ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಎಳಜಿತ ಶ್ರೀ ರಾಮಕೃಷ್ಣ ಕುಟೀರದಲ್ಲಿ ಸ್ವಾಮಿ ವಿವೇಕಾನಂದ ಜನ್ಮ ಜಯಂತಿಯನ್ನು ಬುಧವಾರ ಆಚರಿಸಲಾಯಿತು. ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ವಿವೇಕಾನಂದರ ಜೀವನ ಸಂದೇಶವನ್ನು ಭೋದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ವೇದಮಂತ್ರಗಳ ಪಠಣ ನಡೆಯಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕೊಲ್ಲೂರು ದೇವಸ್ಥಾನಕ್ಕೆ ಪ್ರಯಾಣಿಸುತ್ತಿದ್ದ ಯಾತ್ರಾರ್ಥಿಗಳ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಲ್ಲೂರು ಬಳಿಯ ಓಣ್ಕಣ್ ಮೋರಿ ತಿರುವಿನಲ್ಲಿ ನಡೆದಿದೆ. ಕೋಲಾರದಿಂದ ಭಕ್ತರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಚಾಲಕನ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪ್ರಪಂಚ ಇರುವುದು ಹೇಡಿಗಳಿಗಲ್ಲ; ಜೀವನದಲ್ಲಿ ಎದುರಾಗುವ ಸಕಲ ಸೋಲು-ಗೆಲುವುಗಳಿಗೆ ಬಗ್ಗದಿರಿ, ಫಲಿತಾಂಶದ ಬಗ್ಗೆ ನಿರೀಕ್ಷೆ ಇಟ್ಟುಕೊಳ್ಳದೆ ಸ್ವಾರ್ಥರಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳಿ’ ಎಂದು ಯುವಕರಿಗೆ ಕರೆಕೊಟ್ಟ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರು ಇಂದಿಗೂ ಯುವಜನಾಂಗದ ಸ್ಫೂರ್ತಿಯ ಚಿಲುಮೆಯಾಗಿ ಉಳಿದಿದ್ದಾರೆ. ಹಿಂದು ಧರ್ಮದ ಪುನರುಜ್ಜೀವನಕ್ಕೆ ಕಾರಣೀಭೂತರಾದ ಅವರು ರಾಷ್ಟ್ರೀಯತೆಗೆ ನೀಡಿದ ಕೊಡುಗೆ ಬಹುದೊಡ್ಡದು. ಸನ್ಯಾಸ ಧರ್ಮದ ವ್ಯಾಪ್ತಿಯನ್ನು ವಿಶೇಷವಾಗಿ ವ್ಯಾಖ್ಯಾನಿಸಿದ ವಿವೇಕಾನಂದರು, ಧರ್ಮಪಾಲನೆ ಎಂದರೆ ಏಕಾಂತದಲ್ಲಿ ಕುಳಿತು ಮಾಡುವ ತಪಸ್ಸಲ್ಲ; ಜನರ ನಡುವೆ ಇದ್ದುಕೊಂಡು ಜನರಿಗಾಗಿ ಸಮಸ್ತ ಶಕ್ತಿಯನ್ನೂ ವಿನಿಯೋಗಿಸುವುದು ಎಂದು ಸಾರಿದರು. ಈ ಸಮಾಜಯಜ್ಞಕ್ಕೆ ಅವರು ವಿಶೇಷ ಆಹ್ವಾನ ನೀಡಿದ್ದು ಯುವಕರಿಗೆ. ಆದ್ದರಿಂದಲೇ ಅವರು ಇಂದಿಗೂ ಯುವಕರಿಗೆ ಆದರ್ಶ ವ್ಯಕ್ತಿ. ಅವರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ. ಶ್ರೀಮಂತ ಕುಟುಂಬದಲ್ಲಿ ಜನಿಸಿದ ನರೇಂದ್ರನಾಥ ದತ್ತ ಚಿಕ್ಕವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡರು. ಅವರ ಜೀವನವೇ ಒಂದು ಹೋರಾಟವಾಗಿತ್ತು. ಒಮ್ಮೆ ಅವರು ಜೀವನದ ಉದ್ದೇಶವೇನು ಎಂಬ ಪ್ರಶ್ನೆ ಕೇಳಿಕೊಂಡರು. ಇದೇ ವೇಳೆ ಭಾರತದ ಬಡತನ ಕಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ವನ್ನು ರದ್ದುಪಡಿಸಿದ್ದಾರೆ ತುಣುಕನ್ನು ಹರಿಯಬಿಟ್ಟಿರುವುದು, ಜನರಲ್ಲಿ ಗೊಂದಲ ಸೃಷ್ಟಿ ಮಾಡಿರುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸ್ಪಷ್ಟನೆ ನೀಡಿದ್ದು, ಜ.5ರಿಂದ ಜಾರಿಯಾದ ಆದೇಶದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನೈಟ್ ಕರ್ಪ್ಯೂ ಹಾಗೂ ವೀಕೆಂಡ್ ಕರ್ಪ್ಯೂ ಮುಂದುವರಿಯಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ. ಸರಕಾರದ ಆದೇಶದಂತೆ ದಿನಾಂಕ 05.01.2022 ರ ಅಪರಾಹ್ನ 10.00 ರಿಂದ ದಿನಾಂಕ: 19.01.2022 ರ ಪೂರ್ವಾಹ್ನ 5.00ರ ವರೆಗೆ ಜಿಲ್ಲಾದ್ಯಂತ ನೈಟ್ ಕರ್ಫ್ಯೂ ಹಾಗೂ ವಾರಂತ್ಯ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿಯಲ್ಲಿರುತ್ತದೆ. ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಕರ್ನಾಟಕದ ಮೊದಲ ವಿದ್ಯುತ್ ಚಾಲಿತ ಪ್ಯಾಸೆಂಜರ್ ರೈಲು ಸಂಚಾರ ಜ.19ರಿಂದ ಆರಂಭಗೊಳ್ಳಲಿದೆ. ಮೊದಲ ಹಂತದಲ್ಲಿ ಕಾರವಾರದಿಂದ ಮಂಗಳೂರು ಜಂಕ್ಷನ್ ತನಕ ವಿದ್ಯುತ್ ಚಾಲಿತ ರೈಲು ಸಂಚಾರವಿರಲಿದೆ. ಈಗಾಗಲೇ ಇರುವ ಯಶವಂತಪುರ ಕಾರವಾರ (16515/16516) ಎಕ್ಸ್ಪ್ರೆಸ್ ಹಗಲು ರೈಲು ಇನ್ನು ಕಾರವಾರದಿಂದ ಮಂಗಳೂರು ಜಂಕ್ಷನ್ ತನಕ ವಿದ್ಯುತ್ ಚಾಲಿತ ರೈಲಾಗಿ ಪರಿವರ್ತನೆಗೊಳ್ಳಲಿದೆ. ಮುಂದೆ ಡಿಸೆಲ್ ಇಂಜಿನ್ ಜೋಡಿಸಿಕೊಂಡು ಯಶವಂತಪುರದ ತನಕ ಸಂಚಾರ ಮುಂದುವರಿಲಿದೆ. ಕಾರವಾರ – ಮುರುಡೇಶ್ವರ – ಬೈಂದೂರು – ಕುಂದಾಪುರ – ಉಡುಪಿ – ಮಂಗಳೂರು ಜಂಕ್ಷನ್ – ಸುಬ್ರಹ್ಮಣ್ಯ ರೋಡ್ – ಸಕಲೇಶಪುರ – ಹಾಸನ – ಯಡಿಯೂರು ಮಾರ್ಗದಲ್ಲಿ ಯಶವಂತಪುರ ಕಾರವಾರ ಎಕ್ಸ್ಪ್ರೆಸ್ ಸಂಚರಿಸಲಿದೆ. ಕಾರವಾರದಿಂದ ಮಂಗಳೂರು ಜಂಕ್ಷನ್ ತನಕದ ವಿದ್ಯುತ್ ಮಾರ್ಗ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮೊದಲ ಬಾರಿ ವಿದ್ಯುತ್ ಚಾಲಿತ ರೈಲು ಸಂಚಾರ ಆರಂಭಿಸಲಾಗುತ್ತಿದೆ. ಮಂಗಳೂರು ಜಂಕ್ಷನ್’ನಿಂದ ಯಶವಂತಪುರದ ತನಕ ಇ-ಲೋಕೋಮೋಟಿವ್ ಎಂಜಿನ್ ಬದಲಿಸಿ ಡೀಸೆಲ್ ಎಂಜಿನ್ ಜೋಡಿಸಲಾಗುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.11: ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಸಹ ಕೋವಿಡ್ -19 ಮುನ್ನೆಚ್ಚರಿಕಾ ಡೋಸ್ ತಪ್ಪದೇ ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟಿçÃಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಸಹಯೋಗದಲ್ಲಿ, ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚೆಗೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ನಿಭಾಯಿಸಲು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರ ಸೇವೆಯು ಅತ್ಯಂತ ಅಗತ್ಯವಾಗಿದ್ದು, ಇವರಿಗೆ ಕೋವಿಡ್ನಿಂದ ರಕ್ಷಣೆ ನೀಡಲು ಮತ್ತು 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಕೋವಿಡ್ನಿಂದ ಹೆಚ್ಚಿನ ಅಪಾಯವಾಗುವುದನ್ನು ತಪ್ಪಿಸಲು ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಪ್ರಥಮ ಮತ್ತು ದ್ವಿತೀಯ ಡೋಸ್ ಲಸಿಕೆ ನೀಡುವಲ್ಲಿ ಅತ್ಯಂತ ಹೆಚ್ಚಿನ ಪ್ರಗತಿ ಆಗಿದ್ದು, ಮುನ್ನೆಚ್ಚರಿಕಾ ಡೋಸ್ ನೀಡುವಲ್ಲಿ ಸಹ ಸಂಪೂರ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಜ್ಯ ಸರಕಾರ ಮೀನುಗಾರ ಮಹಿಳೆಯರ ಸಾಲ ಮನ್ನಾ ಘೋಷಣೆ ಮಾಡಿ ಈತನಕ ಸಂಪೂರ್ಣ ಸಾಲ ಮನ್ನಾ ಮಾಡದಿರುವುದರಿಂದ ಮರುಪಾವತಿಸುವಂತೆ ಬ್ಯಾಂಕುಗಳು ಒತ್ತಡ ಹೇರುತ್ತಿವೆ. ನಾಡದೋಣಿ ಮೀನುಗಾರಿಕೆಗೆ ಹೆಚ್ಚಿನ ಸೀಮೆಎಣ್ಣೆ ಒದಗಿಸುವ ಬಗ್ಗೆ ನೀಡದ ಭರವಸೆ ಈವರೆಗೆ ಕಾರ್ಯರೂಪಕ್ಕೆ ಬಂದಿಲ್ಲ. ಸರಕಾರ ಘೋಷಿಸಿದಂತೆ ಮೀನುಗಾರ ಮಹಿಳೆಯರ ಸಂಪೂರ್ಣ ಮನ್ನಾ ಮಾಡಿ ಮೊದಲಿನಂತೆ ಮೀನುಗಾರ ಮಹಿಳೆಯರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ಒದಗಿಸಲು ಹಾಗೂ ನಾಡದೋಣಿ ಮೀನುಗಾರಿಕೆಗೆ ಭರವಸೆ ನೀಡಿದಂತೆ ಹೆಚ್ಚಿನ ಸೀಮೆಎಣ್ಣೆಯನ್ನು ನಿಗದಿತವಾಗಿ ನೀಡುವ ಬಗ್ಗೆ ಸರಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಮೀನುಗಾರ ಸಮಿತಿ ಅಧ್ಯಕ್ಷ ಬಿ. ನಾಗೇಶ್ ಖಾರ್ವಿ ಆಗ್ರಹಿಸಿದ್ದಾರೆ. ರಾಜ್ಯ ಬಿಜೆಪಿ ಸರಕಾರ ಮೀನುಗಾರ ಮಹಿಳೆಯರ ಸಾಲ ಮನ್ನಾ ಎಂದು ಘೋಷಣೆ ಮಾಡಿ ಸಂಪೂರ್ಣ ಸಾಲ ಮನ್ನಾ ಮಾಡದೇ ಇರುವುದರಿಂದ ಮೀನುಗಾರ ಮಹಿಳೆಯರಿಗೆ ಸಾಲ ಮರುಪಾವತಿಸುವಂತೆ ಬಾಂಕು ಹೇರುತ್ತಿದೆ ಆದ್ದರಿಂದ ಬಾಕಿ ಉಳಿಸಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಹಾಗೂ ಮೊದಲಿನಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.10: ವಿಶೇಷ ಘಟಕ ಯೋಜನೆಯಡಿ ಪ.ಜಾತಿ ಹಾಗೂ ಪಂಗಡದವರ ಸಮಗ್ರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಸಂಪೂರ್ಣ ಬಳಕೆ ಮಾಡಿಕೊಳ್ಳುವುದರ ಜೊತೆಗೆ ಪ್ರತಿಶತ 100 ರಷ್ಟು ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಎಸ್.ಸಿ.ಪಿ/ಟಿ.ಎಸ್.ಪಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಪ.ಜಾತಿ ಮತ್ತು ಪಂಗಡದವರ ಕಲ್ಯಾಣಾಭಿವೃದ್ಧಿಗೆ ಸರ್ಕಾರ ಬಜೆಟ್ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವುದರೊಂದಿಗೆ ಅವರುಗಳಿಗೆ ಮೂಲಭೂತ ಸೌಕರ್ಯಗಳು ಸೇರಿದಂತೆ ವೈಯಕ್ತಿಕ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯವಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ತಲುಪಿಸಲು ಅನುಕೂಲವಾಗುವ ರೀತಿಯಲ್ಲಿ ಜಿಲ್ಲೆಯ ಪ.ಜಾತಿ, ಪಂಗಡದವರ ನಿಖರ ಮಾಹಿತಿ ಸಂಗ್ರಹಿಸುವುದರೊAದಿಗೆ ಅವರುಗಳಿಗೆ ಭೂ ಒಡೆತನ, ನಿವೇಶನ, ವಾಸಿಸುವ ಮನೆ, ವಿದ್ಯುಚ್ಛಕ್ತಿ ಸೌಲಭ್ಯ, ಸೇರಿದಂತೆ ಅವರ ಆರ್ಥಿಕ ಮಾಹಿತಿಗಳನ್ನು ಸಂಗ್ರಹಿಸಿದ್ದಲ್ಲಿ ಅವರುಗಳ ಅವಶ್ಯಕತೆಗನುಗುಣವಾಗಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.10: ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ನಿವಾರೋಣಾಪಾಯ ಸೇರಿದಂತೆ ಸಾಮಾಜಿಕ ಭದ್ರತೆಗಳನ್ನು ರೂಪಿಸಲು ಇ ಶ್ರಮ್ ಯೋಜನೆ ನೊಂದಣಿ ನಡೆಯುತ್ತಿದ್ದು, ವಲಸೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರುಗಳು ತಪ್ಪದೇ ನೊಂದಣಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ತಿಳಿಸಿದರು. ಅವರು ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಇ-ಶ್ರಮ್ ಯೋಜನೆಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಸಮಿತಿ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರ ಅಸಂಘಟಿತ ಕಾರ್ಮಿಕರ ಸಮಸ್ಯೆಗಳ ನಿರ್ವಹಣೆ, ಸಾಮಾಜಿಕ ಭದ್ರತೆ, ಹಾಗೂ ಕಲ್ಯಾಣ ಯೋಜನೆಗಳನ್ನು ರೂಪಿಸಲು ಅಸಂಘಟಿತ ಕಾರ್ಮಿಕರ ದತ್ತಾಂಶವನ್ನು ಕ್ರೂಢೀಕರಿಸಿದ್ದಲ್ಲಿ ಉತ್ತವi ಯೋಜನೆಗಳನ್ನು ರೂಪಿಸಲು ಇ-ಶ್ರಮ್ ನೊಂದಣಿ ಸಹಾಯವಾಗಲಿದೆ ಎಂದರು. ನೊಂದಣಿ ದತ್ತಾಂಶದಿಂದ ಸರ್ಕಾರವು ಅಸಂಘಟಿತ ಕಾರ್ಮಿಕರ ವಿವಿಧ ವರ್ಗದವರಿಗೆ ವಿಶೇಷ ನೀತಿ ನಿಯಮ ಯೋಜನೆ ರೂಪಿಸಲು ಸಾಧ್ಯ, ಅಸಂಘಟಿತ ಕಾರ್ಮಿಕರು ನೊಂದಣಿ ಮಾಡಿಕೊಳ್ಳುವುದರಿಂದ ಶೀಘ್ರದಲ್ಲಿಯೇ ಸರ್ಕಾರದ ಹಲವು ಯೋಜನೆಗಳನ್ನು ಪಡೆಯಬಹುದಾಗಿದೆ ಅಲ್ಲದೇ ನೊಂದಾಯಿಸಿದವರಿಗೆ 1 ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಪಿ. ಗಣಪತಿ ಭಟ್ (61ವರ್ಷ) ಅವರು ಭಾನುವಾರ ನಿಧನರಾಗಿದ್ದಾರೆ. ದಕ್ಷಿಣಕನ್ನಡದ ಪುತ್ತೂರು ತಾಲೂಕಿನ ಪಾದೆಕಲ್ಲಿನವರಾದ ಪಿ. ಗಣಪತಿ ಭಟ್ ಉಡುಪಿಯ ಮಹಾತ್ಮಗಾಂಧಿ ಕಾಲೇಜು, ಕಲ್ಯಾಣಪುರದ ಮಿಲಾಗ್ರೀಸ್ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಅವರು, ಮೂಲ್ಕಿಯ ವಿಜಯ ಕಾಲೇಜಿನಲ್ಲಿ ಖಾಯಂ ಉಪನ್ಯಾಸಕರಾಗಿ ನೇಮಕಗೊಂಡರು. ಬಳಿಕ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ಎಂ.ಫಿಲ್ ಪದವಿಯನ್ನು ಮುಗಿಸಿದ್ದರು. ಅವರು ಪುತ್ರ ನವೀನ, ಮಗಳು ಶ್ರೀರಕ್ಷಾ, ಪತ್ನಿ ಮತ್ತು ಕುಟುಂಬವನ್ನು ಅಗಲಿದ್ದಾರೆ. ಅವರು ಪಾದೆಕಲ್ಲು ವಿಷ್ಣುಭಟ್ ಅವರ ಸಹೋದರಾಗಿದ್ದರು.
