Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಕರ್ನಾಟಕ ಮುಸ್ಲಿಮ್ ಜಮಾತ್ ಬೈಂದೂರು ಘಟಕದ ಜಂಟಿ ಆಶ್ರಯದಲ್ಲಿ ತಾಲೂಕು ಅಧ್ಯಕ್ಷ ಅಬ್ದುಲ್ ಸಮಿ ಹಳಗೇರಿ ರವರ ಅಧ್ಯಕ್ಷತೆಯಲ್ಲಿ ಆಯುಷ್ಮಾನ್ ಕಾರ್ಡ್, ಮತ್ತು ಈ-ಶ್ರಮ್ ಕಾರ್ಡ್ ಶಿಬಿರವು ಮೊಹಿದ್ದಿನ್ ಜುಮ್ಮಾ ಮಸ್ಜಿದ್ ಮರವಂತೆ ನಾವುಂದದಲ್ಲಿ ಜರುಗಿತು. ಮೌಲಾನಾ ಹನೀಫ್ ಸಹದಿ ರವರ ಕಿರಾತ್ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಜಿಲ್ಲಾ ಸಂಯೋಜಕಿ ಡಾ. ತೇಜಸ್ವಿನಿ ಎ. ಆಯುಷ್ಮಾನ್ ಕಾರ್ಡ್ ನ ಉಪಯುಕ್ತತೆ ಮತ್ತು ಪ್ರಯೋಜನದ ಬಗ್ಗೆ ಸವಿವರವಾಗಿ ವಿವರಿಸಿದರು. ಜಿಲ್ಲಾಧ್ಯಕ್ಷರಾದ ಜನಾಬ್ ಮುಷ್ತಾಕ್ ಅಹ್ಮದ್ ಬೆಳ್ವೆ ನಮ್ಮ ನಾಡ ಒಕ್ಕೂಟದ ಧ್ಯೇಯೊದ್ದೇಶ ಬಗ್ಗೆ ತಿಳಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಎಸ್. ಎಮ್. ಇರ್ಷಾದ್ ನಮ್ಮ ನಾಡ ಒಕ್ಕೂಟದ ಕಾರ್ಯ ಚಟುವಟಿಕೆಗಳನ್ನು ತಿಳಿಸಿದರು. ಕಾರ್ಯಕ್ರಮದ ರೂವಾರಿಗಳಾದ ಮನ್ಸೂರ್ ಇಬ್ರಾಹೀಮ್ ಮತ್ತು ಇಕ್ಬಾಲ್ ಕತಾರ್ ಶುಭ ಹಾರೈಸಿದರು. ಕರ್ನಾಟಕ ಮುಸ್ಲಿಮ್ ಜಮಾತಿನ ಉಡುಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.26: ಭಂಡಾರಿ ಯುವವೇದಿಕೆ ಕುಂದಾಪುರ, ಕೆ.ಎಂ.ಸಿ ಆಸ್ಪತ್ರೆ ಮಣಿಪಾಲ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ಕುಂದಾಪುರ ಜ್ಯೂನಿಯರ್ ಕಾಲೇಜು ವಠಾರದಲ್ಲಿ ನಡೆಯಿತು. ಕುಂದಾಪುರ ಸಾರ್ವಜನಿಕ ಆಸ್ಪತ್ರೆ ವೈದ್ಯರಾದ ಡಾ. ನಾಗೇಶ್ ಉದ್ಘಾಟಿಸಿ ಮಾತನಾಡಿ, ಆಧುನಿಕ ಕಾಲಘಟ್ಟದಲ್ಲಿ ಜೀವನಶೈಲಿ, ಸೇವಿಸುವ ಆಹಾರ ಕ್ರಮದಿಂದ ವಿವಿಧ ಆರೋಗ್ಯ ಸಮಸ್ಯೆಗಳು ಬರುತ್ತದೆ. ಅದನ್ನು ಪ್ರಾಥಮಿಕವಾಗಿ ತಿಳಿದು ಪರಿಣಾಮಕಾರಿ ಚಿಕಿತ್ಸೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬರು ರಕ್ತದ ಮಹತ್ವವನ್ನು ಅರಿಯುವ ಕಾರ್ಯವಾಗಬೇಕು. ರಕ್ತಕ್ಕೆ ತತ್ಸಮಾನವಾಗಿ ಕೃತಕವಾದ ಔಷಧವನ್ನು ಈವರೆಗೆ ಕಂಡುಕೊಳ್ಳಲಾಗಿಲ್ಲ. ರಕ್ತಕ್ಕೆ ರಕ್ತವೇ ಸಮಾನ. ಬೇರೆಬೇರೆ ರೋಗಗಳಿಂದ ಬಳಲುವ ವ್ಯಕ್ತಿಗಳನ್ನು ಉಳಿಸಿಕೊಳ್ಳಲು ರಕ್ತ ದಾನದಿಂದ ಮಾತ್ರ ಸಾಧ್ಯ. ಆರೋಗ್ಯವಂತ ಮನುಷ್ಯ ವರ್ಷದಲ್ಲಿ ಒಂದರಿಂದ ನಾಲ್ಕು ಬಾರಿ ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸುವ ಮಹತ್ಕಾರ್ಯ ಮಾಡಬಹುದು. ಈ ನಿಟ್ಟಿನಲ್ಲಿ ರಕ್ತದಾನ ಹಾಗೂ ಆರೋಗ್ಯ ತಪಾಸಣೆಯಂತಹ ಸಮಾಜಮುಖಿ ಕಾರ್ಯ ಹಮ್ಮಿಕೊಂಡು ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್‌.ಎನ್.ಶೆಟ್ಟಿ ಸಭಾ ಭವನದಲ್ಲಿ ಭಾನುವಾರ ಕುಂದಾಪುರ ತಾಲ್ಲೂಕು ಯುವ ಬಂಟರ ಸಂಘದ ವತಿಯಿಂದ ಸಂಸ್ಮರಣಾ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಿತು. ಡಾ.ಮಧುಕರ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ ಸ್ವೀಕರಿಸಿದ ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಡಾ. ಪ್ರಶಾಂತ್ ಶೆಟ್ಟಿ ಮಾತನಾಡಿ ಬದುಕಿದ್ದ ದಿನಗಳಲ್ಲಿ ವೃತ್ತಿಪರ, ನಿಷ್ಠಾವಂತ, ಕರ್ತವ್ಯ ದಕ್ಷತೆಯ ಕಾರ್ಯದಿಂದಾಗಿ ಇಂದಿಗೂ ಜನಮಾನಸಲ್ಲಿ ಜೀವಂತವಾಗಿರುವ, ದಕ್ಷ ಹಾಗೂ ಪ್ರಾಮಾಣಿಕ ಐಪಿಎಸ್ ಅಧಿಕಾರಿ ಡಾ.ಮಧುಕರ ಶೆಟ್ಟಿ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನ್ನ ಜೀವನದ ಅಮೃತ ಕ್ಷಣಗಳಾಗಿದೆ. ಇಂದಿನ ಯುವ ಜನಾಂಗಕ್ಕೆ ಅವರ ಜೀವನವೇ ಒಂದು ಅಧ್ಯಾಯವಿದ್ದಂತೆ ಎಂದು ಹೇಳಿದರು. ಸಂಸ್ಮರಣಾ ಪ್ರಶಸ್ತಿ ವಿತರಿಸಿ ಮಾತನಾಡಿದ ಉಡುಪಿ ಸಾಯಿರಾಧಾ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಮನೋಹರ ಶೆಟ್ಟಿ ಅವರು, ಸಂಘ-ಸಂಸ್ಥೆಗಳು ಹಾಗೂ ದಾನಿಗಳು ವಿದ್ಯಾರ್ಜನೆಗಾಗಿ ನೀಡುವ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳುವ ವಿದ್ಯಾರ್ಥಿಗಳು, ಇದರ ಸದುದ್ದೇಶಗಳನ್ನು ಅರ್ಥ ಮಾಡಿಕೊಂಡು ಒಳ್ಳೆಯ ರೀತಿಯಲ್ಲಿ ವಿದ್ಯಾಭ್ಯಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನ್ಯೂಸ್ ಪೇಪರ್ ಆಸೋಸಿಯೇಷನ್ ಆಫ್ ಕರ್ನಾಟಕ ಸಂಸ್ಥೆಯ ವತಿಯಿಂದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಸಭಾಂಗಣದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಉದ್ಯಮಿ, ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ವಿದ್ಯಾವಾಚಸ್ಪತಿ ಶ್ರೀ ಸಂತೋಷ ಭಾರತಿ ಗುರೂಜಿ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಟಿ. ಎ. ಶರವಣ, ಚಿತ್ರನಟಿಯರಾದ ನಟಿ ಶೃತಿ, ಹರ್ಷಿಕಾ ಪೂಣಚ್ಚ, ನ್ಯೂಸ್ ಪೇಪರ್ ಆಸೋಸಿಯೇಷನ್ ಅಧ್ಯಕ್ಷರಾದ ಶ್ರಾವಣ್ ಲಕ್ಷಣ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯಿತಿಯ ಕಾಳಜಿಯಿಂದಾಗಿ ಜಿಲ್ಲೆಯ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಈಗ ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಘಟಕಗಳು ಆರಂಭವಾಗಿ, ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಇವುಗಳ ಮೂಲಕ ಪ್ರತಿದಿನ ಟನ್‌ಗಟ್ಟಲೆ ತ್ಯಾಜ್ಯ ಸಂಗ್ರಹವಾಗಿ ಸಂಪನ್ಮೂಲವಾಗಿ ಪರಿವರ್ತಿಸಿ ವಿಲೇವಾರಿಯಾಗುತ್ತಿದೆ. ಇದರ ಪೂರ್ವದಲ್ಲಿ ಜಿಲ್ಲೆಯ ಗ್ರಾಮೀಣ ನೈರ್ಮಲ್ಯ ಸ್ಥಿತಿ ಹೇಗಿತ್ತು ಎನ್ನುವುದನ್ನು ಯಾರೂ ಊಹಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದರು. ಮರವಂತೆ ಸ್ವಚ್ಛತಾ ಮಾಸ ತಂಡ’ದ ಆಶ್ರಯದಲ್ಲಿ ಇಲ್ಲಿನ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಆವರಣದಲ್ಲಿ ಭಾನುವಾರ ಸ್ವಚ್ಛತೆಯ ಐವತ್ತುದಿನದ ಅಂಗವಾಗಿ ಆಯೋಜಿಸಿದ್ದ ಬೃಹತ್ ಸ್ವಚ್ಛತಾ ಅಭಿಯಾನದಲ್ಲಿ ಅವರು ಮಾತನಾಡಿದರು. ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯುವ ಪ್ರವೃತ್ತಿಯಿಂದ ಜೀವ ಸಂಕುಲಕ್ಕೆ ಅಪಾಯ ಸಂಭವಿಸುತ್ತಿದೆ. ಇದನ್ನು ತಡೆಯಲು ಸ್ಥಳೀಯಾಡತಗಳು ಅದರ ನಿರ್ವಹಣೆಯ ಜತೆಗೆ ಅರಿವು ಮೂಡಿಸುವ ಮತ್ತು ದಂಡನೀಯ ಕ್ರಮಗಳನ್ನೂ ಕೈಗೊಳ್ಳಬೇಕು. ಮರವಂತೆಯ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ ಪಟಗಾರ, ಕರುಣಾಕರ ಆಚಾರ್ಯ ನೇತೃತ್ವದಲ್ಲಿ ೫೦ ದಿನ ನಡೆದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ನ 9ನೇ ವರ್ಷದ ಟ್ರಸ್ಟ್ ದಿನಾಚರಣೆ ಶ್ರೀ ಸೀತಾರಾನಚಂದ್ರ ಕಲ್ಯಾಣ ಮಂಟಪದಲ್ಲಿ ಶನಿವಾರ ಜರುಗಿತು. ಕಾರ್ಯಕ್ರಮದ ಅತಿಥಿಯಾಗಿದ್ದ ಬೆಂಗಳೂರು ರಾಮರಾಜ ಕ್ಷತ್ರಿಯ ಸಮಾಜದ ಮಾಜಿ ಅಧ್ಯಕ್ಷ ಡಿ. ಕೆ. ಮಂಜುನಾಥ ಮಾತನಾಡಿ ಬದುಕಿನಲ್ಲಿ ನಾವು ಗಳಿಸಿದ ಹಣ-ಸಂಪತ್ತು ಕರಗಿ ಹೊಗಬಹುದು ಆದರೆ ಮಾಡಿದ ದಾನ ಧರ್ಮ ಪುಣ್ಯ ಕಾರ್ಯಗಳು ಸದಾ ಹಸಿರಾಗಿ ಉಳಿಯುತ್ತದೆ. ಸಾಧ್ಯವಾದಷ್ಟು ಸಮಾಜಕ್ಕೆ ಸೇವೆ ಮಾಡುವ ಕಾರ್ಯಕ್ಕೆ ಎಲ್ಲರೂ ಜೊತೆಗೂಡಬೇಕು. ಸಮಾಜದಿಂದ ಪ್ರಯೋಜನ ಪಡೆದವರು ಸಮಾಜಕ್ಕೆ ಮತ್ತಷ್ಟು ಉತ್ತಮ ಕಾರ್ಯ ಮಾಡುವಂತಾಗಬೇಕು ಎಂದರು. ಶ್ರೀರಾಮ ಗೃಹನಿರ್ಮಾಣ ಯೋಜನೆಯ ಘಲಾನುಭವಿಗೆ ಬೀಗದಕೈ ಹಸ್ತಾಂತರ, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ, ವಿಶೇಷ ಪ್ರೋತ್ಸಾಹ ನಿಧಿ ವಿತರಣೆ ಈ ಸಂದರ್ಭ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರುಗಾರ್ ಮಾತನಾಡಿ, ರಾಮಕ್ಷತ್ರಿಯ ಸಮಾಜದವರಿಗಾಗಿ ಬಡವರು, ಅಶಕ್ತರಿಗೆ ಸಹಾಯ, ನೆರವು ನೀಡುವ ಉದ್ದೇಶದಿಂದ ಆರಂಭಿಸಲಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ ಅವರು ಶುಕ್ರವಾರ ಭೇಟಿ ನೀಡಿದರು. ಪ್ರಥಮ ಭಾರಿ ಶಾಲೆಗೆ ಭೇಟಿ ನೀಡಿದ ಡಾ. ಗೋವಿಂದ ಬಾಬು ಪೂಜಾರಿ ಅವರನ್ನು ಶಾಲಾ ಶಿಕ್ಷಕರು, ಎಸ್.ಡಿ.ಎಮ್.ಸಿ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿಗಳ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭ ಶಾಲೆಗೆ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷರಾದ ಪ್ರಭಾಕರ ಗಾಣಿಗ, ಸದಸ್ಯರಾದ ಆನಂದ ಗಾಣಿಗ, ವೀರಭದ್ರ ಗಾಣಿಗ, ಶ್ಯಾಮಲಾ ಪೂಜಾರಿ, ರೇವತಿ ಶೆಟ್ಟಿ, ಗೋವಿಂದ ಮೊಗವೀರ, ಹಳೆ ವಿದ್ಯಾರ್ಥಿ ಸಂಘದ ವಸಂತ ಮೊಗವೀರ, ಮಹದೇವ ಬಿಲ್ಲವ, ರವೀಂದ್ರ ಗಾಣಿಗ, ಚಂದ್ರಶೇಖರ ಗಾಣಿಗ, ಸುರೇಶ್ ಪೂಜಾರಿ, ಪತ್ರಕರ್ತ ಮಹೇಶ್ ಗಾಣಿಗ, ಶಾಲಾ ಮುಖ್ಯ ಶಿಕ್ಷಕರಾದ ಜ್ಯೋತಿ ಶ್ರೀಧರ್, ಶಿಕ್ಷಕರಾದ ಅಂಬಾಬಾಯಿ, ಸಂಗೀತಾ, ಸಾರಿಕಾ, ಮಾಲತಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಹೊಸಾಡು ಗ್ರಾಮ ಪಂಚಾಯಿತಿ ಮುಳ್ಳಿಕಟ್ಟೆಯಲ್ಲಿ ಹಾರ್ಡ್ವೇರ್ ಅಂಗಡಿಗೆ ಶನಿವಾರ ಸಂಜೆ ಬೆಂಕಿ ಬಿದ್ದು ಸಂಪೂರ್ಣ ಸುಟ್ಟು ಹೋಗಿದೆ. ಹೆದ್ದಾರಿ ಬ್ಲಾಕ್ ಆಗಿದ್ದರಿಂದ ಅಗ್ನಶಾಮಕ ದಳಿ ಸ್ಥಳಕ್ಕೆ ಬರುವಷ್ಟರಲ್ಲಿ ಬೆಂಕಿ ಕೆನ್ನಾನಿಗೆ ಅಂಗಡಿ ಪೂರಾ ಸುಟ್ಟು ಕರಕಲಾಗಿದ್ದು, ಬೆಂಕಿ ನಂದಿಸಲು ಅಗ್ನಶಾಮಕ ದಳ ಪ್ರಯತ್ನ ನಡೆಸುತ್ತಿದ್ದು, ಬೆಂಕಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಲಕ್ಷಾಂತರ ಮೌಲ್ಯದ ಸೊತ್ತು ನಷ್ಟವಾಗಿದೆ. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂದಾಪುರ ಹೊಲಿಕ್ರಾಸ್ ಚರ್ಚ್, ಬಸ್ರೂರು ಫಿಲೀಪ್ ನೇರಿ ಚರ್ಚ್, ತ್ರಾಸಿ ಕ್ರಿಸ್ಟ್ಕಿಂಗ್ ಚರ್ಚ್, ಗಂಗೊಳ್ಳಿ ಅವರ್ ಲೇಡಿ ಆಫ್ ಇಮ್ಯಾಕ್ಯೂಲೇಟ್ ಚರ್ಚ್, ತಲ್ಲೂರು, ಬೆಳ್ವೆ ಜೊಸೆಫ್ ಚರ್ಚ್, ಫ್ರಾನ್ಸಿಸ್ ಆಸಿಸಿ ಚರ್ಚ್, ಬೈಂದೂರು ಹೊಲಿಕ್ರಾಸ್ ಚರ್ಚ್ ಸೇರಿದಂತೆ ವಿವಿಧ ಚರ್ಚುಗಳು ಹಾಗೂ ಕ್ರೈಸ್ತ ಸಮುದಾಯ ಕ್ರಿಸ್ಮಸ್ ಹಬ್ಬವನ್ನು ಆಚರಿಸಿ ಸಂಭ್ರಮಿಸಿದರು. ಚರ್ಚ್’ಗಳಿಗೆ ಕುಟುಂಬ ಸಮೇತ ತೆರಳಿದ ಕ್ರೈಸ್ತರು, ಯೇಸು ಕ್ರಿಸ್ತನ ಶೀಲುಬೆ ಮುಂದೆ ನಿಂತು ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು. ಚರ್ಚ್ ಆವರಣದಲ್ಲಿ ನಿರ್ಮಿಸಿರುವ ಕಣ್ಮನ ಸೆಳೆಯುವ ಗೋದಲಿಗಳು ವಿದ್ಯುತ್ ದೀಪಾಲಂಕಾರ ಗಮನ ಸೆಳೆಯುತ್ತಿದ್ದವು. ಕ್ರೈಸ್ತರ ಮನೆಗಳಲ್ಲಿ ಸಂಭ್ರಮ ಮನೆಮಾಡಿದ್ದು, ಗೋದಲಿ, ದೀಪಾಲಂಕಾರಗಳಿಂದ ಕಂಗೊಳಿಸುತ್ತಿದೆ. ಕುಂದಾಪುರ ಚರ್ಚಿನಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಕಥೊಲಿಕ್ ವಿಧ್ಯಾ ಮಂಡಳಿಯ ಕಾರ್ಯದರ್ಶಿಗಳಾದ ವಂ|ಧರ್ಮಗುರು ಅಂಟೋನಿ ಸೆರಾವೊ ಸಂದೇಶ ನೀಡಿದರು. ಪ್ರಧಾನ ಧರ್ಮಗುರುಗಳಾದ ಅ|ವಂ| ಸ್ಟ್ಯಾನಿ ತಾವ್ರೊ, ಕ್ರಿಸ್ಮಸ್ ಹಬ್ಬದ ಭವ್ಯ ಭಕ್ತಿ ಪ್ರಧಾನ ಬಲಿಪೂಜೆಯಲ್ಲಿ ಭಾಗಿಯಾಗಿ ಹಬ್ಬದ ಶುಭಾಶಯಗಳನ್ನು ಕೋರಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಮಕ್ಕಳ ಸಂಖ್ಯೆ ಕುಸಿಯುತ್ತಿದೆ ಎಂಬುದು ವಾಸ್ತವಾದರೂ ಊರವರು ಹಳೆವಿದ್ಯಾರ್ಥಿಗಳು ಹಾಗೂ ದಾನಿಗಳ ನೆರವಿನಿಂದ ಸರಕಾರಿ ಶಾಲೆಯನ್ನು ಉನ್ನತೀಕರಿಸಲು ಸಾಧ್ಯವಿದೆ ಎಂದು ಉದ್ಯಮಿ, ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟೀ ಡಾ. ಗೋವಿಂದ ಬಾಬು ಪೂಜಾರಿ ಅವರು ಹೇಳಿದರು. ಅವರು ಯಳಜಿತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೂ.1,60,000 ಮೌಲ್ಯದ ಪೀಠೋಪಕರಣ ಹಸ್ತಾಂತರಿಸಿ ಮಾತನಾಡಿ ಸಮಾಜಕ್ಕೆ ಒಳ್ಳೆಯದನ್ನು ಮಾಡುವ ಮನಸ್ಸಿದ್ದರೆ ಯಾವುದೇ ರೂಪದಲ್ಲಾದರೂ ಸೇವೆ ಮಾಡಬಹುದು. ನಾವು ಮಾಡುವ ಉತ್ತಮ ಕಾರ್ಯಗಳಿಗೆ ಕೆಲವರು ತಡೆಯೊಡ್ಡಿದರೂ ಅದು ಹಲವರಿಂದ ಪ್ರಶಂಸೆಗೊಳಪಡುತ್ತದೆ ಎಂದರು. ಎಸ್ಡಿಎಂಸಿ ಅಧ್ಯಕ್ಷ ಸುಕುಮಾರ ಗೌಡ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ ಸದಸ್ಯ ಕುಪ್ಪಯ್ಯ ಪೂಜಾರಿ, ಎಸ್ಡಿಎಂಸಿ ಮಾಜಿ ಅಧ್ಯಕ್ಷೆ ಇಂದಿರಾ, ಕೆಸರಿ ಯುವಕ ಮಂಡಲ ದ ಅಧ್ಯಕ್ಷ ರಾಘವೇಂದ್ರ ಪೂಜಾರಿ, ರಮೇಶ್ ಪೂಜಾರಿ, ಗ್ರಾ.ಪಂ ಮಾಜಿ ಅಧ್ಯಕ್ಷ ಮಹಾಬಲ ಕೊಠಾರಿ ಉಪಸ್ಥಿತರಿದ್ದರು.…

Read More