ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡಿನ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲೊಂದಾದ ಉಡುಪಿ ಶ್ರೀ ಕೃಷ್ಣಮಠಕ್ಕೆ ತನ್ನದೇ ಆದ ಮಹತ್ವವಿದೆ. ಮಧ್ವಮತ ಪ್ರವರ್ತಕರಾದ ಶ್ರೀ ಮಧ್ವಾಚಾರ್ಯರ ಸನ್ನಿಧಾನವಿರುವ ಸರ್ವಜ್ಞ ಪೀಠ ಎಂಬುಂದು ಅತಿ ದೊಡ್ಡ ಶಕ್ತಿ ಪೀಠವಾಗಿದೆ. ಇತಂಹ ಪೀಠದಿಂದ ಪರ್ಯಾಯ ಮಹೋತ್ಸವವನ್ನು ಕೊಡುಗೆಯಾಗಿ ನೀಡಿದವರು ಮಧ್ವಾಚಾರ್ಯರು ಎಂದು ಬಸ್ರೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ.ಅಪ್ಪಣ್ಣ ಹೆಗ್ಡೆ ಹೇಳಿದರು. ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಜನವರಿಯಲ್ಲಿ ನಡೆಯಲಿರುವ ಶ್ರೀ ಕೃಷ್ಣಾಪುರ ಮಠದ ಪರ್ಯಾಯ ಮಹೋತ್ಸವದ ಅಂಗವಾಗಿ ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರಿಗೆ ಹಸಿರು ಹೊರೆಕಾಣಿಕೆಯನ್ನು ಸಮರ್ಪಿಸುವ ಬಗ್ಗೆ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜರುಗಿದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅವರು ಶ್ರೀ ಮಧ್ವಾಚಾರ್ಯರು ನಮ್ಮ ಧರ್ಮ, ಸಂಸ್ಕೃತಿ, ಸಂಸ್ಕಾರದ ಮಹತ್ವವನ್ನು ಸಮಾಜಕ್ಕೆ ಅರ್ಪಿಸಿದ್ದಾರೆ. ನಮ್ಮೆಲ್ಲ ಸಂಸ್ಕೃತಿ ಸಂಸ್ಕಾರ ಉಳಿದು ಬೆಳಗಬೇಕಾದರೆ ನಾವೆಲ್ಲರೂ ಒಂದಾಗಿ ಪರ್ಯಾಯ ಮಹೋತ್ಸವದ ಯಶಸ್ಸಿನ ಹೊಣೆಯನ್ನು ಹೊರಬೇಕಾಗಿದೆ. ಕುಂದಾಪುರ ಮತ್ತು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಂಡ್ಸೆ ಆತ್ರಾಡಿಯ ವಿಜಯ ಮಕ್ಕಳ ಕೂಟದಲ್ಲಿ ಅಂಪಾರು ರೋಟರಿ ಕ್ಲಬ್ ಸಹಯೋಗದಲ್ಲಿ ಸೈಬರ್ ಕ್ರೈಂ ಜಾಗ್ರತಿ ಶಿಬಿರ ಇತ್ತೀಚೆಗೆ ನಡೆಯಿತು. ಯುವಜನ ಸಬಲೀಕರಣದ ಕುರಿತು ನರಸಿಂಹ ಗಾಣಿಗ ಹೆಮ್ಮಾಡಿ ವಿದ್ಯಾರ್ಥಿಗಳುನ್ನುದ್ದೇಶಿಸಿ ಮಾತನಾಡಿದರು. ಹೊಸಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ರಂಜಿತ್‌ಕುಮಾರ್ ಶೆಟ್ಟಿ ಸೈಬರ್‌ಕ್ರೈಂಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಅಂಪಾರು ರೋಟರಿ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ವಹಿಸಿದರು. ವಿ.ಎಂ.ಕೆ ಪೋಷಕ ಸಂಘದ ಅಧ್ಯಕ್ಷರಾದ ಬಗ್ವಾಡಿ ಚಂದ್ರಶೆಟ್ಟಿ, ಇಂಟರ‍್ಯಾಕ್ಟ್ ಅಧ್ಯಕ್ಷೆ ದೀಕ್ಷಿತಾ ದೇವಾಡಿಗ, ಕಾರ್ಯದರ್ಶಿ ಸ್ವರ್ಣ ಉಪಸ್ಥಿತರಿದ್ದರು. ಸಂಸ್ಥೆಯ ಮುಖೋಪಾಧ್ಯಾಯಿನಿ ದೀಪಿಕಾ ಸುಭಾಸ್ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿ ಟಿ.ಕೆ. ನಂದಾ ಕಾರ‍್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಆಶ್ರಿತ್ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಜನರಿಂದ ಜನರಿಗಾಗಿ ಜನರಿಗೋಸ್ಕರ ಹುಟ್ಟಿದ ಸಾಹಿತ್ಯವೇ ಜನಪದ ಸಾಹಿತ್ಯ. ಜನವಾಣಿ ಬೇರು ಕವಿವಾಣಿ ಹೂವು ಜಾನಪದ ಸಾಹಿತ್ಯ ಸಂಪಾದನೆಯ ಪ್ರಥಮ ಘಟ್ಟದಲ್ಲಿ ಹಲಸಂಗಿ ಗೆಳೆಯರು ಪ್ರಕಟಿಸಿದ ಗರತಿಯ ಹಾಡು, ಜೀವನ ಸಂಗೀತ ಹಾಗೂ ಮಲ್ಲಿಗೆ ದಂಡೆ ಸಂಕಲನಗಳ ಹಲವಾರು ಹಾಡುಗಳೊಂದಿಗೆ ಹಲಸಂಗಿ ಗೆಳೆಯರ ಬಳಗ ಜನಪದ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಕನ್ನಡ ನಾಡಿನ ಜಾನಪದ ಸಿರಿಯನ್ನು ಅನಾವರಣಗೊಳಿ ಕನ್ನಡಿಗರಿಗೆ ಉಣ ಬಡಿಸಿದ ಶ್ರೇಯಸ್ಸು ಕೀರ್ತಿ ಹಲಸಂಗಿ ಗೆಳೆಯರ ಬಳಗಕ್ಕೆ ಸಲ್ಲಬೇಕು ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಶ್ರೀಪಾದ ಶೆಟ್ಟಿ ಹೇಳಿದರು. ಹಲಸಂಗಿ ಗೆಳೆಯರ ಪ್ರತಿಷ್ಠಾನ ವಿಜಯಪುರ ಇವರ ಸಹಯೋಗದೊಂದಿಗೆ ಕನ್ನಡ ಸಂಘ, ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕೋಟೇಶ್ವರ ಹಾಗೂ ಇವರ ಆಶ್ರಯದಲ್ಲಿ ಕಾಲೇಜಿನ ಸಭಾಭವನದಲ್ಲಿ ಜರುಗಿದ ಹಲಸಂಗಿ ಗೆಳೆಯರು ಮತ್ತು ಜನಪದ ಸಾಹಿತ್ಯ ಕುರಿತಾದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ತುರ್ತು ವಿಪತ್ತು ನಿರ್ವಹಣಾ ಕಾರ್ಯಗಳನ್ನು ಎದುರಿಸಲು ಅನುಕೂಲವಾಗುವ ರೀತಿಯಲ್ಲಿ ಭೌಗೋಳಿಕ ಮಾಹಿತಿ ತಂತ್ರಜ್ಞಾನ ಆಧಾರಿತ ನಕ್ಷೆಯನ್ನು ಒಳಗೊಂಡಂತೆ ಎಲ್ಲಾ ಇಲಾಖೆಗಳ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು, ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತುರ್ತು ಸಂದರ್ಭದಲ್ಲಿ ವಿಪತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವ ರೀತಿಯಲ್ಲಿ, ಎಲ್ಲಾ ಅತ್ಯಾವಶ್ಯಕ ಸೌಲಭ್ಯಗಳ ಮಾಹಿತಿ ಒಂದೇ ಕಡೆ ದೊರೆಯುವಂತೆ ಮಾಹಿತಿಗಳು ಕ್ರೂಡೀಕೃತವಾಗಿ ಲಭ್ಯವಿದ್ದಲ್ಲಿ, ಯಾವುದೇ ರೀತಿಯ ವಿಳಂಬವಿಲ್ಲದೇ ಗೊಂದಲಕ್ಕೆ ಅವಕಾಶ ನೀಡದೇ ನಿರ್ವಹಣಾ ಕಾರ್ಯಗಳನ್ನು ಮಾಡಲು ಅನುಕೂಲವಾಗುತ್ತದೆ ಎಂದರು. ಮಳೆ, ಪ್ರವಾಹ ಸೇರಿದಂತೆ ಮತ್ತಿತರ ತುರ್ತು ಸಂದರ್ಭದಲ್ಲಿ ಆ ಪ್ರದೇಶಗಳಿಗೆ ಹೋಗಲು ಸೂಕ್ತ ರಸ್ತೆ ಸೌಲಭ್ಯ, ಹತ್ತಿರದ ಆಸ್ಪತ್ರೆ, ಸಂಬAದಪಟ್ಟ ವೈದ್ಯಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಮೊಬೈಲ್ ಸಂಖ್ಯೆ, ಅಂಬುಲೆನ್ಸ್ ಲಭ್ಯತೆ, ಜನರನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲು ಅನುಕೂಲವಾಗುವ ಸ್ಥಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯತ್‌ನ ಸದಸ್ಯರಿಗೆ ಪ್ರಥಮ ಬಾರಿಗೆ ಗೌರವ ಧನವನ್ನು ಮಂಜೂರು ಮಾಡಿಸಿದ್ದ ಸಚಿವ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿಯವರು ವಿಧಾನ ಪರಿ?ತ್‌ನಲ್ಲಿ ಸಭಾ ನಾಯಕರಾಗಿ 1,000 ರೂ. ಇದ್ದ ಗೌರವ ಧನವನ್ನು 2,000ರೂ.ಗೆ ಹೆಚ್ಚಿಸುವುದಾಗಿ ಭರವಸೆಯನ್ನೂ ನೀಡಿದ್ದಾರೆ. ಇತಿಹಾಸದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಸಬಲೀಕರಣಕ್ಕೆ ಗ್ರಾಮ ಪಂಚಾಯತ್‌ಗಳು ಸರಕಾರದಂತೆ ಕೆಲಸವನ್ನು ಮಾಡಬೇಕೆನ್ನುವ ಕಲ್ಪನೆಯನ್ನು ನೀಡಿ ನಿರಂತರವಾಗಿ ಗ್ರಾಮ ಪಂಚಾಯತ್ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿಗೋಸ್ಕರ ದುಡಿದಿರುವ ಕೋಟ ಶ್ರೀನಿವಾಸ ಪೂಜಾರಿ ಎಲ್ಲರೂ ಒಟ್ಟಾಗಿ ಒಂದಾಗಿ ಪೂರ್ಣ ಬಹುಮತದಿಂದ ಅವರನ್ನು ಗೆಲ್ಲಿಸಬೇಕು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಹೇಳಿದರು. ಅವರು ತ್ರಾಸಿಯ ಶ್ರೀ ಮಹಾಗಣಪತಿ ಸಭಾಭವನದಲ್ಲಿ ಬಿಜೆಪಿ ಬೈಂದೂರು ಮಂಡಲ ವತಿಯಿಂದ ಸೋಮವಾರ ಜರಗಿದ ಬಿಜೆಪಿ ಗಂಗೊಳ್ಳಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಗ್ರಾಮ ಪಂಚಾಯತ್ ಸದಸ್ಯರ ಚುನಾವಣಾ ಪೂರ್ವಸಿದ್ಧತಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಕೋಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಿಕ್ಷಾ ನಿಲ್ದಾಣದೊಳಗೆ ಟಿಪ್ಪರ್ ನುಗ್ಗಿ ನಾಲ್ಕು ಆಟೋ ರಿಕ್ಷಾ ಜಖಂ ಆದ ಘಟನೆ ಮಂಗಳವಾರ ಮಧ್ಯಾಹ್ನ ತಾಲೂಕಿನ ಮುಳ್ಳಿಕಟ್ಟೆ ಕ್ರಾಸ್ ಬಳಿ ನಡೆದಿದೆ. ಕುಂದಾಪುರ ಕಡೆಯಿಂದ ತ್ರಾಸಿ ಕಡೆಗೆ ಸಾಗುತ್ತಿದ್ದ ಟಿಪ್ಪರ್, ಮುಳ್ಳಿಕಟ್ಟೆ ಕ್ರಾಸ್ ಬಳಿ ತಿರುವು ತೆಗೆದುಕೊಂಡು ಅತೀ ವೇಗದಿಂದ ಸಾಗಿ ರಾಷ್ಟ್ರೀಯ ಹೆದ್ದಾರಿಯ ಇನ್ನೊಂದು ಬದಿಯಲ್ಲಿರುವ ಆಟೋ ಸ್ಟ್ಯಾಂಡ್ ಒಳಕ್ಕೆ ನುಗ್ಗಿದೆ. ಪರಿಣಾಮ ನಿಲ್ದಾಣದಲ್ಲಿದ್ದ 4 ಆಟೋಗಳು ನಜ್ಜುಗುಜ್ಜಾಗಿದೆ. ಆಟೋ ಚಾಲಕರು ಅದೃಷ್ಡವಶಾತ್ ಅಪಾಯದಿಂದ ಪಾರಾಗಿದ್ದಾರೆ. ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆ, ಅತಿಯಾದ ವೇಗ ಮತ್ತು ನಿರ್ಲಕ್ಷ್ಯತನ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್ಐ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದು ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ನಡೆಸಲ್ಪಡುವ ಶ್ರೀ ಭಗವದ್ಗೀತಾ ಅಭಿಯಾನದ ಅಂಗವಾಗಿ ಇತ್ತೀಚೆಗೆ ಬೈಂದೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ನಡೆದ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಷ್ಠ ಆರ್ ಶೇಟ್ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಕುಂದಾಪುರದ ಸುತ್ತಮುತ್ತಲಿನ ಸರಕಾರಿ ಅನುದಾನಿತ ಖಾಸಗಿ ಮತು ಅನುದಾನರಹಿತ ಖಾಸಗಿ ಕಾಲೇಜುಗಳ ಪ್ರಾಂಶುಪಾಲರುಗಳು ಮತ್ತು ಉಪನ್ಯಾಸಕರಿಗಳಿಗಾಗಿ ಮಂಗಳೂರು ವಿಶ್ವವಿದ್ಯಾನಿಲಯವು ಕಾರ್ಯಾಗಾರವನ್ನು ಹಮ್ಮಿಕೊಂಡಿತು. ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಇರುವ ಬಹುತೇಕ ವಿಷಯಗಳ ಕುರಿತಗೊಂದಲ ಮತ್ತು ಸಮಸ್ಯೆಗಳಿಗೆ ಪರಿಹಾರಗಳಿಲ್ಲವಾದರೂ ಸಮಾಧಾನಕರ ಉತ್ತರಗಳು ದೊರಕಿದವು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ರಾಷ್ಟ್ರೀಯ ಶಿಕ್ಷಣ ನೀತಿಯ ಮಂಗಳೂರು ವ್ಯಾಪ್ತಿಯ ನೋಡಲ್ ಅಧಿಕಾರಿಗಳಾದ ರವೀಂದ್ರ ಆಚಾರ್ ಮಾತನಾಡಿ, ಈ ಹಿಂದೆ ವಿದ್ಯಾರ್ಥಿಯು ಕೇವಲ ಓದುವುದು ಪರೀಕ್ಷೆ ಬರೆಯುವುದು ಮತ್ತು ಅಂಕ ಗಳಿಸುವುದು ಬಿಟ್ಟರೆ ಜ್ನಾನಾಧಾರಿತ ಶಿಕ್ಷಣಕ್ಕೆ ತೆರೆದುಕೊಳ್ಳುವ ಅವಕಾಶಗಳು ಕಡಿಮೆ ಇದ್ದವು. ಶಿಕ್ಷಣ ಕೇವಲ ಓದುವುದಕ್ಕೆ ಮತ್ತು ಅಂಕಕ್ಕೆ ಸೀಮಿತವಾಗಬಾರದು ಎಂಬುದನ್ನು ಮನಗಂಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ದೇಶದಲ್ಲಿಯೇ ಪ್ರಥಮವಾಗಿ ಅನುಷ್ಠನಗೊಳಿಸಲಾಗಿದೆ. ಈಗಿನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳು ತಮ್ಮ ಆಯ್ಕೆಯ ವಿಷಯದ ಕುರಿತಂತೆ ಕೌಶಲ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನೆಹರೂ ಮೈದಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಪರವಾನಗಿ ನೀಡಲು ಮೀನಮೇಷ ಎಣಿಸುತ್ತಿರುದನ್ನು ವಿರೋಧಿಸಿ ಯಕ್ಷಗಾನ ಪ್ರಿಯರ ಒಕ್ಕೂಟವು ಸಹಾಯಕ ಕಮಿಷನರ್‌ಗೆ ಮನವಿ ಸಲ್ಲಿಸಲಾಯಿತು. ಕುಂದಾಪುರ ನೆಹರೂ ಮೈದಾನ ಯಕ್ಷಕಾಶಿ ಎಂದೇ ಗುರುತಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಯಕ್ಷಪ್ರಿಯರು ಇಲ್ಲಿನ ಯಕ್ಷ ಸೊಬಗು ಸವಿಯಲು ಬರುತ್ತಾರೆ. 2016ರಲ್ಲಿ ಏಕಾಏಕಿ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಲಾಗಿತ್ತು. ಪ್ರತಿಭಟನೆ ನಡೆದಾಗ ಮತ್ತೆ ಅನುಮತಿ ನೀಡಲಾಗಿತ್ತು. ಇದೀಗ ಮತ್ತದೇ ಪರಿಸ್ಥಿತಿ ಎದುರಾಗಿದೆ. ಕೋವಿಡ್‌ನಿಂದ ಸಂಕಷ್ಟ ಎದುರಿಸಿರುವ ಯಕ್ಷಗಾನ ರಂಗ ಮೈಕೊಡವಿ ಏಳುತ್ತಿರುವಾಗಲೇ ತಾಲೂಕು ಆಡಳಿತ ಯಕ್ಷಗಾನ ಪ್ರದರ್ಶನ ಪರವಾನಗಿ ನೀಡಲು ಮೀನಮೇಷ ಎಣಿಸುತ್ತಿರುವುದು ಸರಿಯಲ್ಲ ಅನುಮತ ನಿರಾಕರಿಸಿದ್ದೇ ಆದಲ್ಲಿ ಉಗ್ರ ಹೋರಾಟದ ಕೈಗೆತ್ತಿಕೊಳ್ಳಬೇಕಾಗುತ್ತದೆ ಎಚ್ಚರಿಸಿದರು. ಕಲಾಕ್ಷೇತ್ರ ಅಧ್ಯಕ್ಷ ಕಿಶೋರ್ಕುಮಾರ್, ಸಾಲಿಗ್ರಾಮ ಮೇಳದ ಯಜಮಾನ ಕಿಶನ್ಕುಮಾರ ಹೆಗ್ಡೆ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಯಕ್ಷ ಸೊಬಗು ಅಧ್ಯಕ್ಷ ಶಶಿಧರ ಹೆಮ್ಮಾಡಿ, ಹಿರಿಯ ಪತ್ರಕರ್ತ ರಾಮಕೃಷ್ಣ ಹೇರ್ಳೆ, ಯಶಸ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ್ವಚ್ಛ ಕಡಲ ತೀರ, ಹಸಿರು ಕೋಡಿ ಅಭಿಯಾನದ ಮೂರನೆಯ ಹಂತವನ್ನು ಬ್ಯಾರೀಸ್ ವಿದ್ಯಾ ಸಂಸ್ಥೆ, ಕುಂದಾಪುರ ಪುರಸಭೆ ಮತ್ತು ಕೋಡಿ ಮಹಾಜನರ ಸಹಯೋಗದೊಂದಿಗೆ ಹಳಅಳಿವೆಯಿಂದ ಕೋಡಿಯ ಸೀ ವಾಕ್ ವರೆಗಿನ 4 ಕಿಲೋ ಮೀಟರ್ ದೂರದ ಕಡಲ ತೀರ ಹಾಗೂ ತೀರದ ಪಕ್ಕದಲ್ಲಿರುವ ರಸ್ತೆಯನ್ನು ಸ್ವಚ್ಛಗೊಳಿಸುವ ಮೂಲಕ ಹಮ್ಮಿಕೊಳ್ಳಲಾಯಿತು. ಪುರಸಭೆಯ ಸಹಕಾರದೊಂದಿಗೆ ಕಸದ ವಿಲೇವಾರಿ ಮಾಡಲಾಯಿತು. ಈ ಅಭಿಯಾನದ ನಿರಂತರ ಪ್ರಕ್ರಿಯೆಯಾಗಿ ಪ್ರತಿ ತಿಂಗಳ ಕೊನೆಯ ರವಿವಾರ ನಡೆಸಲಾಗುವುದು ಮತ್ತು ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರ ಪಾಲ್ಗೊಳ್ಳುವಿಕೆಯಿಂದ ಈ ಕಾರ್ಯವನ್ನು ಕುಂದಾಪುರ ಜನರ ಆದ್ಯತೆ ಹಾಗೂ ಆಶಯವಾಗಿ ರೂಪಿಸುವ ಇಚ್ಛೆಯನ್ನು ಬ್ಯಾರೀಸ್ ಗ್ರೂಪಿನ ಛೇರ್ಮನ್ ಸಯ್ಯದ್ ಮೊಹಮ್ಮದ್ ಬ್ಯಾರಿ ವ್ಯಕ್ತಪಡಿಸಿದರು. ಬ್ಯಾರೀಸ್ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯರು, ಕುಂದಾಪುರ ಪುರಸಭೆಯ ಕೌನ್ಸಿಲರ್ ಗಳು, ಶಿಕ್ಷಕರು, ವಿದ್ಯಾರ್ಥಿಗಳು ವಿವಿಧ ಸಂಘಟನೆಗಳ ಸದಸ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
