ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಇತ್ತೀಚೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನಿಂದ ಮೂಡ್ಲಕಟ್ಟೆ ಜನಾರ್ದನ ದೇವಸ್ಥಾನದ ತನಕ ರಸ್ತೆ ಅಕ್ಕಪಕ್ಕದ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಿದ್ದಲ್ಲದೆ, ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ, ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಪ್ರೊ. ಬಾಲನಾಗೇಶ್ವರ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಡೀನ್, ಸಿಬಂದಿ ವರ್ಗ ಹಾಗೂ ಪ್ರಥಮ ವರ್ಷದ ವಿಧ್ಯಾರ್ಥಿ ಸ್ವಯಂಸೇವಕರು ಪಾಲ್ಗೊಂಡಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಚರ್ಚ್ ರಸ್ತೆಯ ಬಳಿ ಕಾರು ಹಾಗೂ ಬುಲೆಟ್ ಬೈಕ್ ನಡುವಿನ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ನೇರಳೆಕಟ್ಟೆಯ ಕಿರಣ್ ಮೇಸ್ತ(24) ಹಾಗೂ ಕರ್ಕುಂಜೆಯ ರವೀಂದ್ರ ಕುಮಾರ್ (25) ಎಂದು ಗುರುತಿಸಲಾಗಿದೆ. ಮದ್ದುಗುಡ್ಡೆ ಕಡೆಯಿಂದ ಕುಂದಾಪುರ ಕಡೆಗೆ ಮಹಿಳೆಯೊಬ್ಬರು ಮಾರುತಿ ಅಲ್ಟೋ ಕಾರನ್ನು ವೇಗವಾಗಿ ಚಾಲನೆ ಮಾಡಿಕೊಂಡು ಬಂದಿದ್ದು ಕುಂದಾಪುರ ಕಡೆಯಿಂದ ಮದ್ದುಗುಡ್ಡೆ ಕಡೆಗೆ ಬರುತ್ತಿದ್ದ ಬುಲೆಟ್ಗೆ ಢಿಕ್ಕಿ ಕಾರು ಹೊಡೆದಿದ್ದಾರೆ. ಇದರಿಂದ ಸವಾರರಿಬ್ಬರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಇಬ್ಬರು ಕೂಡ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಲಾಯಿಸುತ್ತಿದ್ದ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯು ಫೆಬ್ರವರಿ 12 ಮತ್ತು 13ರಂದು ಉಡುಪಿ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಕೂಟವನ್ನು ಫೆಬ್ರವರಿ 12ರಂದು ಬೆಳಗ್ಗೆ 10 ಗಂಟೆಗೆ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಹಾಗೂ ಆಯಾ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರನ್ನು ಸಂಪರ್ಕಿಸುವಂತೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಬಿದಿರೆ: ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಮಹಿಳೆಯರ ರಕ್ಷಣೆ ಮತ್ತು ಸಮಾನತೆಯ ಕುರಿತು ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ಬೀದಿನಾಟಕ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ತುಳು ಪೋರಂ, ಕಾಮರ್ಸ್ ಪೋರಂನ ಎರಡು ತಂಡಗಳು, ಎನ್‌ಸಿಸಿ ಆರ್ಮಿ ವಿಂಗ್, ಎನ್‌ಸಿಸಿ ನೇವಿ ಪೋರಂ, ಕನ್ನಡ ಪೋರಂ, ಆರು ತಂಡಗಳು ಭಾಗವಹಿಸಿದ್ದವು. ಪ್ರಥಮ ಬಹುಮಾನ ಎನ್‌ಸಿಸಿ ಆರ್ಮಿ ತಂಡ ಪಡೆದರೆ, ದ್ವಿತೀಯ ಬಹುಮಾನವನ್ನು ಎನ್‌ಸಿಸಿ ನೇವಿ ತಂಡ ಹಾಗೂ ತೃತೀಯ ಬಹುಮಾನವನ್ನು ತುಳು ಪೋರಂ ಪಡೆಯಿತು. ವಾಣಿಜ್ಯ ಪ್ರೋಫೆಶನಲ್ ವಿಭಾಗದ ಸಂಯೋಜಕರಾದ ಅಶೋಕ್ ಕೆ. ಜಿ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕರಾದ ಪ್ರಸಾದ್ ಶೆಟ್ಟಿ ತೀರ್ಪುಗಾರಾಗಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ವಸಂತ್ ಹಾಗೂ ವಿನೋದ್ ಉಪಸ್ಥಿತರಿದ್ದರು. ಘಟಕದ ಕಾರ್ಯದರ್ಶಿ ಸುದೀಕ್ಷಾ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಮಲ್ಪೆ ಸೇರಿದಂತೆ ವಿವಿಧ ಮೀನುಗಾರಿಕಾ ಬಂದರುಗಳ ಒಳಗೆ ಬಾಲ ಕಾರ್ಮಿಕರ ಪ್ರಕರಣಗಳು ಕಂಡುಬಂದ ನಿಟ್ಟಿನಲ್ಲಿ ಬಂದರಿನ ಪ್ರವೇಶ ದ್ವಾರದಲ್ಲೇ ಮಕ್ಕಳನ್ನು ತಡೆಯಬೇಕು. ಒಂದು ವೇಳೆ ಮಕ್ಕಳು ಬಂದರಿನ ಒಳಗೆ ಕಂಡು ಬಂದಲ್ಲಿ ಸಂಬಂಧಪಟ್ಟ ಬಂದರಿನ ಪ್ರವೇಶ ದ್ವಾರದವರಿಗೆ ನೋಟೀಸ್ ನೀಡಿ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಛೇರಿಯಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಸಲಹಾ ಸಮಿತಿ ಮತ್ತು ಕಾರ್ಯಕಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೀನುಗಾರಿಕಾ ಬಂದರಲ್ಲಿ ಪದೇ ಪದೇ ಬಾಲ ಕಾರ್ಮಿಕರು ಪತ್ತೆಯಾಗುವುದು, ಮೀನು ಹೆಕ್ಕುವುದು ಮುಂತಾದ ಘಟನೆಗಳು ನಡೆಯುತ್ತಿದ್ದು, ಇದನ್ನು ಸಂಪೂರ್ಣವಾಗಿ ತಡೆಯುವ ನಿಟ್ಟಿನಲ್ಲಿ ಪ್ರವೇಶ ದ್ವಾರದಲ್ಲೇ ಮಕ್ಕಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೊರ ರಾಜ್ಯ, ಜಿಲ್ಲೆಗಳಿಂದ ವಲಸೆ ಬಂದಿರುವ ಕೂಲಿ ಕಾರ್ಮಿಕರು ಕೆಲಸ ಮಾಡುವ ಕ್ವಾರಿ, ಕ್ರಷರ್‌ಗಳಲ್ಲಿ ಬಾಲ ಕಾರ್ಮಿಕರು ದುಡಿಯುತ್ತಿರುವ ಬಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ರಾಜ್ಯ ಮೀನುಗಾರಿಕೆ ಹಾಗೂ ಬಂದರು ಸಚಿವರಾಗಿ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಪ್ರಥಮ ಬಾರಿ ಆಗಮಿಸಿದ ಎಸ್. ಅಂಗಾರ ಇವರಿಗೆ ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಉಪ್ಪುಂದ ಇವರ ವತಿಯಿಂದ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಅಭಿನಂದಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವ ಮೀನುಗಾರಿಕೆ ಸಚಿವ ಎಸ್. ಅಂಗಾರ,ನಾನು ಸಾಮಾನ್ಯ ಕುಟುಂಬದಲ್ಲಿ ಜನಿಸಿ, ಕಷ್ಟಗಳನ್ನು ನೋಡಿ ಈ ಸ್ಥಾನಕ್ಕೇರಿದ್ದೇನೆ. ಸಾಮಾನ್ಯ ಜನರ ಕಷ್ಟಗಳು, ನೋವುಗಳ ಅರಿವು ನನಗಿದೆ. ಸಮಾಜ ಋಣ ತೀರಿಸಲು ನನ್ನ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸುತ್ತೇನೆ. ಮೀನುಗಾರರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು. ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎ. ಆನಂದ ಖಾರ್ವಿ ಮಾತನಾಡಿ, ಕಳೆದ ಎರಡು ತಿಂಗಳಿಂದ ಸೀಮೆಎಣ್ಣೆ ಸಿಗುತ್ತಿಲ್ಲ, 300ಲೀ ನೀಡುವಲ್ಲಿ 170ಲೀ ಮಾತ್ರ ಸಿಗುತ್ತಿದೆ, 400ಲೀ ಸೀಮೆಎಣ್ಣೆ ಬೇಡಿಕೆ ಇದೆ. ಸೀಮಿತ ಮೀನುಗಾರರಿಗೆ ಮಾತ್ರ ಇಂಜಿನ್ ಸಬ್ಸಿಡಿ ನೀಡಲಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗುಲ್ವಾಡಿಯ ಗುಜರಿ ಅಂಗಡಿಯಲ್ಲಿ ಸೋಮವಾರ ಆ 90 ದಿನಗಳು ಚಿತ್ರದ ಮುಹೂರ್ತ ಸಮಾರಂಭ ಜರುಗಿತು. ಕರವೇ ರಾಜ್ಯಾಧ್ಯಕ್ಷರಾದ ಪ್ರವೀಣಕುಮಾರ್ ಶೆಟ್ಟಿ ಕ್ಯಾಮರಾಗೆ ಚಾಲನೆ ನೀಡಿ ಮಾತನಾಡಿ ಸಿನೆಮಾ ನಿರ್ಮಾಣ ಮಾಡುವುದು ಚಿಕ್ಕ ವಿಷಯವಲ್ಲ. ಪ್ರತಿಭಾನ್ವಿತರೊಂದಿಗೆ ಉತ್ತಮ ತಂಡ ಸಿನೆಮಾ ನಿರ್ಮಿಸುತ್ತಿದ್ದು ತಂಡಕ್ಕೆ ಯಶಸ್ಸು ದೊರೆಯಲಿ ಎಂದವರು ಆಶಿಸಿದರು. ಪತ್ರಕರ್ತ ಎಸ್. ಜನಾರ್ದನ ಮರವಂತೆ ಮಾತನಾಡಿ ಯಾಕುಬ್ ಅವರ ಜೀವನದೃಷ್ಟಿ ವಿಶೇಷವಾದುದು. ಅವರ ಹಿಂದಿನ ಎರಡು ಸಿನೆಮಾಗಳಿಗೆ ಅಂತರಾಷ್ಟ್ರೀಯ ಮನ್ನಣೆ ದೊರೆತಾಗ ಹಾಗೂ ಕೊರೋನಾ ಕಾಲದಲ್ಲಿ ಅವರು ತಮ್ಮ ಹಿಂದಿನ ಬದುಕಿಗೆ ಮರಳಿದಾಗಲೂ ಅವರಲ್ಲಿ ಯಾವುದೇ ಬದಲಾವಣೆ ಕಾಣಲಿಲ್ಲ. ಎಲ್ಲವನ್ನೂ ಸಕಾರಾತ್ಮಕವಾಗಿ ಗ್ರಹಿಸುವುದರಿಂದಲೇ ಅವರು ಮತ್ತೆ ರೋನಾಲ್ಡ್ ಲೋಬೋ ಅವರೊಂದಿಗೆ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಕುಂದಾಪುರವನ್ನು ಕೇಂದ್ರವಾಗಿರಿಸಿಕೊಂಡು ಅವರ ನಿರ್ಮಿಸುತ್ತಿರುವ ಸಿನೆಮಾಕ್ಕೆ ಶುಭವಾಗಲಿ ಎಂದು ಹಾರೈಸಿದರು. ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಪ್ರಕಾಶ್ ತೋಳಾರ್, ಉದಯಕುಮಾರ್ ಶೆಟ್ಟಿ, ವಿನಯಕುಮಾರ್ ಶೆಟ್ಟಿ, ಸಂಘಟಕ ಸುಬ್ರಹ್ಮಣ್ಯ ಶೆಟ್ಟಿ, ನಟರಾದ ಬಿ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತರ ಬದುಕಿನಲ್ಲಿ ಅನುಸರಿಸುತ್ತಿದ್ದ ಶಿಸ್ತು, ಸಮಯ ಪ್ರಜ್ಞೆ ನಮಗೆಲ್ಲ ಮಾದರಿಯಾಗಬೇಕು ಜೊತೆಗೆ ಅದನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕಾರಂತ ಪುತ್ಥಳಿ, ರಂಗಮಂದಿರ, ಅಂಗನವಾಡಿ, ಗ್ರಂಥಾಲಯ ವೀಕ್ಷಿಸಿ ಮಾತನಾಡಿದರು. ಕಾರಂತರು ಬರೆದಂತೆ ಬದುಕಿ ಮಾದರಿಯಾದವರು, ಅವರ ಬದುಕಿನುದ್ದಕ್ಕೂ ಹೊಸತನದ ಅನ್ವೇಷಣೆ, ಪರಿಸರದ ಕಾಳಜಿ, ಹೋರಾಟದ ಸ್ವರೂಪ ಎಲ್ಲವೂ ಅನುಕರಣೀಯ ಇಂತಹ ಧೀಮಂತ ವ್ಯಕ್ತಿಯ ಬದುಕಿನ ಚಿತ್ರಣ ಮುಂದಿನ ಜನಾಂಗಕ್ಕೆ ರವಾನಿಸುವ ಉದ್ದೇಶದಿಂದ ಸ್ಥಾಪನೆಯಾದ ಈ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುತ್ತಿರುವ ಚಟುವಟಿಕೆ, ಅಭಿವೃದ್ಧಿ ನೋಡಿ ಸಂತಸವಾಗುತ್ತದೆ, ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದರು. ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪೂರ್ಣಿಮ ಥೀಮ್ ಪಾರ್ಕ್‌ನ ವಿಶೇಷತೆ ಮತ್ತು ಚಟುವಟಿಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಎಸ್. ವಿ ಆಂಗ್ಲ ಮಾದ್ಯಮ ಪೌಢಶಾಲೆಯ ಮುಖ್ಯ ಶಿಕ್ಷಕರಾದ ರಾಘವೇಂದ್ರ ಅವರು ಜೂನ್ 2020ರ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಭಾಷೆ ಕನ್ನಡ ವಿಷಯದಲ್ಲಿ ಉತ್ತಮ ಬೋಧನೆಯನ್ನು ನಡೆಸಿ ಕಾಲೇಜಿಗೆ ಶೇ.100 ಫಲಿತಾಂಶವನ್ನು ನೀಡಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರೌಢಶಾಲಾ ಸಹ ಶಿಕ್ಷಕ- ಶಿಕ್ಷಕಿಯರಿಗೆ ಪ್ರೇರಣಾ ಕಾರ್ಯಕ್ರಮದಲ್ಲಿ ಕುಂದಾಪುರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಿಂದ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಕೊರೊನಾ ಭೀತಿಯ ಹಿನ್ನಲೆಯಲ್ಲಿ ವಿವಿಧ ಆಸ್ಪತ್ರೆಗಳ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಸಂಗ್ರಹಣೆಯಲ್ಲೂ ತೀವ್ರ ಇಳಿಮುಖವಾಗುತ್ತಿದೆ. ರಕ್ತದಾನಿಗಳು ಸ್ವಯಂಪ್ರೇರಿತಾಗಿ ರಕ್ತನಿಧಿ ಕೇಂದ್ರಗಳಿಗೆ ಬಂದು ರಕ್ತದಾನ ಮಾಡಿ ರಕ್ತದ ಅಭಾವವನ್ನು ಕಡಿಮೆ ಮಾಡಲು ಸಹಕಾರ ನೀಡುವುದರ ಜೊತೆಗೆ ಒಬ್ಬರ ಜೀವ ಉಳಿಸುವ ಮಹತ್ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ. ವೀಣಾ ಕುಮಾರಿ ಹೇಳಿದರು. ಅವರು ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸಂಸ್ಥೆಯ 37ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು. ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಖಾರ್ವಿ, ಕಾರ್ಯದರ್ಶಿ ಶ್ರೀನಿವಾಸ ಖಾರ್ವಿ, ಗೌರವಾಧ್ಯಕ್ಷ ರಾಘವೇಂದ್ರ ಖಾರ್ವಿ, ಗಂಗಾಧರ ಖಾರ್ವಿ ಐಪಿಎಲ್, ಗಂಗಾಧರ ಖಾರ್ವಿ, ಪ್ರದೀಪ ಖಾರ್ವಿ, ವಿಜಯ ಖಾರ್ವಿ, ಶ್ರೀಕಾಂತ ಬಿಲ್ಲವ, ಸತೀಶ ಖಾರ್ವಿ, ನಾಗರಾಜ ಖಾರ್ವಿ,…
