ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 67ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಂಡ “ಕೋಟಿ ಕಂಠ ಗಾಯನ” ಅಭಿಯಾನದ ಕಾರ್ಯಕ್ರಮ ಕುಂದಾಪುರದ ಗಾಂಧಿ ಮೈದಾನದಲ್ಲಿ ಶುಕ್ರವಾರ ಜರುಗಿತು. ಕುಂದಾಪುರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಸರಕಾರಿ ನೌಕರರು ಸೇರಿದಂತೆ ಸುಮಾರು 5000 ಮಂದಿ ಕೋಟಿ ಕಂಠ ಗಾಯನದಲ್ಲಿ ಭಾಗವಹಿಸಿದ್ದಾರೆ. ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುಂದಾಪುರ ತಹಶೀಲ್ದಾರ್ ಕಿರಣ್ ಗೌರಯ್ಯ, ತಾಲೂಕು ಕ್ರೀಡಾ ಮತ್ತು ಯುವಜನ ಸೇವಾ ಅಧಿಕಾರಿ ಕುಸುಮಾಕರ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆಯ ಸಹ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್, ಡಿವೈಎಸ್ಪಿ ಶ್ರೀಕಾಂತ್ ಕೆ., ಉಪತಹಶೀಲ್ದಾರ್ ವಿನಯ್ ಮೊದಲಾದವರು ಉಪಸ್ಥಿತರಿದ್ದರು. ಆಕಾಶವಾಣಿ ಕಲಾವಿದ ಗಣೇಶ್ ಗಂಗೊಳ್ಳಿ ಅವರ ಸಾರಥ್ಯದಲ್ಲಿ ಒಟ್ಟು ನಾಲ್ಕು ಗೀತೆಗಳನ್ನು ಹಾಡಲಾಯಿತು. ಬಿಸಿಲಿಗೆ ತಲೆಸುತ್ತಿ ಬಿದ್ದ ವಿದ್ಯಾರ್ಥಿಗಳು:ಬೆಳಿಗ್ಗೆ 11 ಗಂಟೆಯ ಬಿಸಿಲಿನ ಜಳಪಿಗೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಲೆಸುತ್ತಿ ಬಿದ್ದ ಘಟನೆಯೂ ನಡೆಯಿತು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.28: ಮನೆಯಲ್ಲಿ ಓದುತ್ತಿದ್ದ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ತಾಲೂಕಿನ ತಲ್ಲೂರಿನಲ್ಲಿ ನಡೆದಿದೆ. ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ, ಹೃದಯಾಘಾತಕ್ಕೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಬಾಲಕಿ. ಗುರುವಾರ ಬೆಳಿಗ್ಗೆ ಮನೆಯ ಮೊದಲ ಮಹಡಿಯಲ್ಲಿ ಓದುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ಕಳೆದುಕೊಂಡ ಅನುಶ್ರೀ, ಆಸ್ಪತ್ರೆಗೆ ಕರೆದೊಯ್ಯುವ ಮೊದಲೇ ಕೊನೆಯುಸಿರೆಳೆದಿದ್ದಳು. ಅನುಶ್ರೀಯ ಮೃತದೇಹದ ಮರಣೋತ್ತರ ಪರೀಕ್ಷೆ ಮಣಿಪಾಲ ಆಸ್ಪತ್ರೆಯಲ್ಲಿ ನಡೆದಿದ್ದು, ಮರಣೋತ್ತರ ವರದಿ ಇನ್ನಷ್ಟೇ ದೊರೆಯಬೇಕಿದೆ. ಗುರುವಾರ ರಾತ್ರಿ ಬಾಲಕಿಯ ಅಂತ್ಯಕ್ರಿಯೆ ನಡೆಸಲಾಗಿದೆ. ಈ ಮೊದಲು ಆಕೆಯ ಕಣ್ಣುಗಳನ್ನು ದಾನ ಮಾಡಲಾಗಿದೆ. ಮೃತ ಅನುಶ್ರೀಯು ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಪೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿಯಾಗಿದ್ದಾಳೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸೆವೆನ್ ರಾಕರ್ಸ್ ಆಯೋಜನೆಯ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕುಂದಾಪುರದ ಸೆವೆನ್ ರಾಕರ್ಸ್ ಆಶ್ರಯದಲ್ಲಿ ದೀಪಾವಳಿಯ ಪ್ರಯುಕ್ತ ದಿ| ದಾಳಿ ಸುಧಾಕರ ಖಾರ್ವಿ ಇವರ ಸ್ಮರಣಾರ್ಥವಾಗಿ ಕೊಂಕಣಿ ಖಾರ್ವಿ ಸಮಾಜ ಬಾಂಧವರಿಗಾಗಿ ಆಯೋಜಿಸಿದ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಪ್ರಶಸ್ತಿ ಪಡೆದಿರುತ್ತಾರೆ. ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿದ್ಯಾರ್ಥಿ ಆಯುಷ್ ಜೆ.ಸಿ.ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ಪಡೆದಿರುತ್ತಾನೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೀನುಗಾರಿಕೆ ಋತು ಆರಂಭಗೊಂಡು ಎರಡೂವರೆ ತಿಂಗಳು ಕಳೆದರೂ, ಇದುವರೆಗೂ ಸೀಮೆಎಣ್ಣೆ ಹಂಚಿಕೆ ಮಾಡಿಲ್ಲ. ಪ್ರತಿ ನಾಡದೋಣೆಯವರಿಗೆ ತಲಾ ಮಾಸಿಕ 300ಲೀ ಸೀಮೆಣ್ಣೆಯನ್ನು ವಿತರಿಸುತ್ತೇವೆ ಎಂದ ರಾಜ್ಯ ಸರ್ಕಾರದ ಭರವಸೆ ಹುಸಿಯಾಗಿದೆ ಎಂದು ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ ಎ. ಆನಂದ ಖಾರ್ವಿ ಆರೋಪಿಸಿದರು. ಉಪ್ಪುಂದ ನಾಡದೋಣಿ ಭವನದಲ್ಲಿ ಗುರುವಾರ ನಡೆದ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಗಳ ಮೀನುಗಾರರ ಹಕ್ಕೊತ್ತಾಯ ಪ್ರತಿಭಟನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಔಟ್ಬೋರ್ಡ್ ಇಂಜಿನ್ ಅಳವಡಿಸಿ ಸಾಂಪ್ರಾದಾಯಿಕ ಮೀನುಗಾರಿಕೆ ನಡೆಸುತ್ತಿರುವ ನಾಡದೋಣಿಗಳಿಗೆ ರಾಜ್ಯ ಸರ್ಕಾರ ಒದಗಿಸುತ್ತಿರುವ ಮಾಸಿಕ ತಲಾ 150ಲೀ. ಸೀಮೆಎಣ್ಣೆ ಪ್ರಮಾಣವನ್ನು 300ಲೀ.ಗೆ ಹೆಚ್ಚಿಸಿದೆ. ಪ್ರಸ್ತುತ ಈ ಪ್ರಮಾಣದಲ್ಲಿ ಸೀಮೆಎಣ್ಣೆಯನ್ನು ಹಂಚಿಕೆ ಮಾಡದೇ ತಲಾ 150 ಲೀ. ಸೀಮೆಎಣ್ಣೆ ಮಾತ್ರ ಪ್ರತಿ ತಿಂಗಳಿಗೆ ಒದಗಿಸುತ್ತಿದ್ದು, ಆದರೆ ಈ ಬಾರಿ ಅದು ಕೂಡ ದೊರೆತಿಲ್ಲ. ಮೂರು ಜಿಲ್ಲೆಗಳಲ್ಲಿ ಸುಮಾರು 8130 ಪರ್ಮಿಟ್ ಹೊಂದಿದ ದೋಣಿಗಳಿವೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,27: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ವತಿಯಿಂದ ಉದ್ಯಮಿ, ಸಮಾಜ ಸೇವಕ ಡಾ. ಗೋವಿಂದ ಬಾಬು ಪೂಜಾರಿ ನೇತೃತ್ವದಲ್ಲಿ ಅಕ್ಟೋಬರ್ 30ರಂದು ಬೃಹತ್ ಉದ್ಯೋಗ ಮೇಳ ಜರುಗಲಿದೆ. ಈ ಕುರಿತು ಇಂದು ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶ್ರೀವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಮಾತನಾಡಿ, ಉಪ್ಪುಂದ ರಾಷ್ಟ್ರೀಯ ಹೆದ್ದಾರಿ – 66 ಬಳಿಯ ನಂದನವನ ಹಾಸ್ಪಿಟಾಲಿಟಿ ಮತ್ತು ಸರ್ವಿಸಸ್ – ಹೋಟೆಲ್ ಪ್ರಜ್ಞಾ ಸಾಗರ ಹಾಲ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ದೇಶದ ಪ್ರತಿಷ್ಠಿತ 30ಕ್ಕೂ ಅಧಿಕ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದೆ. ಜಿಲ್ಲೆಯ ಪಿಯುಸಿ, ಬಿಕಾಂ, ಬಿಬಿಎಂ, ಬಿಸಿಎ, ಬಿಇ, ಬಿಎಸ್ಸಿ, ಡಿಪ್ಲೋಮಾ, ಐಟಿಐ ವಿದ್ಯಾರ್ಥಿಗಳಿಗೆ ಈ ಉದ್ಯೋಗ ಮೇಳ ಸುವರ್ಣವಕಾಶವಾಗಲಿದೆ ಎಂದರು. ಉದ್ಯೋಗ ಮೇಳದಲ್ಲಿ ಸಂದರ್ಶನದಲ್ಲಿ ಭಾಗಿಯಾಗಲಿರುವ ವಿದ್ಯಾರ್ಥಿಗಳು ಪೂರ್ವಭಾವಿಯಾಗಿ ಅ.28 ಹಾಗೂ 29ರಂದು ನಡೆಯಲಿರುವ ತರಬೇತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ನಾಗರಾಜ್ ಯಡ್ತರೆ, ಸತ್ಯನಾರಾಯಣ ಗಾಣಿಗ ಇದ್ದರು. ನೊಂದಣಿಗೆ:https://forms.gle/8QKDfmammkiEJGdY7
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ದಾಪುರ – ಹೊಸಂಗಡಿ ರೋಟರಿ ಕ್ಲಬ್ ಆತಿಥ್ಯದಲ್ಲಿ ಸಿದ್ಧಾಪುರದ ಹೋಟೆಲ್ ಪ್ರಶ್ವಿನ್ ಇನ್ ಸಭಾಂಗಣದಲ್ಲಿ ರೋಟರಿ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳು ಇತ್ತೀಚಿಗೆ ಜರುಗಿತು. ಸ್ವರ್ಧೆಯಲ್ಲಿ ರೋಟರಿ ಕ್ಲಬ್ ಕುಂದಾಪುರ ಚಿತ್ರಕಲೆ ( ಸೀನಿಯರ್ ಮತ್ತು ಜೂನಿಯರ್ ), ಏಕಪಾತ್ರಾಭಿನಯ, ಯುಗಳಗೀತೆ, ಸಿನಿಮಾರಂಗ, ಪ್ರಹಸನದಲ್ಲಿ ಪ್ರಥಮ ಬಹುಮಾನ, ಕಸದಿಂದ ರಸ, ಭಕ್ತಿಗೀತೆ, ಸಮೂಹಗಾನ, ಸಮೂಹ ನೃತ್ಯ ಗಳಲ್ಲಿ ದ್ವೀತಿಯ ಬಹುಮಾನ ಗಳಿಸುವುದರೊಂದಿಗೆ ಒಟ್ಟು 12 ಸ್ಪರ್ಧೆಗಳಲ್ಲಿ 10 ರಲ್ಲಿ ವಿಜೇತರಾಗಿ ಸಮಗ್ರ ಪ್ರಶಸ್ತಿ ಪಡೆದು ಚಾಂಪಿಯನ್ ಆಗಿದೆ. ರೋಟರಿ ಕುಂದಾಪುರದ ಅಧ್ಯಕ್ಷರಾದ ವೆಂಕಟೇಶ್ ನಾವುಂದ ನೇತೃತ್ವದಲ್ಲಿ ಕಾರ್ಯದರ್ಶಿ ನಾಗರಾಜ್ ಶೆಟ್ಟಿ ಆ್ಯನ್ಸ್ ಅಧ್ಯಕ್ಷೆ ಸ್ಮಿತಾ ವೆಂಕಟೇಶ ಸಹಕಾರ ಹಾಗೂ ಜಿಲ್ಲಾ ಸಾಂಸ್ಕೃತಿಕ ಸಭಾಪತಿ ಕೊಡ್ಲಾಡಿ ಸುಭಾಷ್ಚಂದ್ರ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ಸ್ವರ್ಧೆಯಲ್ಲಿ ಭಾಗವಹಿಸಿದ್ದರು. ಪ್ರಶಸ್ತಿ ವಿತರಣೆ ಸಮಾರಂಭದ ಅಧ್ಯಕ್ಷತೆಯನ್ನು ಸಿದ್ದಾಪುರ ಹೊಸಂಗಡಿ ರೋಟರಿ ಕ್ಲಬ್ ನ ಅದ್ಯಕ್ಷ ಶಂಕರನಾರಾಯಣ ಕನ್ನಂತ ವಹಿಸಿದ್ದರೆ, ಮುಖ್ಯ ಅತಿಥಿಗಳಾಗಿ ಪಿಡಿಜಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರಕಾರಿ ಕಾಲೇಜಿನ ಓರ್ವ ಹಿರಿಯ ವಿದ್ಯಾರ್ಥಿ ಕನ್ನಡಿಗ ಗ್ರಾಮೀಣ ಪ್ರತಿಭೆ ಇವತ್ತು ಒಮನ್ ಅಸೋಸಿಯೇಶನ್ ಆಫ್ ಚಾರ್ಟಡ್ ಪಬ್ಲಿಕ್ ಅಕೌಂಟೆಂಟ್ಸ್ ಸದಸ್ಯರಾಗಿ ಆಯ್ಕೆಯಾದ ಮೊಟ್ಟಮೊದಲ ಭಾರತೀಯರು ಎನ್ನುವುದು ಹೆಮ್ಮೆಯ ಸಂಗತಿ ಎಂದು ಹಳೆ ವಿದ್ಯಾರ್ಥಿ ಸಂಘದಿಂದ ಸನ್ಮಾನಿಸಿ, ಅಧ್ಯಕ್ಷರಾದ ಪ್ರವೀಣ್ ಚಂದ್ರ ಶೆಟ್ಟಿ ಅವರು ಹೇಳಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಆಯೋಜಿಸಿದ್ದ ಸಿಎ ರಮಾನಂದ ಪ್ರಭುರವರಿಗೆ ಅಭಿನಂದನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ, ಐಸಿಎಐ ದೆಹಲಿಯಿಂದ ತಮ್ಮ ಅಧ್ಯಕ್ಷತೆಯ ಅವಧಿಯಲ್ಲಿ ಮಸ್ಕತ್ ಚಾಪ್ಟರ್ ಐಸಿಎಐಗೆ “ಬೆಸ್ಟ್ ಓವರ್ಸೀಸ್ ಅವಾರ್ಡ್” ತಂದುಕೊಟ್ಟ ಕೀರ್ತಿ ಹೆಗ್ಗಳಿಕೆ ರಮಾನಂದ ಪ್ರಭು ಅವರದ್ದು. ತಮ್ಮ ಶೈಕ್ಷಣಿಕ ಮತ್ತು ಸಾಮಾಜಿಕ ಕೊಡುಗೆಗಳಿಗಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡವರು, ತಮ್ಮ ಗೌರವಾಧ್ಯಕ್ಷ ಅವಧಿಯಲ್ಲಿ ಕಾಲೇಜಿಗೆ ಹೆಚ್ಚಿನ ಕೊಡುಗೆ ನೀಡುವಂತಾಗಲಿ ಎಂದರು. ಇದೇ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಇನ್ನೂರು ಕುರ್ಚಿಗಳನ್ನು ದೇಣಿಗೆ ರೂಪದಲ್ಲಿ ಕಾಲೇಜಿಗೆ ಹಸ್ತಾಂತರಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಕಾಂತಾರ (Kantara) ಸಿನಿಮಾದ ಗೆಲುವು ರಿಷಬ್ ಶೆಟ್ಟಿ ಅವರಿಗೆ ಅಚ್ಚರಿ ಮೇಲೆ ಅಚ್ಚರಿ ನೀಡುತ್ತಿದೆ. ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಈ ಸಿನಿಮಾ ನೋಡಿ, ಮೆಚ್ಚಿಕೊಂಡಿದ್ದಾರೆ. ಅನೇಕ ತಾರೆಯರು ಸ್ವತಃ ರಿಷಬ್ ಶೆಟ್ಟಿ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಅವರು ಕಾಂತಾರ ಸಿನಿಮಾ ನೋಡಿ ರಿಷಬ್ ಅವರ ಜೊತೆ ಮಾತನಾಡಿ, ಬಳಿಕ ಟ್ವಿಟ್ ಮಾಡಿ ಸಿನಿಮಾದ ಬಗ್ಗೆ ಹಾಡಿ ಹೊಗಳಿದ್ದಾರೆ. ಕಾಂತಾರ ಸಿನಿಮಾ ವೀಕ್ಷಿಸಿ ಮೆಚ್ಚಿಕೊಂಡ ಸೂಪರ್ ಸ್ಟಾರ್ ರಜನಿಕಾಂತ್‘ಕಾಂತಾರ ಸಿನಿಮಾ ನೋಡುವಾಗ ರೋಮಾಂಚನ ಆಯಿತು. ರಿಷಬ್ ಶೆಟ್ಟಿ ಅವರಿಗೆ ಹ್ಯಾಟ್ಸಾಫ್. ಭಾರತೀಯ ಚಿತ್ರರಂಗದಲ್ಲಿ ಮಾಸ್ಟರ್ ಪೀಸ್ ಎನಿಸಿಕೊಂಡಿರುವ ಈ ಚಿತ್ರದ ಇಡೀ ತಂಡಕ್ಕೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ರಿಷಬ್ ಶೆಟ್ಟಿ ಅವರಿಗೂ ಕರೆ ಮಾಡಿ ಅಭಿನಂದನೆ ತಿಳಿಸಿದ್ದಾರೆ. “The unknown is more than the known” no one could have said this…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವ ಕರಾವಳಿಯ ಮಣ್ಣಿನ ಕಥೆಯನ್ನು ಸಾರುವ ಕಾಂತಾರ ಸಿನಿಮಾವನ್ನು, ರಾಜ್ಯ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ದೈವ ನರ್ತಕರು, ದರ್ಶನ ಪಾತ್ರಿಗಳು ಮತ್ತು ದೈವ ಸೇವೆ ಮಾಡುವವರ ಜೊತೆ ಬುಧವಾರ ಕುಂದಾಪುರದಲ್ಲಿ ವೀಕ್ಷಿಸಿದ್ದಾರೆ. ಕೋಟೇಶ್ವರದ ಭಾರತ್ ಸಿನಿಮಾಸ್’ನ ಒಂದು ಸ್ಕ್ರೀನ್ ಮುಂಗಡವಾಗಿ ಬುಕ್ ಮಾಡಿದ್ದ ಸಚಿವರು, ಉಡುಪಿ ಜಿಲ್ಲೆಯ ದೈವ ನರ್ತಕರು, ದರ್ಶನ ಪಾತ್ರಿಗಳು ಮತ್ತು ಸೇವೆ ಮಾಡುವವರ ಬೆಳಿಗ್ಗೆ 11:30ರ ಶೋ ವೀಕ್ಷಿಸುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ, ಕುಂದಾಪುರದವರಾದ ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ, ನಟಿಸಿರುವ ಕಾಂತಾರ ಚಿತ್ರ ಸದ್ಯ ಟಾಕ್ ಆಫ್ ನೇಷನ್ ಎಂಬಂತಾಗಿದೆ. ದೈವಾರಾಧನೆ, ಕಂಬಳ ಸಹಿತ ಕರಾವಳಿ ಸಂಸ್ಕೃತಿಯನ್ನು ತೆರೆದಿಟ್ಟು, ಮನೋಜ್ಞವಾಗಿ ಅಭಿನಯಿಸಿದ ರಿಷಬ್ ಶೆಟ್ಟಿ ಅವರ ಬಗ್ಗೆ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿರುವುದಲ್ಲದೇ ಹಲವು ದಾಖಲೆಗಳನ್ನು ಸಾಧಿಸಿ ಮುನ್ನುಗ್ಗುತ್ತಿದೆ. ಸಿನಿಮಾ ನೋಡುವುದಾಗಿ ನಿನ್ನೆಯೇ ಟ್ವಿಟರ್ ಮೂಲಕ ಮಾಹಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.24: ರಾಷ್ಟದಾದ್ಯಂತ ನಂದಿನಿ ಕೋಟ್ಯಾಂತರ ಜನರಿಗೆ ದೀಪಾವಳಿಯ ಸಿಹಿ ಹಂಚುತ್ತಿದೆ. ಆದರೆ ಹೈನುಗಾರರ ಪಾಲಿಗೆ ಬೆಳಕಿನಹಬ್ಬ ಕಹಿ ಅನುಭವ ನೀಡಿದೆ. ಕರ್ನಾಟಕ ಹಾಲು ಮಹಾಮಂಡಳವು ಪಶು ಆಹಾರದ ಬೆಲೆಯನ್ನು ಹೆಚ್ಚಿಸಿರುವುದರಿಂದ, ಹಾಲಿನ ದರ ಏರುವ ನಿರೀಕ್ಷೆಯಲ್ಲಿದ್ದ ರಾಜ್ಯದ ಹೈನುಗಾರರು ಇನ್ನಷ್ಟು ಸಂಕಷ್ಟಕ್ಕೀಡಾಗಿದ್ದಾರೆ ಎಂದು ದಕ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಹಾಗೂ ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಹೇಳಿದ್ದಾರೆ ಬೈಂದೂರು ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಅತೀ ಹೆಚ್ಚು ಉಲು ಉತ್ಪಾದಿಸುವ ಹೈನುಗಾರರ ಪೈಕಿ ತಾನೂ ಒಬ್ಬನಾಗಿದ್ದು ಪ್ರತಿವರ್ಷ 70 ಸಾವಿರ ಲೀಟರ್ ಹಾಲು ಉತ್ಪಾದಿಸಲಾಗುತ್ತಿದೆ. ಕೆಎಂಎಫ್ ಪಶು ಆಹಾರದ ದರವನ್ನು ಶೇ.30ರಷ್ಟು ಏರಿಕೆ ಮಾಡಿರುವುದರಿಂದ, ಪ್ರತಿ 50ಕೆ.ಜಿ ನಂದಿನಿ ಗೋಲ್ಡ್ ಪಶು ಆಹಾರದ ಬೆಲೆ 1053ರೂ ನಿಂದ 1180ರೂ. ಮತ್ತು ಬೈಪಾಸ್ ಪಶು ಆಹಾರ 1175 ರೂ ನಿಂದ 1302ರೂ. ಗೆ ಹೆಚ್ಚಳವಾಗಿದೆ. ಇದರಿಂದ…
