Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಯಿಂಗ್ ವಾಹನದ ಹಿಂಭಾಗ ಜಾನುವಾರು ಕಳೇಬರ ಕಟ್ಟಿ ಎಳೆದೊಯ್ದ ಹೆದ್ದಾರಿ ಗುತ್ತಿಗೆದಾರ ಕಂಪೆನಿಯ ವಿರುದ್ದ ಹಿಂದೂ ಹಿತರಕ್ಷಣ ವೇದಿಕೆ ಬೈಂದೂರು ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡ, ಹಿಂದೂ ಜಾಗರಣ ವೇದಿಕೆ, ಸ್ವದೇಶಿ ಬಳಗ ಹಾಗೂ ಇನ್ನಿತರ ಹಿಂದೂಪರ ಸಂಘಟನೆಗಳಿಂದ ಸೋಮವಾರ ಶಿರೂರು ಟೋಲ್ ಪ್ಲಾಜಾ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ವಿಶ್ವ ಹಿಂದೂ ಪರಿಷತ್ – ಬಜರಂಗದಳದ ಜಿಲ್ಲಾ ಉಪಾಧ್ಯಕ್ಷ ಶ್ರೀಧರ ಬಿಜೂರು ಜಾನುವಾರುಗಳ ಕಳೇಬರವನ್ನು ಪೈಶಾಚಿಕವಾಗಿ ಏಳೆದೊಯ್ದ ಹೆದ್ದಾರಿ ಗುತ್ತಿಗೆದಾರ ಕಂಪೆನಿಯ ಕೃತ್ಯ ಹೇಯವಾಗಿದೆ ಎಂದು ಕಿಡಿಕಾರಿದರು. ಶಿರೂರು ಟೋಲ್ ಗೇಟ್‌ನಲ್ಲಿ ನಿಗದಿಗಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದು ಇವುಗಳನ್ನು ಆದಷ್ಟು ಬೇಗ ಸರಿಪಡಿಸಬೇಕು. ಒಂದೊಮ್ಮೆ ಇವುಗಳನ್ನು ಸರಿಪಡಿಸದಿದ್ದಲ್ಲಿ ವಿ.ಹಿ.ಪ ಹಾಗೂ ವಿವಿಧ ಸಂಘಟನೆಯ ವತಿಯಿಂದ ಶಿರೂರು ಟೋಲ್ ಪ್ಲಾಜಾದ ಮುಂದೆ ಧರಣಿ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದರು. ವಿ.ಹಿ.ಪ ಬಜರಂಗದಳ ಮುಖಂಡ ಜಗದೀಶ ಕೊಲ್ಲೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸತತ ಮೂರು ಬಾರಿ ದಕ್ಷಿಣ ಕನ್ನಡ ಮತ್ತು ಉಡುಪಿ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ಸಚಿವರಾಗಿ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ಭಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಡಿ.10ರ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತವನ್ನು ನೀಡಿ ಗೆಲ್ಲಿಸಲು ಚುನಾಯಿತ ಪ್ರತಿನಿಧಿಗಳು ಶ್ರಮವಹಿಸಬೇಕಿದೆ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ಸದನದಲ್ಲಿ ದೀನ ದಲಿತರ, ಬಡವರ, ಹಿಂದುಳಿದ ವರ್ಗದವರ ಹಾಗೂ ಅಲ್ಪಸಂಖ್ಯಾತರ ಧ್ವನಿಯಾಗಿ ಸರ್ಮಥವಾಗಿ ಕಾರ್ಯನಿರ್ವಹಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರು ಪಂಚಾಯತ್ ರಾಜ್ ಬಗ್ಗೆ ಅಪಾರ ಅನುಭವವುಳ್ಳವರು. ಹಿಂದುಳಿದ ವರ್ಗದ ನಾಯಕರಾಗಿ ದಕ್ಷ, ಪ್ರಾಮಾಣಿಕ, ಸರಳ ಸಜ್ಜನಿಕೆಯ ಮೂಲಕ ಹೆಸರಾದವರು. ಮತ್ತೊಮ್ಮೆ ಅವರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವ ಜವಾಬ್ದಾರಿ ಚುನಾಯಿತ ಪ್ರತಿನಿಧಿಗಳದ್ದಾಗಿದೆ ಎಂದರು. ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಶ್ರಮ:ಪ್ರಧಾನಿ ನರೇಂದ್ರ ಮೋದಿಜಿಯವರ ಪರಿಕಲ್ಪನೆಯ ಸ್ಮಾರ್ಟ್ ಸಿಟಿಯ ಜೊತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್‌ರವರ ಮಹಾ ಪರಿನಿರ್ವಾಣಾ ದಿನ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಎಸ್. ಅರುಣ್‌ಪ್ರಕಾಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಡಾ. ಬಿ. ಆರ್. ಅಂಬೇಡ್ಕರ್‌ರವರ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಗೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳಾದ ದ್ವಿತೀಯ ವಾಣಿಜ್ಯ ವಿಭಾಗದ ದೀಕ್ಷಾ, ಪ್ರಥಮ ಕಲಾ ವಿಭಾಗದ ಕೀರ್ತನಾ ತಮ್ಮ ಅನಿಸಿಕೆಯನ್ನು ಹಂಚಿಕೊಂಡರು ಹಾಗೂ ದ್ವಿತೀಯ ಕಲಾ ವಿಭಾಗದ ಸಿಂದುಶ್ರೀ ಮಯ್ಯ ದೇಶಭಕ್ತಿಗೀತೆ ಹಾಡಿದರು. ಉಪನ್ಯಾಸಕರಾದ ಗೋಪಾಲಕೃಷ್ಣ ಜಿ.ಬಿ, ಎಂ ವಾಸುದೇವ ಉಡುಪ, ಜ್ಯೀತಿ ಎ ಶೆಟ್ಟಿ, ಪೂರ್ಣಿಮಾ ಎನ್ ಜೋಯಿಸ್, ಪ್ರ.ದ.ಸಹಾಯಕರಾದ ದಿನಕರ ಶೆಟ್ಟಿ, ಹಾಗೂ ಯತೀಶ್ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ ನಿರೂಪಿಸಿ ಸ್ವಾಗತಿಸಿದರು, ಗಣಕಶಾಸ್ತ್ರ ಉಪನ್ಯಾಸಕ ರಾಮನಾಯ್ಕ ಕೆ.ಬಿಯವರು ವಿದ್ಯಾರ್ಥಿಗಳಿಗೆ ಮಧ್ಯಾವಾರ್ಷಿಕ ಪರೀಕ್ಷೆ ಬಗ್ಗೆ ಮಾಹಿತಿ ನೀಡಿದರು, ಸಮಾಜಶಸ್ತ್ರ ಉಪನ್ಯಾಸಕರಾದ ನಾಗರಾಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಸ್ತೂರಿ ರಂಗನ್ ವರದಿ ಜಾರಿಗೊಳಿಸಲು ರಾಜ್ಯ ಸರಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿದ್ದು, ಬೈಂದೂರು ಶಾಸಕರು ಹಾಗೂ ಸಂಸದರು ಸಂಬಂಧಪಟ್ಟ ಕೇಂದ್ರ ಸಚಿವರನ್ನು ಭೇಟಿ ಮಾಡಿ ವರದಿ ಜಾರಿಗೊಳಿಸುವ ಸಂಬಂಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವರದಿಯನ್ನು ಸಮಗ್ರವಾಗಿ ಅಧ್ಯಯನ ಮಾಡಿ ಅದರ ಒಳಿತು ಕೆಡಕುಗಳನ್ನು ತಿಳಿದುಕೊಂಡು ಯಾರಿಗೂ ತೊಂದರೆಯಾಗದಂತೆ ವರದಿ ಅನುಷ್ಠಾನಗೊಳಿಸಬೇಕು. ಹೀಗಾಗಿ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸಲು ಮುಂದಾಗಬಾರದು ಎಂದು ಸರಕಾರವನ್ನು ಆಗ್ರಹಿಸಲಾಗುವುದು ಎಂದು ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ ಹೇಳಿದರು. ಹೆಮ್ಮಾಡಿಯಲ್ಲಿ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೈಂದೂರು ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಹಾಗೂ ಅಲ್ಲಿನ ಸಮಸ್ಯೆಗಳ ಬಗ್ಗೆ ಶಾಸಕರು ಹಾಗೂ ಸಂಸದರ ಗಮನಕ್ಕೆ ತರಲಾಗಿದೆ. ಈ ಸಂಬಂಧ ಶಾಸಕ ಸುಕುಮಾರ್ ಶೆಟ್ಟಿ ಅವರು ಡಿ.೬ರಂದು ಬೈಂದೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಪ್ರಯತ್ನ ನಡೆಸಲಿದ್ದಾರೆ. ಸರಕಾರಿ ಆಸ್ಪತ್ರೆಗೆ ಅಗತ್ಯ ಮೂಲಭೂತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಲ್ಲಿ ನಡೆದ ‘ಕಾರ್ಟೂನು ಹಬ್ಬ’ದ ಕಾರ್ಟೂನು ಸ್ಪರ್ದೆಗೆ ನೂರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದು ‘ಕೋಮು ಸೌಹಾರ್ದತೆ ವಿಷಯದ ಮೇಲೆ ಸ್ವರ್ಧೆ ನಡೆಯಿತು. ಕಾರ್ಟೂನು ಹಬ್ಬದ ಸಮಾರೋಪ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ದೆಯ ವಿಷಯವನ್ನು ಘೋಷಿಸಿದ ಅರ್ಧ ಗಂಟೆಗಳ ತನಕ ವಿಧ್ಯಾರ್ಥಿಗಳು ತಮ್ಮ ತಮ್ಮ ಪೋಷಕರ ಜೊತೆ ಆ ವಿಷಯದ ಕುರಿತು ಚರ್ಚಿಸಿ ತಿಳಿದುಕೊಂಡು ನಂತರ ಚಿತ್ರಗಳನ್ನು ರಚಿಸುವ ಅವಕಾಶ ನೀಡಲಾಗಿತ್ತು. ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸುಮಾರು 170ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಭಾಗವಹಿಸಿದ್ದರು. ಈ ಸ್ಪರ್ದೆಯು 4ರಿಂದ 7ನೆಯ ತರಗತಿಯ ಒಳಗಿನ ವಿಧ್ಯಾರ್ಥಿಗಳಿಗೆ, 8ರಿಂದ 10ನೆಯ ತರಗತಿಯ ಒಳಗಿನ ವಿಧ್ಯಾರ್ಥಿಗಳಿಗೆ ಹಾಗೂ ಪಿಯುಸಿ ನಂತರದ ವಿಧ್ಯಾರ್ಥಿಗಳಿಗೆ ಹೀಗೆ ಮೂರು ವಿಭಾಗಗಳಲ್ಲಿ ನಡೆದಿತ್ತು. ಈ ಸ್ಪರ್ಧೆಯಲ್ಲಿ 4ರಿಂದ 7ನೆಯ ತರಗತಿಯ ಒಳಗಿನ ಮಕ್ಕಳಿಗೆ ಪ್ರಥಮ ಬಹುಮಾನವಾಗಿ 8 ಸಾವಿರ ರೂಪಾಯಿ, ದ್ವಿತೀಯ ಬಹುಮಾನವಾಗಿ 4 ಸಾವಿರ ರೂ, ತೃತೀಯ ಬಹುಮಾನವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಡಿ.05: ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ಚುನಾವಣೆಗೆ ಸಂಬಧಿಸಿದಂತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದ್ದಾರೆ. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆದಿದ್ದು, 158 ಚುನಾವಣಾಧಿಕಾರಿ, 158 ಸಹಾಯಕ ಚುನಾವಣಾಧಿಕಾರಿ, 158 ಮೈಕ್ರೋಅಬ್ಸರ್ವರ್, 158 ರೂಫ್ ಡಿ, 158 ರೂಟ್ ಅಧಿಕಾರಿಗಳು, 158 ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗಿದೆ. ಚುನಾವಣೆಯಲ್ಲಿ ಜಿಲ್ಲೆಯ ಒಟ್ಟು 2505 ಮತದಾರರು ಮತ ಚಲಾಯಿಸಲಿದ್ದಾರೆ ಎಂದರು. ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದ್ದು, 130 ಸಾಮಾನ್ಯ, 26 ಸೂಕ್ಷ್ಮ, 2 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಜಿಲ್ಲೆಯ 7 ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಮತ್ತು ಡಿ-ಮಸ್ಟರಿಂಗ್ ಕೇಂದ್ರಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಮೂರ್ತೆದಾರರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಭಾನುವಾರ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಮೋಹನ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘ ವರದಿ ವರ್ಷದಲ್ಲಿ ರೂ.84.65 ಕೋಟಿ ವ್ಯವಹಾರ ನಡೆಸಿ, ರೂ 43.13 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಮುಂದಿನ ದಿನಗಳಲ್ಲಿ 100 ಕೋಟಿ ರೂ. ವ್ಯವಹಾರದ ಗುರಿಯಿರಿಸಿಕೊಳ್ಳಲಾಗಿದೆ. ಸಂಘವು ಪ್ರಾರಂಭದಿಂದಲೂ ಲಾಭದಲ್ಲೆ ಮುನ್ನಡೆಯುತ್ತಿದ್ದು, ಕಳೆದ 29 ವರ್ಷಗಳಿಂದ ನಿರಂತರ ಡಿವಿಡೆಂಟ್ ನೀಡಿರುವ ಹೆಗ್ಗಳಿಕೆ ಗಳಿಸಿದೆ. ಈ ಭಾರಿ 10% ಡಿವಿಡೆಂಟ್ ಘೋಷಿಸಲಾಗಿದೆ. ಪ್ರಧಾನ ಕಚೇರಿಗೆ ಸುಸಜ್ಜಿತವಾದ ಸಹಕಾರಿ ಸಂಕೀರ್ಣ ನಿರ್ಮಾಣ ಯೋಜನೆಯಿದ್ದು, ಅದಕ್ಕಾಗಿ ಜಾಗ ಮೀಸಲಿರಿಸಲಾಗಿದೆ. ಸಂಘದ ಕಾರ್ಯ ಕ್ಷೇತ್ರದಲ್ಲಿ ಎರಡನೇ ಶಾಖೆ ತೆರೆಯುವುದು ಸೇರಿದಂತೆ ಹಲವು ಯೋಜನೆಗಳನ್ನು ಕಾರ್ಯಕತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು. ಸಂಘದ ಮಾಜಿ ಅಧ್ಯಕ್ಷರುಗಳಾದ ಹೆಚ್. ನರಸಿಂಹ ಪೂಜಾರಿ, ಬಿ. ಹೂವಯ್ಯ ಪೂಜಾರಿ, ದೊಟ್ಟಯ್ಯ ಪೂಜಾರಿ, ಮಾಜಿ ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಒಂದು ಕಡೆ ಕಡಲು ಮತ್ತು ಮೂರು ಕಡೆ ನದಿಯಿಂದ ಆವೃತವಾಗಿರುವ ಪ್ರಕೃತಿ ರಮ್ಯ ಮರವಂತೆ, ಜಲಜಾನಪದ ಉತ್ಸವ ನಡೆಸಲು ಅತ್ಯಂತ ಪ್ರಶಸ್ತವಾದ ಸ್ಥಳ. ಇಲ್ಲಿ ನಡೆಸಲು ನಿರ್ಧರಿಸಿರುವುದಕ್ಕೆ ಸ್ವಾಗತವಿದೆ. ಅದರ ಯಶಸ್ಸಿಗೆ ಅಗತ್ಯವಿರುವ ಎಲ್ಲ ವಿಧದ ಬೆಂಬಲವನ್ನು ನೀಡಲಾಗುವುದು ಎಂದು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ರಾಜ್ಯ ಕನ್ನಡ ಜಾನಪದ ಪರಿಷತ್ತಿನ ಆಶ್ರಯದಲ್ಲಿ ಮರವಂತೆಯಲ್ಲಿ ನಡೆಸಲು ಉದ್ದೇಶಿಸಲಾದ ರಾಜ್ಯ ಜಲಜಾನಪದ ಉತ್ಸವದ ಲಾಂಛನವನ್ನು ಅವರು ಇಲ್ಲಿನ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಶನಿವಾರ ಬಿಡುಗಡೆಗೊಳಿಸಿ ಮಾತನಾಡಿದರು. ಮರವಂತೆ ರಾಜ್ಯದ ಪ್ರಮುಖ ಸುಂದರ ಪ್ರವಾಸಿ ತಾಣಗಳಲ್ಲಿ ಒಂದು. ಪ್ರತಿದಿನ ನೂರಾರು ಪ್ರವಾಸಿಗಳು ಭೇಟಿ ನೀಡುವ ಈ ಪ್ರದೇಶವನ್ನು ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುತ್ತಿದೆ. ಅದರೊಂದಿಗೆ ಇಲ್ಲಿ ಪ್ರವಾಸಿಗಳನ್ನು ಆಕರ್ಷಿಸಲು ವಿವಿಧ ಜಲಕ್ರೀಡೆಗಳನ್ನು ನಡೆಸಬೇಕು. ಜಲಜಾನಪದ ಉತ್ಸವದ ಸಂದರ್ಭ ಇಲ್ಲಿನ ಸೌಪರ್ಣಿಕಾ ನದಿಯಲ್ಲಿ ಕೇರಳ ಮಾದರಿಯಲ್ಲಿ ದೋಣಿಗಳ ಸ್ಪರ್ಧೆ ಏರ್ಪಡಿಸುವ ಬಗೆಗೂ ಸಂಘಟಕರು ಯೋಚಿಸಬೇಕು ಎಂದು ಅವರು ಸಲಹೆಯಿತ್ತರು.…

Read More

ಸಾಹಿತಿ, ನಿವೃತ್ತ ಉಪನ್ಯಾಸಕಿ ಡಾ| ಪಾರ್ವತಿ ಜಿ. ಐತಾಳ್ ಅವರೊಂದಿಗೆ ಕುಂದಾಪ್ರ ಡಾಟ್ ಕಾಂ ಮಾತುಕತೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಸನ್ಮಾನ್ಯ ಭೂಪೇಂದ್ರ ಯಾದವ್ ಅವರನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಶನಿವಾರ ದೆಹಲಿಯಲ್ಲಿ ಭೇಟಿ ಮಾಡಿ ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಹಾಗೂ ಮಾರ್ಪಾಡುಗಳ ಬಗ್ಗೆ ಚರ್ಚಿಸಿದರು. ಕಸ್ತೂರಿ ರಂಗನ್ ವರದಿಯ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ಈ ಕೆಳಗಿನಂತೆ ಕೆಲವು ನಿರ್ಬಂಧಗಳನ್ನು ಸಡಿಲಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದರು. ಕಸ್ತೂರಿ ರಂಗನ್ ವರದಿಯ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತಾಪಿಸಲಾದ ಪರಿಸರ ಸೂಕ್ಷ್ಮ ಪ್ರದೇಶ ಅಡಿಯಲ್ಲಿ 1543 ಗ್ರಾಮಗಳು ಬರಲಿದ್ದು, ಅದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 500 ಗ್ರಾಮಗಳು ಬರುತ್ತವೆ. ಪಶ್ಚಿಮಘಟ್ಟದ ಕಾಡಿನ ಗ್ರಾಮಗಳಲ್ಲಿ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರು ಪ್ರಕೃತಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಮನೋಭಾವ ಹೊಂದಿ ಸಂರಕ್ಷಿಸುತ್ತಿರುವ ಕಾರಣದಿಂದಲೇ ಸುಮಾರು 60% ಭೂ ಪ್ರದೇಶವು ಸಮೃದ್ಧ ಅರಣ್ಯವಾಗಿದೆ. ಆದ್ದರಿಂದ ವರದಿಯಲ್ಲಿ ಇರುವಂತೆ ಗ್ರಾಮಗಳನ್ನು ಪರಿಸರ ಸೂಕ್ಷ್ಮ…

Read More