ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಗಣೇಶೋತ್ಸವ ಕಾರ್ಯಕ್ರಮಗಳು ಗ್ರಾಮದ ಒಗ್ಗಟ್ಟು ಕೇಂದ್ರಿಕರಿಸುವ ಉತ್ಸವವಾಗಿ ಸಂಸ್ಕ್ರತಿ ಸಾರುವ ಉತ್ಸವವಾಗಿದೆ ಎಂದು ಪಾಂಡೇಶ್ವರ ಕಳಿಬೈಲು ಶ್ರೀ ಸ್ವಾಮೀ ಕೊರಗಜ್ಜ ದೈವಸ್ಥಾನದ ಧರ್ಮದರ್ಶಿ ಅಭಿಜಿತ್ ಪಾಂಡೇಶ್ವರ ಹೇಳಿದರು. ಅವರು ಸೋಮವಾರ ಇಲ್ಲಿನ ಪಾಂಡೇಶ್ವರ ಮೂಡಹಡು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 14ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಆಗಿನ ಕಾಲದಲ್ಲಿ ತಿಲಕರು ಮೊಳಗಿಸಿ ಈ ಉತ್ಸವ ಧಾರ್ಮಿಕ ಭಾವನೆ ಮೂಡಿಸುವ ಜತೆಗೆ ಸಾಂಸ್ಕೃತಿಕವಾಗಿ ರೂಪುಗೊಳಿಸವ ಕೇಂದ್ರವಾಗಿದೆ ಎಂದರು. ಇದೇ ವೇಳೆ ಗ್ರಾಮದ ಹಿರಿಯ ಕೃಷಿಕ ಕೃಷ್ಣ ಮರಕಾಲ,ಕ್ರೀಡಾ ಸಾಧಕ ಸುಭಾಷ್ ಪೂಜಾರಿ ಇವರುಗಳನ್ನು ಸನ್ಮಾನಿಸಲಾಯಿತು. ಗ್ರಾಮದಲ್ಲಿನ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಗಣೇಶೋತ್ಸವ ವತಿಯಿಂದ ಹಮ್ಮಿಕೊಂಡ ಕ್ರೀಡಾಕಾರ್ಯಕ್ರಮದ ವಿಜೇತರಾದವರಿಗೆ ಬಹುಮಾನ ವಿತರಣೆ ಜರಗಿತು. ಸಭಾಧ್ಯಕ್ಷತೆಯನ್ನು ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಆಡಳಿತ ಧರ್ಮದರ್ಶಿ ಕೆ.ವಿ ರಮೇಶ್ ರಾವ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಉದ್ಯಮಿ ರಘು ಪೂಜಾರಿ, ಎನ್ ಭಾಸ್ಕರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ 22 ಗ್ರಾಂ ತೂಕದ ಚಿನ್ನದ ಸರವನ್ನು ಅಪರಿಚಿತರು ಕಳವು ಮಾಡಿದ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ನಾಡ ಗ್ರಾಮದ ನಿವಾಸಿ ಮುತ್ತು (75) ಚಿನ್ನದ ಸರ ಕಳೆದುಕೊಂಡ ವೃದ್ಧ ಮಹಿಳೆ. ಅವರು ಚೌತಿ ಹಬ್ಬದ ಪ್ರಯುಕ್ತ ಆನೆಗುಡ್ಡೆ ಗಣಪತಿ ದೇವಸ್ಥಾನಕ್ಕೆ ಹೋಗಿದ್ದು, ದೇವಸ್ಥಾನದ ಒಳಗೆ ದೇವರ ದರ್ಶನ ಪಡೆದು ತೀರ್ಥ ಪ್ರಸಾದ ಪಡೆದುಕೊಂಡು ಪ್ರದಕ್ಷಿಣೆ ಬರುತ್ತಿದ್ದ ವೇಳೆ ಚಿನ್ನದ ಸರವನ್ನು ಎಳೆದುಕೊಂಡು ಪರಾರಿಯಾಗಿದ್ದಾರೆ. ಕಳವಾದ ಚಿನ್ನದ ಸರದ ಒಟ್ಟು ಮೌಲ್ಯ ಸುಮಾರು 2,50,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಜನತೆ ಮತ್ತು ನಾಗರಿಕರಲ್ಲಿ ಸಂವಿಧಾನದ ಹಕ್ಕು, ಕರ್ತವ್ಯಗಳು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಸಂವಿಧಾನದ ಮೌಲ್ಯಗಳ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಇದ್ದಾಗ ಮಾತ್ರ ಶಿಸ್ತು ಬದ್ಧ ಜೀವನ ನಡೆಸಲು ಸಾಧ್ಯ ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಕಾನೂನು ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಡುಪಿ ಇವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯುವ ಸಂಸತ್ತು – ಕಾರ್ಯಕ್ರಮವನ್ನು ಉದ್ಘಾಟಿಸಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಸಂವಿಧಾನವು ದೇಶದ ಪ್ರತೀ ಪ್ರಜೆಗೂ ಸ್ವತಂತ್ರವಾಗಿ ಜೀವಿಸಲು ಅವಕಾಶ ಮಾಡಿಕೊಟ್ಟಿದೆ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು, ಮಾನವ ಹಕ್ಕುಗಳನ್ನು ಉತ್ತೇಜಿಸಲು ಮತ್ತು ಸಾರ್ವಜನಿಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸೇವೆ ಮಾಡುವ ಕಾಯಕ ಭಗವಂತನಿಚ್ಛೆ. ನಾನು ಇಲ್ಲಿ ಮಧ್ಯವರ್ತಿ ಅಷ್ಟೆ ಎಂದು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ಹದ್ದಿನಬೆಟ್ಟು ಅಧ್ಯಕ್ಷ ಅವಿನಾಶ್ ಶೆಟ್ಟಿ ಗುಂಡ್ಮಿ ಅಭಿಪ್ರಾಯಪಟ್ಟರು. ಅವರು ಸೋಮವಾರ ಇಲ್ಲಿನ ಹದ್ದಿನಬೆಟ್ಟು ಸಾಮೂಹಿಕ ಶ್ರೀ ಗಣೇಶ ಆರಾಧನೋತ್ಸವ ಸಮಿತಿ ವತಿಯಿಂದ 29ನೇ ವರ್ಷದ ಶ್ರೀ ಗಣೇಶ ಆರಾಧನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ತನ್ನ ಫೌಂಡೇಶನ್ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಆದ್ಯತೆ ನೀಡುವುದರ ಜತೆಗೆ ಸಾಮಾಜಿಕ ಕಾರ್ಯದೊಂದಿಗೆ ಗಣೇಶೋತ್ಸವ ಕಾರ್ಯಕ್ರಮ ಹದ್ದಿನಬೆಟ್ಟಿನಲ್ಲಿ ಸರ್ವಧರ್ಮ ಸಮನ್ವಯ ಕೇಂದ್ರವಾಗಿ ರೂಪುಗೊಂಡು ಸಾಮರಸ್ಯ ಜೀವನಕ್ಕೆ ಮುನ್ನುಡಿ ಬರೆಯುತ್ತಿರುವುದು ಉತ್ಸವದ ಮೆರಗನ್ನು ಹೆಚ್ಚಿಸಿದೆ ಎಂದರು. ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ 50ಸಾವಿರ ನಗದು ಪುರಸ್ಕಾರದೊಂದಿಗೆ ಶ್ರೀ ಗಣೇಶ ಆರಾಧನೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಜಬ್ಬ ಮಾತನಾಡಿ, ನಮ್ಮೂರಿನ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗಬಾರದು ಎಂಬ ಇಚ್ಛೆಯಿಂದ ಕಿತ್ತಳೆ ಮಾರಿ ಶಾಲೆ ಕಟ್ಟದ್ದೇನೆ ಆಗಿನ ಶಾಸಕ ಯು.ಟಿ ಫರೀದ್ ಸೇರಿದಂತೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ರಾಜ್ಯದ 37 ಕಾಲೇಜುಗಳಿಂದ ಆಗಮಿಸಿದ್ದ 1,350 ಸ್ಪರ್ಧಾರ್ಥಿಗಳು ಭಾಗವಹಿಸಿದ್ದ ಅಂತರ್ ಕಾಲೇಜು ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಎಸ್ಡಿಎಂ ಆರೋಹಮ್-2026ರಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್ಶಿಪ್ನೊಂದಿಗೆ ನಗದು ಬಹುಮಾನವನ್ನು ಗೆದ್ದು ಸಾಧನೆ ಮೆರೆದಿದ್ದಾರೆ. ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧೆಯ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನಾಲ್ಕು ಪ್ರಥಮ ಹಾಗೂ ಎರಡು ದ್ವಿತೀಯ ಸ್ಥಾನಗಳನ್ನು ತಮ್ಮದಾಗಿಸಿಕೊಂಡರು. ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ನಿಹಾಲ್, ಶೌರ್ಯ, ವರ್ಷಾ, ನಮಿಷ್, ಶ್ರೀನಿವಾಸ್, ಸಾತ್ವಿಕ್ ಹಾಗೂ ತೇಜಶ್ರೀ ಅವರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿತು. ಕಾರ್ಪೊರೇಟ್ ವಾಕ್ ಸ್ಪರ್ಧೆಯಲ್ಲಿ ಆದ್ಯಾ ಜೈನ್, ನಿತಿನ್ ಕಶ್ಯಪ್, ನಿಧಿ ಕೆ.ಕೆ. ಹಾಗೂ ನಿಯೋಲಾ ಲೋಬೊ ಅವರ ತಂಡ ಪ್ರಥಮ ಸ್ಥಾನ ಗಳಿಸಿತು. ಈವೆಂಟ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಅರುಷ್ ಹಾಗೂ ಆದಿತ್ಯ ಅವರ ತಂಡ ಪ್ರಥಮ ಸ್ಥಾನ ಪಡೆದುಕೊಂಡರೆ, ಪಕೋಡಾ ಟೇಲ್ಸ್ ಸ್ಪರ್ಧೆಯಲ್ಲಿ ಲಿಖಿತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ (ಐಎಂಜೆಐಎಸ್ಸಿ) ಎನ್ಎಸ್ಎಸ್ ಮತ್ತು ಸಮುದಾಯ ಸೇವಾ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಮಂಗಳೂರು ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ಪ್ರಾಧ್ಯಾಪಕ ಹಾಗೂ ಎನ್ಎಸ್ಎಸ್ ಕಾರ್ಯಕ್ರಮ ಸಂಯೋಜಕರಾದ ಡಾ. ಶೇಷಪ್ಪ ಅಮಿನ್ ಕೆ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ ಮತ್ತು ಸೇವಾ ಮನೋಭಾವವನ್ನು ಬೆಳೆಸುವಲ್ಲಿ ಎನ್ಎಸ್ಎಸ್ ಮತ್ತು ಸಮುದಾಯ ಸೇವೆಯ ಪಾತ್ರವನ್ನು ವಿವರಿಸಿದರು. ಸಮಾಜದ ಕಲ್ಯಾಣಕ್ಕಾಗಿ ಅರ್ಥಪೂರ್ಣ ಕೊಡುಗೆ ನೀಡುವಂತೆ ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.ಕಾರ್ಯಕ್ರಮದಲ್ಲಿ ಏಳು ದಿನಗಳ ಎನ್ಎಸ್ಎಸ್ ಶಿಬಿರದ ಭಾಗವಾಗಿ ಯೋಜಿಸಲಾದ ಚಟುವಟಿಕೆಗಳನ್ನು ಪ್ರಸ್ತುತಪಡಿಸಲಾಯಿತು. ಸ್ವಚ್ಛತಾ ಆಂದೋಲನ, ಗಿಡ ನೆಡುವಿಕೆ ಮತ್ತು ಪರಿಸರ ಸಂರಕ್ಷಣೆ, ಆರೋಗ್ಯ ಮತ್ತು ನೈರ್ಮಲ್ಯ ಜಾಗೃತಿ, ರಕ್ತದಾನ ಮತ್ತು ಆರೋಗ್ಯ ಶಿಬಿರಗಳು, ರಸ್ತೆ ಸುರಕ್ಷತಾ ಅಭಿಯಾನ, ಶಿಕ್ಷಣ ಮತ್ತು ಸಾಮಾಜಿಕ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳು, ಗ್ರಾಮ ಭೇಟಿ ಮತ್ತು ಸ್ಥಳೀಯ ಸಮುದಾಯದೊಂದಿಗೆ ಸಂವಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆಯಿಂದ ಕರಾವಳಿ ಬೈಪಾಸ್ವರೆಗಿನ ಬಾಕಿ ಉಳಿದಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಿ ಹೆದ್ದಾರಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಭೂ ಮಾಲೀಕರಿಗೆ ಪರಿಹಾರ ಧನವನ್ನು ಪಾವತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಕಾಮಗಾರಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ 169 ಎ ರ ಮಲ್ಪೆ – ತೀರ್ಥಹಳ್ಳಿವರೆಗಿನ ಕಾಮಗಾರಿ ಜಿಲ್ಲೆಯಲ್ಲಿ ಅಂತಿಮ ಹಂತದಲ್ಲಿದೆ. ಆದರೆ ಕಾಮಗಾರಿ ನಡೆಯುತ್ತಿರುವ ಕೆಲವು ಕಡೆಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆಯು ಪೂರ್ಣ ಪ್ರಮಾಣದಲ್ಲಿ ಆಗದ ಕಾರಣ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಭೂ ಸ್ವಾಧೀನ ಕಾರ್ಯಗಳನ್ನು ಕಂದಾಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಅಭಿಯಂತರರ ಇಲಾಖೆಯವರು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ, ಪೂರ್ಣಗೊಳಿಸಬೇಕು ಎಂದರು. ಭೂ ಮಾಲೀಕರಿಗೆ ವೈಜ್ಞಾನಿಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ಸರಕಾರಿ ಪ್ರೌಢ ಶಾಲೆ ಸಿದ್ದಾಪುರದಲ್ಲಿ ಅಂಪಾರು ವೃತ್ತ ಮಟ್ಟದ ಕ್ರೀಡಾಕೂಟವು ಜರುಗಿತು. ಕಾರ್ಯಕ್ರಮವನ್ನು ಸಚ್ಚಿದಾನಂದ ಚಾತ್ರ ಇವರು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು. ಬ್ಯಾಂಡುಗಳನ್ನು ಹೊಂದಿ ವಿವಿಧ ಸಮವಸ್ತ್ರದಲ್ಲಿ ಕಂಗೊಳಿಸಿದ ಕ್ರೀಡಾಳುಗಳ ಆಕರ್ಷಕ ಪಥಸಂಚಲನದ ಗೌರವವನ್ನು ಮೋಹನದಾಸ ಶೆಟ್ಟಿ ಸಿದ್ದಾಪುರ ಅವರು ಗೌರವವನ್ನು ಸ್ವೀಕರಿಸಿದರು. ಕ್ರೀಡಾ ಧ್ವಜವನ್ನು ಉದ್ಯಮಿ ಸುರೇಶ್ ಶೆಟ್ಟಿ ಸಿದ್ದಾಪುರ ಅವರು ಅರಳಿಸಿದರು. ಶ್ರೀ ಮಹಾಗಣಪತಿ ದೇವಸ್ಥಾನದಿಂದ ಕ್ರೀಡಾಳುಗಳು ತಂದ ಕ್ರೀಡಾ ಜ್ಯೋತಿಯನ್ನು ರಾಮದಾಸ್ ಮಡಿವಾಳ ಬಾಂಡ್ಯ ಅವರು ಬೆಳಗಿಸಿ ಕ್ರೀಡಾಕೂಟವನ್ನು ಅಧಿಕೃತವಾಗಿ ಚಾಲನೆಗೊಳಿಸಿದರು. ಕ್ರೀಡಾಕೂಟದ ಪ್ರತಿಜ್ಞೆಯನ್ನು ಶಾಲಾ ನಾಯಕಿ ಚೈತ್ರ ಪ್ರಭು ಎಲ್ಲಾ ಕ್ರೀಡಾಪಟುಗಳಿಗೆ ಬೋಧಿಸಿದರು. ಕಾರ್ಯಕ್ರಮದಲ್ಲಿ ವಾರ್ಷಿಕೋತ್ಸವ ಸಮಿತಿಯ ಅಧ್ಯಕ್ಷ ಶ್ರೀಕಾಂತ್ ನಾಯಕ್, ಗೌರವಾಧ್ಯಕ್ಷರಾದ ಸಂಜೀವ್ ಶೆಟ್ಟಿ, ಸಿದ್ದಾಪುರ ಹಿರಿಯ ವಿದ್ಯಾರ್ಥಿ ಸಂಘಟನೆ ಪ್ರವೀಣ್ ಪಟೇಲ್, ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಚಂದ್ರಕುಲಾಲ್, ವಾರ್ಷಿಕೋತ್ಸವ ಸಮಿತಿ ಖಜಾಂಚಿ ಗಣೇಶ ಶೇಟ್, ಸಿದ್ದಾಪುರ ಸರ್ಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸ. ಪ. ಪೂ ಕಾಲೇಜು ಕುಂದಾಪುರದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕುಸ್ತಿ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು 4 ಚಿನ್ನ, 3 ಬೆಳ್ಳಿ, 1 ಕಂಚಿನ ಪದಕದೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ವಂಶಿತ್, ನಿಹಾನ್, ಅಭಿಷೇಕ್ ಹಾಗೂ ರಿತ್ವಿಕ್ ಒಟ್ಟು ನಾಲ್ಕು ವಿದ್ಯಾರ್ಥಿಗಳು ಹೊಸಪೇಟೆಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಭಂಡಾರ್ಸ್ಕಾರ್ಸ್ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ಗಾಂಧೀ ಮೈದಾನದಲ್ಲಿ ನಡೆದ ಕುಂದಾಪುರ ತಾಲೂಕು ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ 2 ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
