ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಎಲ್ಲಾ ಧರ್ಮಗಳನ್ನು ಪ್ರೀತಿಸುವ ಹಿಂದು ಧರ್ಮ ಶ್ರೇಷ್ಠ ಧರ್ಮ. ನಮ್ಮ ದೇಶದ ಭವ್ಯ ಪರಂಪರೆ, ಸನಾತನ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕಾದ ಸನ್ನಿವೇಶ ಬಂದಿರುವುದು ಅತ್ಯಂತ ದುರದೃಷ್ಟಕರ. ಜಿಹಾದಿ ಶಕ್ತಿಗಳು ಪ್ರಪಂಚವನ್ನೇ ನಾಶ ಮಾಡುತ್ತಿದ್ದು, ನನ್ನ ದೇಶದಲ್ಲಿ ಕೂಡ ಇವರ ಅಟ್ಟಹಾಸ ಪ್ರಾರಂಭವಾಗಿದ್ದು, ಭಾರತವನ್ನು ಇಸ್ಲಾಮೀಕರಣ ಮಾಡುವ ಷಡ್ಯಂತ್ರ ರೂಪಿಸಿದ್ದಾರೆ. ಇದರ ಒಂದು ಭಾಗವಾಗಿ ಹಿಂದು ಕಾರ್ಯಕರ್ತರ ಕೊಲೆಗಳು ನಡೆಯುತ್ತಿದೆ. ಸರಕಾರ ಇಂತಹ ಸಂಘಟನೆ ಹಾಗೂ ದೇಶ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಉದ್ಯಮಿ ರತ್ನಾಕರ ಶೆಟ್ಟಿ ಬಡಾಮನೆ ಆಗ್ರಹಿಸಿದರು. ಗಂಗೊಳ್ಳಿ ಹಿಂದು ಜಾಗರಣ ವೇದಿಕೆ ಆಶ್ರಯದಲ್ಲಿ ಹಿಂದು ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ, ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಗಂಗೊಳ್ಳಿ ಪೋಸ್ಟ್ ಆಫೀಸಿನ ಬಳಿ ಸೋಮವಾರ ನಡೆದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಹಿಂಜಾವೇ ಮುಖಂಡ ಯಶವಂತ ಗಂಗೊಳ್ಳಿ, ದೇಶವನ್ನು ಇಸ್ಲಾಂ ದೇಶವನ್ನಾಗಿ ಮಾಡುವ ಪ್ರಯತ್ನಗಳು ಆರಂಭವಾಗಿದ್ದು,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆರ್ಥಿಕವಾಗಿ ಹಿಂದುಳಿದವರಿಗೆ ಸ್ವಾವಲಂಭನೆಯ ಬದುಕು ರೂಪಿಸುವ ಜೊತೆಗೆ ಜನರಲ್ಲಿ ಉಳಿತಾಯದ ಮನೋಭಾವನೆ ಹೆಚ್ಚಿಸುವ ಉದ್ದೇಶದೊಂದಿಗೆ ಸಹಕಾರಿ ಸಂಘಗಳು ಕಾರ್ಯನಿರ್ವಹಿಸುತ್ತಿದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ನಾವುಂದ ಶಾಖೆ ನಾಲ್ಕು ವರ್ಷ ಪೂರೈಸಿದ ಅಂಗವಾಗಿ ನಾವುಂದ ಸ್ಕಂದ ಸಭಾಭವನದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ರಾಹಕರ ವಿಶ್ವಾಸದೊಂದಿಗೆ ನಮ್ಮ ಸಂಸ್ಥೆ ಉತ್ತಮ ಆರ್ಥಿಕ ವ್ಯವಹಾರ ಹೊಂದಿರುವುದಲ್ಲದೇ ಪರಿಸರದ ವಿವಿಧ ಅಗತ್ಯತೆಗಳಿಗೆ ನೆರವಾಗುವ ಮೂಲಕ ಸಾಮಾಜಿಕ ಬದ್ಧತೆಯನ್ನು ಪಾಲಿಸಿಕೊಂಡು ಬಂದಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ಉಪಸ್ಥಿತರಿದ್ದರು. ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಉಪಾಧ್ಯಕ್ಷ ಎಂ. ವಿನಾಯಕ ರಾವ್ ಸ್ವಾಗತಿಸಿ, ಶಾಖಾ ಪ್ರಬಂಧಕ ಶ್ರೀನಿವಾಸ್ ಎಂ. ವಂದಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು. ಗೋಳಿಹೊಳೆ ಶಾಖಾ ಪ್ರಬಂಧಕ ರಾಘವೇಂದ್ರ ಸಹಕರಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶೇಷ ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಹಾಗೂ ಪಾಲಕರ ಸಭೆ ಮಂಗಳವಾರ ನಡೆಯಿತು. ಕಾರ್ಯಕ್ರಮದಲ್ಲಿ ನ್ಯಾಯವಾದಿ ಶರತ್ಚಂದ್ರ ಶೆಟ್ಟಿ ಅವರು ವಿಶೇಷ ಮಕ್ಕಳ ಹಕ್ಕುಗಳು, ಪೋಷಕರ ಮತ್ತು ಸಂಸ್ಥೆಯ ಜವಾಬ್ದಾರಿಗಳ ಬಗ್ಗೆ ಹಾಗೂ ವಿಶೇಷ ಮಕ್ಕಳಿಗೆ ಕಾನೂನಿನಲ್ಲಿ ಇರುವ ಅವಕಾಶಗಳ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಗಳಾಗಿ ವಕೀಲರಾದ ಟಿ. ಬಿ ಶೆಟ್ಟಿ ಮಾತನಾಡಿ ಸಂಸ್ಥೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದರು. ವಕೀಲರ ಸಂಘದ ಅಧ್ಯಕ್ಷರಾದ ಸಳ್ವಾಡಿ ನಿರಂಜನ ಹೆಗ್ಡೆ, ವಕೀಲರಾದ ರಾಜು ಪೂಜಾರಿ, ಪಂಚಾಯತ್ ಸದಸ್ಯ ಜುಡಿತ್ ಮೆಂಡೋನ್ಸಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ರೇಮ ಸ್ವಾಗತಿಸಿದರು .ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕಿ ಶ್ರೃತಿ ವಂದಿಸಿದರು. ಸಹ ಶಿಕ್ಷಕಿ ದೀಪಾ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ನಮ್ಮ ನಾಡ ಒಕ್ಕೂಟ ಕುಂದಾಪುರ ಘಟಕ ಮತ್ತು ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ಶಿಬಿರವು ಅಂಜುಮನ್ ನೂರುಲ್ ಇಸ್ಲಾಮ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿಯಲ್ಲಿ ಜರುಗಿತು. ಮೌಲಾನಾ ಮೊಹಮ್ಮದ್ ಮುಝಮ್ಮಿಲ್ (ಖತೀಬರು, ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿ) ರವರ ಕಿರಾತ್ ಮೂಲಕ ಸಮಾರಂಭವನ್ನು ಪ್ರಾರಂಭಿಸಲಾಯಿತು. ಕುಂದಾಪುರ ಸರಕಾರಿ ತಾಲೂಕು ಆಸ್ಪತ್ರೆ, ಕುಂದಾಪುರ ಆರೋಗ್ಯ ಮಿತ್ರ ಸುಜನ್ಮಾಲ ಆಯುಷ್ಮಾನ್ ಕಾರ್ಡ್ ಉಪಯುಕ್ತತೆ ಮತ್ತು ಪ್ರಯೋಜನದ ಬಗ್ಗೆ ಸವಿವರವಾಗಿ ವಿವರಿಸಿದರು. ತಾಲೂಕು ಅಧ್ಯಕ್ಷ ದಸ್ತಗೀರ್ ಕಂಡ್ಲೂರ್ ರವರ ಅಧ್ಯಕ್ಷತೆ ವಹಿಸಿದ್ದರು. ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಅಧ್ಯಕ್ಷರಾದ ಮುಸ್ತಾಕ್ ಅಹ್ಮದ್ ಬೆಳ್ವೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಮ್ಮ ನಾಡ ಒಕ್ಕೂಟ ಬೈಂದೂರು ಘಟಕದ ಅಧ್ಯಕ್ಷ ಅಬ್ದುಲ್ ಸಮಿ ಹಳಗೇರಿ, ಕುಂದಾಪುರ ಘಟಕದ ಸಂಘಟನಾ ಕಾರ್ಯದರ್ಶಿ ಮುಜಾಹಿದ್ ನಾಖುದಾ, ಜಮಾತುಲ್ ಮುಸ್ಲಿಮೀನ್ ಗಂಗೊಳ್ಳಿ ಇದರ ಅಧ್ಯಕ್ಷರಾದ ಪಿ.ಎಮ್. ಹಸನೈರ್, ಬಿ.ಎಸ್.ಎಫ್ ಫಿಶರೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಫೆ.02: ತಾಲೂಕಿನ ಕಿರಿಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ಎಂಬ್ಯಾಕ್’ಮೆಂಟ್ ಬಳಿ ಸಂಜೆ ನಡೆದ ಇನ್ನೋವಾ ಕಾರು ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಬೆಂಗಳೂರಿನ ಆರ್. ವಿಜಯ್ ಎಂಬುವವರ ಏಕೈಕ ಪುತ್ರ ಅಕ್ಷಯ್ (23) ಮೃತ ದುರ್ದೈವಿ. ಅಪಘಾತದಲ್ಲಿ ತೇಜಸ್ (24), ಹರ್ಷ (24), ಪವನ್ (23) ಗಾಯಗೊಂಡಿದ್ದಾರೆ. ಹೊನ್ನಾವರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಇನ್ನೋವಾ ಕಾರಿಗೆ ಕಿರಿಮಂಜೇಶ್ವರ ಎಂಬ್ಯಾಕ್’ಮೆಂಟ್ ಬಳಿ ಬೈಕ್ ಸವಾರ ಏಕಾಏಕಿ ಅಡ್ಡ ಬಂದಿದ್ದರಿಂದ ಇನ್ನೋವಾ ಚಾಲಕ ನಿಯಂತ್ರಣ ಕಳೆದುಕೊಂಡು ಡಿವೈಡರ್ ಸಮೀಪದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಕಾರು ಡಿವೈಡರ್ ಹತ್ತಿ ಮತ್ತು ರಸ್ತೆಯಲ್ಲಿ ತಿರುಗಿ ನಿಂತಿತ್ತು. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಅಕ್ಷಯ್ ತಲೆ ಹೊರಗೆ ಬಂದು ಕಂಬಕ್ಕೆ ಡಿಕ್ಕಿಯಾದ ಮುಖದ ಭಾಗಿ ಸಂಪೂರ್ಣ ಹಾನಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ನಾಲ್ವರು ಬಾಲ್ಯ ಸ್ನೇಹಿತರಾಗಿದ್ದು, ಸಹಪಾಠಿಗಳೂ ಆಗಿದ್ದರು. ತೇಜಸ್ ಎಂಬಾತನ ಇನ್ನೋವಾ ಕಾರಿನಲ್ಲಿ ಫೆ.26ರಂದು ಬೆಂಗಳೂರಿನಿಂದ ಹೊನ್ನಾವರಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮಾ.2: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂದೂರು ನೇತೃತ್ವದಲ್ಲಿ ಆಯೋಜಿಸಿದ ಉಡುಪಿ ವಲಯ ಮಟ್ಟದ ಅಂತರ್ ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟ ಬುಧವಾರ ಕಾಲೇಜು ಕ್ರೀಡಾಂಗಣ ನಡೆಯಿತು. ಬೈಂದೂರು ಶಾಸಕರಾದ ಬಿ. ಎಮ್. ಸುಕುಮಾರ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕ್ರೀಡಾ ಸ್ಪೂರ್ತಿಯಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡಾ ಕ್ಷೇತ್ರದಲ್ಲಿ ವಿಫುಲ ಅವಕಾಶಗಳಿದ್ದು, ವಿದ್ಯಾರ್ಥಿ ದೆಸೆಯಲ್ಲಿ ಅವುಗಳನ್ನು ಸದ್ಭಳಕೆ ಮಾಡಿಕೊಂಡಾಗ ಯಶಸ್ಸು ಸಾಧಿಸಲು ಸಾಧ್ಯವೆಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ತಾ. ಪಂ ಮಾಜಿ ಉಪಾಧ್ಯಕ್ಷೆ ಮಾಲಿನಿ ಕೆ, ಮಂಗಳೂರು ವಿ.ವಿ ಕಾಲೇಜುಗಳ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಜೆಮ್ಸ್ ಒಲಿಪೆಯರ್, ಯುವ ಸಬಲೀಕರಣ ಕ್ರೀಡಾ ಇಲಾಖೆ ಉಡುಪಿ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ವಿಶ್ವ ವಿದ್ಯಾನಿಲಯದ ಪಂದ್ಯಾಟ ವೀಕ್ಷಕಿ ಜಯಶ್ರೀ ನಾಯ್ಕ, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿನಮಕ್ಕಿ ಗೋಳಿಕಟ್ಟಿನ ಸ್ವಾತಂತ್ರ್ಯ ಹೋರಾಟಗಾರ ಮಂಕಿ ರಾಮಣ್ಣ ಅವರ ಮನೆಗೆ ನಾಮಫಲಕ ಅಳವಡಿಸಲಾಯಿತು. ನಾಮಫಲಕ ಅನಾವರಣವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಅಧ್ಯಕ್ಷರಾದ ಉದಯ ಕುಮಾರ್ ಹಟ್ಟಿಯಂಗಡಿ ಇವರು ಅನಾವರಣಗೈದರು. ಭಾರತದ ಸ್ವಾತಂತ್ರ್ಯಕ್ಕೆ ಕರಾವಳಿಗರ ಕೊಡುಗೆ ಹಾಗೂ ಮಂಕಿ ರಾಮಣ್ಣ ಇವರ ಸೇವೆಗೆ ಸಂಬಂಧಿಸಿದಂತೆ ಡಾ. ಕಿಶೋರ್ ಕುಮಾರ್ ಶೆಟ್ಟಿ ಮಾಹಿತಿ ನೀಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಚೇತನ್ ಬಟ್ಟೆಕುದ್ರು ಗ್ರಾಮ ಪಂಚಾಯತ್ ಹಕ್ಲಾಡಿ ವಹಿಸಿದ್ದರು. ಕಾಯ೯ಕ್ರಮದ ಅತಿಥಿಗಳಾಗಿ ನರೇಂದ್ರ ಕುಮಾರ್ ಕೋಟ, ವಿಜಯ್ ನರಸಿಂಹ ಐತಾಳ್, ಎಮ್.ಎಮ್. ಸುವಣ೯, ಪ್ರಭಾಕರ ಸೇನಾಪುರ, ಲೋಹಿತಾಶ್ವ ಆರ್. ಕುಂದರ್, ಸುಧಾಕರ್ ಕಾಂಚನ್ ಸ್ವಾತಂತ್ರ್ಯ ಹೋರಾಟಗಾರ ಪತ್ನಿ ಗಣಪು ಯಾನೆ ಶಾರದಮ್ಮ ಉಪಸ್ಥಿತರಿದ್ದರು. ಸ್ವರಾಜ್ಯ75 ಸಂಘಟನೆ ನೇತೃತ್ವದಲ್ಲಿ ಮೊಗವೀರ ಯುವ ಸಂಘಟನೆ (ರಿ) ಉಡುಪಿ ಹೆಮ್ಮಾಡಿ ಘಟಕ,ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು, ಉಸಿರು ಕೋಟ, ಹಸ್ತ ಚಿತ್ತ ಫೌಂಡೇಶನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಯಡ್ತರೆ ಫ್ರೆಂಡ್ಸ್ ಆಶ್ರಯದಲ್ಲಿ ಜರುಗಿದ ಬೈಂದೂರು ತಾಲೂಕು ಮಟ್ಟದ ಎರಡು ದಿನಗಳ 30 ಗಜಗಳ ಕ್ರಿಕೆಟ್ ಪಂದ್ಯಾಟದಲ್ಲಿ 8 ಸ್ಟಾರ್ ಉಪ್ಪುಂದ ತಂಡ ‘ಯಡ್ತರೆ ಟ್ರೋಫಿ 2022’ ಗೆದ್ದುಕೊಂಡರೆ, ವಿ.ಎಫ್.ಸಿ ನಾಗೂರು ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿತು. ಭಾನುವಾರ ನಡೆದ ಸಮಾರೋಪ ಸಮಾರಂಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಮಾತನಾಡಿ, ಕ್ರೀಡಾ ಚಟುವಟಿಕೆಗಳಿಂದ ಸಂಘಟನೆ ಸಾಧ್ಯವಿದೆ. ಮಕ್ಕಳು ಹೆಚ್ಚೆಚ್ಚು ಕ್ರೀಡೆಯಲ್ಲಿ ತೊಡಗಿಕೊಳ್ಳುವುದರಿಂದ ಆತ್ಮಸ್ಥೈರ್ಯ, ಮನೋಬಲ ಹೆಚ್ಚುತ್ತದೆ. ಇದರಿಂದ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು, ಕಷ್ಟದ ಸಂದರ್ಭವನ್ನು ಎದುರಿಸಲು ಸಾಧ್ಯವಾಗುತ್ತದೆ ಎಂದರು. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕ್ರೀಡೆ, ಕಲೆ ಹಾಗೂ ಇನ್ನಿತರ ಚಟುವಟಿಕೆಗಳು ಪ್ರೋತ್ಸಾಹದಿಂದ ಮಾತ್ರ ಮುಂದುವರಿಯಲು ಸಾಧ್ಯವಿದೆ. ಅಗತ್ಯ ವೇಳೆಯಲ್ಲಿ ನೀಡುವ ಪ್ರೋತ್ಸಾಹ ಮುಂದಿನ ದೊಡ್ಡ ಯಶಸ್ಸಿಗೆ ದಾರಿಯಾಗುತ್ತದೆ ಎಂದರು. ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾಜಿ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡ ಅವರ ಕೃತಿ ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್’ ಬಿಡುಗಡೆ ಸಮರಂಭ ಮಾ. 6ರ ಮಧ್ಯಾಹ್ನ 3:30ಕ್ಕೆ ಉಪ್ಪುಂದದ ರೈತಸಿರಿ ಸಭಾಭವನದಲ್ಲಿ ಜರುಗಲಿದೆ. ಭಾರತೀಯ ಸೇನೆಯನ್ನು ಸ್ವಾವಲಂಬಿ ಮತ್ತು ಶಕ್ತಿಶಾಲಿಯಾಗಿಸಲು ಸೇವಾಕಾಲದುದ್ದಕ್ಕೂ ಶ್ರಮಿಸುತ್ತಾ 2021 ಡಿ.8 ರಂದು ಹೆಲಿಕಾಪ್ಟರ್ ದುರ್ಘಟನೆಯಲ್ಲಿ ವಿಧಿವಶರಾದ ಪದ್ಮವಿಭೂಷಣ ಸಿಡಿಎಸ್ ಜ. ಬಿಪಿನ್ ರಾವತ್ ಅವರ ಪ್ರೇರಣಾದಾಯಿ ವ್ಯಕ್ತಿತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಬೈಂದೂರು ಚಂದ್ರಶೇಖರ ನಾವಡ ಅವರು ‘ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್’ ಕೃತಿ ಬರೆದಿದ್ದು, ಮಂಗಳೂರಿನ ಅವನಿ ಪ್ರಕಾಶನ ಪ್ರಕಟಿಸಿದ್ದಾರೆ. ಕರ್ನಲ್ (ನಿವೃತ್ತ) ನಿಟ್ಟೆಗುತ್ತು ಶರತ್ ಭಂಡಾರಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಖಂಬದಕೋಣೆ ರೈ ಸೇ ಸ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಕೃತಿ ಲೋಕಾರ್ಪಣೆ ಮಾಡಲಿರುವರು. ಕುಂದಾಪುರ ಕಸಾಪ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ಕೃತಿ ಪರಿಚಯ ಮಾಡಲಿರುವರು. ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಅಡಿಗರು ಅಧ್ಯಕ್ಷತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗರ್ಭಿಣಿ ಪತ್ನಿಗೆ ಸಿಗರೇಟಿನಿಂದ ಸುಟ್ಟು ಕಿರುಕುಳ ನೀಡುತ್ತಿದ್ದ ಪತಿಯನ್ನು ಬಂಧಿಸಲಾಗಿದೆ. ವರದಕ್ಷಿಣೆ ಕಿರುಕುಳ ನೀಡುತ್ತಿರುವ ಬಗ್ಗೆ ಪತ್ನಿ ನೀಡಿದ ದೂರಿನಂತೆ, ತಲೆಮರೆಸಿಕೊಂಡಿದ್ದ ಕುಂದಾಪುರದ ಬರೆಕಟ್ಟು ನಿವಾಸಿ ಪ್ರದೀಪ್ ಎಂಬಾತನನ್ನು ಕುಂದಾಪುರ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪತಿಯ ಕಿರುಕುಳದ ವಿರುದ್ಧ ಫೆ.26ರಂದು ಪತ್ನಿ ಪ್ರಿಯಾಂಕಾ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರೀತಿಸಿ ಮದುವೆಯಾದ ಪತಿ ನಾಲ್ಕೈದು ತಿಂಗಳಿನಲ್ಲಿ ವರದಕ್ಷಿಣೆಗಾಗಿ ಹಿಂಸೆ, ಕಿರುಕುಳ ನೀಡುತ್ತಿರುವುದು ಬೆಳಕಿಗೆ ಬಂದಿತ್ತು. ಪ್ರಿಯಾಂಕಾ ನೀಡಿದ ದೂರಿನಲ್ಲಿ, ಸಿಗರೇಟಿನಿಂದ ಸುಟ್ಟು ಗಾಯ ಮಾಡಿದ ಬಳಿಕ ಮಗುವನ್ನು ಕೊಲ್ಲುವುದಾಗಿ ಹೇಳಿ ಹೊಟ್ಟೆಗೆ ತುಳಿದಿದ್ದಾನೆ. ಈ ವೇಳೆಯಲ್ಲಿ ತಪ್ಪಿಸಿಕೊಂಡಿದ್ದರಿಂದ ಸೊಂಟಕ್ಕೆ ಪೆಟ್ಟು ತಗುಲಿದೆ. ಪತಿಯೇ ತನ್ನ ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿ ನನ್ನ ಪೋಷಕರಿಗೆ ಕಳುಹಿಸಿ 2ಲ್ಷಕ ರೂ ಹಣ ಹಾಗೂ 4 ಪವನ್ ಚಿನ್ನವನ್ನು ವರದಕ್ಷಿಣೆ ರೂಪದಲ್ಲಿ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾನೆ. ಒಂದು ವೇಳೆ ಹಣ ಮತ್ತು ಚಿನ್ನ ನೀಡದೇ ಇದ್ದಲ್ಲಿ ನನ್ನನ್ನು ಕೊಂದುಬಿಡುವುದಾಗಿ…
