ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಆಶ್ರಯದಲ್ಲಿ ನಾರಾಯಣ ವಿಶೇಷ ಮಕ್ಕಳ ಶಾಲೆಯಲ್ಲಿ ಹಲ್ಲಿನ ಸ್ವಚ್ಛತೆ ಮತ್ತು ಬಾಯಿಯ ಆರೋಗ್ಯ ದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ದಂತ ಸ್ವಚ್ಛತಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕುಂದಾಪುರ ಮಾರಲ ಡೆಂಟಲ್ ಕ್ಲಿನಿಕ್ ದಂತ ವೈದ್ಯ ಡಾ. ರಾಜಾರಾಂ ಶೆಟ್ಟಿ, ಮಕ್ಕಳಲ್ಲಿ ಹಲ್ಲಿನ, ಬಾಯಿಯ ಆರೋಗ್ಯದ ಮಹತ್ವ ಮತ್ತು ಹಲ್ಲುಜ್ಜುವ ಸರಿಯಾದ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಕಾರ್ಯಕ್ರಮದಲ್ಲಿ ಕುಂದಾಪುರ ರೋಟರಿ ಕ್ಲಬ್ನ ಅಧ್ಯಕ್ಷರಾದ ಶಶಿಧರ್ ಹೆಗ್ಡೆ, ವಿಶೇಷ ಮಕ್ಕಳ ಪಾಲನೆಯಲ್ಲಿ ಫೋಷಕರು ಅತ್ಯಂತ ತಾಳ್ಮೆ ಮತ್ತು ಕಾಳಜಿಯಿಂದ ಬೆಳೆಸಬೇಕು ಎಂದರು ಮತ್ತು ರೋಟರಿ ಕ್ಲಬ್ ಕುಂದಾಪುರ ಇಂತಹ ಕಾರ್ಯಗಳಿಗೆ ಸದಾ ಬೆಂಬಲವನ್ನು ನೀಡಲಿದೆ ಎಂಬ ಭರವಸೆಯನ್ನು ನೀಡಿದರು. ತಲ್ಲೂರು ಗ್ರಾಮ ಪಂಚಾಯತ್ನ ಅಧ್ಯಕ್ಷರಾದ ಭೀಮವ್ವ ಪಂಚಾಯತ್ ಮೂಲಕ ವಿಶೇಷ ಮಕ್ಕಳಿಗೆ ದೂರೆಯುವ ಸವಲತ್ತುಗಳನ್ನು ದೂರಕಿಸಿ ಕೊಡುವಲ್ಲಿ ವಿಶೇಷ ಪ್ರಯತ್ನವನ್ನು ನಡೆಸುವುದರೊಂದಿಗೆ ಸಂಸ್ಥೆಯ ಚಟುವಟಿಕೆಗಳನ್ನು ಪ್ರಶಂಸಿದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕನ್ನಡಕ್ಕಾಗಿ ನಾವು ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮ ಕುಂದಾಪುರದ ವಿವಿಧೆಡೆ ನಡೆಯಿತು. ಕುಂದಾಪುರದ ಮಿನಿವಿಧಾನಸೌಧ, ತಾಲೂಕು ಪಂಚಾಯತ್ ಕಛೇರಿ, ಕೋಡಿ ಸೀವಾಕ್, ಕುಂದಾಪುರ ಬೋರ್ಡ್ ಹೈಸ್ಕೂಲ್, ಪದವಿ ಪೂರ್ವ ಕಾಲೇಜು, ಗಾಂಧಿ ಪಾರ್ಕ್ ವಿವಿಧೆಡೆಯಲ್ಲಿ ನಡೆದ ಗೀತ ಗಾಯನದಲ್ಲಿ ಅಧಿಕಾರಿಗಳು, ವಿದಾರ್ಥಿಗಳು ಹಾಗೂ ಸಾರ್ವಜನಿಕರು ಕನ್ನಡ ಗೀತ ಗಾಯನದಲ್ಲಿ ಪಾಲ್ಗೊಂಡರು. ಆರಂಭದಲ್ಲಿ ನಾಡಗೀತ ಬಳಿಕ ನಿಗದಿಪಡಿಸಿದ ಮೂರು ಕನ್ನಡಗೀತೆ ಹಾಗೂ ಕೊನೆಯಲ್ಲಿ ರಾಷ್ಟ್ರಗೀತೆ ಹಾಡಲಾಯಿತು. ಕುಂದಾಪುರ ಮಿನಿ ವಿಧಾನಸೌಧದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ರಾಜು ಕೆ. ತಹಶೀಲ್ದಾರ್ ಕಿರಣ್ ಗೌರಯ್ಯ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು. ಗಾಯಕ ಗಣೇಶ್ ಗಂಗೊಳ್ಳಿ ಮೊದಲಾದವರು ಗೀತ ಗಾಯನದಲ್ಲಿ ಭಾಗವಹಿಸಿದರು. ಇದನ್ನೂ ಓದಿ:► ಬೈಂದೂರು ತಾಲೂಕಿನಲ್ಲಿ ಸಾಮೂಹಿಕ ಕನ್ನಡ ಗೀತ ಗಾಯನ – https://kundapraa.com/?p=54101 .
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮ ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆಯಿತು. ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಜಗತ್ತಿನಲ್ಲಿ ಅತ್ಯಂತ ಶ್ರೀಮಂತ ಪರಂಪರೆ, ಸಂಸ್ಕೃತಿಯ ಹಿರಿಮೆ ಕನ್ನಡ ನಾಡಿನದ್ದಾಗಿದೆ. ನಾಡಿನ ಏಳಿಗೆಗೆ ಪರಿಶ್ರಮ ಪಟ್ಟವರವನ್ನು ಸದಾ ನೆನಪಿಸಬೇಕಿದೆ. ನಾಡು ನುಡಿಯ ಚಿಂತನೆ ಭಾಷೆಯ ಅಭಿಮಾನ ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು. ಬೈಂದೂರು ತಾಲೂಕು ದಂಡಾಧಿಕಾರಿ ಶೋಭಾಲಕ್ಷ್ಮೀ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಹೈಸ್ಕೂಲು ವಿದ್ಯಾರ್ಥಿಗಳು, ರತ್ತೂಬಾಯಿ ಜನತಾ ಪ್ರೌಢಶಾಲೆ, ಯುಬಿ ಶೆಟ್ಟಿ ಶಾಲೆಯ ವಿದ್ಯಾರ್ಥಿಗಳು ಸಮೂಹ ಗಾಯನದಲ್ಲಿ ಪಾಲ್ಗೊಂಡರು. ಆರಂಭದಲ್ಲಿ ನಾಡಗೀತ ಬಳಿಕ ನಿಗದಿಪಡಿಸಿದ ಮೂರು ಕನ್ನಡಗೀತೆ ಹಾಗೂ ಕೊನೆಯಲ್ಲಿ ರಾಷ್ಟ್ರಗೀತೆ ಹಾಡಲಾಯಿತು. 600ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡರು. ಸಂಗೀತ ನಿರ್ದೇಶಕ ಚಂದ್ರ ಬಂಕೇಶ್ವರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 100 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸಿ ವಿಶ್ವ ದಾಖಲೆಗೈದಿರುವ ಅಂಗವಾಗಿ 45 ದಿನಗಳ ಕಾಲ ನಿರಂತರ ಸ್ವಯಂ ಸೇವಕರಾಗಿ ಕೆಲಸ ಮಾಡಿದ ಸೇವಾಭಾರತಿ ಕಾರ್ಯಕರ್ತರು, ಕಲಾಕ್ಷೇತ್ರ -ಕುಂದಾಪುರ ಸದಸ್ಯರು ಸೇರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರೊಂದಿಗೆ ಕುಂದಾಪುರ ಕಲಾಮಂದಿರದಲ್ಲಿ ಸಂಭ್ರಮವನ್ನು ಆಚರಿಸಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಾತನಾಡಿದ ಕಲಾಕ್ಷೇತ್ರ ಅಧ್ಯಕ್ಷ ರಾದ ಬಿ. ಕಿಶೋರ್ ಕುಮಾರ್ ಭಾರತ ಈ ರೀತಿ ಸಾಧನೆಯನ್ನು ಮಾಡಲು ಕೇಂದ್ರ ಸರ್ಕಾರದ ಜೊತೆಗೆ ಸ್ಥಳೀಯವಾಗಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ದಾದಿಯರು, ಹಾಗೂ ಆಶಾ ಕಾರ್ಯಕರ್ತೆಯರ ಶ್ರಮದಿಂದ ಇದು ಸಾಧ್ಯವಾಯಿತು. ನಿಮಗೆಲ್ಲರಿಗೂ ಅಭಿನಂದನೆಗಳು ಎಂದರು. ಆಸ್ಪತ್ರೆಯ ವೈದ್ಯರಾದ ಡಾ. ನಾಗೇಶ್ ಮಾತನಾಡಿ ಭಾರತ ವಿಶ್ವದಲ್ಲೇ 100 ಕೋಟಿ ಲಸಿಕೆ ವಿತರಣೆ ಮಾಡಿ, ಸಾಧನೆ ಮಾಡಿರುವ ಮೊದಲ ದೇಶವಾಗಿದ್ದು, ಇದಕ್ಕೆ ಕಾರಣ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಸಾರ್ವಜನಿಕ ರ ಬೆಂಬಲ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಖ್ಯಾತ ಯುವ ಪತ್ರಕರ್ತ ಹಾಗೂ ಛಾಯಾಗ್ರಾಹಕ ಜನಾರ್ದನ್ ಕೊಡವೂರು ಅವರು ಕರಾವಳಿ-ಇ-ಧ್ವನಿ ಡಿಜಿಟಲ್ ಮಾಧ್ಯಮ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿ.ಆರ್.ಸಿ.ಐ.) ಉಡುಪಿ – ಮಣಿಪಾಲ ಘಟಕ ಆಶ್ರಯದಲ್ಲಿ ವಿಶ್ವ ಸಂವಹನಕಾರರ ದಿನಾಚರಣೆ ಅಂಗವಾಗಿ ಕರಾವಳಿ ಇ – ಧ್ವನಿ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ. ಹುಟ್ಟುರಾದ ಕಂಜೂರಿನ ದಿ. ಲಕ್ಷ್ಮೀನಾರಾಯಣ ಹಾಗು ಸತ್ಯಭಾಮಾ ದಂಪತಿಗಳ ಪುತ್ರ ಜನಾರ್ದನ್ ಕೊಡವೂರು ಅವರು, ವಿಜಯವಾಣಿ ಪತ್ರಿಕೆಯ ಪ್ರಮುಖ ವರದಿಗಾರರಾಗಿಯೂ ಹಲವು ವರ್ಷದಿಂದ ವೃತ್ತಿಯಲ್ಲಿ ಸೇವೆ ಸಲ್ಲಿದ್ದಾರೆ. 2013ರಲ್ಲಿ ದೊರೆತ ಜಿಲ್ಲಾ ಕನ್ನಡ ರಾಜೋತ್ಸವ ಪ್ರಶಸ್ತಿ, ಉಪಾಧ್ಯಾಯ ಸಮ್ಮಾನ್ ಎಂಬ ರಾಜ್ಯ ಮಟ್ಟದ ಪ್ರಶಸ್ತಿ ಜೊತೆಗೆ ಯಶೋ ಮಾಧ್ಯಮ ಅವಾರ್ಡ್, ಪಲಿಮಾರು ಶ್ರೀಗಳು ಅನುಗ್ರಹಿಸಿ ನೀಡಿದ ಮಾಧ್ಯಮ ರತ್ನ ಪ್ರಶಸ್ತಿಗಳು ಹೀಗೆ ಹತ್ತು ಹಲವು ಅಭಿನಂದನಾ ಪತ್ರಗಳು ಅವರನ್ನು ಅರಸಿಕೊಂಡು ಬಂದಿದೆ. ‘ಕಾಲದೊಂದಿಗೆ ಓಟ’ ಕಂಬಳದ ಯಶಸ್ವಿ ಛಾಯಾಚಿತ್ರ ಪ್ರದರ್ಶನ, ನವರಾತ್ರಿ ನವರಸೋತ್ಸವದ ‘ಆಡಿಸಿದರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜೀವನ ಎಂಬುದು ಒಂದು ಕ್ರಿಕೆಟ್ ಸ್ಟೇಡಿಯಂ ಇದ್ದ ಹಾಗೆ ಬಾಲ್ ಎನ್ನುವ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇಕು. ಮಾತನಾಡುವ ಕಲೆ ನಾಯಕತ್ವದ ಗುಣ, ಸಕಾರಾತ್ಮಕ ಮನೋಭಾವವನ್ನು ಬೆಳೆಸಿಕೊಂಡಾಗ ಮಾತ್ರ ನಾವು ಯಶಸ್ವಿ ಜೀವನ ನಡೆಸಲು ಸಾಧ್ಯ. ಎಳವೆಯಲ್ಲೇ ಬದುಕನ್ನು ಎದುರಿಸುವ ಗುಣವನ್ನು ಬೆಳೆಸಿಕೊಳ್ಳಬೇಕೆಂದು ಜೇಸಿಐ ತರಬೇತುದಾರರಾದ ಅಕ್ಷತಾ ಗಿರೀಶ್ ಹೇಳಿದರು. ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ಸಂಯುಕ್ತ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಗುಜ್ಜಾಡಿ ಗೋಪಾಲ ನಾಯಕ ರೋಟರಿ ಸಭಾಂಗಣದಲ್ಲಿ ಆಯೋಜಿಸಲಾದ ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ನ ರಾಜೇಶ್ ಎಂ ಜಿ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರೋಟರ್ಯಾಕ್ಟ್ ಅಧ್ಯಕ್ಷರಾದ ಅಮೀಕ್ಷಾ ಡಿ ನಾಯ್ಕ್ ಹಾಗೂ ಕಾರ್ಯದರ್ಶಿ ರಾಮಕೃಷ್ಣ ಶೆಣೈ ಉಪಸ್ಥಿತರಿದ್ದರು. ಎನ್.ಎಸ್.ಎಸ್ ಯೋಜನಾಧಿಕಾರಿ ಸುಗುಣ ಆರ್ ಕೆ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ವಯಂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅ.27ರ ಬುಧವಾರ ಉಡುಪಿ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳ ವ್ಯಾಪ್ತಿಯ ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4:30ರ ತನಕ ಕೋವಿಡ್ ಪ್ರಥಮ ಹಾಗೂ ಎರಡನೇ ಡೋಸ್ ಲಸಿಕಾಕರಣ ಜರುಗಲಿದೆ. 18 ವರ್ಷ ಮೇಲ್ಪಟ್ಟ ಇದುವರೆಗೂ ಕೋವಿಡ್ ಲಸಿಕೆ ಪಡೆಯದವರು ಲಸಿಕಾ ಕೇಂದ್ರಕ್ಕೆ ಬಂದು ಪ್ರಥಮ ಡೋಸ್ ಲಸಿಕೆ ಪಡೆಯಬಹುದು. ಕೋವಿಶಿಲ್ಡ್ ಮೊದಲ ಡೋಸ್ ಪಡೆದು 84 ದಿನ ಹಾಗೂ ಕೋವಾಕ್ಸಿನ್ ಮೊದಲ ಡೋಸ್ ಪಡೆದು 28 ದಿನ ಮೀರಿದವರು 2ನೇ ಡೋಸ್ ಲಸಿಕೆ ಪಡೆದುಕೊಳ್ಳಬಹುದು. ಲಸಿಕಾ ಕೇಂದ್ರದಲ್ಲಿ ಕೋವಿಡ್-19 ಸ್ವ್ಯಾಬ್ ಟೆಸ್ಟ್ ಇರುವುದಿಲ್ಲ. ಪ್ರಥಮ ಡೋಸ್ ಲಸಿಕೆ ಪಡೆದ ದಿನಾಂಕ ನೆನಪಿಲ್ಲದಿರುವವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಮೊಬೈಲ್ ಸಂಖ್ಯೆ ಅಥವಾ ಆಧಾರ್ ಕಾರ್ಡಿನೊಂದಿಗೆ ಬಂದು ಪರಿಶೀಲಿಸಿ ಎರಡನೇ ಡೋಸ್ ಪಡೆಯಲು ಅರ್ಹರಿದ್ದರೆ ಪಡೆದುಕೊಳ್ಳಬಹುದು. 2ನೇ ಡೋಸ್ ಪಡೆಯುವ ನಿಗದಿತ ದಿನಾಂಕದಿಂದ ತುಂಬಾ ತಡವಾದಲ್ಲಿ ಕೋವಿಡ್ನಿಂದ ಆಗುವ ತೊಂದರೆ ಹೆಚ್ಚಿರುವುದರಿಂದ ಕೂಡಲೇ ಲಸಿಕೆ ಪಡೆಯುವಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಲ್ಪಿಂಗ್ ಹ್ಯಾಂಡ್ಸ್ ಟ್ರೋಫಿ – 2021 ಆಟಗಾರರ ಹರಾಜು ಪ್ರಕ್ರಿಯೆ ಕೋಟೆಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಹೆಲ್ಪಿಂಗ್ ಹ್ಯಾಂಡ್ಸ್ ಗೌರವಾಧ್ಯಕ್ಷರಾದ ಸತೀಶ್ ಸಾಲಿಯಾನ್ ಮಣಿಪಾಲ ವಹಿಸಿದ್ದರು. ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಅಶೋಕ ಪೂಜಾರಿ ಮಾತನಾಡಿ, ಹೆಲ್ಪಿಂಗ್ ಹ್ಯಾಂಡ್ಸ್ ಸಂಸ್ಥೆಯ ಸಮಾಜಪರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಲಾಕ್ಡೌನ್ ಸಮಯದಲ್ಲಿ ಸಂಸ್ಥೆ ಮಾಡಿದ ಕಾರ್ಯಗಳ ಬಗ್ಗೆ ಎಲ್ಲರಿಗೂ ತಿಳಿಸಿ , ಹೆಲ್ಪಿಂಗ್ ಹ್ಯಾಂಡ್ಸ್ ಟ್ರೋಪಿ ಆಯೋಜನೆ ಹಿಂದಿನ ಸಮಾಜಪರ ಕಾರ್ಯದ ಬಗ್ಗೆ ತಿಳಿಸಿದರು. ಹಾಗೂ ವೇದಿಕೆ ಮೇಲಿದ್ದ ಸಂಸ್ಥೆಯ ಪದಾಧಿಕಾರಿಗಳು ಹೆಲ್ಪಿಂಗ್ ಹ್ಯಾಂಡ್ಸ್ ನ ಎಲ್ಲಾ ಸಮಾಜಪರ ಕಾರ್ಯದ ಬಗ್ಗೆ ಮನವರಿಕೆ ಮಾಡಿ ನಮ್ಮ ತಂಡದೊಂದಿಗೆ ಕೈ ಜೋಡಿಸುವಂತೆ ವಿನಂತಿಸಿದರು. ಮುಖ್ಯ ಅತಿಥಿಗಳಾಗಿ ಮೊಗವೀರ ಯುವ ಸಂಘಟನೆ ಕೋಟೆಶ್ವರ ಘಟಕದ ಅಧ್ಯಕ್ಷರಾದ ಸುನೀಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕೃಷ್ಣ ಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ ಪರ್ಯಾಯ ಶ್ರೀಅದಮಾರು ಮಠದ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಂಸ್ಕೃತಿ ಇಲಾಖೆ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್, ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಕಿರಿಮಂಜೇಶ್ವರ ಇವರ ಸಂಯೋಜನೆಯಲ್ಲಿ ನಡೆಯುತ್ತಿರುವ ಯಕ್ಷ ಅಷ್ಟಾಹ ಕಾರ್ಯಕ್ರಮದಲ್ಲಿ ಪ್ರಸಿದ್ಧ ಯಕ್ಷಗಾನ ಕಲಾವಿದ ಬೇಲ್ತೂರು ರಮೇಶ್ ಅವರಿಗೆ ಪ್ರಥಮ ವರ್ಷದ ತಲ್ಲೂರ್ -ಫ್ಯಾಮಿಲಿ ಪ್ರಶಸ್ತಿ 2021ನ್ನು ಪ್ರದಾನ ಮಾಡಲಾಯಿತು. ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ, ಕಲಾವಿದ ಎಂದರೆ ಕಲೆಯನ್ನು ರಕ್ಷಿಸಿ, ಬೆಳೆಸುವವ. ಮುಂದಿನ ಪೀಳಿಗೆ ಅದನ್ನು ಬೆಳೆಸಬೇಕು ಎಂಬ ಹಂಬಲದಿಂದ ಪ್ರಶಸ್ತಿ ಪ್ರದಾನದಂತಹ ಪ್ರೋತ್ಸಾಹಗಳಿರುತ್ತವೆ. ಕಲೆಗಾಗಿ ದಶಕಗಳ ತಮ್ಮನ್ನು ಅರ್ಪಿಸಿಕೊಂಡು ಬರುವುದು ಸುಲಭದ ಮಾತಲ್ಲ. ಕಾಲನ ಹೊಡೆತಕ್ಕೆ ಕಲೆ ಸಿಲುಕದಂತೆ ಉಳಿಸಿಕೊಳ್ಳಬೇಕು ಎಂದರು. ತಲ್ಲೂರು -ಮಿಲಿ ಟ್ರಸ್ಟ್ನ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಹಳೆ ತಲೆಮಾರಿನ ಕಲಾವಿದರು ಜೀವನದಲ್ಲಿ ಸಂಕಷ್ಟದಲ್ಲಿದ್ದರೂ ಅದೇ ಕಲೆಯಲ್ಲಿ ತೊಡಗಿಸಿಕೊಂಡು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ಸಂಸ್ಥೆಯಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಾದ ಎಂ.ಎ/ಎಂಕಾಂ, ಎಂ.ಬಿ.ಎ, ಎಂ.ಲಿಎಸ್ಸಿ ಮತ್ತು ಎಲ್ಲಾ ಎಂಎಸ್ಸಿ ಪದವಿಗಳು ಹಾಗು ಡಿಪ್ಲೊಮ, ಪಿಜಿ ಡಿಪ್ಲೊಮ, ಸರ್ಟಿಫಿಕೇಟ್ ಕೋರ್ಸ್ಗಳ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 11 ಮತ್ತು 200 ಮತ್ತು 400 ರೂ ಗಳ ದಂಡ ಸಹಿತ ಅರ್ಜಿ ಸಲ್ಲಿಸಲು ನವೆಂಬರ್ 30 ಮತ್ತು ಡಿಸೆಂಬರ್ 15 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ಸೈಟ್ https://www.ksoumysuru.ac.in/ ನ್ನು ಸಂಪರ್ಕಿಸಬಹುದೆಂದು ಉಡುಪಿ ಪ್ರಾದೇಶಿಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
