ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇಂಡಕ್ಷನ್ ಕಾರ್ಯಕ್ರಮದ ಪ್ರಯುಕ್ತ ‘ಯಶಸ್ಸಿನ ಗುಟ್ಟು’ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆರ್ಟ್ ಆಫ಼್ ಲಿವಿಂಗ್ ಪ್ರತಿನಿಧಿ ಪ್ರಶಾಂತ್ ಪೈ ಮಾತನಾಡಿ, ವಿದ್ಯಾರ್ಥಿಗಳ ಯಶಸ್ಸಿಗೆ ಮನಸ್ಸು ಬಹಳ ಪ್ರಮುಖ ಪಾತ್ರ ವಹಿಸುತ್ತದೆ, ಮನಸ್ಸಿನ ಸ್ಪಷ್ಟತೆ, ಏಕಾಗ್ರತೆ, ಬದ್ಧತೆ ಹಾಗೂ ಆತ್ಮವಿಶ್ವಾಸ ಈ ನಾಲ್ಕು ವಿಚಾರವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಸದಾಕಾಲವೂ ಲಭಿಸುತ್ತದೆ ಎಂದು ಅಭಿಪ್ರಾಯ ತಿಳಿಸಿದರು.. ಪ್ರಾಣಾಯಾಮ ಮತ್ತು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಡುವ ಜೊತೆಗೆ ಪ್ರಾಣಾಯಾಮದ ಪ್ರಯೋಗವನ್ನು ಕಲಿಸಿದರು. ಕಾಲೇಜಿನ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಅಕಾಡೆಮಿಕ್ ಡೀನ್ ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗ ಹಾಗು ವಿದ್ಯಾರ್ಥಿಗಳು ಕಾರ್ಯಾಗಾರದ ಸದುಪಯೋಗ ಪಡೆದುಕೊಂಡರು. ತೃತೀಯ ವರ್ಷದ ವಿಧ್ಯಾರ್ಥಿನಿಯರಾದ ಮಾಧುರಿ ಹಾಗೂ ಕಾವ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ 2021-22ನೇ ಸಾಲಿನ ಯೂತ್ರೆಡ್ಕ್ರಾಸ್ ಸಂಸ್ಥೆಯ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಕುಂದಾಪುರಘಟಕದ ಸಭಾಪತಿಗಳಾದ ಎಸ್.ಜಯಕರ ಶೆಟ್ಟಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್ .ಪಿ. ನಾರಾಯಣ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಯೂತ್ರೆಡ್ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಸಂಚಾಲಕರಾದ ಸತ್ಯನಾರಾಯಣ ಪುರಾಣಿಕ್, ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಕಾರ್ಯದರ್ಶಿಗಳಾದ ವೈ.ಸೀತಾರಾಮ ಶೆಟ್ಟಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ಖಜಾಂಚಿಗಳಾದ ಶಿವರಾಮ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಯೂತ್ರೆಡ್ಕ್ರಾಸ್ ಸಂಸ್ಥೆಯ ಕಾರ್ಯಕ್ರಮ ಸಂಯೋಜಕರಾದ ಸತ್ಯನಾರಾಯಣ ಸ್ವಾಗತಿಸಿದರು. ಸಹ ಕಾರ್ಯಕ್ರಮ ಸಮಯೋಜಕರಾದ ವಿದ್ಯಾರಾಣಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ ಸೌಮ್ಯ ಅವರಿಗೆ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಕುಂದಾಪುರ ಘಟಕದ ವತಿಯಿಂದ ಶೈಕ್ಷಣಿಕ ಉದ್ದೇಶಕ್ಕಾಗಿ ಆರ್ಥಿಕ ಸಹಾಯವನ್ನು ಮಾಡಲಾಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ವರದರಾಜ ಎಂ. ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘ ಹಾಗೂ ತಹಶೀಲ್ದಾರರ ಕಚೇರಿ, ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣೆ ಭಾಗವಹಿಸುವಿಕೆ ಕಾರ್ಯಕ್ರಮ ನಡೆಯಿತು. ಕ್ಷೇತ್ರ ಶಿಕ್ಷಣಾಧಿ ಕಾರಿ ಕಚೇರಿಯ ಬಿ.ಆರ್.ಸಿ. ಸದಾನಂದ ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ರಾಜಕೀಯದ ಸ್ಥಿರತೆಗೆ ಮತ ದಾರರ ಮತ ಹಾಗೂ ಚುನಾವಣೆಯಲ್ಲಿ ಭಾಗವಹಿಸುವಿಕೆ ಪ್ರಮುಖವಾದುದು. ರಾಜಕೀಯ ಶಿಕ್ಷಣವುಳ್ಳ ಪ್ರಜ್ಞಾವಂತ ಯುವ ಮತದಾರರ ಮತ ದೇಶಕ್ಕೆ ಭದ್ರತೆ ಒದಗಿಸಬಲ್ಲದು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ದೇಶದ ಭವಿಷ್ಯವನ್ನು ಹಿತದಲ್ಲಿ ಇರಿಸಿಕೊಂಡು ಮತ ನೋಂದಣಿ ಹಾಗೂ ಪರಿಷ್ಕರಣೆ ಮಾಡಿಕೊಳ್ಳುವುದು ಅಗತ್ಯ ಹಾಗೂ ಮತ ಸೋರಿ ಹೋಗದಂತೆ ಜಾಗೃತರಾಗಿರಿ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ಎಸ್. ನಾಯಕ ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಕಂದಾಯ ನಿರೀಕ್ಷಕ ದಿನೇಶ, ಹಾಗೂ ಗ್ರಾಮ ಲೆಕ್ಕಿಗ ಆನಂದ ಕೋಟೇಶ್ವರ ಮತ ನೋಂದಣಿ…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು, ನವೆಂಬರ್ 30ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 5 ಹಾಗೂ 15 ವರ್ಷ ತುಂಬಿದ ಮಕ್ಕಳ ಬಯೋಮೆಟ್ರಿಕ್ ದಾಖಲೆಗಳನ್ನು ಆಧಾರ್ನಲ್ಲಿ ನಮೂದಿಸಿ, ನಂತರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಬೇಕು. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಲಭ್ಯವಾಗದಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಕಾರಣಗಳೊಂದಿಗೆ ನ್ಯಾಯಬೆಲೆ ಅಂಗಡಿಗೆ ಒದಗಿಸಬೇಕು. ನವೆಂಬರ್ 30ರ ಒಳಗೆ ಇ-ಕೆವೈಸಿ ಮಾಡದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರ ಬಗ್ಗೆ ಸರ್ಕಾರದ ಸೂಕ್ತ ನಿರ್ದೇಶನದಂತೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪಡುವರಿ ಗ್ರಾಮದ ಒತ್ತಿನೆಣೆ ಎಂಬಲ್ಲಿ ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ಪಶ್ಚಿಮ ಬಂಗಾಲ ಮೂಲದ ಕಾರ್ಮಿಕ ಅಕಿಲ್ಚಂದ್ರ ಬರಾಯಿ(50) ಮೃತಪಟ್ಟಿದ್ದಾರೆ. ನ.20ರಂದು ಅವರು ಕೋವಿಡ್ ವ್ಯಾಕ್ಸಿನೇಶನ್ ಹಾಕಿಸಿಕೊಂಡಿದ್ದು ನಂತರ ಅವರಿಗೆ ಜ್ವರ ಬಾಧಿಸಿದೆ. ಕಟ್ಟಡದ ರೂಮ್ನಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದವರು ನ.24ರಂದು ಬೆಳಗ್ಗೆ ಸಹ ಕಾರ್ಮಿಕ ಎಬ್ಬಿಸಿದಾಗ ಮಾತನಾಡದ ಸ್ಥಿತಿಯಲ್ಲಿ ಕಂಡುಬಂದಿದ್ದು, ಕೂಡಲೇ ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಸಹ ಕಾರ್ಮಿಕನಾರಾಯಣ ಬರ್ಮನ್ ನೀಡಿದ ದೂರಿನಂತೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಡಾ. ಎಂ ಪಿ ಶ್ರೀನಾಥ್ ಗುರುವಾರ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಎಂ ಮೋಹನ್ ಆಳ್ವವರನ್ನು ಬೇಟಿ ಮಾಡಿದರು ಕಸಾಪದ ಮೂಲಕ ಕನ್ನಡವನ್ನು ಸಮೃದ್ಧಿಗೊಳಿಸುವ ಬಗೆಗೆ ಚರ್ಚಿಸಿ, ಸಲಹೆ ಸೂಚನೆಗಳನ್ನು ಪಡೆದುಕೊಂಡರು. ಭೇಟಿಯ ಮುನ್ನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳ ಜತೆ ಕೆಲವು ಹೊತ್ತು ಸಂಭಾಷಣೆ ನಡೆಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ೭೪ನೇ ಹುಟ್ಟು ಹಬ್ಬದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ತಾಲ್ಲೂಕು ಇದರ ವತಿಯಿಂದ ಉದ್ಯಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಸಹಯೋಗದೊಂದಿಗೆ ಸ್ವರ್ಣಾಮೃತ ಪ್ರಾಶನ ಕಾರ್ಯಕ್ರಮ ತ್ರಾಸಿ ಯೋಜನಾ ಕಚೇರಿಯಲ್ಲಿ ನಡೆಯಿತು. ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಆಯುರ್ವೇದ ಕಾಲೇಜು ವ್ಯವಸ್ಥಾಪಕ ಡಾ.ನಾಗರಾಜ್ ಪೂಜಾರಿ, ಶಾಸ್ತ್ರೋಕ್ತವಾಗಿ ಮಕ್ಕಳಿಗೆ ‘ಸ್ವರ್ಣಾಮೃತ ಪ್ರಾಶನ’ ಎಂಬ ದಿವ್ಯ ಔಷಧಿಯನ್ನು ಪ್ರತಿ ತಿಂಗಳು ಪು? ನಕ್ಷತ್ರದಂದು ನೀಡಲಾಗುತ್ತಿದೆ. ಹುಟ್ಟಿನಿಂದ 16 ವರ್ಷವರೆಗಿನ ಮಕ್ಕಳಿಗೆ ಪ್ರತಿ ತಿಂಗಳು ಹಾಕಿದಲ್ಲಿ ಅತ್ಯುತ್ತಮ ಪರಿಣಾಮ ಬೀರುತ್ತದೆ. ಕನಿಷ್ಠ 21ಬಾರಿ ಪ್ರತಿ ತಿಂಗಳು ಬಿಡದೆ ಹಾಕಿದಲ್ಲಿ ತುಂಬಾ ಪರಿಣಾಮಕಾರಿ ಎಂದು ಹೇಳಿದರು. ಮಕ್ಕಳ ತಜ್ಞ ಡಾ. ಪ್ರಥ್ವಿರಾಜ್ ಪುರಾಣಿಕ್, ಕೇಂದ್ರ ಸಮಿತಿ ಒಕ್ಕೂಟ ಅಧ್ಯಕ್ಷ ರಘುರಾಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಿಆರ್ಝೆಡ್ನಲ್ಲಿ ಗುರುತಿಸಲಾಗಿ ರುವ ಮರಳುಗಾರಿಕೆ ದೋಣಿ ಹಾಗೂ ಮರಳು ಸಾಗಾಟ ವಾಹನಗಳಿಗೆ ಅಳವಡಿಸಿರುವ ಜಿಪಿಎಸ್ ತಂತ್ರಾಂಶ ನಿಯಂತ್ರಣ ಹಾಗೂ ಉಲ್ಲಂಘನೆ ಬಗ್ಗೆ ಪರಿಶೀಲಿಸಲು ಜಿಪಿಎಸ್ ಮಾನಿಟರಿಂಗ್ ಸೆಂಟರ್ ಆರಂಭಿಸಲಾಗಿದೆ ಎಂದು ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಅಧ್ಯಕ್ಷ, ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದ್ದಾರೆ. ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ, ದಾಸ್ತಾನು ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ 24X7 ಅಲರ್ಟ್ ಆಗಿರುವಂತೆ ಈ ಸೆಂಟರ್ನ್ನು ಎನ್ಐಸಿ, ಇ-ಗವರ್ನೆನ್ಸ್ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ವತಿಯಿಂದ ಪ್ರಾರಂಭಿಸಲಾಗಿದೆ. ಈ ಕಂಟ್ರೋಲ್ ರೂಂನ ದೂರವಾಣಿ ಸಂಖ್ಯೆ 0820-2950088 ಆಗಿದ್ದು, ಅನಧಿಕೃತ ಗಣಿಗಾರಿಕೆ, ಸಾಗಾಣಿಕೆ ಹಾಗೂ ದಾಸ್ತಾನು ನಿಯಂತ್ರಿಸುವ ಸಲುವಾಗಿ ಜಿಲ್ಲೆಯಲ್ಲಿ ತಾಲೂಕು ಮಟ್ಟದ ಅಧಿಕಾರಿ ಗಳನೊಳಗೊಂಡ ಚಾಲಿತ ದಳ ರಚಿಸಲಾಗಿದೆ ಎಂದರು. ಕುಂದಾಪುರ, ಬ್ರಹ್ಮಾವರ, ಉಡುಪಿ ತಾಲೂಕು ವ್ಯಾಪ್ತಿಯ ವಾರಾಹಿ, ಸೌಪರ್ಣಿಕಾ, ಸ್ವರ್ಣಾ ಮತ್ತು ಸೀತಾನದಿ ಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾಠ್ಯ ಹಾಗೂ ನಾನ್ ಸಿಆರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸುರಭಿ ರಿ. ಬೈಂದೂರು ಸಂಸ್ಥೆಯ ವಿಶೇಷ ಸಭೆ ಇತ್ತಿಚಿಗೆ ಬೈಂದೂರು ರೋಟರಿ ಭವನದಲ್ಲಿ ಜರುಗಿತು. ಈ ಸಂದರ್ಭ ರಾಜ್ಯಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ 50ರಿಂದ 60 ವಯೋಮಾನ ವಿಭಾಗದ 400 ಮೀಟರ್ ಓಟದ ಸ್ವರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ ಮಟ್ಟಕ್ಕೆ ಆಯ್ಕೆಯಾದ ಗಂಗಾನಾಡು ಸ.ಹಿ.ಪ್ರಾ ಶಾಲೆ ಸಹಶಿಕ್ಷಕ ನಾಗರಾಜ ಬಿ. ಅವರನ್ನು ಸುರಭಿ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ಸುರಭಿ ಅಧ್ಯಕ್ಷ ನಾಗರಾಜ ಪಿ. ಯಡ್ತರೆ, ಕಾರ್ಯದರ್ಶಿ ಭಾಸ್ಕರ ಬಾಡ, ನಿರ್ದೇಶಕ ಸುಧಾಕರ ಪಿ. ಬೈಂದೂರು, ಸದಸ್ಯರಾದ ಆನಂದ ಮದ್ದೋಡಿ, ವೆಂಕಟೇಶ್ ಮಯ್ಯಾಡಿ ಮೊದಲಾದವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ಆಯೋಜಿಸಿದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆಯ ಕಟಾ ಮತ್ತು ಫೈಟಿಂಗ್, (ಕುಮೆಟಿ) ವಿಭಾಗದಲ್ಲಿ ಅನನ್ಯ ಎಸ್ ಪುರಾಣಿಕ್ ಪ್ರಥಮ ಮತ್ತು ತೃತೀಯ ಸ್ಥಾನಗಳಿಸಿ ಚಿನ್ನದ ಹಾಗೂ ಕಂಚಿನ ಪದಕ ಪಡೆದುಕೊಂಡಿದ್ದಾರೆ ಅವರು, ನಾಗೂರು ಸಂದೀಪನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ವಿದ್ಯಾರ್ಥಿನಿಯಾಗಿದ್ದು. ಉಪ್ಪುಂದ ಸೀತಾರಾಮ್ ಪುರಾಣಿಕ್ ಮತ್ತು ಉಷಾ ಪುರಾಣಿಕ್ ರವರ ಪುತ್ರಿ . ಉಪ್ಪುಂದ ಕರಾಟೆ ಶಿಕ್ಷಕ ವಿಶ್ವನಾಥ್ ದೇವಾಡಿಗ ಅವರಲ್ಲಿ ತರಬೇತಿಯನ್ನು ಪಡೆದುಕೊಂಡಿದ್ದಾರೆ.
