Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.14: ತಾಲೂಕಿನ ಇಡೂರು- ಕುಂಜ್ಞಾಡಿ ಗ್ರಾಮದ ಜನ್ನಾಲ್‌ ಮೇಲ್‌ಜಡ್ಡು ಸಮೀಪ ಪಿಕಪ್ ವಾಹನ ಹಾಗೂ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಹಾರ್ಮಣ್ ನಿವಾಸಿ ಪ್ರಜ್ವಲ್ ಶೆಟ್ಟಿ (26) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಶೆಟ್ಟಿ ಬೇರೆಯವರ ತೋಟದ ಸುಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದು, ‌ಸೋಮವಾರ ಸಂಜೆ ಸುಮಾರು 5 ಗಂಟೆಗೆ ತೋಟದ ಕೆಲಸ ಮುಗಿಸಿ ತನ್ನ ಶೈನ್ ಬೈಕಿನಲ್ಲಿ ಹಾರ್ಮಣ್ ಕಡೆಗೆ ಪ್ರಯಾಣಿಸುತ್ತಿದ್ದ. ಇದೇ ಸಂದರ್ಭ ಯತೀಶ್ ಎಂಬಾತ ಪಿಕಪ್ ವಾಹನವನ್ನು ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು ಇಡೂರು- ಕುಂಜ್ಞಾಡಿ ಗ್ರಾಮದ ಜನ್ನಾಲ್‌ ಮೇಲ್‌ಜಡ್ಡು ಸಮೀಪ ಕೊಲ್ಲೂರು ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಪ್ರಜ್ವಲ್ ಶೆಟ್ಟಿಯ ಹೆಲ್ಮೆಟ್ ಹಾರಿ ಹೋಗಿದ್ದು, ತಲೆ ರಸ್ತೆಗಪ್ಪಳಿಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸ್ಥಳೀಯರು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಕೊಲ್ಲೂರು ಠಾಣೆಯಲ್ಲಿ ಪ್ರಕರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಫೆ.13: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕ ಸಹಾಯಕರ (ಜೆ.ಆರ್.ಎಫ್), ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರ ಮಟ್ಟದ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಹಾಗೂ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 15 ರ ಒಳಗೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2515944, 9964760090 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕ.ರಾ.ಮು.ವಿ ಕುಲಸಚಿವ ಪ್ರೊ.ಕೆ.ಎಲ್.ಎನ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಫೆ.19ರಂದು ನಡೆಯಲಿರುವ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗಂಗೊಳ್ಳಿಯ ಸ.ವಿ. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಭಾನುವಾರ ಜರಗಿತು. ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಎಚ್. ಗಣೇಶ ಕಾಮತ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಉಮೇಶ ಪುತ್ರನ್ ಮಾತನಾಡಿ, ಗಂಗೊಳ್ಳಿಯಲ್ಲಿ ನಡೆಯಲಿರುವ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆಗಳು ನಡೆದಿದ್ದು, ಸಮ್ಮೇಳನದ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿ ಸದಸ್ಯರು ಸಮ್ಮೇಳನದ ಯಶಸ್ಸಿಗೆ ಕೈಜೋಡಿಸಿ ದುಡಿಯುತ್ತಿದ್ದಾರೆ. ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಯಾಸಕ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.ಸಮ್ಮೇಳನದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ವಿವಿಧ ಸಮಿತಿಗಳ ಪದಾಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು. ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ.ಕಾಶೀನಾಥ ಪೈ, ಸಮ್ಮೇಳನದ ಕಾರ್ಯದರ್ಶಿ ಯು. ಎಸ್. ಶೆಣೈ, ಕುಂದಾಪುರ ತಾಲೂಕು ಕಸಾಪ ಕೋಶಾಧಿಕಾರಿ ಕೆ. ಎಸ್. ಮಂಜುನಾಥ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್, ಕುಂದಾಪುರ ಮತ್ತು ಹಿಂದೂ ಅಭ್ಯುದಯ ಸಂಘ(ರಿ.), ನಾವುಂದ ಇವರ ಜಂಟಿ ಆಶ್ರಯದಲ್ಲಿ, ಇಂದು ನಾವುಂದದ ಶ್ರೀ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಮಂಗಳೂರಿನ, ಕೆ.ಎಂ.ಸಿ. ಆಸ್ಪತ್ರೆಯ ತಜ್ಞ ವೈದ್ಯರ ಸಹಕಾರದಿಂದ ನಡೆದ ಸೂಪರ್ ಸ್ಪೆಷಾಲಿಟಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಉದ್ಘಾಟನೆಯನ್ನು, ಕುಂದಾಪುರ ರೋಟರಿಯ ಅಧ್ಯಕ್ಷರಾದ ವೆಂಕಟೇಶ ಗಾಣಿಗ ನಾವುಂದ ಇವರು ನೆರವೇರಿಸಿದರು. ಕೆ.ಎಂ.ಸಿ. ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ| ಸಂದೀಪ ಮತ್ತು ಡಾ| ಸಂಜಯ್, ಹಿಂದೂ ಅಭ್ಯುದಯ ಸಂಘದ ಉಪಾಧ್ಯಕ್ಷರಾದ ಪ್ರವೀಣ್ ನಾವುಂದ, ಸದಸ್ಯರಾದ ಸುದರ್ಶನ ಗಾಣಿಗ, ಪ್ರಭಾಕರ ಶೆಟ್ಟಿ, ಮನೋಹರ ಎನ್.ಕೆ., ಗುರುರಾಜ ಶೇಟ್, ಮಂಜುನಾಥ ಆರ್. ಗಾಣಿಗ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಹಿಂದೂ ಅಭ್ಯುದಯ ಸಂಘದ ಅಧ್ಯಕ್ಷರಾದ ಶಶಿಧರ ಎಂ. ಶೆಟ್ಟಿ ಇವರು ಸ್ವಾಗತಿಸಿದರೆ, ಕುಂದಾಪುರ ರೋಟರಿಯ ಕಾರ್ಯದರ್ಶಿ ನಾಗರಾಜ ಶೆಟ್ಟಿ ವಂದಿಸಿದರೆ, ಹಿಂದೂ ಅಭ್ಯುದಯ ಸಂಘದ ಕಾರ್ಯದರ್ಶಿ ಎ. ಶಿವರಾಮ ಮಧ್ಯಸ್ಥ ಕಾರ್ಯಕ್ರಮ ನಿರೂಪಿಸಿದರು. ಈ ಶಿಬಿರದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಕೇಂದ್ರ ಬಜೆಟ್, ಮುಂದಿನ 25 ವರ್ಷಗಳ ಅಭಿವೃದ್ಧಿಯ ದೂರದೃಷ್ಠಿತ್ವದಿಂದ ಕೂಡಿದ ಒಂದು ಅತ್ಯುತ್ತಮ ಬಜೆಟ್ ಆಗಿದೆ. ನೀರಸ ಜಗತ್ತಿಗೆ ಭಾರತ ಒಂದೇ ಭರವಸೆ ಎಂಬ ಮಾತಿನಂತೆ ಈ ಸಾಲಿನ ಬಜೆಟ್, ಜನಸಾಮಾನ್ಯರ, ಮಹಿಳೆಯರ ಹಾಗೂ ರೈತಸ್ನೇಹಿಯಾಗಿದ್ದು, ಮೃತ ಕಾಲದ ಉತ್ತರದಾಯಿಯಾಗಿ ಮೂಡಿಬಂದಿದೆ ಎಂದು ಬಿಜೆಪಿ ಜಿಲ್ಲಾ ಸಹವಕ್ತಾರ ಶಿವಕುಮಾರ್ ಅಂಬಲಪಾಡಿ ಹೇಳಿದರು. ಬೈಂದೂರು ಮಂಡಲ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿ, ಫೆಡರಲ್ ಸಿಸ್ಟಮ್ನಲ್ಲಿರುವ ಭಾರತದಂತಹ ದೇಶದಲ್ಲಿ ಇಂತಹ ಆಶಾದಾಯಕ ಬಜೆಟನ್ನು ಮಂಡಿಸಲು ನಿಖರವಾದ ದೂರದರ್ಶಿತ್ವ ಇಟ್ಟುಕೊಂಡಿರುವ ಸದೃಢ ಸಶಕ್ತ ಸರ್ಕಾರದಿಂದ ಮಾತ್ರ ಸಾಧ್ಯ. ಕೋವಿಡ್ನಂತಹ ಸಂಕಷ್ಟದ ಕಾಲದಲ್ಲಿ ದೇಶದಲ್ಲಿ ಮಾತ್ರವಲ್ಲದೆ ಜಗತ್ತಿಗೆ ಲಸಿಕೆ ನೀಡಿರುವ ಭಾರತ, ಯಾವ ರೀತಿ ದೇಶವನ್ನು ಅಭಿವೃದ್ಧಿ ಪಡಿಸಬೇಕೆಂಬ ಚಿಂತನೆ ಮತ್ತು ಸಪ್ತ ಸೂತ್ರಗಳೊಂದಿಗೆ ಸವಾಲುಗಳನ್ನು ಎದುರಿಸಿ ಆರ್ಥಿಕ ಶಿಸ್ತು ಕಾಪಾಡಿಕೊಂಡು ಮಂಡಿಸಿದ ಅಭಿವೃದ್ಧಿ ಪರ ಬಜೆಟ್ ಇದಾಗಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಚಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ ಅವರು ರಾಜ್ಯ ಮಟ್ಟದ ‘ಗ್ರಾಮೀಣ ಶಿಕ್ಷಣ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹುಬ್ಬಳ್ಳಿ ಇದರ ವತಿಯಿಂದ ಶನಿವಾರ ಹುಬ್ಬಳ್ಳಿಯಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಬೈಂದೂರು ತಾಲೂಕು ತಗ್ಗರ್ಸೆಯವರಾದ ತಿಮ್ಮಪ್ಪ ಗಾಣಿಗ ಅವರು 1990ರಲ್ಲಿ ಶಿಕ್ಷಕ ವೃತ್ತಿ ಸೇರಿ ಕಾರ್ಯಳ ಜೊಗಳಬೆಟ್ಟುವಿನಲ್ಲಿ ತಮ್ಮ ಸೇವೆ ಆರಂಭಿಸುತ್ತಾರೆ. ಬಳಿಕ ಕ್ರಮವಾಗಿ ಸ.ಹಿ.ಪ್ರಾ ಶಾಲೆ ಕೋಯಾನಗರ, ನಾಯ್ಕನಕಟ್ಟೆ ಹಾಗೂ ಬೈಂದೂರು ಮಾದರಿ ಹಿರಿಯ ಪ್ರಾಥಮಿ ಶಾಲೆಯಲ್ಲಿ ಸಹಾಯಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಮುಂದೆ ಭಡ್ತಿ ಹೊಂದಿ ಸ.ಹಿ.ಪ್ರಾ ಶಾಲೆ ತಗ್ಗರ್ಸೆಯಲ್ಲಿ ಮುಖ್ಯ ಶಿಕ್ಷಕರಾಗಿ 6 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕಳೆದೆರಡು ವರ್ಷಗಳಿಂದ ಸಹಿಪ್ರಾ ಶಾಲೆ ಕಂಚಿಕಾನುವಿನಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ 33 ವರ್ಷಗಳ ಸೇವಾ ಅವಧಿಯಲ್ಲಿ ಮಕ್ಕಳ ನೆಚ್ಚಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಸಾಹಿತ್ಯ ಪರಿಷತ್ತು ವತಿಯಿಂದ ಫೆ.19ರಂದು ಗಂಗೊಳ್ಳಿ ಸರಸ್ವತಿ ಪ.ಪೂ.ಕಾಲೇಜುವಠಾರದಲ್ಲಿ ನಡೆಯುವ ಗಂಗಾವಳಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷ ಕೋ.ಶಿವಾನಂದ ಕಾರಂತರನ್ನು ಅವರ ಗುಜ್ಜಾಡಿ ನಿವಾಸ ಶಿವಲಾಲಿತ್ಯಕ್ಕೆ ತೆರಳಿ ಅಧಿಕ್ರೃತವಾಗಿ ಸ್ವಾಗತಿಸಲಾಯಿತು. ಕುಂದಾಪುರ ತಾಲೂಕು ಕ.ಸಾ.ಪ.ಅಧ್ಯಕ್ಷ ಡಾ.ಉಮೇಶ್ ಪುತ್ರನ್, ಕಾರ್ಯದರ್ಶಿ ದಿನಕರ ಆರ್. ಶೆಟ್ಟಿ, ಕೋಶಾಧಿಕಾರಿ ಕೆ.ಎಸ್.ಮಂಜುನಾಥ, ಜಿಲ್ಲಾ ಕ.ಸಾ.ಪ.ಕೋಶಾಧ್ಯಕ್ಷ ಮನೋಹರ್ ಅಧಿಕ್ರೃತ ಪತ್ರ ನೀಡಿದರು. ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಎಚ್. ಗಣೇಶ್ ಕಾಮತ್, ಕಾರ್ಯದರ್ಶಿ ಯು.ಎಸ್ .ಶೆಣೈ, ಕ.ಸಾಪ.ಅಧ್ಯಕ್ಷ ಡಾ. ಉಮೇಶ್ ಪುತ್ರನ್ ಅವರು ಸಮ್ಮೇಳನದ ವಿವರ ನೀಡಿ, ಕೋ.ಶಿ. ಕಾರಂತ, ಕುಸುಮಾ ಕಾರಂತ ದಂಪತಿಯನ್ನು ಗೌರವಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕೆನ್ನುವ ಉದ್ದೇಶದಿಂದ ಕೇಂದ್ರ ಸರಕಾರವು ರಾಜ್ಯ ಸರಕಾರದ ಸಹಯೋಗದೊಂದಿಗೆ ಜಲಜೀವನ್ ಮಿಷನ್ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯನ್ವಯ ಗ್ರಾಮದ ಪ್ರತಿಯೊಂದು ಮನೆ ಮನೆಗೂ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಿ, ಪ್ರತಿಯೊಬ್ಬರಿಗೆ ದಿನಕ್ಕೆ 55 ಲೀ. ಶುದ್ಧ ಕುಡಿಯುವ ನೀರು ನೀಡಲು ಉದ್ದೇಶಿಸಲಾಗಿದೆ. ಇದೊಂದು ಉತ್ತಮ ಯೋಜನೆಯಾಗಿದ್ದು ಗ್ರಾಮದಲ್ಲಿನ ಪ್ರತಿಯೊಂದು ಕುಟುಂಬ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಜಲಜೀವನ್ ಮಿಷನ್ ಸಹಾಯಕ ಅಭಿಯಂತರ ಟಿ.ಗಿರೀಶ್ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿದ ಜಲಜೀವನ್ ಮಿಷನ್ ವಿಶೇಷ ಗ್ರಾಮ ಸಭೆಯಲ್ಲಿ ಮಾಹಿತಿ ನೀಡಿ ಅವರು ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಗಂಗೊಳ್ಳಿ ಗ್ರಾಮ ಪಂಚಾಯತ್ಗೆ ಸುಮಾರು ೪.೮೫ ಕೋಟಿ ರೂ. ಯೋಜನೆ ಸಿದ್ಧಪಡಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ಎರಡು ಓವರ್ ಹೆಡ್ ಟ್ಯಾಂಕ್ ಸಹಿತ ೧೫ ಕಿ.ಮೀ ಹೊಸ ಪೈಪ್ ಪೈನ್ ಅಳವಡಿಕೆಗೆ ಕ್ರಿಯಾಯೋಜನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.07: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ವಿವಿಧ ವರ್ಗದ ಕುಶಲಕರ್ಮಿಗಳಿಗೆ ತಲಾ 50,000 ರೂ. ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ವಾಣಿಜ್ಯ ಬ್ಯಾಂಕ್, ಸಹಕಾರ ಬ್ಯಾಂಕ್ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (ಪತ್ತಿನ ಸಹಕಾರ ಸಂಘಗಳನ್ನು ಹೊರತುಪಡಿಸಿ) ಗಳಿಂದ ಮಂಜೂರಾದ ಸಾಲದ ಮೇಲೆ ಇಲಾಖೆ ವತಿಯಿಂದ ಶೇ. 30 ರಷ್ಟು ಗರಿಷ್ಠ 15,000 ರೂ. ವರೆಗೆ ಸಹಾಯಧನ ನೀಡಲಾಗುವುದು. ಜಿಲ್ಲೆಯ 18 ವರ್ಷ ಮೇಲ್ಪಟ್ಟ ಕಮ್ಮಾರಿಕೆ, ಬುಟ್ಟಿ ಹೆಣೆಯುವವರು, ಗೋಲ್ಡ್ ಸ್ಮಿತ್ (ಆಭರಣ ತಯಾರಿಕೆ), ಕಲ್ಲಿನ ಕೆತ್ತನೆ, ಮರದ ಕೆತ್ತನೆಗಳು, ಕುಂಬಾರಿಕೆ, ಟೆರಾಕೋಟ್, ಮಣ್ಣಿನ ವಿಗ್ರಹ ತಯಾರಿಕೆ, ಲೋಹದ ಕರಕುಶಲ, ಬೆತ್ತ ಬಿದಿರು, ಕಸೂತಿ ಕಲೆ (ಎಂಬ್ರಾಯಿಡರಿ), ಕೋಕೋನಟ್ ಶೆಲ್ ಕ್ರಾಪ್ಟ್, ದೋಬಿ, ಚಮ್ಮಾರಿಕೆ ಹಾಗೂ ಕ್ಷೌರಿಕ ಕುಶಲಕರ್ಮಿಗಳು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನ. ಪಂಚಾಯತ್ ವ್ಯಾಪ್ತಿಯ ಕುಶಲರ್ಮಿಗಳು ಸಂಬAಧಿಸಿದ ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ಹಾಗೂ ನಗರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಎಂಟನೇ ವಾರ್ಷಿಕೋತ್ಸವ ಹಾಗೂ ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ- ೨೦೨೩ ಪ್ರದಾನ ಸಮಾರಂಭ ಇತ್ತೀಚೆಗೆ ಗೊಂಬೆ ಮನೆಯಲ್ಲಿ ವಿಜೃಂಭಣೆಯಿಂದ ಜರುಗಿತು. ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ಕಲಾವಿದರ ಪ್ರಾರ್ಥನೆಯೊಂದಿಗೆ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಡಾ.ಹರಿಕೃಷ್ಣ ಪುನರೂರುರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಪ್ರಾರಂಭವಾಯಿತು. ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್‌ರು ವೇದಿಕೆಯಲ್ಲಿರುವ ಗಣ್ಯರನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರದೀಪ್ ಕುಮಾರ್ ಕಲ್ಕೂರ್, ಅಧ್ಯಕ್ಷರು, ಕಲ್ಕೂರ ಪ್ರತಿಷ್ಠಾನ, ಮಂಗಳೂರು ಇವರು ದೀಪ ಬೆಳಗಿಸಿ, ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ -೨೦೨೩ ನ್ನು ಹಿರಿಯ ಯಕ್ಷಗಾನ ಕಲಾವಿದ ಬೇಲ್ತೂರು ರಮೇಶ್ ಇವರಿಗೆ ಪ್ರದಾನ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಭುವನಾಭಿರಾಮ ಉಡುಪ, ಪ್ರಧಾನ ಸಂಪಾದಕ, ಯುಗ ಪುರುಷ ಮಾಸ ಪತ್ರಿಕೆ, ಕಿನ್ನಿಗೋಳಿ, ಆನಂದರಾಮ ಐತಾಳ್ ಉಪ್ಪಿನಕುದ್ರು, ಅಧೀಕ್ಷಕ ಅಭಿಯಂತರರು, ಜನಾರ್ಧನ ಹಂದೆ, ಬ್ಯಾಂಕ್ ಅಧಿಕಾರಿ (ನಿವೃತ್ತ), ಮಂಗಳೂರು, ನಾಗೇಶ್…

Read More