ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಭಾರತೀಯ ಸಮಾಜದಲ್ಲಿ ಮಹಿಳೆಯರ ಪ್ರಾಮುಖ್ಯತೆ, ರಾಷ್ಟ್ರ ನಿರ್ಮಾಣ ಹಾಗೂ ಪ್ರಗತಿಯಲ್ಲಿ ಅವರ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ರೇಖಾ ಬನ್ನಾಡಿ ಮಾತನಾಡಿ, ಭಾರತೀಯ ಸಮಾಜದಲ್ಲಿ ಮಹಿಳೆಯರು ಅನಾದಿ ಕಾಲದಿಂದಲೂ ಒಂದಲ್ಲ ಒಂದು ರೀತಿಯ ಶೋಷಣೆ, ದೌರ್ಜನ್ಯ, ದಬ್ಬಾಳಿಕೆಗಳಿಗೆ ಒಳಗಾಗುತ್ತಲೇ ಇದ್ದಾರೆ. ಮಾತ್ರವಲ್ಲದೇ ರಾಜಕೀಯ ಆರ್ಥಿಕ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯವಾಗಿ ಏರಿಕೆಯಾಗಿಲ್ಲ. ಇಂದು ಶಿಕ್ಷಣವು ಒಂದು ಪ್ರಬಲ ಸಾಧನವಾಗಿ ಪ್ರವಹಿಸುತ್ತಿರುವ ಈ ಹೊತ್ತಿನಲ್ಲಿ ಮಹಿಳೆಯರ ಸ್ಥಿತಿಗತಿಯಲ್ಲಿ ಕೊಂಚ ಪ್ರಗತಿ ಕಂಡುಬಂದಿದೆ. ಆದರೂ ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಲಾಗದು. ರಾಮಾಯಣ ಮಹಾಭಾರತದಲ್ಲಿ ಬರುವ ಸೀತೆ ಮಂಡೊದರಿಯರಂತಹ ಪತಿವ್ರತೆಯರಿಂದ ಆರಂಭಗೊಂಡು ಇಂದಿನ ಆಧುನಿಕ ಸ್ತ್ರೀಯರವರೆಗೂ ಪತಿವ್ರತೆಯ ವಿಚಾರದಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳಿವೆ ಎಂದು ಹೇಳಿದರು. ಸೀತೆ ಮಂಡೊದರಿಯರಂತಹ ಪತಿವ್ರತೆಯರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜಾಗೃತಿ ಅರಿವಿನ ಸಪ್ತಾಹದ ಅಂಗವಾಗಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಲಿಯಂ ಲಿಮಿಟೆಡ್ (ಎಂಆರ್‌ಪಿ ಎಲ್) ಹಾಗೂ ಮಣೇಲ್ ಶ್ರೀನಿವಾಸ್ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಹಯೋಗದಲ್ಲಿ ನಡೆದ ಹಿಂದಿ ಪ್ರಬಂಧ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ವೃತ್ತಿಪರ ವಾಣಿಜ್ಯ ವಿಭಾಗದ ಜೆನಿಶಾ ಲಸ್ರಾಡೋ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ಜಿಲ್ಲೆಯಲ್ಲಿನ ವಿವಿಧ ಮೊಬೈಲ್ ಸಂಸ್ಥೆಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ, ಜಿಲ್ಲಾಮಟ್ಟದ ದೂರ ಸಂಪರ್ಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸರಿಯಾಗಿ ದೊರೆಯದ ಕಾರಣ ಗ್ರಾಮೀಣ ಜನತೆ ತುರ್ತು ಸಂದರ್ಭದಲ್ಲಿ ಅಗತ್ಯ ನೆರವು ಪಡೆಯಲು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಮ್ಮ ಸಂಬಂದಿಕರನ್ನು ಸಂಪರ್ಕಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ಸಹ ಆನ್‌ಲೈನ್ ಪಾಠಗಳನ್ನು ಕೇಳಲು ಸಾಕಷ್ಟು ಶ್ರಮ ಪಡುತ್ತಿದ್ದು, ನೆಟ್‌ವರ್ಕ್ ಸಂಪರ್ಕಕ್ಕಾಗಿ ಎತ್ತರದ ಮತ್ತು ಅಪಾಯಕಾರಿ ಸ್ಥಳಗಳನ್ನು ಆಶ್ರಯಿಸುತ್ತಿದ್ದಾರೆ. ಇಂತಹ ಪ್ರದೇಶಗಳಲ್ಲಿ ತ್ವರಿತಗತಿಯಲ್ಲಿ ಟವರ್ಗಳನ್ನು ಅಳವಡಿಸಿ, ನಿರಂತರವಾಗಿ ಮೊಬೈಲ್ ಸಂಪರ್ಕ ಹಾಗೂ ನಿಗದಿತ ವೇಗವನ್ನು ದೊರಕಿಸುವಂತೆ ವಿವಿಧ ಮೊಬೈಲ್ ಸಂಸ್ಥೆಗಳಿಗೆ ಕೂರ್ಮಾರಾವ್ ಎಂ.ಸೂಚಿಸಿದರು. ನೆಟ್‌ವರ್ಕ್ ಒದಗಿಸುವ ಸಂಸ್ಥೆಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್ಗಳಿಗೆ ಬಾಕಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿಯಾಗಿ ಕೇಶವ್ ಭಟ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ರವರ ಅನುಮೋದನೆಯ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಬಿ.ಆರ್ ನಾಯ್ಡುರವರ ಸೂಚನೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾದ ರೋಷನ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕೇಶವ್ ಭಟ್ ಅವರನ್ನು ನೇಮಕ ಮಾಡಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ 6 ತಿಂಗಳುಗಳಿಂದ ತಾಂತ್ರಿಕ ಕಾರಣಗಳಿಂ ದಾಗಿ ಸ್ಥಗಿತಗೊಂಡಿದ್ದ ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿರುವ ರೈಲ್ವೆ ಟಿಕೆಟ್ ಬುಕ್ಕಿಂಗ್ ಕೇಂದ್ರ ಮತ್ತೆ ಕಾರ್ಯಾರಂಭಿಸಿದೆ. ಸರ್ವರ್ ಡೌನ್ ಆದ ಕಾರಣಕ್ಕೆ ಆರಂಭಿಕ ಕಾರ್ಯ ಚಟು ವಟಿಕೆ ನಿಲ್ಲಿಸಿದ್ದ ಕೇಂದ್ರವು ನಂತರ ನಾನಾ ಕಾರಣಕ್ಕೆ ಗ್ರಾಹಕ ಸೇವೆಯಿಂದ ದೂರವೇ ಉಳಿದಿತ್ತು. ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತ ರಕ್ಷಣಾ ಸಮಿತಿ ಸಂಸದರು, ಕೊಂಕಣ ರೈಲ್ವೆ ನಿಗಮ ಇನ್ನಿತರರಿಗೆ ಮನವಿ ಸಲ್ಲಿಸಿದ್ದು, ಸಾರ್ವಜನಿಕರು ಸಹ ಮನವಿ ಅರ್ಪಿಸಿದ್ದರು. ಸ್ಪಂದಿಸಿದ ಕೇಂದ್ರ ಸಚಿವೆ:ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕುಂದಾಪುರದ ರೈಲ್ವೆ ನಿಲ್ದಾಣದ ಪಿಆರ್‌ಎಸ್ ಪ್ರಧಾನ ಅಂಚೆ ಕಚೇರಿಯಲ್ಲಿ ನಾದುರಸ್ತಿಯಲ್ಲಿರುವುದನ್ನು ಮನಗಂಡು ಸಾರ್ವಜನಿಕ ಮನವಿಗೆ ಸ್ಪಂದಿಸಿ ಸಂಬಂಧಿತ ಇಲಾಖೆಯ ಗಮನ ಸೆಳೆದ ಹಿನ್ನೆಲೆ ಯಲ್ಲಿ ಶುಕ್ರವಾರ ಟಿಕೆಟ್ ಬುಕ್ಕಿಂಗ್ ಕೇಂದ್ರ ಕಾರ್ಯಾರಂಭಿಸಿದೆ. ಅಲ್ಲದೆ ಶಾಶ್ವತವಾಗಿ ಪಿಆರ್‌ಎಸ್ ಸೆಂಟರ್‌ನ್ನು ರೈಲ್ವೆ ನಿಲ್ದಾಣದಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆಯಲ್ಲಿ ಮಣ್ಣಿನಲ್ಲಿ ಹೂತು ಹೋಗಿದ್ದ ವಿಜಯನಗರ ಕಾಲದ ಅಪರೂಪದ ವೀರಗಲ್ಲನ್ನು ತಗ್ಗರ್ಸೆ ಟಿ. ನಾರಾಯಣ ಹೆಗ್ಗೆ ಕುಟುಂಬದವರ ಸಹಕಾರದಲ್ಲಿ ಶಿರ್ವದ ಎಂಎಸ್ಆರ್‌ಎಸ್ ಕಾಲೇಜಿನ ಪುರಾತತ್ವ ವಿಭಾಗದ ವಿದ್ಯಾರ್ಥಿಗಳು ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ. ಟಿ. ಮುರುಗೇಶಿ ಮಾರ್ಗದರ್ಶನದಲ್ಲಿ ಹೊರ ತೆಗೆಯಲಾಗಿದೆ. ಸುಮಾರು 5 ಅಡಿ ಎತ್ತರದ ಈ ವೀರಗಲ್ಲು ಆಯತಾಕಾರದಲ್ಲಿದ್ದು, ನಾಲ್ಕು ಚಿತ್ರಪಟ್ಟಿಕೆಗಳನ್ನು ಒಳಗೊಂಡಿದೆ. ಕೆಳಗಿನ ಪಟ್ಟಿಕೆಯಲ್ಲಿ ಇಬ್ಬರು ವೀರರು ಕೈಯಲ್ಲಿ ಖಡ್ಗ ಮತ್ತು ಗುರಾಣಿ ಹಿಡಿದು ಪರಸ್ಪರ ಎದುರು ಬದುರಾಗಿ ನಿಂತಿದ್ದಾರೆ. ಅವರ ಹಿಂದೆ ಇಬ್ಬರು ಸೇವಕರು ನಿಂತಿರುವಂತೆ ಚಿತ್ರಿಸಲಾಗಿದೆ. ಮೇಲಿನ ಎರಡು ಪಟ್ಟಿಕೆಗಳಲ್ಲಿಯೂ ಇದೇ ಚಿತ್ರಗಳು ಪುನರಾವರ್ತನೆಯಾಗಿವೆ ಮೊದಲಿನ ಚಿತ್ರಪಟ್ಟಿಕೆಯಲ್ಲಿ ಮಧ್ಯದಲ್ಲಿ ಶಿವಲಿಂಗ ಎಡಬದಿಯಲ್ಲಿ ಕುಳಿತ ಭಂಗಿಯಲ್ಲಿರುವ ನಂದಿ ಮತ್ತು ಬಲಬದಿಯಲ್ಲಿ ಅಂಜಲಿಬದ್ದನಾಗಿ ನಿಂತಿರುವ ವ್ಯಕ್ತಿಯ ಚಿತ್ರಣವಿದೆ. ಮೇಲಿನ ಪಟ್ಟಿಕೆಯ ಮೇಲ್ಬಾಗವನ್ನು ಕುದುರೆ ಲಾಳಾಕೃತಿಯ ವಿನ್ಯಾಸಗೊಳಿಸಲಾಗಿದ್ದು ಮಧ್ಯದಲ್ಲಿ ಸಿಂಹ ಲಾಂಛನವಿದೆ. ಶಾಸನದಲ್ಲಿನ ಕೆಲವೇ ಕೆಲವು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಪೆರ್ಡೂರು ಶ್ರೀ ಅನಂತಪದ್ಮನಾಭ ಮೇಳದಲ್ಲಿ ಒಂಭತ್ತು ವರ್ಷಗಳ ಕಾಲ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದ ಜನ್ಸಾಲೆ ರಾಘವೇಂದ್ರ ಆಚಾರ್ಯ ಅವರನ್ನು ಈ ವರ್ಷ ಏಕಾಏಕಿ ಮೇಳದಿಂದ ಕೈ ಬಿಡಲಾಗಿದೆ. ಈ ಕುರಿತು ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪರ-ವಿರೋಧ ಚರ್ಚೆ, ಗೊಂದಲಗಳಿಗೆ ತೆರೆ ಎಳೆಯುವ ಸಲುವಾಗಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರು ಮೇಳದೊಂದಿಗಿನ ತಮ್ಮ ಒಡನಾಟ ಹಾಗೂ ಮೇಳದಿಂದ ಕೈಬಿಟ್ಟ ಸಂದರ್ಭವನ್ನು ಮೇಲುಕು ಹಾಕಿದ್ದಲ್ಲದೇ, ಮುಂದೆಯೂ ಮೇಳ ಯಶಸ್ವಿಯಾಗಿ ತಿರುಗಾಟ ನಡೆಸಲಿ ಎಂದು ಹಾರೈಸುವ ಮೂಲಕ ಹೃದಯ ಶ್ರೀಮಂತಿಕೆ ಪ್ರದರ್ಶಿಸಿದ್ದಾರೆ. ಜನ್ಸಾಲೆ ಮನದ ಮಾತು:ಮಾಜಿ ಧರ್ಮದರ್ಶಿ ಚಿತ್ತೂರು ಮಂಜಯ್ಯ ಶೆಟ್ಟಿ ಅವರ ಯಜಮಾನಿಕೆಯಲ್ಲಿ ಮಾರಣಕಟ್ಟೆ ಮೇಳದಲ್ಲಿ ಪ್ರಧಾನ ಭಾಗವತನಾಗಿದ್ದ ನನ್ನನ್ನು ಅಭಿಮಾನಿಗಳು ಗುರುತಿಸುತ್ತಿದ್ದುದು ಹಾಗೂ ಆದರಿಸುತ್ತಿದ್ದುದನ್ನು ಗಮನಿಸಿ ವೈ. ಕರುಣಾಕರ ಶೆಟ್ಟಿ ಅವರು, ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ನಿವೃತ್ತರಾಗುತ್ತಿರುವ ವೇಳೆಗೆ ಪೆರ್ಡೂರು ಮೇಳದ ಪ್ರಧಾನ ಭಾಗವತನಾಗಿ ನಿಯುಕ್ತಿ ಮಾಡಿದರು. ಅವರು ನೀಡಿದ ಸದವಕಾಶವನ್ನು ಸಮರ್ಥವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮದ ಪ್ರಯುಕ್ತ ‘ಯಶಸ್ಸಿನ ಗುಟ್ಟು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆರ್ಟ್ ಆಫ಼್ ಲಿವಿಂಗ್ ಪ್ರತಿನಿಧಿ ಪ್ರಶಾಂತ್ ಪೈ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿಗೆ ಮನಸ್ಸು ಬಹಳ ಪ್ರಮುಖ ಪಾತ್ರ ವಹಿಸುತ್ತದೆ, ಮನಸ್ಸಿನ ಸ್ಪಷ್ಟತೆ, ಏಕಾಗ್ರತೆ, ಬದ್ಧತೆ ಹಾಗೂ ಆತ್ಮವಿಶ್ವಾಸ ಈ ನಾಲ್ಕು ವಿಚಾರವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಸದಾಕಾಲವೂ ಲಭಿಸುತ್ತದೆ ಎಂದು ಅಭಿಪ್ರಾಯ ತಿಳಿಸಿದರು.. ಪ್ರಾಣಾಯಾಮ ಮತ್ತು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಡುವ ಜೊತೆಗೆ ಪ್ರಾಣಾಯಾಮದ ಪ್ರಯೋಗವನ್ನು ಕಲಿಸಿದರು. ಕಾಲೇಜಿನ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಅಕಾಡೆಮಿಕ್ ಡೀನ್ ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗ ಹಾಗು ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು. ತೃತೀಯ ವರ್ಷದ ವಿಧ್ಯಾರ್ಥಿನಿಯರಾದ ಮಾಧುರಿ ಹಾಗೂ ಕಾವ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ 2021-22ನೇ ಸಾಲಿನ ಯೂತ್‌ರೆಡ್‌ಕ್ರಾಸ್ ಸಂಸ್ಥೆಯ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರಘಟಕದ ಸಭಾಪತಿಗಳಾದ ಎಸ್.ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್ .ಪಿ. ನಾರಾಯಣ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯೂತ್‌ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಂಚಾಲಕರಾದ ಸತ್ಯನಾರಾಯಣ ಪುರಾಣಿಕ್, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಕಾರ್ಯದರ್ಶಿಗಳಾದ ವೈ.ಸೀತಾರಾಮ ಶೆಟ್ಟಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಖಜಾಂಚಿಗಳಾದ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಯೂತ್‌ರೆಡ್‌ಕ್ರಾಸ್ ಸಂಸ್ಥೆಯ ಕಾರ್ಯಕ್ರಮ ಸಂಯೋಜಕರಾದ ಸತ್ಯನಾರಾಯಣ ಸ್ವಾಗತಿಸಿದರು. ಸಹ ಕಾರ್ಯಕ್ರಮ ಸಮಯೋಜಕರಾದ ವಿದ್ಯಾರಾಣಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ಸೌಮ್ಯ ಅವರಿಗೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ವತಿಯಿಂದ ಶೈಕ್ಷಣಿಕ ಉದ್ದೇಶಕ್ಕಾಗಿ ಆರ್ಥಿಕ ಸಹಾಯವನ್ನು ಮಾಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘ ಹಾಗೂ ತಹಶೀಲ್ದಾರರ ಕಚೇರಿ, ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣೆ ಭಾಗವಹಿಸುವಿಕೆ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಶಿಕ್ಷಣಾಧಿ ಕಾರಿ ಕಚೇರಿಯ ಬಿ.ಆರ್.ಸಿ. ಸದಾನಂದ ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ರಾಜಕೀಯದ ಸ್ಥಿರತೆಗೆ ಮತ ದಾರರ ಮತ ಹಾಗೂ ಚುನಾವಣೆಯಲ್ಲಿ ಭಾಗವಹಿಸುವಿಕೆ ಪ್ರಮುಖವಾದುದು. ರಾಜಕೀಯ ಶಿಕ್ಷಣವುಳ್ಳ ಪ್ರಜ್ಞಾವಂತ ಯುವ ಮತದಾರರ ಮತ ದೇಶಕ್ಕೆ ಭದ್ರತೆ ಒದಗಿಸಬಲ್ಲದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ದೇಶದ ಭವಿಷ್ಯವನ್ನು ಹಿತದಲ್ಲಿ ಇರಿಸಿಕೊಂಡು ಮತ ನೋಂದಣಿ ಹಾಗೂ ಪರಿಷ್ಕರಣೆ ಮಾಡಿಕೊಳ್ಳುವುದು ಅಗತ್ಯ ಹಾಗೂ ಮತ ಸೋರಿ ಹೋಗದಂತೆ ಜಾಗೃತರಾಗಿರಿ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಕಂದಾಯ ನಿರೀಕ್ಷಕ ದಿನೇಶ, ಹಾಗೂ ಗ್ರಾಮ ಲೆಕ್ಕಿಗ ಆನಂದ ಕೋಟೇಶ್ವರ ಮತ ನೋಂದಣಿ…
