ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕುಂದಾಪುರ ವಲಯ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್, ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆಗೈದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್ ಭಟ್ ಮತ್ತು ಪ್ರಸ್ತುತ್ ಶೆಟ್ಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸುಹಾ ಶೇಖ್ ಗಝಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಆರ್ಷಿಯಾ ಸಯ್ಯದ್ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅದೇ ರೀತಿ ಕವ್ವಾಲಿ (Qawwali) ಯಲ್ಲಿ ವಿದ್ಯಾರ್ಥಿಗಳಾದ ಅಮ್ರಾ ಫಾತಿಮಾ, ಆಯಿಷಾ ಅಕ್ಸಾ, ಆಯಿಷಾ ಸಲಿಹಾ, ಆಮಿನಾ ಝಾರಾ, ಮಾಝ್ ಉಮ್ಮರ್, ಮೊಹಮ್ಮದ್ ಸಾಹಿಲ್ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಗ್ರಾಮೀಣ ಕೌಶಲ್ಯ ವಿಭಾಗದ ಅಧಿಕಾರಿಗಳಾದ ಆಶಿಶ್ ಸಿನ್ಹಾ ಹಾಗೂ ಅಬು ಓ. ಎಸ್. ಅವರು ಬ್ರಹ್ಮಾವರದ ರುಡ್‌ಸೆಟ್ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಕಾರ್ಯಚಟುವಟಿಕೆಗಳು ಹಾಗೂ ತರಬೇತಿ ಸೌಲಭ್ಯಗಳನ್ನು ಪರಿಶೀಲಿಸಿದರು. ಭೇಟಿಯ ಸಂದರ್ಭದಲ್ಲಿ ಅಧಿಕಾರಿಗಳು ಸಂಸ್ಥೆಯ ಸಂಪೂರ್ಣ ಆವರಣ, ತರಬೇತಿ ಕೊಠಡಿಗಳು, ವಸತಿ ನಿಲಯ, ಮೆಸ್ ಬ್ಲಾಕ್ ಸೇರಿದಂತೆ ವಿವಿಧ ಸೌಲಭ್ಯಗಳನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು. ನಂತರ ಸಂಸ್ಥೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಮೀನುಗಾರಿಕೆ (Pisciculture) ಹಾಗೂ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರಗಳ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ತರಬೇತಿಯ ಮಹತ್ವ, ಲಭ್ಯವಿರುವ ಸೌಲಭ್ಯಗಳ ಸದುಪಯೋಗ ಹಾಗೂ ತರಬೇತಿಯ ನಂತರ ಸ್ವಯಂ ಉದ್ಯೋಗ ಆರಂಭಿಸುವ ಕುರಿತು ಶಿಬಿರಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ತರಬೇತಿಯಲ್ಲಿ ಆಸಕ್ತಿಯಿಂದ ಪಾಲ್ಗೊಂಡು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳುವಂತೆ ಸಲಹೆ ನೀಡಿ, ಅವರ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಸಂಸ್ಥೆಯ ವ್ಯವಸ್ಥಿತ ಕಾರ್ಯನಿರ್ವಹಣೆ, ತರಬೇತಿ ಸೌಲಭ್ಯಗಳು ಹಾಗೂ ಸಿಬ್ಬಂದಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್‌ನ ಇದರ ಆಶ್ರಯದಲ್ಲಿ ಎಐಸಿಎಸ್ (AICS) ಅಂತರ ಶಾಲಾ ಥ್ರೋಬಾಲ್ ಪಂದ್ಯಾವಳಿ “ಸೈಂಟ್ ಥಾಮಸ್ ಕಪ್–2026” ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಸುಮಾರು 18 ಶಾಲೆಗಳ ಕ್ರೀಡಾಪಟುಗಳು ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆ, ತಂಡದ ಸಹಕಾರ ಹಾಗೂ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿದರು. ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೈಂದೂರಿನ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಉಪಸ್ಥಿತರಿದ್ದರು. ಅವರು ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿದ್ದು, ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಧೈರ್ಯದಿಂದ ಮುನ್ನಡೆಯಬೇಕು ಎಂದು ಪ್ರೇರಣಾದಾಯಕ ನುಡಿಗಳನ್ನಾಡಿದರು. ಗೌರವ ಅತಿಥಿಗಳಾದ ಉಡುಪಿಯ ಶಾರದಾ ರೆಸಿಡೆನ್ಷಿಯಲ್ ಶಾಲೆಯ ಪ್ರಾಂಶುಪಾಲರಾದ ಶ್ರೀ ವಿನ್ಸೆಂಟ್ ಡಿʼಕೋಸ್ಟಾ ಅವರು ಮಾತನಾಡಿ, ಕ್ರೀಡಾಪಟುಗಳು ದೈಹಿಕವಾಗಿ ಸದೃಢರಾಗುವುದರೊಂದಿಗೆ ಮಾನಸಿಕವಾಗಿಯೂ ಶಕ್ತಿಶಾಲಿಗಳಾಗಿರಬೇಕು. ಯಾವುದೇ ಸವಾಲುಗಳಿಗೆ ಹೆದರದೆ ಧೈರ್ಯದಿಂದ ಮುನ್ನುಗ್ಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಆಟ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೋಲಿ ಕ್ರಾಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು. ಬೆಳಕಿನ ಹಬ್ಬ ದೀಪಾವಳಿಯ ಮಹತ್ವವನ್ನು ಸಾರುವ ಉದ್ದೇಶದಿಂದ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೀಪಾವಳಿ ಹಬ್ಬವು ಕತ್ತಲೆಯನ್ನು ದೂರಮಾಡಿ ಬೆಳಕನ್ನು ಹರಡುವುದರ ಜೊತೆಗೆ ಸತ್ಯ, ಪ್ರೀತಿ ಹಾಗೂ ಸೌಹಾರ್ದತೆಯ ಸಂದೇಶವನ್ನು ಸಾರುತ್ತದೆ. ಇಂತಹ ಹಬ್ಬಗಳ ಆಚರಣೆಯ ಮೂಲಕ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳ ಪರಿಚಯ ಮಾಡಿಕೊಡಲಾಯಿತು. ಶಾಲೆಯ ವ್ಯವಸ್ಥಾಪಕರಾದ ರೆವರೆಂಡ್ ಸಿಸ್ಟರ್ ಆನ್ಸಿ ಪೌಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಸಿಂತಿಯ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕಿ ನಾಗರತ್ನ ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪಾಲ್ಗೊಳ್ಳುವಿಕೆಯಿಂದ ದೀಪಾವಳಿ ಆಚರಣೆ ಸಂಭ್ರಮದಿಂದ ನಡೆಯಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಸ್ತಾನದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಐರೋಡಿ ಗ್ರಾಮದ ಟೆಲಿಫೋನ್ ಎಕ್ಸ್‌ಚೇಂಜ್ ಕಟ್ಟಡ ನಿವಾಸಿ ಹೆನ್ರಿ ಫೆರ್ನಾಂಡಿಸ್ (73)ಮೃತರು. aವರು ಎಂದಿನಂತೆ ಬೆಳಿಗ್ಗೆ ಸಾಸ್ತಾನ ಸಂತ ಅಂತೋನಿ ಚರ್ಚ್‌ನಲ್ಲಿ ನಡೆಯುವ ಪೂಜೆಗೆಂದು ಮನೆಯಿಂದ ತೆರಳಿದ್ದರು. ಈ ವೇಳೆ ಬೆಳಿಗ್ಗೆ ಗುಂಡ್ಮಿ ಗ್ರಾಮದ ಸಾಸ್ತಾನ ಸರ್ಕಾರಿ ಆಸ್ಪತ್ರೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅವರಿಗೆ ಬ್ರಹ್ಮಾವರದಿಂದ ಕುಂದಾಪುರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹೆನ್ರಿ ಫೆರ್ನಾಂಡಿಸ್ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಕೋಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗೋವಿನ ಮಹತ್ವದ ಬಗ್ಗೆ ಇಂದಿನ ಯುವ ಜನಾಂಗ ಅರ್ಥೈಸಿಕೊಂಡು ಗೋ ಸಾಕಣೆಗೆ ಮುಂದಾಗಬೇಕಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ. ಕೆ. ಕೃಷ್ಣ ಕಾಂಚನ್ ಹೇಳಿದರು. ಅವರು ಸೋಮವಾರ ಕೋಟದ ಪಂಚವರ್ಣ ಯುವಕ ಮಂಡಲ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘದ ಸಹಯೋಗದೊಂದಿಗೆ ಕೋಡಿ ಕನ್ಯಾಣ ಸದಾಶಿವ ಐತಾಳ್‌ರ ಮನೆಯಂಗಳದಿ ಐದನೇ ವರ್ಷದ ಗೋ ಆರಾಧನೆ ಗೋ ಪೂಜಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಆಧುನಿಕ ಕಾಲಘಟ್ಟದಲ್ಲಿ ಹಿರಿಯರು ನೀಡಿದ ಬಳವಳಿಯನ್ನು ಮರೆತ್ತಿದ್ದೇವೆ ಅದರಲ್ಲೂ ಬಹುಮುಖ್ಯವಾಗಿ ಗೋ ಸಾಕಣೆ ಕುಂಠಿತಗೊಳ್ಳುವ ಕಳವಳ ವ್ಯಕ್ತಪಡಿಸಿದ ಅವರು ಈ ದಿಸೆಯಲ್ಲಿ ಕೋಟ ಸಹಕಾರಿ ವ್ಯವಸಾಯಕ ಸಂಘ ಕ್ಷೀರ ಸಂಜೀವಿನಿ ಯೋಜನೆಯ ಮೂಲಕ ಹೊಸ ಆಯಾಮ ನೀಡಿದೆ. ಗೋ ಪೂಜೆಯ ಮೂಲಕ ಪಂಚವರ್ಣ ಸಂಘಟನೆ ಮಹತ್ತರವಾದ ಸಾಮಾಜಿಕ ಕಾರ್ಯಗಳನ್ನು ನೀಡುತ್ತಿದೆ ಇದು ಅತ್ಯಂತ ಪ್ರಶಂಸನೀಯ ಕಾರ್ಯ,ಕೋಡಿ ಸದಾಶಿವ ಐತಾಳರ ಮನೆಯಲ್ಲಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ 17ರ ವಯೋಮಾನದ ಬಾಲಕರ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ನಿಹಾನ್ 79KG ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ಸಾಧಕ ವಿದ್ಯಾರ್ಥಿಗೆ, ತರಬೇತಿಗೊಳಿಸಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಪ್ರೋತ್ಸಾಹ ನೀಡಿದ ಎಲ್ಲಾ ಮುಖ್ಯಸ್ಥರನ್ನು ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ದೀಪಾವಳಿ ಹಬ್ಬದ ಪ್ರಯುಕ್ತ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾಗಿರಿಯ ಪಂಚಕರ್ಮ ವಿಭಾಗದ ವತಿಯಿಂದ ಆಯೋಜಿಸಿರುವ ಎಂಟು ದಿನಗಳ ‘ಅಭ್ಯಂಗ ಸಪ್ತಾಹ’ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಲಾಯಿತು. ಆತ್ಮಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಸುಬ್ರಹ್ಮಣ್ಯ ಪದ್ಯಾಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆಯುರ್ವೇದದ ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳಲ್ಲಿ ಅಭ್ಯಂಗ ಚಿಕಿತ್ಸೆಗೆ ವಿಶೇಷ ಮಹತ್ವವಿದೆ. ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡುವಲ್ಲಿ ಹಾಗೂ ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳುವಲ್ಲಿ ಇಂತಹ ಚಿಕಿತ್ಸಾ ವಿಧಾನಗಳು ಸಹಕಾರಿಯಾಗಿವೆ ಎಂದು ತಿಳಿಸಿದರು. ನವೆಂಬರ್ 7ರಿಂದ 14ರವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಆಯುರ್ವೇದದ ಅಭ್ಯಂಗ ಚಿಕಿತ್ಸೆಯ ಪ್ರಯೋಜನಗಳನ್ನು ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಅಭ್ಯಂಗ ಚಿಕಿತ್ಸೆಯು ದೇಹದ ಪೋಷಣೆ, ಚರ್ಮದ ಕಾಂತಿ ವೃದ್ಧಿ, ವಾತ ಸಂಬಂಧಿತ ಸಮಸ್ಯೆಗಳ ಶಮನ ಹಾಗೂ ದೈಹಿಕ ಮತ್ತು ಮಾನಸಿಕ ಒತ್ತಡ ನಿವಾರಣೆಗೆ ಸಹಕಾರಿಯಾಗಿದೆ. ಶಿಬಿರವು ಪ್ರತಿದಿನ ಬೆಳಿಗ್ಗೆ 7ರಿಂದ ಸಂಜೆ 4ರವರೆಗೆ ನಡೆಯಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ “ಪ್ರಸ್ತುತ ಕನ್ನಡ ನಾಡು–ನುಡಿಯ ಅಸ್ಮಿತೆಯಲ್ಲಿ ವಿದ್ಯಾರ್ಥಿಗಳ ಪಾತ್ರ” ಎಂಬ ವಿಷಯದ ಕುರಿತು ಸ್ಫೂರ್ತಿದಾಯಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಎಚ್.ಎಸ್. ಸತ್ಯನಾರಾಯಣ ಅವರು ಮಾತನಾಡಿ, ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ, ಪರಂಪರೆ, ಇತಿಹಾಸ ಮತ್ತು ಅಸ್ಮಿತೆಯ ಪ್ರತೀಕವಾಗಿದೆ. ಆಧುನಿಕತೆ ಮತ್ತು ಜಾಗತೀಕರಣದ ಪ್ರಭಾವದ ನಡುವೆಯೂ ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಉಳಿಸಿಕೊಳ್ಳುವುದು ಇಂದಿನ ಯುವಜನತೆಯ ಜವಾಬ್ದಾರಿಯಾಗಿದೆ ಎಂದು ಹೇಳುತ್ತಾ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ನೆಲದ ಬಗೆಗಿನ ಅಭಿಮಾನವನ್ನು ಜಾಗೃತಗೊಳಿಸಿದರು. ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ, ಶ್ರೀಮಂತ ಸಾಹಿತ್ಯ ಪರಂಪರೆ ಹಾಗೂ ವೈವಿಧ್ಯಮಯ ಸಂಸ್ಕೃತಿಯನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿರುವ ಹೆಮ್ಮೆಯ ಭಾಷೆಯಾಗಿದೆ.ಇಂದಿನ ಯುಗದಲ್ಲಿ ಇಂಗ್ಲಿಷ್ ಸೇರಿದಂತೆ ಅನೇಕ ಭಾಷೆಗಳನ್ನು ಕಲಿಯುವುದು ಅಗತ್ಯವೇ ಹೊರತು, ಅದಕ್ಕಾಗಿ ಮಾತೃಭಾಷೆಯನ್ನು ಕಡೆಗಣಿಸಬಾರದು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಉಡುಪಿಯ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಶನಿವಾರ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ತಂಡ ಎರಡು ವಿಭಾಗದಲ್ಲಿ ಸಮಗ್ರ ಚಾಂಪಿಯನ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಮಹಿಳೆಯ ವಿಭಾಗಮಹಿಳೆಯರ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು ಸತತ ಐದನೇ ಬಾರಿಗೆ ತಂಡ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಆಳ್ವಾಸ್‌ನ ಯಾಶಿ ಸಾಚನ್ ಐದನೇ, ಆರತಿ ಏಳನೇ, ಲಕ್ಷ್ಮೀ ಎಂಟನೇ ಹಾಗೂ ಭಾಗೀರಥಿ 11ನೇ ಸ್ಥಾನ ಪಡೆದು ತಂಡದ ಯಶಸ್ಸಿಗೆ ಮಹತ್ವದ ಕೊಡುಗೆ ನೀಡಿದರು. ಮಹಿಳಾ ತಂಡವು ಒಟ್ಟು 31 ಅಂಕಗಳನ್ನು ಗಳಿಸಿ ತಂಡ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು. ಪುರುಷರ ವಿಭಾಗ:ಪುರುಷರ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿಗಳನ್ನೊಳಗೊಂಡ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 72 ಅಂಕಗಳೊAದಿಗೆ ತೃತೀಯ ತಂಡ ಪ್ರಶಸ್ತಿ ಪಡೆದುಕೊಂಡಿತು. ಪುರುಷ ಮತ್ತು ಮಹಿಳಾ ವಿಭಾಗಗಳ ಒಟ್ಟು 103 ಅಂಕಗಳೊಂದಿಗೆ ಮಂಗಳೂರು…
