ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹಂಚಿಕೆಯಾಗಿರುವ ನಿವೇಶನದಲ್ಲಿ ಉದ್ದಿಮೆದಾರರು ನಿಯಮಾನುಸಾರ ಆರು ತಿಂಗಳ ಒಳಗಾಗಿ ಕೈಗಾರಿಕಾ ಚಟುವಟಿಕೆ ಆರಂಭಿಸಬೇಕು. ತಪ್ಪಿದ್ದಲ್ಲಿ ನಿವೇಶನಗಳನ್ನು ಮರು ಹಂಚಿಕೆ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಕೈಗಾರಿಕಾ ಸ್ಪಂದನ, ಜಿಲ್ಲಾ ಮಟ್ಟದ ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕೋದ್ಯಮಿಗಳು ಕೈಗಾರಿಕಾ ಘಟಕ ಸ್ಥಾಪನೆಗೆ ಪಡೆದಿರುವ ನಿವೇಶನಗಳಲ್ಲಿ ಉದ್ದಿಮೆ ಆರಂಭಿಸದೇ ಹೆಚ್ಚುವರಿ ಕಾಲಾವಕಾಶ ಕೋರಿ ಪದೇ ಪದೇ ಮನವಿ ಸಲ್ಲಿಸುತ್ತಿದ್ದಾರೆ. ಉತ್ಪನ್ನ ಹಾಗೂ ಘಟಕದ ಹೆಸರು ಬದಲಾವಣೆ, ಹೆಚ್ಚುವರಿ ಕಾಲಾವಕಾಶ ಸೇರಿದಂತೆ ಮತ್ತಿತರ ಅಸಮರ್ಪಕ ಕಾರಣ ನೀಡಿ ಕಾರ್ಯಚಟುವಟಿಕೆ ಆರಂಭಿಸದೇ ಇರುವವರ ನಿವೇಶನಗಳನ್ನು, ಕೈಗಾರಿಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ನಿಯಂತ್ರಣ, ಪಾಲನೆ ಮತ್ತು ಪ್ರಾಣಿ ಸಂರಕ್ಷಣಾ ಸೇವೆಗಳನ್ನು ನೀಡಲು ಆಸಕ್ತಿವುಳ್ಳ ಅನುಭವ ಹೊಂದಿರುವ ಅರ್ಹ ಅನುಭವಿ ಸರ್ಕಾರೇತರ ಸಂಸ್ಥೆಗಳು (ಎನ್.ಜಿ.ಓ), ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಪ್ರಸ್ತಾವನೆಯನ್ನು ಆಹ್ವಾನಿಸಲಾಗಿದೆ. ಆಸಕ್ತ ಸಂಸ್ಥೆಗಳು ಅಥವಾ ವ್ಯಕ್ತಿಗಳು ತಮ್ಮ ಜಾಗದಲ್ಲಿ ಬೀದಿ ನಾಯಿಗಳಿಗೆ ಆಶ್ರಯ ತಾಣ ನಿರ್ಮಾಣ ಹಾಗೂ ಸಂತಾನಹರಣ ಚಿಕಿತ್ಸೆ ಕೈಗೊಳ್ಳುವುದರೊಂದಿಗೆ ಪಾಲನಾ ಪೊಷಣೆಯನ್ನು ನಿರ್ವಹಿಸಬೇಕು ಅಥವಾ ಆಸಕ್ತ ಸಂಸ್ಥೆಗಳು ಅಥವಾ ವ್ಯಕ್ತಿಗಳು ಪುರಸಭಾ ವತಿಯಿಂದ ನೀಡುವ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಶ್ರಯ ತಾಣ ನಿರ್ಮಾಣ ಹಾಗೂ ಸಂತಾನಹರಣ ಚಿಕಿತ್ಸೆ ಕೈಗೊಳ್ಳುವುದರೊಂದಿಗೆ ಪಾಲನಾ ಪೊಷಣೆಯನ್ನು ನಿರ್ವಹಿಸಬೇಕು. ಕುಂದಾಪುರ ಪುರಸಭಾ ವತಿಯಿಂದ ಬೀದಿ ನಾಯಿಗಳನ್ನು ದತ್ತು ನೀಡುವ ಪ್ರಕ್ರಿಯ ಚಾಲ್ತಿಯಲ್ಲಿದ್ದು, ಆಸಕ್ತ ಸಂಸ್ಥೆಗಳು ಅಥವಾ ವ್ಯಕ್ತಿಗಳು ಪ್ರಸ್ತಾವನೆಯನ್ನು ಸಲ್ಲಿಸಬಹುದಾಗಿದೆ. ಅರ್ಹ ಆಸಕ್ತ ಸಂಸ್ಥೆಗಳು ಅಥವಾ ವ್ಯಕ್ತಿಗಳು ಮುಚ್ಚಿದ ಲಕೋಟೆಯಲ್ಲಿ ಪ್ರಸ್ತಾವನೆಯನ್ನು ಹಾಗೂ ಅಗತ್ಯ ದಾಖಲೆಗಳನ್ನು ಮುಖ್ಯಾಧಿಕಾರಿಗಳು, ಪುರಸಭೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಮಣೂರು ಪಡುಕರೆಯ ಇಂಡಿಕಾ ಕಲಾ ಬಳಗ ಪ್ರತಿ ವರ್ಷ ನೀಡುವ ಮೊಳಹಳ್ಳಿ ಹೆರಿಯ ನಾಯ್ಕ ಇಂಡಿಕಾ ಪುರಸ್ಕಾರಕ್ಕೆ, ಹಿರಿಯ ಯಕ್ಷಗಾನ ಕಲಾವಿದ ಯಕ್ಷತೀರ್ಥ ತೀರ್ಥಹಳ್ಳಿ ಗೋಪಾಲ ಆಚಾರ್ ಆಯ್ಕೆಯಾಗಿದ್ದಾರೆ. ಫೆ.8ರಂದು ಮಣೂರು ಪಡುಕರೆ ಸರ್ಕಾರಿ ಸಂಯುಕ್ತ ಪ್ರೌಢಶಾಲಾ ವಠಾರದ ಗೀತಾನಂದ ರಂಗಮಂಟಪದಲ್ಲಿ ಇಂಡಿಕಾ 16ನೇ ವರ್ಷದ ಸಂಭ್ರಮ ಕಾರ್ಯಕ್ರಮ ಜರುಗಲಿದೆ. ಪ್ರತಿಭಾ ಪುರಸ್ಕಾರ, ವಿಶೇಷ ಅಭಿನಂದನೆ, ಅಶಕ್ತರಿಗೆ ನೆರವು ಈ ವೇದಿಕೆಯಲ್ಲಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸ್ಥಳೀಯ ಅಂಗನವಾಡಿ ಹಾಗೂ ಶಾಲಾ ಮಕ್ಕಳ ನೃತ್ಯ ವೈವಿಧ್ಯ, ಪಿಂಗಾರ ಕಲಾವಿದರು ಬೆದ್ರ ಮಂಗಳೂರು ಅವರಿಂದ ಓಂಕಾರ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಇಂಡಿಕಾ ಕಲಾಬಳಗದ ಸಂಚಾಲಕ ಪ್ರಭಾಕರ್ ಪಡುಕರೆ, ಅಧ್ಯಕ್ಷ ಎಂ. ಜಯರಾಮ ಶೆಟ್ಟಿ, ಸಮಿತಿಯ ಪ್ರಮುಖರಾದ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಾರ್ ಅಸೋಸಿಯೇಷನ್ ರಿ. (ವಕೀಲರ ಸಂಘ) ಇದರ ನೂತನ ಪಧಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾಯಕ್ರಮ ಇತ್ತೀಚಿಗೆ ನಡೆಯಿತು. 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ವಕೀಲ ಪ್ರಶಾಂತ್ ಪೂಜಾರಿ ಅವಿರೋಧವಾಗಿ ಹಾಗೂ ಕಾರ್ಯದರ್ಶಿಯಾಗಿ ಲಿಂಗಪ್ಪ ಆರ್ ಮೇಸ್ತ ಆಯ್ಕೆಯಾದರು. ಅಸೋಸಿಯೇಷನ್ನ ಖಜಾಂಚಿಯಾಗಿ ಪಿಂಕಿ ಕಾರ್ವಲ್ಲೋ, ಉಪಾಧ್ಯಕ್ಷರಾಗಿ ಚಿಕ್ಕಯ್ಯ ನಾರಾಯಣ ಶೆಟ್ಟಿ, ಜೊತೆ ಕಾರ್ಯದರ್ಶಿ ಗಣೇಶ್ ಮೇಸ್ತ, ಕಾರ್ಯಕಾರಿಣಿ ಸಮಿತಿ ಸದಸ್ಯರುಗಳಾಗಿ ಶ್ರೀಧರ್ ಜಿ, ಕುಮಾರಿ ಅಖಿಲ ರಾಣಿ, ಕೀರ್ತನ, ಹೇಮಲತಾ ಇವರುಗಳು ಆಯ್ಕೆಯಾಗಿರುತ್ತಾರೆ. ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಅವರು 2011ರಿಂದ ವಕೀಲರಾಗಿ ಕಾನೂನು ಸೇವೆ ಸಲ್ಲಿಸುತ್ತಾ ಬಂದಿದ್ದು, 2023ರಿಂದ ಬೈಂದೂರು ಬಾರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿರುತ್ತಾರೆ. ಬೈಂದೂರಿನಲ್ಲಿ ನ್ಯಾಯಾಲಯ ಸ್ಥಾಪನೆಗಾಗಿ ಹೋರಾಟ ಮಾಡಿದವರ ಪೈಕಿ ಮುಂಚೂಣಿಯಲ್ಲಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಹಿಂದಿನ ವರ್ಷಗಳಲ್ಲಿ ಸಂಸ್ಥೆಯಲ್ಲಿ ವಿದ್ಯಾರ್ಜನೆಗೈದು ಬೇರೆ ಬೇರೆ ಕಡೆಗಳಲ್ಲಿ ಇರುವ ಹಳೆಯ ವಿದ್ಯಾರ್ಥಿಗಳಿಗಾಗಿ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಹಳೆ ವಿದ್ಯಾರ್ಥಿಗಳು ವಿವಿಧ ಮೋಜಿನ ಆಟಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಮಹೇಶ್ ಯಾದವ್, ವಂಶಿ, ಆಯುಷ್ ಶೆಟ್ಟಿ, ಶ್ರಾವಣಿ, ಹರ್ಷಿತ್ ಹಿರೇಮಠ, ಡಾ| ಉತ್ಸವ ಶೆಟ್ಟಿ ಈ ವಸತಿ ಶಾಲೆಯ ಮಕ್ಕಳಾದ ನಮಗೆ ಶಾಲೆಯು ಸರಿಯಾದ ಮಾರ್ಗದರ್ಶನ ನೀಡಿತ್ತು. ಅದೀಗ ನಮ್ಮ ಅನುಭವಕ್ಕೆ ಬರುತ್ತಿದೆ. ಶಿಸ್ತಿನ ವಿಷಯದಲ್ಲಿ ರಾಜಿ ಇಲ್ಲದ ವ್ಯವಹಾರ ನಮ್ಮ ಜೀವನದಲ್ಲಿ ಶಿಸ್ತನ್ನು ಅನುಸರಿಸುವಂತೆ ಮಾಡಿದೆ. ಪಠ್ಯೇತರ ಚಟುವಟಿಕೆಗಳಿಗೆ ನೀಡುವ ಪ್ರೋತ್ಸಾಹದಿಂದ ನಮ್ಮ ಸಾಧನೆಯ ಮಾರ್ಗಗಳು ತೆರೆದುಕೊಂಡಿವೆ. ಶುಚಿ ರುಚಿಯಾದ ಆಹಾರ ವ್ಯವಸ್ಥೆ ನಮಗೆ ಇಲ್ಲಿ ಸಿಕ್ಕಂತೆ ಉಳಿದ ಕಡೆಗಳಲ್ಲಿ ಲಭಿಸಿಲ್ಲ. ಇದೇ ಮೊದಲಾದ ಅನುಭವಗಳನ್ನು ಹಂಚಿಕೊಂಡರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಸಾಹಿತ್ಯವು ಸಮಾಜದ ಒಳನೋವಿಗೆ ಸ್ಪಂದಿಸುವ ಸಂವೇದನಾಶೀಲ ಶಕ್ತಿ. ಅದು ವ್ಯಕ್ತಿಯ ಮನೋವಿಕಾಸಕ್ಕೂ, ಸಮೂಹದ ಸಾಂಸ್ಕೃತಿಕ ಬೆಳವಣಿಗೆಗೂ ಕಾರಣವಾಗುತ್ತದೆ ಎಂದು ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಸಿದ್ದಾಪುರ ವಾಸುದೇವ ಭಟ್ ಅಭಿಪ್ರಾಯಪಟ್ಟರು. ಅವರು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ನಡೆದ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಹಿತ್ಯವು ಮನುಷ್ಯನನ್ನು ಮನುಷ್ಯನಿಗೆ ಹತ್ತಿರ ಮಾಡುವ ಸಾಧನವಾಗಿದೆ. ಜೀವನದ ಕಠಿಣ ಅನುಭವಗಳಿಗೆ ಅರ್ಥ ನೀಡುವ ಶಕ್ತಿ ಸಾಹಿತ್ಯಕ್ಕಿದೆ. ಸಮಾಜದಲ್ಲಿ ಒಳ್ಳೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಬರಹಗಾರರ ಪಾತ್ರ ಮಹತ್ವದ್ದೆಂದು ಹೇಳಿದರು. ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್, ಸಾಹಿತ್ಯ ಸಮ್ಮೇಳನಗಳು ಆತ್ಮಾವಲೋಕನಕ್ಕೆ ಅವಕಾಶ ನೀಡಬೇಕು ಎಂದು ಹೇಳಿದರು. ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಗಳು ಹೆಚ್ಚಿನ ಗಮನ ಸೆಳೆಯುತ್ತಿರುವುದು ಗಮನಾರ್ಹ. ಆದರೆ ಒಂದು ಸಾಲಿನ ಸಾಹಿತ್ಯವೂ ಜನಮನದಲ್ಲಿ ದೊಡ್ಡ ಅಲೆ ಎಬ್ಬಿಸಬಲ್ಲ ಶಕ್ತಿ ಹೊಂದಿದೆ ಎಂಬುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಅಶಕ್ತರಿಗೆ ಹಾಗೂ ಅನಾರೋಗ್ಯ ಪೀಡಿತರ ನೆರವಿಗಾಗಿ ಯಕ್ಷಗಾನ ಆಯೋಜಿಸಿ ಅದರಲ್ಲಿನ ಮಿಗತೆಯ ಹಣವನ್ನು ನೆರವು ನೀಡುವ ಕಾರ್ಯ ಅತ್ಯಂತ ಪ್ರಶಂಸನಾರ್ಹ ಕಾರ್ಯವಾಗಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಹೇಳಿದರು. ಅವರು ಶನಿವಾರ ಪಾರಂಪಳ್ಳಿ ಪಡುಕರೆ ಇಲ್ಲಿ ವಿನ್ ಲೈಟ್ ಸ್ಪೋರ್ಟ್ಸ್ ಕ್ಲಬ್ ಪಾರಂಪಳ್ಳಿ ಸಾಲಿಗ್ರಾಮ ಇವರ ಆರನೇ ವರ್ಷದ ಪೆರ್ಡೂರು ಅನಂತಪದ್ಮನಾಭ ಯಕ್ಷಗಾನ ಮಂಡಳಿಯವರಿಂದ ಯಕ್ಷಗನಾ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ನೆರವು ಕಾರ್ಯವಲ್ಲದೆ ಕಲಾರಾಧನೆಗೆ ಪ್ರೋತ್ಸಾಹಿಸುವ ಈ ಸಂಘಟನೆ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರ ಇವರನ್ನು ಅಭಿನಂದನಾ ಕಾರ್ಯಕ್ರಮ ಅರ್ಥಪೂರ್ಣ ಎಂದರಲ್ಲದೆ ಸಂಘಟನೆ ಹುಟ್ಟಿಕೊಳ್ಳುವುದು ಸುಲಭ ಆದರೆ ಅದರ ನಿರಂತರತೆ ಬಹುಮುಖ್ಯವಾಗಿದೆ, ಆದರೆ ಹಲವು ಸಾಮಾಜಿಕ ಕಾರ್ಯಕ್ರಮಗಳ ಮೂಲಕ ವಿನ್ ಲೈಟ್ ಮನೆ ಮಾತಾಗಿ ಬೆಳೆದಿದೆ ಎಂದರು. ಸಭೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೋಟ ಸುರೇಶ್ ಬಂಗೇರ ಅವರನ್ನು ಅಭಿನಂದಿಸಿ ಗೌರವಿಸಿತು. ಇದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ಧಾಪುರ ಏತ ನೀರಾವರಿ ಯೋಜನೆಯೂ ಸೇರಿ ಜನರಿಗೆ ಅನುಕೂಲವಾಗುವ ಹಾಗೂ ಅಗತ್ಯವಾಗಿರುವ ಯಾವುದೇ ಯೋಜನೆಗಳಿಗೂ ನಾನು ವಿರೋಧಿಯಲ್ಲ. ಆದರೆ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಮೊದಲು ಅದರಿಂದ ಆಗುವ ಉಪಯೋಗ ಹಾಗೂ ಭವಿಷ್ಯದ ತೊಂದರೆ ಬಗ್ಗೆ ತಜ್ಞರಿಂದ ತಾಂತ್ರಿಕ ಸಲಹೆ ಪಡೆದುಕೊಳ್ಳುವುದು ಒಳಿತು. ಆ ನೆಲೆಯಲ್ಲಿ ನನ್ನ ಜವಾಬ್ದಾರಿ ಅರಿತು ನಾನು ಪತ್ರ ಬರೆದಿದ್ದೆ. ಇದರಲ್ಲೂ ಅನಗತ್ಯವಾಗಿ ತಪ್ಪು ಮಾಹಿತಿ ಹರಡಲಾಗುತ್ತಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಕುಂದಾಪುರದ ಖಾಸಗಿ ಹೋಟೆಲ್ನಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ ವಿವಿಧ ಗ್ರಾಮಗಳಿಗೆ ನೀರು ನೀಡುವ ಸಿದ್ದಾಪುರ ಏತ ನೀರಾವರಿ ಯೋಜನೆಯ ಮೂಲ ಉದ್ದೇಶ ಯಾವುದೇ ಕಾರಣಕ್ಕೂ ಬದಲಾಗಬಾರದು. ಆದರೆ ಯೋಜನೆಯ ಪ್ರಾರಂಭವನ್ನು ಅಣೆಕಟ್ಟಿನ ಮೇಲ್ಭಾಗದ ಬದಲು, ಕನಿಷ್ಠ 500-600ಮೀಟರ್ ಕೆಳಭಾಗದಲ್ಲಿ ನಿರ್ಮಾಣ ಮಾಡಬೇಕು ಎನ್ನುವುದು ಮಾತ್ರ ನಮ್ಮ ಆಗ್ರಹ. ಈ ಬೇಡಿಕೆಯ ಆಗು ಹೋಗುಗಳ ಕುರಿತು ಪರಿಶೀಲನೆ ಮಾಡಲು ಸರ್ಕಾರ ತಜ್ಞರಿಂದ ಅಭಿಪ್ರಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಪ್ಪಿನಕುದ್ರು ಮಾಚಿ ಮನೆಯ ನಿವಾಸಿ ಮಂಜುನಾಥ ಪೂಜಾರಿ (57) ಅವರು ಶನಿವಾರದಂದು ರಾತ್ರಿ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡು ಮೃತಪಟ್ಟಿದ್ದಾರೆ. ಅವರನ್ನು ಕೂಡಲೇ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರೂಳಗೆ ಸಾವನ್ನಪ್ಪಿದ್ದರು. ಅವರು ಮೆಸ್ಕಾಂ ಲೈನ್ಮನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ತಲ್ಲೂರು – ಉಪ್ಪಿನಕುದ್ರು ಗಣೇಶೋತ್ಸವ ಸಮಿತಿ ಸದಸ್ಯರಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟದ ಪಂಚವರ್ಣ ಮಹಿಳಾ ಮಂಡಲ ಇದರ ವತಿಯಿಂದ ಯಕ್ಷಗುರು ಗುರುವಂದನಾ ಕಾರ್ಯಕ್ರಮ ಶನಿವಾರ ಸಂಘದ ಕಛೇರಿಯಲ್ಲಿ ಜರಗಿತು. ಪಂಚವರ್ಣ ರಾಜ್ಯೋತ್ಸವ ಅಂಗವಾಗಿ ಯಕ್ಷಗುರು ಕೊಯ್ಕೂರು ಸೀತಾರಾಮ ಶೆಟ್ಟಿ ಯಕ್ಷಹೆಜ್ಜೆಯ ಮೂಲಕ ಯಕ್ಷಗಾನ ನೃತ್ಯಕ್ಕೆ ಕಾಲಿರಿಸಿದ ಪಂಚವರ್ಣ ಮಹಿಳಾ ಮಂಡಲ ಈ ನಿಮಿತ್ತ ಗುರುವಂದನೆ ಸಲ್ಲಿಸಿಕೊಂಡಿತು. ಈ ಸಂದರ್ಭದಲ್ಲಿ ಯಕ್ಷಗುರು ಕೊಯ್ಕೂರು ಸೀತಾರಾಮ ಶೆಟ್ಟಿ ಗುರುವಂದನೆ ಸ್ವೀಕರಿಸಿ ಶಿಷ್ಯೆ ವೃಂದಕ್ಕೆ ಕೃತಜ್ಞತೆ ಸಲ್ಲಿಸಿದರು. ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಮಾತೃಸಂಸ್ಥೆ ಯುವಕ ಮಂಡಲದ ಅಧ್ಯಕ್ಷ ಕೆ. ಮನೋಹರ್ ಪೂಜಾರಿ, ಪಂಚವರ್ಣ ಮಹಿಳಾ ಭಜನಾ ಮಂಡಳಿಯ ಸಂಚಾಲಕಿ ಗೀತಾ ಶಿವರಾಂ, ಸಾಂಸ್ಕೃತಿಕ ಕಾರ್ಯದರ್ಶಿ ಶ್ಯಾಮಲ ಸಿ. ಪುತ್ರನ್ ಇತರರು ಇದ್ದರು. ಕಾರ್ಯಕ್ರಮವನ್ನು ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
