ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ಚಿತ್ರದುರ್ಗದ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ತ್ರಾಸಿ ಗ್ರಾಮ ಪಂಚಾಯತ್ ಸಿಬ್ಬಂದಿ ಸಂದೀಪ್ ಪೂಜಾರಿ ಅವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಹಳೆಯಂಗಡಿಯ ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ 4ಕಿಮೀ ಓಟದಲ್ಲಿ ದಿಶಾ ಆರನೇ ಸ್ಥಾನ ಪಡೆದರು. ಆ ಮೂಲಕ 14 ಹಾಗೂ 17 ವರ್ಷ ಬಾಲಕ ಬಾಲಕಿಯರ ಎರಡು ವಿಭಾಗದಲ್ಲಿ ಒಟ್ಟು 78 ಅಂಕಗಳನ್ನು ಪಡೆದು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಒರ್ವ ವ್ಯಕ್ತಿ ಸಾಮಾಜಿಕ ಚಟುವಟಿಕೆಯ ಮೂಲಕ ಈ ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡಿ ಅತಿ ಚಿಕ್ಕ ಸಮಯದಲ್ಲಿ ಜನಸಾಮಾನ್ಯರ ಮನಸ್ಸನ್ನು ಗೆದ್ದಿದ್ದಾರೆ ಎಂದು ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ಹೆಚ್ ಕುಂದರ್ ಹೇಳಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಡಲ ನೇತೃತ್ವದಲ್ಲಿ ಮಣೂರು ಫ್ರೆಂಡ್ಸ್, ಹಂದಟ್ಟು ಮಹಿಳಾ ಬಳಗ ಕೋಟ, ಜೆಸಿಐ ಸಿನಿಯರ್ ಲಿಜನ್ ಕೋಟ, ಇಂಡಿಕಾ ಕಲಾ ಬಳಗ ಪಡುಕರೆ ಇವರ ಸಹಯೋಗದೊಂದಿಗೆ 268ನೇ ಭಾನುವಾರದ ಪರಿಸರಸ್ನೇಹಿ ಹಸಿರುಜೀವ ಕಾರ್ಯಕ್ರಮವನ್ನು ಇತ್ತೀಚಿಗೆ ನಿಧನರಾದ ಸಂಘದ ಸದಸ್ಯ ಸಂತೋಷ್ ಮೇಷ್ಟ್ರಿಗೆ ಸಮರ್ಪಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಂಚವರ್ಣ ಸಂಘಟನೆ ನಿರಂತರ ನಡೆಸುವ ಪರಿಸರ ಸ್ನೇಹಿ ಕಾರ್ಯಕ್ರಮವನ್ನು ಒರ್ವ ಸದಸ್ಯನಿಗೆ ಸಮರ್ಪಿಸಿದ ರೀತಿ ನಿಜಕ್ಕೂ ಶ್ಲಾಘನೀಯ ಎಂದರು. ಈ ಸಂದರ್ಭದಲ್ಲಿ ಕೋಟ ರಾಷ್ಟ್ರೀಯ ಹೆದ್ದಾರಿ ಹಲವು ಭಾಗಗಳಲ್ಲಿ ಗಿಡ ನೆಡಲಾಯಿತ್ತಲ್ಲದೆ ನೆಟ್ಟ ಗಿಡಗಳ…
ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ. ಬಿ.ಆರ್ ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 2 ರಂದು ನಡೆಯುವ ಪರಿವರ್ತನಾ ದಿನಕ್ಕೆ ಭೇಟಿ ನೀಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಇಲಾಖೆಯ ವೆಬ್ಸೈಟ್ https://swd.karnataka.gov.in/ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 9 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಯೊಂದಿಗೆ ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಡಾ. ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗುವುದು. ಪ್ರಾಥಮಿಕ ಶಾಲಾ ಮಕ್ಕಳಿಗೆ ಕಾರಂತರ ಬಾಲಪ್ರಪಂಚದ ಚಿತ್ರಗಳನ್ನು ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಬಾಲಪ್ರಪಂಚದ ಚಿತ್ರಗಳ ರಂಗವಲ್ಲಿಯನ್ನು ಸ್ಥಳದಲ್ಲೇ ಬಿಡಿಸುವ ಸ್ಪರ್ಧೆ, ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನನ್ನ ದೃಷ್ಟಿಯಿಂದ ಕಾರಂತರ ಬದುಕು ಮತ್ತು ಬರಹ ಎಂಬ ವಿಷಯದಲ್ಲಿ ಭಾಷಣ ಸ್ಪರ್ಧೆ, ಕಾರಂತರ ಯಾವುದಾದರೂ ಒಂದು ಕೃತಿಯ ಬಗ್ಗೆ ಪದವಿ ಕಾಲೇಜು, ಸ್ನಾತಕೋತ್ತರ ಪದವಿ ಹಾಗೂ ಸಾರ್ವಜನಿಕರಿಗೆ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಪ್ರಬಂಧವು ಫುಲ್ ಸ್ಕೇಪ್ ಹಾಳೆಯ ಎರಡು ಸಾವಿರ ಶಬ್ದಗಳನ್ನು ಮೀರಬಾರದು. ಪ್ರತಿ ವಿಭಾಗದಲ್ಲೂ ಪ್ರಥಮ ದ್ವೀತಿಯ ಹಾಗೂ ತೃತೀಯ ಬಹುಮಾನಗಳನ್ನು ಪ್ರಶಸ್ತಿ ಪತ್ರದೊಂದಿಗೆ ಪುಸ್ತಕ ರೂಪದಲ್ಲಿ ನೀಡಲಾಗುವುದು. ಪ್ರಬಂಧಗಳನ್ನು ಸದಸ್ಯ ಕಾರ್ಯದರ್ಶಿ, ಡಾ. ಶಿವರಾಮ ಕಾರಂತ ಟ್ರಸ್ಟ್, ಸಹಾಯಕ ನಿರ್ದೇಶಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐಟಿ ಮತ್ತು ಕೋಡಿಂಗ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಮತ್ತು ಮಾದರಿ ಪ್ರದರ್ಶನ ಆಚರಿಸಲಾಯಿತು. ಬಾಹ್ಯಾಕಾಶ ವಿಜ್ಞಾನಕ್ಕೆ ಸಂಬಂದಿಸಿದ ನವೀನ ಮಾದರಿಗಳ ಪ್ರದರ್ಶನ ಜರುಗಿತು. ಈ ಮೂಲಕ ವಿದ್ಯಾರ್ಥಿಗಳು ಬಾಹ್ಯಾಕಾಶ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯವನ್ನು ಅನ್ವೇಷಿಸಲು ಪ್ರದರ್ಶನವು ಸೃಜನಶೀಲ ವೇದಿಕೆಯಾಗಿ ಕಾರ್ಯ ನಿರ್ವಹಿಸಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮೂಡ್ಲಕಟ್ಟೆ ಎಂಐಟಿಯ ಡೇಟಾ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಕಾರ್ತಿಕೇಯನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು ಮತ್ತು ಕಾರ್ಯಕ್ರಮದ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದರು. ಬಿಸಿಎ ವಿಭಾಗದ ಮುಖ್ಯಸ್ಥರು ಮತ್ತು ಐಟಿ ಮತ್ತು ಕೋಡಿಂಗ್ ಕ್ಲಬ್ ನ ಸಂಯೋಜಕರಾದ ಸ್ವರ್ಣ ರಾಣಿ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್, ವಿದ್ಯಾರ್ಥಿ ಸಂಯೋಜಕರಾದ ತೃತೀಯ ಬಿಸಿಎ ವಿದ್ಯಾರ್ಥಿಗಳಾದ ಅಶ್ವಿನ್ ಎ .ಜೆ ಮತ್ತು ತೀರ್ಥ ಕುಲಾಲ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವ್ಯಕ್ತಿತ್ವ ವಿಕಸನ ಪುಸ್ತಕಗಳಾದ ‘ಸೋಲು ಅಂತಿಮವಲ್ಲ’ಪದಗಳೇ ಬಂಗಾರ’ ರೇಡಿಯೋ ಮಣಿಪಾಲದಲ್ಲಿ ನೂರಕ್ಕೂ ಮಿಕ್ಕಿದ ವ್ಯಕ್ತಿತ್ವ ಸರಣಿ ಬಾನುಲಿ ಕಾರ್ಯಕ್ರಮ, ಜಿಲ್ಲಾಧ್ಯಂತ ತರಬೇತಿ ಕಾರ್ಯಕ್ರಮಗಳು, ಸ್ಥಳೀಯ ಮಾಧ್ಯಮದ ಮೂಲಕ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮಗಳು, ಪರೀಕ್ಷಾ ಹಬ್ಬ ತರಬೇತಿ,ಕಾರ್ಯಗಾರ ತರಬೇತಿ ಕಮ್ಮಟ, ಶಿಕ್ಷಕರಿಗೆ ಮಾರ್ಗದರ್ಶನ ಶಿಬಿರ, ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ ಮೊದಲಾದ ಅಂಶಗಳನ್ನು ಗಮನಿಸಿ ಕೋಟ ವಿವೇಕ ಬಾಲಕಿಯರ ಶಿಕ್ಷಕರಾದ ಹಾಗೂ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನರೇಂದ್ರ ಕುಮಾರ್ ಕೋಟ ಅವರಿಗೆ ತರಬೇತಿ ಸಾಧನೆಗಾಗಿ ಪ್ರೇರಣಾ ಪುರಸ್ಕಾರ ನೀಡಲಾಗಿದೆ. ಇತ್ತೀಚೆಗೆ ಕಾರ್ಕಳದಲ್ಲಿ ನಡೆದ ಜೆಸಿ ತರಬೇತಿದಾರರ ಸಮ್ಮೇಳನದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಇತ್ತಿಚಿಗೆ ” ಹಿರಿಯ ನಾಗರಿಕರ” ದಿನವನ್ನು ಹಿರಿಯರ ಸೇವೆ ಮತ್ತು ಅನುಭವಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಆಚರಿಸಲಾಯಿತು. ಸಂಸ್ಥೆಯಲ್ಲಿ ಅಧ್ಯಾಪನದಲ್ಲಿ ನಿರತರಾಗಿರುವ ಹಿರಿಯ ಶಿಕ್ಷಕರಾದ ಸಂತೋಷ್ ಕುಮಾರ್ ಶೆಟ್ಟಿ, ಉದಯ್ ಕುಮಾರ್ ಹೆಗ್ಡೆ, ಬೇಳೂರು ಮತ್ತು ಹಿರಿಯ ಉಪನ್ಯಾಸಕರಾದ. ಜಿ. ಕೆ. ರಮೇಶ್ ರಾವ್ ಇವರಿಗೆ ಹಾಗೂ ವಾಹನ ಚಾಲಕರಾಗಿ ದುಡಿಯುತ್ತಿರುವ ಶೇಖರ್ ಪೂಜಾರಿ, ರಘುರಾಮ್ ಶೆಟ್ಟಿ, ಶಹಜಾನ್, ಪ್ರಭಾಕರ್ ಶೆಟ್ಟಿ ಮತ್ತು ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಂಜ ಅವರಿಗೆ ಗೌರವ ಸಲ್ಲಿಸಲಾಯಿತು.. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಡಳಿತ ನಿರ್ದೇಶಕರಾದ ರೆನಿಟಾ ಲೋಬೊ ಮಾತನಾಡಿ “ಹಿರಿಯರ ಅನುಭವ,ಶ್ರಮ ಹಾಗೂ ಅವರ ನಿಷ್ಠೆ ನಮಗೆಲ್ಲಾ ಪ್ರೇರಣೆ ಎನ್ನುತ್ತಾ ಅವರು ಸಂಸ್ಥೆಯ ಬೆಳವಣಿಗೆಗೆ ನೀಡಿದ ಸಹಕಾರವನ್ನು ನೆನಪಿಸಿಕೊಂಡರು. ಆಡಳಿತ ನಿರ್ದೇಶಕರಾದ ಶಮಿತಾ ರಾವ್ ಇವರು ಮಾತನಾಡಿ ಹಿರಿಯರು ಕಾರ್ಯ ವೈಖರಿಯನ್ನು ಸ್ಮರಿಸುತ್ತಾ ಕಾರ್ಯಕ್ರಮದಲ್ಲಿ ಹಿರಿಯರಿಗೆ ನೀಡಲಾದ ಸ್ಮರಣಿಕೆಯಲ್ಲಿ ಬರೆದ ಸಂದೇಶವನ್ನು ಭಾವನಾತ್ಮಕವಾಗಿ ಓದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ ಕಾರ್ತಟ್ಟು ವಾರ್ಡ್ ಹಾಗೂ ಗುಂಡ್ಮಿ ಗ್ರಾಮದ ಚೆಲ್ಲಮಕ್ಕಿ ವಾರ್ಡ್ನಲ್ಲಿ ಯುವತಿಯರಿಗೆ ಮತ್ತು ಮಹಿಳೆಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ಗಳನ್ನು ವಿತರಿಸಲಾಯಿತು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಮತ್ತು ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಂಯುಕ್ತ ಆಶ್ರಯದಲ್ಲಿ ನಡೆದ ನಾರೀ ನ್ಯಾಯ್ ಕಾರ್ಯಕ್ರಮದ ಮಹತ್ವದ ಯೋಜನೆಯಾದ ಮಹಿಳಾ ಆರೋಗ್ಯ ಸಂಕಲ್ಪ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಖಾ.ಪಿ.ಸುವರ್ಣ ವಹಿಸಿದ್ದರು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅವರು ಯುವತಿಯರಿಗೆ ಪ್ಯಾಡ್ಗಳನ್ನು ವಿತರಿಸಿ ಮಾತನಾಡಿ, ತಮ್ಮ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಸದಾ ಚಿಂತಿಸುವ, ಕಾಳಜಿ ವಹಿಸುವ ನಮ್ಮ ಮಹಿಳೆಯರು ತಮ್ಮ ಆರೋಗ್ಯದ ಗಮನ ಹರಿಸುವುದನ್ನು ಮರೆತು ಬಿಡುತ್ತಾರೆ. ಹಾಗಾಗಿ ಅವರಲ್ಲಿ ಗರ್ಭಕೋಶ ಹಾಗೂ ಸ್ತನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಕನಕ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ತತ್ವಪದ ಸಾಹಿತ್ಯ ಕುರಿತ ಸಂಶೋಧನೆ ಅಥವಾ ವಿಮರ್ಶಾ ಗ್ರಂಥವೊಂದಕ್ಕೆ ಬಹುಮಾನ ನೀಡುವ ಯೋಜನೆ ರೂಪಿಸಿದ್ದು, 2024 ನೇ ಸಾಲಿನಲ್ಲಿ ಪ್ರಕಟವಾದ ಪ್ರಥಮ ಮುದ್ರಣದ ಗ್ರಂಥವನ್ನು ಬಹುಮಾನಕ್ಕೆ ಪರಿಗಣಿಸಲಾಗುತ್ತಿದ್ದು, ವೆಬ್ಸೈಟ್ https://kanakadasaresearchcenter.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಬಹುಮಾನಕ್ಕೆ ಗ್ರಂಥ ಲೇಖಕರು, ಪ್ರಕಾಶಕರು ಸೆಪ್ಟಂಬರ್ 10 ರ ಒಳಗಾಗಿ ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅರ್ಜಿಯನ್ನು ಅಂಚೆ/ಕೊರಿಯರ್ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 6364529319 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
