Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ, ಕುಂದಾಪುರ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಗವರೋಜಿ ಹಾಗೂ ಠಾಣಾ ಸಿಬ್ಬಂದಿ ವರ್ಗದವರಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾ ಬಂಧನ ಕಾರ್ಯಕ್ರಮ ಆಚರಿಸಿದರು. ಈ ಸಂದರ್ಭ ಕುಂದಾಪುರ ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸೌರಭಿ ಪೈ, ಜಯಲಕ್ಷ್ಮೀ ಗಾಣಿಗ, ಉಪಾಧ್ಯಕ್ಷೆ ಶ್ವೇತಾ, ನೇತ್ರಾವತಿ ಮಡಿವಾಳ, ಕಾರ್ಯದರ್ಶಿ ರೋಹಿಣಿ ಪೈ, ಮಂಡಲ ಕಾರ್ಯದರ್ಶಿ ಸುರೇಂದ್ರ ಸಂಗಮ್, ಆಶಾಲತಾ ನಾಯಕ್, ಪುರಸಭೆ ಅಧ್ಯಕ್ಷರಾದ ವೀಣಾ ಭಾಸ್ಕರ್, ಸದಸ್ಯರಾದ ಶ್ವೇತಾ ಸಂತೋಷ್, ವನಿತಾ ಬಿಲ್ಲವ, ಪುಷ್ಪಾ ಶೇಟ್, ದಿವಾಕರ್ ಕಡ್ಗಿ, ಹಾಲಾಡಿ ಮಹಾಶಕ್ತಿ ಕೇಂದ್ರ ಮ.ಮೋ ಅಧ್ಯಕ್ಷೆ ದೀಪಿಕಾ ಶೆಟ್ಟಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಆ.10: ರೈತ ಸಂಪರ್ಕ ಕೇಂದ್ರದ ಮೂಲಕ ಕೃಷಿ ಅಗತ್ಯತೆಗಳನ್ನು ಪೂರೈಸುವ ಜೊತೆಗೆ ಸರಕಾರದ ವಿವಿಧ ಯೋಜನೆಗಳನ್ನು ರೈತರಿಗೆ ತಲುಪಿಸುವ ಕಾರ್ಯವನ್ನು ಮಾಡಲಾಗುತ್ತದೆ. ರೈತರು ಹಾಗೂ ಫಲಾನುಭವಿಗಳು ಸಕಾಲದಲ್ಲಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಬೈಂದೂರು ಕೃಷಿ ಅಧಿಕಾರಿ ಗಾಯತ್ರಿ ಹೇಳಿದರು. ಅವರು ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಇದರ ವತಿಯಿಂದ ಕೃಷಿ ಇಲಾಖೆ ಸಹಯೋಗದೊಂದಿಗೆ ಸಂಘದ ಹೇರೂರು ಶಾಖೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯಲ್ಲಿನ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ರೈತ ಸಂಪರ್ಕ ಕೇಂದ್ರದಲ್ಲಿ ಸಸ್ಯ ಸಂರಕ್ಷಣಾ ಯೋಜನೆಯಲ್ಲಿ ಕೀಟನಾಶಕಗಳು, ಮಣ್ಣಿನ ಸಂರಕ್ಷಣೆಗೆ ಬೇಕಾದ ಸುಣ್ಣ, ವಿವಿಧ ತಳಿತ ಭತ್ತದ ಬೀಜಗಳು, ರಸಗೊಬ್ಬರ ಪೂರೈಕೆಯನ್ನು ಕಾಲಕಾಲಕ್ಕೆ ಮಾಡಲಾಗುತ್ತದೆ. ಸೂಕ್ಷ್ಮ ನೀರಾವರಿ ಯೋಜನೆಯಡಿ ಕನಿಷ್ಠ ಒಂದು ಎಕರೆ ಆರ್‌ಟಿಸಿ ಹೊಂದಿರುವವರು ಇದರ ಪ್ರಯೋಜನ ಪಡೆಯಬಹುದು. ರೈತನ ಆಕಸ್ಮಿಕ ಸಾವಿಗೆ 2 ಲಕ್ಷದ ತನಕ ಪರಿಹಾರ ನೀಡುವ ಅವಕಾಶವಿದೆ. ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ಯೋಜನೆಯಡಿ ಸಿಎಸ್‌ಸಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನದ ಹಬ್ಬವನ್ನು ಆಚರಿಸಲಾಯಿತು. ಬೈಂದೂರು ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಹಾಗೂ ಪದಾಧಿಕಾರಿಗಳಿಗೆ, ಬೈಂದೂರು ಆರಕ್ಷಕ ಠಾಣೆಯ ಸಿಬ್ಬಂದಿಗಳಿಗೆ,ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಹಾಗೂ ಪೌರ ಕಾರ್ಮಿಕರಿಗೆ ರಾಖಿ ಕಟ್ಟುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಶಾಂತಿ ಖಾರ್ವಿ ಹಾಗೂ ದೀಪ ಶೆಟ್ಟಿ, ಮಹಿಳಾ ಮೋರ್ಚಾ ಉಪಾಧ್ಯಕ್ಷರ ಸರಸ್ವತಿ ನಾಯರ್ ಹಾಗೂ ಕಚೇರಿ ನಿರ್ವಾಹಕಿ ನಾಗಶ್ರೀ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.10: ಕಾಲುಸಂಕ ದಾಟುತ್ತಿದ್ದ ವೇಳೆ ಆಯತಪ್ಪಿ ಹಳ್ಳಕ್ಕೆ ಬಿದ್ದು ನೀರುಪಾಲಾದ 2ನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ (7) ಮೃತದೇಹ 48 ಗಂಟೆ ಬಳಿಕ ಪತ್ತೆಯಾಗಿದೆ. ಅಗಸ್ಟ್ 8ರ ಸೋಮವಾರ ಸಂಜೆ ಕಾಲ್ತೋಡು ಗ್ರಾಮದ ಬೀಜಮಕ್ಕಿ ಎಂಬಲ್ಲಿ ಈ ಘಟನೆ ನಡೆದಿದ್ದು ನಿರಂತರವಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಬುಧವಾರ ಸಂಜೆ ಆಕೆ‌ ಮೃತದೇಹ ಕಾಲುಸಂಕದಿಂದ 400 ಮೀಟರ್ ದೂರದಲ್ಲಿ ಪತ್ತೆಯಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು, ಈಜುಪಟುಗಳಾದ ಮೀನುಗಾರ ನರೇಶ್ ಕೊಡೇರಿಯವರ ಮುಂದಾಳತ್ವದ 22 ಜನರ ತಂಡ, ಸಾರ್ವಜನಿಕರೂ ಸೇರಿ ನೂರಕ್ಕೂ ಅಧಿಕ ಮಂದಿ‌ ಶೋಧ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕಾರ್ಯಾಚರಣೆಗೆ ಎರಡು ದೋಣಿಗಳನ್ನು ಬಳಿಸಿಕೊಳ್ಳಲಾಗುತ್ತಿದೆ. ಈ ವೇಳೆ ಉಡುಪಿ‌ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಕುಂದಾಪುರ ಉಪವಿಭಾಗಾಧಿಕಾರಿ‌ ಕೆ. ರಾಜು ಮಾರ್ಗದರ್ಶನದಲ್ಲಿ ಬಾಲಕಿ ಮೃತದೇಹ ಶೋಧ ಕಾರ್ಯಾಚರಣೆ ನಡೆಯುತ್ತಿದ್ದು ಬೈಂದೂರು ತಹಶಿಲ್ದಾರ್ ಕಿರಣ್ ಗೌರಯ್ಯ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ಎನ್., ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಭೇಟಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.9: ಕಾಲುಸಂಕದಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದ ಬಾಲಕಿ ಸನ್ನಿಧಿ ಮನೆಗೆ ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಲೆಗಾಡಿಗೆ ಹೊಂದಿಕೊಂಡಿರು ಪ್ರದೇಶಗಳಲ್ಲಿ ಹೆಚ್ಚು ಹಳ್ಳಗಳಿವೆ. ನಗೇಗಾ ಯೋಜನೆಯಡಿ ಕಾಲುಸೇತುವೆಗಳು ಅಗತ್ಯವಿರುವಲ್ಲಿ ನಿರ್ಮಿಸುವ ಕಾರ್ಯವನ್ನು ಮಾಡಲಾಗುವುದು ಎಂದರು. ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಮಾತನಾಡಿ ಕಾಲ್ತೋಡು ಭಾಗದಲ್ಲಿ ಅತ್ಯಧಿಕ ಕಾಲುಸಂಕವಿದ್ದು, ಹಂತ ಹಂತವಾಗಿ ಕಾಲು ಸೇತುವೆ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಅವಘಡ ನಡೆದ ಕಾಲುಸಂಕಕ್ಕೂ ಅನುದಾನ ಮೀಸಲಿರಿಸಿದ್ದರೂ ಲೋಕೋಪಯೋಗಿ ಇಲಾಖೆಯ ವಿಳಂಬದಿಂದ ಕಾಮಗಾರಿ ನಡೆದಿರಲಿಲ್ಲ. ಅವರು ಸನ್ನಿಧಿ ಸಹೋದರಿಯನ್ನುಯನ್ನು ದತ್ತು ತೆಗೆದುಕೊಂಡು ಮುಂದಿನ ಶಿಕ್ಷಣದ ಹೊಣೆ ತಾನು ವಹಿಸಿಕೊಳ್ಳುವುದಾಗಿ ತಿಳಿಸಿದರು. ಈ ಸಂದರ್ಭ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಬೈಂದೂರು ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಶರತ್ ಕುಮಾರ್ ಶೆಟ್ಟಿ ಸೇರಿದಂತೆ ಇನ್ನಿತರರು ಇದ್ದರು. ಮುಂದುವರಿದ ಶೋಧ ಕಾರ್ಯ:ಬಾಲಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳೆದ 75 ವರ್ಷಗಳಲ್ಲಿ ಬಡವರು, ದಲಿತರ ಉದ್ದಾರಕ್ಕಾಗಿ ಶ್ರಮಿಸಿದ ಕಾಂಗ್ರೆಸ್ ಎಂದರೆ ಈ ದೇಶದ ಇತಿಹಾಸವೇ ಆಗಿದೆ. ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ ಮೂಲಭೂತ ಸೌಕರ್ಯಗಳೇ ಕೊರತೆ ಇದ್ದ, ಬಡವರೇ ಇದ್ದ ದೇಶದಲ್ಲಿ ಎಲ್ಲರ ಬದುಕು ಕಟ್ಟುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಿದೆ ಎಂಬುದನ್ನು 70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಟೀಕಿಸುವವರು ಅರಿತುಕೊಳ್ಳಬೇಕಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಬುಧವಾರ ಬೈಂದೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಸಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ  ಹಮ್ಮಿಕೊಳ್ಳಲಾದ ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿ, ಬಳಿಕ ಬೈಂದೂರು ಅಂಬೇಡ್ಕರ್ ಭವನದಲ್ಲಿ ಜರುಗಿದ ಸಭೆಯನ್ನು ಉದ್ದೇಶಿಸಿ ಮಾತನಾಡಿ ಅನೇಕ ಮಹಾನ್ ಪುರುಷರುಗಳು ಕುಟುಂಬವನ್ನು ತ್ಯಾಗ ಮಾಡಿ, ಬ್ರಿಟೀಷರ ಬಂದೂಕಿಗೆ ಎದೆಯನ್ನು ಕೊಟ್ಟು, ಜೈಲುವಾಸ ಮಾಡಿ ಹೋರಾಟ ಮಾಡಿ ದಕ್ಕಿಸಿಕೊಂಡದ್ದು ಭಾರತ ಸ್ವಾತಂತ್ರ್ಯ. ವಿವಿಧ ಧರ್ಮ, ಜಾತಿ, ಭಾಷೆಯನ್ನು ಒಳಗೊಂಡು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊಟ್ಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಹಾನಿಗೊಳಗಾದ ನಾಡದೋಣಿಗಳಿರುವ ಕಳುಹಿತ್ಲು ಪ್ರದೇಶಕ್ಕೆ ಬುಧವಾರ ರಾಜ್ಯ ಮೀನುಗಾರಿಕೆ ಸಚಿವ ಎಸ್. ಅಂಗಾರ ಭೇಟಿ ನೀಡಿದರು. ಈ ವೇಳ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಶಿರೂರು ಭಾಗದಲ್ಲಿ ಅಧಿಕ ಮಳೆಯಾಗಿರುವುದರಿಂದ ಸಾಕಷ್ಟು ಅವಘಡ ಸಂಭವಿಸಿದೆ. ಕಳುಹಿತ್ಲು ಪ್ರದೇಶದಲ್ಲಿ ದೋಣಿ ಹಾಗೂ ಮೀನುಗಾರಿಕಾ ಸ್ವತ್ತುಗಳು ಸಮುದ್ರಪಾಲಾಗಿದೆ. ಈ ಬಗ್ಗೆ ಅಧಿಕಾರಿಗಳಿಂದ ಸಮಗ್ರ ವರದಿ ಪಡೆದಿದ್ದೇನೆ. ಪ್ರಾಕೃತಿಕ ವಿಕೋಪ ಪರಿಹಾರದಿಂದ ಹೆಚ್ಚಿನ ಅನುದಾನ ನೀಡಲು ಸಾಧ್ಯವಿಲ್ಲದ ಕಾರಣ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಹೆಚ್ಚಿನ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಬೈಂದೂರು ತಾಲೂಕಿನ ಕೊಡೇರಿ ಬಂದರು ವಿಸ್ತರಣಾ ಕಾಮಗಾರಿ ಶೀಘ್ರ ಆರಂಭ, ಸೀಮೆಎಣ್ಣೆ ಸಮಸ್ಯೆಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಈ ವೇಳೆ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿ.ಪಂ ಸಿಇಓ ಪ್ರಸನ್ನ, ಕುಂದಾಪುರ ಸಹಾಯಕ ಕಮಿಷನರ್ ರಾಜು, ಮೀನುಗಾರಿಕ ಸಹಾಯಕ ನಿರ್ದೇಶಕ ಶಿವಕುಮಾರ್, ಮೀನುಗಾರಿಕ ಸಹಾಯಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಆ.9: ಮನುಷ್ಯನಿಂದ ಹಿಡಿದು ಕ್ರಿಮಿ ಕೀಟ, ಪ್ರಾಣಿ ಪಕ್ಷಿ ಗಿಡ ಮರ ಎಲ್ಲದಕ್ಕೂ ಕೂಡ ಒಂದಕ್ಕೊಂದು ಸಂಬಂಧವಿದೆ. ಒಂದು ಕೊಂಡಿ ತಪ್ಪಿದರೂ ಭೂಮಿಯಲ್ಲಿ ಅತಿವೃಷ್ಟಿ ಅನಾವೃಷ್ಟಿ, ಭೂಕಂಪನದಂತಹ ಅನಾಹುತಗಳು ಸಂಭವಿಸುತ್ತದೆ. ಜೈವಿಕ ಪರಿಸರ ಕೊಂಡಿಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಒಂದು ಮರ ಕಡಿದರೆ ಹತ್ತು ಮರಗಳನ್ನು ನೆಡುವ ಇಚ್ಚಾಶಕ್ತಿ ನಮ್ಮಲ್ಲಿರಬೇಕು ಎಂದು ಉಡುಪಿ ಅರಣ್ಯ ಸಂಚಾರಿ ದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ. ಹೇಳಿದರು. ಅವರು ನಾವುಂದದ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಹೇರೂರು ಶಾಖೆಯಲ್ಲಿ ಹಮ್ಮಿಕೊಂಡ ಅರಣ್ಯ ಇಲಾಖಾ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಶೇಕಡಾ 42 ರಷ್ಟು ಇರುವ ಅರಣ್ಯ ಪ್ರದೇಶ ಪ್ರಸ್ತುತ 22 ಶೇಕಡಾ ಇಳಿದಿದೆ. ಸರಕಾರ ಅರಣ್ಯ ವೃದ್ದಿಗಾಗಿ ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಅದರ ಸದುಪಯೋಗಪಡಿಸಿಕೊಳ್ಳಬೇಕಾಗಿದೆ ಎಂದರು. ಕಾರ್ಯಕ್ರಮ ಉದ್ಘಾಟಿಸಿದ ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಪರ್ಡ್ ಲೋಬೋ ಮಾತನಾಡಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವದಲ್ಲಿಯೇ ಅತೀ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರು ದೇಶದಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮ ನಡೆಸುವುದು ನಮ್ಮ ಆತ್ಮ ಗೌರವದ ಸಂಕೇತ. ಪ್ರತಿ ಮನೆಯಲ್ಲಿಯೂ ರಾಷ್ಟ್ರಧ್ವಜ ಹಾರಿಸುವುದರ ಹಿಂದೆ ರಾಷ್ಟ್ರದ ತ್ರಿವರ್ಣ ಧ್ವಜದೊಂದಿಗೆ ನಾಗರಿಕರ ವೈಯಕ್ತಿಕ ಸಂಬಂಧವನ್ನು ಸ್ಥಾಪಿಸುವುದು, ರಾಷ್ಡ್ರ ನಿರ್ಮಾಣಕ್ಕಾಗಿನ ಬಧ್ದತೆಯನ್ನು ಸಾಕಾರಗೊಳಿಸುವುದಾಗಿದೆ ಎಂದು ಉಡುಪಿ ಜಿಲ್ಲಾ ಭಾರತ್ ಸೇವಾದಳ ಘಟಕದ ಜಿಲ್ಲಾ ಸಂಘಟಕ ಫಕೀರ್ ಗೌಡ ಹೇಳಿದರು. ಅವರು ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ರಾಷ್ಡ್ರೀಯ ಸೇವಾ ಯೋಜನೆಯ ಘಟPದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಹಾಗೂ ಹರ್ ಘರ್ ತಿರಂಗಾ ಮಾಹಿತಿ ಕಾರ್ಯಾಗಾರದಲ್ಲಿ ಅಬಿಪ್ರಾಯಪಟ್ಟರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಸಂಪನ್ಮೂಲ ಕಛೇರಿಯ ಸಮನ್ವಯಾಧಿಕಾರಿಗಳಾದ ಅಶೋಕ್ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಶಿಕ್ಷಣದೊಂದಿಗೆ ವ್ಯಕ್ತಿ ವಿಕಸನ ಮತ್ತು ಶಿಕ್ಷಣದೊಂದಿಗೆ ಸೇವೆ ಎನ್ನುವ ಮೂಲ ಮುಖ್ಯ ಧ್ಯೇಯದೊಂದಿಗೆ ಸಮಾಜ ಮತ್ತು ವಿದ್ಯಾರ್ಥಿಗಳ ನಡುವಿನ ಸಂಬಂಧ ಬೆಸೆಯುವಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಅ.9: ಕಾಲುಸಂಕದಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದ ಬಾಲಕಿ ಸನ್ನಿಧಿ ಮೃತದೇಹ ಪತ್ತೆಗಾಗಿ, ಮಂಗಳವಾರ ಸಂಜೆಯ ತನಕವೂ ಬಾಲಕಿ ಹಳ್ಳಕ್ಕೆ ಬಿದ್ದಿದ್ದ ಸ್ಥಳ ಹಾಗೂ ಎಡಮಾವಿನ ಹೊಳೆಯಲ್ಲಿ ಶೋಧಕಾರ್ಯ ನಡೆಸಿದ್ದು, ಯಾವುದೇ ಸುಳಿವು ಲಭ್ಯವಾಗಿಲ್ಲ ಶೋಧಕಾರ್ಯದಲ್ಲಿ ಮುಳುಗು ತಜ್ಞರು:ಬಾಲಕಿ ಸನ್ನಿಧಿಗಾಗಿ ಹೊಳೆಯಲ್ಲಿ ಸೋಮವಾರ ಸಂಜೆ ಹಾಗೂ ಮಂಗಳವಾರ ಇಡೀ ದಿನ ಶೋಧ ಕಾರ್ಯ ನಡೆಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಗಂಗೊಳ್ಳಿಯ 8 ಮಂದಿ ಮೀನುಗಾರರು ನದಿಯಲ್ಲಿ ಮುಳುಗಿ ಮೃತದೇಹ ಹುಡುಕಾಟ ನಡೆಸಿದ್ದಾರೆ. ಮುಳುಗುತಜ್ಞ ಮಂಜುನಾಥ ಕನ್ನೇರಿ ಕೂಡ ಸಂಶಯವಿರುವ ಭಾಗದಲ್ಲಿ ಶೋಧಕಾರ್ಯ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬೈಂದೂರು ತಹಶೀಲ್ದಾರ್, ಬೈಂದೂರು ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಬೈಂದೂರು ಪೊಲೀಸ್ ಸಿಬ್ಬಂದಿಗಳು ಸ್ಥಳದಲ್ಲಿಯೇ ಇದ್ದು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಜಿಲ್ಲಾಧಿಕಾರಿ ಭೇಟಿ:ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಬಾಲಕಿ ಕುಟುಂಬಿಕರನ್ನು ಭೇಟಿಯಾಗಿ ಸಾಂತ್ವಾನ ಹೇಳಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ತಿಳಿಸಿದ್ದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಸಹಾಯಕ…

Read More