Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಇತ್ತಿಚಿಗೆ ” ಹಿರಿಯ ನಾಗರಿಕರ” ದಿನವನ್ನು ಹಿರಿಯರ  ಸೇವೆ ಮತ್ತು ಅನುಭವಗಳಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಆಚರಿಸಲಾಯಿತು. ಸಂಸ್ಥೆಯಲ್ಲಿ ಅಧ್ಯಾಪನದಲ್ಲಿ ನಿರತರಾಗಿರುವ ಹಿರಿಯ ಶಿಕ್ಷಕರಾದ ಸಂತೋಷ್ ಕುಮಾರ್ ಶೆಟ್ಟಿ, ಉದಯ್ ಕುಮಾರ್ ಹೆಗ್ಡೆ, ಬೇಳೂರು ಮತ್ತು ಹಿರಿಯ ಉಪನ್ಯಾಸಕರಾದ. ಜಿ. ಕೆ. ರಮೇಶ್ ರಾವ್ ಇವರಿಗೆ ಹಾಗೂ ವಾಹನ ಚಾಲಕರಾಗಿ ದುಡಿಯುತ್ತಿರುವ ಶೇಖರ್ ಪೂಜಾರಿ, ರಘುರಾಮ್ ಶೆಟ್ಟಿ, ಶಹಜಾನ್, ಪ್ರಭಾಕರ್ ಶೆಟ್ಟಿ ಮತ್ತು ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಮಂಜ ಅವರಿಗೆ ಗೌರವ ಸಲ್ಲಿಸಲಾಯಿತು.. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಡಳಿತ ನಿರ್ದೇಶಕರಾದ ರೆನಿಟಾ ಲೋಬೊ ಮಾತನಾಡಿ “ಹಿರಿಯರ ಅನುಭವ,ಶ್ರಮ ಹಾಗೂ ಅವರ ನಿಷ್ಠೆ ನಮಗೆಲ್ಲಾ ಪ್ರೇರಣೆ ಎನ್ನುತ್ತಾ ಅವರು ಸಂಸ್ಥೆಯ ಬೆಳವಣಿಗೆಗೆ ನೀಡಿದ ಸಹಕಾರವನ್ನು ನೆನಪಿಸಿಕೊಂಡರು. ಆಡಳಿತ ನಿರ್ದೇಶಕರಾದ ಶಮಿತಾ ರಾವ್ ಇವರು ಮಾತನಾಡಿ ಹಿರಿಯರು ಕಾರ್ಯ ವೈಖರಿಯನ್ನು ಸ್ಮರಿಸುತ್ತಾ ಕಾರ್ಯಕ್ರಮದಲ್ಲಿ ಹಿರಿಯರಿಗೆ ನೀಡಲಾದ ಸ್ಮರಣಿಕೆಯಲ್ಲಿ ಬರೆದ ಸಂದೇಶವನ್ನು ಭಾವನಾತ್ಮಕವಾಗಿ ಓದಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ ಕಾರ್ತಟ್ಟು ವಾರ್ಡ್ ಹಾಗೂ ಗುಂಡ್ಮಿ ಗ್ರಾಮದ ಚೆಲ್ಲಮಕ್ಕಿ ವಾರ್ಡ್‌ನಲ್ಲಿ ಯುವತಿಯರಿಗೆ ಮತ್ತು ಮಹಿಳೆಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಲಾಯಿತು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಮತ್ತು ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಂಯುಕ್ತ ಆಶ್ರಯದಲ್ಲಿ ನಡೆದ ನಾರೀ ನ್ಯಾಯ್ ಕಾರ್ಯಕ್ರಮದ ಮಹತ್ವದ ಯೋಜನೆಯಾದ ಮಹಿಳಾ ಆರೋಗ್ಯ ಸಂಕಲ್ಪ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕೋಟ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಖಾ.ಪಿ.ಸುವರ್ಣ ವಹಿಸಿದ್ದರು. ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ಅವರು ಯುವತಿಯರಿಗೆ ಪ್ಯಾಡ್‌ಗಳನ್ನು ವಿತರಿಸಿ ಮಾತನಾಡಿ, ತಮ್ಮ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಸದಾ ಚಿಂತಿಸುವ, ಕಾಳಜಿ ವಹಿಸುವ ನಮ್ಮ ಮಹಿಳೆಯರು ತಮ್ಮ ಆರೋಗ್ಯದ ಗಮನ ಹರಿಸುವುದನ್ನು ಮರೆತು ಬಿಡುತ್ತಾರೆ. ಹಾಗಾಗಿ ಅವರಲ್ಲಿ ಗರ್ಭಕೋಶ ಹಾಗೂ ಸ್ತನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು ಕನಕ ಸಾಹಿತ್ಯ, ದಾಸ ಸಾಹಿತ್ಯ ಹಾಗೂ ತತ್ವಪದ ಸಾಹಿತ್ಯ ಕುರಿತ ಸಂಶೋಧನೆ ಅಥವಾ ವಿಮರ್ಶಾ ಗ್ರಂಥವೊಂದಕ್ಕೆ ಬಹುಮಾನ ನೀಡುವ ಯೋಜನೆ ರೂಪಿಸಿದ್ದು, 2024 ನೇ ಸಾಲಿನಲ್ಲಿ ಪ್ರಕಟವಾದ ಪ್ರಥಮ ಮುದ್ರಣದ ಗ್ರಂಥವನ್ನು ಬಹುಮಾನಕ್ಕೆ ಪರಿಗಣಿಸಲಾಗುತ್ತಿದ್ದು, ವೆಬ್‌ಸೈಟ್ https://kanakadasaresearchcenter.karnataka.gov.in/  ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಬಹುಮಾನಕ್ಕೆ ಗ್ರಂಥ ಲೇಖಕರು, ಪ್ರಕಾಶಕರು ಸೆಪ್ಟಂಬರ್ 10 ರ ಒಳಗಾಗಿ ಸಂತಕವಿ ಕನಕದಾಸ ಮತ್ತು ತತ್ವ ಪದಕಾರರ ಅಧ್ಯಯನ ಕೇಂದ್ರ, ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಂಗಳೂರು-560056 ಇಲ್ಲಿಗೆ ಅರ್ಜಿಯನ್ನು ಅಂಚೆ/ಕೊರಿಯರ್ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 6364529319 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೇಂದ್ರದ ಸದಸ್ಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ವಿದ್ಯಾ ಅಕಾಡೆಮಿಯಲ್ಲಿ, ಕೋಟೇಶ್ವರ ಶ್ರೀದೇವಿ ಡೆಂಟಲ್ ಕ್ಲಿನಿಕ್‌ನ ಡಾ. ಜಗದೀಶ್ ಹಾಗೂ ಅವರ ತಂಡವು  ದಂತ ಆರೈಕೆ ಮತ್ತು ಹಲ್ಲುಗಳ ಸ್ವಚ್ಛತೆಯ ಕುರಿತ ವಿಶೇಷ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಕೋಟೇಶ್ವರದ ಶ್ರೀದೇವಿ ದಂತ ಚಿಕಿತ್ಸಾಲಯದ ಡಾ. ಜಗದೀಶ್ ಅವರು ಪುಟ್ಟ ಮಕ್ಕಳಿಗೆ , ಹಲ್ಲುಗಳನ್ನು ಸರಿಯಾಗಿ ಬ್ರಷ್ ಮಾಡುವ ವಿಧಾನ ಹಾಗೂ ದಂತ ಆರೋಗ್ಯದ ಮಹತ್ವವನ್ನು  ದಂತಪಂಗ್ತಿಯ ವಿಶೇಷ ಆಕರ್ಷಕ ಮಾಡೆಲ್ ಗಳೊಂದಿಗೆ ವಿವರಿಸಿ ಅರ್ಥೈಸಿದರು.ವಿದ್ಯಾ ಅಕಾಡೆಮಿಯ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿ ವೈದ್ಯರು ಹೇಳಿದ್ದನ್ನು ಪಾಲಿಸಿ ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುತ್ತೇವೆಂದು ವೈದ್ಯರಿಗೆ ಭರವಸೆಯಿತ್ತರು.ಈ ಸಂದರ್ಭದಲ್ಲಿ ಐಎಂಜೆ ಸಂಸ್ಥೆಗಳ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ ಮಾತನಾಡಿ, ವಿದ್ಯಾ ಅಕಾಡೆಮಿಯ ಪ್ರಯತ್ನವನ್ನು ಶ್ಲಾಘಿಸಿ, ಮಕ್ಕಳಲ್ಲಿ ದಂತ ಆರೈಕೆಯ ಬಗ್ಗೆ ಜಾಗೃತಿ ಮೂಡಿಸಿದ ಡಾ. ಜಗದೀಶ್ ಮತ್ತು ಅವರ ತಂಡಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಅವರು, ಐಎಂಜೆ ಗುಂಪಿನ ಎಲ್ಲಾ ಸಂಸ್ಥೆಗಳು ಸದಾ ವಿದ್ಯಾರ್ಥಿಗಳಿಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್ (ಎಂ.ವಿ.ಎ) ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಪ್ರಥಮ ಬಿ.ವಿ.ಎ ಸ್ನಾತಕ ಪದವಿಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಎಂ.ವಿ.ಎ ಪ್ರವೇಶಾತಿಗಾಗಿ ಚಿತ್ರಕಲೆ, ಗ್ರಾಫಿಕ್ಸ್ ಮತ್ತು ಶಿಲ್ಪಕಲೆ ವಿಭಾಗಕೆ ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಅರ್ಹತಾ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2438931 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ  ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮನು ಪೂಜಾರಿ 110  ಮೀಟರ್  ಹರ್ಡಲ್ಸ್ ನಲ್ಲಿ  ಪ್ರಥಮ  ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ದಾವಣಗೆರೆಯ ಬಾಪೂಜಿ ಹಿರಿಯ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆ ಆಶ್ರಯದಲ್ಲಿ ನಡೆದ ಸಿಬಿಎಸ್‌ಇ ಬೆಂಗಳೂರು ವಲಯದ ಕ್ಲಸ್ಟರ್ ವಾಲಿಬಾಲ್ ಪಂದ್ಯಾಟದಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ತಂಡ ಮೂರನೇ ಸ್ಥಾನವನ್ನು ಪಡೆದುಕೊಂಡಿರು.  ಈ ಪಂದ್ಯಾಟದಲ್ಲಿ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ 84 ತಂಡಗಳು ಭಾಗವಹಿಸಿದ್ದವು. ವಿಜೇತರಾದ ಕ್ರೀಡಾಪಟುಗಳಿಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪ್ರತಿಭೆ ನಿಮ್ಮದು ವೇದಿಕೆ ನಮ್ಮದು 2025ರ ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸತತ 110ನೇ ತಿಂಗಳ ಕಾರ್ಯಕ್ರಮ ಹಾಗೂ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ನೇತಾಜಿ ಕಮಿಟಿ ಫ್ರೆಂಡ್ಸ್ ಇವರ ನೇತೃತ್ವದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ವೇದಿಕೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಪ್ಪಿನಕುದ್ರಿನ ಮುಖ್ಯೋಪಾಧ್ಯಾಯ ರಾಘವೇಂದ್ರ, ಅಂಗನವಾಡಿ ಉಪಾಧ್ಯಾಯಿನಿಯರಾದ ಪ್ರೇಮಲತಾ ಗಣೇಶ್ ಸೇರುಗಾರ, ಸಂಗೀತಾ, ಲಲಿತಾ, ಆಶಾ ಕಾರ್ಯಕರ್ತೆಯರಾದ ಜ್ಯೋತಿ ಪೂಜಾರಿ, ಸಂಗೀತಾ, ನೇತಾಜಿ ಕಮಿಟಿ ಫ್ರೆಂಡ್ಸ್‌ನ  ಅಧ್ಯಕ್ಷ ರಾಘವೇಂದ್ರ ಪೈ, ನಾಗಶ್ರೀ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ರಾಘವೇಂದ್ರ ಪೈ ಅವರನ್ನು ಗೊಂಬೆಯಾಟ ಅಕಾಡೆಮಿ ವತಿಯಿಂದ ಸನ್ಮಾನಿಸಲಾಯಿತು. ನೇತಾಜಿ ಕಮಿಟಿ ಫ್ರೆಂಡ್ಸ್‌ನ ವತಿಯಿಂದ ಕ್ರೀಡಾಪಟು ನಾಗಶ್ರೀ ಗಣೇಶ ಸೇರುಗಾರ್ ಅವರನ್ನು ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ಸ್ಥಳೀಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಗಳಿಸಿದರು. ರಾಜೇಂದ್ರ ಪೈ ಅವರು ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಾಡದೋಣಿಯ ಮೂಲಕ ಮೀನುಗಾರಿಕೆ ತೆರಳಿದ್ದ ವೇಳೆ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಹಿನ್ನಲ್ಲೆಯಲ್ಲಿ ಅದರಲ್ಲಿದ್ದ ಓರ್ವ ಮೀನುಗಾರ ಮೃತಪಟ್ಟು, ಇಬ್ಬರು ಪ್ರಾಣಪಾಯದಿಂದ ಪಾರಾದ ಘಟನೆ ಸಾಸ್ತಾನದ ಕೋಡಿತಲೆ ಅಳಿವೆ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ. ಮೃತಪಟ್ಟ ಮೀನುಗಾರ ಶರತ್ ಖಾರ್ವಿ (27) ಎಂದು ಗುರುತಿಸಲಾಗಿದೆ. ಶುಕ್ರವಾರ ಮುಂಜಾನೆ ಶಂಕರ್ ಖಾರ್ವಿ ಮಾಲಕತ್ವದ ದೋಣಿಯಲ್ಲಿ ಅಕ್ಷಯ ಖಾರ್ವಿ, ಮಂಜುನಾಥ್ ಖಾರ್ವಿ ಹಾಗೂ ಶರತ್ ಖಾರ್ವಿ ಈ ಮೂವರು ಮೀನುಗಾರರು ಮೀನುಗಾರಿಕೆ ತೆರಳಿದ್ದರು. ಈ ಸಂದರ್ಭದಲ್ಲಿ ಸಮುದ್ರದ ಅಲೆಗಳ ರಭಸಕ್ಕೆ ದೋಣಿ ಮಗುಚಿ ಬಿದ್ದು ಮೂವರು ನೀರುಪಾಲಗಿದ್ದರು. ಅಕ್ಷಯ ಖಾರ್ವಿ ಹಾಗೂ ಮಂಜುನಾಥ್ ಖಾರ್ವಿ ಅವರು ಈಜಿ ದಡ ಸೇರಿದ್ದರು. ಆದರೆ ಶರತ್ ಖಾರ್ವಿ ಈಜಲು ಆಗದೆ ನೀರಲ್ಲಿ ಮುಳುಗಿ ಮೃತಪಟ್ಟಿರು. ಅದೃಷ್ಠವಷಾತ್ ಪ್ರಾಣಾಪಾಯದಿಂದ ಪಾರಾಗಿದ್ದ ಮಂಜುನಾಥ್ ಖಾರ್ವಿ, ಅಕ್ಷಯ್ ಖಾರ್ವಿ ಇಬ್ಬರು ಮೀನುಗಾರರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೋಣಿ ಸಮುದ್ರ ಪಾಲಾಗಿದ್ದು ಲಕ್ಷಾಂತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಪ್ರತಿ ಮಗುವಿಗೆ ತಲಾ ರೂ.10,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳನ್ನು ಒದಗಿಸಬೇಕು. ಸೂಕ್ತ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಸಲ್ಲಿಸಲು ಸೆಪ್ಟಂಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ 0820-2574978 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ…

Read More