ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕನ್ನಡ ಮನಸುಗಳು ಸಂಸ್ಥೆಯಿಂದ ಹಮ್ಮಿಕೊಂಡ ‘ಸರಕಾರಿ ಶಾಲೆ ಉಳಿಸಿ ಅಭಿಯಾನ’ದ ಭಾಗವಾಗಿ ಯುವ ತಂಡವೊಂದು ಶ್ರಮದಾನದ ಮೂಲಕ ಕರ್ಕುಂಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಣ್ಣ ಬಣ್ಣ ಮಾಡಿ ಶಾಲೆಯ ಮೆರಗು ಹೆಚ್ಚಿಸಿದ್ದಾರೆ. ಜೊತೆಗೆ ಶಾಲೆಗೆ ಆಧುನಿಕ ಕಲಿಕಾ ಪರಿಕರ, ವಾಟರ್ ಫಿಲ್ಟರ್, ಫ್ಯಾನ್ ಮೊದಲಾದ ಅಗತ್ಯ ವಸ್ತುಗಳು, ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ನು, ಮಾಸ್ಕ್ ದೇಣಿಗೆಯಾಗಿ ನೀಡಿ ಸೇವಾ ಸಾರ್ಥಕ್ಯ ಮೆರೆದಿದ್ದಾರೆ. ವಿವಿಧೆಡೆ ನೌಕರರಾಗಿರುವ ತಂಡದ ಸದಸ್ಯರು ವೀಕೇಂಡ್ ರಜೆಯನ್ನು ಸದುಪಯೋಗಪಡಿಸಿಕೊಂಡು ಕನ್ನಡ ಶಾಲೆ ಉಳಿಸಿ ಅಭಿಯಾನ ನಡೆಸುತ್ತಿದೆ. ಅದರಂತೆ ಅದರಂತೆ ಕರ್ಕುಂಜೆ ಶಾಲೆಯ ಹಳೆ ವಿದ್ಯಾರ್ಥಿ ಗಣೇಶ್ ಕೊಡ್ಲಾಡಿ ಅವರ ಮನವಿ ಮೇರೆಗೆ ಕುಂದಾಪುರ ತಾಲೂಕಿನ ಕರ್ಕುಂಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೂಡಿಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಬೆಂಗಳೂರಿನಿಂದ ಆಗಮಿಸಿದ 50ಕ್ಕೂ ಹೆಚ್ಚು ಮಂದಿಯ ತಂಡ ಶನಿವಾರ ಕರ್ಕುಂಜೆ ಶಾಲೆಯಲ್ಲಿ ಅಭಿಯಾನ ನಡೆಸಿತು. ಭಾನುವಾರದಂದು ಕೂಡಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.29: ಕರಾವಳಿ ಜಿಲ್ಲೆಗಳ ನಾನ್ ಸಿ.ಆರ್.ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವ ಆಚಾರ್ ಹಾಲಪ್ಪ ಬಸಪ್ಪ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಾನ್ ಸಿ.ಆರ್.ಝಢ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಮರಳು ತೆಗೆಯಲು ಅನುಮತಿ ನೀಡಿದರೆ ಜಿಲ್ಲೆಯ ಜನತೆಗೆ ಕಡಿಮೆ ದರದಲ್ಲಿ ಸಾಕಷ್ಟು ಪ್ರಮಾಣದ ಉತ್ತಮ ಗುಣಮಟ್ಟದ ಮರಳು ದೊರೆಯುವ ಜೊತೆಗೆ ಜಿಲ್ಲೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿಯನ್ನು ನಿಯಂತ್ರಿಸಲು ಸಾಧ್ಯವಾಗಲಿದೆ ಎಂದು ಉಡುಪಿ ಶಾಸಕ ರಘುಪತಿ ಭಟ್ ಸಚಿವರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಸಂದರ್ಭ ಬಡಗುತಿಟ್ಟಿನ ಮೇರು ಕಲಾವಿದ ರಾಘವೇಂದ್ರ ಮಯ್ಯ ಹಾಲಾಡಿ ಅವರಿಗೆ ಶ್ರೀ ಕುಂದೇಶ್ವರ ಸಮ್ಮಾನ್-2022 ಪ್ರಶಸ್ತಿ ಪ್ರದಾನ ಮಾಡಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಯ್ಯ ಅವರು, ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಕ್ಕೆ ಇದು ಸಿಕ್ಕ ಮಹಾನ್ ಗೌರವ. ಇದನ್ನು ನಾರ್ಣಪ್ಪ ಉಪ್ಪೂರರಿಗೆ ಅರ್ಪಿಸುತ್ತೇನೆ. ಬಡಗು ತೆಂಕು ಪರಿಭೇದ ಇಲ್ಲದೆ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು ಮಾದರಿ. ಮುಂದೆಯೂ ಕಲಾವಿದರಿಗೆ ಈ ರೀತಿಯ ಪ್ರೋತ್ಸಾಹ ಸಿಗುವ ಮೂಲಕ ಯಕ್ಷಗಾನಕ್ಕೆ ಮನ್ನಣೆ ದೊರಕಲಿ ಎಂದರು. ಶ್ರೀಕುಂದೇಶ್ವರ ದೇವರ ಕುರಿತಾದ ಪದ್ಯ ರಚಿಸಿ, ಹಾಡಿ ರಂಜಿಸಿದರು.ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ಅಭಿನಂದಿಸಿ ಮಾತನಾಡಿ, ಮಾಣಿಕ್ಯ ಮಣಿ ಬಿರುದಾಂಕಿತ, ಅಭಿನವ ಕಾಳಿಂಗ ನಾವಡ ಎಂದೇ ಪ್ರಸಿದ್ಧರಾದ ಮಯ್ಯ ಅವರು, ನಾಲ್ಕು ದಶಕಗಳ ಕಾಲ ಬಡಗು ತಿಟ್ಟಿನಲ್ಲಿ ಮೇರು ಭಾಗವತರಾಗಿ ಮೆರೆದವರು. ಅನೇಕ ಕಲಾವಿದರಿಗೆ ಪ್ರೇರಣೆಯಾಗಿರುವ ಮಹಾನ್ ಭಾಗವತರಿಗೆ ಸನ್ಮಾನಿಸುವ ಮೂಲಕ ಯಕ್ಷಗಾನಕ್ಕೆ ಗೌರವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದೂ ಧರ್ಮದಲ್ಲಿ ಅರಿಶಿಣ ಕುಂಕುಮಕ್ಕೆ ವಿಶೇಷ ಸ್ಥಾನವಿದೆ. ಮಹಿಳೆಯ ಮುತ್ತೈದೆತನ ಅರಿಶಿಣ ಕುಂಕುಮದೊಂದಿಗೆ ಪೂರ್ಣಗೊಳ್ಳುತ್ತದೆ. ಈ ಕಾರ್ಯಕ್ರಮ ಆಯೋಜನೆಯ ಮೂಲಕ ಧರ್ಮ ಜಾಗೃತಿ, ಧಾರ್ಮಿಕ ಸಾಮರಸ್ಯದ ಜೊತೆಗೆ ಪಕ್ಷ ಸಂಘಟನೆಗೆ ಮಹಿಳೆಯರನ್ನು ಸಜ್ಜುಗೊಳಿಸಿದಂತಾಗಿದೆ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಹೆಬ್ಬಾರ್ ಹೇಳಿದರು. ಅವರು ಇಲ್ಲಿನ ರೋಟರಿ ಭವನದಲ್ಲಿ ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಆಯೋಜಿಸಿದ್ದ ಅರಶಿಣ ಕುಂಕುಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಿಜೆಪಿ ಪಕ್ಷ ಧರ್ಮ ಹೆಸರಿನಲ್ಲಿ ಜನರನ್ನು ಒಡೆದು ಆಳುವ ಕೆಲಸ ಮಾಡುತ್ತಿದೆ. ಧರ್ಮವೆನ್ನುವುದು ಯಾವುದೇ ಪಕ್ಷದ ಆಸ್ತಿಯಲ್ಲ. ಧರ್ಮ ಪಾಲನೆ ಎನ್ನುವುದು ವ್ಯಕ್ತಿಯ ವೈಯಕ್ತಿಯ ಸ್ವಾತಂತ್ರ್ಯ. ರಾಜಕೀಯ ಕಾರಣಕ್ಕೆ ಧರ್ಮವನ್ನು ಮಧ್ಯೆ ತರುವುದು ಸರಿಯಲ್ಲ ಎಂದರು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಬೈಂದೂರು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನಕುಮಾರ್ ಉಪ್ಪುಂದ, ಕೆಪಿಸಿಸಿ ಸದಸ್ಯ ರಘರಾಮ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳಕ್ಕೆ ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ, ವಿಕಲಚೇತನರ ಹಾಗೂ ನಾಗರಿಕ ಸಬಲೀಕರಣ ಸಚಿವ ಆಚಾರ್ ಹಾಲಪ್ಪ ಬಸಪ್ಪ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಜಯಾನಂದ ಹೋಬಳಿದಾರ್, ರತ್ನ ರಮೇಶ್ ಕುಂದರ್, ಸಹಾಯಕ ಕಾರ್ಯನಿರ್ವಹಣಾಧಿಕಾರಿಯವರಾದ ಗೋವಿಂದ ನಾಯ್ಕ್ ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಜ.27: ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ದತ್ತಾಂಶವನ್ನು ಸಿದ್ಧಪಡಿಸಲು ಕಾರ್ಮಿಕ ಹಾಗೂ ಉದ್ಯೋಗ ಮಂತ್ರಾಲಯವು ಇ-ಶ್ರಮ್ ಪೋರ್ಟಲ್ ಅಭಿವೃದ್ಧಿಪಡಿಸಿದ್ದು, ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ವಿಸ್ತರಿಸಲು ಅನುಕೂಲವಾಗುವಂತೆ ಕಾರ್ಮಿಕರ ಹೆಸರು, ವೃತ್ತಿ, ವಿದ್ಯಾರ್ಹತೆ, ಕೌಶಲ್ಯದ ವಿಧ, ಕುಟುಂಬದ ವಿವರ, ಬ್ಯಾಂಕ್ ಖಾತೆ ಇತ್ಯಾದಿ ವಿವರಗಳನ್ನು ಇದು ಒಳಗೊಂಡಿರುತ್ತದೆ. ಕಾರ್ಮಿಕ ವರ್ಗಗಳಲ್ಲಿ ಅತ್ಯಂತ ದುರ್ಬಲ ವರ್ಗದವರಾದ ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಯೋಜನೆಯಡಿ ನೋಂದಾಯಿಸಿ, ಕಾರ್ಮಿಕರ ರಾಷ್ಟ್ರೀಯ ಸಮಗ್ರ ದತ್ತಾಂಶವನ್ನು ಸಿದ್ಧಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರ ಗುರುತಿಸಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಕೃಷಿ ಕಾರ್ಮಿಕರು, ಮೀನುಗಾರರು, ಆಶಾ ಕಾರ್ಯಕರ್ತೆಯರು, ಮನೆಗೆಲಸ ಕಾರ್ಮಿಕರು, ಚಾಲಕರು, ಟೈಲರ್ಗಳು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಸುಮಾರು 379 ವರ್ಗಗಳ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಣಿಯಾಗಬಹುದಾಗಿದೆ. ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಣಿ ಮಾಡುವ ವಿಧಾನ: 16 ರಿಂದ 59 ವರ್ಷದೊಳಗಿನ, ಆದಾಯ ತೆರಿಗೆ ಪಾವತಿಸದೇ ಇರುವ, ಭವಿಷ್ಯನಿಧಿ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾಲಯ ಹಾಗೂ ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ಆಶ್ರಯದಲ್ಲಿ ಕೊಡ್ಲಾಡಿ ಮಾರ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಅಮೃತ ಸಮುದಾಯ ಅಭಿವೃದ್ಧಿ ಯೋಜನೆ ಅಂಗವಾಗಿ ಏರ್ಪಡಿಸಿದ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರ ಎಮ್. ಆನಂದ ಶೆಟ್ಟಿ ಉದ್ಘಾಟಿಸಿದರು. ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಪ್ರಾಂಶುಪಾಲ ಡಾ. ಎನ್. ಪಿ. ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಭಂಡಾರ್ಕಾರ್ಸ್ ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ಶುಭಕರ ಆಚಾರಿ, ಆಜ್ರಿ ಗ್ರಾಪಂ ಅಧ್ಯಕ್ಷ ಅಶೋಕ್ ಕುಲಾಲ್, ಗುರಿಕಾರ ಅಣ್ಣಯ್ಯ ನಾಯ್ಕ್ ಮರ್ಜಿ, ಮುಖ್ಯೋಪಾಧ್ಯಾಯನಿ ಗೌರಿ ಬಾಯ್, ಗ್ರಾಪಂ ಸದಸ್ಯ ಪ್ರವೀಣ ಕುಮಾರ್ ಶೆಟ್ಟಿ, ರತ್ನಾಕರ ನಾಯ್ಕ್, ಗಾಯತ್ರಿ, ಗ್ರಾಪಂ ಮಾಜಿ ಅಧ್ಯಕ್ಷ ಕೊಡ್ಲಾಡಿ ಶುಭಾಶ್ಚಂದ್ರ ಶೆಟ್ಟಿ, ರಾಮ ಮೊಗವೀರ ಹೊಲದಮನೆ, ಚಂದ್ರಶೇಖರ ಶೆಟ್ಟಿ, ಶಶಿಕಾಂತ್ ಹತ್ವಾರ್, ಎಸ್ಡಿಎಂಸಿ ಅಧ್ಯಕ್ಷ ಗಜೇಂದ್ರ ನಾಯ್ಕ್ ಹಳೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರಿನ ಒಳ ಚರಂಡಿ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದಲೇ ಇದರ ನಿರ್ವಹಣೆ ಮಾಡಲಾಗುತ್ತಿದೆ. ಕೊಲ್ಲೂರು ಪರಿಸರದ ಶೇ.90 ರಷ್ಟು ವಾಣಿಜ್ಯ ಹಾಗೂ ಗೃಹ ಬಳಕೆಗಾಗಿ ನೀರಿನ ಸಂಪರ್ಕ ನೀಡಲಾಗಿದ್ದು, ಪ್ರಸ್ತುತ ಯಾವುದೇ ಕಲುಷಿತ ನೀರು ಸೌಪರ್ಣಿಕ ನದಿಯನ್ನು ಸೇರುತ್ತಿಲ್ಲ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಹೇಳಿದ್ದಾರೆ. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಬೇಸಿಗೆ ಕಾಲ ಹಾಗೂ ವರ್ಷದ ಇತರ ದಿನಗಳಲ್ಲಿ ಕಾಣಿಸಿಕೊಳ್ಳುವ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕಾಗಿ ರೂಪಿಸಿರುವ ಯೋಜನೆಯೂ ಪೂರ್ಣಗೊಂಡಿದ್ದು, ಯೋಜನೆಯ ಶೇ.90 ರಷ್ಟು ಫಲಾನುಭವಿಗಳು ಈಗಾಗಲೇ ಇದರ ಸಂಪರ್ಕ ಪಡೆದುಕೊಂಡಿದ್ದಾರೆ. ಅಂದಾಜು 2 ಕೋಟಿ ವೆಚ್ಚದಲ್ಲಿ ಹೈದರ್ಬಾದ್ ಹೋಟೇಲ್ ಉದ್ಯಮಿ ಕೃಷ್ಣಮೂರ್ತಿ ಮಂಜರು ವೀರಭಧ್ರ ಗುಡಿಯ ನಿರ್ಮಾಣ ಕಾರ್ಯ ಮಾಡುತ್ತಿದ್ದು, ಸಂಪೂರ್ಣ ವಾಸ್ತುಶಿಲ್ಪದೊಂದಿಗೆ ನಿರ್ಮಿಸುವ ಈ ಗುಡಿಯ ಕಾರ್ಯಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತ ವಿಶ್ವದಲ್ಲೇ ಅತ್ಯಂತ ದೊಡ್ಡ ಸಂವಿಧಾನ ಎನ್ನುವ ವೈಶಿಷ್ಟ್ಯ ಹೊಂದಿದೆ. ಸಂವಿಧಾನ ಅನುಷ್ಠಾನ ಹಾಗೂ ಸಾಗಿಬಂದ ಹಾದಿ ಸ್ಮರಿಸುವ, ನಾಳೆಗಳ ಯೋಚಿಸುವ ಸಂದರ್ಭದ ಪುಣ್ಯದಿನ ಗಣರಾಜ್ಯೋತ್ಸವ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ನವ ನಿರ್ಮಾಣ ಮಾಡುವ ನಮ್ಮ ಹಿರಿಯರ ಆಶಯಕ್ಕೆ ಚಾಲನೆ ನೀಡಿದ ದಿನವೂ ಗಣರಾಜ್ಯೋತ್ಸವ ದಿನವಾಗಿದೆ ಎಂದು ಕುಂದಾಪುರ ಉಪ ವಿಭಾಗಾಧಿಕಾರಿ ಕೆ. ರಾಜು ಅಭಿಪ್ರಾಯಪಟ್ಟಿದ್ದಾರೆ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಕಚೇರಿ, ತಾಲೂಕು ಪಂಚಾಯಿತಿ, ಪುರಸಭೆ ಆಶ್ರಯದಲ್ಲಿ ಇಲ್ಲಿನ ಗಾಂಧಿ ಮೈದಾನದಲ್ಲಿ ಬುಧವಾರ ನಡೆದ ಗಣರಾಜ್ಯೋತ್ಸವ ದ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು. ಸಂವಿಧಾನವು, ಜನತೆ ಹಕ್ಕುಗಳ ಮೂಲವಾಗಿ ಸಮರ್ಪಿತವಾಗಿದ್ದು, ನಮ್ಮ ಸಾಮಾಜಿಕ ಹಾಗೂ ಆರ್ಥಿಕ ಬದುಕಿನಲ್ಲಿ ಸಮಾನತೆ ಇದ್ದರೆ ಮಾತ್ರ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎನ್ನುವ ತತ್ವದ ಮೇಲೆ ಆಧಾರಿತವಾಗಿದೆ ಎಂದರು. ಕರೋನಾ ನಡುವೆಯೇ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವಲಯಗಳಿಗೆ ಹೆಚ್ಚಿನ ಒತ್ತು ನೀಡಬೇಕಾಗಿದ್ದು, ಕರಾವಳಿ ಭೌಗೋಳಿಕ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಪದಾಧಿಕಾರಿಗಳ ಪದಪ್ರದಾನ ಸಮಾರಂಭ ಬುಧವಾರ ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಜರುಗಿತು. ಮಾಜಿ ಶಾಸಕ ಗೋಪಾಲ ಪೂಜಾರಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹಿಂದುಳಿದ ವರ್ಗಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅನನ್ಯವಾದುದು, ಹಿಂದುಳಿದ ವರ್ಗಗಳ ಮುಖ್ಯಮಂತ್ರಿಗಳನ್ನು ಕರ್ನಾಟಕಕ್ಕೆ ನೀಡಿದ ಪಕ್ಷ ನಮ್ಮದು, ಹಿಂದುಳಿದ ವರ್ಗಗಳು ನಮ್ಮ ಪಕ್ಷದ ಆಸ್ತಿ ಎಂದರು. ಸಭೆಯ ಅಧ್ಯಕ್ಷತೆಯನ್ನು ಹಿಂದುಳಿದ ವರ್ಗಗಳ ಅಧ್ಯಕ್ಷ ಎಸ್. ಮಣಿಕಂಠ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮದನ್ ಕುಮಾರ್, ನಗರ ಕಾಂಗ್ರೆಸ್ ಅಧ್ಯಕ್ಷ ನಾಗರಾಜ ಗಾಣಿಗ, ಬ್ಲಾಕ್ ಕಾರ್ಯದರ್ಶಿ ಜಗದೀಶ್ ದೇವಾಡಿಗ, ಅರವಿಂದ ಪೂಜಾರಿ, ಹಿಂದುಳಿದ ವರ್ಗಗಳ ರಾಜ್ಯ ಘಟಕದ ಸುಬ್ರಹ್ಮಣ್ಯ ಪೂಜಾರಿ, ಜಿಲ್ಲಾ ಘಟಕದ ರಾಮಚಂದ್ರ ಖಾರ್ವಿ, ಮೋಹನ್ ಪೂಜಾರಿ , ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ ಹಾಗೂ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಗಣೇಶ ಪೂಜಾರಿ ಅವರು ಸ್ವಾಗತಿಸಿ, ವಂದಿಸಿದರು.
