ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸೈನಿಕರು ಯುದ್ಧವನ್ನು ಗೆಲ್ಲುತ್ತಾರೆ. ಆದರೆ ಅದರ ಕೀರ್ತಿ ದಂಡನಾಯಕನ ಪಾಲಾಗುತ್ತದೆ ಎಂಬ ಮಾತಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ದುಡಿದು ಕೀರ್ತಿ, ಗೌರವ ಗಳಿಸುವವರಿಗೂ ಇದೇ ಮಾತು ಅನ್ವಯಿಸುತ್ತದೆ. ಏಕೆಂದರೆ ಸಾಧನೆ ಎಂದೂ ಒಬ್ಬರದ್ದಾಗಿರದೇ ಅವರೊಂದಿಗೆ ದುಡಿದ ಹಲವರದಾಗಿರುತ್ತದೆ ಎಂದು ಈ ಸಾಲಿನ ಹಿರಿಯ ನಾಗರಿಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಹೇಳಿದರು. ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ನಡೆದ ರೋಟರಿ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಂಗಕರ್ಮಿ ಬಿ. ರಾಮ ಟೈಲರ್ ಅವರ ಜತೆ ರೋಟರಿ ನೀಡಿದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸನ್ಮಾನವು ಕೇವಲ ಸಾಂಕೇತಿಕವಾಗಿರುತ್ತದೆ. ಅದು ತಮಗೊಬ್ಬರಿಗೇ ಅಲ್ಲ; ಬದಲಾಗಿ ತಮ್ಮ ಸಾಧನೆಗೆ ಬೆಂಬಲವಾಗಿ ನಿಂತ ಎಲ್ಲರಿಗೆ ಸಲ್ಲುತ್ತದೆ ಎಂಬ ವಿನೀತ ಭಾವದೊಂದಿಗೆ ಸನ್ಮಾನವನ್ನು ಸ್ವೀಕರಿಸಬೇಕು ಎಂದು ಅವರು ಹೇಳಿದರು. ತಮಗೆ ನೀಡಿದ ಸನ್ಮಾನಕ್ಕಾಗಿ ಬಿ. ರಾಮ ಟೈಲರ್ ಕೃತಜ್ಞತೆ ಸಲ್ಲಿಸಿದರು. ಉಭಯರನ್ನು ಜಿಪಂ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಜಿಲ್ಲಾಡಳಿತದ ಹೊಸ ಧ್ಯೇಯ ವಾಕ್ಯದೊಂದಿಗೆ ‘ನಮ್ಮ ಕಷ್ಟ ನಮ್ಮ ಜವಾಬ್ದಾರಿ’ ಎಂಬ ಶಿರ್ಷಿಕೆಯಡಿ ಸಾರ್ವಜನಿಕರಲ್ಲಿ ಸ್ವಚ್ಛತಾ ಅರಿವು ಮೂಡಿಸುವ ಕೆಲಸಸಕ್ಕೆ ಈಗಾಗಲೇ ಜಿಲ್ಲಾಡಳಿತ ವತಿಯಿಂದ ಕೋಟೇಶ್ವರದಲ್ಲಿ ಚಾಲನೆ ನೀಡಲಾಗಿದೆ. ನಮಗೆ ಕಷ್ಟಗಳನ್ನು ನಾವೇ ಸರಿಪಡಿಸಿಕೊಂಡು ನಡೆಯಬೇಕಾಗಿದೆ. ಇನ್ನು ಮುಂದೆ ಎಸ್ಎಲ್ಆರ್ಎಂ ಘಟಕ ಬಾಗಿಲಿಗೆ ಬಾರದೇ ಇದ್ದರೂ ಕೂಡ ನಮ್ಮ ಮನೆಯ ಕಸಗಳನ್ನು ಎಸ್ಎಲ್ಆರ್ಎಂ ಘಟಕಗಳ ಕಡೆ ಹೋಗಿ ನೀಡುವ ಪರಿಪಾಠವನ್ನು ರೂಡಿಸಿಕೊಳ್ಳಬೇಕಾಗಿದೆ. ಈ ಕ್ರಮವನ್ನು ಸಮರ್ಪಕವಾಗಿ ಜಾರಿಗೆ ತರುವುದು ಜಿಲ್ಲಾಡಳಿತದ ಆಶಯವಾಗಿದೆ ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಹೇಳಿದರು. ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಜಿಲ್ಲಾ ಪಂಚಾಯಿತಿ ಉಡುಪಿ, ಕರಾವಳಿ ಕಾವಲು ಪೊಲೀಸ್ ಪಡೆ ಗಂಗೊಳ್ಳಿ, ಕೋಟೇಶ್ವರ ಗ್ರಾಮ ಪಂಚಾಯತ್, ಲಯನ್ಸ್ ಕ್ಲಬ್ ಕುಂದಾಪುರ, ಕುಂದಾಪುರ ಅಮೃತಧಾರಾ, ಕುಂದಾಪುರ ಅಮೃತಧಾರಾ, ರಾಷ್ಟ್ರ ಸೇವಿಕಾ ಸಮಿತಿ ಉಡುಪಿ ಆಶ್ರಯದಲ್ಲಿ ಭಾನುವಾರ ಕೋಟೇಶ್ವರ ಹಳಅಳಿವೆ ಬೀಚ್ನಲ್ಲಿ ಜರುಗಿದ ಕಡಲ ತೀರ ಸ್ವಚ್ಛಗೊಳಿಸುವುದರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಾಗರ ಸಿದ್ಧಿವಿನಾಯಕ ವುಡ್ ಇಂಡಸ್ಟ್ರೀಸ್ ಮತ್ತು ಆಶಾವಾಣಿ ಟ್ರಸ್ಟ್ ರಿ. ಸಾಲಿಗ್ರಾಮ ಇವರ ಸಹಭಾಗಿತ್ವದಲ್ಲಿ ವಕ್ವಾಡಿ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕುಂದಾಪುರ ಸ್ವಾತಿ ಕ್ಲಿನಿಕ್ನ ಡಾ. ಶ್ರೀಪತಿ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಾಗರ ಸಿದ್ಧಿ ವಿನಾಯಕ ವುಡ್ ಇಂಡಸ್ಟ್ರೀಸ್ ಮಾಲಕ ಗಣೇಶ್ ಆಚಾರ್ಯ, ವಕ್ವಾಡಿ ವಿಶ್ವಬ್ರಾಹ್ಮಣ ಸಂಘದ ಅಧ್ಯಕ್ಷ ಆನಂದ ಆಚಾರ್ಯ, ಸದ್ಗುರು ಆಯುರ್ವೇದ ಸಂಸ್ಥೆಯ ಗಣೇಶ್ ಶೆಟ್ಟಿ, ಸಾಲಿಗ್ರಾಮ ಆಶಾವಾಣಿ ಟ್ರಸ್ಟ್ನ ಟ್ರಸ್ಟಿಗಳಾದ ಡಾ. ವಾಣಿಶ್ರೀ ಐತಾಳ್, ಆಶಾ ಹೆಗ್ಡೆ ಉಪಸ್ಥಿತರಿದ್ದರು. ಆರೋಗ್ಯದಲ್ಲಿ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ನಡೆಸಲಾಯಿತು. ಸುಮಾರು 100 ಶಿಬಿರಾರ್ಥಿಗಳು ಶಿಬಿರದಲ್ಲಿ ಭಾಗಿಯಾಗುವುದರ ಮೂಲಕ ಉಚಿತ ಆರೋಗ್ಯ ಶಿಬಿರ ಪ್ರಯೋಜನ ಪಡೆದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಚೇರಿಗಳ ಕಡತಗಳನ್ನು ಕಾಲಮಿತಿಯಲ್ಲಿ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಬೋಧಿಸಿ, ನಂತರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಧಿಕಾರಿ ಕಚೇರಿ, ಎಲ್ಲಾ ತಾಲೂಕು ಕಚೇರಿಗಳು ಹಾಗೂ ಕುಂದಾಪುರ ಉಪ ವಿಭಾಗಾಧಿಕಾರಿ ಕಚೇರಿಗೆ ಸಂಬಧಿಸಿದ ಕಡತಗಳನ್ನು ಇ-ಕಚೇರಿ ಮೂಲಕವೇ ತ್ವರಿತವಾಗಿ ವಿಲೇವಾರಿ ಮಾಡುವಂತೆ ಹಾಗೂ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು 2 ತಿಂಗಳ ಒಳಗೆ ಸಂಪೂರ್ಣ ಇ-ಕಚೇರಿ ಮೂಲಕ ಕಡತಗಳನ್ನು ನಿರ್ವಹಣೆ ಮಾಡಬೇಕು. ಈ ಕುರಿತಂತೆ ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ಮತ್ತಿತರ ಮೂಲ ಸೌಕರ್ಯಗಳನ್ನು ಸಿದ್ಧಪಡಿಸಿಕೊಳ್ಳುವಂತೆ ಸೂಚನೆ ನೀಡಿದರು. ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಡತಗಳನ್ನು ಸೂಕ್ತ ರೀತಿಯಲ್ಲಿ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ನ.29: ರಾಜ್ಯದಲ್ಲಿ ಲಾಕ್ಡೌನ್ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಲಾಕ್ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್ಡೌನ್ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಸರ್ಕಾರ ಹೇಳುವ ತನಕ ಜನತೆ ಗೊಂದಲಕ್ಕೊಳಗಾಗಬಾರದು. ಲಾಕ್ಡೌನ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 12 ದೇಶಗಳಲ್ಲಿ ಓಮ್ರಿಕಾನ್ ವೈರಸ್ ಪತ್ತೆಯಾಗಿದ್ದು, 12 ದೇಶಗಳಿಂದ ಬಂದವರ ಮೇಲೆ ನಿಗಾ ವಹಿಸಲಾಗಿದೆ. ಆಫ್ರಿಕನ್ ದೇಶಗಳಲ್ಲಿ ರಾಜ್ಯಕ್ಕೆ ಬಂದವರ ಮೇಲೆ ನಿಗಾವಹಿಸಲಾಗಿದೆ. ಓಮ್ರಿಕಾನ್ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ಆದರೆ, ಇದು ಅಷ್ಟೊಂದು ಗಂಭೀರವಾಗಿಲ್ಲ ಎಂದಿದ್ದಾರೆ. ಲಾಕ್ಡೌನ್ ಬಗ್ಗೆ ಕೆಲವು ಮಾಧ್ಯಮಗಳು ವರದಿ ಮಾಡುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿತ್ತು. ಲಾಕ್ಡೌನ್ ಬಗ್ಗೆ ಸರ್ಕಾರದಿಂದ ಅಧಿಕೃತ ಮಾಹಿತಿ ಬಂದ ಬಳಿಕ ಜನರು ನಂಬಬೇಕು. ನಾಳೆ ಬೆಳಗ್ಗೆ 10 ಗಂಟೆಗೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ತಾಂತ್ರಿಕಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ವಲಯ 1ರ ಸಾಂಸ್ಕೃತಿಕ ಕಾರ್ಯಕ್ರಮ ‘ಕುಂದ ಕಲಾ ವೈಭವ’ ಅಂಗವಾಗಿ ಕುಂದಾಪುರ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆದ ಸ್ಪರ್ಧೆಯಲ್ಲಿ ಬೈಂದೂರು ರೋಟರಿ ಒಟ್ಟು 7 ಪ್ರಶಸ್ತಿ (3 ಪ್ರಥಮ ಹಾಗೂ 4 ದ್ವಿತೀಯ) ಗಳಿಸುವ ಮೂಲಕ ಸಮಗ್ರ ವಲಯ ಚಾಂಪಿಯನ್ಶಿಫ್ಗೆ ಅರ್ಹ ತಂಡವಾಗಿ ಮೂಡಿಬಂದಿದೆ. ಈ ಪ್ರಶಸ್ತಿಯನ್ನು ರೋಟರಿ ಅಧ್ಯಕ್ಷ ಡಾ. ಪ್ರವೀಣ್ ಶೆಟ್ಟಿ ಇವರಿಗೆ ಜಿಲ್ಲಾ ರೆಡ್ಕ್ರಾಸ್ನ ಅಧ್ಯಕ್ಷ ಶಾಂತಾರಾಮ ಶೆಟ್ಟಿ ಹಸ್ತಾಂತರಿಸಿದರು. ವಲಯ ಸಹಾಯಕ ಗವರ್ನರ್ ಜೆ. ಪಿ. ಶೆಟ್ಟಿ, ವಲಯ ಸೇನಾನಿ ಡಾ. ರಾಜಾರಾಮ ಶೆಟ್ಟಿ ಹಾಗೂ ಎಲ್ಲಾ ರೋಟರಿ ಪದಾಧಿಕಾರಿಗಳು ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಲ್ಲವ ಅಸೋಸಿಯೇಷನ್ ರಿ. ಬೆಂಗಳೂರು ಹಾಗೂ ತಾಲ್ಲೂಕು ಬಿಲ್ಲವ ಸಮಾಜ ಸೇವಾ ಸಂಘ, ಬೈಂದೂರು ಇವರ ಸಹಯೋಗದೊಂದಿಗೆ ಬಿಲ್ಲವ ವಧುವರರ ಮುಖಾಮುಖಿ ಕಾರ್ಯಕ್ರಮ ನಂದನವನ ದೇವಕಿ ಬಿ. ಆರ್. ಆಡಿಟೋರಿಯಂ (ಪರಿಚಯ) ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಇವರು ನಡೆಸಿಕೊಂಡು ಬರುತ್ತಿರುವ ಹಲವಾರು ಕಾರ್ಯಕ್ರಮಗಳಲ್ಲಿ ಈ ವಧುವರಾನ್ವೇಷಣೆ ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿದ್ದು, ತಾಲ್ಲೂಕಿನ ಸಮಾಜದ ಎಲ್ಲಾ ವಧು ವರ ಆಕಾಂಕ್ಷಿಗಳು ಇದರ ಸದುಪಯೋಗ ಪಡೆಯುವಂತೆ ಸಲಹೆ ನೀಡಿದರು. ಬೈಂದೂರು ತಾಲ್ಲೂಕು ಬಿಲ್ಲವ ಸಂಘಕ್ಕೆ ಸಮುದಾಯ ಭವನದ ಅಗತ್ಯವಿದ್ದು, ಇದರ ನಿರ್ಮಾಣದಲ್ಲಿ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು. ಬೆಂಗಳೂರು ಬಿಲ್ಲವ ಅಸೋಸಿಯೇಶನ್ ಅದ್ಯಕ್ಷ ಎಂ. ವೇದಕುಮಾರ ಮಾತನಾಡಿ , ಸಮಾಜದ ಒಗ್ಗಟ್ಟಿನ ಅಗತ್ಯತೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿದ ಅವರು ರಾಜಕೀಯವಾಗಿ ನಾವು ನಮ್ಮ ಸಮಾಜದ ನಾಯಕರನ್ನು ಆಯ್ಕೆ ಮಾಡುವಲ್ಲಿ ಪಕ್ಷಭೇದ ಮರೆತು ಹೋರಾಡಬೇಕಾಗಿದೆ ಎಂದು ಕರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಉದ್ಯೋಗ ನಿಮಿತ್ತ ನಾವಿಂದು ಬೇರೆ ಬೇರೆ ಭಾಷೆಗಳ ಆಸರೆ ಪಡೆದರೂ, ತುಳು ಭಾಷೆ ಎಂದೂ ನಮ್ಮ ಹೃದಯದ ಭಾಷೆಯಾಗಿರುತ್ತದೆ ಎಂದು ಕನ್ನಡ ಬಿಗ್ಬಾಸ್ ಸೀಸನ್ 8ರ ರನ್ನರ್ ಅಪ್ ಅರವಿಂದ ಕೆಪಿ ನುಡಿದರು. ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ತುಳು ಸಂಘ ಎಐಇಟಿ ಅಡಿಟೋರಿಯಂನಲ್ಲಿ ಆಯೋಜಿಸಿದ್ದ ತುಲಿಪು 2021 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ತುಳು ಭಾಷೆ ನಮ್ಮ ನಡುವೆ ಸದಾ ಜೀವಂತವಿರುತ್ತದೆ. ನಮ್ಮ ಆಚರಣೆಗಳಾದ ಕೋಲ, ಕಂಬಳ, ನೇಮ, ಆಟ ಪ್ರತಿ ಕ್ಷಣ ಈ ಸಂಸ್ಕೃತಿಯ ವಿಶೇಷತೆಯನ್ನು ಸಾರುತ್ತವೆ. ಪ್ರತಿಯೊಬ್ಬರಿಗೂ ಅವರ ಭಾಷೆಯ ಬಗ್ಗೆ ಗೌರವವಿರಬೇಕು. ನಮ್ಮ ಭಾಷೆಯ ಮಹತ್ವ ನಾವು ನಮ್ಮ ಊರನ್ನು ಬಿಟ್ಟು ಬೇರೆ ಪ್ರದೇಶದಲ್ಲಿ ನಲೆಸಲು ಆರಂಭಿಸಿದಾಗ ಮಹತ್ವ ತಿಳಿಯುತ್ತದೆ ಎಂದರು. ಜೀವನದಲ್ಲಿ ಸದಾ ಧನಾತ್ಮಕ ಚಿಂತನೆಯನ್ನು ಹೊಂದಿದರೆ ಯಶಸ್ಸನ್ನು ಪಡೆಯಲು ಸಾಧ್ಯ. ನಾವೆಂದು ಭೂತ ಕಾಲದಲ್ಲಿ ಬಂಧಿಯಾಗದೆ, ನಮ್ಮ ಭವಿಷ್ಯದ ಪ್ರವರ್ತಕರಾಗುವರೆಡೆಗೆ ಶ್ರಮಿಸಬೇಕು ಎಂದರು. ತುಳು ಭಾಷೆ ಸಂಸ್ಕೃತಿ, ಆಚರಣೆ…
ಕುಂದಾಪ್ರ ಡಾಟ್ ಕಾಂಸುದ್ದಿ.ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳೋತ್ಸವವು ಭಾನುವಾರ ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ವಿಧಿವತ್ತಾಗಿ, ವಿಜೃಂಭಣೆಯಿಂದ ನಡೆಯಿತು. ಹಲವಾರು ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸಿ ಕಂಬಳದ ಮೆರಗು ಹೆಚ್ಚಿಸಿದವು. ಕಂಬಳದ ದಿನ ಬೆಳಿಗ್ಗೆ ಗದ್ದೆಯ ಅಲಂಕಾರ, ಪೂಜೆ ಕಾರ್ಯಾದಿಗಳು ನೆರವೇರಿದ ಬಳಿಕ ಮಧ್ಯಾಹ್ನ ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಯಿತು. ಕಂಬಳ ಗದ್ದೆಯನ್ನು ಖುರ್ಜು ನಿಲ್ಲಿಸಿ, ತೋರಣಗಳಿಂದ ಅಲಂಕರಿಸಲಾಗಿತ್ತು. ಊರಿನ ಒಂದು ನಿರ್ದಿಷ್ಟ ಕುಟುಂಬದ ಕೋಣಗಳನ್ನು ಗದ್ದೆಗೆ ಇಳಿಸಿದ ಬಳಿಕ ಕಂಬಳಕ್ಕೆ ಅಧಿಕೃತ ಚಾಲನೆ ದೊರೆಯಿತು. ವಿಶೇಷ ವೇಷಭೂಷಣ, ವಾದ್ಯ ಮುಂತಾದವುಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿಬಂದ ಕೋಣಗಳ ಪೈಕಿ ಕೆಲವನ್ನು ಕಂಬಳ ಗದ್ದೆಯಲ್ಲಿ ಹರಕೆಯ ಸಲುವಾಗಿ ಓಡಿಸಿದರೇ, ಉಳಿದ ಕೋಣಗಳು ಹಗ್ಗ ಹಾಗೂ ಹಲಗೆ ವಿಭಾಗದ ಸ್ವರ್ಧೆಯಲ್ಲಿ ಪಾಲ್ಗೊಂಡವು. ಕಂಠದಮನೆ ಕುಟುಂಬದ ಟಿ. ನಾರಾಯಣ ಹೆಗ್ಡೆಯವರ ನೇತೃತ್ವದಲ್ಲಿ ಸಾಂಪ್ರದಾಯಿಕ ಕಂಬಳ ಮುನ್ನಡೆಯುತ್ತಿದ್ದು ಊರಿನ ಜನ ಹಬ್ಬದಂತೆ ಸಂಭ್ರಮಿಸಿದರು. ವಿಶಾಲ ಗದ್ದೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 44ನೇ ವಾರ್ಷಿಕ ಮಹಾಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಭಾನುವಾರ ಜರುಗಿತು. ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು 44 ವರ್ಷಗಳುದ್ದಕ್ಕೆ ಏರುಗತಿಯ ಪ್ರಗತಿಯನ್ನು ದಾಖಲಿಸುತ್ತ ಬಂದಿದೆ. ವರದಿ ವರ್ಷದಲ್ಲಿ ರೂ.750 ಕೋಟಿ ವ್ಯವಹಾರ ನಡೆಸಿ, ರೂ 4.47 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇ. 15 ಡಿವಿಡೆಂಡ್ ನೀಡಲು ನಿರ್ಧರಿಸಲಾಗಿದೆ ಗ್ರಾಹಕರ ಸಹಕಾರ, ನಿಧಿಗಳ ಸಮರ್ಪಕ ನಿರ್ವಹಣೆ, ಸಮಯೋಜಿತ ಹೂಡಿಕೆಗಳಿಂದಾಗಿ ಸಂಘವು ಉತ್ತಮ ಪ್ರಗತಿ ಸಾಧಿಸಿದೆ. ಸತತ 17 ವರ್ಷಗಳಿಂದ ‘ಎ’ ವರ್ಗದ ಆಡಿಟ್ ವರ್ಗೀಕರಣದಲ್ಲಿದೆ ಎಂದು ಹೇಳಿದರು. ಸಂಘವು ವರ್ಷದಲ್ಲಿ ರೂ. 163.90 ಕೋಟಿ ಠೇವಣಿ ಸಂಗ್ರಹಿಸಿ, ರೂ. 146.13 ಕೋಟಿ ಸಾಲ ನೀಡಿದೆ. ವಿವಿಧ ಸಂಸ್ಥೆಗಳಲ್ಲಿ ರೂ. 75.60 ಕೋಟಿ ಹೂಡಿಕೆ ಮಾಡಿದೆ. ಸಂಘದ ಸದಸ್ಯರಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ…
