Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೆಲವು ದಿನಗಳಲ್ಲಿ ಶಾಲಾ ಕಾಲೇಜುಗಳು ಆರಂಭವಾಗಲಿದ್ದು, ಗ್ರಾಮೀಣ ಭಾಗಕ್ಕೆ ಕೆಎಸ್‌ಆರ್‌ಟಿಸಿ ಬಸ್ ಬಿಟ್ಟಿಲ್ಲ. ಕೆಎಸ್‌ಆರ್‌ಟಿಸಿ ನಡೆಸುವುದು ಲಾಭ ನಷ್ಟದ ದೃಷ್ಟಿಯಿಂದಲ್ಲ. ಶಾಲಾ ಕಾಲೇಜ್ ಆರಂಭಕ್ಕೂ ಮುನ್ನಾ ಎಲ್ಲಾ ಗ್ರಾಮೀಣ ಭಾಗಗಳಿಗೆ ಬಸ್ ಹೋಗಬೇಕು. ಗ್ರಾಮೀಣ ಭಾಗಕ್ಕೆ ಬಸ್ ಬಿಡದಿದ್ದರೆ ವಿದ್ಯಾರ್ಥಿಗಳ ಜೊತೆಗೆ ಡಿಪೋ ಮುಂದೆ ಧರಣಿ ಕೂರುವುದಾಗಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹೇಳಿದರು. ಅವರು ಕುಂದಾಪುರ ತಾಲೂಕು ಪಂಚಾಯಿತಿ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಕುಂದಾಪುರ ಹಾಗೂ ಬೈಂದೂರು ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಮಳೆಗಾಲ ಆರಂಭಕ್ಕೆ ಕ್ಷಣಗಣನೆ ಶುರುವಾಗಿದ್ದು, ಆದಷ್ಟು ಬೇಗೆ ಎಲ್ಲಾ ಕಾಮಗಾರಿ ಮುಗಿಸಬೇಕು. ರಸ್ತೆಗಳ ಅಭಿವೃದ್ಧಿಗಾಗಿ ಬೈಂದೂರು ಕ್ಷೇತ್ರಕ್ಕೆ ಸರ್ಕಾರ 600 ಕೋಟಿ ಕೊಟ್ಟಿದೆ. ಬಿಲೋ ಟೆಂಡರ್ ಹಾಕಿ ಗುತ್ತಿಗೆ ಪಡೆದು ಕಳಪೆಯಾಗಿ ಕಾಮಗಾರಿ ನಿರ್ವಹಿಸಿದರೆ ಅದಕ್ಕೆ ಅಧಿಕಾರಿಗಳು ಹೊಣೆ. ಯಾವ ಕಾಮಗಾರಿ ಕಳಪೆಯಾದರೂ ಸಹಿಸೋದಿಲ್ಲ ಎಂದು ಎಚ್ಚರಿಸಿದ್ದಾರೆ. ವಿಧಾನಸಭಾ ಕ್ಷೇತ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ಶ್ರೀ ಮನ್ಮಹಾ ರಥೋತ್ಸವ, ರಥಾರೋಹಣ ಗುರುವಾರ ಬೆಳಿಗ್ಗೆ ಜರುಗಿತು. ಚಾರಿತ್ರಿಕ ಹಿನ್ನೆಲೆಯುಳ್ಳ ರಥೋತ್ಸವದಲ್ಲಿ ಊರ ಪರವೂರ ಭಕ್ತಸಮೂಹ ಪಾಲ್ಗೊಂಡು ಪುನೀತರಾದರು. ಕಲಾವೈಭವಗಳಿಂದ ಕಂಗೊಳಿಸುವ ದೇವಾಲಯ ಈ ಭಾರಿ ಮತ್ತಷ್ಟು ಅಲಂಕೃತಗೊಂಡಿದ್ದು, ವಾರ್ಷಿಕ ರಥೋತ್ಸವ ಇನ್ನಷ್ಟು ಮೆರಗನ್ನು ನೀಡಿತು. ಹಬ್ಬದ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಇಡಿ ನಗರವೇ ಸಜ್ಜಾಗಿದೆ. ಬೆಳಿಗ್ಗೆ ರಥೋತ್ಸವಕ್ಕೆ ಚಾಲನೆ ನೀಡಿದ್ದು, ಸಂಜೆಯ ವೇಳೆಗೆ ರಥವನ್ನು ರಥಬೀದಿಯಲ್ಲಿ ಏಳೆಯಲಾಗುತ್ತದೆ. ರಥಕ್ಕೆ ಗರ್ನಪಟ್ಟೆ ಕಟ್ಟಿದ ಹನ್ನೊಂದು ದಿನಗಳಿಗೆ ರಥೋತ್ಸವ ನಡೆಯುವುದೆಂಬ ಸೂಚನೆ ದೊರೆಯುತ್ತದೆ. ಒಟ್ಟು ಏಳು ದಿನಗಳ ಕಾಲ ನಡೆಯುವ ಉತ್ಸವವು ಧಾರ್ಮಿಕ ಕಾರ್ಯಗಳಿಂದ ಆರಂಭಗೊಳ್ಳುತ್ತದೆ. ಈ ಮಧ್ಯೆ ನಾಕಟ್ಟೆ ಉತ್ಸವ, ಪಡುವರಿ ಕಟ್ಟೆ ಉತ್ಸವ, ಬಂಕೇಶ್ವರ ಕಟ್ಟೆ ಉತ್ಸವ ನಡೆದ ಬಳಿಕ ರಥೋತ್ಸವ, ಅವಭೃಥೋತ್ಸವ ಕೊನೆಯಲ್ಲಿ ನಗರೋತ್ಸವ ನಡೆಯುತ್ತದೆ. ರಥೋತ್ಸವದ ಪೂರ್ವದಲ್ಲಿ ಮುಸ್ಲಿಂ ಭಾಂದವರನ್ನು ಆಹ್ವಾನಿಸುವ, ರಥೋತ್ಸವದ ಆರಂಭದಲ್ಲಿ ಬೈಂದೂರಿನ ಪೊಲೀಸ್ ಠಾಣಾಧಿಕಾರಿಯನ್ನು ಕರೆತಂದು ಚಾಲನೆ ದೊರಕಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರಾವಳಿ ಜಿಲ್ಲೆಯ ಮಾರಿಕಾಂಬಾ ದೇಗುಲಗಳಲ್ಲಿನ ಮಾರಿ ಜಾತ್ರೆಯಲ್ಲಿ ಕಂಡುಬರದ ಮನೆ ಮನೆಗೆ ಕೋಣ ಮೆರವಣಿಗೆ ಸಂಪ್ರದಾಯವೊಂದು ನೂರಾರು ವರ್ಷಗಳಿಂದ ಕೆಳಾಕಳಿ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ನಡೆಯುತ್ತದೆ. ತಾಲೂಕಿನ ಹಕ್ಲಾಡಿ ಗ್ರಾಮದ ಕೆಳಾಕಳಿ ಶ್ರೀ ಮಾರಿಕಾಂಬಾ ದೇವಸ್ಥಾನ ಜಾತ್ರೆಯ ಪೂರ್ವದಲ್ಲಿ ಮನೆ ಬಾಗಿಲಿಗೆ ಬರುವ ಕೋಣಕ್ಕೆ ಮುತ್ತೈದೆಯರು ಕಾಲು ತೊಳೆದು, ಹಣೆಗೆ ಅರಿಶಿನ ಕುಂಕುಮವಿಟ್ಟು, ನೆತ್ತಿಗೆ ಎಣ್ಣೆ ಹಾಕಿ ಭಕ್ತಿಯಿಂದ ಕಾಲಿಗೆರೆಗೆ ಮಾರಿಕಾಂಬಾ ಕಾಪಾಡಮ್ಮಾ ಎಂದು ಬೇಡಿಕೊಳ್ಳುತ್ತಾರೆ. ಕೋಣ ಮನೆ ಬಾಗಿಲಿಗೆ ಬಂದರೆ ಶುಭ, ಸಂಕಷ್ಟ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆಯಿಂದ ನೂರಾರು ವರ್ಷಗಳಿಂದ ಕೋಣನ ಮನೆ ಮೆರವಣಿಗೆ ನಡೆಯುತ್ತಿದೆ. ಕೋಣ ಬರುವ ಮನೆಗಳ ಅಂಗಳ ಶುದ್ದಮಾಡಿ, ತಳಿರು ತೋರಣ ಕಟ್ಟಿ, ರಂಗೋಲಿಯಿಟ್ಟು ಊರವರು ಭವ್ಯ ಸ್ವಾಗತ ನೀಡುತ್ತಾರೆ. ಮನೆ ಬಾಗಿಲಿಗೆ ಬಂದ ಕೋಣದ ಕಾಲು ತೊಳೆದು, ಕಾಲು ಹಾಗೂ ಹಣೆಗೆ ತಿಲಕವಿಟ್ಟು ನೆತ್ತಿಗೆ ಎಣ್ಣೆ ಹಚ್ಚಿ, ತಿನ್ನಲು ಅಕ್ಕಿ ನೀಡಲಾಗುತ್ತದೆ. ಇದರಲ್ಲಿ ವಾಡಿಕೆ ಮನೆಗಳಿದ್ದು, ಆ ಮನೆಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕು ಯುವ ಬಂಟರ ಸಂಘ ದಶಮಾನೋತ್ಸವ ವರ್ಷ ಅಧ್ಯಕ್ಷರಾಗಿ ಉಡುಪಿ ಮಿಲಾಗ್ರಿಸ್ ಕಾಲೇಜ್ ಸಹಾಯಕ ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆಯಾಗಿದ್ದಾರೆ. ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ, ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ತಾಲೂಕು ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ, ವಿಶ್ವ ಬಂಟರ ಸಮ್ಮೇಳನ ೨೦೧೯ ರ ಉಡುಪಿ ಜಿಲ್ಲೆಯ ಸಲಹಾ ಸಮಿತಿ ಸದಸ್ಯರಾಗಿ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಕುಂದಾಪುರ ಶಾಖೆಯ ಸಲಹಾ ಸಮಿತಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿರುತ್ತಾರೆ. ಪ್ರಧಾನ ಕಾರ್ಯದರ್ಶಿಯಾಗಿ ಉದ್ಯಮಿ ನಿತೀಶ್ ಶೆಟ್ಟಿ ಬಸ್ರೂರು, ಕೋಶಾಧಿಕಾರಿಯಾಗಿ ಉಪನ್ಯಾಸಕ ಅಕ್ಷಯ್ ಹೆಗ್ಡೆ ಮೊಳಹಳ್ಳಿ ಆಯ್ಕೆಯಾಗಿರುವ ಬಗ್ಗೆ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಗೌರವಾಧ್ಯಕ್ಷ ಡಾ. ರಂಜನ್ ಶೆಟ್ಟಿ ಹಾಗೂ ಸಂಘದ ಹಾಲಿ ಅಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಮಹಾರುದ್ರಯಾಗದ ಅಂಗವಾಗಿ ಯುವಜನ ಸಭಾ ಹಾಗೂ ಗಣೇಶೋತ್ಸವ ಸಮಿತಿ ಆಯೋಜಿಸಿದ್ದ ಪುತ್ತೂರು ಜಗದೀಶ ಆಚಾರ್ಯ ಮತ್ತು ಅವರ ಬಳಗದ ಸಂಗೀತ ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ದೇವಸ್ಥಾನದ ಅಭಿವೃದ್ಧಿಯಲ್ಲಿ ವಿಶೇಷ ಮುತುವರ್ಜಿ ವಹಿಸಿ ಕೆಲಸ ಮಾಡುತ್ತಿರುವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೃಷ್ಣಾನಂದ ಚಾತ್ರ ದಂಪತಿಗಳನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಸಚಿನ್ ನಕ್ಕತ್ತಾಯ, ಉಪಾಧ್ಯಕ್ಷರಾದ ಗಣೇಶ್ ಕುಂದೇಶ್ವರ ಕೋಶಾಧಿಕಾರಿ ಗಣೇಶ ಸಲಹೆಗಾರರಾದ ಹೃದಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ ವಿಶ್ವ ವಿನಾಯಕ ಸಿಬಿ.ಎಸ್‌ಇ ಸ್ಕೂಲ್ ವಿದ್ಯಾರ್ಥಿ ಶ್ಲಾಘಾ ಸಾಲಿಗ್ರಾಮ ಅವರ ಕಟಕ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ಬಾಲನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಇತ್ತಿಚಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗದು ಪ್ರಶಸ್ತಿ ಹಾಗೂ ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದರು. ರಾಘವೇಂದ್ರ ಆಚಾರ್ ಮಾಲಾ ದಂಪತಿಗಳ ಪುತ್ರಿಯಾದ ಶ್ಲಾಘಾ, ಪ್ರಸ್ತುತ ವಿಶ್ವ ವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್‌ನಲ್ಲಿ 6 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಕಟಕ, ಗಿರ್ಮಿಟ್ ಮೊದಲಾದ ಸಿನಿಮಾದಲ್ಲಿ ನಟಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯು 22ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಿರುವ ಸುರಭಿ ಜೈಸಿರಿ ಹಾಗೂ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಬೈಂದೂರಿನ ಶಾರದಾ ವೇದಿಕೆಯಲ್ಲಿ ಮೇ 7ರಿಂದ ಮೇ 10ರ ತನಕ ನಾಲ್ಕು ದಿನಗಳ ಕಾಲ ಸಂಜೆ 6:30ಕ್ಕೆ ಜರುಗಲಿದೆ. ಮೇ.7ರಂದು ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಸುರಭಿ ಅಧ್ಯಕ್ಷರಾದ ನಾಗರಾಜ ಪಿ. ಯಡ್ತರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭ ವಿವಿಧ ಅತಿಥಿ ಗಣ್ಯರು ಉಪಸ್ಥಿತರಿರಲಿದ್ದಾರೆ. ಅಂದು ಚಿತ್ರಕಲಾ ಶಿಕ್ಷಕ ನರಸಿಂಹ ಪೂಜಾರಿ ಅವರನ್ನು ಸನ್ಮಾನಿಸಲಾಗುತ್ತದೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಸುರಭಿ ವಿದ್ಯಾರ್ಥಿಗಳಿಂದ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ನಿರ್ದೇಶನದಲ್ಲಿ ಗಾನ ಲಹರಿ, ಸುರಭಿ ವಿದ್ಯಾರ್ಥಿಗಳಿಂದ ವಿದೂಷಿ ಮಾನಸ ರಾಘವೇಂದ್ರ ಅವರ ನಿರ್ದೇಶನದಲ್ಲಿ ‘ನೃತ್ಯ ವೈವಿಧ್ಯ’ ಸುರಭಿ ವಿದ್ಯಾರ್ಥಿಗಳಿಂದ ಚಿತ್ರಕಲಾ ಶಿಕ್ಷಕ ಗಿರೀಶ್ ಗಾಣಿಗ ನಿರ್ದೇಶನದಲ್ಲಿ ’ನಾದ ಕುಂಚ ಸಂಭ್ರಮ’ ಜರುಗಲಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸ್ತುತ ಕೋವಿಡ್ ಪ್ರಕರಣಗಳ ಸಂಖ್ಯೆಯು ದೆಹಲಿ, ಹರಿಯಾಣ ಹಾಗೂ ಪಕ್ಕದ ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚಾಗುತ್ತಿದ್ದು, ರಾಜ್ಯದಲ್ಲಿಯೂ ಸಹ ದೈನಂದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಕರಣಗಳ ಸಂಖ್ಯೆಗಳನ್ನು ಕಡಿಮೆಗೊಳಿಸುವುದು ಹಾಗೂ ಕೋವಿಡ್ ವೈರಾಣುವಿನ ಸಂಖ್ಯೆ ನಿಯಂತ್ರಿಸಲು ಹಾಗೂ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸುವುದು ಅವಶ್ಯಕವೆಂದು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸೂಚಿಸಿದೆ. ಆದ್ದರಿಂದ ಜಿಲ್ಲೆಯಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ, ಕಾರ್ಯನಿರ್ವಹಿಸುವ ಸ್ಥಳಗಳಲ್ಲಿ ಹಾಗೂ ಸಂಚಾರದ ಸಮಯದಲ್ಲಿ ಮಾಸ್ಕ್ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ದಂಡನಾತ್ಮಕ ಶಿಕ್ಷಾರ್ಹ ಅಪರಾಧವಾಗಿದೆ. ಇದನ್ನು ಉಲ್ಲಂಘಿಸಿದ್ದಲ್ಲಿ ಅವರ ವಿರುದ್ಧ ಸೂಚಿತ ಕಾನೂನು ನಿಯಮ, ಸ್ಥಳೀಯ ಆಡಳಿದ ನಿಬಂಧನೆಗಳನುಸಾರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ವ್ಯವಹರಿಸುವಾಗ ಕನಿಷ್ಠ ಎರಡು ಅಡಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೈತನೇ ಈ ದೇಶದ ಬೆನ್ನೆಲುಬು ಎನ್ನುವುದು ಬರಿ ಘೋಷಣೆಗೆ ಸೀಮಿತಗೊಂಡಿದೆ ಅವರ ಬಗ್ಗೆ ಸರಕಾರದ ಜನಪ್ರತಿನಿಧಿಗಳಿಗೆ ಕಾಳಜಿ ಶೂನ್ಯ ಎಂದು ಪಾಂಡೇಶ್ವರದ ರಕ್ತೇಶ್ವರಿ ದೇವಳದ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ಪಾಂಡೇಶ್ವರ ಹೇಳಿದ್ದಾರೆ. ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಮಹಿಳಾ ಮಂಡಲ ಕೋಟ ಇವರ ನೇತ್ರತ್ವದಲ್ಲಿ ಗಿಳಿಯಾರು ಯುವಕ ಮಂಡಲ, ಮಣೂರು ಫ್ರೆಂಡ್ಸ್, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಗೆಳೆಯರ ಬಳಗ ಕಾರ್ಕಡ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇವರುಗಳ ಸಹಯೋಗದೊಂದಿಗೆ ೧೫ನೇ ಮಾಲಿಕೆ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಅಂಗವಾಗಿ ಪಾಂಡೇಶ್ವರದ ಸಾಧಕ ಹಿರಿಯ ಕೃಷಿಕ ಜೂಲಿಸ್‌ರ‍್ವಾಚ್ ಇವರನ್ನು ಸನ್ಮಾನಿಸಿ ಮಾತನಾಡಿ ಇತ್ತೀಚಿಗಿನ ದಿನಗಳಲ್ಲಿ ಹಡಿಲು ಭೂಮಿ ಕಷಿ ಮಾಡುವುದನ್ನು ಕೇಳುತ್ತಿದ್ದೇವೆ ಆ ಹಡಿಲು ಭೂಮಿಯಾಗಲು ಕಾರಣ ಯಾರು ಸರಕಾರಿ ನೌಕರರಿಗಿದ್ದ. ಸವಲತ್ತು ರೈತರಿಗೆ ಉಂಟೇ ಹಾಗಾದರೆ ರೈತ ಸಮಯದಾಯದ ಗೋಳು ಕೇಳುವರಿಲ್ಲದೆ ಹಡಿಲು ಬೀಳುವ ಸ್ಥಿತಿ ಉಂಟಾಗಿದೆ ಇದನ್ನೆ ಬಂಡವಾಳವಾಗಿಸಿಕೊಂಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿವೈಡರ್’ಗೆ ಡಿಕ್ಕಿ ಹೊಡೆದ ಪರಿಣಾಮ, ಕಾರವಾರ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ರತ್ನಾಕರ ನಾಯ್ಕ್ ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ಜರುಗಿದೆ. ಕುಂದಾಪುರ ಕಡೆಯಿಂದ ಭಟ್ಕಳ ಕಡೆಗೆ ತೆರಳುತ್ತಿದ್ದ ಕಾರು ನಾಗೂರಿನ ವೀರಾಂಜನೇಯ ದೇವಸ್ಥಾನದ ಎದುರು ಡಿವೈಡರ್ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದುದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಕಾರು ಚಾಲಕನ ಕೈ ಬೆರಳುಗಳು ತುಂಡಾಗಿ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಗಾಯಾಳುವನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಮತ್ತೊಬ್ಬರಿಗೂ ಗಾಯಗಳಾಗಿದೆ. ಘಟನೆ ನಡೆದ ಸ್ಥಳದಿಂದ ಒಂದು ಕಿಲೋಮೀಟರ್ ದೂರಕ್ಕೆ ಟ್ರಾಫಿಕ್ ಜಾಮ್ ಆಗಿತ್ತು. ಸ್ಥಳೀಯರು ಅಂಬುಲೆನ್ಸ್ ಮೂಲಕ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲು ಸಹಕಾರ ನೀಡಿದ್ದಾರೆ. ವಿಕಲಚೇತನರಾಗಿರುವ ಜಮಾತ್ ಮಾಜಿ ಅಧ್ಯಕ್ಷ ಉಬೈದುಲ್ಲಾ ಎಂ.ಏಚ್ ಅವರು ಹಾದು ಹೋಗುತ್ತಿದ್ದ ಆಂಬ್ಯುಲೆನ್ಸ್ ನಿಲ್ಲಿಸಿ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ಸ್ವತಃ ತಾನು ಜೊತೆಯಾಗಿ…

Read More