Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮುಂಬೈನಿಂದ ಮಂಗಳೂರಿನತ್ತ ಸಾಗುತ್ತಿದ್ದ ಆನಂದ್ ಹೆಸರಿನ ಖಾಸಗಿ ಬಸ್ ಕುಂಭಾಸಿ ಸಮೀಪದ ಕೊರವಡಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ ನಿಂತ ಘಟನೆ ಶನಿವಾರ ನಡೆದಿದೆ. ಮಳೆಯಿಂದಾಗಿ ಕುಂಭಾಸಿ ಕೊರಡಿ ಕ್ರಾಸ್ ಬಳಿ ಸುಮಾರು 2 ಅಡಿ ಆಳದ ಹೊಂಡ ನಿರ್ಮಾಣವಾಗಿದ್ದು ಮಳೆ ನಿಂತಿದ್ದರಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಅದೇ ಹೊಂಡಕ್ಕೆ ಇಳಿದಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಸುಮಾರ 300 ಮೀಟರ್ ದೂರದ ತನಕ ಡಿವೈಡರ್ ಮೇಲೆ ಬಸ್ ಚಲಿಸಿದೆ. ಬಸ್ ಕನ್ನುಕೆರೆ ಮಸೀದಿ ಎದುರು ಡಿವೈಡರ್ ಏರಿ ನಿಂತಿದೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದು ಚಾಲಕನ ಸಮಯಪ್ರಜ್ಞೆಯಿಂದ ಪಲ್ಟಿಯಾಗುವುದು ತಪ್ಪಿದೆ. ಯಾವುದೇ ಅಪಾಯ ಸಂಭವಿಸಿಲ್ಲ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಕನ್ನಡ ವಿಭಾಗದ ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ’ಮೌಲ್ಯಾಧಾರಿತ ಶಿಕ್ಷಣ’ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು. ಕುಂದಾಪುರದ ಬಿ. ಬಿ. ಹೆಗ್ಡೆ ಕಾಲೇಜಿನ ಪ್ರಾಧ್ಯಾಪಕ ಚೇತನ್ ಕುಮಾರ್ ಶೆಟ್ಟಿ ಕಾರ್ಯಕ್ರಮದಲ್ಲಿ ಮಾತನಾಡಿ ವಿದ್ಯಾರ್ಥಿಗಳು ಕಾಲದ ಬದಲಾವಣೆಗಳ ಜೊತೆಗೆ ಹೆಜ್ಜೆ ಹಾಕುವಾಗ ಸಮಯಪ್ರಜ್ಞೆ ಅತಿಮುಖ್ಯ. ನಿರ್ಧಿಷ್ಟ ಗುರಿಯನ್ನು ಇಟ್ಟುಕೊಂಡು ಅದಕ್ಕೆ ಪೂರಕವಾಗಿ ಪ್ರಯತ್ನ ಪಡಬೇಕು. ಹಾಗೇ ವಿದ್ಯಾರ್ಥಿಗಳ ಬದುಕಿನಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸುತ್ತಾರೆ. ಏಕೆಂದರೆ ಎಷ್ಟೋ ವಿದ್ಯಾರ್ಥಿಗಳು ತನ್ನ ಶೈಕ್ಷಣಿಕ ಹಂತದಲ್ಲಿ ಶಿಕ್ಷಕರು ಹಾಕಿಕೊಟ್ಟ ಉತ್ತಮ ಮಾರ್ಗದಲ್ಲಿಯೇ ನಡೆದು ಯಶಸ್ಸನ್ನು ಪಡೆಯುತ್ತಾರೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ. ಲಲಿತಾದೇವಿ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಮೈತ್ರಿ ಸ್ವಾಗತಿಸಿದರು. ವಿದ್ಯಾರ್ಥಿಗಳಾದ ಸೌಮ್ಯ ಕಾರ್ಯಕ್ರಮ ನಿರ್ವಹಿಸಿ, ಚಂದ್ರಿಕಾ ಪರಿಚಯಿಸಿ ಪ್ರಿಯಾಂಕಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತ ದೇಶದ ಜ್ಞಾನದ ಪರಂಪರೆಯನ್ನು ಕಂಡು ವಿಶ್ವವೇ ನಮಗೆ ಸೋತಿತು. ಭಾರತೀಯರ ಇತರರ ಮೇಲೆ ಆಕ್ರಮಣಗೈದು ವಿಶ್ವಗುರುವಾಗಲಿಲ್ಲ. ಇಲ್ಲಿನ ಜ್ಞಾನ ಪರಂಪರೆಯಿಂದಷ್ಟೇ ಅದು ಸಾಧ್ಯವಾಯಿತು ಎಂದು ಉಡುಪಿ ಜಿಲ್ಲಾ ಶಾರೀರಿಕ್ ಪ್ರಮುಖ್ ಪ್ರಶಾಂತ್ ಅರೆಶಿರೂರು ಹೇಳಿದರು. ಶನಿವಾರ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬೈಂದೂರು ಮಂಡಲದ ವತಿಯಿಂದ ಇಲ್ಲಿನ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ ಗುರುಪೂಜಾ ಉತ್ಸವದಲ್ಲಿ ಬೌದ್ಧಿಕ್ನಲ್ಲಿ ಮಾತನಾಡಿ ಮಹರ್ಷಿ ವ್ಯಾಸರನ್ನು ಎಲ್ಲರೂ ಆದಿಗುರು ಎನ್ನುತ್ತಾರೆ. ಅವರ ಜನ್ಮಜಯಂತಿಯಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಗುರುಪೂರ್ಣಿಮೆ ಉತ್ಸವ ಆಚರಿಸುತ್ತೇವೆ. ಸ್ವಾವಲಂಬಿಯಾಗಿ ಬದುಕು ಎಂಬ ನಮ್ಮ ಪರಂಪರೆಯಲ್ಲಿ ಗುರಿವಿಗೆ ಮಾತ್ರವೇ ಗುಲಾಮನಾಗು ಎಂಬ ಸಂದೇಶ ನೀಡಲಾಗಿದೆ. ನಮ್ಮ ಸಂಸ್ಕೃತಿಯಲ್ಲಿ ಅದಕ್ಕೆ ಪ್ರಮುಖ್ಯತೆ ಇದೆ ಎಂದರು. ಸಮಾಜದ ಮೇಲೆ ಆಕ್ರಮಣಗಳಾದಾಗ ಅದನ್ನು ಬಡಿದೆಬ್ಬಿಸುವ ಕಾರ್ಯವನ್ನು ಗುರು ಮಾಡಿದ್ದಾರೆ ಎಂದರು. ಅಧ್ಯಕ್ಷತೆ ವಹಿಸಿದ್ದ ಡಾ. ನಾಗರಾಜ ಖಾರ್ವಿ ಮಾತನಾಡಿ ಇಂದಿನ ಯುವ ಜನಾಂಗ ಸಾಮಾಜಿಕ ಸ್ಥಿತ್ಯಂತರಗಳ ಕಾರಣದಿಂದ ಮುಖ್ಯಭೂಮಿಕೆಯಿಂದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಜು.16: ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅವಧಿಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಕ್ಲಿಕ್ಕಿಸುವುದು ಅಥವಾ ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿಷೇಧಿಸಿ ಸರಕಾರ ಹೊರಡಿಸಿದ್ದ ಆದೇಶವನ್ನು ಇದೀಗ ಹಿಂಪಡೆದಿದೆ. ರಾಜ್ಯ ಸರಕಾರದ ಈ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು, ಸರಕಾರ ಜುಲೈ 15ರ ರಾತ್ರಿಯೇ ಪೋಟೋ ಕ್ಲಿಕ್ಕಿಸುವುದು ಹಾಗೂ ವಿಡಿಯೋ ಚಿತ್ರಿಕರಣ ನಿಷೇಧದ ಆದೇಶವನ್ನು ಹಿಂಪಡೆದಿದೆ. ಈ ವಿಚಾರದಲ್ಲಿ ಇನ್ನು ಯಥಾಸ್ಥಿತಿ ಮುಂದುವರಿಯಲಿದೆ. ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವು ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವುದರ ಜೊತೆಯಲ್ಲಿ ಕರ್ತವ್ಯದ ಅವಧಿಯಲ್ಲಿ ಸರ್ಕಾರಿ ಕಚೇರಿಯ ಒಳಗಡೆ ಫೊಟೋ ಹಾಗೂ ವಿಡಿಯೋಗಳನ್ನು ಶೂಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಇದು ಸರ್ಕಾರಿ ಸಿಬ್ಬಂದಿ ಇನ್ನೂ ಮುಖ್ಯವಾಗಿ ಮಹಿಳಾ ಸಿಬ್ಬಂದಿಗೆ ಇರಿಸು ಮುರಿಸು ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅವಧಿಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಕ್ಲಿಕ್ಕಿಸುವುದು ಅಥವಾ ವಿಡಿಯೋ ಚಿತ್ರೀಕರಣ ಮಾಡುವುದಕ್ಕೆ ನಿಷೇಧಿಸುವ ಬಗ್ಗೆ ಜುಲೈ 15ರಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಕೆಲವು ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳುವುದರ ಜೊತೆಯಲ್ಲಿ ಕರ್ತವ್ಯದ ಅವಧಿಯಲ್ಲಿ ಸರ್ಕಾರಿ ಕಚೇರಿಯ ಒಳಗಡೆ ಫೊಟೋ ಹಾಗೂ ವಿಡಿಯೋಗಳನ್ನು ಶೂಟ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಇದು ಸರ್ಕಾರಿ ಸಿಬ್ಬಂದಿ ಇನ್ನೂ ಮುಖ್ಯವಾಗಿ ಮಹಿಳಾ ಸಿಬ್ಬಂದಿಗೆ ಇರಿಸು ಮುರಿಸು ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಅವಧಿಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಕ್ಲಿಕ್ಕಿಸುವುದು ಅಥವಾ ವಿಡಿಯೋ ಚಿತ್ರೀಕರಣ ಮಾಡುವುದಕ್ಕೆ ನಿಷೇಧ ಹೇರಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದರು. ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯದ ಸಂದರ್ಭದಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ಶೂಟ್ ಮಾಡಿ ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಡುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಹಾಗೂ ರಾಜ್ಯ ಸರಕಾರಿ ನೌಕರರ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯದ ಪ್ರತಿಯೊಂದು ಸರ್ಕಾರಿ ಕಚೇರಿಗಳು ಅಂದರೆ ಗ್ರಾಮ, ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಎಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿ.ಎ ಅಂತಿಮ ಹಂತದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಕುಂದಾಪುರದ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಇದರ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಕುಂದೇಶ್ವರ ರಸ್ತೆಯಲ್ಲಿನ ಸಂಸ್ಥೆಯ ಕಛೇರಿಯಲ್ಲಿ ನಡೆಯಿತು. ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಮೇ 2022 ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಂಸ್ಥೆಯ ವಿದ್ಯಾರ್ಥಿಗಳಾದ ಸಿಎ ಪ್ರಕಾಶ್ ಶೆಟ್ಟಿ ಮತ್ತು ವಿನಾರ್ಡ್ ಅವರನ್ನು ಅಭಿನಂದಿಸಲಾಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಿಎ ಪ್ರಕಾಶ್ ಶೆಟ್ಟಿ ಕಠಿಣ ಪರಿಶ್ರಮ, ಗುರುಗಳ ಮಾರ್ಗದರ್ಶನ, ಸಾಮಾಜಿಕ ಜಾಲತಾಣಗಳಿಂದ ದೂರವಿದ್ದರೆ ಸಿಎ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪೂರ್ಣಗೊಳಿಸಬಹುದು ಎಂದರು. ಸಂಸ್ಥೆಯ ಮುಖ್ಯಸ್ಥರಾದ ಪ್ರತಾಪ್ ಚಂದ್ರ ಶೆಟ್ಟಿ ಮತ್ತು ಭರತ್ ಶೆಟ್ಟಿ ಅವರು ಸಾಧಕರನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಪ್ರಭ ಅಕಾಡೆಮಿಯ ಸಿಎ/ಸಿಎಸ್ ಕೋರ್ಸುಗಳ ವಿವಿಧ ಹಂತದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಸ್ಥೆಯ ಅಂಕಿತ ವಿ ಶೆಟ್ಟಿ ಸ್ವಾಗತಿಸಿ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪಂಚಗಂಗಾ ಸೇವಾ ಸಹಕಾರಿ ಸಂಘದ ಮಾಜಿ ಮ್ಯಾನೇಜರ್, ಮುಳ್ಳಿಕಟ್ಟೆಯ ಆರಾಧನಾ ಬಾರ್ & ರೆಸ್ಟೋರೆಂಟಿನ ಮಾಲಿಕ ಎ. ಜಿ. ಬಿಲ್ಲವ (ಆನಗಳ್ಳಿ ಗೋವಿಂದ ಬಿಲ್ಲವ) ಇಂದು ಅನಾರೋಗ್ಯದಿಂದ ನಿಧನ ಹೊಂದಿರುತ್ತಾರೆ ಪಡುಕೋಣೆ ನಿವಾಸಿಯಾದ ಅವರು ಮಡದಿ, ಪುತ್ರ ಅರವಿಂದ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ರತ್ತುಬಾಯಿ ಜನತಾ ಪ್ರೌಢಶಾಲೆಯ ಅಭಿವೃದ್ಧಿ ಕಾರ್ಯಗಳಿಗಾಗಿ ಉದ್ಯಮಿ, ಶ್ರೀ ರಾಮ ವಿವಿದೋದ್ದೇಶ ಟ್ರಸ್ಟಿನ ಮ್ಯಾನೇಜಿಂಗ್ ಟ್ರಸ್ಟೀ ರಾಮಕೃಷ್ಣ ಶೇರುಗಾರ್ ಬಿಜೂರು ಅವರು ರೂ.1,00,000 ಹಣವನ್ನು ಶ್ರೀ ವಿ.ವಿ.ವಿ ಆಡಳಿತ ಮಂಡಳಿ ಹೆಮ್ಮಾಡಿ ಇದರ ಉಪಾಧ್ಯಕ್ಷರಾದ ರಾಜು ಪೂಜಾರಿ ಇವರಿಗೆ ಹಸ್ತಾಂತರಿಸಿದರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿರ್ದೇಶಕರಾದ ರಘುರಾಮ್ ಪೂಜಾರಿ ನಿವೃತ್ತ ಮುಖ್ಯ ಶಿಕ್ಷಕರಾದ ವಿಶ್ವೇಶ್ವರ ಅಡಿಗ, ಟಿ.ಆರ್. ಹುದಾರ್ ಹಾಗೂ ಜೆಸಿ ಬೈಂದೂರು ಸಿಟಿ ಅಧ್ಯಕ್ಷರಾದ ಸವಿತಾ ದಿನೇಶ್, ಉಪನ್ಯಾಸಕರಾದ ಮಣಿಕಂಠ ದೇವಾಡಿಗ, ಗಣೇಶ್ ಪೂಜಾರಿ, ಉಪಪ್ರಾಂಶುಪಾಲರಾದ ಜಯಶೀಲಕುಮಾರ್ ಹಾಗೂ ಮುಖ್ಯ ಶಿಕ್ಷಕರಾದ ಮಂಜು ಕಾಳವಾರ ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಆನಂದ ಮದ್ದೊಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು, ಶಿಕ್ಷಕಿ ಚೈತ್ರ ವಂದಿಸಿದರು, ದೈಹಿಕ ಶಿಕ್ಷಕರಾದ ಗುರುರಾಜ ಕಾರ್ಯಕ್ರಮ ನಿರ್ವಹಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿದ ಬೈಂದೂರು ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ದೇವಜ್ಯೋತಿ ರೇ ರೂ.50,000 ಬಹುಮಾನ ಘೋಷಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ತಿಳಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಚಿನ್ನಾಭರಣ ಕಳವು ಪ್ರಕರಣ ಹಾಗೂ ಕಾರಿನೊಂದಿಗೆ ವ್ಯಕ್ತಿಯೊನ್ನು ಸುಟ್ಟು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಂಡವನ್ನು ರಚಿಸಿ ಕ್ಷಿಪ್ರವಾಗಿ ಪ್ರಕರಣ ಭೇದಿಸಲಾಗಿದೆ. ಪೊಲೀಸ್ ತಂಡಕ್ಕೆ ಪಶ್ಚಿಮ ವಲಯ ಐಜಿಪಿ ಮೆಚ್ಚುಗೆ ಸೂಚಿಸಿರುವುದಾಗಿ ತಿಳಿಸಿದರು. ಕಾರಿನೊಂದಿಗೆ ವ್ಯಕ್ತಿಯನ್ನು ಸುಟ್ಟು ಕೊಲೆಗೈದ ಪ್ರಕರಣವನ್ನು ಪ್ರಕರಣದ ತನಿಕೆ ಮುಂದುವರಿದಿದ್ದು, ಬಳಿಕ ಹೆಚ್ಚಿನ ಮಾಹಿತಿ ನೀಡಲಾಗುವುದು. ಬೈಂದೂರು ವ್ಯಾಪ್ತಿಯಲ್ಲಿ ಅನಧಿಕೃತವಾಗಿ ತೆರೆದಿರುವ ಅಂಗಡಿಗಳ ಬಗ್ಗೆ ಮಾಹಿತಿ ಇದ್ದು, ಇಲ್ಲಿನ ಪಟ್ಟಣ ಪಂಚಾಯತ್ ಮಾಡುವ ತೆರವು ಕಾರ್ಯಾಚರಣೆಗೆ ಸಹಕಾರಿ ನೀಡುವುದಾಗಿ ತಿಳಿಸಿದರು. ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ., ವೃತ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.14: ಇಲ್ಲಿನ ಹೇನುಬೇರು ಗ್ರಾಮಕ್ಕೆ ತೆರಳುವ ಮಾರ್ಗದಲ್ಲಿ ಸುಟ್ಟುಹೊದ ಸ್ಥಿತಿಯಲ್ಲಿ ಕಾರು ಹಾಗೂ ಅದರೊಳಕ್ಕೆ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ಪೊಲೀಸರು ಒಟ್ಟು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕಾರ್ಕಳ ತಾಲೂಕಿನ ಮಾಳ ಗ್ರಾಮದ ನಿವಾಸಿ ಸದಾನಂದ ಶೇರಿಗಾರ್ (52), ಹಿರ್ಗಾನ್ ಶೀವನಗರ ನಿವಾಸಿ ಶಿಲ್ಪಾ ಪೂಜಾರಿ (30) ಹಾಗೂ ಕೃತ್ಯಕ್ಕೆ ಸಹಕರಿಸಿದ ಸೂಡಾ ಗ್ರಾಮದ ನಿತ್ಯಾನಂದ ದೇವಾಡಿಗ (40), ಸತೀಶ್ ಆರ್. ದೇವಾಡಿಗ (49) ಬಂಧಿತರು. ಈ ಪೈಕಿ ಸದಾನಂದ ಹಾಗೂ ಶಿಲ್ಪಾಳನ್ನು ನ್ಯಾಯಲಯಕ್ಕೆ ಹಾಜರುಪಡಿಸಲಾಗಿದ್ದು, ನಾಲ್ಕು ದಿನದ ಪೊಲೀಸ್ ಕಸ್ಟಡಿ ನೀಡಲಾಗಿದೆ. ಕ್ರೈಂಸ್ಟೋರಿ ನೋಡಿ ಕೊಲೆಗೆ ಸಂಚು: (Updated)ಕಾರ್ಕಳದಲ್ಲಿ ಖಾಸಗಿ ಸರ್ವೇಯರ್ ಆಗಿದ್ದ ಸದಾನಂದ ಶೇರೆಗಾರ್, 2019ರಲ್ಲಿ ವ್ಯಕ್ತಿಯೊಬ್ಬರ ಜಮೀನಲ್ಲಿ ಅಕ್ರಮವಾಗಿ ತನ್ನ ಕೈ ಬರಹದಲ್ಲಿ ರಸ್ತೆ ಇರುವುದಾಗಿ ನಕ್ಷೆ ತಯಾರಿಸಿಕೊಟ್ಟಿದ್ದ. ಈ ಪ್ರಕರಣದ ಬಗ್ಗೆ ಜಮೀನಿನ ಮಾಲೀಕರು ಸದಾನಂದ ಶೇರಿಗಾರ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದು…

Read More