Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟಿಪ್ಪರ್ ವಾಹನವೊಂದು ಅದೇ ದಿಕ್ಕಿನಲ್ಲಿ ತೆರಳುತ್ತಿದ್ದ ಹೊಂಡಾ ಆಕ್ವಿವ್ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ, ಹೊಂಡಾ ಆಕ್ವಿವ್’ನಲ್ಲಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ಹೆಮ್ಮಾಡಿ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅರೆಹೊಳೆ ರಾಗಿಹಕ್ಲು ನಿವಾಸಿ ಜ್ಯೋತಿ (35) ಮೃತ ದುರ್ದೈವಿ. ಅಪಘಾತದಲ್ಲಿ ಸ್ಕೂಟಿ ಚಲಾಯಿಸುತ್ತಿದ್ದ ಅವರ ಪತಿ ಶರತ್ ಕುಮಾರ್ ಶೆಟ್ಟಿ (45) ಹಾಗೂ ಅವರ ಮಗಳು ಸನ್ನಿಧಿ (7) ಗಾಯಗೊಂಡಿದ್ದಾರೆ. ಕುಂದಾಪುರ ಕಡೆಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ವೇಗದಲ್ಲಿ ಬಂದು ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಹೊಂಡಾ ಆಕ್ವಿವ್ ವಾಹನಕ್ಕೆ ಢಿಕ್ಕಿಯಾಗಿದೆ. ಈ ವೇಳೆ ಹಿಂದೆ ಕುಳಿತಿದ್ದ ಜ್ಯೋತಿ ಎಂಬುವವರು ಕೆಳಕ್ಕೆ ಬಿದ್ದ ಸಂದರ್ಭ, ಟಿಪ್ಪರ್ ಅವರ ಹೊಟ್ಟೆಯ ಮೇಲೆಯೇ ಚಲಿಸಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಹಿಳೆ ಕೆಳಕ್ಕೆ ಬೀಳುತ್ತಿರುವ ಸಂದರ್ಭ ಮಗಳನ್ನು ರಕ್ಷಿಸುವ ಸಲುವಾಗಿ ಇನ್ನೊಂದು ಬದಿಗೆ ಹಾಕಿದ್ದರಿಂದ ಅವರ ಮಗಳ ಕೈಗೆ ತರಚಿದ ಗಾಯ ಹಾಗೂ ಪತಿ ಸಣ್ಣಪುಟ್ಟ ಗಾಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು…

Read More

ಉಚಿತ ಶಿಕ್ಷಣ ಸೌಲಭ್ಯದ ಪ್ರವೇಶ ಪರೀಕ್ಷೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2022-23ನೇ ಸಾಲಿನ 6ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆಯು ಪುತ್ತಿಗೆ ವಿವೇಕಾನಂದ ನಗರದಲ್ಲಿ ಭಾನುವಾರ ನಡೆಯಿತು. ರಾಜ್ಯಾದ್ಯಂತ 26 ಜಿಲ್ಲೆಗಳ 11,362 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 10,764 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 6ನೇ ತರಗತಿಗೆ 5,628, 7ನೇ ತರಗತಿಗೆ 1936, 8ನೇ ತರಗತಿಗೆ 2,157 ವಿದ್ಯಾರ್ಥಿಗಳು ಹಾಗೂ 9ನೇ ತರಗತಿಗೆ 1,043 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು. ಬೆಳಗಾವಿ ಜಿಲ್ಲೆಯಿಂದ ಅತೀ ಹೆಚ್ಚು 3,513 ವಿದ್ಯಾರ್ಥಿಗಳು, ಬಾಗಲಕೋಟೆ ಹಾಗೂ ವಿಜಯಪುರದಿಂದ ಕ್ರಮವಾಗಿ 1,519 ಹಾಗೂ 1,088 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಪ್ರವೇಶ ಪರೀಕ್ಷೆಯು ವಿದ್ಯಾರ್ಥಿಗಳು ಪ್ರಸ್ತುತ ಓದುತ್ತಿರುವ ಪಠ್ಯವಿಷಯಗಳಿಗೆ ಸಂಬಂಧಿಸಿದ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ನೂಜಾಡಿ -2 ಬಗ್ವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ನಿರ್ಮಿಸಲಾದ ವಿನೂತನ ಮಾದರಿ ಸ್ಮಾರ್ಟ್ ತರಗತಿ ಶನಿವಾರ ಉದ್ಘಾಟನೆಗೊಂಡಿತು. ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಕಟ್ಟಕಡೆಯ ಮಗು ಶಿಕ್ಷಣ ಪಡೆದರೆ ದೇಶ ಬದಲಾಗಲು ಸಾಧ್ಯ. ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರುತ್ತಾರೆ. ಶಿಕ್ಷಣದಿಂದ ಯಾವ ಮಗುವೂ ವಂಚಿತವಾಗಬಾರದು. ಗ್ರಾಮೀಣ ಶಾಲೆಗಳ ಮೂಲಸೌಕರ್ಯ ಒದಗಿಸುವ ಕಾರ್ಯ ಆಗುತ್ತಿದ್ದು, ಕೆಸ್ಸಾರ್ಟಿಸಿ ಬಸ್ನಲ್ಲಿ ಸ್ಮಾರ್ಟ್ ಕ್ಲಾಸ್ ರಾಜ್ಯಕ್ಕೆ ಮಾದರಿ ಎಂದರು. ಗ್ರಾಮೀಣ ಭಾಗದ ಸಂಚಾರ ಪರವಾನಿಗೆ ಇದ್ದರೂ ಬಸ್ ಓಡಿಸದೆ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಮಸ್ಯೆ ಆಗುತ್ತಿದೆ. ಪರವಾನಿಗೆ ಇರುವ ಗ್ರಾಮ ಪ್ರದೇಶಗಳಿಗೆ ಕೆಎಸ್ಸಾರ್ಟಿಸಿ ಬಸ್ ಬಿಡದಿದ್ದರೆ 25 ಸಾವಿರ ವಿದ್ಯಾರ್ಥಿಗಳ ಸಹಿತ ಕುಂದಾಪುರ ಕೆಎಸ್ಸಾರ್ಟಿಸಿ ಡಿಪೋ ಎದುರು ಪ್ರತಿಭಟನೆ ನಡೆಸಲಾಗುತ್ತದೆ ಎಚ್ಚರಿಕೆ ನೀಡಿದ್ದಾರೆ. ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಕಮಲ ಕುಮಾರ್ ಮಾತನಾಡಿ ನಿರುಪಯುಕ್ತ ಕೆಎಸ್‌ಆರ್‌ಟಿಸಿ ಬಸ್ ಸಂಪೂರ್ಣ ಬದಲಾಗಿ ಸ್ಮಾರ್ಟ್ ಕ್ಲಾಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿಗಳ ಕುಂದಾಪುರ ಪುರಸಭೆ ಹಾಗೂ ಕಂದಾವರದಲ್ಲಿರುವ ಪುರಸಭೆಯ ಡಂಪಿಂಗ್ ಯಾರ್ಡ್‌ಗೆ ಶುಕ್ರವಾರ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪುರಸಭೆಯ ವಿಲೇವಾರಿ ಘಟಕದಲ್ಲಿ ತ್ಯಾಜ್ಯ ವಿಂಗಡನೆ, ಗೊಬ್ಬರ ಸಿದ್ದಪಡಿಸುವ ಯಂತ್ರಗಳ ಕೆಲಸ, ತ್ಯಾಜ್ಯ ನೀರು ಸಂಸ್ಕರಣ ಘಟಕದ ಒಂದು ತೊಟ್ಟು ನೀರು ಹೊರಗೆ ಬಿಡದೆ, ಶುದ್ದೀಕರಿಸಿ ಗಿಡಗಳಿಗೆ ಉಣಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು. ಬಳಿಕ ವಿದ್ಯಾರ್ಥಿಗಳು ಪುರಸಭೆ ಕಚೇರಿಗೆ ಭೇಟಿ ನೀಡಿದರು. ವಿದ್ಯಾರ್ಥಿಗಳಿಗೆ ತ್ಯಾಜ್ಯ ನಿರ್ವಹಣೆ ಬಗ್ಗೆ ಕ್ವಿಜ್ ನಡೆಸಲಾಗಿದ್ದು, ತ್ಯಾಜ್ಯ ಸಮಪರ್ಕಕ ನಿರ್ವಹಣೆ ಬಗ್ಗೆ ವಿದ್ಯಾರ್ಥಿಗಳ ಜೊತೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು. ಕುಂದಾಪುರ ಪುರಸಭೆಯಲ್ಲಿ ಇಷ್ಟು ತ್ಯಾಜ್ಯ ಸಂಗ್ರಹವಾಗುತ್ತದೆ ಎನ್ನೋದು ನಮಗೆ ಗೊತ್ತೇಯಿರಲಿಲ್ಲ. ತ್ಯಾಜ್ಯ ನಿರ್ವಹಣೆ, ಗೊಬ್ಬರ ತಯಾರಿಕೆ ನಿಜಕ್ಕೂ ಅಚ್ಚರಿ. ನಾವು ಇನ್ನುಮುಂದೆ ತ್ಯಾಜ್ಯ ಕುರಿತು ಮನೆಯಲ್ಲಿ ಜಾಗೃತಿ ಮೂಡಿಸಿ, ಆದಷ್ಟು ತ್ಯಾಜ್ಯ ಕಡಿಮೆ ಆಗುವಂತೆ ಪ್ರಯತ್ನಿಸುತ್ತೇವೆ ಎಂದು ವಿದ್ಯಾರ್ಥಿಗಳು ಪ್ರತಿಕ್ರಿಯಿಸಿದಾರೆ. ಪ್ರತಿದಿನ ಪುರಸಭೆಯಲ್ಲಿ 14…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆ ತಾಲೂಕಿನ ಹಳಗೇರಿಯ ಜಾಗವನ್ನು ಕೈಗಾರಿಕಾ ವಲಯವಾಗಿ ಅಭಿವೃದ್ಧಿಪಡಿಸಿ ಸೀಪುಡ್ ಪಾರ್ಕ್ ಮಾಡುವುದನ್ನು ವಿರೋಧಿಸಿ ನಾಗೂರಿನಲ್ಲಿ ಗುರುವಾರ ಹಮ್ಮಿಕೊಂಡ ‘ಪರಿಸರ ರಕ್ಷಿಸಿ ಜೀವನ ಉಳಿಸಿ’ ಅಭಿಯಾನ ಉದ್ಘಾಟನೆಗೊಂಡಿತು. ಮುಂಬೈನ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕ ತೋನ್ಸೆ ಜಯಕರ್ ಶೆಟ್ಟಿ ಅಭಿಯಾನ ಉದ್ಘಾಟಿಸಿ ಮಾತನಾಡಿ ಉಡುಪಿ ಜಿಲ್ಲೆಗೆ ಹೆಚ್ಚು ಕೈಗಾರಿಕೆಗಳನ್ನು ತರುವ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ ಪರಿಸರ, ಜನಜೀವನ ನಾಶ ಮಾಡಿ ಕೈಗಾರಿಕೆ ಸ್ಥಾಪಿಸುವುದು ಖಂಡನಾರ್ಹ. ಕೈಗಾರಿಕಾ ವಲಯದ ಜಾಗವನ್ನು ವೈಜ್ಞಾನಿಕವಾಗಿ ಆಯ್ದುಕೊಳ್ಳುವುದು ಬಹುಮುಖ್ಯ ಎಂದರು. ಹಳಗೇರಿಯಲ್ಲಿ ಕೈಗಾರಿಕಾ ವಲಯದ ನಿರ್ಧಾರದಿಂದ ಪರಿಸರ ಹಾಗೂ ಸುಮಾರು ಎಂಟು ಗ್ರಾಮಗಳ ಜನರಿಗೆ ತೊಂದರೆಯಾಗಲಿದೆ ಸಮಿತಿಯವರು ಮನಗಂಡಿದ್ದು, ಇದರಿಂದಾಗುವ ತೊಂದರೆಗಳ ಬಗ್ಗೆ ಸರ್ಕಾರಕ್ಕೆ ತಿಳಿಸಲಾಗುವುದು. ನೊಂದ ಜನರಿಗೆ ನ್ಯಾಯ ಒದಗಿಸಬೇಕೇಂಬ ನೆಲೆಯಲ್ಲಿ ಸಮಾನ ಮನಸ್ಕರು ಒಂದಾಗಿ ಸ್ಥಾಪಿಸಿದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಪ್ರಗತಿಪರ ಚಿಂತಕರ ಚಾವಡಿಯಾಗಿದೆ. ನಮ್ಮ ಹೋರಾಟ ಸ್ವ-ಹಿತಾಸಕ್ತಿಗಾಗಿ ಅಥವಾ ವೈಯಕ್ತಿಕವಾಗಿರದೇ ಸಾಮಾಜಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಮಾ.10: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ಕಾರು ಚಾಲಕನೋರ್ವ ಹಲ್ಲೆಗೈದ ಘಟನೆ ತಾಲೂಕಿನ ಅಸೋಡು ಎಂಬಲ್ಲಿ ನಡೆದಿದೆ. ಮಾ.4ರಂದು ಈ ಘಟನೆ ನಡೆದಿದ್ದು, ಇಂದು ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೋಟೇಶ್ವರ ಹಾಲಾಡಿ ರಸ್ತೆಯಲ್ಲಿ ನ್ಯಾಯ ಬೆಲೆ ಅಂಗಡಿಗಳಿಗೆ ಅನ್ನಭಾಗ್ಯದ ಅಕ್ಕಿ ಸಾಗಾಟ ಮಾಡುವ ಲಾರಿ ಚಾಲಕ ಮಹಮ್ಮದ್ ಇಸಾಕ್ ಎಂಬುವವರಿಗೆ, ಅಸೋಡು ನಂದಿಕೇಶ್ವರ ದೈವಸ್ಥಾನದ ಕಮಾನು ಬಳಿ ರಿಟ್ಸ್ ಕಾರಿನ ಚಾಲಕ ತನ್ನ ಕಾರನ್ನು ಅಡ್ಡ ತಂದು ನಿಲ್ಲಿಸಿ ಏಕಾಏಕಿ ಹಲ್ಲೆಗೈದಿದ್ದಾನೆ. ಸಾರ್ವಜನಿಕರು ತಡೆಯುತ್ತಿದ್ದರೂ ಕಾರು ಚಾಲಕ ಲಾರಿ ಚಾಲಕನಿಗೆ ಹಲ್ಲೆಗೈದಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ, ಜೈ ಕುಂದಾಪುರ ಸೇವಾ ಟ್ರಸ್ಟ್-ಕುಂದಾಪುರ ಇವರ ಆಶ್ರಯದಲ್ಲಿ ರಕ್ತದಾನ ಶಿಬಿರ ಜರಗಿತು. ಇಂಡಿಯನ್ ರೆಡ್‌ಕ್ರಾಸ್ ಘಟಕದ ಚೇರ್‌ಮನ್ ಜಯಕರ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು, ಕಾರ್ಯದರ್ಶಿಗಳಾದ ಸೀತಾರಾಮ್ ಶೆಟ್ಟಿ, ಜನೌಷಧಿ ಉಸ್ತುವಾರಿ ಗಣೇಶ್ ಆಚಾರ್, ಸದಸ್ಯರಾದ ಮುತ್ತಯ್ಯ ಶೆಟ್ಟಿ, ಡಾ. ಸೋನಿ, ಲಯನ್ಸ್ ಕ್ಲಬ್ ಕುಂದಾಪುರದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ಸದಸ್ಯರಾದ ನವೀನ್ ಶೆಟ್ಟಿ, ಜೈ ಕುಂದಾಪುರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಪುಂಡಲೀಕ ಮೊಗವೀರ ಮತ್ತು ತಂಡದವರು, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ, ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಸಹ ಸಂಯೋಜಕಿ ಮಾಲತಿ ಕುಂದರ್, ಎನ್.ಸಿ.ಸಿ. ಘಟಕದ ಸಂಯೋಜಕರಾದ ಶಿವರಾಜ್ ಸಿ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೃಂದಾವನ ಸಂಜೀವಿನಿ ಒಕ್ಕೂಟ ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಇಂದು ಮಹಾತ್ಮಗಾಂಧಿ ಸಭಾಭವನದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ವಂಡ್ಸೆ ಪಂಚಾಯಿತಿ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೂಪ ಗೋಪಿ, ಒಕ್ಕೂಟದ ಅಧ್ಯಕ್ಷೆ ಆಶಾ ಟಿ., ಸ್ತ್ರೀಶಕ್ತಿ ಅಧ್ಯಕ್ಷೆ ಜುಲೇಖಾ, ಗ್ರಾ.ಪಂ. ಸದಸ್ಯ ಗೋವರ್ಧನ ಜೋಗಿ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ, ಜಯಂತಿ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಎಂ.ಬಿ.ಕೆ ಮತ್ತು ಎಲ್.ಸಿ.ಆರ್.ಪಿ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕೃಷಿಕರು, ಪ್ರಸೂತಿ ತಜ್ಞೆ ಸಿಂಗಾರಿ ಶೆಟ್ಟಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಪಾರ್ವತಿ ಪಟಗಾರ್, ಅಂಗನವಾಡಿ ಕಾರ್ಯಕರ್ತೆ ಪೂರ್ಣಿಮಾ ಶೆಟ್ಟಿ, ಗೃಹೋದ್ಯಮಿ ಸವಿತಾ ಕಾಮತ್ ಅವರನ್ನು ಸನ್ಮಾನಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಗೀತಾ ಸ್ವಾಗತಿಸಿದರು, ಆಶಾರಾಣಿ ಕಾರ್ಯಕ್ರಮ ನಿರ್ವಹಿಸಿ ಸಲ್ಮಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸುವುದರೊಂದಿಗೆ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಮನೀಶ್ ಆಸ್ಪತ್ರೆಯ ಸಂಸ್ಥಾಪಕಿ, ವೈದ್ಯೆ ಪ್ರಮೀಳಾ ನಾಯಕ್ ಫರ್ನಾಂಡಿಸ್ ಇವರು ಸಾಧಕ ಮಹಿಳೆಯರನ್ನು ಸನ್ಮಾನಿಸಿ ಮಾತನಾಡಿ ಪ್ರತಿಯೊಬ್ಬ ಹೆಣ್ಣು ತನ್ನ ಶಕ್ತಿ ಸಾಮರ್ಥ್ಯ ಅರ್ಥೈಸಿಕೊಂಡು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನ ಸಾಧನೆ ತೋರಿ ಮಾದರಿಯಾಗಬೇಕು ಎಂದು ಹುರಿದುಂಬಿಸಿದರು. ಜೊತೆಗೆ ಎಲ್ಲಾ ಸಾಧಕ ಮಹಿಳೆಯರ ಸಾಧನೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಕುಂದಾಪುರದ ಬಹುಮುಖ ಪ್ರತಿಭೆ ಅಕ್ಷತಾ ಗಿರೀಶ್ ಐತಾಳ್, ವಿಶೇಷ ಚೇತನ ಮಕ್ಕಳ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಹಾಲಾಡಿಯ ಬ್ರೈಟ್ ಪರ್ಲ್ ಸ್ಕೂಲ್ ನ ಸಂಸ್ಥಾಪಕರಾದ ಆಶಾ ರಾಜೀವ್ ಕುಲಾಲ್, ಕಲಾ ಕ್ಷೇತ್ರದ ಸಾಧನೆಗಾಗಿ ಕಲಾವಿದರಾದ ಸುಧಾ ಮಣೂರ್ ಹಾಗೂ ಸಾಮಾಜಿಕ ಕ್ಷೇತ್ರದ ಕೊಡುಗೆಗಾಗಿ ಕೋಣಿಯ ಮಾನಸ ಜ್ಯೋತಿ ಸಂಸ್ಥೆಯ ಆಡಳಿತ ವಿಭಾಗದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮಾ.8: ಪುರಾತನ ಪ್ರಸಿದ್ಧ ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಎ.14 ರಿಂದ 16ರ ವರೆಗೆ ನಡೆಯುವ ಶ್ರೀ ನಂದಿಕೇಶ್ವರ ಮತ್ತು ಪರಿವಾರ ದೈವಗಳ ವಾರ್ಷಿಕೋತ್ಸವ ಮತ್ತು ಭಜನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೈವಸ್ಥಾನದ ವಠಾರದಲ್ಲಿ ನಡೆಯಿತು. ಕೃಷ್ಣ ದೇವಾಡಿಗ ಪೂಜೆ ಕಾರ್ಯ ನೆರವೇರಿಸಿದರು. ಈ ಸಂದರ್ಭ ದೈವಸ್ಥಾನದ ಅಧ್ಯಕ್ಷ ಜನಾರ್ದನ ದೇವಾಡಿಗ ಮತ್ತು ಸಮಿತಿ ಸದಸ್ಯರು ಹಾಗೂ ಸ್ಥಳೀಯ ಭಕ್ತಾಧಿಗಳು ಉಪಸ್ಥಿತರಿದ್ದರು. ಎ.14ರಂದು ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ನಾಗದೇವರ ವಾರ್ಷಿಕ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಎ.15ರಂದು ಬೆಳಗ್ಗೆ 9.05ಕ್ಕೆ ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಏ.16ರಂದು ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ. ಎ.15ರಿಂದ ಎ.16ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 5ಗಂಟೆಗೆ ಗೆಂಡ ಸೇವೆ ಹಾಗೂ ರಾತ್ರಿ ಗಂಟೆ 9.30ಕ್ಕೆ ಶ್ರೀ ವೀರಭದ್ರಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ…

Read More