Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.10: ಜಿಲ್ಲೆಯಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್‌ನ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಒಟ್ಟು 99.48% ಮತದಾನ ನಡೆದಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ 1203 ಪುರುಷ 1289 ಮಹಿಳಾ ಸದಸ್ಯರು ಸೇರಿದಂತೆ ಒಟ್ಟು 2492 ಮಂದಿ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಆರಂಭಗೊ೦ಡ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿದ್ದು, 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 43.91 % ಮತದಾನ ನಡೆದಿದ್ದು, 2505 ಮಂದಿ ಮತದಾರರಲ್ಲಿ 1100 ಮಂದಿ ಮತದಾನ ಮಾಡಿದ್ದರು. ಕುಂದಾಪುರ ತಾಲೂಕಿನ ಆಲೂರು, ಚಿತ್ತೂರು,74 – ಉಳ್ಳೂರು, ಹಾರ್ದಳ್ಳಿ-ಮಂಡಳ್ಳಿ. ಬ್ರಹ್ಮಾವರ ತಾಲೂಕಿನ ಕೋಟತಟ್ಟು,ಬಾರ್ಕೂರು. ಹೆಬ್ರಿ ತಾಲೂಕಿನ ಮಾಡಾಮಕ್ಕಿ, ನಾಡ್ಪಾಲು. ಕಾರ್ಕಳ ತಾಲೂಕಿನ ಎರ್ಲಪಾಡಿ, ಹಿರ್ಗಾನ, ಕೆರ್ವಾಶೆ, ದುರ್ಗಾ, ಪಳ್ಳಿ, ನಿಟ್ಟೆ, ನಲ್ಲೂರು, ರೆಂಜಾಳ, ಬೋಳ, ನ0ದಳಿಕೆ, ಮು೦ಡ್ಕೂರು ಗ್ರಾಮ ಪಂಚಾಯತ್ ಗಳಲ್ಲಿ ಎಲ್ಲಾ ಮತದಾರರು ಮತ ಚಲಾಯಿಸಿದ್ದು, 100% ಮತದಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿರುಸಿನ ಮತನದಾನ ನಡೆದಿದ್ದು ಮಧ್ಯಾಹ್ನ 12 ಗಂಟೆಯ ತನಕ ಶೇ.94.69% ಮತದಾನವಾಗಿದೆ. ಜಿಲ್ಲೆಯ ಏಳು ತಾಲೂಕುಗಲ್ಲಿ ಒಟ್ಟು 1209 ಪುರುಷ ಹಾಗೂ 1296 ಮಹಿಳಾ ಮತದಾರರಿದ್ದು ಬೆಳಿಗ್ಗೆ 10 ಗಂಟೆಯ ತನಕ 43.91% ಮತದಾನ ನಡೆದಿದ್ದರೆ, 12 ಗಂಟೆಯ ವೇಳೆ 94.69% ಮತದಾನವಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವಿಧಾನ ಪರಿಷತ್ ಚುನಾವಣೆಯಲ್ಲಿ ಮತಚಲಾಯಿಸುವ ಮುನ್ನ ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯರು ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಭಾವಚಿತ್ರವನ್ನು ಮುಖವಾಡವಾಗಿ ಧರಿಸಿ ಮತದಾನ ಕೇಂದ್ರಕ್ಕೆ ತೆರಳಿದ್ದು ಗಮನ ಸೆಳೆಯಿತು. ಕೊಟತಟ್ಟು ಗ್ರಾಮ ಪಂಚಾಯತಿ ಕೋಟ ಶ್ರೀನಿವಾಸ ಪೂಜಾರಿ ಅವರ ಹುಟ್ಟೂರಾಗಿದ್ದು, ಪಂಚಾಯತಿಯಲ್ಲಿ 7 ಮಹಿಳಾ ಸದಸ್ಯರು ಹಾಗೂ 6 ಮಂದಿ ಪುರಷ ಸದಸ್ಯ ಮತದಾರರಿದ್ದು, ಮತದಾನಕ್ಕೂ ಮುನ್ನ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿಯಾಗಿ ಶುಭಕೋರಿದ್ದಾರೆ. ಈ ಬಗ್ಗೆ ಸಚಿವ ಹಾಗೂ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ತಮ್ಮ ಸಾಮಾಜಿಕ ಸೋಶಿಯಲ್ ಹಾಂಡಲ್ಸ್’ನಲ್ಲಿ ‘ಇವರ ಪ್ರೀತಿಗೆ ಧನ್ಯವಾದಗಳು ಎಂಬ ಪದಗಳೂ ಕನಿಷ್ಠವಾಗಬಹುದು’ ಎಂದು ಬರೆದುಕೊಂಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಜ್ಬೇಕಿಸ್ತಾನ್‌ನಲ್ಲಿ ನಡೆದ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್ ವೆಯ್ಟ್ ಲಿಫ್ಟಿಂಗ್ ವಿಭಾಗದಲ್ಲಿ ತಾಲೂಕಿನ ವಂಡ್ಸೆ ಜೆಡ್ಡುವಿನ ಗುರುರಾಜ ಪೂಜಾರಿ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಗುರುರಾಜ್ ಮೊದಲ ಬಾರಿ ವೆಯ್ಟ್ ಲಿಫ್ಟಿಂಗ್‌ನಲ್ಲಿ 61 ಕೇಜಿ ವಿಭಾಗದಲ್ಲಿ ಸ್ಪರ್ಧಿಸಿದ್ದಾರೆ. 117 ಸ್ನ್ಯಾಚ್, 148 ಕ್ಲೀನ್ & ಜೆರ್ಕ್ ಪಾಯಿಂಟ್ ದಾಖಲಿಸಿ ಬೆಳ್ಳಿ ಪದಕ ಗೆದ್ದುಕೊಂಡರು. ಉಜ್ಬೇಕಿಸ್ತಾನ್‌ನ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್, 2022ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಗೇಮ್ಸ್‌ನ ಅರ್ಹತಾ ಸುತ್ತಿನ ಆಟವಾಗಿದೆ. ಗುರುರಾಜ್ ತಾಲೂಕು ವಂಡ್ಸೆ ಗ್ರಾಮ ಜೆಡ್ಡು ಮಹಾಬಲ ಪೂಜಾರಿ ಹಾಗೂ ಪದ್ದು ಪೂಜಾರಿ ಪುತ್ರ ಗುರುರಾಜ್ ವಾಯುಸೇನೆ ಉದ್ಯೋಗಿಯಾಗಿದ್ದಾರೆ. ಇದನ್ನೂ ಓದಿ:► ಕುಂದಾಪುರ ಚಿತ್ತೂರಿನ ಗುರುರಾಜ್ ಪೂಜಾರಿಗೆ ಏಕಲವ್ಯ ಪ್ರಶಸ್ತಿ – https://kundapraa.com/?p=27689 .► ಕಾಮನ್ವೆಲ್ತ್ ಗೇಮ್ಸ್: ವೆಯ್ಟ್ ಲಿಫ್ಟಿಂಗ್’ನಲ್ಲಿ ಬೆಳ್ಳಿ ಗೆದ್ದ ಕುಂದಾಪುರದ ಗುರುರಾಜ್ ಪೂಜಾರಿ – https://kundapraa.com/?p=28094 .► ಕಾಮನ್‌ವೆಲ್ತ್ ವೇಯ್ಟ್ ಲಿಫ್ಟಿಂಗ್: ಕುಂದಾಪುರ ಗುರುರಾಜ್ ಪೂಜಾರಿಗೆ ಚಿನ್ನ – https://kundapraa.com/?p=18493 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಡಿ.10ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ನ ದ್ವೆವಾರ್ಷಿಕ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ರೀತಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. ಅವರು ಇಂದು ಉಡುಪಿ ತಾಲೂಕು ಕಚೇರಿಯಲ್ಲಿ, ವಿಧಾನಪರಿಷತ್ ಚುನಾವಣೆಯ ಮಸ್ಟರಿಂಗ್ ಕಾರ್ಯಗಳನ್ನು ವೀಕ್ಷಿಸಿ ಮಾತನಾಡಿ ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ, ಮತದಾನ ಪ್ರಕ್ರಿಯೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚುನಾವಣಾ ಕರ್ತವ್ಯದಲ್ಲಿ ಭಾಗವಹಿಸುವ ಎಲ್ಲಾ ಸಿಬ್ಬಂದಿಗಳು ಮತ್ತು ಮೈಕ್ರೋ ಅಬ್ಸರ್ವರ್ಗಳಿಗೆ ತರಬೇತಿಯನ್ನು ನೀಡಲಾಗಿದೆ ಎಂದರು. ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರು ಸೇರಿದಂತೆ ಒಟ್ಟು 2505 ಮಂದಿ ಮತದಾರರು ತಮ್ಮ ಮತ ಚಲಾಯಿಸಲಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಗೆ ಬುಧವಾರ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಎನ್.ನಾಗೂರ ಭೇಟಿ ನೀಡಿ ಶಿಕ್ಷಕರ ಕಾರ್ಯವೈಖರಿ ಹಾಗೂ ಶಾಲೆಯ ಭೌತಿಕ ಪರಿಸರದ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿ, ಯಶಸ್ಸುಗಳಿಸಲು ನಿರಂತರ ಪರಿಶ್ರಮ ಅಗತ್ಯ. ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ತಂದೆ-ತಾಯಿ ಗುರುವಿನ ಪಾತ್ರ ಅತಿ ಮುಖ್ಯವಾದದ್ದು. ತಂದೆ-ತಾಯಿ ಮಗುವಿಗೆ ಜೀವ ಕೊಟ್ಟಿದ್ದರೆ ಗುರು ಮಗುವಿನ ಜೀವನವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಎಲ್ಲರಿಗೂ ಗೌರವ ನೀಡುವುದು ವಿದ್ಯಾರ್ಥಿಗಳ ಆದ್ಯ ಕರ್ತವ್ಯ ಎಂದ ಅವರು ಆರೋಗ್ಯದ ಬಗ್ಗೆ ಸದಾ ಜಾಗೃತೆ ವಹಿಸಿ ಎಂದರು. ಈ ಸಂದರ್ಭದಲ್ಲಿ ಶಾಖೆಯ ಮುಖ್ಯ ಶಿಕ್ಷಕರಾದ ಆನಂದ್ ಮದ್ದೊಡಿ ಹಾಗೂ ಶಿಕ್ಷಕ ವೃಂದದವರು ಹಾಜರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೆಂಡತಿಯ ತಂಗಿಯ ಮೇಲೆ ಅತ್ಯಾಚಾರಗೈದು ಬಂಧಿತನಾಗಿದ್ದ ಆರೋಪಿ ಮೇಲಿನ ಆಪಾದನೆ ಸಾಬೀತಾಗಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿನ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ಡಿ.9ರಂದು ತೀರ್ಪು ಪ್ರಕಟಿಸಿದ್ದು, ಅಪರಾಧಿ ಸುರೇಶ್ ಮರಾಠಿಗೆ 10 ವರ್ಷ ಜೈಲು ಶಿಕ್ಷೆ, 20 ಸಾವಿರ ದಂಡ ವಿಧಿಸಿದ್ದು ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಸಜೆ ವಿಧಿಸಲಾಗಿದೆ. 2018ರಲ್ಲಿ ಬೈಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುರೇಶ್ ಮರಾಠಿ ಎಂಬಾತ (29) ತನ್ನ ಹೆಂಡತಿ ತಂಗಿಯನ್ನು ಕಾಡಿಗೆ ಕರೆದೊಯ್ದು ಅಲ್ಲಿನ ಮರವೊಂದರ ಮೇಲೆ ಗುಡಿಸಲು ಸಿದ್ದಪಡಿಸಿ ನಿರಂತರವಾಗಿ ಮೂರು ದಿನಗಳ ಕಾಲ ಆಕೆ ಮೇಲೆ ಅತ್ಯಾಚಾರ ನಡೆಸಿದ್ದ. 17 ವರ್ಷ ಪ್ರಾಯದ ಸಂತ್ರಸ್ತ ಯುವತಿ ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೋಕ್ಸೋ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ವಿಚಾರಣೆಗಾಗಿ 2018ನೇ ಇಸವಿಯ ಅಕ್ಟೋಬರ್ ತಿಂಗಳಿನಲ್ಲಿ ಉಡುಪಿ ಫೋಕ್ಸೋ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಪಟ್ಟಣ ಪಂಚಾಯತ್ ರಚನೆಗೆ ಸಂಬಂಧಿಸಿದಂತೆ, 2011ರ ಜನಗಣತಿಯ ಜನಸಂಖ್ಯೆಯ ಆಧಾರದ ಮೇಲೆ ಕ್ಷೇತ್ರ ವಿಂಗಡಣೆ ಮಾಡುವ ಕುರಿತು, ಉಡುಪಿ ಜಿಲ್ಲಾಧಿಕಾರಿಗಳು, ಬೈಂದೂರು ಪಟ್ಟಣ ಪಂಚಾಯತ್ನ ಎಲ್ಲಾ 20 ವಾರ್ಡುಗಳ ಪ್ರಸ್ತಾವಿತ ಕ್ಷೇತ್ರ ವಿಂಗಡಣೆ ಮಾಡುವ ಪೂರ್ವದಲ್ಲಿ ಸಾರ್ವಜನಿಕರು ಸಲ್ಲಿಸಲ್ಪಡುವ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ವಾರ್ಡ್ಗಳ ಕ್ಷೇತ್ರ ವಿಂಡಣೆಯನ್ನು ಅಂತಿಮ ಗೊಳಿಸಬೇಕಾಗಿರುವುದರಿಂದ ಎಲ್ಲಾ ವಾರ್ಡ್ಗಳ ವ್ಯಾಪ್ತಿಯ ಪ್ರದೇಶವನ್ನು ಗಡಿ ಗುರುತುಗಳ ಸಮೇತ ಅಧಿಸೂಚನೆ ಹೊರಡಿಸಿರುತ್ತಾರೆ. ಪ್ರತಿಯೊಂದು ವಾರ್ಡಿನ ಕ್ಷೇತ್ರದ ಗಡಿ ಗುರುತು, ಮನೆ ನಂಬ್ರ ಇತ್ಯಾದಿ ವಿವರಗಳು ಬೈಂದೂರು ಪಟ್ಟಣ ಪಂಚಾಯತ್ ಹಾಗೂ ತಾಲೂಕು ಕಛೇರಿಗಳಲ್ಲಿ ಲಭ್ಯವಿದ್ದು, ಸಾರ್ವಜನಿಕರು ತಮಗೆ ಬೇಕಾದ ಮಾಹಿತಿಗಳನ್ನು ಪಡೆಯಬಹುದಾಗಿದೆ. ಕ್ಷೇತ್ರ ವಿಂಗಡಣೆ ಕುರಿತು ಸಂಬಂಧಪಟ್ಟ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿರುವ ಸಾರ್ವಜನಿಕರು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಥವಾ ಸಲಹೆ ಸೂಚನೆಗಳು ಇದ್ದಲ್ಲಿ ಡಿಸೆಂಬರ್ 22ರ ಒಳಗೆ, ಸೂಕ್ತ ದಾಖಲೆ ಹಾಗೂ ಸಂಪೂರ್ಣ ವಿಳಾಸದೊಂದಿಗೆ ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ, ಬೈಂದೂರು ತಾಲೂಕು ಕಛೇರಿಗೆ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.9: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ, ಕೊರೋನಾ ಮಾರ್ಗಸೂಚಿಯ ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ಮುಂದಿನ ಆದೇಶದ ವರೆಗೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿದ್ದಾರೆ. ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 500 ಜನರಿಗೆ ಸೀಮಿತಗೊಳಿಸಲಾಗಿದ್ದು, ಇಂತಹ ಸಂದರ್ಭಗಳಲ್ಲಿ ಕೊವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇದು ಸಂಘಟಕರ ಹಾಗೂ ವ್ಯವಸ್ಥಾಪಕರ ಜವಾಬ್ದಾರಿಯಾಗಿರುತ್ತದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಸುವ ಸಾಂಸ್ಕೃತಿಕ ಚಟುವಟಿಕೆ, ಹಬ್ಬ ಮತ್ತು ಸಮಾರಂಭಗಳನ್ನು 2022 ಜನವರಿ 15 ರ ವರೆಗೆ ಮುಂದೂಡಬೇಕು. ಶಾಲೆ, ಕಾಲೇಜುಗಳಿಗೆ ತೆರಳುವ 18 ವರ್ಷದೊಳಗಿನ ಮಕ್ಕಳ ಪೋಷಕರು ಕಡ್ಡಾಯವಾಗಿ ಎರಡು ಡೋಸ್ ಕೋವಿಡ್ -19 ಲಸಿಕೆಯನ್ನು ಪಡೆದಿರಬೇಕು. ಎರಡು ಡೋಸ್ ಕೊರೋನಾ ಲಸಿಕೆ ಪಡೆದಿರುವ ವ್ಯಕ್ತಿಗಳಿಗೆ ಮಾತ್ರ ಮಾಲ್, ಚಿತ್ರ ಮಂದಿರಗಳಲ್ಲಿ ಪ್ರವೇಶಕ್ಕೆ ಅವಕಾಶ ನೀಡಬೇಕು. ಈ ಆದೇಶಗಳನ್ನು ಪಾಲಿಸದೇ ಇರುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, ಡಿಸಾಸ್ಟರ್ ಮ್ಯಾನೇಜ್ಮೆಂಟ್ ಆಕ್ಟ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀರಾಮ ಭಜನ ಸಂಕೀರ್ತನೆ ಸಪ್ತಾಹದ ಶತಮಾನೋತ್ಸವಕ್ಕೆ ಕಾಶೀಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಅವರು ಬುಧವಾರ ದೀಪ ಪ್ರಜ್ವಲನಗೈದು ಆಶೀರ್ವಚಿಸಿದರು. ಅನಂತರ ಭಜನ ಸಪ್ತಾಹ ಆರಂಭಗೊಂಡಿದ್ದು ಡಿ. 15ರ ವರೆಗೆ ನಡೆಯಲಿದೆ. ಪ್ರತಿದಿನ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಗಳೊಂದಿಗೆ ಸಂಗೀತ ಕಲಾವಿದರಿಂದ, ಊರ ಪರವೂರ ಭಜನ ತಂಡಗಳಿಂದ ನಿರಂತರ ಭಜನೆ 7 ದಿನಗಳ ಕಾಲ ನಡೆಯಲಿದೆ. ಭಜನ ಸಪ್ತಾಹ ಶತಮಾನೋತ್ಸವದ ಸಂಭ್ರಮದಿಂದ ನಡೆಸಲು ಶತಮಾನೋತ್ಸವ ಸಮಿತಿ ಅಧ್ಯಕ್ಷ ಪ್ರಸನ್ನ ಪ್ರಭು, ಕಾರ್ಯದರ್ಶಿ ಎಚ್. ಶಾಂತಾರಾಮ ಪೈ, ಖಜಾಂಚಿ ಕೆ. ಮಧುಸೂದನ್ ಭಟ್, ಮೊಕ್ತಸರ ಕೆ. ಮೋಹನದಾಸ ಶೆಣೈ ಮೊದಲಾದವರು ಉಪಸ್ಥಿತರಿದ್ದರು. ಭಜನ ಸಪ್ತಾಹದಲ್ಲಿ ಪ್ರತಿದಿನ ಸಾಯಂಕಾಲ 6.30 ರಿಂದ 8ರ ತನಕ ವಿಶೇಷ ಆಹ್ವಾನಿತ ಸಂಗೀತಗಾರರಿಂದ ಭಜನೆ ನಡೆಯುತ್ತಿದೆ. ವಿಜಯ್ ಕುಮಾರ್ ಪಾಟೀಲ್ ಧಾರವಾಡ, ಅನಂತ ಕುಲಕರ್ಣಿ ಬಾಗಲಕೋಟೆ, ಬಸ್ತಿ ಕವಿತಾ ಶೆಣೈ ಮಂಗಳೂರು, ವೆಂಕಟೇಶ ಹೆಗ್ಡೆ ಮುಂಬಯಿ, ವಿದ್ವಾನ್…

Read More