Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ಧಾಪುರ ಸರಕಾರಿ ಪ್ರೌಢಶಾಲೆಯಲ್ಲಿ ಎಚ್ಚರ ಗ್ರಾಹಕ ಶಿಕ್ಷಣ ಕ್ಲಬ್‌ನ ಉದ್ಘಾಟನೆಯನ್ನು ನ್ಯಾಯವಾದಿ ಮತ್ತು ಗ್ರಾಹಕ ಹಕ್ಕುಗಳ ಹೋರಾಟಗಾರ ಗುರುರಾಜ್ ರಾವ್ ನೆರವೇರಿಸಿದರು. ಕ್ಲಬ್‌ನ ಪದಾಧಿಕಾರಿಗಳಿಗೆ ಜಸ್ಟೀಸ್ ನಾಗಮೋಹನ ದಾಸ್ ಬರೆದಿರುವ ಸಂವಿಧಾನ ಓದು ಕೃತಿಯನ್ನು ವಿತರಿಸಿದರು. ಆನಂತರ ಮಾತನಾಡಿದ ಅವರು ಗ್ರಾಹಕರು ತಮ್ಮ ಹಕ್ಕುಗಳ ಉಲ್ಲಂಘನೆಯಾದಾಗ ಮತ್ತು ಅನ್ಯಾಯವಾಗಿದೆ ಎಂದು ಅನಿಸಿದಾಗ ಕಾನೂನಿನ ಸಹಾಯ ಪಡೆಯಬಹುದು. ಆದರೆ, ಕಾನೂನಿನ ಸಹಾಯ ಪಡೆಯಲೂ ಸೂಕ್ತ ಶಿಕ್ಷಣದ ಅಗತ್ಯವಿದೆ. ನಾವು ಎಚ್ಚರವಿರುವ ಗ್ರಾಹಕರಾಗಿದ್ದಾಗ ಮಾತ್ರ ಕಾನೂನು ಹೋರಾಟದಲ್ಲಿ ಗೆಲುವು ಸಾಧಿಸಬಹುದು. ಎಂದರು. ಈ ಸಂದರ್ಭ ಎಚ್ಚರ ಗ್ರಾಹಕ ಶಿಕ್ಷಣ ಕ್ಲಬ್‌ನ ಪ್ರಾಮಾಣಿಕ ಅಂಗಡಿಯನ್ನು ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ವೈಷ್ಣವಿ ಸಾಮಗ್ರಿಗಳನ್ನು ಖರೀದಿಸುವ ಮೂಲಕ ಚಾಲನೆ ನೀಡಿದರು. ಸಮಾಜ ವಿಜ್ಞಾನ ಶಿಕ್ಷಕಿ ಶ್ರೀಮತಿ ಶಿವಗಂಗಾರವರು ಗುಣಮಟ್ಟದ ಚಿನ್ಹೆಗಳ ಕುರಿತು ಮಾಹಿತಿ ನೀಡಿದರು. ಮುಖ್ಯಶಿಕ್ಷಕರಾದ ಚಂದ್ರ ಕುಲಾಲ ಅಧ್ಯಕ್ಷತೆ ವಹಿಸಿದ್ದರು. ಮಾರ್ಗದರ್ಶಿ ಶಿಕ್ಷಕರಾದ ಉದಯ ಗಾಂವಕಾರ ಕ್ಲಬ್ಬಿನ ಧ್ಯೇಯೋದ್ಧೇಶಗಳನ್ನು ತಿಳಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಾನವ ಹಕ್ಕುಗಳ ಕೋಶ ಇದರ ಆಶ್ರಯದಲ್ಲಿ ಸಂವಿಧಾನ ದಿನ’ವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಮಾತನಾಡಿ, ನಮ್ಮ ದೇಶದ ಸಂವಿಧಾನ ವಿಶಿಷ್ಟ ಮತ್ತು ಶ್ರೇಷ್ಟ ಸಂವಿಧಾನವಾಗಿದೆ. ಸಂವಿಧಾನ ಕೇವಲ ನಮಗೆ ಅಧಿನಿಯಮಗಳನ್ನು ಹೇಳುವುದಕ್ಕೆ ಮಾತ್ರ ಸೀಮಿತವಾಗದೇ ನಮ್ಮ ಬದುಕು ಆಗಿದೆ. ಇದರಲ್ಲಿ ಎಷ್ಟೋ ವಿಷಯಗಳನ್ನು ತಿಳಿದಷ್ಟು ಎಷ್ಟೋ ಅಂತಃಸತ್ವವುಳ್ಳ ವಿಚಾರಗಳು ಅದರಲ್ಲಿ ಅಡಗಿದೆ. ನಮ್ಮ ಸಂವಿಧಾನವನ್ನು ಕೆಲವರು ಬೇಲೂರಿನ ಶಿಲ್ಪಕಲೆಗೆಳಿಗೆ ಮತ್ತೆ ಕೆಲವರು ಕಾವ್ಯಗಳಿಗೆ ಹೋಲಿಸಿದ್ದಾರೆ. ವಿವಿಧತೆಯಲ್ಲಿ ಏಕತೆ ಇರುವಂತಹ ಭಾರತದ ಸಂವಿಧಾನ ಪ್ರಪಂಚದ ಅತಿದೊಡ್ಡ ಸಂವಿಧಾನವಾಗಿದೆ. ಗಾತ್ರದಷ್ಟೇ ವಿಷಯಗಳನ್ನು ಒಳಗೊಂಡಿದೆ. ನಮ್ಮ ಇಡಿ ದೇಶವನ್ನು ಇದು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರಲ್ಲದೇ ಸಂವಿಧಾನ ರಚನೆಯಲ್ಲಿ ಪಾಲ್ಗೊಂಡವರ ಕುರಿತು ಅವರು ಸ್ತೂಲವಾಗಿ ಪರಿಚಯಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಪಿ. ನಾರಾಯಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾನವ ಹಕ್ಕುಗಳ ಕೋಶದ ಸಂಯೋಜಕರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. 1949ರ ನವೆಂಬರ್ 26ರಂದು ಅಂಗಿಕಾರಗೊಂಡ ಸಂವಿಧಾನದ ಒಡವೆ, ಸಂವಿಧಾನದ ಕೈದೀಪ ಮತ್ತು ರಾಜಕೀಯ ಜಾತಕ ಎಂದೇ ಕರೆಯಲ್ಪಡುವ ಸಂವಿಧಾನದ ಪೂರ್ವಪೀಠಿಕೆಯಲ್ಲಿ, ಅಡಕವಾಗಿರುವ ‘ಸಾರ್ವಭೌಮ ಸಮಾಜವಾದಿ, ಪ್ರಜಾಸತ್ತಾತ್ಮಕ’ ಪದಗಳನ್ನು ಅತ್ಯಂತ ಸೋದಾಹರಣವಾಗಿ ವಿವರಿಸುವುದರ ಮೂಲಕ ಸರ್ವ ಶೃದ್ಧಾ ಪೂರ್ವಕವಾಗಿ ಸಂವಿಧಾನದ ಆಶೋತ್ತರಗಳಿಗೆ ಬದ್ಧರಾಗಿರುವುದಕ್ಕೆ ಸಂಕಲ್ಪತೊಟ್ಟವರಾಗಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಾಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ್, ಆಡಳಿತ ನಿರ್ದೇಶಕರಾದ ದೋಮ ಚಂದ್ರಶೇಖರ್ ಮತ್ತು ಎಲ್ಲಾ ಅಂಗ ಸಂಸ್ಥೆಗಳ ಮುಖ್ಯಸ್ಥರು, ಶಿಕ್ಷಕ ವೃಂದ, ಶಿಕ್ಷಕೆತರ ವೃಂದ, ಸಂಸ್ಥೆಗಳ ಎಲ್ಲಾ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು. ಹಿರಿಯ ಶಿಕ್ಷಕರಾದ ಜಯಶೀಲ ಶೆಟ್ಟಿ ಸಂವಿಧಾನದ ಪೂರ್ವ ಪೀಠಿಕೆಯನ್ನು ಅರ್ಥಪೂರ್ಣವಾಗಿ ವಿವರಿಸುವುದರೊಂದಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಅಭಿವೃದ್ದಿಗೆ ಯುವಜನತೆ ನೀಡುವ ಸಹಕಾರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯಲ್ಲಿನ ವಿವಿಧ ಯೋಜನೆಗಳ ಪ್ರಗತಿಗೆ ಯುವಜನತೆ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಉಡುಪಿ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ,ಉಡುಪಿ, ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಇವರ ಸಹಕಾರದೊಂದಿಗೆ ನಡೆದ, ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯ ಯುವ ಜನತೆ ಇತ್ತೀಚೆಗೆ ನಡೆದ ಫಿಟ್ ಇಂಡಿಯಾ, ಕ್ಲೀನ್ ಇಂಡಿಯಾ ಕಾರ್ಯಕ್ರಮ ಸೇರಿದಂತೆ ಹಲವು ಕಾರ್ಯಕ್ರಮಗಳ ಸಂಪೂರ್ಣ ಯಶಸ್ಸಿಗೆ ಉತ್ತಮ ಸಹಕಾರ ನೀಡಿದ್ದು, ಜಿಲ್ಲಾಡಳಿತ ಕೂಡಾ ಯುವಜನತೆ ನೀಡುವ ಸಲಹೆಗಳನ್ನು ಪರಿಗಣಿಸುತ್ತಿದ್ದು, ಯುವ ಜನತೆಯ ಕೋರಿಕೆ ಮೇರೆಗೆ ಇತ್ತೀಚೆಗೆ ಐ.ಎ.ಎಸ್. ಕೆ.ಎ.ಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಮಾಹಿತಿ ಮತ್ತು ತರಬೇತಿಯನ್ನು ಏರ್ಪಡಿಸಲಾಗಿದೆ. ಸ್ವಚ್ಚತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದಿಂದ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಭಾರತೀಯ ಸಮಾಜದಲ್ಲಿ ಮಹಿಳೆಯರ ಪ್ರಾಮುಖ್ಯತೆ, ರಾಷ್ಟ್ರ ನಿರ್ಮಾಣ ಹಾಗೂ ಪ್ರಗತಿಯಲ್ಲಿ ಅವರ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಂಡಾರ್ಕಾರ್ಸ್ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ. ರೇಖಾ ಬನ್ನಾಡಿ ಮಾತನಾಡಿ, ಭಾರತೀಯ ಸಮಾಜದಲ್ಲಿ ಮಹಿಳೆಯರು ಅನಾದಿ ಕಾಲದಿಂದಲೂ ಒಂದಲ್ಲ ಒಂದು ರೀತಿಯ ಶೋಷಣೆ, ದೌರ್ಜನ್ಯ, ದಬ್ಬಾಳಿಕೆಗಳಿಗೆ ಒಳಗಾಗುತ್ತಲೇ ಇದ್ದಾರೆ. ಮಾತ್ರವಲ್ಲದೇ ರಾಜಕೀಯ ಆರ್ಥಿಕ ಕ್ಷೇತ್ರಗಳಲ್ಲಿಯೂ ಮಹಿಳೆಯರ ಪಾಲ್ಗೊಳ್ಳುವಿಕೆ ಗಣನೀಯವಾಗಿ ಏರಿಕೆಯಾಗಿಲ್ಲ. ಇಂದು ಶಿಕ್ಷಣವು ಒಂದು ಪ್ರಬಲ ಸಾಧನವಾಗಿ ಪ್ರವಹಿಸುತ್ತಿರುವ ಈ ಹೊತ್ತಿನಲ್ಲಿ ಮಹಿಳೆಯರ ಸ್ಥಿತಿಗತಿಯಲ್ಲಿ ಕೊಂಚ ಪ್ರಗತಿ ಕಂಡುಬಂದಿದೆ. ಆದರೂ ಅದನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳಲಾಗದು. ರಾಮಾಯಣ ಮಹಾಭಾರತದಲ್ಲಿ ಬರುವ ಸೀತೆ ಮಂಡೊದರಿಯರಂತಹ ಪತಿವ್ರತೆಯರಿಂದ ಆರಂಭಗೊಂಡು ಇಂದಿನ ಆಧುನಿಕ ಸ್ತ್ರೀಯರವರೆಗೂ ಪತಿವ್ರತೆಯ ವಿಚಾರದಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳಿವೆ ಎಂದು ಹೇಳಿದರು. ಸೀತೆ ಮಂಡೊದರಿಯರಂತಹ ಪತಿವ್ರತೆಯರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜಾಗೃತಿ ಅರಿವಿನ ಸಪ್ತಾಹದ ಅಂಗವಾಗಿ ಮಂಗಳೂರು ರಿಫೈನರಿ ಮತ್ತು ಪೆಟ್ರೋಲಿಯಂ ಲಿಮಿಟೆಡ್ (ಎಂಆರ್‌ಪಿ ಎಲ್) ಹಾಗೂ ಮಣೇಲ್ ಶ್ರೀನಿವಾಸ್ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಹಯೋಗದಲ್ಲಿ ನಡೆದ ಹಿಂದಿ ಪ್ರಬಂಧ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜಿನ ವೃತ್ತಿಪರ ವಾಣಿಜ್ಯ ವಿಭಾಗದ ಜೆನಿಶಾ ಲಸ್ರಾಡೋ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ಜಿಲ್ಲೆಯಲ್ಲಿನ ವಿವಿಧ ಮೊಬೈಲ್ ಸಂಸ್ಥೆಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ, ಜಿಲ್ಲಾಮಟ್ಟದ ದೂರ ಸಂಪರ್ಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸರಿಯಾಗಿ ದೊರೆಯದ ಕಾರಣ ಗ್ರಾಮೀಣ ಜನತೆ ತುರ್ತು ಸಂದರ್ಭದಲ್ಲಿ ಅಗತ್ಯ ನೆರವು ಪಡೆಯಲು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ತಮ್ಮ ಸಂಬಂದಿಕರನ್ನು ಸಂಪರ್ಕಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳು ಸಹ ಆನ್‌ಲೈನ್ ಪಾಠಗಳನ್ನು ಕೇಳಲು ಸಾಕಷ್ಟು ಶ್ರಮ ಪಡುತ್ತಿದ್ದು, ನೆಟ್‌ವರ್ಕ್ ಸಂಪರ್ಕಕ್ಕಾಗಿ ಎತ್ತರದ ಮತ್ತು ಅಪಾಯಕಾರಿ ಸ್ಥಳಗಳನ್ನು ಆಶ್ರಯಿಸುತ್ತಿದ್ದಾರೆ. ಇಂತಹ ಪ್ರದೇಶಗಳಲ್ಲಿ ತ್ವರಿತಗತಿಯಲ್ಲಿ ಟವರ್ಗಳನ್ನು ಅಳವಡಿಸಿ, ನಿರಂತರವಾಗಿ ಮೊಬೈಲ್ ಸಂಪರ್ಕ ಹಾಗೂ ನಿಗದಿತ ವೇಗವನ್ನು ದೊರಕಿಸುವಂತೆ ವಿವಿಧ ಮೊಬೈಲ್ ಸಂಸ್ಥೆಗಳಿಗೆ ಕೂರ್ಮಾರಾವ್ ಎಂ.ಸೂಚಿಸಿದರು. ನೆಟ್‌ವರ್ಕ್ ಒದಗಿಸುವ ಸಂಸ್ಥೆಗಳು ಸಂಬಂಧಪಟ್ಟ ಗ್ರಾಮ ಪಂಚಾಯತ್ಗಳಿಗೆ ಬಾಕಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ಕಾರ್ಯದರ್ಶಿಯಾಗಿ ಕೇಶವ್ ಭಟ್ ನೇಮಕಗೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ರವರ ಅನುಮೋದನೆಯ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಬಿ.ಆರ್ ನಾಯ್ಡುರವರ ಸೂಚನೆ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾದ ರೋಷನ್ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕೇಶವ್ ಭಟ್ ಅವರನ್ನು ನೇಮಕ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ 6 ತಿಂಗಳುಗಳಿಂದ ತಾಂತ್ರಿಕ ಕಾರಣಗಳಿಂ ದಾಗಿ ಸ್ಥಗಿತಗೊಂಡಿದ್ದ ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿರುವ ರೈಲ್ವೆ ಟಿಕೆಟ್ ಬುಕ್ಕಿಂಗ್ ಕೇಂದ್ರ ಮತ್ತೆ ಕಾರ್ಯಾರಂಭಿಸಿದೆ. ಸರ್ವರ್ ಡೌನ್ ಆದ ಕಾರಣಕ್ಕೆ ಆರಂಭಿಕ ಕಾರ್ಯ ಚಟು ವಟಿಕೆ ನಿಲ್ಲಿಸಿದ್ದ ಕೇಂದ್ರವು ನಂತರ ನಾನಾ ಕಾರಣಕ್ಕೆ ಗ್ರಾಹಕ ಸೇವೆಯಿಂದ ದೂರವೇ ಉಳಿದಿತ್ತು. ಕುಂದಾಪುರ ರೈಲ್ವೆ ಪ್ರಯಾಣಿಕರ ಹಿತ ರಕ್ಷಣಾ ಸಮಿತಿ ಸಂಸದರು, ಕೊಂಕಣ ರೈಲ್ವೆ ನಿಗಮ ಇನ್ನಿತರರಿಗೆ ಮನವಿ ಸಲ್ಲಿಸಿದ್ದು, ಸಾರ್ವಜನಿಕರು ಸಹ ಮನವಿ ಅರ್ಪಿಸಿದ್ದರು. ಸ್ಪಂದಿಸಿದ ಕೇಂದ್ರ ಸಚಿವೆ:ಉಡುಪಿ-ಚಿಕ್ಕಮಗಳೂರು ಸಂಸದೆ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಕುಂದಾಪುರದ ರೈಲ್ವೆ ನಿಲ್ದಾಣದ ಪಿಆರ್‌ಎಸ್ ಪ್ರಧಾನ ಅಂಚೆ ಕಚೇರಿಯಲ್ಲಿ ನಾದುರಸ್ತಿಯಲ್ಲಿರುವುದನ್ನು ಮನಗಂಡು ಸಾರ್ವಜನಿಕ ಮನವಿಗೆ ಸ್ಪಂದಿಸಿ ಸಂಬಂಧಿತ ಇಲಾಖೆಯ ಗಮನ ಸೆಳೆದ ಹಿನ್ನೆಲೆ ಯಲ್ಲಿ ಶುಕ್ರವಾರ ಟಿಕೆಟ್ ಬುಕ್ಕಿಂಗ್ ಕೇಂದ್ರ ಕಾರ್ಯಾರಂಭಿಸಿದೆ. ಅಲ್ಲದೆ ಶಾಶ್ವತವಾಗಿ ಪಿಆರ್‌ಎಸ್ ಸೆಂಟರ್‌ನ್ನು ರೈಲ್ವೆ ನಿಲ್ದಾಣದಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆಯಲ್ಲಿ ಮಣ್ಣಿನಲ್ಲಿ ಹೂತು ಹೋಗಿದ್ದ ವಿಜಯನಗರ ಕಾಲದ ಅಪರೂಪದ ವೀರಗಲ್ಲನ್ನು ತಗ್ಗರ್ಸೆ ಟಿ. ನಾರಾಯಣ ಹೆಗ್ಗೆ ಕುಟುಂಬದವರ ಸಹಕಾರದಲ್ಲಿ ಶಿರ್ವದ ಎಂಎಸ್ಆರ್‌ಎಸ್ ಕಾಲೇಜಿನ ಪುರಾತತ್ವ ವಿಭಾಗದ ವಿದ್ಯಾರ್ಥಿಗಳು ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ. ಟಿ. ಮುರುಗೇಶಿ ಮಾರ್ಗದರ್ಶನದಲ್ಲಿ ಹೊರ ತೆಗೆಯಲಾಗಿದೆ. ಸುಮಾರು 5 ಅಡಿ ಎತ್ತರದ ಈ ವೀರಗಲ್ಲು ಆಯತಾಕಾರದಲ್ಲಿದ್ದು, ನಾಲ್ಕು ಚಿತ್ರಪಟ್ಟಿಕೆಗಳನ್ನು ಒಳಗೊಂಡಿದೆ. ಕೆಳಗಿನ ಪಟ್ಟಿಕೆಯಲ್ಲಿ ಇಬ್ಬರು ವೀರರು ಕೈಯಲ್ಲಿ ಖಡ್ಗ ಮತ್ತು ಗುರಾಣಿ ಹಿಡಿದು ಪರಸ್ಪರ ಎದುರು ಬದುರಾಗಿ ನಿಂತಿದ್ದಾರೆ. ಅವರ ಹಿಂದೆ ಇಬ್ಬರು ಸೇವಕರು ನಿಂತಿರುವಂತೆ ಚಿತ್ರಿಸಲಾಗಿದೆ. ಮೇಲಿನ ಎರಡು ಪಟ್ಟಿಕೆಗಳಲ್ಲಿಯೂ ಇದೇ ಚಿತ್ರಗಳು ಪುನರಾವರ್ತನೆಯಾಗಿವೆ ಮೊದಲಿನ ಚಿತ್ರಪಟ್ಟಿಕೆಯಲ್ಲಿ ಮಧ್ಯದಲ್ಲಿ ಶಿವಲಿಂಗ ಎಡಬದಿಯಲ್ಲಿ ಕುಳಿತ ಭಂಗಿಯಲ್ಲಿರುವ ನಂದಿ ಮತ್ತು ಬಲಬದಿಯಲ್ಲಿ ಅಂಜಲಿಬದ್ದನಾಗಿ ನಿಂತಿರುವ ವ್ಯಕ್ತಿಯ ಚಿತ್ರಣವಿದೆ. ಮೇಲಿನ ಪಟ್ಟಿಕೆಯ ಮೇಲ್ಬಾಗವನ್ನು ಕುದುರೆ ಲಾಳಾಕೃತಿಯ ವಿನ್ಯಾಸಗೊಳಿಸಲಾಗಿದ್ದು ಮಧ್ಯದಲ್ಲಿ ಸಿಂಹ ಲಾಂಛನವಿದೆ. ಶಾಸನದಲ್ಲಿನ ಕೆಲವೇ ಕೆಲವು…

Read More