ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಸಮಾಜ ಕಲ್ಯಾಣ ಇಲಾಖೆಯು 2021/22ನೇ ಸಾಲಿನಲ್ಲಿ ಹಿರಿಯ ವಕೀಲರ ಬಳಿ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ಕಾನೂನು ಪದವಿಧರರಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖಾ ವೆಬ್‌ಸೈಟ್ https://www.sw.kar.nic.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 1 ರಿಂದ ಆಗಸ್ಟ್ 14ರವರೆಗೆ ಅವಧಿ ವಿಸ್ತರಿಸಲಾಗಿದೆ. ಇಲಾಖೆಯು ಹೊರಡಿಸಿರುವ ನಿಭಂದನೆಗಳಿಗೆ ಒಳಪಟ್ಟು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು 15 ದಿನಗಳ ಒಳಗಾಗಿ ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ , ರಜತಾದ್ರಿ, ಮಣಿಪಾಲ. ಇಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸಕ್ತ ಮಳೆಗಾಲದಲ್ಲಿ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಮಳೆಗಾಲದಲ್ಲಿ ಹರಡುವು ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ಕುರಿತಂತೆ ವಿವಿಧ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ವೀಡಿಯೋ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯಾ ರೋಗಗಳು ಹರಡದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಪ್ರಸ್ತುತ 11 ಮಲೇರಿಯಾ ಪ್ರಕರಣಗಳು ವರದಿಯಾಗಿದ್ದು, 103 ಡೆಂಗ್ಯೂ ಪ್ರಕರಣಗಳು ವರದಿಯಾಗಿದೆ, ಡೆಂಗ್ಯೂ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದ್ದು, , ಡೆಂಗ್ಯೂ ಹೆಚ್ಚಿರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತುರ್ತು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಜಿಲ್ಲೆಯ ನಗರ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ನೀರು ನಿಲ್ಲದಂತೆ ಹಾಗೂ ಸೊಳ್ಳೆ ನಿಯಂತ್ರಣಾ ಮತ್ತು ನಾಶ ಕುರಿತು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 188 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 3 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 90, ಕುಂದಾಪುರ, ಬೈಂದೂರು ತಾಲೂಕಿನ 47, ಕಾರ್ಕಳ, ಹೆಬ್ರಿ ತಾಲೂಕಿನ 47 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 188 ಪ್ರಕರಣಗಳಲ್ಲಿ 14 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 174 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ. ಇಂದು ಉಡುಪಿ ತಾಲೂಕಿನ 71 ವರ್ಷದ ವೃದ್ಧೆ, 70 ವರ್ಷದ ವೃದ್ಧೆ, ಕುಂದಾಪುರ ತಾಲೂಕಿನ 73 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 330 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 2167 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3473 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 2877 ಮಂದಿಗೆ ಮೊದಲನೇ ಡೋಸ್, 531 ಮಂದಿಗೆ ಎರಡನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಪೊಲೀಸ್ ಠಾಣೆಯ ನೂತನ ಪಿಎಸ್ಐ(ಸಿವಿಲ್) ಆಗಿ ಪವನ್ ನಾಯಕ್ ಅವರು ಗುರುವಾರ ಅಧಿಕಾರ ಸ್ವೀಕರಿದ್ದಾರೆ. 2016 ಬ್ಯಾಚಿನ ಅಧಿಕಾರಿಯಾಗಿರುವ ಪವನ್ ನಾಯಕ್ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದವರು. ಈ ಹಿಂದೆ ಉಪ್ಪಿನಂಗಡಿಯಲ್ಲಿ ಪ್ರೊಬೇಷನರಿ ಅವಧಿ ಮುಗಿಸಿ ಧರ್ಮಸ್ಥಳದಲ್ಲಿ ಒಂದೂವರೆ ವರ್ಷಗಳ ಕಾಲ ಪಿಎಸ್ಐ ಆಗಿ ಸೇವೆ ಸಲ್ಲಿಸಿದ್ದರು. ಇದೀಗ ಬೈಂದೂರು ಠಾಣೆಯಲ್ಲಿ ಪಿಎಸ್ಐ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಬೈಂದೂರು ಪಿಎಸ್ಐ ಆಗಿದ್ದ ಸಂಗೀತಾ ಅವರನ್ನು ಉತ್ತರ ಕನ್ನಡದ ಅಂಬಿಕಾ ನಗರ ಠಾಣೆಗೆ ವರ್ಗಾವಣೆಗೊಳಿಸಿ ಅವರ ಸ್ಥಾನಕ್ಕೆ ಧರ್ಮಸ್ಥಳದಲ್ಲಿ ಪಿಎಸ್ಐ ಆಗಿದ್ದ ಪವನ್ ನಾಯಕ್ ಅವರನ್ನು ನಿಯುಕ್ತಿಗೊಳಿಸಿ ತಕ್ಷಣ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಆದೇಶಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ ಜೂ.18: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿಯಂತ್ರಿಸುವ ಸಲುವಾಗಿ ವಾರಾಂತ್ಯ ಲಾಕ್ ಡೌನ್ ಜಾರಿ ಮಾಡಿ ಜೂ.12 ರಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಆದೇಶ ಹೊರಡಿಸಿದ್ದಾರೆ. ಅದರಂತೆ ಶುಕ್ರವಾರ (ಜೂ.18) ರಾತ್ರಿ 7.00 ಗಂಟೆಯಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಡೈರಿ ಮತ್ತು ಹಾಲಿನ ಕೇಂದ್ರಗಳು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗೆ 6 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ. ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 6.00 ರಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ ಆದರೆ ಯಾವುದೇ ತಯಾರಿಸಲಾದ ಆಹಾರ, ಪಾನಿಪುರಿ, ಚಾಟ್ಸ್ ಮುಂತಾದವುಗಳ ಮಾರಾಟಕ್ಕೆ ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಆರೋಗ್ಯ ತುರ್ತು ಸಂದರ್ಭದಲ್ಲಿ ರೋಗಿಗಳು ಮತ್ತು ಅವರ ಪರಿಚಾರಕರು/ತುರ್ತು…
ಚೆನ್ನಾಗಿ ಕಾಣಬೇಕೆಂದು ಅಂದುಕೊಳ್ಳುವುದು ಸಹಜ. ನಮ್ಮ ದೇಹದ ಸದೃಢತೆಗಾಗಿ ನಮ್ಮ ಆರೋಗ್ಯವನ್ನು ಅತ್ಯುತ್ತಮವಾಗಿ ಕಾಪಾಡಿಕೊಳ್ಳಲು ನಾವು ಹೇಗೆ ಕಷ್ಟ ಪಡುತ್ತವೆಯೋ ಅದೇ ರೀತಿ ನಮ್ಮ ಸೌಂದರ್ಯ ರಕ್ಷಣೆಗೆ ಹಲವು ವಿಧಾನಗಳಲ್ಲಿ ನಾವು ಪ್ರಯತ್ನ ಪಡುತ್ತೇವೆ. ನಮ್ಮ ತ್ವಚೆಯ ಹೊಳಪನ್ನು ಈ ಕೆಳಗಿನ ಹಲವಾರು ಆರೋಗ್ಯಕರ ನೈಸರ್ಗಿಕವಾದ ಆಹಾರಗಳನ್ನು ಸೇವನೆ ಮಾಡುವುದರಿಂದ ರಕ್ಷಣೆ ಮಾಡಿಕೊಳ್ಳಬಹುದು. ಅವಕ್ಯಾಡೊ (ಬೆಣ್ಣೆ ಹಣ್ಣು): ಅವಕ್ಯಾಡೊ ಹಣ್ಣುಗಳಲ್ಲಿ ಮನುಷ್ಯನ ದೇಹಕ್ಕೆ ಅವಶ್ಯವಾಗಿ ಬೇಕಾದ ಆರೋಗ್ಯಕರ ಕೊಬ್ಬಿನ ಅಂಶಗಳು ಸಿಗುತ್ತವೆ. ಇವು ನಮ್ಮ ತ್ವಚೆಯನ್ನು ಒಳಗಿನಿಂದಲೇ ಮಾಯಿಶ್ಚರೈಸರ್ ಮಾಡುತ್ತವೆ. ಅವಕ್ಯಾಡೊಗಳಲ್ಲಿ ಕಂಡು ಬರುವ ಹೆಚ್ಚಿನ ಪ್ರಮಾಣದ ಫ್ಯಾಟಿ ಆಸಿಡ್ ಅಂಶಗಳು, ಪ್ರೋಟೀನ್ ಅಂಶಗಳು, ಮತ್ತು ವಿಟಮಿನ್ ‘ ಎ ‘, ವಿಟಮಿನ್ ‘ ಡಿ ‘, ವಿಟಮಿನ್ ‘ ಇ ‘ ಜೀವ ಸತ್ವಗಳು ದೇಹದಲ್ಲಿ ಕೊಲಾಜೆನ್ ಅಂಶವನ್ನು ಉತ್ಪತ್ತಿ ಮಾಡಲು ಸಹಾಯ ಮಾಡುತ್ತವೆ. ದೇಹದ ಮೇಲ್ಭಾಗದಲ್ಲಿ ಅಂದರೆ ಚರ್ಮದ ಯಾವುದೇ ಭಾಗದಲ್ಲಿ ಕಂಡು ಬರುವ ಸುಕ್ಕುಗಳು, ಸಣ್ಣ ಸಣ್ಣ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ರಾಜ್ಯದಲ್ಲಿಕೋವಿಡ್ 2ನೇ ಅಲೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ಲಾಕ್‍ಡೌನ್ ಜಾರಿಯಲ್ಲಿದ್ದು. ಇದರಿಂದ ಬಾಧಿತವಾದ ಸಮಾಜದ ವಿವಿಧ ವರ್ಗಗಳಿಗೆ ಪರಿಹಾರದ ಪ್ಯಾಕೇಜ್ ಸರ್ಕಾರವು ಘೋಷಣೆ ಮಾಡಿದೆ. ಪ್ರಸ್ತುತ ಸಾಲಿನಲ್ಲಿ ಭಾರತ ಸರ್ಕಾರದ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೋಂದಾಯಿಸಿಕೊಂಡ ಮೀನುಗಾರರಿಗೆ ತಲಾ ರೂ.3000 ಪರಿಹಾರವನ್ನು ಕೋವಿಡ್ಎರಡನೇ ಪ್ಯಾಕೇಜ್ ನಿಧಿಯಡಿಯಲ್ಲಿ ಸರ್ಕಾರದ ಮಾರ್ಗಸೂಚಿ ಮೇರೆಗೆ ಘೋಷಿಸಲಾಗಿದೆ. ಈ ಯೋಜನೆಯ ಸದರಿ ಪರಿಹಾರವನ್ನುಡಿ.ಬಿ.ಟಿ (ಡೈರೆಕ್ಟ್ ಬೆನಿಫಿಶರಿಟ್ರಾನ್‍ಸ್ಫರ್ ಪೋರ್ಟ್‍ಲ್) ಮುಖಾಂತರ ಅರ್ಹ ಫಲಾನುಭವಿಗಳಿಗೆ ಪಾವತಿಸಬೇಕಾಗಿರುವುದರಿಂದ ಎಲ್ಲಾ ಫಲಾನುಭವಿಗಳು ತಮ್ಮಆಧಾರ್ ಸಂಖ್ಯೆಯನ್ನು ಬ್ಯಾಂಕ್ಖಾತೆಗೆ ಲಿಂಕ್ ಮಾಡದಿದ್ದಲ್ಲಿಕೂಡಲೇ ಲಿಂಕ್ ಮಾಡಿಸತಕ್ಕದ್ದು. ಸಾಂಪ್ರದಾಯಿಕ ದೋಣಿ ಮಾಲೀಕರು (ಎನ್ಎಮ್-ನಾನ್-ಮೋಟರೈಸ್ಡ್ ಯಡಿಯಲ್ಲಿ ನೋಂದಾಯಿತ ದೋಣಿ ಮಾಲೀಕರು)ತಮ್ಮದೋಣಿಯ ಆರ್.ಸಿ., ಆಧಾರ್ಕಾರ್ಡ್, ಮೊಬೈಲ್ ಸಂಖ್ಯೆ, ಆಧಾರ್ ಲಿಂಕ್ ಲಗತ್ತಿಸಲಾದ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ಸಂಬಂಧಿತ ಪ್ರಾಧಿಕೃತ ಅಧಿಕಾರಿಗಳ ಕಚೇರಿಗೆ ಒದಗಿಸಬೇಕೆಂದು ಮೀನುಗಾರಿಕೆ ಹಿರಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಥಲಸ್ಸಿಮಿಯಾ ಮೇಜರ್ ಕಾಯಿಲೆಯಿಂದ ಬಳಲುತ್ತಿರುವ ಇಲ್ಲಿನ ಗೋಳಿಹೊಳೆ ಗ್ರಾಮದ ಮಾವಿನ ಮನೆಯ ಮಂಜುನಾಥ ಹಾಗೂ ಸುಮತಿ ದಂಪತಿಗಳ ಮಗ ಸುಶಾಂತ್‌ಗೆ ಜೆಸಿಐ ಬೈಂದೂರುಸಿಟಿಯಿಂದ 30000 ರೂ. ಧನಸಹಾಯವನ್ನು ಮಗುವಿನ ಹೆತ್ತವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಜೆಸಿಐ ಇಂಡಿಯಾ ಪ್ರೋಗ್ರಾಮ್ ಡೈರೆಕ್ಟರ್ ಜೆಸಿ ಸೆನ್ ಅಬ್ದುಲ್ ಜಬ್ಬಾರ್ ಸರ್, ವಲಯಾಧಿಕಾರಿ ಹೆಚ್‌ಜಿಎಫ್ ಮಣಿಕಂಠ ಎಸ್ ದೇವಾಡಿಗ, ಹಾಗೂ ಜೆಸಿಐ ಬೈಂದೂರು ಸಿಟಿ ಇದರ ಅಧ್ಯಕ್ಷರಾದ ಹೆಚ್‌ಜಿಎಫ್ ಶ್ರೀಧರ ಆಚಾರ್ಯ, ಕಾರ್ಯದರ್ಶಿ ಸವಿತಾ ದಿನೇಶ್ ಗಾಣಿಗ, ಸದಸ್ಯರಾದ ರಾಘವೇಂದ್ರ ಹೊಳ್ಳ, ಇದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲೆಯಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ಕೇಂದ್ರ ತಂಡವು, ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು. ಕೇಂದ್ರ ತಂಡದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸೂಪರಿಟೆಂಡೆಂಟ್ ಇಂಜನಿಯರ್ ಸದಾನಂದ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪೊನ್ನು ಸ್ವಾಮಿ ಹಾಗೂ ಇವರೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಆಯುಕ್ತ ಮನೋಜ್ ರಾಜನ್, ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಹಿರಿಯ ವಿಜ್ಞಾನಿ ಡಾ.ಶ್ರೀನಿವಾಸ ರೆಡ್ಡಿ ಇದ್ದರು. ಬೈಂದೂರು ತಾಲೂಕಿನ ಬೈಂದೂರು, ಉಪ್ಪುಂದ, ಮೆಡಿಕಲ್, ಮರವಂತೆ, ಕಾಪು ತಾಲೂಕಿನ ಕಾಪುಲೈಟ್ ಹೌಸ್, ಕೈಪುಂಜಾಲು ಉಡುಪಿ ತಾಲೂಕಿನ ಪಡುಬಿದ್ರೆ ಬೀಚ್ ಮತ್ತು ಬ್ಲೂ ಫ್ಲಾಗ್ ಬೀಚ್ ಗೆ ಭೇಟಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ವಿಬಾಗಾಧಿಕಾರಿ ರಾಜು , ಬೈಂದೂರು ತಹಸೀಲ್ದಾರ್ ಶೋಭಾಲಕ್ಷಿ ಎಚ್. ಎಸ್., ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ಕಾಪು ತಹಸೀಲ್ದಾರ್ ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಶಂಕರನಾರಾಯಣ: ಇತ್ತಿಚಿಗೆ ಹತ್ಯೆಗೀಡಾದ ಯಡಮೊಗೆ ಗ್ರಾಮದ ಉದಯ ಗಾಣಿಗ ಅವರ ಕುಟುಂಬಕ್ಕೆ ಬಿಜೆಪಿ ಬೈಂದೂರು ಮಂಡಲದ ವತಿಯಿಂದ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅವರು ರೂ.1 ಲಕ್ಷವನ್ನು ಮಾನವೀಯ ನೆಲೆಯಲ್ಲಿ ಹಸ್ತಾಂತರಿಸಿದರು. ನೆರವು ಹಸ್ತಾಂತರಿಸಿ ಸಾಂತ್ವಾನದ ಮಾತನಾಡಿದ ಅವರು, ಪೋಲಿಸರು ಈಗಾಗಲೇ ತಪ್ಪಿತಸ್ಥರನ್ನು ಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಕಾನೂನು ಪ್ರಕಾರ ಆರೋಪಿಗಳಿಗೆ ಶಿಕ್ಷೆಯಾಗುತ್ತದೆ. ಕುಟುಂಬಕ್ಕೆ ನ್ಯಾಯ ಕೊಡಿಸುವಲ್ಲಿ ನಾವು ಪಕ್ಷ ಬದ್ಧವಿದೆ ಎಂದರು. ಈ ಸಂದರ್ಭ ಬಿಜೆಪಿ ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ ಜೆಡ್ಡು ಮತ್ತು ಪ್ರಿಯದರ್ಶಿನಿ ಬೆಸ್ಕೂರು, ಮಾಜಿ ಜಿ.ಪಂ.ಸದಸ್ಯ ರೋಹಿತ್ ಕುಮಾರ್ ಶೆಟ್ಟಿ, ಹರ್ಷ ಮೆಲ್ಕೋಡ್, ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಶ್ರೀಗಣೇಶ್ ಉಪ್ಪುಂದ, ರವಿ ಗಾಣಿಗ ಮಲ್ಲಾರಿ ಮೊದಲಾದವರು ಉಪಸ್ಥಿತರಿದ್ದರು.
