Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಜಡ್ಕಲ್ ಇದರ ಜಂಟಿ ಆಶ್ರಯದಲ್ಲಿ ರೈತ ಸದಸ್ಯರಿಗೆ ಕೃಷಿ ಉದ್ದೇಶ ಸಾಲ -ಮೇಳ ಕಾರ್ಯಕ್ರಮವನ್ನು ಸಂಘದ ವ್ಯಾಪ್ತಿಯ ಜಡ್ಕಲ್ ಸೆಂಟ್ ಜೋರ್ಜ್ ಚರ್ಚ್ ಸಭಾಂಗಣದಲ್ಲಿ ನಡೆಯಿತು. ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ನಿರ್ದೇಶಕರಾದ ರಾಜು ಪೂಜಾರಿ ಅವರು ಕಾರ್ಯಕ್ರಮನ್ನು ಉದ್ಘಾಟಿಸಿದರು. ಈ ಸಂದರ್ಭ ಜಡ್ಕಲ್ ವ್ಯ. ವ. ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ದ. ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಮಹೇಶ್ ಹೆಗ್ಡೆ, ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವನಜಾಕ್ಷಿ ಶೆಟ್ಟಿ, ಜಡ್ಕಲ್ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಅಡಿಗ, ದ. ಕ. ಜಿ.ಕೇಂದ್ರ ಸಹಕಾರಿ ಬ್ಯಾಂಕ್ ಸ. ಸಂಘಗಳ ವಲಯ ಮೇಲ್ವಿಚಾರಕರಾದ ಶಿವರಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭಗೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ, ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ, ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಾಮಾನ್ಯ ಭತ್ತಕ್ಕೆ ಪ್ರತೀ ಕ್ವಿಂಟಾಲ್ ಗೆ ರೂ.1940 ಮತ್ತು ಗ್ರೇಡ್ ಎ ಭತ್ತಕ್ಕೆ ರೂ. 1960 ದರ ನಿಗಧಿಪಡಿಸಿದ್ದು, ಜಿಲ್ಲೆಯ ರೈತರಿಂದ ಭತ್ತ ಖರೀದಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಭತ್ತ ಖರೀದಿ ಕೇಂದ್ರಗಳಿಗೆ ಗ್ರೇಡರ್ ಗಳನ್ನು ನೇಮಿಸುವಂತೆ ಮತ್ತು ಗೋದಾಮು ಗಳನ್ನು ಸಿದ್ದಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈಗಾಗಲೇ ಜಿಲ್ಲೆಯ 20 ಅಕ್ಕಿ ಮಿಲ್ಲುಗಳ ಮಾಲೀಕರು ಭತ್ತವನ್ನು ಹಲ್ಲಿಂಗ್ ಮಾಡಿಕೊಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಗ್ರಾಮೀಣ ಭಾಗ ಸೇರಿದಂತೆ ಸ್ಥಳೀಯವಾಗಿ ಕೌಶಲ್ಯಾಧರಿತ ತರಬೇತಿ ಪಡೆದ ಯುವ ಸಮುದಾಯ ನಿರ್ಮಾಣದ ಜೊತೆಗೆ ಗುಣಮಟ್ಟದ ಶಿಕ್ಷಣ ತರಬೇತಿ ಮೂಲಕ ಅತ್ಯುತ್ತಮ ಸಂಸ್ಥೆಗಳನ್ನು ಆರಂಭಿಸುವ ಉದ್ದೇಶದಿಂದ ಸರಕಾರ ವಿಶ್ವ ದರ್ಜೆಯ ಐ.ಟಿ.ಐ ಕಾಲೇಜುಗಳನ್ನು ಆರಂಭಿಸುತ್ತಿದೆ ಎಂದು ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ, ಐಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಶ್ವಥ್ ನಾರಾಯಣ ಹೇಳಿದರು. ಅವರು, ಶನಿವಾರ ಬೈಂದೂರು ಸರಕಾರಿ ಐ.ಟಿ.ಐ ಕಾಲೇಜಿಗೆ ಬೇಟಿ ನೀಡಿ, ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಐ.ಟಿ.ಐ ಕಾಲೇಜಿನ ಕಟ್ಟಡ ಕಾಮಗಾರಿ ವೀಕ್ಷಿಸಿ ಮಾತನಾಡಿದರು. ಐ.ಟಿ.ಐ ಕಾಲೇಜುಗಳನ್ನು ಆರಂಭಿಸುಲು ಬೇಡಿಕೆ ಆಧಾರದಲ್ಲಿ ಹೊಸದಾದ 11 ಕೋರ್ಸ್‌ಗಳು ಆರಂಭವಾಗಲಿದ್ದು ಅವುಗಳಲ್ಲಿ ಆರು ವಿಷಯಗಳು ಎರಡು ವರ್ಷ ಹಾಗೂ ಐದು ವಿಷಯಗಳು ಒಂದು ವರ್ಷದ ಅವಧಿಯದ್ದಾಗಿದೆ. ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕಿದೆ ಎಂದರು. ಉಪ ಚುನಾವಣೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷ ಕುಟುಂಬ ಆಧಾರಿತವಾಗಿದೆ. ಅದು ನಮ್ಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಜಿಲ್ಲೆಯಲ್ಲಿನ ಎಲ್ಲಾ ಪ್ರವಾಸಿ ಕ್ಷೇತ್ರಗಳನ್ನು , ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಒಂದೇ ವೇದಿಕೆಯಲ್ಲಿ ಕಾಣುವಂತಹ ವರ್ಚುವಲ್ 3 ಡಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ, ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಜಿಲ್ಲೆಯ ಪ್ರಮುಖ 1 ಅಥವಾ 2 ಎರಡು ಪ್ರವಾಸಿ ಕ್ಷೇತ್ರಗಳನ್ನು ಮಾತ್ರ ವೀಕ್ಷಣೆ ಮಾಡಿ ತೆರಳುತ್ತಿದ್ದು, ಅವರಿಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳು ನೈಜ ಚಿತ್ರಣ ತೋರುವಂತಹ ವರ್ಚುವಲ್ 3 ಡಿ ಯೋಜನೆಯನ್ನು ಯಾವುದಾದರೂ ಒಂದು ಪ್ರಮುಖ ಸ್ಥಳದಲ್ಲಿ ನಿರ್ಮಿಸುವುದರಿಂದ, ಎಲ್ಲಾ ತಾಣಗಳನ್ನು ಚಿತ್ರಣ ಅವರಿಗೆ ದೊರೆಯಲಿದ್ದು , ಈ ತಾಣಗಳಿಗೂ ಪ್ರವಾಸಿಗರು ಭೇಟಿ ನೀಡಲು ಸಾಧ್ಯವಾಗಲಿದೆ ಎಂದರು. ಜಿಲ್ಲೆಯಲ್ಲಿ ಅಭಿವೃದ್ದಿಪಡಿಸಬಹುದಾದ ಇನ್ನೂ ಹಲವು ಪ್ರವಾಸಿ ತಾಣಗಳಿದ್ದು, ಇವುಗಳನ್ನು ಸಮಗ್ರವಾಗಿ ಅಭಿವೃಧ್ದಿಪಡಿಸಲು ವಿವಿಧ ಸಂಸ್ಥೆಗಳಿAದ ವರದಿ ಪಡೆಯಲು ಎಕ್ಸ್ಪ್ರೆಷನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ .ಉಡುಪಿ: ಜಿಲ್ಲೆಯಲ್ಲಿ ನವೆಂಬರ್ 1ರಿಂದ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕರು ಕೆಲಸದಲ್ಲಿ ತೊಡಗಿಕೊಳ್ಳುವುದರಿಂದ ಮಕ್ಕಳ ವಿಕಸನಕ್ಕೆ ಹಾಗೂ ಬೆಳವಣಿಗೆಗೆ ತೊಡಕಾಗುವುದರ ಜೊತೆಯಲ್ಲಿ ಶಿಕ್ಷಣ ವಂಚಿತರಾಗುತ್ತಾರೆ ಇದೊಂದು ಅನಿಷ್ಠ ಪದ್ದತಿಯಾಗಿದ್ದು, ಸಮಾಜದಿಂದ ಇದನ್ನು ತೊಡೆದು ಹಾಕಲು ಎಲ್ಲಾ ಸಾರ್ವಜನಿಕರು ಕೈ ಜೋಡಿಸಬೇಕು ಎಂದರು. ಜಿಲ್ಲೆಯ ವಿವಿಧ ಕೈಗಾರಿಕೆಗಳು, ಹೋಟೆಲ್ ಮತ್ತು ರೆಸ್ಟೋರೆಂಟ್ ಗಳು ,ಕಲ್ಲು ಕ್ವಾರಿಗಳು,ಜಲ್ಲಿ ಕ್ರಷರ್ ಗಳಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಬಳಸಿಕೊಳ್ಳುವ ಸಾಧ್ಯತೆಗಳಿದ್ದು ಇಂತಹ ಎಲ್ಲಾ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು , ಸಮೀಕ್ಷೆಯನ್ನು ನವೆಂ 1 ರಿಂದ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಆರಂಭಿಸಿ ತಿಂಗಳ ಅಂತ್ಯದೊಳಗೆ ಮುಕ್ತ್ತಾಯಗೊಳಿಸಿ, ಸಮಗ್ರ ವರದಿಯನ್ನು ಸಲ್ಲಿಸುವಂತೆ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ರೋಟರಾಕ್ಟ್ ಕ್ಲಬ್‌ನ 20121-22 ನೇ ಸಾಲಿನ ಪದಗ್ರಹಣ ಸಮಾರಂಭ ಕೋಟೇಶ್ವರದ ರೋಟರಿ ಭವನದಲ್ಲಿ ಜರಗಿತು. ನೂತನ ಅಧ್ಯಕ್ಷರಾಗಿ ರಾಕೇಶ್ ಶೆಟ್ಟಿ ವಕ್ವಾಡಿ ಕಾರ್ಯದರ್ಶಿಯಾಗಿ ಭರತ್ ರಾಜ್ ಕೋಟೇಶ್ವರ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ರಾದ ರೋ ಚಂದ್ರಶೇಖರ ಶೆಟ್ಟಿ ರೋಟರಾಕ್ಟ್ ಡಿಸ್ಟ್ರಿಕ್ಟ್ ಚೇರ್ಮನ್ ರೋ ಕೆಕೆ ಕಾಂಚನ್, ಡಿ ಆರ್ ಆರ್ ರೋ ಗ್ಲಾಡ್ಸನ್ ಕುಂದರ್, ರೋ ಗಣೇಶ್ ಆಚಾರ್ಯ, ರೋ ನಾಗೇಶ್ ಶೆಟ್ಟಿಗಾರ್ ಹಾಗೂ ರೋಟರಿ ಕ್ಲಬ್ ರೋಟರಾಕ್ಟ್ ಕ್ಲಬ್‌ನ ಸದಸ್ಯರು ಉಪಸ್ಥಿತರಿದ್ದರು. ರೋ ಶ್ರೀಕಾಂತ್ ಆಚಾರ್ಯ, ಭರತ್ ಹೊಸಮಠ ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೀವ್ರ ಬೆಲೆ ಏರಿಕೆ ಮರೆಮಾಚಲು ಬಿಜೆಪಿ ನಾಯಕರು ವಿವಾದಾಸ್ಪದ ಹೇಳಿಕೆ ನೀಡುತ್ತಿರುವುದು ತೀವ್ರ ಖಂಡನೀಯ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ಖಂಡಿಸಿದ್ದಾರೆ. ನಿರಂತರ ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಅಗತ್ಯವಸ್ತು, ಕಟ್ಟಡ ಸಾಮಗ್ರಿಗಳ ಬೆಲೆ ಗಣನೀಯ ಏರಿಕೆಯಾಗಿದೆ. ಸ್ವಾತಂತ್ಯ ನಂತರ ದೇಶದಲ್ಲಿ ಅಧಿಕಾರಕ್ಕೆ ಬಂದ ಯಾವುದೇ ಸರಕಾರ ಬೆಲೆಯೆರಿಕೆ ಸಂದರ್ಭದಲ್ಲಿ ಈ ರೀತಿ ಕೈ ಕಟ್ಟಿ ಕುಳಿತುಕೊಂಡಿಲ್ಲ .ದೇಶದ ಜನತೆ ತಾವು ಏನು ಮಾಡಿದರು ನಮಗೆ ನಿರಂತರ ಮತ ನೀಡುತ್ತಾರೆ ಎನ್ನುವ ಮನಸ್ಥಿತಿಯಿಂದ ಪ್ರಧಾನಿ ಮತ್ತು ಬಿಜೆಪಿ ಸರಕಾರ ಈ ರೀತಿ ವರ್ತಿಸುತ್ತಿದ್ದಾರೆ. ಇವರ ಏಳು ವರ್ಷದ ಆಡಳಿತದಲ್ಲಿ ದೇಶದ ಜನರ ಆರ್ಥಿಕ ಸ್ಥಿತಿ 15 ವರ್ಷ ಹಿಂದಕ್ಕೆ ತಳ್ಳಲ್ಪಟ್ಟಿದೆ. ಕಾರ್ಮಿಕರ ,ಕ್ರಷಿಕರ, ಮಧ್ಯಮ ವರ್ಗದವರ ಪರಿಸ್ಥಿತಿ ತೀವ್ರ ಶೋಚನೀಯವಾಗಿದೆ ಎಂದು ಆಗ್ರಹಿಸಿದ್ದಾರೆ. ದೇಶದ ಜನತೆ ಇಂತಹ ಪರಿಸ್ಥಿತಿಯಲ್ಲಿರುವಾಗ ಸರಕಾರ ಮಧ್ಯಪ್ರವೇಶಿಸಿ ಇಂಧನ ಬೆಲೆ ಕಡಿಮೆ ಮಾಡಬೇಕು. ಅಂತಾರಾಷ್ಟ್ರೀಯ ಮಟ್ಟದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತರತ್ನ ಪಂ. ಭೀಮಸೇನ ಜೋಶಿ ಜನ್ಮ ಶತಾಬ್ದಿ ಸಂಗೀತೋತ್ಸವದ ಅಂಗವಾಗಿ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ಆರ್. ಎನ್ ಶೆಟ್ಟಿ ಸಭಾಭವನದಲ್ಲಿ ಈಚೆಗೆ ನಡೆದ ಪಂ. ಗಣಪತಿ ಭಟ್ ಹಾಸಣಗಿ ಮತ್ತು ಅವರ ಶಿಷ್ಯ ವಿದ್ವಾನ್ ಸತೀಶ ಭಟ್ ಮಾಳಕೊಪ್ಪ ಅವರ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಕಚೇರಿ ‘ಭೀಮಪಲಾಸ’ ಸಂಗೀತಾಸಕ್ತರ ಮನಸೂರೆಗೊಂಡಿತು. ಈ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರದ ಸಂಸ್ಕೃತಿ ಇಲಾಖೆ, ಇನ್ಫೋಸಿಸ್ ಫೌಂಡೇಶನ್, ಭಾರತೀಯ ಜೀವವಿಮಾ ನಿಗಮ ಮತ್ತು ಎಲ್ಲೈಸಿ ಹೌಸಿಂಗ್ ಫೈನಾನ್ಸ್ ಪ್ರಧಾನ ಪ್ರಾಯೋಜಕತ್ವದಲ್ಲಿ ಧಾರವಾಡದ ಜಿ. ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ ಮತ್ತು ಹುಬ್ಬಳ್ಳಿಯ ಕ್ಷಮತಾ ಜತೆಯಾಗಿ ಆಯೋಜಿಸಿದ್ದುವು. ಸ್ಥಳೀಯ ಆಯೋಜಕರಾಗಿ ಇಲ್ಲಿನ ಗುರುಪರಂಪರಾ ಸಂಗೀತ ಸಭಾ ನಿರ್ವಹಿಸಿತ್ತು. ವಿವಿಡ್ ಲಿಪಿ ಯುಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಿತ್ತು. ಕಾರ್ಯಕ್ರಮವನ್ನು ಎಲ್‌ಐಸಿ ಕುಂದಾಪುರ ಶಾಖೆಯ ಸೀನಿಯರ್ ಮ್ಯಾನೇಜರ್ ಯು. ನಾರಾಯಣ ಗೌಡ, ಮ್ಯಾನೇಜರ್ ರಾಘವೇಂದ್ರ ಸಾಮಗ. ಮಾಹೆ ವಿಶ್ವವಿದ್ಯಾಲಯದ ಕುಲಸಚಿವ ರಂಗ ಪೈ, ಪಂ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬೊಬ್ಬರ್ಯನಕಟ್ಟೆ ಜಂಕ್ಷನ್‌ನಲ್ಲಿ ಫ್ಲೈ ಓವರ್‌ಗೆ ಪ್ರವೇಶ ಮತ್ತು ನಿರ್ಗಮನ ನೀಡುವ ವಿಚಾರದಲ್ಲಿ ಅ.30ರೊಳಗೆ ಕ್ರಮ ತೆಗೆದುಕೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಅ.13ರಂದು ಇಲ್ಲಿನ ಪುರಸಭೆ ಸದಸ್ಯರ ನಿಯೋಗ ಉಡುಪಿ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಬೊಬ್ಬರ್ಯನಕಟ್ಟೆ ಜಂಕ್ಷನ್ ಮುಚ್ಚುಗಡೆಯಿಂದ ಕುಂದಾಪುರ ನಗರ ಪ್ರವೇಶ – ನಿರ್ಗಮನ ಕೊಂಡಿ ಕಳಚಿ ಹೋಗಿದ್ದು ಕೂಡಲೇ ಜಂಕ್ಷನ್ ತೆರವಿಗೆ ಅನುವು ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದ್ದರು. ಜಂಕ್ಷನ್ ಮುಚ್ಚುಗಡೆಯಿಂದ ಆಗುತ್ತಿರುವ ತೊಂದರೆ ಮತ್ತು 14ಕ್ಕೂ ಮಿಕ್ಕಿ ಸರಕಾರಿ ಕಚೇರಿಗಳು, ಮೂರು ವಾರ್ಡ್‌ನ ಜನರು ಎದುರಿಸುತ್ತಿರುವ ಸಂಕಷ್ಟ ಹಾಗೂ ಸ್ಥಳದ ಬಗ್ಗೆ ತನಿಖೆ ನಡೆಸಿದ ಉಡುಪಿ ಡಿಸಿ ಸಮಿತಿ ರಚಿಸಿ ಅ.೩೦ರೊಗಳಗೆ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ಆದೇಶದಲ್ಲೇನಿದೆ?: ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ ಫ್ಲೈ ಓವರ್‌ಗೆ ಪ್ರವೇಶ ನಿರ್ಗಮನಕ್ಕೆ ಅವಕಾಶ ನೀಡುವ ಬಗ್ಗೆ ಜನಪ್ರತಿನಿಧಿಗಳು, ಸಾರ್ವಜನಿಕರಿಂದ ಅಹವಾಲುಗಳು ಸಲ್ಲಿಕೆಯಾಗಿದ್ದು, ಪತ್ರಿಕೆ ಸಾಮಾಜಿಕ ಜಾಲತಾಣದಲ್ಲೂ ಅವಕಾಶ ನೀಡುವ ಬಗ್ಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾತೃಭೂಮಿ ಸೇವಾ ಟ್ರಸ್ಟ್ ರಿ. ತುಮಕೂರು ಇವರ ವತಿಯಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಹಾಗೂ ಸೇವೆ ಗೈದವರಿಗೆ ಕೊಡಮಾಡುವ ‘ರಾಜ್ಯ ಮಟ್ಟದ ಕರುನಾಡ ಕಣ್ಮಣಿ ಪ್ರಶಸ್ತಿ’ಗೆ ಬಸ್ರೂರಿನ ಪ್ರದೀಪ್ ಕುಮಾರ್ ಆಯ್ಕೆಯಾಗಿದ್ದಾರೆ. ಅವರು, ಕ್ರೀಡೆ, ಸಾಂಸ್ಕ್ರತಿಕ,ಶೈಕ್ಷಣೀಕ, ಸಾವ೯ಜನಿಕ ಸೇವಾ ವಲಯ,ಧಾಮಿ೯ಕ ಸೇವೆಯೊಂದಿಗೆ ಸ್ವತಂತ್ರ ಸಂಶೋಧನಾ ಕಾಯ೯ದಲ್ಲಿ ತೊಡಗಿಕೊಂಡು ಶಾಸನ ಶೋಧ ಕಾಯ೯ದ ಒಂದು ಶಾಸನವು ಹಂಪಿ ವಿಶ್ವವಿದ್ಯಾಲಯದ ಶಾಸನ ಪ್ರಸಾರಾಂಗ ವಿಭಾಗದಲ್ಲಿ ವರದಿಯಾಗಿದೆ. ಇದರೊಂದಿಗೆ ಅನೇಕ ವೀರಗಲ್ಲು, ಶಾಸನ ಕಲ್ಲು, ಪುರಾತನ ದೇವರ ವಿಗ್ರಹವನ್ನು ಪರಿಚಯಿಸಿದ್ದಾರೆ. ಅವರ ಅನೇಕ ಸಂಘ ಸಂಸ್ಥೆಯ ಸೇವೆಯನ್ನು ಗುರುತಿಸಿ ಮಾತೃಭೂಮಿ ಸೇವಾ ಟ್ರಸ್ಟ್ ನವೆಂಬರ್ 21 ರಂದು ತುಮಕೂರುನಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದೆ. ಅವರು, ಹಟ್ಟಿಕುದ್ರು ಗುಜ್ಜಾಡಿ ಮನೆ ಪದ್ಮನಾಭ ಪೂಜಾರಿ ಹಾಗೂ ಉಗ್ರಾಣಿ ಮನೆ ಗಿರಿಜಾ ಪೂಜಾರಿ ದಂಪತಿಯ ದ್ವಿತೀಯ ಪುತ್ರ.

Read More