಾಲಿನ 6ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆಯು ಪುತ್ತಿಗೆ ವಿವೇಕಾನಂದ ನಗರದಲ್ಲಿ ಭಾನುವಾರ ನಡೆಯಿತು. ರಾಜ್ಯಾದ್ಯಂತ 26 ಜಿಲ್ಲೆಗಳ 11,362 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 10,764 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 6ನೇ ತರಗತಿಗೆ 5,628, 7ನೇ ತರಗತಿಗೆ 1936, 8ನೇ ತರಗತಿಗೆ 2,157 ವಿದ್ಯಾರ್ಥಿಗಳು ಹಾಗೂ 9ನೇ ತರಗತಿಗೆ 1,043 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು. ಬೆಳಗಾವಿ ಜಿಲ್ಲೆಯಿಂದ ಅತೀ ಹೆಚ್ಚು 3,513 ವಿದ್ಯಾರ್ಥಿಗಳು, ಬಾಗಲಕೋಟೆ ಹಾಗೂ ವಿಜಯಪುರದಿಂದ ಕ್ರಮವಾಗಿ 1,519 ಹಾಗೂ 1,088 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಪ್ರವೇಶ ಪರೀಕ್ಷೆಯು ವಿದ್ಯಾರ್ಥಿಗಳು ಪ್ರಸ್ತುತ ಓದುತ್ತಿರುವ ಪಠ್ಯವಿಷಯಗಳಿಗೆ ಸಂಬಂಧಿಸಿದ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ನೂಜಾಡಿ -2 ಬಗ್ವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ನಿರ್ಮಿಸಲಾದ ವಿನೂತನ ಮಾದರಿ ಸ್ಮಾರ್ಟ್ ತರಗತಿ ಶನಿವಾರ ಉದ್ಘಾಟನೆಗೊಂಡಿತು. ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಕಟ್ಟಕಡೆಯ ಮಗು ಶಿಕ್ಷಣ ಪಡೆದರೆ ದೇಶ ಬದಲಾಗಲು ಸಾಧ್ಯ. ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರುತ್ತಾರೆ. ಶಿಕ್ಷಣದಿಂದ ಯಾವ ಮಗುವೂ ವಂಚಿತವಾಗಬಾರದು. ಗ್ರಾಮೀಣ ಶಾಲೆಗಳ ಮೂಲಸೌಕರ್ಯ ಒದಗಿಸುವ ಕಾರ್ಯ ಆಗುತ್ತಿದ್ದು, ಕೆಸ್ಸಾರ್ಟಿಸಿ ಬಸ್ನಲ್ಲಿ ಸ್ಮಾರ್ಟ್ ಕ್ಲಾಸ್ ರಾಜ್ಯಕ್ಕೆ ಮಾದರಿ ಎಂದರು. ಗ್ರಾಮೀಣ ಭಾಗದ ಸಂಚಾರ ಪರವಾನಿಗೆ ಇದ್ದರೂ ಬಸ್ ಓಡಿಸದೆ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಮಸ್ಯೆ ಆಗುತ್ತಿದೆ. ಪರವಾನಿಗೆ ಇರುವ ಗ್ರಾಮ ಪ್ರದೇಶಗಳಿಗೆ ಕೆಎಸ್ಸಾರ್ಟಿಸಿ ಬಸ್ ಬಿಡದಿದ್ದರೆ 25 ಸಾವಿರ ವಿದ್ಯಾರ್ಥಿಗಳ ಸಹಿತ ಕುಂದಾಪುರ ಕೆಎಸ್ಸಾರ್ಟಿಸಿ ಡಿಪೋ ಎದುರು ಪ್ರತಿಭಟನೆ ನಡೆಸಲಾಗುತ್ತದೆ ಎಚ್ಚರಿಕೆ ನೀಡಿದ್ದಾರೆ. ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಕಮಲ ಕುಮಾರ್ ಮಾತನಾಡಿ ನಿರುಪಯುಕ್ತ ಕೆಎಸ್‌ಆರ್‌ಟಿಸಿ ಬಸ್ ಸಂಪೂರ್ಣ ಬದಲಾಗಿ ಸ್ಮಾರ್ಟ್ ಕ್ಲಾಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿಗಳ ಕುಂದಾಪುರ ಪುರಸಭೆ ಹಾಗೂ ಕಂದಾವರದಲ್ಲಿರುವ ಪುರಸಭೆಯ ಡಂಪಿಂಗ್ ಯಾರ್ಡ್‌ಗೆ ಶುಕ್ರವಾರ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪುರಸಭೆಯ ವಿಲೇವಾರಿ ಘಟಕದಲ್ಲಿ ತ್ಯಾಜ್ಯ ವಿಂಗಡನೆ, ಗೊಬ್ಬರ ಸಿದ್ದಪಡಿಸುವ ಯಂತ್ರಗಳ ಕೆಲಸ, ತ್ಯಾಜ್ಯ ನೀರು ಸಂಸ್ಕರಣ ಘಟಕದ ಒಂದು ತೊಟ್ಟು ನೀರು ಹೊರಗೆ ಬಿಡದೆ, ಶುದ್ದೀಕರಿಸಿ ಗಿಡಗಳಿಗೆ ಉಣಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು. ಬಳಿಕ ವಿದ್ಯಾರ್ಥಿಗಳು ಪುರಸಭೆ ಕಚೇರಿಗೆ ಭೇಟಿ ನೀಡಿದರು. ವಿದ್ಯಾರ್ಥಿಗಳಿಗೆ ತ್ಯಾಜ್ಯ ನಿರ್ವಹಣೆ ಬಗ್ಗೆ ಕ್ವಿಜ್ ನಡೆಸಲಾಗಿದ್ದು, ತ್ಯಾಜ್ಯ ಸಮಪರ್ಕಕ ನಿರ್ವಹಣೆ ಬಗ್ಗೆ ವಿದ್ಯಾರ್ಥಿಗಳ ಜೊತೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು. ಕುಂದಾಪುರ ಪುರಸಭೆಯಲ್ಲಿ ಇಷ್ಟು ತ್ಯಾಜ್ಯ ಸಂಗ್ರಹವಾಗುತ್ತದೆ ಎನ್ನೋದು ನಮಗೆ ಗೊತ್ತೇಯಿರಲಿಲ್ಲ. ತ್ಯಾಜ್ಯ ನಿರ್ವಹಣೆ, ಗೊಬ್ಬರ ತಯಾರಿಕೆ ನಿಜಕ್ಕೂ ಅಚ್ಚರಿ. ನಾವು ಇನ್ನುಮುಂದೆ ತ್ಯಾಜ್ಯ ಕುರಿತು ಮನೆಯಲ್ಲಿ ಜಾಗೃತಿ ಮೂಡಿಸಿ, ಆದಷ್ಟು ತ್ಯಾಜ್ಯ ಕಡಿಮೆ ಆಗುವಂತೆ ಪ್ರಯತ್ನಿಸುತ್ತೇವೆ ಎಂದು ವಿದ್ಯಾರ್ಥಿಗಳು ಪ್ರತಿಕ್ರಿಯಿಸಿದಾರೆ. ಪ್ರತಿದಿನ ಪುರಸಭೆಯಲ್ಲಿ 14…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆ ತಾಲೂಕಿನ ಹಳಗೇರಿಯ ಜಾಗವನ್ನು ಕೈಗಾರಿಕಾ ವಲಯವಾಗಿ ಅಭಿವೃದ್ಧಿಪಡಿಸಿ ಸೀಪುಡ್ ಪಾರ್ಕ್ ಮಾಡುವುದನ್ನು ವಿರೋಧಿಸಿ ನಾಗೂರಿನಲ್ಲಿ ಗುರುವಾರ ಹಮ್ಮಿಕೊಂಡ ‘ಪರಿಸರ ರಕ್ಷಿಸಿ ಜೀವನ ಉಳಿಸಿ’ ಅಭಿಯಾನ ಉದ್ಘಾಟನೆಗೊಂಡಿತು. ಮುಂಬೈನ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕ ತೋನ್ಸೆ ಜಯಕರ್ ಶೆಟ್ಟಿ ಅಭಿಯಾನ ಉದ್ಘಾಟಿಸಿ ಮಾತನಾಡಿ ಉಡುಪಿ ಜಿಲ್ಲೆಗೆ ಹೆಚ್ಚು ಕೈಗಾರಿಕೆಗಳನ್ನು ತರುವ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ ಪರಿಸರ, ಜನಜೀವನ ನಾಶ ಮಾಡಿ ಕೈಗಾರಿಕೆ ಸ್ಥಾಪಿಸುವುದು ಖಂಡನಾರ್ಹ. ಕೈಗಾರಿಕಾ ವಲಯದ ಜಾಗವನ್ನು ವೈಜ್ಞಾನಿಕವಾಗಿ ಆಯ್ದುಕೊಳ್ಳುವುದು ಬಹುಮುಖ್ಯ ಎಂದರು. ಹಳಗೇರಿಯಲ್ಲಿ ಕೈಗಾರಿಕಾ ವಲಯದ ನಿರ್ಧಾರದಿಂದ ಪರಿಸರ ಹಾಗೂ ಸುಮಾರು ಎಂಟು ಗ್ರಾಮಗಳ ಜನರಿಗೆ ತೊಂದರೆಯಾಗಲಿದೆ ಸಮಿತಿಯವರು ಮನಗಂಡಿದ್ದು, ಇದರಿಂದಾಗುವ ತೊಂದರೆಗಳ ಬಗ್ಗೆ ಸರ್ಕಾರಕ್ಕೆ ತಿಳಿಸಲಾಗುವುದು. ನೊಂದ ಜನರಿಗೆ ನ್ಯಾಯ ಒದಗಿಸಬೇಕೇಂಬ ನೆಲೆಯಲ್ಲಿ ಸಮಾನ ಮನಸ್ಕರು ಒಂದಾಗಿ ಸ್ಥಾಪಿಸಿದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಪ್ರಗತಿಪರ ಚಿಂತಕರ ಚಾವಡಿಯಾಗಿದೆ. ನಮ್ಮ ಹೋರಾಟ ಸ್ವ-ಹಿತಾಸಕ್ತಿಗಾಗಿ ಅಥವಾ ವೈಯಕ್ತಿಕವಾಗಿರದೇ ಸಾಮಾಜಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಮಾ.10: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ಕಾರು ಚಾಲಕನೋರ್ವ ಹಲ್ಲೆಗೈದ ಘಟನೆ ತಾಲೂಕಿನ ಅಸೋಡು ಎಂಬಲ್ಲಿ ನಡೆದಿದೆ. ಮಾ.4ರಂದು ಈ ಘಟನೆ ನಡೆದಿದ್ದು, ಇಂದು ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೋಟೇಶ್ವರ ಹಾಲಾಡಿ ರಸ್ತೆಯಲ್ಲಿ ನ್ಯಾಯ ಬೆಲೆ ಅಂಗಡಿಗಳಿಗೆ ಅನ್ನಭಾಗ್ಯದ ಅಕ್ಕಿ ಸಾಗಾಟ ಮಾಡುವ ಲಾರಿ ಚಾಲಕ ಮಹಮ್ಮದ್ ಇಸಾಕ್ ಎಂಬುವವರಿಗೆ, ಅಸೋಡು ನಂದಿಕೇಶ್ವರ ದೈವಸ್ಥಾನದ ಕಮಾನು ಬಳಿ ರಿಟ್ಸ್ ಕಾರಿನ ಚಾಲಕ ತನ್ನ ಕಾರನ್ನು ಅಡ್ಡ ತಂದು ನಿಲ್ಲಿಸಿ ಏಕಾಏಕಿ ಹಲ್ಲೆಗೈದಿದ್ದಾನೆ. ಸಾರ್ವಜನಿಕರು ತಡೆಯುತ್ತಿದ್ದರೂ ಕಾರು ಚಾಲಕ ಲಾರಿ ಚಾಲಕನಿಗೆ ಹಲ್ಲೆಗೈದಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ, ಜೈ ಕುಂದಾಪುರ ಸೇವಾ ಟ್ರಸ್ಟ್-ಕುಂದಾಪುರ ಇವರ ಆಶ್ರಯದಲ್ಲಿ ರಕ್ತದಾನ ಶಿಬಿರ ಜರಗಿತು. ಇಂಡಿಯನ್ ರೆಡ್‌ಕ್ರಾಸ್ ಘಟಕದ ಚೇರ್‌ಮನ್ ಜಯಕರ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು, ಕಾರ್ಯದರ್ಶಿಗಳಾದ ಸೀತಾರಾಮ್ ಶೆಟ್ಟಿ, ಜನೌಷಧಿ ಉಸ್ತುವಾರಿ ಗಣೇಶ್ ಆಚಾರ್, ಸದಸ್ಯರಾದ ಮುತ್ತಯ್ಯ ಶೆಟ್ಟಿ, ಡಾ. ಸೋನಿ, ಲಯನ್ಸ್ ಕ್ಲಬ್ ಕುಂದಾಪುರದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ಸದಸ್ಯರಾದ ನವೀನ್ ಶೆಟ್ಟಿ, ಜೈ ಕುಂದಾಪುರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಪುಂಡಲೀಕ ಮೊಗವೀರ ಮತ್ತು ತಂಡದವರು, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ, ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಸಹ ಸಂಯೋಜಕಿ ಮಾಲತಿ ಕುಂದರ್, ಎನ್.ಸಿ.ಸಿ. ಘಟಕದ ಸಂಯೋಜಕರಾದ ಶಿವರಾಜ್ ಸಿ ಮತ್ತು…
