ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜ.04: ಮೀನುಗಾರಿಕಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ತಾಜಾ ಮೀನನ್ನು ಮನೆ ಬಾಗಿಲಿಗೆ ತಲುಪಿಸಲು ಸೋಲಾರ್ ಆಧಾರಿತ ಶೈತೀಕೃತ/ ಶೀಥಲೀಕೃತ ತ್ರಿಚಕ್ರ ವಾಹನ ಖರೀದಿಗೆ, ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜ.10 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ, ಉಡುಪಿ ದೂರವಾಣಿ ಸಂಖ್ಯೆ: 0820-2530444 ಅನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಕಠಿಣ ಪರಿಶ್ರಮ ಪಡಬೇಕು. ಆತ್ಮವಿಶ್ವಾಸದಿಂದ ಯಶಸ್ಸಿನ ಕಡೆಗೆ ಗಮನಹರಿಸಿ ಉತ್ತಮ ಸಾಧನೆ ಮಾಡುವ ಗುರಿ ಹೊಂದಬೇಕು ಎಂದು ಮುಂಬೈನ ಉದ್ಯಮಿ ಹೊಸ್ಮನೆ ದೇವರಾಯ ಶೇರುಗಾರ್ ಹೇಳಿದರು. ಗಂಗೊಳ್ಳಿಯ ಜಿಎಸ್ವಿಎಸ್ ಅಸೋಸಿಯೇಶನ್ ವತಿಯಿಂದ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿ ನಮಗೆ ಶಿಕ್ಷಣ ನೀಡಿದ ವಿದ್ಯಾಸಂಸ್ಥೆ ಹಾಗೂ ಗುರುಗಳಿಗೆ ಗೌರವ ನೀಡುತ್ತಾ, ವಿದ್ಯಾಸಂಸ್ಥೆಯ ಪ್ರಗತಿಗೆ ಸಹಕರಿಸಬೇಕು. ವಿದ್ಯಾರ್ಥಿವೇತನ ಪಡೆದುಕೊಂಡ ವಿದ್ಯಾರ್ಥಿಗಳು ಸಂಸ್ಥೆಗೆ ಚಿರಋಣಿಗಳಾಗಿ ಮುಂದಿನ ದಿನಗಳಲ್ಲಿ ಶಾಲೆಯ ಮೇಲಿನ ಋಣವನ್ನು ತೀರಿಸುವ ಪ್ರಯತ್ನ ನಡೆಸಬೇಕು ಎಂದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಆಯ್ದ ಅರ್ಹ 56 ವಿದ್ಯಾರ್ಥಿಗಳಿಗೆ ಸುಮಾರು 3.81 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಅವರು ವಿತರಿಸಿದರು. 2021ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಪ್ರಸನ್ನಾ ಪೈ ಅವರಿಗೆ ಬಾಂಡ್ಯ ರಾಮರಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪದಲ್ಲಿ ಕುಂದಾಪುರ ಪೊಲೀಸರು ಇಬ್ಬರು ಅಂತರ್ ರಾಜ್ಯ ಕುಖ್ಯಾತ ಕಳ್ಳರನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯ ಧನರಾಜ್ ವಿಜಯ ಪರ್ಮಾರ್ (42) ಮತ್ತು ಅಜಯ್ ಸಿಂಗ್ ಕಿಶೋರ್ ಸಾಲುಂಕ್ (23) ಬಂಧಿತ ಆರೋಪಿಗಳು. ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ. ಬಂಧಿತರಿಂದ ರೂ 1 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ. 29 ರಂದು ಓರಾ ಫೈನ್ ಜುವೆಲ್ಲರಿ ಸಂಸ್ಥೆಯು ಕೊಟೇಶ್ವರ ಯುವ ಮೆರೀಡಿಯನ್ ಬ್ಯಾಕ್ವೆಟ್ ಹಾಲಿನಲ್ಲಿ ಆಯೋಜಿಸಿದ್ದ ಚಿನ್ನ ಮತ್ತು ವಜ್ರಾಭರಣಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಮಧ್ಯಾಹ್ನದ ವೇಳೆ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷನು ಗ್ರಾಹಕರ ಸೋಗಿನಲ್ಲಿ ಬಂದು 2 ಚಿನ್ನದ ಬಳೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿರೂರು ಪ್ರಭು ಕಾಂಪ್ಲೇಕ್ಸ್ನಲ್ಲಿ ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ೧೦೭ನೇ ನೂತನ ಶಿರೂರು ಶಾಖೆಯನ್ನು ಸ್ಥಳೀಯ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ನಂತರ ಪೇಟೆ ಶ್ರೀ ವೆಂಕಟರಮಣ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿರೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ, ಪಟ್ಟಣ ವ್ಯಾಪ್ತಿಯ ಜೊತೆಗೆ ಗ್ರಾಮೀಣ ಭಾಗದಲ್ಲಿ ಸಹಕಾರಿ ಕ್ಷೇತ್ರದ ಸಹಕಾರದಿಂದ ಸ್ವಾವಲಂಬನೆಯ ಬದುಕು ಕಾಣುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ನವೋದಯ ಸ್ವ-ಸಹಾಯ ಸಂಘಗಳು ಅನೇಕ ಕುಟುಂಬಗಳು ಸ್ವಾವಲಂಬಿ ಬದುಕಿನ ಭರವಸೆಯಾಗಿದೆ ಎಂದ ಶಾಸಕರು, ರಾಷ್ಟ್ರೀಕೃತ ಬ್ಯಾಂಕ್ಗಳಿಗೂ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತ ಈ ಸಂಸ್ಥೆಯ ಇನ್ನಷ್ಟು ಹೊಸ ಶಾಖೆಗಳು ಆರಂಭಗೊಳ್ಳಲಿ ಎಂದರು. ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಮಾತನಾಡಿ, ಸ್ವಾವಲಂಬಿ ಜೀವನಕ್ಕೆ ಸಹಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮದ್ದೋಡಿ ಸ.ಹಿ.ಪ್ರಾ.ಶಾಲೆಯಿಂದ ಯಳೂರತೊಪ್ಲು ಶಾಲೆಗೆ ವರ್ಗಾವಣೆಗೊಂಡ ನಾಗೇಶ್ ಆಚಾರ್ಯ ಮತ್ತು ತಾರಾಪತಿ ಸ.ಹಿ.ಪ್ರಾ.ಶಾಲೆಗೆ ವರ್ಗಾವಣೆಗೊಂಡ ಸುಬ್ರಹ್ಮಣ್ಯ ಗಾಣಿಗರಿಗೆ ಮದ್ದೋಡಿ ಶಾಲೆಯಲ್ಲಿ ಎಸ್.ಡಿ.ಎಮ್.ಸಿ , ಶಿಕ್ಷಕ ವೃಂದ, ಪೋಷಕರು, ಹಳೆವಿದ್ಯಾರ್ಥಿ ಸಂಘ ಮತ್ತು ಊರವರ ವತಿಯಿಂದ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ ಜರಗಿತು. ಸಮಾರಂಭದಲ್ಲಿ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಮಂಜುನಾಥ ಮರಾಠಿ, ಮತ್ತು ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ವೇಣುಗೋಪಾಲ ಶೆಟ್ಟಿ ಮತ್ತು ಸದಸ್ಯರು, ಶಾಲೆಯನ್ನು ದತ್ತು ಸ್ವೀಕಾರ ಪಡೆದ ಜೈಸನ್.ಎಮ್.ಡಿ , ಹಿರಿಯರಾದ ಚಿಕ್ಕಯ್ಯ ಶೆಟ್ಟಿ, ಕೃಷ್ಣಪ್ಪ ಶೆಟ್ಟಿ, ಗ್ರಾಮ ಪಂ ಸದಸ್ಯೆ ಮುತ್ತು, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸುಧಾಕರ ದೇವಾಡಿಗ ಮತ್ತು ಸಿ.ಎನ್.ಬಿಲ್ಲವ, ನಿವೃತ್ತ ಶಿಕ್ಷಕ ನಾರಾಯಣ ಹೋಬಳಿದಾರ್, ಕಂಚಿಕಾನು ಶಾಲೆಯ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ, ಶಾಲೆಯ ಶಿಕ್ಷಕರಾದ ವಿಠಲ ದೇವಾಡಿಗ, ನೀಲಾ, ಮತ್ತು ಸುನಂದಾ ಮಯ್ಯ, ನಾಗಮಣಿ ಮತ್ತು ಅಡುಗೆ ಸಿಬ್ಬಂದಿ ಮುತ್ತು ಮತ್ತು ಸುಜಾತ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂರೂರು ಶ್ರೀ ಮಹಾಲಿಂಗೇಶ್ವರ ಸಾಂಸ್ಕೃತಿಕ ಸಂಘ ಗೌರವ ಅಧ್ಯಕ್ಷರಾಗಿ ಸುಬ್ಬಣ್ಣ ಕೋಣಿ ಅವರನ್ನು ಆಯ್ಕೆ ಮಾಡಲಾಗಿದೆ. ಬಸ್ರೂರು ನಿವೇದಿತಾ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾಗಿರುವ ಸುಬ್ಬಣ್ಣ ಕೋಣಿ ಅವರು ಉಡುಪಿ ಜಿಲ್ಲಾ ರಾಜ್ಯೋತ್ಸವ, ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರರೂ ಆಗಿದ್ದು ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಭಾನುವಾರ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷರಾದ ಕೃಷ್ಣಾನಂದ ಶಾನುಭಾಗ್, ಕಾರ್ಯದರ್ಶಿ ವಸಂತ ಎಸ್ ಬಂಗೇರ, ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರಂತರ ಬದುಕೇ ಒಂದು ಪಾಠ ಶಾಲೆ, ಜೀವನೂದ್ದಕ್ಕು ನುಡಿದಂತೆ ಬದುಕಿ ತೋರಿಸಿದವರು, ಅವರ ಪರಿಸರದ ಮೇಲೆ ಕಾಳಜಿ ಅಪಾರವಾದದ್ದು, ಒಬ್ಬ ವ್ಯಕ್ತಿ ತನ್ನ ಬದುಕಿನಲ್ಲಿ ಏನೆಲ್ಲ ಸಾಧಿಸಬಹುದೆಂದು ಕಾರಂತರೇ ಉದಾಹರಣೆ. ಕಾರಂತರ ನೆನಪಿನಲ್ಲಿ ಸಾಹಿತ್ಯಿಕ-ಸಾಂಸ್ಕೃತಿಕ ಚಟುವಟಿಕೆ ಮೂಲಕ ಥೀಮ್ ಪಾರ್ಕ್ ಉತ್ತಮ ಕಾರ್ಯ ನಿರ್ವಹಿಸುತ್ತಿದೆ, ಕಾರಂತರ ನೆನಪುಗಳ ಅನಾವರಣಕ್ಕೆ ಥೀಮ್ ಪಾರ್ಕ್ ಸಹಕಾರಿ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದರು. ಅವರು ಜ್ಞಾನಪೀಠ ಪುರಸ್ಕೃತ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ಗೆ ಭೇಟಿ ನೀಡಿ ಕೆರೆಯ ಮಧ್ಯದಲ್ಲಿರುವ ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಂಗ ಮಂದಿರ, ಗ್ರಂಥಾಲಯ, ಆರ್ಟ್ ಗ್ಯಾಲರಿ, ಅಂಗನವಾಡಿ ವೀಕ್ಷಿಸಿ ಮಾತನಾಡುತ್ತಿದ್ದರು. ಥೀಮ್ ಪಾರ್ಕ್ ವತಿಯಿಂದ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್, ಸಹಾಯಕ ಆಯುಕ್ತ ರಾಜು ಕೆ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಎಲ್ಲಾ ಜಿಲ್ಲೆಗಳನ್ನು ಗಣನೆಗೆ ತೆಗೆದುಕೊಂಡಾಗ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸಿರುವುದು ಕೆಲವೇ ಜಿಲ್ಲೆಗಳು ಮಾತ್ರ. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಅಗ್ರಸ್ಥಾನದಲ್ಲಿರುವುದು ಒಂದು ಹೆಮ್ಮೆಯ ಸಂಗತಿ ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕಾಲ್ತೋಡು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಭಾನುವಾರ ೨೦೨೧-೨೨ನೇ ಸಾಲಿನ ಎಸ್ಸಿ ಎಸ್ಟಿ, ಟಿಎಸ್ಪಿ ಯೋಜನೆಯಡಿ ಆಯುಷ್ ಸೇವಾ ಗ್ರಾಮ ಅನುಷ್ಠಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಹಿಂದಿನ ತಲೆಮಾರಿನಿಂದ ಬಂದಿರುವ ಖಾಸಗಿ ಆರೋಗ್ಯ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದೆ ಹೋಗಿ ಮಾಡಿರುವ ದೂರಗಾಮಿ ಯೋಚನೆಗೆ ಇಂದು ಈ ಎರಡೂ ವಿಭಾಗದಲ್ಲಿ ನಮ್ಮ ಜಿಲ್ಲೆ ಎತ್ತರದ ಸ್ಥಾನಕ್ಕೇರಲು ಸಾಧ್ಯವಾಯಿತು. ಇಂತಹ ಸಂದರ್ಭಗಳಲ್ಲಿ ಆರೋಗ್ಯವನ್ನು ಕೇವಲ ಆಸ್ಪತ್ರೆಗೆ ಸೀಮಿತಗೊಳಿಸದೇ ಸಮಾಜದ ಕಟ್ಟಕಡೆಯ ಸಾಮನ್ಯ ವ್ಯಕ್ತಿಯ ಮನೆ ಮತ್ತು ಮನಸ್ಸಿನವರೆಗೂ ತಲುಪಿ ಆರೋಗ್ಯವನ್ನು ಕಾಪಾಡಬೇಕಾಗಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾರ್ವಜನಿಕರು, ಸದಸ್ಯರ ಸಕ್ರೀಯ ಪಾಲ್ಗೊಳ್ಳುವಿಕೆಯಿಂದಲೇ ಸಹಕಾರಿ ಸಂಘಗಳು ಅಭಿವೃದ್ಧಿ ಸಾಧ್ಯ. ಗ್ರಾಮೀಣ ಭಾಗದಲ್ಲಿ ಆರ್ಥಿಕ ಸಂಸ್ಥೆಗಳು ಸೇವೆಯ ದೃಷ್ಟಿಯಿಂದ ಕಾರ್ಯಾಚರಿಸುತ್ತಿದ್ದು, ಸಂಸ್ಥೆಯ ಬೆಳವಣಿಗೆಗೂ ಇದು ಸಹಾಯವಾಗಿದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಶನಿವಾರ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಇದರ ಗೋಳಿಹೊಳೆ ಶಾಖೆಯ ವಾರ್ಷಿಕೋತ್ಸವದ ಅಂಗವಾಗಿ ಗೊಳಿಹೊಳೆ ಶ್ರೀ ಮಹಿಷಾಮರ್ದಿನಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವ-ಸಹಾಯ ಸಂಘದ ಸದಸ್ಯರು ಸಂಸ್ಥೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅವರು ಸಾಲ ಪಡೆಯುವ ಜೊತೆಗೆ ಉಳಿತಾಯ ಮಾಡುವ ಮನೋಭಾವನೆಯನ್ನು ರೂಡಿಸಿಕೊಳ್ಳುವುದು ಅಗತ್ಯ. ಅದು ತುರ್ತು ಸಂದರ್ಭದಲ್ಲಿ ನೆರವಿಗೆ ಬರುವುದಲ್ಲದೇ ಬದುಕಿನಲ್ಲಿಯೂ ಭದ್ರತೆ ಭಾವ ಮೂಡುವಂತೆ ಮಾಡುತ್ತದೆ ಎಂದ ಅವರು ಸಂಸ್ಥೆಯ ಮೂಲಕ ಸಾಕಷ್ಟು ಸೇವಾ ಕಾರ್ಯಗಳನ್ನು ಮಾಡಲಾಗುತ್ತಿದೆ. ವಿದ್ಯಾರ್ಥಿವೇತನ, ಅಶಕ್ತರಿಗೆ ನೆರವು ಮೊದಲಾದ ಕಾರ್ಯವನ್ನು ನಿರಂತರವಾಗಿ ಮಾಡಲಾಗುತ್ತಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜ01: ಹೊಸ ವರ್ಷದ ಅಂಗವಾಗಿ 50 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ ಸಂಸ್ಥೆಯಿಂದ ಉಚಿತವಾಗಿ ಗ್ಲುಕೋಮೀಟರ್ (ಮಧುಮೇಹ ಅಳೆಯುವ ಉಪಕರಣ) ಕೊಡುಗೆ ನೀಡಲಾಗುತ್ತಿದೆ. ಈ ಕೊಡುಗೆ ಜನವರಿ 15ರ ತನಕ ಮಾತ್ರ ಇರಲಿದ್ದು, ಅರ್ಹ ಹಿರಿಯ ನಾಗರಿಕರು ತಮ್ಮ ಆಧಾರ್ ಕಾರ್ಡ್ ತೋರಿಸಿ ಗ್ಲುಕೋಮೀಟರ್ ಪಡೆದುಕೊಳ್ಳಬಹುದಾಗಿದೆ. ಗಿರಿಜಾ ಹೆಲ್ತ್ ಕೇರ್ & ಸರ್ಜಿಕಲ್ ಸಂಸ್ಥೆಯ ಉಡುಪಿ, ಮಂಗಳೂರು ಹಾಗೂ ಕುಂದಾಪುರ ಶಾಖೆಗೆ ತೆರಳಿ ಹಿರಿಯ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ ದೂರವಾಣಿ: 9901424485 ಗಿರಿಜಾ ಹೆಲ್ತ್ ಕೇರ್ ಉಡುಪಿ, ಮಂಗಳೂರು ಹಾಗೂ ಕುಂದಾಪುರದಲ್ಲಿ ಉತ್ತಮ ಸೇವೆ ನೀಡುತ್ತಿದ್ದು, ಗ್ರಾಹಕರ ನೆಚ್ಚಿನ ಸಂಸ್ಥೆಯಾಗಿದೆ. ಒಂದೇ ಸೂರಿನಡಿಯಲ್ಲಿ ಎಲ್ಲಾ ಬಗೆಯ ಸರ್ಜಿಕಲ್ ಪ್ರಾಡೆಕ್ಟ್ ಲಭ್ಯವಿರುವುದು ಇಲ್ಲಿನ ವಿಶೇಷತೆಯಾಗಿದೆ. ಗುಣಮಟ್ಟದ ಪ್ರಾಡೆಕ್ಟ್ ಜೊತೆಗೆ ವೆರೈಟಿ ಪ್ರಾಡೆಕ್ಟ್’ಗಳು ಕೂಡ ಇಲ್ಲಿ ಲಭ್ಯವಿದ್ದು, ಗ್ರಾಹಕರಿಗೂ ಉತ್ತಮ ಆಯ್ಕೆ ದೊರೆಯಲಿದೆ. ಕೊಂಡುಕೊಳ್ಳುವ ಪ್ರಾಡೆಕ್ಟ್…
