Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯವು ಇಂದಿನಿಂದ (ಸೆಪ್ಟಂಬರ್ 15) 45 ದಿನಗಳ ಕಾಲ ನಡೆಯಲಿದ್ದು, ಸಮೀಕ್ಷಾ ಕಾರ್ಯದಲ್ಲಿ ಯಾವುದೇ ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಲ್ಲಿ ಬಿಟ್ಟು ಹೋಗದಂತೆ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಮೀಕ್ಷಾದಾರರಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಬೇಸ್ ಲೈನ್ ಸರ್ವೇ ನಡೆಸುವ ಕುರಿತು ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಮುಂದಿನ ದಿನಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಲಭ್ಯವಿರುವ ಯೋಜನೆ ಹಾಗೂ ಸವಲತ್ತುಗಳನ್ನು ಸೂಕ್ತ ರೀತಿಯಲ್ಲಿ ತಲುಪಿಸಲು ಹಾಗೂ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಲು ಈ ಸಮೀಕ್ಷೆಯು ಅನುಕೂಲವಾಗಲಿದೆ ಎಂದರು. ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಯು ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ,…

Read More

ಕುಂದಾಪ್ರ ಡಾಟ್‌ ಕಾಂಸುದ್ದಿ.ಕೋಟ: ಧ್ವನಿ ವರ್ಧಕ ಬಳಕೆಯ ಕಾರಣಕ್ಕೆ ಯಕ್ಷಗಾನ ಮೇಳಗಳ ಪ್ರದರ್ಶನಕ್ಕೆ ಅಡ್ಡಿಯಾಗುತ್ತಿರುವ ಪ್ರಸಂಗಗಳು ಎದುರಾಗುತ್ತಿರುವುದರಿಂದ ಬಡಗುತಿಟ್ಟಿನ ಬಹುತೇಕ ಮೇಳಗಳ ಯಜಮಾನರು, ಮುಖ್ಯಸ್ಥರು ರವಿವಾರ ಕೋಟ ಈ ಅಮೃತೇಶ್ವರೀ ದೇಗುಲದಲ್ಲಿ ಸಭೆ ನಡೆಸಿ ಪರಿಹಾರ ಸೂತ್ರಗಳ ಬಗ್ಗೆ ಭಾನುವಾರ ಚರ್ಚಿಸಿದರು. ಕೋಟದ ಶ್ರೀ ಅಮೃತೇಶ್ವರೀ ಯಕ್ಷಗಾನ ಮೇಳದ ಯಜಮಾನರಾದ ಆನಂದ್ ಸಿ. ಕುಂದರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲ ತಿರ್ಮಾನಗಳನ್ನು ಕೈಗೊಳ್ಳಲಾಯಿತು. ಈ ಬಗ್ಗೆ ವಿವಿಧ ಮೇಳಗಳ ಯಜಮಾನರಾದ ಮಂದಾರ್ತಿ ಧನಂಜಯ ಶೆಟ್ಟಿ ಅಮೃತೇಶ್ವರಿ ಮೇಳದ ಯಜಮಾನರಾದ ಆನಂದ ಸಿ. ಕುಂದರ್, ಮಾರಣಕಟ್ಟೆ ಮೇಳದ ಸದಾಶಿವ ಶೆಟ್ಟಿ, ರಘುರಾಮ್ ಶೆಟ್ಟಿ ಮಡಾಮಕ್ಕಿ ಮೇಳದ ಶಶಿಧರ ಶೆಟ್ಟಿ, ಹಾಲಾಡಿ ಮೇಳದ ಅಮರನಾಥ ಶೆಟ್ಟಿ ಗೋಳಿಗರಡಿ ಮೇಳದ ವಿಟ್ಠಲ ಪೂಜಾರಿ, ಆಜ್ರಿ ಮೇಳದ ಅಶೋಕ್ ಶೆಟ್ಟಿ ತಮ್ಮ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಪಿ. ಕಿಶನ್ ಹೆಗ್ಡೆ ಮಾತನಾಡಿ, ರಾತ್ರಿ ವೇಳೆ ಧ್ವನಿವರ್ಧಕ ಬಳಕೆಗೆ ಅನುಮತಿ ನಿರಾಕರಿಸಿ ಪ್ರದರ್ಶನವನ್ನು ಸ್ಥಗಿತಗೊಳಿಸುವ ಪ್ರಸಂಗಗಳು ಅಲ್ಲಲ್ಲಿ ನಡೆಯುತ್ತಿದೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ತಾಲ್ಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಜಿ.ಎಸ್.ಬಿ. ಮಹಿಳಾ ಮಂಡಳಿ, ಪುತ್ತೂರು ಇವರ ಸಹಯೋಗದಲ್ಲಿ ಆದಿತ್ಯವಾರದಂದು ಕೊಂಕಣಿ ರಂಗ ತರಂಗ ಮತ್ತು ಸಾಹಿತ್ಯ ಸಂಭ್ರಮ-3 ಕಾರ್ಯಕ್ರಮವನ್ನು ಪುತ್ತೂರಿನ ಸುಕ್ರತೀಂದ್ರ ಕಲಾಮಂದಿರದಲ್ಲಿ ಜರುಗಿತು. ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಧರ್ಮದರ್ಶಿ ವ್ಯವಸ್ಥಾಪಕರಾದ ಡಾ. ಆಶೋಕ್ ಪ್ರಭು ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ʼಪ್ರಸ್ತುತ ಕಾಲದಲ್ಲಿ ಕೊಂಕಣಿ ಭಾಷೆಯನ್ನು ಬಳಸುವುದು ಕಡಿಮೆಯಾಗುತ್ತಿದೆ. ಆದ್ದರಿಂದ ಕೊಂಕಣಿ ಮಾತಾನಾಡುವುದನ್ನು ಮನೆಯಿಂದಲೇ ಪ್ರಾರಂಭಿಸಬೇಕು. ಆಗ ಮಾತ್ರ ಕೊಂಕಣಿ ಭಾಷೆಯನ್ನು ಬೆಳೆಸಬಹುದುʼ ಎಂದರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಆಲ್ವಾರಿಸ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಕರ್ನಾಟಕ ಸರ್ಕಾರವು ಸಾಹಿತ್ಯ, ಕಲೆ, ಜಾನಪದ ಕ್ಷೇತ್ರದ ಬೆಳವಣಿಗಾಗಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಚನೆ ಮಾಡಿದೆ. ಅಕಾಡೆಮಿಯು ಜನರ ಹತ್ತಿರ ಹೋಗಿ, ಜನರಿಗೆ ಅಕಾಡೆಮಿಯ ಬಗ್ಗೆ ಪರಿಚಯಿಸಿ ಸಾಹಿತ್ಯ, ಕಲೆ, ಜಾನಪದ ಕ್ಷೇತ್ರದಲ್ಲಿ ದುಡಿದವರನ್ನು ಹತ್ತಿರ ತರಲು ಪ್ರಯತ್ನಿಸುತ್ತಿದೆʼ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕುಂದಾಪುರ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಇವರ ಸಂಯುಕ್ತಾಶ್ರಯದಲ್ಲಿ ನಡೆದ, ಕುಂದಾಪುರ  ತಾಲೂಕು ಮಟ್ಟದ 17ರ ವಯೋಮಾನದ ಬಾಲಕರ ಫುಟ್ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು  ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ, ಹಾಗೂ ಸೈಂಟ್ ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಕಾರ್ಕಳ ತಾಲೂಕು ತಂಡವನ್ನು ಪ್ರತಿನಿಧಿಸಿ, ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.  ವಿದ್ಯಾರ್ಥಿನಿಯಾರಾದ ಮಾನಸ ವಿ. ನಾಯಕ್, ಹರ್ಷಿತ ವಿ. ನಾಯಕ್, ಆದ್ಯ ಎಸ್. ಪಡ್ರೆ, ಆರುಷಿ, ಪೂರ್ವಿ ಎಸ್. ಕಡಕೋಲ್ಮಠ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜೇತ ವಿದ್ಯಾರ್ಥಿನಿಯರ ಸಾಧನೆಗೆ ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳು ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಸಹಕಾರಿಯಾಗಿದೆ, ಅವರ ವಿಚಾರಧಾರೆಗಳು ಸಾರ್ವಕಾಲೀಕ ಶ್ರೇಷ್ಠವಾಗಿದ್ದು, ಜನರು ತಮ್ಮ ಜೀವನದಲ್ಲಿ ಅದನ್ನು ಅಳವಡಿಸಿಕೊಂಡಾಗ ಸಾರ್ಥಕವಾಗುತ್ತಾರೆ ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಅವರು ಭಾನುವಾರ ಇಲ್ಲಿನ ಜೆ.ಎನ್.ಆರ್ ಸಭಾಭವನದಲ್ಲಿ ಬೈಂದೂರು ಕ್ಷೇತ್ರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬೈಂದೂರು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಶಿವರಾಜ ಪೂಜಾರಿ ಗೋಳಿಹೊಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾರಾಯಣಗುರುಗಳು ಶೋಷಿತ ಸಮಾಜದ ಏಳಿಗೆಗಾಗಿ ದುಡಿದ ಮಾಹನ್ ದಾರ್ಶನಿಕರಾಗಿದ್ದರು. ಅವರ ವಿಚಾರಧಾರೆಗಳನ್ನು ಯುವ ಪಿಳಿಗಿಗೆ ತಲುಪಿಸಬೇಕು ಎಂಬ ಹಿನ್ನೆಲೆಯಲ್ಲಿ ಅವರ ಜನ್ಮ ಜಯಂತಿಯನ್ನು ವಿಶಿಷ್ಠವಾಗಿ ಆಚರಿಸಲಾಗಿದೆ ಎಂದರು. ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷೆ ಅನಿತಾ ಆರ್.ಕೆ, ಪ್ರಧಾನಕಾರ್ಯದರ್ಶಿಗಳಾದ ಕರುಣ್ ಪೂಜಾರಿ, ಗೋಪಾಲ ಪೂಜಾರಿ, ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕೊಠಾರಿ, ಜಿಲ್ಲಾ ಹಿಂದುಳಿದ ಮೋರ್ಚಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಭಾಷೆಯೆನ್ನುವುದು ಬರಿ ಕಲಿಕೆಯಲ್ಲ ಅದೊಂದು ಸಂವಹನ ಮಾಧ್ಯಮ ಈ ದಿಸೆಯಲ್ಲಿ ರಾಷ್ಟ್ರೀಯ ಹಿಂದಿ ದಿನಾಚರಣೆ ಪ್ರಯುಕ್ತ ಮದರ್ ತೆರೆಸಾ ಮೆಮೋರಿಯಲ್  ಸ್ಕೂಲ್ ಶಂಕರನಾರಾಯಣದಲ್ಲಿ ಹಿಂದಿ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಉತ್ತಮವಾದ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳು ಹಾಗೂ ಆಡಳಿತ ಮಂಡಳಿಯವರು ಹಾಗೂ ಶಾಲಾ ಸಂಸತ್ತಿನ ಸದಸ್ಯರಾದ ವಿದ್ಯಾರ್ಥಿಗಳು ದೀಪಾರಾದನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಚಾಲನೆ ನೀಡಿದರು. ವಿದ್ಯಾರ್ಥಿಗಳು ಹಿಂದಿ ಭಾಷೆಯ ಮಹತ್ವವನ್ನು ಸಾರುವ ವಿವಿಧ ರೀತಿಯ ನಾಟಕ ನೃತ್ಯ ಪ್ರಹಸನಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮಕ್ಕೆ ಅರ್ಥಪೂರ್ಣವಾದ ಮೆರುಗನ್ನು ನೀಡಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿರುವ ಹಿಂದಿ ಭಾಷಾ ಶಿಕ್ಷಕಿ ನಯನ ಕಾಮತ್ ಅವರು ವಿದ್ಯಾರ್ಥಿಗಳ ಪ್ರತಿಭೆಯನ್ನು ಶ್ಲಾಘಿಸುವುದರೊಂದಿಗೆ, ಮಕ್ಕಳ ಹಿಂದಿ ಸಂವಹನವನ್ನು ಗುರುತಿಸಿ ಪ್ರಶಂಸಿಸಿದರು. ಬರಿ ಭಾಷೆಗಳಷ್ಟೇ ಜೀವನವಲ್ಲ ಬದಲಾಗಿ ಭಾಷೆಯ ಜೊತೆಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಎಂಬುದನ್ನು ಕಥೆಯ ಮೂಲಕ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ತಿಳಿಸಿದರು. ಹಾಗೂ ತಾವು ಸೇವೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ. ಬಿ ಬಿ. ಹೆಗ್ಡೆ ಕಾಲೇಜು ಇದರ ರೋವರ್ಸ್ & ರೇಂಜರ್ಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಕಾಲೇಜಿನ ಎ. ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ ಸದಸ್ಯರಾದ ಶ್ರೀ ಸುಬ್ರಮಣ್ಯ ಶೆಟ್ಟಿಯವರು ಉದ್ಘಾಟಕರಾಗಿ ಆಗಮಿಸಿ ಸ್ವಯಂ ಸೇವಕ ಜವಾಬ್ದಾರಿ ಹಾಗೂ ಸೇವೆಯ ಮಹತ್ವ ದ ಕುರಿತು ತಿಳಿಸಿದರು. ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಬಿಸಿ ಟ್ರಸ್ಟ್ ಇದರ ಕಾರ್ಯಕ್ರಮ ಅಧಿಕಾರಿಗಳಾದ ಉಮೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿ, ರೇಂಜರ್ ಲೀಡರ್ ಜೋಸ್ಲಿನ್ ರೇನಿಟಾ ಅಲ್ಮೆಡಾ ನಿರೂಪಿಸಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮನುಷ್ಯನಿಗೆ ಕಣ್ಣು ಅತ್ಯವಶ್ಯಕ. ಕಣ್ಣಿನ ತೊಂದರೆ ಬರುವ ತನಕ ಕಾಯದೆ ಕಾಲ ಕಾಲಕ್ಕೆ ಕಣ್ಣುಗಳನ್ನು ತಪಾಸಣೆ ಮಾಡಿಸಬೇಕು. ಕಣ್ಣಿನ ದೋಷಗಳ ಬಗ್ಗೆ ನಿರ್ಲಕ್ಷ್ಯ ಮಾಡಬಾರದು. ನಿಯಮಿತ ಆಹಾರ, ತಪಾಸಣೆ ಹಾಗೂ ಚಿಕಿತ್ಸೆ ಇವುಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ಮರಣಾನಂತರ ಕಣ್ಣುಗಳನ್ನು ದಾನ ಮಾಡಲು ಮುಂದಾಗಬೇಕು. ಆ ಮೂಲಕ ಇನ್ನೊಬ್ಬರ ಬಾಳಿನಲ್ಲಿ ಬೆಳಕಾಗಬೇಕು ಎಂದು ತ್ರಾಸಿ ಕ್ರೈಸ್ಟ್ ಕಿಂಗ್ ಚರ್ಚ್‌ನ ಧರ್ಮಗುರು ರೋಜಾರಿಯೊ ಫೆರ್ನಾಂಡಿಸ್ ಹೇಳಿದರು. ಅವರು ರೋಟರಿ ಕ್ಲಬ್ ಗಂಗೊಳ್ಳಿ, ಗ್ರಾಮ ಪಂಚಾಯತ್ ತ್ರಾಸಿ, ಕ್ರೈಸ್ಟ್ ಕಿಂಗ್ ಚರ್ಚ್ ತ್ರಾಸಿ ಆರೋಗ್ಯ ಆಯೋಗ, ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಮತ್ತು ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ತ್ರಾಸಿ ಮಿಲೇನಿಯಂ ಹಾಲ್‌ನಲ್ಲಿ ಭಾನುವಾರ ನಡೆದ ನೇತ್ರ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಡಿ.ಬಿಜೂರು ಮತ್ತು ಕ್ರೈಸ್ಟ್ ಕಿಂಗ್ ಚರ್ಚ್ ತ್ರಾಸಿ…

Read More