ಹೆಣ್ಣು ಸಂಸಾರದ ಕಣ್ಣು, ಇತ್ತೀಚಿನ ದಿನಗಳಲ್ಲಿ ಹೆಣ್ಣು ಎಲ್ಲಾ ರಂಗದಲ್ಲಿಯೂ ತನ್ನದೇ ಆದ ಛಾಪನ್ನು ಮೂಡಿಸುತ್ತಿದ್ದಾಳೆ. ಗಂಡಿನ ಸರಿಸಮಾನವಾಗಿ ದುಡಿಯುತ್ತಿದ್ದಾಳೆ, ಹೆಜ್ಜೆಯಿಡುತ್ತಿದ್ದಾಳೆ. ಆದರೆ ಮದುವೆಯಾದ ತಕ್ಷಣ ಮಹಿಳೆಯರು ಪ್ರತಿ ವಿಚಾರಕ್ಕೂ ಗಂಡನನ್ನು ಅವಲಂಬಿಸುತ್ತಾರೆ. ಒಳ್ಳೆಯ ಓದು, ಉದ್ಯೋಗವಿರೋ ಮಹಿಳೆಯರು ಕೂಡ ತನ್ನ ಇಷ್ಟ ಕಷ್ಟಗಳ ಕುರಿತು ನಿರ್ಧಾರ ಕೈಗೊಳ್ಳುವಾಗ ಗಂಡನ ಅಪ್ಪಣೆ ಕೋರುತ್ತಾರೆ. ಆದರೆ ಇಂತಹ ವಿಚಾರಗಳು ಮಹಿಳೆಯನ್ನು ಇನ್ನಷ್ಟು ದುರ್ಬಲಗೊಳಿಸುತ್ತವೆ. ಸಂಸಾರದಲ್ಲಿ ಇಬ್ಬರಲ್ಲೂ ಸಮನಾದ ಹೊಂದಾಣಿಗೆ ಇರಬೇಕು ನಿಜ, ಆದ್ರೆ ಅತಿಯಾದ ಅವಲಂಬನೆ ಖಂಡಿತಾ ಒಳ್ಳೆಯದ್ದಲ್ಲ. ತಮ್ಮ ಸಾಮರ್ಥ್ಯವನ್ನು ಅರಿಯದೆ ಹೆಣ್ಣು ಪ್ರತಿ ವಿಚಾರಕ್ಕೂ ಪತಿಯನ್ನೇ ಅವಲಂಬಿಸುತ್ತಾ ಹೋದರೆ ತನ್ನತನ ಕಳೆದುಕೊಳ್ಳುತ್ತಾಳೆ. ಮಹಿಳೆ ಮದುವೆ ಬಳಿಕ ಗಂಡ, ಮನೆ, ಮಕ್ಕಳು ಎಂದು ತನ್ನ ವ್ಯಕ್ತಿತ್ವ, ಕೌಶಲ್ಯ, ವೃತ್ತಿ ಬದುಕನ್ನು ತ್ಯಾಗ ಮಾಡಬೇಕಾದ ಅಗತ್ಯವಿಲ್ಲ. ಸಂಸಾರದ ಜೊತೆ ಸ್ವಾವಲಂಬನೆ ಬದುಕನ್ನು ಇಂದಿನ ಎಷ್ಟೋ ಮಹಿಳೆಯರು ನಿಭಾಯಿಸುತ್ತಿದ್ದಾರೆ. ಇದರಿಂದ ಆತ್ಮವಿಶ್ವಾಸ ಹಾಗೂ ಆರ್ಥಿಕ ಸ್ವಾವಲಂಬನೆ ಜೊತೆ ನೆಮ್ಮದಿಯ ಬದುಕನ್ನು ಕಂಡುಕೊಳ್ಳಬಹುದು. ಪತಿಗಾಗಿ ನಿಮ್ಮತನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರಿ ಶಾಲೆಗಳಲ್ಲಿ ಸಾರ್ವಜನಿಕರ ಸಹಭಾಗಿತ್ವ ಇದ್ದರೆ ಶೈಕ್ಷಣಿಕ ಬದಲಾವಣೆಗಳನ್ನು ತರಬಹುದು. ಇತ್ತೀಚಿನ ವರ್ಷಗಳಲ್ಲಿ ಆಂಗ್ಲಮಾಧ್ಯಮ ಶಾಲೆಗಳಿಗೆ ಸರ್ಕಾರಿ ಶಾಲೆಗಳು ಪೈಪೋಟಿ ನೀಡುತ್ತಿರುವುದು ಕೂಡ ಒಂದು ರೀತಿಯ ಶೈಕ್ಷಣಿಕ ಕ್ರಾಂತಿಯಾಗಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಉಪ್ಪುಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಳೆವಿದ್ಯಾರ್ಥಿಗಳ ನೆರವಿನಿಂದ ನಿರ್ಮಾಣಗೊಂಡ ಐದು ತರಗತಿ ಕೋಣೆಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸುಮಾರು 140 ವರ್ಷಗಳ ಇತಿಹಾಸ ಹೊಂದಿರುವ ಉಪ್ಪುಂದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ. ಈ ಶಾಲೆಯಲ್ಲಿ ಶಿಕ್ಷಣ ಪಡೆದ ಹಳೆ ವಿದ್ಯಾರ್ಥಿಗಳು ಒಂದು ಸಮಿತಿ ರಚಿಸಿ ಸುಸಜ್ಜಿತ ಐದು ತರಗತಿ ಕಟ್ಟಡಗಳನ್ನು ನಿರ್ಮಿಸಿ ಶಾಲೆಗೆ ಹಸ್ತಾಂತರಿಸಿದ್ದು ಒಂದು ಇತಿಹಾಸವಾಗಿದೆ. ಹೀಗೆಯೇ ಇತರ ಎಲ್ಲಾ ಶಾಲೆಗಳಲ್ಲಿಯೂ ಕೂಡ ಪೋಷಕರು, ಹಳೆವಿದ್ಯಾರ್ಥಿಗಳು ಶಾಲಾ ಎಸ್‌ಡಿಎಂಸಿಯೊಂದಿಗೆ ಕೈಜೋಡಿಸುವ ಮೂಲಕ ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಹೊದುವಂತಾಗಲಿ ಎಂದು ಹಾರೈಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಂಗಾಸಕ್ತ ಸಹೃದಯಿ ಕಲಾಭಿಮಾನಿಗಳು, ಕಲಾ ಪೋಷಕರು ಲಾವಣ್ಯದ ಕೈಹಿಡಿದು ಮುನ್ನೆಡಿಸಿದ ಪರಿಣಾಮ ಈ ನಲವತ್ತೈದು ವಸಂತಗಳಲ್ಲಿ ಲವಲವಿಕೆಯಿಂದಲೇ ಬೆಳೆದುಬಂದಿದೆ. ಲಾವಣ್ಯ, ಒಳ ಹೊರಗೆ ತನ್ನದೇ ಆದ ಉತ್ಸಾಹಿ ಸಮುದಾಯವನ್ನು ಕಟ್ಟಿಕೊಂಡಿದೆ. ಚಲನಶೀಲತೆಯನ್ನು ಅಳವಡಿಸಿಕೊಂಡಿದ್ದರಿಂದಲೇ ವರ್ಷದಿಂದ ವರ್ಷಕ್ಕೆ ನಿರಂತರವಾಗಿ ಬೆಳೆಯುತ್ತಿದೆ ಎಂದು ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಆಡಳಿತ ಟ್ರಸ್ಟಿ ಡಾ. ಗೋವಿಂದ ಬಾಬು ಪೂಜಾರಿ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಮಂಗಳವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಲಾವಣ್ಯ ಬೈಂದೂರು ವತಿಯಿಂದ ಐದು ದಿನಗಳ ಕಾಲ ನಡೆಯುವ ರಂಗಪಂಚಮಿ-2022 ನಾಟಕೋತ್ಸವದ ನಾಲ್ಕನೇ ದಿನದ ಸಭಾಧ್ಯಕ್ಷತೆವಹಿಸಿ ಮಾತನಾಡಿದರು. ಈ ಸಾಲಿನ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯಕ್ಷಗಾನ ಕಲಾವಿದ ತೀರ್ಥಹಳ್ಳಿ ಗೋಪಾಲ ಆಚಾರ್ಯ ಇವರನ್ನು ಸನ್ಮಾನಿಸಲಾಯಿತು. ಸನ್ಮಾನಕ್ಕೆ ಉತ್ತರಿಸಿದ ಆಚಾರ್ಯ, ಕಳೆದ ಇಪ್ಪತ್ತು ವರ್ಷಗಳಲ್ಲಿ ಯಕ್ಷಗಾನ ವೃತ್ತಿ ಮೇಳಗಳ ಸಂಖ್ಯೆ ವೃದ್ಧಿಸಿದೆ. ನೂರಾರು ಹಿರಿಯ, ಕಿರಿಯ ಹವ್ಯಾಸಿ ತಂಡಗಳು ಈ ಕ್ಷೇತ್ರದಲ್ಲಿ ಕಾಣಿಸಿಕೊಂಡು, ಪ್ರದರ್ಶನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ|| ಕಾರಂತ ಪ್ರತಿಷ್ಠಾನ (ರಿ) ಕೋಟ, ಡಾ| ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ ಕರಾವಳಿ ಕಣ್ಮಣಿ ದಿ. ಕೆ.ಸಿ ಕುಂದರ್ ಸ್ಮಾರಕ ದತ್ತಿ ಪುರಸ್ಕಾರಕ್ಕೆ ಯುವ ಉದ್ಯಮಿ, ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ತಳಮಟ್ಟದಿಂದ ಬೆಳೆದು ಯಶಸ್ವಿ ಉದ್ಯಮಿಯಾಗಿ ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸುವುದರ ಜೊತೆಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಹಲವಾರು ಅಶಕ್ತರಿಗೆ ಸಹಾಯ ಮಾಡುತ್ತಿದ್ದಾರೆ. ಕೋಟದ ಕಾರಂತ ಥೀಮ್ ಪಾರ್ಕ್‌ನಲ್ಲಿ ಎಪ್ರಿಲ್ 24 ರಂದು ನಡೆಯುವ ಮಕ್ಕಳ ಬೇಸಿಗೆ ಶಿಬಿರದ ಸಮರೋಪ ಸಮಾರಂಭ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಖಾಸಗಿ ಶಾಲೆಗಳ ಪೈಪೋಟಿ ಹಾಗೂ ಅಬ್ಬರದ ನಡುವೆ ಸರಕಾರಿ ಶಾಲೆಗಳು ಉತ್ತಮ ಸಾಧನೆ ಮಾಡುತ್ತಿದ್ದು, ಸರಕಾರಿ ಶಾಲೆಗಳಲ್ಲಿನ ಮೂಲಭೂತ ಸೌಲಭ್ಯ ಹಾಗೂ ಶಿಕ್ಷಣದ ಗುಣಮಟ್ಟದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗುತ್ತಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಸಮನ್ವಯಾಧಿಕಾರಿ ಸದಾನಂದ ಬೈಂದೂರು ಹೇಳಿದರು. ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಶನಿವಾರ ಜರುಗಿದ ಕಂಪ್ಯೂಟರ್ ಕ್ಲಾಸ್ ಉದ್ಘಾಟನೆ ಮತ್ತು ಸಮುದಾಯದತ್ತ ಶಾಲೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರಾದ ಎರಡು ಕಂಪ್ಯೂಟರ್‌ಗಳನ್ನು ಉದ್ಘಾಟಿಸಿ ಶಾಲೆಗೆ ಹಸ್ತಾಂತರಿಸಿದರು. ಗ್ರಾಪಂ ಉಪಾದ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯ ಬಿ.ರಾಘವೇಂದ್ರ, ನಿವೃತ್ತ ಮುಖ್ಯೋಪಾಧ್ಯಾಯ ರಮೇಶ ಮಹಾಲೆ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಪೇಟೆ ವೆಂಕಟರಮಣ ದೇವರ ಜಾತ್ರೆಯ ಪ್ರಯುಕ್ತ ಶ್ರೀಗಣೇಶ ಯಕ್ಷಗಾನ ಮಂಡಳಿ, ಉಪ್ಪಿನಕುದ್ರು ಸಂಯೋಜನೆಯಲ್ಲಿ ನಡೆದ ಹತ್ತನೇ ವರ್ಷದ ಯಕ್ಷಗಾನ ಕಾರ್ಯಕ್ರಮದಲ್ಲಿ ತೆಂಕುತಿಟ್ಟಿನ ಹೆಸರಾಂತ ಭಾಗವತೆ ಕಾವ್ಯಶ್ರೀ ನಾಯಕ್ ಅಜೇರುಗೆ ಕಲಾಕೀರ್ತಿ ಬಿರುದಿನೊಂದಿಗೆ ಸನ್ಮಾನಿಸಲಾಯಿತು. ದೇವಳದ ಆಡಳಿತ ಮೊಕ್ತೇಸರ ಮೋಹನದಾಸ ಶೆಣೈ ಅಧ್ಯಕ್ಷತೆ ವಹಿಸಿದ್ದರು. ದೇವಳದ ಆಡಳಿತ ಸದಸ್ಯರಾದ ಸುಬ್ರಾಯ ಪೈ, ವಿವೇಕ ಪೈ, ಶೋಭಾ, ಶ್ಶಾಲಿನಿ, ಪ್ರೀತಮ್ ಉಪಸ್ಥಿತರಿದ್ದರು. ರಂಗಸ್ಥಳ ಫೌಂಡೇಷನ್ ಟ್ರಸ್ಟ್ ಅಧ್ಯಕ್ಷ ವಿ. ರಾಘವೇಂದ್ರ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿದರು. ವೆಂಕಟರಮಣ ನಾಯಕ್ ಸನ್ಮಾನಪತ್ರ ವಾಚಿಸಿದರು. ವಿಠಲ ಕಾಮತ್ ಸ್ವಾಗತಿಸಿದರು. ವಸಂಯರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಪುರಸಭೆಯಲ್ಲಿ ಆಟೋರಿಕ್ಷಾ ಸ್ಟ್ಯಾಂಡ್ ಒದಗಿಸುವಂತೆ ಕಳೆದ ನಲವತ್ತು ವರ್ಷದಿಂದ ನೂರರಷ್ಟು ಮನವಿ ಸಲ್ಲಿಸಿದ್ದರೂ ಆಟೋಚಾಲಕರ ಬವಣೆ ನೀಗಿಲ್ಲ. ಆಟೋರಿಕ್ಷಾ ಎಲ್ಲರಿಗೂ ಬೇಕು. ಚಾಲಕರ ಸಮಸ್ಯೆ ಯಾರಿಗೂ ಬೇಡ. ರಸ್ತೆ ವಿಸ್ತರಣೆ ಕಟ್ಟಡಗಳ ನಿರ್ಮಾಣಕ್ಕೆ ಆಟೋಚಾಲಕರು ನೆಲೆಯಿಲ್ಲದೆ ಪರದಾಡುತ್ತಿದ್ದು, ಪುರಸಭೆ ಅಟೋಚಾಲಕರ ಸಮಸ್ಯೆ ಸ್ಪಂದಿಸದೆ ಅವರ ತುತ್ತಿನ ತಟ್ಟೆ ಕಸಿದುಕೊಳ್ಳುತ್ತದೆ ಎಂದು ಆಟೋ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕರ ಸಂಘ ಸಮನ್ವಯ ಸಮತಿ ಅಧ್ಯಕ್ಷ ಲಕ್ಷ್ಮಣ ಶೆಟ್ಟಿ ಆರೋಪಿಸಿದ್ದಾರೆ. ಕುಂದಾಪುರ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕ ಸಂಘಟನೆಗಳ ಸಮನ್ವಯ ಸಮಿತಿ ಆಶ್ರಯದಲ್ಲಿ ಕುಂದಾಪುರ ಪುರಸಭೆ ಎದುರು ಮಂಗಳವಾರ ನಡೆದ ಪ್ರತಿಯಲ್ಲಿ ಪುರಸಭೆಗೆ ಮುತ್ತಿಗೆ ಹಾಕಿ ಮಾತನಾಡಿದರು. ಕುಂದಾಪುರ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಮನವಿ ಸ್ವೀಕರಿಸಿ, ಆಟೋರಿಕ್ಷಾ ಚಾಲಕರ ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದು, ಹಿಂದೆಯೂ ಕೂಡಾ ಪುರಸಭೆ ಆಟೋಚಾಲಕರ ಸಮಸ್ಯೆ ಬಗ್ಗೆ ಸ್ಪಂದಿಸಿದ್ದು, ಬೇಡಿಕೆ ಬಗ್ಗೆ ಸಂಘಟನೆ ಮುಖಂಡರು ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮನ್ನು ಮಾತನಾಡದೇ ಇರುವ ಹಾಗೆ ಮಾಡುವ ಪ್ರಯತ್ನಗಳು ಸುತ್ತಲು ನಡೆಯುತ್ತಿರುವ ಈ ಸಮಯದಲ್ಲಿ ರಂಗಭೂಮಿಯ ಜವಾಬ್ದಾರಿ ಹೆಚ್ಚಿದೆ. ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳುವ ತಾಕತ್ತು ಇಲ್ಲಿರುವುದರಿಂದ ರಂಗಭೂಮಿಯ ಕಲಾವಿದರು ಜೊತೆ ಸೇರುವ ಬದುಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗೆಗೆ ಯೋಚಿಸುವ, ನಮ್ಮ ಹಾಗೂ ಜನರ ಸಮಸ್ಯೆಗಳನ್ನು ಹೇಳಿ ಪರಿಹಾರ ಕಂಡುಕೊಳ್ಳುವ ಅಗತ್ಯತೆ ಇದೆ ಎಂದು ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ಹೇಳಿದರು. ಇಲ್ಲಿನ ಶಾರದಾ ವೇದಿಕೆಯಲ್ಲಿ ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಲಾವಣ್ಯ ಬೈಂದೂರು ವತಿಯಿಂದ ಐದು ದಿನಗಳ ಕಾಲ ನಡೆಯುವ ರಂಗಪಂಚಮಿ-2022 ನಾಟಕೋತ್ಸವದ ಮೂರನೇ ದಿನದ ಸಭಾಧ್ಯಕ್ಷತೆವಹಿಸಿ ಮಾತನಾಡಿದರು. ಪ್ರಾದೇಶಿಕ ಭಾಷಾ ಸೊಗಡನ್ನು ರಂಗಭೂಮಿಯಲ್ಲಿ ಅಳವಡಿಸಿಕೊಂಡರೆ ಸುಲಭವಾಗಿ ಜನರ ಮನಸ್ಸನ್ನು ತಟ್ಟಲು ಸಾಧ್ಯವಿದೆ ಎನ್ನುವುದನ್ನು ಲಾವಣ್ಯ ತೋರಿಸಿಕೊಟ್ಟಿದೆ ಎಂದರು. ಬೈಂದೂರು ಕಸಾಪ ಅಧ್ಯಕ್ಷ, ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಮಾತನಾಡಿ ಕಲೆ ಮತ್ತು ಸಾಹಿತ್ಯವನ್ನು ಜೀವಂತವಾಗಿಡಲು ಇಂತಹ ಉತ್ಸವಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಿಕ್ಕಪ್ಪನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲಿನ ದೋಷಾರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 25 ಸಾವಿರ ದಂಡ ವಿಧಿಸಿದ್ದು ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ನೀಡಿದ್ದಾರೆ. 16 ವರ್ಷ ಪ್ರಾಯದ ಬಾಲಕಿಯನ್ನು ಆಕೆಯ ಚಿಕ್ಕಪ್ಪ (ಸಂತ್ರಸ್ತೆ ತಾಯಿಯ ತಂಗಿ ಗಂಡ) ತನ್ನ ಮನೆಯಲ್ಲಿ ಆಕೆಯ ಇಚ್ಚೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಆಕೆ 7 ತಿಂಗಳ ಗರ್ಭವತಿಯಾದಾಗ ಘಟನೆ ಕುಟುಂಬಿಕರ ಗಮನಕ್ಕೆ ಬಂದಿದ್ದು ವಿಚಾರಿಸಿದಾಗ ಕೂಲಿ ಕೆಲಸ ಮಾಡಿಕೊಂಡಿದ್ದ ಚಿಕ್ಕಪ್ಪನೇ ಈ ಕೃತ್ಯ ಎಸಗಿರುವುದು ತಿಳಿದು ಬಂದಿತ್ತು. ಘಟನೆ ಬೆಳಕಿಗೆ ಬರುತ್ತಿದ್ದಂತೆ ಕುಟುಂಬ ಸದಸ್ಯರ ಕೈಕಾಲಿಗೆ ಬಿದ್ದು ಪ್ರಕರಣ ರಾಜಿ ಮೂಲಕ ಇತ್ಯರ್ಥ ಮಾಡಲು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.11: ಮುಂಬರುವ ದಿನಗಳಲ್ಲಿ ಬೀಚ್ ಟೂರಿಸಂ ಹಾಗೂ ಟೆಂಪಲ್ ಟೂರಿಸಂ ದೊಡ್ಡ ಮಟ್ಟದಲ್ಲಿ ಅಭಿವೃದ್ಧಿಯಾಗಲಿದೆ. ಕರಾವಳಿ ಭಾಗದ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸಿಆರ್‌ಝಡ್ ನಿಯಮಾವಳಿಗಳು ಬದಲಾಯಿಸುವ ಬಗ್ಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಲಾಗಿದ್ದು, ಸೂಕ್ತ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಕರ್ನಾಟಕ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದ ವತಿಯಿಂದ ನೂತನವಾಗಿ ನಿರ್ಮಿಸಿರುವ ಡಾ. ವಿ.ಎಸ್.ಆಚಾರ್ಯ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ:ಉಡುಪಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸರ್ಕಾರದ ಆದ್ಯತೆಯಾಗಿದೆ. 250 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿಮೆಡಿಕಲ್ ಕಾಲೇಜು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. 200 ಹಾಸಿಗೆ ಸಾಮರ್ಥ್ಯದ ಸುಸಜ್ಜಿತವಾದ ತಾಯಿ ಮಕ್ಕಳ ಆಸ್ಪತ್ರೆಯ ನಿರ್ಮಾಣ ಕೈಗೊಳ್ಳಲಾಗುತ್ತಿದೆ. ಕುಡಿಯುವ ನೀರು ಹಾಗೂ ಒಳಚರಂಡಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಮೀನುಗಾರಿಕೆ, ಪ್ರವಾಸೋದ್ಯಮಕ್ಕೆ ಸದಾ ಪ್ರೋತ್ಸಾಹ ನೀಡಲಿದ್ದು, ಕರಾವಳಿ ಭಾಗದ…
