ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ, ನ.10: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಿಳಯ್ಯನ್ ಕೆ. ಗೋವಿಂದ ಶೇರಿಗಾರ್ ಮನೆ, ಒಂಬತ್ತು ದಂಡಿಗೆ ಪಡುಕೇರಿ, ಕುಂದಾಪುರದಲ್ಲಿ ಗೋ ಪೂಜಾ ಕಾರ್ಯಕ್ರಮವು ಇಂದು ಭಕ್ತಿ-ಶ್ರದ್ಧೆಯಿಂದ ನಡೆಯಿತು. ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಗೋವು ಕೇವಲ ಪ್ರಾಣಿಯಲ್ಲ ಅದು ನಮ್ಮ ಸಂಸ್ಕೃತಿ, ನಮ್ಮ ಶ್ರದ್ಧೆ, ನಮ್ಮ ಜೀವನದ ಅವಿಭಾಜ್ಯ ಅಂಗ. ಗೋವನ್ನು ಪೂಜಿಸುವುದೆಂದರೆ ಪ್ರಕೃತಿಯನ್ನು ಪೂಜಿಸಿದಂತೆ. ದೀಪಾವಳಿಯ ಈ ಪವಿತ್ರ ಸಂದರ್ಭದಲ್ಲಿ ಗೋಮಾತೆಯ ಆರಾಧನೆ ಮಾಡುವುದರಿಂದ ಸಮಾಜದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ. ಗೋ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಮಹಿಳಾ ಮೋರ್ಚಾ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು. ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು ಮಾತನಾಡಿ, ಮಹಿಳಾ ಮೋರ್ಚಾ ಸಂಘಟನೆಯೊಂದಿಗೆ ಸಂಸ್ಕೃತಿ ಉಳಿಸುವ ಕೆಲಸವನ್ನೂ ಮಾಡುತ್ತಿದೆ. ಗೋ ಪೂಜೆಯಂತಹ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ನಮ್ಮ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೀಪಾವಳಿ ಕೇವಲ ಸಂಭ್ರಮದ ಹಬ್ಬವಲ್ಲ. ಅದು ಜ್ಞಾನ, ತಿಳುವಳಿಕೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳಗಿಸುವ ಹಬ್ಬವಾಗಿದೆ ಎಂದು ಖ್ಯಾತ ಚಿಂತಕ ಮುನಿರಾಜ್ ರೆಂಜಾಳ ಹೇಳಿದರು. ಅವರು ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಡೊಳ್ಳು ದೀಪಾವಳಿ ಕಾರ್ಯಕ್ರಮದಲ್ಲಿ ದೀಪಾವಳಿ ಸಂದೇಶ ನೀಡಿ ಮಾತನಾಡಿದರು. ಪ್ರತಿಯೊಂದು ಹಬ್ಬದ ಹಿಂದೆಯೂ ಒಂದು ಇತಿಹಾಸ, ಸಂಸ್ಕೃತಿ ಹಾಗೂ ಬದುಕಿಗೆ ಮಾರ್ಗದರ್ಶನ ನೀಡುವ ಸಂದೇಶವಿದೆ. ಹಣತೆ ಕೇವಲ ಬೆಳಕಿನ ಸಂಕೇತವಲ್ಲ. ಅದು ಜ್ಞಾನ ಮತ್ತು ತಿಳುವಳಿಕೆಯ ಪ್ರತೀಕವಾಗಿದೆ. ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ಬೆಳಕನ್ನು ಹರಡುವ ಸಂದೇಶವನ್ನು ಹಣತೆ ನೀಡುತ್ತದೆ. ನಾವೆಲ್ಲರೂ ಒಂದೊಂದು ಹಣತೆಯಂತೆ ನಾವು ಇರುವ ಸ್ಥಳದಲ್ಲಿ ಬೆಳಕು ಹರಿಸುವ ಕೆಲಸ ಮಾಡಬೇಕು. ಸಮಾಜದಲ್ಲಿ ಪ್ರೀತಿ, ಸಹಬಾಳ್ವೆ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ಮೂಲಕ ನಮ್ಮ ಬದುಕು ಇತರರಿಗೂ ಬೆಳಕಾಗಬೇಕು. ದೀಪಾವಳಿ ಎಲ್ಲಾ ಪಂಥ, ಸಮುದಾಯಗಳ ನಡುವೆ ಸಂಭ್ರಮ ಹಾಗೂ ಸೌಹಾರ್ದತೆಯನ್ನು ಬೆಸೆಯುವ ಹಬ್ಬವಾಗಿದೆ. ಬೆಳಕು ಎಂಬುದು ಎಲ್ಲರಿಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಒಂದು ಕುಟುಂಬದ ಒಂದು ಗಂಡು ಅಥವಾ ಹೆಣ್ಣು ಶಿಕ್ಷಿತನಾದರೆ ಆ ಕುಟುಂಬದ ಏಳ್ಗೆಯಾಗುವುದು. ಮರವಂತೆ ಗ್ರಾಮದ ಕನ್ನಡ ಖಾರ್ವಿ ಸಮುದಾಯದ ಪ್ರತಿಯೊಂದು ಕುಟುಂಬದ ಮಕ್ಕಳು ಶಿಕ್ಷಣ ಪಡೆಯುವಂತಾಗಬೇಕು. ಇದರಿಂದ ಈ ಸಮುದಾಯದ ಕೆಲವು ಮಕ್ಕಳಿಗಾದರೂ ನೆರವಾಗಬೇಕು ಎಂದು ನವೀನಚಂದ್ರ ಮರವಂತೆ ಸ್ಮಾರಕ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ. ಶಂಕರ ಖಾರ್ವಿ ಹೇಳಿದರು. ಅವರು ಮರವಂತೆಯ ಸಾಧನಾ ಸಮುದಾಯ ಭವನದಲ್ಲಿ ಭಾನುವಾರ ನವೀನಚಂದ್ರ ಮರವಂತೆ ಸ್ಮಾರಕ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ನಿವೃತ್ತ ಸಹಾಯಕ ಮೀನುಗಾರಿಕಾ ನಿರ್ದೇಶಕ ಸಿ.ಎಸ್. ಖಾರ್ವಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಬೇಕು. ಆ ಗುರಿಯನ್ನು ಸಾಧಿಸುವ ಛಲದೊಂದಿಗೆ ಸಾಧನೆ ಮಾಡಬೇಕು ಎಂದರು. ಟ್ರಸ್ಟ್ನ ಸಲಹೆಗಾರ ಎಂ. ಶ್ರೀಧರ ಖಾರ್ವಿ ಮತ್ತು ಅಣ್ಣಪ್ಪ ಖಾರ್ವಿ ಉಪಸ್ಥಿತರಿದ್ದರು. ಒಟ್ಟು ಸುಮಾರು 19 ವಿದ್ಯಾರ್ಥಿಗಳಿಗೆ ಸುಮಾರು 1.8 ಲಕ್ಷ ರೂ. ವಿದ್ಯಾರ್ಥಿವೇತನ ವಿತರಿಸಲಾಯಿತು. ಅಣ್ಣಪ್ಪ ಖಾರ್ವಿ ವಂದಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕುಂದಾಪುರ ವಲಯ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್, ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆಗೈದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್ ಭಟ್ ಮತ್ತು ಪ್ರಸ್ತುತ್ ಶೆಟ್ಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸುಹಾ ಶೇಖ್ ಗಝಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಆರ್ಷಿಯಾ ಸಯ್ಯದ್ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅದೇ ರೀತಿ ಕವ್ವಾಲಿ (Qawwali) ಯಲ್ಲಿ ವಿದ್ಯಾರ್ಥಿಗಳಾದ ಅಮ್ರಾ ಫಾತಿಮಾ, ಆಯಿಷಾ ಅಕ್ಸಾ, ಆಯಿಷಾ ಸಲಿಹಾ, ಆಮಿನಾ ಝಾರಾ, ಮಾಝ್ ಉಮ್ಮರ್, ಮೊಹಮ್ಮದ್ ಸಾಹಿಲ್ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಗ್ರಾಮೀಣ ಕೌಶಲ್ಯ ವಿಭಾಗದ ಅಧಿಕಾರಿಗಳಾದ ಆಶಿಶ್ ಸಿನ್ಹಾ ಹಾಗೂ ಅಬು ಓ. ಎಸ್. ಅವರು ಬ್ರಹ್ಮಾವರದ ರುಡ್ಸೆಟ್ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆಗಳು ಹಾಗೂ ತರಬೇತಿ ಸೌಲಭ್ಯಗಳನ್ನು ಪರಿಶೀಲಿಸಿದರು. ಭೇಟಿಯ ಸಂದರ್ಭದಲ್ಲಿ ಅಧಿಕಾರಿಗಳು ಸಂಸ್ಥೆಯ ಸಂಪೂರ್ಣ ಆವರಣ, ತರಬೇತಿ ಕೊಠಡಿಗಳು, ವಸತಿ ನಿಲಯ, ಮೆಸ್ ಬ್ಲಾಕ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು. ನಂತರ ಸಂಸ್ಥೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮೀನುಗಾರಿಕೆ (Pisciculture) ಹಾಗೂ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರಗಳ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ತರಬೇತಿಯ ಮಹತ್ವ, ಲಭ್ಯವಿರುವ ಸೌಲಭ್ಯಗಳ ಸದುಪಯೋಗ ಹಾಗೂ ತರಬೇತಿಯ ನಂತರ ಸ್ವಯಂ ಉದ್ಯೋಗ ಆರಂಭಿಸುವ ಕುರಿತು ಶಿಬಿರಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ತರಬೇತಿಯಲ್ಲಿ ಆಸಕ್ತಿಯಿಂದ ಪಾಲ್ಗೊಂಡು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳುವಂತೆ ಸಲಹೆ ನೀಡಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಸಂಸ್ಥೆಯ ವ್ಯವಸ್ಥಿತ ಕಾರ್ಯನಿರ್ವಹಣೆ, ತರಬೇತಿ ಸೌಲಭ್ಯಗಳು ಹಾಗೂ ಸಿಬ್ಬಂದಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್ನ ಇದರ ಆಶ್ರಯದಲ್ಲಿ ಎಐಸಿಎಸ್ (AICS) ಅಂತರ ಶಾಲಾ ಥ್ರೋಬಾಲ್ ಪಂದ್ಯಾವಳಿ “ಸೈಂಟ್ ಥಾಮಸ್ ಕಪ್–2026” ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಸುಮಾರು 18 ಶಾಲೆಗಳ ಕ್ರೀಡಾಪಟುಗಳು ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆ, ತಂಡದ ಸಹಕಾರ ಹಾಗೂ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿದರು. ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೈಂದೂರಿನ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಉಪಸ್ಥಿತರಿದ್ದರು. ಅವರು ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿದ್ದು, ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಧೈರ್ಯದಿಂದ ಮುನ್ನಡೆಯಬೇಕು ಎಂದು ಪ್ರೇರಣಾದಾಯಕ ನುಡಿಗಳನ್ನಾಡಿದರು. ಗೌರವ ಅತಿಥಿಗಳಾದ ಉಡುಪಿಯ ಶಾರದಾ ರೆಸಿಡೆನ್ಷಿಯಲ್ ಶಾಲೆಯ ಪ್ರಾಂಶುಪಾಲರಾದ ಶ್ರೀ ವಿನ್ಸೆಂಟ್ ಡಿʼಕೋಸ್ಟಾ ಅವರು ಮಾತನಾಡಿ, ಕ್ರೀಡಾಪಟುಗಳು ದೈಹಿಕವಾಗಿ ಸದೃಢರಾಗುವುದರೊಂದಿಗೆ ಮಾನಸಿಕವಾಗಿಯೂ ಶಕ್ತಿಶಾಲಿಗಳಾಗಿರಬೇಕು. ಯಾವುದೇ ಸವಾಲುಗಳಿಗೆ ಹೆದರದೆ ಧೈರ್ಯದಿಂದ ಮುನ್ನುಗ್ಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಆಟ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೋಲಿ ಕ್ರಾಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಬೆಳಕಿನ ಹಬ್ಬ ದೀಪಾವಳಿಯ ಮಹತ್ವವನ್ನು ಸಾರುವ ಉದ್ದೇಶದಿಂದ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೀಪಾವಳಿ ಹಬ್ಬವು ಕತ್ತಲೆಯನ್ನು ದೂರಮಾಡಿ ಬೆಳಕನ್ನು ಹರಡುವುದರ ಜೊತೆಗೆ ಸತ್ಯ, ಪ್ರೀತಿ ಹಾಗೂ ಸೌಹಾರ್ದತೆಯ ಸಂದೇಶವನ್ನು ಸಾರುತ್ತದೆ. ಇಂತಹ ಹಬ್ಬಗಳ ಆಚರಣೆಯ ಮೂಲಕ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳ ಪರಿಚಯ ಮಾಡಿಕೊಡಲಾಯಿತು. ಶಾಲೆಯ ವ್ಯವಸ್ಥಾಪಕರಾದ ರೆವರೆಂಡ್ ಸಿಸ್ಟರ್ ಆನ್ಸಿ ಪೌಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಸಿಂತಿಯ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕಿ ನಾಗರತ್ನ ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪಾಲ್ಗೊಳ್ಳುವಿಕೆಯಿಂದ ದೀಪಾವಳಿ ಆಚರಣೆ ಸಂಭ್ರಮದಿಂದ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಸ್ತಾನದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಐರೋಡಿ ಗ್ರಾಮದ ಟೆಲಿಫೋನ್ ಎಕ್ಸ್ಚೇಂಜ್ ಕಟ್ಟಡ ನಿವಾಸಿ ಹೆನ್ರಿ ಫೆರ್ನಾಂಡಿಸ್ (73)ಮೃತರು. aವರು ಎಂದಿನಂತೆ ಬೆಳಿಗ್ಗೆ ಸಾಸ್ತಾನ ಸಂತ ಅಂತೋನಿ ಚರ್ಚ್ನಲ್ಲಿ ನಡೆಯುವ ಪೂಜೆಗೆಂದು ಮನೆಯಿಂದ ತೆರಳಿದ್ದರು. ಈ ವೇಳೆ ಬೆಳಿಗ್ಗೆ ಗುಂಡ್ಮಿ ಗ್ರಾಮದ ಸಾಸ್ತಾನ ಸರ್ಕಾರಿ ಆಸ್ಪತ್ರೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅವರಿಗೆ ಬ್ರಹ್ಮಾವರದಿಂದ ಕುಂದಾಪುರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹೆನ್ರಿ ಫೆರ್ನಾಂಡಿಸ್ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗೋವಿನ ಮಹತ್ವದ ಬಗ್ಗೆ ಇಂದಿನ ಯುವ ಜನಾಂಗ ಅರ್ಥೈಸಿಕೊಂಡು ಗೋ ಸಾಕಣೆಗೆ ಮುಂದಾಗಬೇಕಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಹೇಳಿದರು. ಅವರು ಸೋಮವಾರ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಸಹಯೋಗದೊಂದಿಗೆ ಕೋಡಿ ಕನ್ಯಾಣ ಸದಾಶಿವ ಐತಾಳ್ರ ಮನೆಯಂಗಳದಿ ಐದನೇ ವರ್ಷದ ಗೋ ಆರಾಧನೆ ಗೋ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕ ಕಾಲಘಟ್ಟದಲ್ಲಿ ಹಿರಿಯರು ನೀಡಿದ ಬಳವಳಿಯನ್ನು ಮರೆತ್ತಿದ್ದೇವೆ ಅದರಲ್ಲೂ ಬಹುಮುಖ್ಯವಾಗಿ ಗೋ ಸಾಕಣೆ ಕುಂಠಿತಗೊಳ್ಳುವ ಕಳವಳ ವ್ಯಕ್ತಪಡಿಸಿದ ಅವರು ಈ ದಿಸೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘ ಕ್ಷೀರ ಸಂಜೀವಿನಿ ಯೋಜನೆಯ ಮೂಲಕ ಹೊಸ ಆಯಾಮ ನೀಡಿದೆ. ಗೋ ಪೂಜೆಯ ಮೂಲಕ ಪಂಚವರ್ಣ ಸಂಘಟನೆ ಮಹತ್ತರವಾದ ಸಾಮಾಜಿಕ ಕಾರ್ಯಗಳನ್ನು ನೀಡುತ್ತಿದೆ ಇದು ಅತ್ಯಂತ ಪ್ರಶಂಸನೀಯ ಕಾರ್ಯ,ಕೋಡಿ ಸದಾಶಿವ ಐತಾಳರ ಮನೆಯಲ್ಲಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ 17ರ ವಯೋಮಾನದ ಬಾಲಕರ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ನಿಹಾನ್ 79KG ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ಸಾಧಕ ವಿದ್ಯಾರ್ಥಿಗೆ, ತರಬೇತಿಗೊಳಿಸಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಪ್ರೋತ್ಸಾಹ ನೀಡಿದ ಎಲ್ಲಾ ಮುಖ್ಯಸ್ಥರನ್ನು ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ
