Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಡಾಮಕ್ಕಿಯ ದೇವಸ್ಥಾನವೊಂದರ ವಾಟ್ಸಪ್ ಗ್ರೂಪಿನಲ್ಲಿ ಮಹಿಳೆಯ ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದ ಗ್ರಾ.ಪಂ ಸದಸ್ಯನೋರ್ವನ ವಿರುದ್ಧ ದೂರು ದಾಖಲಾಗಿದೆ. ಮಡಮಕ್ಕಿ ಗ್ರಾಮದ ದೇವಳವೊಂದರ ವಾಟ್ಸಪ್ ಗ್ರೂಪಿನಲ್ಲಿ ಗ್ರಾಮದ ಪ್ರಮುಖ ವ್ಯಕ್ತಿಗಳು ಹಾಗೂ ಮಹಿಳೆಯರು ಇದ್ದುದ್ದರಿಂದ ಗ್ರಾಮ ಪಂಚಯತ್ ಸದಸ್ಯ ಹಾಕಿರುವ ಪೊಸ್ಟ್ ನಿಂದ ಎಲ್ಲರಿಗೂ ಮುಜುಗರ ಉಂಟಾಗಿರುವ ಬಗ್ಗೆ ಗ್ರಾಮಸ್ಥರು ಅಕ್ರೋಶ ವ್ಯಕ್ತ ಪಡಿದ್ದರು. ಕೆಲವರು ಹಾಕಿರುವ ಪೊಸ್ಟ್ ಡಿಲೀಟ್ ಮಾಡಲು ವಿನಂತಿಸಿದರೂ ಕೂಡ ಡಿಲೀಟ್ ಮಾಡದ ಹಿನ್ನಲೆಯಲ್ಲಿ ಮಡಮಕ್ಕಿ ಗ್ರಾಮಸ್ಥರೋರ್ವರು ಉಡುಪಿಯ ಸೆನ್ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೆನ್ ಪೊಲೀಸರು ಗ್ರಾಮ ಪಂಚಯತ್ ಸದಸ್ಯನ ವಿಚಾರಣೆ ನಡೆಸಿದ್ದು, ತನ್ನ ಕೈ ತಪ್ಪಿನಿಂದ ಅಶಿಲ್ಲ ಚಿತ್ರ ವಾಟ್ಸಪ್ ಗ್ರೂಪಿನಲ್ಲಿ ಶೇರ್ ಅಗಿದ್ದು , ಈ ಬಗ್ಗೆ ಗ್ರಾಮಸ್ಥರಲ್ಲಿ ಕ್ಷಮೆಯಾಚಿಸುವುದಾಗಿ ಠಾಣೆಯಲ್ಲಿ ಲಿಖಿತ ರೂಪದಲ್ಲಿ ಸ್ಪಷ್ಟೀಕರಣವನ್ನು ನೀಡಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಗಡಿ ಭದ್ರತಾ ಪಡೆಗೆ ನೇಮಕಗೊಂಡು ತರಬೇತಿ ಪಡೆಯುತ್ತಿರುವ ಏಳಜಿತ ಗ್ರಾಮದ ವಿದ್ಯಾ ಗೌಡ ಅವರನ್ನು ಇತ್ತಿಚಿಗೆ ಏಳಜಿತ ಶ್ರೀ ರಾಮಕೃಷ್ಣ ಕುಟೀರದ ವತಿಯಿಂದ ಸನ್ಮಾನಿಸಲಾಯಿತು. ಏಳಜಿತ ಶ್ರೀ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಅಪಾರ ಪ್ರತಿಭೆ ಹಾಗೂ ಆತ್ಮಸ್ಥ್ಯೆರ್ಯ ಇರುತ್ತದೆ ಎಂಬುದಕ್ಕೆ ವಿದ್ಯಾ ಗೌಡ ಬಿಎಸ್‌ಎಫ್‌ಗೆ ಆಯ್ಕೆಯಾಗಿರುವುದೇ ಸಾಕ್ಷಿ. ಬದುಕಿನಲ್ಲಿ ಏನಾನ್ನಾದರೂ ಸಾಧಿಸಬೇಕೆಂಬ ಛಲವಿದ್ದರೆ, ಅದನ್ನು ಸಾಧಿಸಲು ಭಗವಂತ ಯಾವುದಾದರೂ ರೂಪದಲ್ಲಿ ಸಹಕರಿಸುತ್ತಾನೆ ಎಂದರು. ಶ್ರೀಮದ್ಭಗವದ್ಗೀತಾ ಆಚರಣಾ ಸಮಿತಿ ಉಡುಪಿ ಜಿಲ್ಲಾಧ್ಯಕ್ಷ ಬಿ. ರಾಮಕೃಷ್ಣ ಶೇರುಗಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ರಾಮಕೃಷ್ಣ ಕುಟೀರದ ಮೂಲಕ ಹಲವಾರು ವಿದ್ಯಾರ್ಥಿಗಳು ಇಂದು ಉನ್ನತ ವ್ಯಾಸಂಗವನ್ನೂ ಪೂರೈಸಿರುವುದು ಗಮನಾರ್ಹ ಸಾಧನೆ. ವಿದ್ಯಾರ್ಥಿ ವೇತನ ಪಡೆದು ಉತ್ತಮ ಶಿಕ್ಷಣ ಉದ್ಯೋಗ ಪಡೆದುಕೊಳ್ಳುವುದರ ಜತೆಗೆ ಇತರರಿಗೂ ಸಹಕಾರ ಮಾಡುವ ಗುಣ ಬೆಳಸಿಕೊಂಡಾಗ ಸಮಾಜದ ಎಲ್ಲರಿಗೂ ಶಿಕ್ಷಣ ದೊರೆಯಲಿದೆ ಎಂದರು. ಈ ಸಂದರ್ಭ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಕುಂದಾಪುರದ ಚಿಕ್ಕಮ್ಮನಸಾಲ್ ರಸ್ತೆಯ ಶ್ರೀ ಚಿಕ್ಕಮ್ಮದೇವಿ ದೇವಸ್ಥಾನದ ವಠಾರದಲ್ಲಿ ಡಿ.18 ರಂದು ನಿರ್ಮಲ ದೇಗುಲ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಶ್ರಮದಾನದ ಮಹತ್ವವನ್ನು ತಿಳಿಸಿದರು. ಶ್ರೀ ಚಿಕ್ಕಮ್ಮದೇವಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ನಾಗೇಶ್ ಎಮ್.ಪುತ್ರನ್, ಸುರೇಂದ್ರ ಸಂಗಮ್, ಸಂಗಮ್ ಫ್ರೆಂಡ್ಸ್ನ ಸದಸ್ಯರು, ದೇವಾಲಯ ಅರ್ಚಕರಾದ ಶ್ರೀ ಕೃಷ್ಣಮೂರ್ತಿ ಅಡಿಗ, ಕಾಲೇಜಿನ ಎನ್.ಎಸ್.ಎಸ್ ಘಟಕದ ಯೋಜನಾಧಿಕಾರಿ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಭೋಧಕ & ಭೋದಕೇತರರು ಉಪಸ್ಥಿತರಿದ್ದರು. ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸ್ವಚ್ಚತಾ ಕಾರ್ಯದಲ್ಲಿ ಎನ್.ಎಸ್.ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ (ಸಿ. ಬಿ. ಎಸ್. ಇ.) ಕೋಡಿ ಕುಂದಾಪುರ ಇಲ್ಲಿ ದಿನಾಂಕ 18-12-2021 ಶನಿವಾರದಂದು 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಂಕಿ ರಹಿತ ಅಡುಗೆ ಸ್ಪರ್ಧೆಯನ್ನು ವಿದ್ಯಾರ್ಥಿಗಳೆಲ್ಲರೂ ಬಹಳ ಉತ್ಸಾಹದಿಂದ ಪಾಲ್ಗೊಂಡು ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ಪ್ರದರ್ಶಿಸಿದರು. ಒಂದೊಂದು ತಂಡದಲ್ಲಿ 2 ಸ್ಪರ್ಧಿಗಳ ಹಾಗೆ ಒಟ್ಟು32 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಅಧ್ಯಕ್ಷರಾದ ಅಬ್ದುಲ್ ರೆಹಮಾನ್, ನಿರ್ದೇಶಕರಾದ ದೋಮ ಚಂದ್ರಶೇಖರ್ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಪ್ರಶಂಶಿಸಿದರು. ಪ್ರಾಂಶುಪಾಲರಾದ ಅಶ್ವಿನಿ ಶೆಟ್ಟಿ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ| ಶಿವರಾಮ ಕಾರಂತ ಪ್ರತಿಷ್ಠಾನ(ರಿ)ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ|| ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ನಡೆಯುವ ಉಡುಪಿ ಜಿಲ್ಲೆಯ ಶಿಕ್ಷಕರ ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ ನಾವಿಕ-೨೦೨೧ (ತೀರದ ಹೆಜ್ಜೆಯ ಸಾಲು) ಸಮ್ಮೇಳನಾಧ್ಯಕ್ಷರಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಸುರೇಶ್ ಮರಕಾಲ ಸಾಬ್ರಕಟ್ಟೆ ಅವರು ಆಯ್ಕೆ ಆಗಿದ್ದಾರೆ. ರಾಷ್ಟ್ರ ಪ್ರಶಸ್ತಿ ಪಡೆದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಹುಟ್ಟು ಹಾಕಿದ ಶ್ರೀಸುರೇಶ್ ಮರಕಾಲ ಅವರು ಬಹುಮುಖ ಪ್ರತಿಭೆ. ಶಿಕ್ಷಣದ ಜೊತೆಗೆ ಮಕ್ಕಳಿಗೆ ಮಕ್ಕಳ ಬೌದ್ದಿಕ ವಿಕಸನಕ್ಕೆ ಸಹಕಾರವಾಗಬಲ್ಲ ಶಾಡೋಪ್ಲೇ, ಕನ್ನಡಿ ಬರಹ, ಪಿಯಾನೋ ಕೀಬೋರ್ಡ್ ಕಲಿಕೆ, ನಾಟಕಾಭಿನಯ, ಥರ್ಮೋಫೋಮ್, ಪೇಪರ್ ಕ್ರಾಫ್ಟ್ ಕಾರ್ಯಾಗಾರ, ತೋಟಗಾರಿಕ ಶಿಕ್ಷಣ, ಪ್ಲಂ ಬಿಂಗ್ ಶಿಕ್ಷಣ, ಚಿತ್ರಕಲೆ, ಗೋಡೆ ಪೈಟಿಂಗ್ ಸಂಗೀತ ಇಂತಹ ಹಲವಾರು ವಿಷಯಗಳನ್ನು ಮಕ್ಕಳಿಗಾಗಿ ಪ್ರಸ್ತುತ ಪಡಿಸಿದ್ದಾರೆ. ಉತ್ತಮ ಸಾಹಿತಿಯೂ ಆಗಿರುವ ಇವರ ಅನೇಕ ಕಥೆ ಕವನ ಲೇಖನಗಳು ರಾಜ್ಯದ ದಿನ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಕೋಟದ ಕಾರಂತ ಥೀಮ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜನರ ವಿಶ್ವಾಸ ಗಳಿಸುವುದರಲ್ಲಿ ಹಣಕಾಸು ಸಂಸ್ಥೆಗಳ ಯಶಸ್ಸು ಅಡಗಿದೆ. ಮೂರು ದಶಕದ ಇತಿಹಾಸ ಹೊಂದಿರುವ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಇಂದು ಜನರ ವಿಶ್ವಾಸ ಗಳಿಸಿ ಮುನ್ನಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ ಎಂದು ಕುಂದಾಪುರ ವಲಯ ಪ್ರಧಾನ ಧರ್ಮಗುರುಗಳಾದ ಅ| ವಂ| ಸ್ಟ್ಯಾನಿ ತಾವ್ರೊ ಹೇಳಿದರು. ಭಾನುವಾರ ಯಡ್ತರೆಯಲ್ಲಿ ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ ಇದರ ಬೈಂದೂರು ಶಾಖೆಯ ಸ್ವಂತ ಕಟ್ಟಡ ಉದ್ಘಾಟನೆ ಹಾಗೂ ಸ್ಥಳಾಂತರ ನೆರವೇರಿಸಿ ಮಾತನಾಡಿ ಸಂಸ್ಥೆಯ ಬೆಳೆಯುವುದರೊಂದಿಗೆ ಜನರಿಗೆ ನಗುಮೊಗದ ಸೇವೆ ನೀಡುವುದು ಅತಿ ಅಗತ್ಯ. ಮನೆಯಾಗಲಿ, ಸಂಸ್ಥೆಯಾಗಲಿ ಸ್ವಂತದ್ದಾಗಿರಲು ಎಲ್ಲರೂ ಬಯಸುತ್ತಾರೆ ಅದರಂತೆ ಬೈಂದೂರು ಶಾಖೆಯು 23 ವರ್ಷಗಳ ಬಳಿಕ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುತ್ತಿದೆ. ಇದರೊಂದಿಗೆ ಜನರಿಗೆ ಉತ್ತಮ ಸೇವೆ ನೀಡಲಿ ಎಂದರು. ಬೈಂದೂರು ಹೋಲಿ ಕ್ರಾಸ್ ಚರ್ಚ್ ಧರ್ಮಗುರುಗಳಾದ ವಂ| ವಿನ್ಸೆಂಟ್ ಕುವೆಲ್ಲೋ ಆಶೀರ್ವದಿಸಿ, ಹೊಸ ಕಟ್ಟಡ ನಿರ್ಮಾಣಗೊಳ್ಳುವುದರ ಜೊತೆಗೆ ಸಂಸ್ಥೆ ಈ ಭಾಗದಲ್ಲಿ ಮತ್ತಷ್ಟು ಖ್ಯಾತಿಗಳಿಸಲಿ, ಎಲ್ಲರ ಸಹಕಾರದಿಂದ…

Read More

ಸಾಧಿಸುವ ಶ್ರದ್ಧೆಯಿದ್ದರೆ ಸಾಧನೆ ಸಾಧ್ಯವಿದೆ: ಸದಾಶಿವ್ ಆರ್. ಗವರೋಜಿ ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಯ ಉದ್ಘಾಟನೆಗೊಂಡಿತು. ಕುಂದಾಪುರ ಪೋಲಿಸ್ ಉಪನಿರೀಕ್ಷಕರಾದ ಸದಾಶಿವ್ ಆರ್. ಗವರೋಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರಿಕ್ಷೀಕೆ ತರಬೇತಿ ಅಗತ್ಯವಾಗಿದ್ದು ಅದನ್ನು ಬಳಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರಿ ಪಡೆಯಿರಿ. ಒಳ್ಳೆಯ ಗುರಿ ನಿಮ್ಮದಿರಲಿ, ಅದನ್ನು ಸಾಧಿಸುವ ಶ್ರದ್ಧೆಯಿರಲಿ, ಖಂಡಿತ ನೀವು ಸಾಧಿಸುತ್ತಿರಿ ಎಂದರು. ನಂತರ ಮಾರತಹಳ್ಳಿ ಠಾಣಾ ಉಪನಿರೀಕ್ಷಕರಾದ ಅನಿತಾ ಕೆ. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿಯವರು ಮಾತನಾಡಿ ಎಸ್ಡಿಎ, ಎಫ್ಡಿಎ, ಬ್ಯಾಂಕಿಂಗ್ ಹುದ್ದೆಗಳು, ಪಿಡಿಓ, ಪೋಲಿಸ್ ಇಲಾಖೆ, ಅಂಚೆ ಇಲಾಖೆ, ಆರೋಗ್ಯ, ಹೀಗೆ ಎಲ್ಲಾ ತರಹದ ಸರ್ಕಾರಿ ಪರೀಕ್ಷೆಗಳನ್ನು ಎದುರಿಸುವ ತರಬೇತಿ ಇಲ್ಲಿ ನೀಡಲಾಗುತ್ತದೆ ಎಂದು ತಿಳಿಸಿದರು. ಸೃಷ್ಠಿ ಇನ್ಛೋಟೆಕ್ನ ರೂವಾರಿಗಳಾದ ಹರ್ಷವರ್ಧನ ಶೆಟ್ಟಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾಲೇಜಿನ ಬೋಧಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆ ಸ.ಹಿ.ಪ್ರಾ. ಶಾಲೆಯಲ್ಲಿ ಕಳೆದ 6 ವರ್ಷಗಳಿಂದ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ, ಕಂಚಿಕಾನು ಸ.ಹಿ.ಪ್ರಾ. ಶಾಲೆಗೆ ವರ್ಗಾವಣೆಗೊಂಡ ತಿಮ್ಮಪ್ಪ ಗಾಣಿಗ ಅವರನ್ನು ಶಾಲಾ ಎಸ್.ಡಿ.ಎಮ್.ಸಿ ,ಹಳೆ ವಿದ್ಯಾರ್ಥಿ ಸಂಘ, ಶಿಕ್ಷಕ ವೃಂದದ ವತಿಯಿಂದ ಸನ್ಮಾನಿಸಲಾಯಿತು. ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಪ್ರಭಾಕರ ಗಾಣಿಗ, ಉಪಾಧ್ಯಕ್ಷೆ ಸುಮತಿ ಮೊಗವೀರ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದು, ಶಾಲಾ ಶಿಕ್ಷಕ ವೃಂದ ಸೇರಿ ಗೌರವ ಪೂರ್ವಕವಾಗಿ ಸನ್ಮಾನಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವಸಂತ ಮೊಗವೀರ, ಕಾರ್ಯದರ್ಶಿ ಮಂಜುನಾಥ ಪೂಜಾರಿ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದು ಸನ್ಮಾನಿಸಿದರು. ಶಾಲಾ ಶಿಕ್ಷಕ ವೃಂದ ಮತ್ತು ಅಂಗನವಾಡಿ ಕಾರ್ಯಕರ್ತೆಯರು ನೆನಪಿನ ಕಾಣಿಕೆಯನ್ನು ನೀಡಿದರು. ತಿಮ್ಮಪ್ಪ ಗಾಣಿಗರು ಸನ್ಮಾನಿತರ ಭಾಷಣದಲ್ಲಿ ತನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ, ಶಾಲೆಗೆ ಫ್ಯಾನ್ ನ್ನು ಕೊಡುಗೆಯಾಗಿ ನೀಡಿದರು. ಹಿರಿಯರಾದ ಹನುಮಂತ ಶೇರುಗಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಮತ್ತು ಹಳೆವಿದ್ಯಾರ್ಥಿಗಳು ಸನ್ಮಾನಿತರ ಬಗ್ಗೆ ಅನಿಸಿಕೆ ಹೇಳಿದರು. ಎಸ್.ಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದ ಗ್ರಾಮೀಣ ಹವಾಮಾನ ಸೇವಾ ಯೋಜನೆ ಹಾಗೂ ಶ್ರೀ ಮೂಕಾಂಬಿಕಾ ಆತ್ಮ ರೈತರ ಸಂಘ ಗೋಳಿಹೊಳೆ ವತಿಯಿಂದ ಗೋಳಿಹೊಳೆ ಗ್ರಾಮದಲ್ಲಿ ರೈತರಿಗೆ ಹವಾಮಾನ ಬದಲಾವಣೆ ಮತ್ತು ಕೃಷಿ ಕುರಿತಾದ ರೈತ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಬ್ರಹ್ಮಾವರದ ಸಹ ಸಂಶೋಧನಾ ನಿರ್ದೇಶಕರಾದ ಡಾ. ಲಕ್ಷ್ಮಣ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಹವಾಮಾನದಿಂದ ಕೃಷಿಯಲ್ಲಿ ಅನೇಕ ರೀತಿಯ ತೊಂದರೆಗಳು ಎದುರಾಗುತ್ತಿರುವುದನ್ನು ನಾವೆಲ್ಲರೂ ಗಮನಿಸುತ್ತಿದ್ದೇವೆ ಇದರ ಪರಿಣಾಮವಾಗಿ ರೈತರು ನಷ್ಟವನ್ನು ಅನುಭವಿಸುತ್ತಿದ್ದಾರೆ. ಈ ರೀತಿಯ ನಷ್ಟಗಳನ್ನು ಹಿಮ್ಮೆಟ್ಟಿ ಕೃಷಿಯಲ್ಲಿ ಲಾಭ ಗಳಿಸಬೇಕೆಂದರೆ ರೈತರು ಕೃಷಿಯಲ್ಲಿ ಲಭ್ಯವಿರುವ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕು ಹಾಗೂ ಹವಾಮಾನ ವೈಪರೀತ್ಯದಿಂದ ಗೇರು ಬೆಳೆಯಲ್ಲಿ ಆಗುವ ನಷ್ಟವನ್ನು ತಪ್ಪಿಸಲು ರೈತರು ಪಾಲಿಸಬೇಕಾದ ಕೃಷಿ ಚಟುವಟಿಕೆಗಳನ್ನು ಸಂಕ್ಷಿಪ್ತವಾಗಿ ತಿಳಿಸಿದರು. ಮೇಘಧೂತ್ ತಾಂತ್ರಿಕ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಕೃಷಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸದುದ್ಧೇಶದಿಂದ ಕಾರ್ಯಕ್ರಮಕ್ಕೆ ಮುಂದಡಿ ಇಟ್ಟರೆ ಕಾರ್ಯಗಳು ಸಂಪನ್ನವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಯಶಸ್ವಿ ಕಲಾವೃಂದ ಕೊಮೆ ತೆಕ್ಕಟ್ಟೆಯ ಯಶಸ್ವಿ-25ಬೆಳ್ಳಿ ಹಬ್ಬದ ಆಚರಣೆಗಾಗಿ ಈಗಾಗಲೇ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುವ ನಿಟ್ಟಿನಲ್ಲಿ ಸಾಲಿಗ್ರಾಮ ಮೇಳ ಹಾಗೂ ಅತಿಥಿ ಕಲಾವಿದರ ಅಟ್ಟಣಿಗೆ ಯಕ್ಷಗಾನವನ್ನು ಏರ್ಪಡಿಸಿ ಅಸಾಧಾರಣ ಸಾಧನೆಗೆ ನಾಂದಿ ಹಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ಉದ್ಯಮಿ ಕೃಷ್ಣಮೂರ್ತಿ ಮಂಜ ಹೇಳಿದರು. ಅವರು ಯಶಸ್ವಿ ಕಲಾವೃಂದದ ನೇತೃತ್ವದಲ್ಲಿ ಕುಂದಾಪುರ ನೆಹರೂ ಮೈದಾನದಲ್ಲಿ ಜರುಗಿದ ಸಾಲಿಗ್ರಾಮ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಧರ್ಮಾಧರ್ಮ ಸಂಘರ್ಷ ಯಕ್ಷಗಾನ ಕಾರ‍್ಯಕ್ರಮದಲ್ಲಿ ಹಿರಿಯ ಕಲಾವಿದ ರಾಜ್ಯ ಪ್ರಶಸ್ತಿ ಪುರಸ್ಕೃತ ತೀರ್ಥಳ್ಳಿ ಗೋಪಾಲ ಆಚಾರ್ ಇವರನ್ನು ಸನ್ಮಾನಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಲ್ಯಾಡಿ ಶಿವರಾಮ ಶೆಟ್ಟಿ, ರಮೇಶ್ ರಾವ್ ಪಾಂಡೇಶ್ವರ, ಸಂಘಟಕ ರಾಮಕೃಷ್ಣ ಹೇರ್ಳೆ, ಜನಾರ್ಧನ ಹಂದೆ, ಪಂಚ ಮೇಳಗಳ ಯಜಮಾನ ಕಿಶನ್ ಹೆಗ್ಡೆ, ಕೈಲಾಸ ಕಲಾಕ್ಷೇತ್ರದ ಅಧ್ಯಕ್ಷ ಕೊಕೂರು ಸೀತಾರಾಮ…

Read More