ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಾಲೆಯ ಪ್ರತಿಯೊಬ್ಬ ಪ್ರಾಕ್ತನ ವಿದ್ಯಾರ್ಥಿಗಳಲ್ಲಿ ನನ್ನ ಶಾಲೆ ಎಂಬ ಪ್ರೀತಿ ಬೆಳೆದಾಗ, ಶಾಲೆಯ ಬಗ್ಗೆ ಅಭಿಮಾನ ಮೂಡಿದಾಗ ಶಾಲೆಯ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದೆ. ಶಾಲೆಯ ಆಗುಹೋಗುಗಳಿಗೆ ಸ್ಪಂದಿಸುತ್ತಾ ಶಾಲೆಯ ಅಭಿವೃದ್ಧಿಗೆ ಶ್ರಮಿಸಿದಾಗ ನಮ್ಮಲ್ಲಿ ಆತ್ಮತೃಪ್ತಿ ಭಾವನೆ ಮೂಡುತ್ತದೆ. ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿರುವ ಈ ಕಾಲಘಟ್ಟದಲ್ಲಿ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದು. ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸುವುದರ ಜೊತೆಗೆ ಶಾಲೆಯ ಮಕ್ಕಳ ಕಷ್ಟಸುಖಗಳಿಗೆ ಸ್ಪಂದಿಸುವ ಮನೋಭಾವ ಎಲ್ಲರಲ್ಲೂ ಬೆಳೆಯಬೇಕು ಎಂದು ಶಾಲೆಯ ಹಳೆ ವಿದ್ಯಾರ್ಥಿ ರಾಘವೇಂದ್ರ ಕೋಟಾನ್ ಬೆಂಗಳೂರು ಹೇಳಿದರು. ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ೬,೭ ಮತ್ತು ೮ನೇ ತರಗತಿಯ ಸುಮಾರು ೧೦೫ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ಗಳನ್ನು ಸೋಮವಾರ ವಿತರಿಸಿ ಅವರು ಮಾತನಾಡಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಪಂ ಸದಸ್ಯ ಬಿ.ರಾಘವೇಂದ್ರ ಪೈ ಶುಭಾಶಂಸನೆಗೈದರು. ಎಸ್ಡಿಎಂಸಿ ಉಪಾಧ್ಯಕ್ಷೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇಶದ ನಾಗರಿಕರಾಗಿ ನಮಗೆ ಲಭ್ಯವಿರುವ ಹಕ್ಕುಗಳ ಅರಿವನ್ನು ಹೊಂದಿರಬೇಕಾದದ್ದು ನಮ್ಮ ಜವಾಬ್ದಾರಿಯಾಗಿದೆ. ಮಾಹಿತಿ ಹಕ್ಕು ಕಾಯಿದೆ ಮತ್ತು ಕೇಂದ್ರ ವಿಚಕ್ಷಣಾ ಆಯೋಗವನ್ನು ಸಮರ್ಥವಾಗಿ ಬಳಸಿಕೊಂಡಲ್ಲಿ, ಖಂಡಿತ ಭ್ರಷ್ಟಚಾರ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸಬಲ್ಲದು ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಆರ್.ಟಿ.ಐ ಮತ್ತು ಸಿವಿಸಿ ಕುರಿತಾಗಿನ ಅರಿವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಇನ್ನಿತರ ಸಾಮಾನ್ಯ ಕಾಯಿದೆಗಳ ಬಗೆಗಿನ ಅರಿವು ಮತ್ತದರ ಬಳಕೆಯಿಂದ ನಮ್ಮಲ್ಲಿನ ಆತ್ಮವಿಶ್ವಾಸ ಹೆಚ್ಚುವುದರ ಜೊತೆಗೆ ವಿಶೇಷವಾಗಿ ಸರಕಾರಿ ವಲಯಗಳಲ್ಲಿನ ಕಾರ್ಯಗಳಲ್ಲಿ ಧನಾತ್ಮಕ ಬದಲಾವಣೆಯನ್ನು ನಿರೀಕ್ಷಿಸಲು ಸಾಧ್ಯವಿದೆ. ಇಡೀ ಸಮಾಜಕ್ಕೆ ಈ ಕುರಿತಾದ ಅರಿವನ್ನು ಮೂಡಿಸುವಲ್ಲಿ ನಾವು ಕೈಜೋಡಿಸಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು. ಸರಸ್ವತಿ ವಿದ್ಯಾಲಯದ ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿನಿ ಶ್ರೇಯ ಎನ್. ಖಾರ್ವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ವಿಭಾಗದ ವಿದ್ಯಾರ್ಥಿ ಸಂಘ “ಸಿವಿಯೇಶನ್” ವತಿಯಿಂದ “ಸ್ವಾದ ಸಾಧನ” ಆಹಾರ ಮೇಳವು ಕಾಲೇಜಿನ ಆವರಣದಲ್ಲಿ ನಡೆಯಿತು. ಆಳ್ವಾಸ್ ಪದವಿ ಕಾಲೇಜಿನ ಹೋಟೆಲ್ ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಟೆರೆನ್ಸ್ ರೋಡ್ರಿಗಸ್ ಮೇಳವನ್ನು ಉದ್ಘಾಟಿಸಿದರು. ಇತ್ತೀಚಿಗಿನ ಜನರ ಬದಲಾಗುತ್ತಿರುವ ಜೀವನ ಶೈಲಿಯಿಂದ, ಆಹಾರ, ತಿಂಡಿ ತಿನಿಸುಗಳ ಬಗ್ಗೆ ಬೇಡಿಕೆ ಹೆಚ್ಚಿದ್ದು, ಮುಂದಿನ ದಿನಗಳಲ್ಲಿ ಆಹಾರೋದ್ಯಮವು ಬೃಹತ್ತಾಗಿ ಬೆಳೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಆಳ್ವಾಸ್ ಶಿಕ್ಷಣ ಪ್ರತಿ?ನದ ಮ್ಯಾನೆಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ತಾಂತ್ರಿಕ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳೆ ಆಯೋಜಿಸಿದ ಇಂತಹ ಕಾರ್ಯಕ್ರಮಗಳಿಂದ ಅವರ ಆತ್ಮಸ್ಥೈರ್ಯ ಹೆಚ್ಚಾಗಲಿದ್ದು ಮುಂದಿನ ಜೀವನಕ್ಕೆ ಉಪಯೋಗವಾಗಲಿದೆ ಎಂದು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ| ಪೀಟರ್ ಫೆನಾಂಡೀಸ್ರವರು ಮಾತನಾಡಿ, ಭಾರತೀಯ ಪರಂಪರೆ ಶೈಲಿಯ ಖಾದ್ಯಗಳ ಮಹತ್ವ, ಆಧುನಿಕ ಆಹಾರ ಪದ್ಧತಿ, ಆಹಾರ ಕ್ಷೇತ್ರದಲ್ಲಿ ಸಂಶೋಧನೆ ಇತ್ಯಾದಿ ವಿ?ಯಗಳ ಬಗ್ಗೆ ಮಾಹಿತಿ ನೀಡಿದರು. ಮೇಳದಲ್ಲಿ ಕರ್ನಾಟಕದ ವಿವಿಧ ಶೈಲಿಯ ಖಾದ್ಯಗಳು, ಈಶಾನ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಗಾಂಜಾ-ಡ್ರಗ್ಸ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದ್ದು ಗೃಹ ಸಚಿವರು, ಜಿಲ್ಲಾ ಪೊಲೀಸ್ ವರಿಷ್ಠರು ಇದನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವಸ್ತು ಮಾರಾಟ ಜಾಲದಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ. ಅವರು ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ್ದು, 2019ರಲ್ಲಿ 203 ಪ್ರಕರಣ, 2020ರಲ್ಲಿ 250 ಪ್ರಕರಣ ಹಾಗೂ 2021ರಲ್ಲಿ ಮತ್ತೂ ಹೆಚ್ಚು ಪ್ರಕರಣ ವರದಿಯಾಗಿದೆ. ವೆಬ್ಸೈಟ್ ಮೂಲಕವೂ ಮಾರಾಟ ಮಾಡಲಾಗುತ್ತಿದೆ. ಯುವ ಜನತೆ ಇದರಿಂದ ದಾರಿ ತಪ್ಪುತ್ತಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವ ವಸ್ತು ಮಾರಾಟ ಜಾಲದಲ್ಲಿ ತೊಡಗಿರುವವರಿಗೆ ಕಠಿಣ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದಿದ್ದಾರೆ. ಇದರೊಂದಿಗೆ ಮಟ್ಕಾ ದಂದೆ ಸ್ಪಲ್ವ ಕಡಿವಾಣಕ್ಕೆ ಬಂದಿದೆ ಆದರೆ ಗೂಡಂಗಡಿಗಳಲ್ಲಿ ಮಧ್ಯ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆಯೂ ಗಮನ ಹರಿಸುವಂತೆಯೂ ಅವರು ಬಿ.ಎಂ ಸುಕುಮಾರ ಶೆಟ್ಟಿ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಮುನಾಫ್ ಕೋಡಿ ಅವರನ್ನು ನೇಮಿಸಲಾಗಿದೆ. ವಿಧಾನ ಪರಿಷತ್ ಮಾಜಿ ಸಭಾಪತಿ, ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ಸೂಚನೆ ಮೇರೆಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕುಮಾರ ಕೊಡವೂರರವರ ಅನುಮೋದನೆಯೊಂದಿಗೆ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನಾಗಿ ಮುನಾಫ್ ಕೋಡಿ ಅವರನ್ನು ನೇಮಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಇಸ್ಮಾಯಿಲ್ ಆತ್ರಾಡಿ ಆದೇಶಿಸಿರುತ್ತಾರೆ. ಮುನಾಫ್ ಕೋಡಿ ಅವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯಕಾರಿ ಸದಸ್ಯರಾಗಿದ್ದು , ಯುವ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿ ಕಾರ್ಯ ನಿರ್ವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು, ಅವಿಭಜಿತ ದ.ಕ ಜಿಲ್ಲೆಯ 2020-21ನೇ ಸಾಲಿನ ಶ್ರೇಷ್ಠ ಹೈನುಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಡಿ.22ರಂದು ಮಂಗಳೂರಿನಲ್ಲಿ ಜರುಗುವ ದ.ಕ ಜಿಲ್ಲಾ ಹಾಲು ಒಕ್ಕೂಟ ಮಹಾ ಮಂಡಳದ ಮಹಾಸಭೆಯಲ್ಲಿ ಪ್ರಶಸ್ತಿಯನ್ನು ಪಡೆಯಲ್ಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಡಾಮಕ್ಕಿಯ ದೇವಸ್ಥಾನವೊಂದರ ವಾಟ್ಸಪ್ ಗ್ರೂಪಿನಲ್ಲಿ ಮಹಿಳೆಯ ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದ ಗ್ರಾ.ಪಂ ಸದಸ್ಯನೋರ್ವನ ವಿರುದ್ಧ ದೂರು ದಾಖಲಾಗಿದೆ. ಮಡಮಕ್ಕಿ ಗ್ರಾಮದ ದೇವಳವೊಂದರ ವಾಟ್ಸಪ್ ಗ್ರೂಪಿನಲ್ಲಿ ಗ್ರಾಮದ ಪ್ರಮುಖ ವ್ಯಕ್ತಿಗಳು ಹಾಗೂ ಮಹಿಳೆಯರು ಇದ್ದುದ್ದರಿಂದ ಗ್ರಾಮ ಪಂಚಯತ್ ಸದಸ್ಯ ಹಾಕಿರುವ ಪೊಸ್ಟ್ ನಿಂದ ಎಲ್ಲರಿಗೂ ಮುಜುಗರ ಉಂಟಾಗಿರುವ ಬಗ್ಗೆ ಗ್ರಾಮಸ್ಥರು ಅಕ್ರೋಶ ವ್ಯಕ್ತ ಪಡಿದ್ದರು. ಕೆಲವರು ಹಾಕಿರುವ ಪೊಸ್ಟ್ ಡಿಲೀಟ್ ಮಾಡಲು ವಿನಂತಿಸಿದರೂ ಕೂಡ ಡಿಲೀಟ್ ಮಾಡದ ಹಿನ್ನಲೆಯಲ್ಲಿ ಮಡಮಕ್ಕಿ ಗ್ರಾಮಸ್ಥರೋರ್ವರು ಉಡುಪಿಯ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೆನ್ ಪೊಲೀಸರು ಗ್ರಾಮ ಪಂಚಯತ್ ಸದಸ್ಯನ ವಿಚಾರಣೆ ನಡೆಸಿದ್ದು, ತನ್ನ ಕೈ ತಪ್ಪಿನಿಂದ ಅಶಿಲ್ಲ ಚಿತ್ರ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಅಗಿದ್ದು , ಈ ಬಗ್ಗೆ ಗ್ರಾಮಸ್ಥರಲ್ಲಿ ಕ್ಷಮೆಯಾಚಿಸುವುದಾಗಿ ಠಾಣೆಯಲ್ಲಿ ಲಿಖಿತ ರೂಪದಲ್ಲಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಗಡಿ ಭದ್ರತಾ ಪಡೆಗೆ ನೇಮಕಗೊಂಡು ತರಬೇತಿ ಪಡೆಯುತ್ತಿರುವ ಏಳಜಿತ ಗ್ರಾಮದ ವಿದ್ಯಾ ಗೌಡ ಅವರನ್ನು ಇತ್ತಿಚಿಗೆ ಏಳಜಿತ ಶ್ರೀ ರಾಮಕೃಷ್ಣ ಕುಟೀರದ ವತಿಯಿಂದ ಸನ್ಮಾನಿಸಲಾಯಿತು. ಏಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆ ಹಾಗೂ ಆತ್ಮಸ್ಥ್ಯೆರ್ಯ ಇರುತ್ತದೆ ಎಂಬುದಕ್ಕೆ ವಿದ್ಯಾ ಗೌಡ ಬಿಎಸ್ಎಫ್ಗೆ ಆಯ್ಕೆಯಾಗಿರುವುದೇ ಸಾಕ್ಷಿ. ಬದುಕಿನಲ್ಲಿ ಏನಾನ್ನಾದರೂ ಸಾಧಿಸಬೇಕೆಂಬ ಛಲವಿದ್ದರೆ, ಅದನ್ನು ಸಾಧಿಸಲು ಭಗವಂತ ಯಾವುದಾದರೂ ರೂಪದಲ್ಲಿ ಸಹಕರಿಸುತ್ತಾನೆ ಎಂದರು. ಶ್ರೀಮದ್ಭಗವದ್ಗೀತಾ ಆಚರಣಾ ಸಮಿತಿ ಉಡುಪಿ ಜಿಲ್ಲಾಧ್ಯಕ್ಷ ಬಿ. ರಾಮಕೃಷ್ಣ ಶೇರುಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಮಕೃಷ್ಣ ಕುಟೀರದ ಮೂಲಕ ಹಲವಾರು ವಿದ್ಯಾರ್ಥಿಗಳು ಇಂದು ಉನ್ನತ ವ್ಯಾಸಂಗವನ್ನೂ ಪೂರೈಸಿರುವುದು ಗಮನಾರ್ಹ ಸಾಧನೆ. ವಿದ್ಯಾರ್ಥಿ ವೇತನ ಪಡೆದು ಉತ್ತಮ ಶಿಕ್ಷಣ ಉದ್ಯೋಗ ಪಡೆದುಕೊಳ್ಳುವುದರ ಜತೆಗೆ ಇತರರಿಗೂ ಸಹಕಾರ ಮಾಡುವ ಗುಣ ಬೆಳಸಿಕೊಂಡಾಗ ಸಮಾಜದ ಎಲ್ಲರಿಗೂ ಶಿಕ್ಷಣ ದೊರೆಯಲಿದೆ ಎಂದರು. ಈ ಸಂದರ್ಭ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಕುಂದಾಪುರದ ಚಿಕ್ಕಮ್ಮನಸಾಲ್ ರಸ್ತೆಯ ಶ್ರೀ ಚಿಕ್ಕಮ್ಮದೇವಿ ದೇವಸ್ಥಾನದ ವಠಾರದಲ್ಲಿ ಡಿ.18 ರಂದು ನಿರ್ಮಲ ದೇಗುಲ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಶ್ರಮದಾನದ ಮಹತ್ವವನ್ನು ತಿಳಿಸಿದರು. ಶ್ರೀ ಚಿಕ್ಕಮ್ಮದೇವಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ನಾಗೇಶ್ ಎಮ್.ಪುತ್ರನ್, ಸುರೇಂದ್ರ ಸಂಗಮ್, ಸಂಗಮ್ ಫ್ರೆಂಡ್ಸ್ನ ಸದಸ್ಯರು, ದೇವಾಲಯ ಅರ್ಚಕರಾದ ಶ್ರೀ ಕೃಷ್ಣಮೂರ್ತಿ ಅಡಿಗ, ಕಾಲೇಜಿನ ಎನ್.ಎಸ್.ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಭೋಧಕ & ಭೋದಕೇತರರು ಉಪಸ್ಥಿತರಿದ್ದರು. ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸ್ವಚ್ಚತಾ ಕಾರ್ಯದಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ (ಸಿ. ಬಿ. ಎಸ್. ಇ.) ಕೋಡಿ ಕುಂದಾಪುರ ಇಲ್ಲಿ ದಿನಾಂಕ 18-12-2021 ಶನಿವಾರದಂದು 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ವಿದ್ಯಾರ್ಥಿಗಳೆಲ್ಲರೂ ಬಹಳ ಉತ್ಸಾಹದಿಂದ ಪಾಲ್ಗೊಂಡು ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಪ್ರದರ್ಶಿಸಿದರು. ಒಂದೊಂದು ತಂಡದಲ್ಲಿ 2 ಸ್ಪರ್ಧಿಗಳ ಹಾಗೆ ಒಟ್ಟು32 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ರೆಹಮಾನ್, ನಿರ್ದೇಶಕರಾದ ದೋಮ ಚಂದ್ರಶೇಖರ್ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಪ್ರಶಂಶಿಸಿದರು. ಪ್ರಾಂಶುಪಾಲರಾದ ಅಶ್ವಿನಿ ಶೆಟ್ಟಿ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
