ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಫೆ.4: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿದೆ ಆಧಾರದಲ್ಲಿ ನೇಮಕಾತಿ ಮಾಡಲು ನೇರ ಸಂದರ್ಶನ ನಡೆಯಲಿದೆ. ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು- 3 ಹುದ್ದೆ, ಪಂಚಕರ್ಮ ತಜ್ಞ ವೈದ್ಯರು, ಆರ್.ಎಮ್.ಎನ್.ಸಿ.ಹೆಚ್ ಸಮಾಲೋಚಕರು, ನೇತ್ರ ಸಹಾಯಕರು, ಡೆಂಟಲ್ ಹೈಜಿನಿಸ್ಟ್, ಡೆಂಟಲ್ ಟೆಕ್ನೀಷಿಯನ್ ಮತ್ತು ಇನ್ಸ್ಟ್ರಕ್ಟರ್- ಯಂಗ್ ಹಿಯರಿಂಗ್ ಇಂಪಾರ್ಡ್ ಚಿಲ್ಡçನ್ ರ ತಲಾ 1 ಹುದ್ದೆ ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ 2 ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಫೆಬ್ರವರಿ 5 ರಂದು ಬೆಳಗ್ಗೆ 10.30 ರಿಂದ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಮೂಲ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯೋಜನಾ ನಿರ್ವಹಣಾ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕಳೆದ ಕೆಲವು ವರ್ಷಗಳ ಹಿಂದೆ ಸರಕಾರಿ ಸೌಲಭ್ಯ, ಪ್ರಯೋಜನಗಳನ್ನು ಪಡೆದುಕೊಳ್ಳಲು ಜನಸಾಮಾನ್ಯರು ಕಛೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇದ್ದು, ಇಂದು ಸರಕಾರ ಸೇವಾ ಕೇಂದ್ರಗಳನ್ನು ಸ್ಥಾಪಿಸಿ ಜನಸಾಮಾನ್ಯರಿಗೆ ಸರಕಾರಿ ಸೇವೆ ಒದಗಿಸುವ ಪ್ರಯತ್ನ ಮಾಡುತ್ತಿದೆ. ಜನರು ಸರಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆದುಕೊಂಡು ಡಿಜಿಟಲ್ ಸೇವಾ ಕೇಂದ್ರಗಳ ಮೂಲಕ ಇದರ ಪ್ರಯೋಜನ ಪಡೆದುಕೊಳ್ಳಲು ಮುಂದಾಗಬೇಕು. ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿತ್ವದ ಫಲವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಡಿಜಿಟಲ್ ಸೇವಾ ಕೇಂದ್ರಗಳು ಕಾರ್ಯಾಚರಿಸುತ್ತಿದೆ ಎಂದು ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ ಹೇಳಿದರು. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆ ಸಮೀಪದ ಕಟ್ಟಡದಲ್ಲಿ ಗುರುವಾರ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಡಿಜಿಟಲ್ ಸೇವಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಅತಿಥಿಯಾಗಿ ಮಾತನಾಡಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಡಿಜಿಟಲ್ ಸೇವಾ ಕೇಂದ್ರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಬಂದರು ಒಕ್ಕೂಟದ ಅಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಡಿಜಿಟಲ್ ಸೇವಾ ಕಾಮನ್ ಸರ್ವಿಸ್ ಸೆಂಟರ್ ಇದರ ಉದ್ಘಾಟನಾ ಕಾರ್ಯಕ್ರಮ ಕೊಲ್ಲೂರು ಯೋಜನಾ ಕೇಂದ್ರದಲ್ಲಿ ನೆರವೇರಿತು. ಕೊಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಶಿವರಾಮ್ ಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಹಾಗೂ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷರು ಮಂಜುನಾಥ ಪೂಜಾರಿ, ವಲಯದ ಮೇಲ್ವಿಚಾರಕರು ಮಂಜುನಾಥ, ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ವಲಯದ ಸೇವಾಪ್ರತಿನಿಧಿಗಳು, ಸುವಿಧಾ ಸಹಾಯಕರು ಹಾಗೂ, ಒಕ್ಕೂಟದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸೇವಾಪ್ರತಿನಿಧಿ ರಾಘವೇಂದ್ರ ಅವರು ಅತಿಥಿಗಳಿಗೆ ಸ್ವಾಗತಿಸಿದರು ಹಾಗೂ ಸೇವಾಪ್ರತಿನಿಧಿ ಗಣೇಶ್ ಕೊಠಾರಿ ಇವರು ಧನ್ಯವಾದ ಸಮಾರ್ಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗದ ಜನರಿಗೆ ಕಣ್ಣಿನ ಆರೋಗ್ಯದ ಬಗ್ಗೆ ವಿಶೇಷ ಕಾಳಜಿವಹಿಸಿ ಇಂತಹ ಉಚಿತ ಶಿಬಿರಗಳನ್ನು ಆಯೋಜಿಸುತ್ತಿರುವು ಅತ್ಯಂತ ಶ್ಲಾಘನೀಯ ಎಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದರು. ಬೈಂದೂರು ರೋಟರಿ ಕ್ಲಬ್ ನೇತೃತ್ವದಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿವಾರಣಾ ವಿಭಾಗ, ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಇನ್ನರ್ವೀಲ್ ಕ್ಲಬ್ ಬೈಂದೂರು, ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮುದ್ದುಮನೆ ಶಿರೂರು ಇವರ ಸಹಯೋಗದಲ್ಲಿ ಮಂಗಳವಾರ ಮೇಕೋಡು ಶ್ರೀ ಮೇಕೋಡಮ್ಮ ಸಭಾಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಮತ್ತು ಮಧುಮೇಹ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ರೋಟರಿ ಕ್ಲಬ್ ಅಧ್ಯಕ್ಷ ಡಾ. ಪ್ರವೀಣ್ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ನೇತ್ರತಜ್ಞ್ಞೆ ಡಾ. ರಶ್ಮಿ ಶೆಟ್ಟಿ ಕಣ್ಣಿನ ಆರೋಗ್ಯದ ಮಹತ್ವವನ್ನು ತಿಳಿಸಿದರು. ಟ್ರಸ್ಟ್ನ ಪ್ರತಿನಿಧಿ ಶಂಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗಾಂಧಿಯ ವಿಚಾರಧಾರೆಗಳನ್ನು ಸರಿಯಾಗಿ ತಿಳಿದುಕೊಳ್ಳದೆ ಹಲವು ಬಗೆಯ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಎಳೆಯ ಮಕ್ಕಳು ಕೂಡ ತಪ್ಪು ತಪ್ಪಾಗಿ ಗಾಂಧಿಯನ್ನು ತಿಳಿದುಕೊಳ್ಳುತ್ತಿದ್ದಾರೆ. ಇದು ಅಪಾಯಕಾರಿ ಎಂದು ಶಿಕ್ಷಕ, ಸಂಘಟಕ ನರೇಂದ್ರ ಕುಮಾರ್ ಕೋಟ ಹೇಳಿದರು. ಅವರು ಗಾಂಧಿ ವಿಚಾರ ವೇದಿಕೆ ಬ್ರಹ್ಮಾವರ ಘಟಕ, ಕೋಟ ಕ.ಸಾ.ಪ ಕಚೇರಿಯಲಲ್ಲಿ ಏರ್ಪಡಿಸಿದ ಗಾಂಧಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಗಾಂಧಿಗೆ ನುಡಿನಮನ ಸಲ್ಲಿಸಿ ಮಾತನಾಡಿ ಇದಕ್ಕೆ ಸಾಮಾಜಿಕ ಜಾಲತಾಣಗಳ ಪ್ರಭಾವ ಬಹಳಷ್ಟಿದೆ. ಹಿರಿಯರು ಗಾಂಧಿಯ ವಿಚಾರಧಾರೆಗಳನ್ನು ಅರ್ಥಮಾಡಿಕೊಂಡವರು ಗಾಂಧಿಯ ವಿಚಾರಧಾರೆಗಳನ್ನು ಎಳೆಯರಿಗೆ ತಲುಪಿಸಬೇಕಾಗಿದೆ ಸ್ವಾತಂತ್ರ್ಯ ಪೂರ್ವದ ಭಾರತದ ಸಾಮಾಜಿಕ ಸ್ತರವಿನ್ಯಾಸದ ಆಧಾರದಮೇಲೆ ಗಾಂಧಿಯನ್ನು ಯುವ ಜನತೆಗೆ ಅರ್ಥೈಸಬೇಕಾಗಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಗಾಂಧಿ ವಿಚಾರವೇದಿಕೆ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷರಾದ ಪ್ರೊಫೆಸರ್ ಸಿ ಉಪೇಂದ್ರ ಸೋಮಯಾಜಿಯವರು ಮಾತನಾಡಿ ಪರಿಪೂರ್ಣತೆಗೆ ಬಹಳ? ಹತ್ತಿರವಾಗಿದ್ದ ಗಾಂಧಿ ವಿಚಾರಧಾರೆಗಳು ಸರ್ವಕಾಲಕ್ಕೂ ಸಲ್ಲುವಂತಹದು. ಐನ್ಸ್ಟೈನ್ ಹೇಳಿದಂತೆ ಇಂತಹ ಒಬ್ಬ ವ್ಯಕ್ತಿ ಭೂಮಿಯ ಮೇಲೆ ಜೀವಿಸಿದ್ದ ಅನ್ನೋದು ನಂಬುವುದು ಕಷ್ಟ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರಿಗೆ ಕಾಲೇಜು ಆವರಣದೊಳಗೆ ಪ್ರವೇಶ ನಿರಾಕರಿಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಗೇಟಿನ ಬಳಿಯೇ ತಡೆದು, ಸರ್ಕಾರದ ಆದೇಶದಂತೆ ಕಾಲೇಜು ವಸ್ತ್ರಸಂಹೀತೆಯನ್ನು ಎಲ್ಲಾ ವಿದ್ಯಾರ್ಥಿಗಳು ಪಾಲಿಸಬೇಕು ಎಂದು ನಿನ್ನೆಯೇ ಪೋಷಕರ ಸಭೆಯಲ್ಲಿ ಸ್ಪಷ್ಟವಾಗಿ ಸೂಚನೆ ನೀಡಲಾಗಿದೆ. ಆದೇಶ ಪಾಲಿಸುವುದಿದ್ದರೆ ಮಾತ್ರ ಕಾಲೇಜು ಆವರಣದೊಳಕ್ಕೆ ಬನ್ನಿ ಎಂದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ಕಾಲೇಜಿನ ಆವರಣದ ಹೊರಗೆ ನಿಂತ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು, ನಾವು ಭಾರತದ ಪ್ರಜೆಗಳು, ನಮಗೂ ಕಲಿಕೆಗೆ ಅವಕಾಶ ಕೊಡಿ. ಕಾಲೇಜು ಶಿಕ್ಷಣ ಅಂತಿಮ ಹಂತದಲ್ಲಿರುವಾಗ ಇಂತಹ ಕಾನೂನು ತರುವುದು ಸರಿಯಲ್ಲ. ಮೊದಲೇ ಹೇಳಿದ್ದರೆ ನಾವು ಈ ಕಾಲೇಜಿಗೆ ಪ್ರವೇಶ ಪಡೆಯುತ್ತಿರಲಿಲ್ಲ. ಹಿಜಾಬ್ ಕಾರಣವಿಟ್ಟುಕೊಂಡು ನಮ್ಮ ಭವಿಷ್ಯ ಹಾಳುಮಾಡಬೇಡಿ ಎಂದು ಮನವಿ ಮಾಡುತ್ತಾ ಕಣ್ಣೀರು ಹಾಕಿದರು. ಒಂದು ಹಂತದಲ್ಲಿ ಪ್ರಾಂಶುಪಾಲರು ಕಾಲೇಜು ಗೇಟು ಮುಚ್ಚಲು ಮುಂದಾದಾಗ ಆಕ್ರೋಶಗೊಂಡ…
ಕುಂದಾಪ್ರ ಡಾಟ್ ಕಾಂ ವರದಿ.ಕುಂದಾಪುರ: ಪ್ರತಿಯೊಬ್ಬ ವ್ಯಕ್ತಿಯೂ ತನ್ನ ದುಡಿಯುವ ಶಕ್ತಿಯನ್ನು ಕಳೆದುಕೊಂಡಾಗ, ಪ್ರತಿ ತಿಂಗಳೂ ಜೀವನ ನಿರ್ವಹಣೆಗಾಗಿ ನಿಶ್ಚಿತ ಮಾಸಿಕ ಆದಾಯ ಬರುವಂತಿರಬೇಕು ಎಂಬ ಆಶಯ ಹೊಂದಿರುತ್ತಾನೆ. ಸರ್ಕಾರಿ ನೌಕರರಿಗಾದರೆ ಸರ್ಕಾರವೇ ಪ್ರತೀ ತಿಂಗಳೂ ನಿವೃತ್ತಿ ವೇತನ ನೀಡುತ್ತದೆ. ಆದರೆ ಯಾವುದೇ ಉದ್ಯೋಗ ಭದ್ರತೆ ಇಲ್ಲದ ಅಸಂಘಟಿತ ಕಾರ್ಮಿಕರು ಮತ್ತು ಸ್ವಯಂ ಉದ್ಯೋಗಿಗಳು ತನ್ನ ದುಡಿಮೆಯ ಅವಧಿಯಲ್ಲಿ ಸಾಕಷ್ಟು ಹಣವನ್ನೂ ಕೂಡಿಡಲೂ ಆಗದೇ ಜೀವನದ ಸಂಧ್ಯಾಕಾಲದಲ್ಲಿ ಆರ್ಥಿಕ ಸಂಕಷ್ಠಕ್ಕೆ ಸಿಲುಕುತ್ತಾರೆ. ಇವರು ಪಿಂಚಣಿ ಸೌಲಭ್ಯದಿಂದ ವಂಚಿತರಾಗುವುದನ್ನು ತಡೆಯಲು ಇವರಿಗೂ ಸಹ 60 ವರ್ಷದ ನಂತರ ಸರ್ಕಾರದಿಂದಲೇ ಪಿಂಚಣಿ ಪಡೆಯುವ ಯೋಜನೆ ಲಭ್ಯವಿದೆ. ಭಾರತ ದೇಶದ ಶೇ.50ರಷ್ಟು ಆದಾಯವು ಅಸಂಘಟಿತ ವಲಯದ ಅಂದಾಜು 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದ್ದು, ಅಸಂಘಟಿತ ವಲಯದಲ್ಲಿ ಗೃಹ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಫೆ.2: ಕುಂದಾಪುರದ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಸ್ಕಾರ್ಫ್ (ಹಿಜಾಬ್) ಧರಿಸುವುದನ್ನು ವಿರೋಧಿಸಿ, ಹಿಂದೂ ಸಮುದಾಯದ ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ತೆರಳಿರುವುದು ಇದೀಗ ವಿವಾದವಾಗಿ ಮಾರ್ಪಟ್ಟಿದೆ. ಘಟನೆಯನ್ನು ತಿಳಿಗೊಳಿಸಲು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರ ಪೋಷಕರ ಸಭೆ ಫಲಪ್ರದವಾಗಿಲ್ಲ. ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಒಂದಷ್ಟು ವಿದ್ಯಾರ್ಥಿನಿಯರು ಸ್ಕಾರ್ಫ್ ಧರಿಸುವುದನ್ನು ವಿರೋಧಿಸಿ ಮತ್ತೊಂದಷ್ಟು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ತೆರಳಿದ್ದರು. ಸುಮಾರು 28 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸುತ್ತಿದ್ದು ಇಂದು 100ಕ್ಕೂ ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಪರಿಸ್ಥಿತಿ ವಿಕೋಪಕ್ಕೆ ಬರುವ ಲಕ್ಷಣಗಳು ಕಾಣುತ್ತಲೇ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಪ್ರಕರಣವನ್ನು ಸುಖಾಂತ್ಯಗೊಳಿಸಲು ಖುದ್ದು ಕಾಲೇಜಿಗೆ ಭೇಟಿ ನೀಡಿದ್ದರು. ಕೇಸರಿ ಶಾಲು ತೆಗೆಯಬೇಕಿದ್ದರೆ, ಹಿಜಾಬ್ ಕೂಡ ಧರಿಸಬಾರದು ಎಂದು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಟನೆಯಿಂದ ನಿರ್ದೇಶನದ ತನಕ ಮೊದಲ ಬಾರಿಗೆ ಹೊಸ ಪ್ರತಿಭೆಗಳು ಪರಿಚಯಿಸಿಕೊಂಡು ನಿರ್ಮಾಣ ಮಾಡಿರುವ ‘ಕಲ್ಮಶ’ ಕಿರುಚಿತ್ರ ಈಗ ಎಲ್ಲಡೆ ಸದ್ದು ಮಾಡುತ್ತಿದೆ. ಹೊಸಬರ ತಂಡವಾದ ‘ಇಷ್ಟಾರ್ಥ ಪ್ರೊಡಕ್ಷನ್’ ಅವರ ಮೊದಲ ಪ್ರಯತ್ನ ಎಲ್ಲರ ಮನ ಗೆದ್ದಿದೆ. ಗೆಳೆತನದ ನಡುವೆ ಸ್ವಾರ್ಥ ಎಂಬುದು ಬಂದಾಗ ಏನಾಗಬಹುದು ಎಂಬುದನ್ನ ಎಳೆಯಾಗಿ ಇಟ್ಟುಕೊಂಡು ಮಾಡಿರುವ ಚಿತ್ರ, ಪ್ರೇಕ್ಷಕರ ಕುತೂಹಲಕ್ಕೆ ಕೊನೆತನಕ ತಿರುವುಗಳು ನೀಡುತ್ತ, ವಿಭಿನ್ನ ಪ್ರಯತ್ನ ಮಾಡಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ, ಮತ್ತು ನಿರ್ದೇಶನವನ್ನು ಪ್ರಸಾದ್ ನೆಲ್ಲಿಕಟ್ಟೆ ಉತ್ತಮವಾಗಿ ನಿರ್ವಹಿಸಿದ್ದಾರೆ. ಸಹ ನಿರ್ದೇಶನ ಮಾಡಿರುವ ಪ್ರದೀಪ್ ಮೊಗವೀರ ಗುಡಿಬೆಟ್ಟು, ಪ್ರೇಕ್ಷಕರಿಗೆ ಕಥೆಯ ಸಾರಾಂಶವನ್ನು ಸೂಕ್ಷ್ಮವಾಗಿ ತಿಳಿಯುವಂತೆ ಹಿನ್ನೆಲೆ ಧ್ವನಿಯನ್ನು ನೀಡಿದ್ದಾರೆ. ಹೊಸ ಪ್ರತಿಭೆಗಳ ನಟನೆಯನ್ನು ಬಹಳಷ್ಟು ಅಚ್ಚುಕಟ್ಟಾಗಿ ಸೆರೆ ಹಿಡಿಯುವ ಪ್ರಯತ್ನದಲ್ಲಿ ಮೊದಲ ಬಾರಿಗೆ ಛಾಯಾಗ್ರಹಣಕ್ಕೆ ಕಾಲಿಟ್ಟ ಶಾಶ್ವತ್ ಎಸ್ ಶೆಟ್ಟಿ ಯಶಸ್ವಿಯಾಗಿದ್ದಾರೆ. ಇಂಟ್ರೋ ಎಡಿಟಿಂಗ್ ಹಾಗೂ ಹಿನ್ನೆಲೆ ಸಂಗೀತವನ್ನು ಕೆ. ಕ್ರಿಯೆಶನ್ಸ್ ಉತ್ತಮವಾಗಿ ನೀಡಿದ್ದಾರೆ. ಮತ್ತು ಅಜಿತ್ ಮೇಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ‘ಹೆದ್ದಾರಿ ಹಾಗೂ ಸರ್ವಿಸ್ ರಸ್ತೆಯ ಅವ್ಯವಸ್ಥೆಯ ಕುರಿತು ಅದೆಷ್ಟು ಬಾರಿ ಜನಪ್ರತಿನಿಧಿಗಳು ಸೂಚಿಸಿದರೂ ಕೆಲಸ ಆಗಿಲ್ಲ. ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳಿಗೆ ಹಾಗೂ ಜನರ ಬೇಡಿಕೆಗೆ ಸ್ಪಂದನೆವೇ ದೊರೆಯುತ್ತಿಲ್ಲ ಎಂದರೆ ಪ್ರತಿಭಟನೆಯೊಂದೆ ನಮಗಿರುವ ದಾರಿ ಇದು ಜನಪ್ರತಿನಿಧಿ ಸರ್ಕಾರದ ವಿರುದ್ದವಲ್ಲ. ಕಾಮಗಾರಿ ನಡೆಯಬೇಕು ಸರ್ವಿಸ್ ರಸ್ತೆ ಹೊಂಡಗಳು ಮುಚ್ಚಬೇಕು ಎನ್ನುವುದಷ್ಟೆ ನಮ್ಮ ಆಗ್ರಹ. ಇದಕ್ಕಾಗಿ ಹತ್ತು ದಿನಗಳ ಗಡುವು ಕೊಡುತ್ತೇವೆ. ಇದರೊಳಗೆ ಸರಿಯಾಗದೆ ಇದ್ದರೆ 50 ಹೊಂಡಗಳಲ್ಲಿ ಬಾಳೆಗಿಡ ನೆಡುತ್ತೇವೆ’ ಎಂದು ಕುಂದಾಪುರ ಬಿಜೆಪಿ ಅಧ್ಯಕ್ಷ ಶಂಕರ ಅಂಕದಕಟ್ಟೆ ಪತ್ರಿಕಾ ಹೇಳಿಕೆಯನ್ನು ನೀಡಿದ್ದರು. ಈ ಕುರಿತು ಪ್ರತಿಕ್ರಿಯಿಸಿರುವ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಅವರು, ‘ಕುಂದಾಪುರ ಬಿಜೆಪಿ ಅಧ್ಯಕ್ಷರು ನೀಡಿರುವ ಪತ್ರಿಕಾ ಹೇಳಿಕೆಯನ್ನು ಕುಂದಾಪುರ ಕಾಂಗ್ರೆಸ್ ಸ್ವಾಗತಿಸುತ್ತದೆ. ಹಾಗೆಯೇ ಕಾಂಗ್ರೆಸ್ ಮತ್ತಿತರ ಸಮಾನಮನಸ್ಕ ಸಂಘಟನೆಗಳು ಈ ಕುರಿತು ಹಲವಾರು ಬಾರಿ ಹೆದ್ದಾರಿ ಇಲಾಖೆಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಕೂಡ ಈ ತನಕವೂ ಸಕಾರಾತ್ಮಕವಾಗಿ…
