ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.22: ಹಣ್ಣುಗಳ ರಾಜನೆಂದೇ ಪ್ರಖ್ಯಾತವಾದ, ಹಿರಿಯರಿಂದ ಕಿರಿಯರಿಂದ ಹಿಡಿದು ಹಿರಿಯರವರೆಗೂ ಬಾಯಯಲ್ಲಿ ನಿರೂರಿಸುವ ವಿವಿಧ ಬಗೆಯ ಮಾವಿನ ಹಣ್ಣಿನ ಮೇಳವನ್ನು ಉಡುಪಿ ದೊಡ್ಡಣಗುಡ್ಡೆ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಗ್ರಾಹಕರಿಗೆ ನೇರವಾಗಿ ರೈತರಿಂದಲೇ ನೈಸರ್ಗಿಕ ತಾಜಾ ಹಾಗೂ ಸ್ವಾದಿಷ್ಟ ಮಾವಿನ ಹಣ್ಣು ಒದಗಿಸುವುದು, ಸಾರ್ವಜನಿಕರಿಗೆ ವಿವಿಧ ಮಾವಿನ ತಳಿಗಳನ್ನು ಪರಿಚಯಿಸುವುದು, ಹವಾಮಾನ ವೈಪರೀತ್ಯದಿಂದಾಗಿ ಮಾವು ಇಳುವರಿ ನಷ್ಟದಲ್ಲಿರುವ ಬೆಳೆಗಾರರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿ. ಪಂ ಹಾಗೂ ತೋಟಗಾರಿಕೆ ಇಲಾಖೆಯಿಂದ ರಾಮನಗರ ಜಿಲ್ಲಾ ತೆಂಗು ಮತ್ತು ಮಾವು ರೈತ ಉತ್ಪಾದಕರ ಸಂಸ್ಥೆ ಆಶ್ರಯದಲ್ಲಿ ರೈತರಿಂದ ನೈಸರ್ಗಿಕವಾಗಿ ಮಾಗಿಸಿರುವ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಮೇ 21ರಿಂದ 23ರವರೆಗೆ ಆಯೋಜಿಸಿದೆ. ಮೇಳದಲ್ಲಿ 20ಕ್ಕೂ ಅಧಿಕ ಮಳಿಗೆಯನ್ನು ತೆರೆಯಲಾಗಿದೆ. ರಾಮನಗರ ಜಿಲ್ಲೆಯ ಬಾದಾಮಿ, ರಸಪುರಿ, ಮಲಗೋವಾ, ತೋತಾಪುರಿ, ಸಿಂಧೂರ, ಸಕ್ಕರೆಗುತ್ತಿ (ಶುಗರ್ಬೇಬಿ), ಬೈಗಂಪಲ್ಲಿ, ರತ್ನಗಿರಿ, ಆಲ್ಪೋನ್ಸ್ ಸಹಿತ ನಾನ ತಳಿಯ ಒಟ್ಟು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ 21: ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಯನ್ನು ಸಾಧಿಸಲು ಕಠಿಣ ಶ್ರಮ ಮತ್ತು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ನಂತರ ವಿದ್ಯಾರ್ಥಿಗಳು ತಾವು ನಿಗಧಿಪಡಿಸಿಕೊಂಡಿರುವ ನಿಗಧಿತ ಗುರಿಯನ್ನು, ಯಾವುದೇ ಸಂದರ್ಭದಲ್ಲೂ ಕೈಬಿಡದೆ ಅದರ ಸಾಧನೆಗೆ ಪ್ರಯತ್ನಿಸಬೇಕು. ನಿರಂತರವಾಗಿ ಅಧ್ಯಯನ ಹಾಗೂ ಗ್ರಂಥಾಲಯಗಳಿಗೆ ಭೇಟಿ ನೀಡಿ, ಸಾಧನೆಗೆ ಅಗತ್ಯವಿರುವ ಪುಸ್ತಕಗಳನ್ನು ಅಧ್ಯಯನ ಮಾಡಬೇಕು. ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಸುಸಜ್ಜಿತ ಮತ್ತು ಡಿಜಿಟಲ್ ಗ್ರಂಥಾಲಯ ಸೌಲಭ್ಯವಿದ್ದು, ಅದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿಡಿಪಿಐ ಗೋವಿಂದ ಮಡಿವಾಳ, ಶಿಕ್ಷಣಾಧಿಕಾರಿ ಜಾಹ್ನವಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಅಶೋಕ್ ಕಾಮತ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮಲ್ಪೆ ಸರಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶಂಕರನಾರಾಯಣದ ಮದರ್ ತೆರೆಸಾ ಮೆಮೋರಿಯಲ್ ಸ್ಕೂಲ್, ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಸಂಜನಾ ವಿ ಶೆಟ್ಟಿ ಮತ್ತು ಸನ್ನಿಧಿ ಕುಲಾಲ್ 625 ಕ್ಕೆ 624 ಅಂಕ ಪಡೆದು ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಶಾಲೆಯ 32 ಮಂದಿ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಈ ಪೈಕಿ 13 ವಿದ್ಯಾರ್ಥಿಗಳು 600ಕ್ಕೂ ಅಧಿಕ ಅಂಕ ಗಳಿಸಿದ್ದಾರೆ. 10 ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಸಂಸ್ಥೆಯ ಹೆಮ್ಮೆಗೆ ಪಾತ್ರರಾಗಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, ಮುಖ್ಯೋಪಾಧ್ಯಾಯರು ಹಾಗೂ ಬೋಧಕ ಬೋಧಕೇತರ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮೇ.20: ತಾಲೂಕಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾಜಗೋಪುರ ಸಮರ್ಪಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಶತಚಂಡಿಕಾ ಯಾಗದ ಪೂರ್ಣಾಹುತಿ ಶುಕ್ರವಾರ ದೇವಳದ ಆವರಣದಲ್ಲಿ ಜರುಗಿತು. ಪೂರ್ಣಾಹುತಿಯ ಅಂಗವಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಿ ಎಲ್ಲರ ಕಷ್ಟಗಳನ್ನು ದೂರಮಾಡಿ ಸು:ಖ ಶಾಂತಿಯನ್ನು ನೀಡಲಿ. ಯು.ಬಿ. ಶೆಟ್ಟಿ ಅವರು ಯಾವುದೇ ಅಪೇಕ್ಷೆ ಇಲ್ಲದೇ ದೇವಿಯ ಸೇವೆಯನ್ನು ಮಾಡುತ್ತಿದ್ದಾರೆ. ಈ ಪವಿತ್ರ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವುದು ಸಂತೋಷ ತಂದಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಎಲ್ಲರಿಗೂ ದೇವಿ ಒಳ್ಳೆಯದನ್ನು ಮಾಡಲಿ ಎಂದರು. ಕಾರ್ಯಕ್ರಮಕ್ಕೆ ಆಗಮಿಸಿದ ಡಿ.ಕೆ ಶಿವಕುಮಾರ್ ಅವರನ್ನು ಯು.ಬಿ. ಶೆಟ್ಟಿ ದಂಪತಿಗಳು ಹಾಗೂ ದೇವಳದ ಅರ್ಚಕರು ಸನ್ಮಾನಿಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು.ಆರ್. ಸಭಾಪತಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಶಾಲೆಯ ವಿದ್ಯಾರ್ಥಿ ಧವನ್ ಟಿ. ಪೂಜಾರಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 580 (92.8%) ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಸಂಸ್ಕತದಲ್ಲಿ 125, ಇಂಗ್ಲಿಷ್ 98, ಕನ್ನಡ 100, ಗಣಿತ 86, ವಿಜ್ಞಾನ 75, ಸಮಾಜ ವಿಜ್ಞಾನದಲ್ಲಿ 76 ಅಂಕ ಗಳಿಸಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆ. ಈತ ಯಡ್ತರೆಯ ದುರ್ಗಾಂಬಾ ಪ್ರಿಂಟರ್ಸ್ ಮಾಲಿಕ ತಿಮ್ಮಪ್ಪ ಪೂಜಾರಿ ಹಾಗೂ ಅಂಬಿಕಾ ದಂಪತಿಗಳ ಪುತ್ರನಾಗಿದ್ದಾನೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ.19: ತಾಲೂಕಿನ ಬೀಜಾಡಿ ರಾಷ್ಟ್ರೀಯ ಹೆದ್ದಾರಿ ಬಸ್ಸು ತಂಗುದಾಣದ ಸಮೀಪದಲ್ಲಿರುವ ಉಪಾಧ್ಯಾಯ ಕಾಂಪ್ಲೆಕ್ಸ್ನಲ್ಲಿನ ಶ್ರೀ ದುರ್ಗಾ ಜ್ಯುವೆಲ್ಲರ್ಸ್ನ ಶೆಟರ್ ಮುರಿದು ಚಿನ್ನ-ಬೆಳ್ಳಿ ದೋಚಲು ಯತ್ನಿಸಿದ ಕಳ್ಳರ ಕೃತ್ಯ ಹಾಗೂ ಮನೆ ಮನೆಗೆ ಪತ್ರಿಕೆ ಹಾಕುವ ಹುಡುಗನ ಸಮಯ ಪ್ರಜ್ಞೆಯಿಂದ ಲಕ್ಷಾಂತರ ಮೌಲ್ಯದ ಭಾರೀ ಕಳ್ಳತನ ತಪ್ಪಿದಂತಾಗಿದೆ. ಬುಧವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ರಾಷ್ಟ್ರೀಯ ಹೆದ್ದಾರಿ ಕುಂಭಾಸಿ ಕಡೆಯಿಂದ ಶೀಪ್ಟ್ ಕಾರಿನಲ್ಲಿ ಬಂದ ದರೋಡೆಕೋರರ ತಂಡ ಬೀಜಾಡಿ ಐಸಿರಿ ಮೊಬೈಲ್ ಶಾಪ್ನ ಶೆಟರ್ ಮುರಿದು 15 ಸಾವಿರ ನಗದು, ಸುಮಾರು 25 ಸಾವಿರ ಬೆಲೆ ಬಾಳುವ ಮೊಬೈಲ್, 30 ಸಾವಿರ ಮೌಲ್ಯದ ಮೊಬೈಲ್ ಬಿಡಿಭಾಗಗಳನ್ನು ಕಳವು ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಬೀಜಾಡಿ ಅಜಯ ದಿನ ನಿತ್ಯ ತನ್ನ ಕಾಯಕದಂತೆ ಮನೆ ಮನೆಗೆ ಪೇಪರ್ ಹಾಕಲು ಬೈಸಿಕಲ್ನಲ್ಲಿ ಹೋಗುವಾಗ ಮನೆಯಿಂದ ಕೆಲವೇ ದೂರದ ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲೇ ಮಾರಕಾಯುಧಗಳನ್ನು ಹಿಡಿದು ನಿಂತ ವ್ಯಕ್ತಿ ಹಾಗೂ ಮೊಬೈಲ್ ಶಾಪ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಮೂವರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಸಾಧನೆಗೈದಿದ್ದಾರೆ. ಕುಂದಾಪುರ ತಾಲೂಕಿನ ಕಾಳಾವರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಶಾ 625ರಲ್ಲಿ 625 ಪಡೆದಿದ್ದಾಳೆ. ಈಕೆ ಸಳ್ವಾಡಿ ಶ್ರೀನಿವಾಸ ಜೋಗಿ ಆಶಾ ದಂಪತಿಗಳ ಪುತ್ರಿ. ಬೈಂದೂರು ತಾಲೂಕಿನ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಕ್ಷತಾ ನಾಯ್ಕ್ 625ರಲ್ಲಿ 625 ಪಡೆದಿದ್ದಾಳೆ. ಈಕೆ ಶಿಕ್ಷಕ ದಂಪತಿ ನಾಗೇಶ್ ನಾಯ್ಕ್ ಹಾಗೂ ಶಾಲಿನಿ ಇವರ ಪುತ್ರಿ ಕುಂದಾಪುರ ತಾಲೂಕಿನ ಸಿದ್ಧಾಪುರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ವೈಷ್ಣವಿ ವಿ. ಶೆಟ್ಟಿ 625ರಲ್ಲಿ 625 ರಾಜ್ಯದಲ್ಲಿ ಪಡೆದಿದ್ದಾಳೆ. ಈಕೆ ಅಲ್ಬಾಡಿ ವಸಂತ ಕುಮಾರ್ ಶೆಟ್ಟಿ ಹಾಗೂ ಸುಷ್ಮಾ ವಿ. ಶೆಟ್ಟಿ ಅವರ ಪುತ್ರಿ. ರಾಜ್ಯದಲ್ಲಿ ಟಾಪರ್ ಆಗಿರುವ 145 ವಿದ್ಯಾರ್ಥಿಗಳ ಪೈಕಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಮೂವರು ವಿದ್ಯಾರ್ಥಿನಿಯರು ಇರುವುದು ಹೆಮ್ಮೆಯ ಸಂಗತಿಯಾಗಿದೆ. ಇದನ್ನೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ತಾಲೂಕಿನ ಸಿದ್ಧಾಪುರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ವೈಷ್ಣವಿ ವಿ. ಶೆಟ್ಟಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಈಕೆ 625ರಲ್ಲಿ 625 ಅಂಕ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈಕೆ ಅಲ್ಬಾಡಿ ವಸಂತ ಕುಮಾರ್ ಶೆಟ್ಟಿ ಹಾಗೂ ಸುಷ್ಮಾ ವಿ. ಶೆಟ್ಟಿ ಅವರ ಪುತ್ರಿ. ಇದನ್ನೂ ಓದಿ:► ಎಸ್ಎಸ್ಎಲ್ಸಿ ಪರೀಕ್ಷೆ: ನಾಗೂರು ಸಂದೀಪನ್ ಶಾಲೆಯ ಅಕ್ಷತಾ ನಾಯ್ಕ್ ರಾಜ್ಯಕ್ಕೆ ಟಾಪರ್ – https://kundapraa.com/?p=59339 .► ಎಸ್ಎಸ್ಎಲ್ಸಿ ಪರೀಕ್ಷೆ: ಕಾಳವಾರ ಪ್ರೌಢಶಾಲೆಯ ನಿಶಾ ರಾಜ್ಯಕ್ಕೆ ಟಾಪರ್ – https://kundapraa.com/?p=59335 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: 2021-22ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ತಾಲೂಕಿನ ನಾಗೂರು ಸಂದೀಪನ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಕ್ಷತಾ ನಾಯ್ಕ್ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಈಕೆ 625ರಲ್ಲಿ 625 ಅಂಕ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ. ಈಕೆ ಶಿಕ್ಷಕ ದಂಪತಿ ನಾಗೇಶ್ ನಾಯ್ಕ್ ಹಾಗೂ ಶಾಲಿನಿ ಇವರ ಪುತ್ರಿ ಪರೀಕ್ಷೆಯ ಮೊದಲ ಎರಡು ತಿಂಗಳಿಂದ ತಯಾರಿ ನಡೆಸಿ ಅಭ್ಯಾಸ ಆರಂಭಿಸಿದ್ದರಿಂದ ಉತ್ತರ ಪತ್ರಿಕೆ ಬರೆಯುವಾಗ ಯಾವುದೇ ರೀತಿಯ ಮಾನಸಿಕ ಒತ್ತಡವಾಗಲೀ, ಭಯವಾಗಲೀ ಆಗಲಿಲ್ಲಾ. ಎಲ್ಲಾ ಪಠ್ಯಗಳನ್ನು ಸರಿಯಾದ ಕ್ರಮದಲ್ಲಿ ಓದಿ ಅರ್ಥಮಾಡಿಕೊಳ್ಳುತ್ತಿದ್ದೆ,ಮುಂದೆ ವಿಜ್ಞಾನ ವಿಷಯ ಆಯ್ದುಕೊಂಡು, ಎಂ.ಬಿ.ಬಿ.ಎಸ್ ಮಾಡುವ ಆಸೆ ಇದೆ ಎಂದಿದ್ದಾಳೆ. ಇದನ್ನೂ ಓದಿ:► ಎಸ್ಎಸ್ಎಲ್ಸಿ ಪರೀಕ್ಷೆ: ಕಾಳವಾರ ಪ್ರೌಢಶಾಲೆಯ ನಿಶಾ ರಾಜ್ಯಕ್ಕೆ ಟಾಪರ್ – https://kundapraa.com/?p=59335 .► ಎಸ್ಎಸ್ಎಲ್ಸಿ ಪರೀಕ್ಷೆ: ಸಿದ್ಧಾಪುರ ಪ್ರೌಢಶಾಲೆಯ ವೈಷ್ಣವಿ ಶೆಟ್ಟಿ ರಾಜ್ಯಕ್ಕೆ ಟಾಪರ್ – https://kundapraa.com/?p=59343 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕಿನ ಕಾಳಾವರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ 625ರಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿದ್ದಾಳೆ. ರಾಜ್ಯದಲ್ಲಿ ಟಾಪರ್ ಆಗಿರುವ 145 ವಿದ್ಯಾರ್ಥಿಗಳ ಪೈಕಿ ನಿಶಾ ಕೂಡ ಓರ್ವಳಾಗಿದ್ದಾಳೆ. ಈಕೆ ಕಾಳಾವರ-ಸಳ್ವಾಡಿ ನಿವಾಸಿ ಶ್ರೀನಿವಾಸ ಜೋಗಿ, ಆಶಾ ದಂಪತಿಗಳ ಪುತ್ರಿ. ಇದನ್ನೂ ಓದಿ:► ಎಸ್ಎಸ್ಎಲ್ಸಿ ಪರೀಕ್ಷೆ: ನಾಗೂರು ಸಂದೀಪನ್ ಶಾಲೆಯ ಅಕ್ಷತಾ ನಾಯ್ಕ್ ರಾಜ್ಯಕ್ಕೆ ಟಾಪರ್ – https://kundapraa.com/?p=59339 .► ಎಸ್ಎಸ್ಎಲ್ಸಿ ಪರೀಕ್ಷೆ: ಸಿದ್ಧಾಪುರ ಪ್ರೌಢಶಾಲೆಯ ವೈಷ್ಣವಿ ಶೆಟ್ಟಿ ರಾಜ್ಯಕ್ಕೆ ಟಾಪರ್ – https://kundapraa.com/?p=59343 .
