Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್, ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು, ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ಸೈನ್ಸಸ್ ಇನ್ಸ್ಟಿಟ್ಯೂಟ್ ಮತ್ತು ಮೂಡ್ಲಕಟ್ಟೆ ಕಾಲೇಜ್ ಆಫ್ ಫಿಸಿಯೋತೆರೇಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಸಭೆ ಮತ್ತು ಪ್ರತಿಜ್ಞೆ ಸ್ವೀಕಾರ ಆಯೋಜಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾದ ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ಸಬ್ ಇನ್ಸ್ಪೆಕ್ಟರ್ ಭೀಮಶಂಕರ್ ಸಿನ್ನೂರ ಕಂಡ್ಲೂರು, ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಜೆನ್ನಿಫರ್ ಫ್ರೀಡಾ ಮೆನೆಜಸ್ ಹಾಗೂ ಉಪ ಪ್ರಾಂಶುಪಾಲರಾದ ರೂಪಶ್ರೀ ಕೆ. ಎಸ್. , ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಇನ್ಸ್ಟಿಟ್ಯೂಟ್‌ನ ಡೀನ್ ಡಾ. ಪದ್ಮಚರಣ ಸ್ವೈನ್,  ಐಎಂಜೆ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಹಾಗೂ ಮೂಡ್ಲಕಟ್ಟೆ ಪ್ಯಾರಾಮೆಡಿಕಲ್ ಇನ್ಸ್ಟಿಟ್ಯೂಟ್‌ನ ಉಪಪ್ರಾಂಶುಪಾಲರಾದ ಸೌಜನ್ಯಾ ಅವರು ದೀಪ ಪ್ರಜ್ವಲನೆಯ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕುಂದಾಪುರ ರೂರಲ್ ಪೊಲೀಸ್ ಸ್ಟೇಷನ್ ಸಬ್ ಇನ್ಸ್ಪೆಕ್ಟರ್ ಭೀಮಶಂಕರ್ ಸಿನ್ನೂರ ಕಂಡ್ಲೂರು ಅವರು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು ‘ನಿಮಗೆ ನೀವೇ ಕನ್ನಡಿಯಾಗಿ’ ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯದ ಅಸಿಸ್ಟೆಂಟ್ ಪ್ರೊಫೆಸರಾದ ಡಾ. ಅನುರಾಧ ಕುರುಂಜಿ ನಡೆಸಿಕೊಟ್ಟು ಮಾತನಾಡಿ, “ತಂದೆ ತಾಯಿ ಮತ್ತುಗುರುಗಳಿಗೆ ಗೌರವ ನೀಡಿ ಓದಿನಲ್ಲಿ ಕಠಿಣ ಶ್ರಮವನ್ನು ಹಾಕಿದ್ದಲ್ಲಿ ಖಂಡಿತ ಉತ್ತುಂಗ ಮಟ್ಟಕ್ಕೆ ಏರಬಹುದು. ಸಿಕ್ಕ ಅವಕಾಶವನ್ನು ಬಾಚಿಕೊಳ್ಳುವವನೇ ಜಾಣ. ವಿದ್ಯಾರ್ಥಿ ಜೀವನದಲ್ಲಿ ಎದುರಾಗುವ ಪ್ರತಿಕ್ಷಣವೂ ಕೂಡ ಅಮೂಲ್ಯವಾದದ್ದು, ಋಣಾತ್ಮಕ ಚಿಂತನೆಯನ್ನು ಬಿಟ್ಟು ಧನಾತ್ಮಕವಾಗಿ ಆಲೋಚಿಸಿದಾಗ ನಮ್ಮ ಪ್ರಗತಿ ಸಾಧ್ಯ” ಎಂದು ವಿದ್ಯಾರ್ಥಿಗಳೊಂದಿಗೆ ಗಾದೆ, ಮನೋರಂಜನೆಯ ಆಟಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಸಹಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಹಾಗೂ ಸಹ ಸಂಸ್ಥಾಪಕರಲ್ಲಿ ಓರ್ವರಾದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಟಾನಗೊಳಿಸಲಾದ ಯೋಜನೆಗಳಾದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಬ್ಯಾಟರಿಚಾಲಿತ ಗಾಲಿಕುರ್ಚಿ, ನಿರಾಮಯ ಯೋಜನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಸೌಲಭ್ಯ ಪಡೆಯಲು ಜಿಲ್ಲೆಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574810, 2574811 ಅನ್ನು ಅಥವಾ ಖುದ್ದಾಗಿ ಮೇಲ್ಕಂಡ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ವತಿಯಿಂದ ಕಿಶೋರ ಕನಕ ಕಾವ್ಯ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದ್ದು, 10 ರಿಂದ 15 ವರ್ಷದೊಳಗಿನ ಕಿಶೋರ ಪ್ರತಿಭೆಗಳಿಂದ ವೆಬ್‌ಸೈಟ್ https://kanakadasaresearchcenter.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟಂಬರ್ 20 ರ ಒಳಗಾಗಿ ತಮ್ಮ ಇತ್ತೀಚಿನ ಭಾವಚಿತ್ರಗಳೊಂದಿಗೆ ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅಂಚೆ/ಕೊರಿಯರ್/ಖುದ್ದಾಗಿ ಅಥವಾ ಇ-ಮೇಲ್ kanakaresearchcentre@gmail.com ಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 6364529319 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಮಾಜದ ಕಟ್ಟ ಕಡೆಯ ಕೊರಗ ಕಾಲೋನಿಯಲ್ಲಿ ಸುಸರ್ಜಿತ ಮನೆ ನಿರ್ಮಿಸಿ ಕೊಡುವ ಗ್ರಾಮ ಪಂಚಾಯತ್ ಕೋಟತಟ್ಟು ಇವರ ಕಾರ್ಯ ನಿಜಕ್ಕೂ ದೇವರ ಪೂಜೆಗೆ ಸಮಾನ ಎಂದು ಸಾಲಿಗ್ರಾಮದ ಶ್ರೀ ಗುರು ನರಸಿಂಹ ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಕೆ.ಎಸ್ ಕಾರಂತ್ ಅಭಿಪ್ರಾಯಪಟ್ಟರು. ಅವರು ಕೋಟತಟ್ಟು ಗ್ರಾಮಪಂಚಾಯತ್‌ನ ಚಿಟ್ಟಿಬೆಟ್ಟು ಪರಿಶಿಷ್ಟ ಪಂಗಡ ಕಾಲೋನಿಯಲ್ಲಿ ಮನೆ ನಿರ್ಮಿಸುವ ಕಾರ್ಯಕ್ಕೆ ದೇವಸ್ಥಾನದ ವತಿಯಿಂದ ಎರಡು ಲಕ್ಷ ಚೆಕ್ ವಿತರಿಸಿ ಮಾತನಾಡಿದರು. ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ಬಾರಿಕೆರೆ ಅವರು ಗ್ರಾಮ ಪಂಚಾಯತ್ ಪರವಾಗಿ ಆಡಳಿತ ಮಂಡಳಿಗೆ ಧನ್ಯವಾದ ಸಮರ್ಪಿಸಿದರು. ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಗಣೇಶ್ ಮೂರ್ತಿ ನಾವಡ ಸದಸ್ಯರಾದ ಅನಂತ ಪದ್ಮನಾಭ ಐತಾಳ್, ಚಂದ್ರಶೇಖರ್ ಉಪಾಧ್ಯ ,ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್, ಗ್ರಾಮ ಪಂಚಾಯತ್ ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ ವಿದ್ಯಾ ಪಿ. ಸಾಲಿಯಾನ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತ್ರಾಸಿಯಲ್ಲಿ ಉಡುಪಿ ಮೂಲದ ವ್ಯಕ್ತಿಗಳು ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡಿದ್ದ ಮಾಹಿತಿ ಆಧರಿಸಿ ದಾಳಿ ನಡೆಸಿದ ಗಂಗೊಳ್ಳಿ ಪೊಲೀಸರು ಸಂತ್ರಸ್ತೆ ಮಹಿಳೆಯನ್ನು ರಕ್ಷಿಸಿ, ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ಘಟನೆ ಸೋಮವಾರ ನಡೆದಿದೆ. ಕೆಲಸ ಕೊಡಿಸುವುದಾಗಿ ನಂಬಿಸಿ ಮಹಿಳೆಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಆರೋಪದಲ್ಲಿ ಉಡುಪಿ ಪೊಲೀಸರಿಂದ ಬಂಧಿತನಾಗಿದ್ದ ಆರೋಪಿ ಶರತ್‌ ಯಾನೆ ಮೊಹಮ್ಮದ್‌ ಫಯಾಜ್‌ ಎಂಬಾತ ವಿವಿಧ ರೆಸಾರ್ಟ್‌ಗಳಿಗೆ ಪುರುಷರೊಂದಿಗೆ ಮಹಿಳೆಯರನ್ನು ಕಳಹಿಸಿದ್ದ. ಗಂಗೊಳ್ಳಿ ಠಾಣಾ ವ್ಯಾಪ್ತಿಯ ತ್ರಾಸಿ ಬೀಚ್ ಬಳಿಯಿರುವ ರೆಸಾರ್ಟ್‌ವೊಂದಕ್ಕೂ ಮಹಿಳೆಯನ್ನು ಪುಸಲಾಯಿಸಿ ವ್ಯಕ್ತಿಯೋರ್ವನೊಂದಿಗೆ ಕಳುಹಿಸಿದ್ದ. ಈ ಬಗ್ಗೆ ಸಿಕ್ಕ ಖಚಿತ ವರ್ತಮಾನದಂತೆ ದಾಳಿ ನಡೆಸಿದ ಬೈಂದೂರು ಸಿಪಿಐ ನೇತೃತ್ವದ ಪೊಲೀಸರ ತಂಡ ಸಂತ್ರಸ್ತೆ ಮಹಿಳೆಯನ್ನು ರಕ್ಷಿಸಿ ಸಖಿ ಕೇಂದ್ರಕ್ಕೆ ರವಾನಿದ್ದಾರೆ. ಬೈಂದೂರು ಪೊಲೀಸ್‌ ವೃತ್ತನಿರೀಕ್ಷಕರಾದ ನಿಲೇಶ್‌ ಚೌವ್ಹಾಣ, ಗಂಗೊಳ್ಳಿ ಪಿಎಸ್ಐ ಪವನ್‌ ನಾಯಕ್‌ ಹಾಗೂ ಮಹಿಳಾ ಸಿಬ್ಬಂದಿಗಳ ಜೊತೆ ಆ.25 ರಂದು ದಾಳಿ ನಡೆಸಿದ್ದು ರೆಸಾರ್ಟ್ ರೂಮಿನಲ್ಲಿ ಮಹಿಳೆ ಹಾಗೂ ಇನ್ನೋರ್ವ ಪುರುಷ ಕಂಡುಬಂದಿದ್ದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ ರಿ. ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ ಚಿತ್ರದ್ರುರ್ಗ ಇವರ ಸಹಯೋಗದೊಂದಿಗೆ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ, ಅನುಭವ ಮಂಟಪ, ಚಿತ್ರದ್ರುರ್ಗ ಇಲ್ಲಿ ನಡೆದ 18ರ ವಯೋಮಾನದ ಟ್ರೇಡಿಶನಲ್ ಗ್ರೂಪ್ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ Leg Balance Individuals ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ  ಶ್ರೀನಿಧಿ ಪ್ರಕಾಶ್ ಗೌಡ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ  ಆಯ್ಕೆಯಾಗಿದ್ದಾರೆ.  ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೇ ಅತ್ಯಾಚಾರ ನಡೆಸಿದವರಿಗೆ ಕಾನೂನಿನ ಮೂಲಕ ಶಿಕ್ಷೆಯಾಗಬೇಕು ಎಂದು ಪ್ರಾರ್ಥಿಸಿ ಕೋಟದ ಅಮೃತೇಶ್ವರೀ ದೇಗುಲದಲ್ಲಿ ಸೌಜನ್ಯ ಹೋರಾಟ ಸಮಿತಿ ವಿಶೇಷ ಪೂಜೆ ಸಲ್ಲಿಸಿತು. ಈ ವೇಳೆ ಹೋರಾಟ ಸಮಿತಿಯ ಪ್ರಮುಖರಾದ ಕೋಟ ದಿನೇಶ್ ಗಾಣಿಗ ಈ ವರೆಗೆ ಸೌಜನ್ಯಾಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕೆಂದು ಸಾಕಷ್ಟು ಹೋರಾಟಗಳು ನಡೆಸಿದ್ದೇವೆ, ಆದರೆ ಮುಂದಿನ ನಮ್ಮ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು ಸೌಜನ್ಯಳ ಅತ್ಯಾಚಾರಗೈದ ಆರೋಪಿಗಳು ಹಾಗೂ ಅವರ ಪರವಾಗಿ ನಿಂತವರು ಸರ್ವನಾಶವಾಗಬೇಕೆಂದು ರಾಜ್ಯದ 25ಸಾವಿರ ದೇಗುಲದಲ್ಲಿ ಏಕಕಾಲದಲ್ಲಿ ವಿಶೇಷವಾಗಿ ಪೂಜೆ ಸಲ್ಲಿಸಿದ್ದೇವೆ ಎಂದರು. ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಸ್ಥಳೀಯರಾದ ಸಚಿನ್ ಶ್ರೀಯಾನ್ ಪಾಂಡೇಶ್ವರ, ಭರತ್ ಗಾಣಿಗ, ವಿಜಯ ಪೂಜಾರಿ, ಸಂದೀಪ್ ಕದ್ರಿಕಟ್ಟು, ಶ್ರೀನಿವಾಸ ಪುತ್ರನ್, ಯೋಗೇಂದ್ರ ಪುತ್ರನ್, ಕೋಟ ಕೇಶವ ಆಚಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ರೋಟರಿ ಸಂಸ್ಥೆಗಳಲ್ಲಿ ಸದಸ್ಯರನ್ನು ಹೆಚ್ಚಿಸಿಕೊಂಡು ಸಂಸ್ಥೆಗಳನ್ನು ಬಲಪಡಿಸಬೇಕು. ರೋಟರಿ ಸಂಸ್ಥೆಗಳಲ್ಲಿ ಸದಸ್ಯರ ಸಂಖ್ಯೆ ಹೆಚ್ಚಾದರೆ ಅಂತರಾಷ್ಟ್ರೀಯ ರೋಟರಿಯ ಉದ್ದೇಶ ಸಫಲವಾಗುತ್ತದೆ. ಸಮಾಜಮುಖಿ ಮನುಕುಲದ ಸೇವೆ ಮಾಡಲು, ಮನುಕುಲದ ಕಾರ್ಯಕ್ರಮಗಳನ್ನು ಮಾಡಲು ಸಾಧ್ಯವಾಗುತ್ತದೆ ಎಂದು ರೋಟರಿ ಜಿಲ್ಲೆ 3182 ವಲಯ 1ರ ಅಸಿಸ್ಟೆಂಟ್ ಗವರ್ನರ್ ಐ. ನಾರಾಯಣ ಅಭಿಪ್ರಾಯಪಟ್ಟರು. ಅವರು ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ತ್ರಾಸಿಯ ಪ್ರೆಸ್ಟೀಜ್ ಪ್ಯಾಲೇಸ್‌ನಲ್ಲಿ ’ಜೋನಲ್ ಸೆಮಿನಾರ್ ಆನ್ ಮೆಂಬರ್‌ಶಿಪ್ ಡೆವಲಪ್‌ಮೆಂಟ್ ಎಂಡ್ ಪಬ್ಲಿಕ್ ಇಮೇಜ್ʼ ವಿಷಯದಲ್ಲಿ ನಡೆದ ಕಾರ್ಯಾಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ರೋಟರಿಯ ಇತಿಹಾಸ, ಅದರ ಕಾರ್ಯಕ್ರಮಗಳು ಹಾಗೂ ಧ್ಯೇಯೋದ್ದೇಶಗಳ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿ ಅವರು ರೋಟರಿಯಲ್ಲಿ ಗಟ್ಟಿಯಾಗಿ ಉಳಿಯುವಂತೆ ಮಾಡಲು, ಉತ್ತಮ ನಾಯಕರಾಗಿ ಹೊರಹೊಮ್ಮುವಂತೆ ಮಾಡಿ ಮುಂದಿನ ದಿನಗಳಲ್ಲಿ ಈ ಸಮಾಜದ ಸೇವೆ ಮಾಡುವಂತಾಗಬೇಕು ಎಂಬ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು. ರೋಟರಿ ಜಿಲ್ಲೆ 3182 ವಲಯ 2 ರ ಮಾಜಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ‘ವ್ಯಕ್ತಿಗಳು ಪುನಃ ಪುನಃ ಪರೀಕ್ಷೆಯಲ್ಲಿ ವಿಫಲರಾದಾಗ, ಜೀವನದಲ್ಲಿ ಸೋತಾಗ ಮಾನಸಿಕ ಸ್ಥೈರ್ಯ ತುಂಬುವಲ್ಲಿ‌ ಭಗವದ್ಗೀತೆಯಲ್ಲಿ ಹೇಳಿದ ವಾಸ್ತವಿಕ ಮೌಲ್ಯಗಳು‌ ಸಹಕಾರಿ. ಹಾಗೆಯೇ ಮಹಾಭಾರತ‌ ಮತ್ತು ರಾಮಾಯಣದಲ್ಲಾದ ಉತ್ತಮ ವಿಚಾರಗಳನ್ನು ನಮ್ಮ ದೈನಂದಿನ  ಜೀವನದಲ್ಲಿ ಅಳವಡಿಸಿಕೊಳ್ಳಬೇಕು  ಎಂದು ಖ್ಯಾತ ವಾಗ್ಮಿ‌‌‌ ಎನ್ಆರ್‌ ದಾಮೋದರ್ ಶರ್ಮಾ ತಿಳಿಸಿದರು. ಅವರು ಕುಂದಾಪುರದ‌ ಆರ್.‌ಎನ್. ಶೆಟ್ಟಿ‌ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಸಂಸ್ಕ್ರತ ಆಯೋಜಿಸಿದ ‘ಸಂಸ್ಕ್ರತೋತ್ಸವ – ಶ್ರಾವಣೀ’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.ಕಾಲೇಜಿ‌ನ ಪ್ರಾಂಶುಪಾಲರಾದ ನವೀನ ಕುಮಾರ ಶೆಟ್ಟಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕ್ರತ ವಿಭಾಗದ ಮುಖ್ಯಸ್ಥರಾದ ರವಿ ಉಪಾಧ್ಯರವರು ಅತಿಥಿಗಳನ್ನು‌ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಥಮ ಪಿ.ಯು.ಸಿ ಯ ವರೇಣ್ಯ ಶರ್ಮಾ ವೇದಘೋಷ ಮೊಳಗಿಸಿದರು. ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಗಾರ್ಗಿದೇವಿ ಭರತನಾಟ್ಯ ಪ್ರದರ್ಶನ ನೀಡಿದರು. ಧನ್ವಿ ಶೆಟ್ಟಿ ಮತ್ತು ತಂಡ ಪ್ರಾರ್ಥನೆ ಹಾಡಿದರು. ದ್ವಿತೀಯ ಪಿ.ಯು.ಸಿ ತರಗತಿಯ ಪೂರ್ವಿತಾ ಧನ್ಯವಾದ ಸಲ್ಲಿಸಿದರು. ದ್ವಿತೀಯ ಪಿ.ಯು.ಸಿ‌ ಯ‌‌ ಅಕ್ಷಯಾ…

Read More