Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜು.19: ಕೊಯಿಮುತ್ತೂರಿನಲ್ಲಿ ಜರುಗಿದ ಏಷ್ಯನ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ ವಿವಿಧ ವಿಭಾಗಗಳಲ್ಲಿ ಕುಂದಾಪುರದ ಸತೀಶ್ ಖಾರ್ವಿ ಅವರು 2 ಚಿನ್ನ ಹಾಗೂ 2 ಬೆಳ್ಳಿಯ ಪದಕವನ್ನು ಗೆದ್ದುಕೊಂಡಿದ್ದಾರೆ. ಸತೀಶ್ ಖಾರ್ವಿ ಅವರು 2019ರಲ್ಲಿ ಕಜಕಿಸ್ತಾನದಲ್ಲಿ ನಡೆದ ಏಷ್ಯನ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ 3 ಚಿನ್ನ ಹಾಗೂ ಒಂದು ಬೆಳ್ಳಿಯ ಪದಕ ಗೆದ್ದಿದ್ದರು. ಇತ್ತಿಚಿಗಷ್ಟೇ ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಅವರು ಈತನಕ ಹಲವರು ರಾಜ್ಯ, ರಾಷ್ಟಮಟ್ಟದ ಪವರ್ ಲಿಫ್ಟಿಂಗ್, ಬೆಂಚ್ ಪ್ರೆಸ್ ಸ್ವರ್ಧೆಗಳಲ್ಲಿ ಭಾಗವಹಿಸಿ ಹತ್ತಾರು ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಇದನ್ನೂ ಓದಿ: ► ಪವರ್ ಲಿಫ್ಟಿಂಗ್ ಜ್ಯೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ ಸೌಮ್ಯಗೆ ಕಂಚು – https://kundapraa.com/?p=59975 . ಕುಂದಾಪುರದಲ್ಲಿ ಹರ್ಕೂಲಸ್ ಜಿಮ್ನ ವ್ಯವಸ್ಥಾಪಕರಾಗಿರುವ ಸತೀಶ್ ಖಾರ್ವಿ ಅವರು ಜೀಮ್ ತರಬೇತುದಾರರಾಗಿದ್ದಾರೆ. ಪ್ರಸ್ತುತ ವರ್ಷದಲ್ಲಿ ನ್ಯೂಜಿಲಾಂಡಿನಲ್ಲಿ ಜರುಗಲಿರುವ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಕುಂದಾಪುರ ಆರ್. ಎನ್. ಶೆಟ್ಟಿ ಪಿಯು ಕಾಲೇಜಿನ ಕಾಮರ್ಸ್ ವಿದ್ಯಾರ್ಥಿನಿ ಅನೀಕ್ಷಾ ಪೂಜಾರಿ 600ರಲ್ಲಿ 585 ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾಳೆ. ಅನೀಕ್ಷಾ ಪೂಜಾರಿ ಕೋಡಿ ಐಗಳ ಮನೆ ದಿ. ಅಣ್ಣಪ್ಪ ಪೂಜಾರಿ ಹಾಗೂ ಸರೋಜಾ ಪೂಜಾರಿ ಅವರ ಪುತ್ರಿಯಾಗಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೈಸೂರಿನ ಎನ್.ಐ.ಇ ಕಾಲೇಜು ಆಡಿಟೋರಿಯಂನಲ್ಲಿ ಇತ್ತಿಚಿಗೆ ಜರುಗಿದ ಕರ್ನಾಟಕ ರಾಜ್ಯ ಜ್ಯೂನಿಯರ್, ಸಬ್ ಜ್ಯೂನಿಯರ್ ಹಾಗೂ ಮಾಸ್ಟರ್ ಪವರ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ – 22ರ ಜ್ಯೂನಿಯರ್ ವಿಭಾಗದಲ್ಲಿ ಸೌಮ್ಯ ಬಿ. ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ಗೆದ್ದಿದ್ದಾಳೆ. ಪವರ್ ಲಿಫ್ಟಿಂಗ್ ಜ್ಯೂನಿಯರ್ ಚಾಂಪಿಯನ್‌ಶಿಪ್‌ನಲ್ಲಿ 63 ಕೆ.ಜಿ ಭಾರವನ್ನು ಎತ್ತುವ ಮೂಲಕ ಸೌಮ್ಯ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾಳೆ. ಈಕೆ ಬೈಂದೂರು ತಗ್ಗರ್ಸೆಯ ಬಾಬು ಪೂಜಾರಿ ಹಾಗೂ ಮೋಹಿನಿ ದಂಪತಿಗಳ ಪುತ್ರಿಯಾಗಿದ್ದು, ಬ್ರಹ್ಮಾವರ ವೀರಮಾರುತಿ ಜಿಮ್’ನಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುವೈತ್: ಸಂಘಟಕ, ರಕ್ತದಾನಿ ಸುರೇಶ್ ಶ್ಯಾಮ್ ರಾವ್ ಅವರು ದಾಖಲೆ ಪ್ರಮಾಣದಲ್ಲಿ ರಕ್ತದಾನ ಮಾಡಿರುವುದನ್ನು ಗುರುತಿಸಿ ವಿಶ್ವ ರಕ್ತದಾನಿಗಳ ದಿನದಂದು ನಡೆದ ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರ ಕಚೇರಿಯ ರಾಯಭಾರಿ ಸಿಬಿ ಜಾರ್ಜ್ ಅವರು ಸುರೇಶ್ ಅವರಿಗೆ ಗೌರವಿಸಿದರು. ಕುವೈತ್ ದೇಶದಲ್ಲಿ ಕಳೆದ 20 ವರ್ಷಗಳಿಂದ ಉದ್ಯೋಗದಲ್ಲಿರುವ ಸುರೇಶ್ ಶ್ಯಾಮ್ ರಾವ್ ಅವರು ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದಾರೆ. ಕುವೈತ್ ನಲ್ಲಿ ಹಲವಾರು ಸಂಘ-ಸಂಸ್ಥೆಗಳ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ, ಕುವೈತ್ನಲ್ಲಿ ಕನ್ನಡ ಚಲನಚಿತ್ರ ವಿತರಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಹೈಯರ್ ಪ್ರೈಮರಿ ಸ್ಕೂಲ್ ಮತ್ತು ಪದವಿಪೂರ್ವ ಕಾಲೇಜಿನ ಪಠ್ಯೇತರ ಚಟುವಟಿಕೆಗಳು ಮತ್ತು ವಿದ್ಯಾರ್ಥಿ ಸಂಸತ್ತು ಉದ್ಘಾಟನಾ ಸಮಾರಂಭ ಶನಿವಾರ ಜರುಗಿತು. ರತ್ತುಬಾಯಿ ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಆನಂದ ಎನ್. ಮದ್ದೋಡಿ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ನಾಯಕತ್ವದ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದ ಅವರು ವಿದ್ಯಾರ್ಥಿ ಸಂಸತ್ತಿನ ಮಹತ್ವ, ವಿದ್ಯಾರ್ಥಿ ಮತ್ತು ಶಿಕ್ಷಕರ ಬಾಂಧವ್ಯವದ ತಿಳಿಸಿದರು. ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಫಾದರ್ ಜೈಶನ್ ನೆಲಿವಿಲ್ಲಾ ಮಾತನಾಡಿ ನಾಯಕತ್ವದ ಗುಣವನ್ನು ವಿದ್ಯಾರ್ಥಿ ಜೀವನದಲ್ಲೇ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು ಎಂದರು. ಪಿಯುಸಿ ಪ್ರಾಂಶುಪಾಲರಾದ ರೂಬೆಲ್ ಐರಾವಲಿ, ವಿದ್ಯಾರ್ಥಿ ನಾಯಕ ಕುಮಾರ ನಿಶಾಂತ್ ಕಿಣಿ, ವಿದ್ಯಾರ್ಥಿ ನಾಯಕಿ ಕುಮಾರಿ ಅಂಕಿತಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಪೋಷಕ ಪ್ರತಿನಿಧಿಗಳಾದ ಸೋಮಸುಂದರ್, ನಿರ್ಮಲಾ ಡಯಾಸ್, ಪಠ್ಯೇತರ ಚಟುವಟಿಕೆಗಳ ಸಂಯೋಜಕರಾದ ಜಯಶ್ರೀ ಸುರೇಶ್ ಹಾಜರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜ್ಞಾನ್‌ದೇವ್ ಉಪಾಧ್ಯಾಯ-583, ಸವಿನಾ-581, ದೀಕ್ಷಾ ಎ ಶೆಟ್ಟಿ-580, ಶೆಟ್ಟಿ ಅನನ್ಯಾ ದೇವರಾಜ್-575, ದೀಕ್ಷಾ-575, ಪ್ರಜ್ವಲ್ ಪೀಟರ್ ಬೆರೆಟೋ-573, ಕೀರ್ತಿ ವಿದ್ಯಾಧರ್ ಪೈ-572, ರಜತಾ-572, ಸುನಿತಾ ಸಿಂಗ್-572, ಕೀರ್ತೆಶ್ವಿನಿ-571, ಪ್ರತೀಕ್ ಕೋತ್-570, ತ್ರಶ್ಯಾ ಅಡಪ-570, ಸೌಮ್ಯ-569, ಸುಮನಾ-567, ಕೀರ್ತಿ ಕೆ ಶೆಟ್ಟಿ-566, ಅಭಿಷೇಕ್‌ಎಸ್-564, ಸುಮಿತ್ ಪಾಟೀಲ್-564, ಪನ್ನಗಾ ಕಲ್ಕೂರ್-562, ಮತ್ತು ಶಶಾಂಕ್ ಜಿ-560 ಅಂಕಗಳನ್ನು ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಒಟ್ಟು 70 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಹಾಗೂ 27 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇಕಡ 97.14% ಫಲಿತಾಂಶ ಪಡೆದು ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾರೆ. ಈ ಸಾಧನೆಗೆ ವಿದ್ಯಾರ್ಥಿಗಳನ್ನು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ ಅಭಿನಂದಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಾನ್ವಿ ಶೆಟ್ಟಿ 593 (ಶೇ.99) ಅಂಕ ಪಡೆದು ಪರೀಕ್ಷೆಯಲ್ಲಿ ರ‍್ಯಾಂಕ್ ಗಳಿಸಿದ್ದಾಳೆ. ಪಿಸಿಎಂನಲ್ಲಿ ಶೇ.99.75 ಅಂಕ ಗಳಿಸಿದ್ದಾಳೆ. ಬೆಂಗಳೂರು ಕುಮಾರನ್ಸ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾನ್ವಿ ಶೆಟ್ಟಿ, ಮೂಲತಃ ಶಂಕರನಾರಾಯಣದ ದೊಣಗೇರಿ ದೊಡ್ಡಮನೆಯವಳಾಗಿದ್ದು, ವಿನಯ ಶೆಟ್ಟಿ ಪಡುಬೆಟ್ಟು ಬೀಡು ಹಾಗೂ ಪ್ರೀತಿ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ. ವಿವಿಧ ಸಂಗೀತ ಸ್ವರ್ಧೆಯ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದ ಸಾನ್ವಿ ಉತ್ತಮ ಹಾಡುಗಾರ್ತಿಯಾಗಿ ಗುರುತಿಸಿಕೊಂಡಿದ್ದು, ಇದೀಗ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸುವ ಮೂಲಕ ಶೈಕ್ಷಣಿಕವಾಗಿಯೂ ಸಾಧನೆ ಮಾಡಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ಥಳೀಯ ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜು ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ 94.58% ರ ಫಲಿತಾಂಶವನ್ನು ಸಾಧಿಸಿದೆ. ವಿಜ್ಞಾನ ವಿಭಾಗದಲ್ಲಿ ಹರ್ಷಿತಾ ಕಿಣಿ 591 ಅಂಕಗಳನ್ನು ಪಡೆದು ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದರೆ, ಪ್ರಗತಿ ಪೂಜಾರಿ 590 ಅಂಕ ಪಡೆದು 9ನೇ ಸ್ಥಾನಗಳಿಸಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ಗುರುರಾಜ್ 588 ಅಂಕಗಳನ್ನು ಪಡೆದು ರಾಜ್ಯಕ್ಕೆ 9ನೇ ಸ್ಥಾನ ಪಡೆದಿರುತ್ತಾನೆ ಹಾಗೂ ಪ್ರಥ್ವಿ ಎಂ. 586 ಅಂಕ ಪಡೆದು ರಾಜ್ಯಕ್ಕೆ 11ನೇ ಸ್ಥಾನ ಪಡೆದಿದ್ದಾರೆ. ಪರೀಕ್ಷೆಯನ್ನು ಬರೆದಿದ್ದ 388 ವಿದ್ಯಾರ್ಥಿಗಳ ಪೈಕಿ 179 ಮಂದಿ ವಿಶೇಷ ಶ್ರೇಣಿ ಹಾಗೂ 155 ಮಂದಿ ಪ್ರಥಮ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಹಲವು ರ‍್ಯಾಂಕ್ ಪಡೆಯುವುದರ ಮೂಲಕ ಕಾಲೇಜಿನ ಗರಿಮೆಯನ್ನು ಹೆಚ್ಚಿಸಿದ್ದಾರೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೈತ್ರೇಯಿ (594) ರಾಜ್ಯಕ್ಕೆ ಐದನೇ ರ‍್ಯಾಂಕ್, ಮನಿಷ್ ಆರ್. ಹೆಬ್ಬಾರ್ (592) ಏಳನೇ ರ‍್ಯಾಂಕ್, ಪ್ರಾಚಿ ಎನ್ (590) 9ನೇ ರ‍್ಯಾಂಕ್, ಕಾರ್ತಿಕ್ ಐತಾಳ್ (589) ಹತ್ತನೇ ರ‍್ಯಾಂಕ್ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದೀಕ್ಷಾ ಭಟ್ ಮತ್ತು ಪಂಚಮಿ ಕಿಣಿ (592) ಐದನೇ ರ‍್ಯಾಂಕ್ ಹಾಗೂ ಶ್ರೀಶ (591) 6ನೇ ರ‍್ಯಾಂಕ್, ಕೃತಿಕಾ (590) 7 ನೇ ರ‍್ಯಾಂಕ್, ಅದಿತಿ, ಶ್ರದ್ಧಾ ಸಾಲಿಯಾನ್ (589) ಎಂಟನೇ ರ‍್ಯಾಂಕ್, ದೇವಾಡಿಗ ಅಂಜಲಿ ಚಂದ್ರ, ರಕ್ಷಿತಾ ಆನಂದ ಪೂಜಾರಿ (588) ಒಂಭತ್ತನೇ ರ‍್ಯಾಂಕ್ ಗಳಿಸುವುದರ ಮೂಲಕ 12 ವಿದ್ಯಾರ್ಥಿಗಳು ರಾಜ್ಯದ ಅಗ್ರ ಸ್ಥಾನಿಯರಲ್ಲಿ ಸ್ಥಾನ ಪಡೆದಿರುವುದು ಪ್ರಶಂಸನೀಯ. ವಾಣಿಜ್ಯ ವಿಭಾಗದಲ್ಲಿ 216 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 120 ವಿದ್ಯಾರ್ಥಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: 2021-2022ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ 61.88% ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ದಕ್ಷಿಣ ಕನ್ನಡ ಮೊದಲ ಸ್ಥಾನ (88.02%) ಪಡೆದಿದ್ದು, ಎರಡನೇ ಸ್ಥಾನವನ್ನು ಉಡುಪಿ (86.38%), ಮೂರು ಹಾಗೂ ಕೊನೆಯ ಸ್ಥಾನವನ್ನು ಕ್ರಮವಾಗಿ ವಿಜಯಪುರ (77.14%) ಹಾಗೂ ಚಿತ್ರದುರ್ಗ (49.31%) ಪಡೆದುಕೊಂಡಿದೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಫಲಿತಾಂಶ ಪ್ರಕಟಿಸಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು www.karresults.nic.in ಹಾಗೂ www.pue.kar.nic.in ವೆಬ್ಸೈಟ್ ಮೂಲಕ ವೀಕ್ಷಿಸಬಹುದು. 81 ಮೌಲ್ಯಮಾಪನ ಕೇಂದ್ರದಲ್ಲಿ ಪರೀಕ್ಷೆ ನಡೆದಿತ್ತು. ಒಟ್ಟು 5,99,794 ಹೊಸ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿ 4,02,697 ವಿದ್ಯಾರ್ಥಿ ಪಾಸ್ ಆಗಿದ್ದಾರೆ ಹಾಗೂ ರಿಪೀಟರ್ಸ್ 61,838ರಲ್ಲಿ 14,403 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಇನ್ನುಳಿದಂತೆ 21,931 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, 5,866 ಮಂದಿ ಪಾಸ್ ಆಗಿದ್ದಾರೆ. ಒಟ್ಟಾರೆ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 4,22,966 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಅದರಲ್ಲಿ ವಿಜ್ಞಾನ…

Read More