ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇತಿಹಾಸ ಪ್ರಸಿದ್ಧ ಬಸ್ರೂರು ಶ್ರೀ ಮಹಾಲಸಾ ನಾರಾಯಣಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ವಾಡಿಕೆಯಂತೆ ನಡೆಯುವ ಚಂಡಿಕಾಹವನವು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಗ್ಗೆ ಶ್ರೀ ದೇವತಾ ಪ್ರಾರ್ಥನೆಯೊಂದಿಗೆ ಯಜ್ಞ ಅನು?ನಗಳು ಪ್ರಾರಂಭಗೊಂಡಿತು. ಮಧ್ಯಾಹ್ನ ಯಜ್ಞ ಪೂರ್ಣಾಹುತಿ, ಮಹಾಮಂಗಳಾರತಿ, ಶ್ರೀ ದೇವಿಗೆ ಸಮರ್ಪಿಸಿದ ಹರಕೆ ಸೀರೆಗಳ ಏಲಂ ಹಾಗೂ ಮಹಾ ಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ಪುರೋಹಿತರ ನೇತೃತ್ವದಲ್ಲಿ ನಡೆಯಿತು. ದೇವಳದ ಧರ್ಮದರ್ಶಿಗಳು, ಅರ್ಚಕರು, ಸೇವಾದಾರರು, ಕುಳಾವಿ ಭಜಕರು, ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಕೆನರಾ ಬ್ಯಾಂಕ್ ವತಿಯಿಂದ ಶ್ರೀ ಶಾರದಾ ಮಂಟಪಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೊಡುಗೆಯಾಗಿ ನೀಡಲಾಯಿತು. ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕಿನ ಉಡುಪಿ ವಿಭಾಗೀಯ ಕಛೇರಿಯ ಸಹಾಯಕ ಮಹಾಪ್ರಬಂಧಕ ಕೆ.ಕಾಳಿ ಅವರು ಕೆನರಾ ಬ್ಯಾಂಕ್ ವತಿಯಿಂದ ಕೊಡಮಾಡಿದ ಶುದ್ಧ ಕುಡಿಯವ ನೀರಿನ ಘಟಕವನ್ನು ಶ್ರೀ ಶಾರದೋತ್ಸವ ಸಮಿತಿ ಗೌರವಾಧ್ಯಕ್ಷ ಜಿ.ನಾರಾಯಣ ಆಚಾರ್ಯ ಮತ್ತು ಅಧ್ಯಕ್ಷ ಸತೀಶ ಜಿ. ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಕೆನರಾ ಬ್ಯಾಂಕಿನ ಡಿವಿಜನಲ್ ಮ್ಯಾನೇಜರ್ ರತ್ನಾಕರ ಗಾಣಿಗ, ಗಂಗೊಳ್ಳಿ ಶಾಖಾ ಪ್ರಬಂಧಕ ವಿಷ್ಣುಮೂರ್ತಿ ಯಾಜಿ, ಶ್ರೀ ಶಾರದೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಮಹಿಳಾ ಮಂಡಳಿ ಅಧ್ಯಕ್ಷೆ ಅನಿತಾ ನಾಗರಾಜ ಶೇಟ್, ಕಾರ್ಯದರ್ಶಿ ಸ್ವಾತಿ ಮಡಿವಾಳ, ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾಡಳಿತದ ವತಿಯಿಂದ, ಭಾರತೀಯ ನಾಗರೀಕ ಸೇವಾ ಪರೀಕ್ಷೆ ( ಯುಪಿಎಸ್ಸಿ) ಮತ್ತು ಕರ್ನಾಟಕ ನಾಗರೀಕ ಸೇವಾ ಪರೀಕ್ಷೆ (ಕೆಪಿಎಸ್ಸಿ) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಛಿಸುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಜಿಲ್ಲಾಡಳಿತ ವತಿಯಿಂದ ತರಬೇತಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಕೊನೆಯ ವರ್ಷದ ಪದವಿಯನ್ನು (ಯಾವುದೇ ಪದವಿ) ವ್ಯಾಸಂಗ ಮಾಡುತ್ತಿರುವ ಅಥವಾ ಪದವೀಧರರಾಗಿದ್ದು, ಉದ್ಯೋಗದಲ್ಲಿರುವ / ನಿರುದ್ಯೋಗಿ ವಿದ್ಯಾರ್ಥಿಗಳು ತರಬೇತಿಗೆ ಅರ್ಹರಾಗಿರುತ್ತಾರೆ. ಉಡುಪಿ ನಗರದ ಸಾರ್ವಜನಿಕ ಗ್ರಂಥಾಲಯನ್ನು ತರಬೇತಿ ಕೇಂದ್ರವಾಗಿಸಿಕೊAಡು, ನಿಗಧಿಯಾಗಿರುವ ಪಠ್ಯಾನುಸಾರ ತರಗತಿಗಳು, ಗ್ರಂಥಾಲಯ, ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪತ್ರಿಕೆಗಳು, ನಿಯತಕಾಲಿಕೆಗಳು, ಅಂರ್ತಜಾಲದ ವ್ಯಾಪಕ ಬಳಕೆ, ಗುಂಪು ಚರ್ಚೆಗಳು, ಇತ್ಯಾದಿ ಮೂಲಸೌಕರ್ಯ ಮತ್ತು ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು. ಈ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಯುಪಿಎಸ್ಸಿ/ ಕೆಪಿಎಸ್ಸಿ ಸೇರಿದಂತೆ ಯಾವುದೇ ಸ್ಪರ್ಧಾತ್ಮಕ ವಿಷಯಗಳಲ್ಲಿ ಪರಿಣಿತಿ ಪಡೆಯಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳಿಗೆ ಆನ್ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು https://udupi.nic.in/ ವೆಬ್ಸೈಟ್ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 21 ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಕಟಾವು ಸನ್ನಿಹಿತವಾಗಿದ್ದು, ಹೊರಜಿಲ್ಲೆ ಹಾಗೂ ರಾಜ್ಯಗಳಿಂದ ಕಂಬೈನ್ಡ್ ಹಾರ್ವೆಸ್ಟರ್ಗಳು ಜಿಲ್ಲೆಗೆ ಆಗಮಿಸುತ್ತಿವೆ. ಜಿಲ್ಲೆಯಲ್ಲಿ ಕೂಲಿಯಾಳುಗಳ ಸಮಸ್ಯೆಯಿದ್ದು, ಕಟಾವಿನ ಅವಧಿಯಲ್ಲಿ ಮಳೆ ಸಹ ಬರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಕಂಬೈನ್ಡ್ ಹಾರ್ವೆಸ್ಟರ್ಗಳನ್ನು ಅವಲಂಬಿಸಿದ್ದಾರೆ. ಪೂರಕವಾಗಿ ಜಿಲ್ಲಾಡಳಿತ ಸರ್ಕಾರದ ನೆರವಿನೊಂದಿಗೆ ಸ್ಥಾಪಿಸಲ್ಪಟ್ಟ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯವಿರುವ ಕರ್ತಾರ್ ಮಾದರಿ ಕಂಬೈನ್ಡ್ ಹಾರ್ವೆಸ್ಟರ್ನ ಕಟಾವಿಗೆ ಜಿಲ್ಲಾ ಸಮಿತಿಯಿಂದ ಪ್ರತಿ ಗಂಟೆಗೆ ರೂ. 1,800 ಬಾಡಿಗೆ ದರವನ್ನು ನಿಗದಿಪಡಿಸಲಾಗಿದೆ. ಕೆಲವೊಂದು ಖಾಸಗಿ ಕಂಬೈನ್ಡ್ ಹಾರ್ವೆಸ್ಟರ್ ಮಾಲಕರು ಸ್ಥಳೀಯ ಮಧ್ಯವರ್ತಿಗಳೊಂದಿಗೆ ಸೇರಿ ರೈತರಿಂದ ಭತ್ತ ಕಟಾವಿಗೆ ಹೆಚ್ಚಿನ ಬಾಡಿಗೆ ದರವನ್ನು ಪಡೆಯುತ್ತಿರುವ ಬಗ್ಗೆ ರೈತ ಸಂಘಟನೆಗಳು ಹಾಗೂ ರೈತರಿಂದ ನಿರಂತರವಾಗಿ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿದ್ದು ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಕೇವಲ 8 ಸಂಖ್ಯೆಯ ಕಟಾವು ಯಂತ್ರಗಳು ಮಾತ್ರ ಲಭ್ಯವಿದ್ದು, ಜಿಲ್ಲೆಯ ರೈತರ ಬೇಡಿಕೆಯನ್ನು ಪೂರೈಸಲು ಖಾಸಗಿಯಾಗಿ ಬರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿಶ್ವ ಅಂಚೆ ದಿನಾಚರಣೆ ಪ್ರಯುಕ್ತ ಗುಜ್ಜಾಡಿ ಅಂಚೆ ಕಛೇರಿಯಲ್ಲಿ ಪೋಸ್ಟ್ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಾಂಡುರಂಗ ಅವರನ್ನು ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗುಜ್ಜಾಡಿ ಅಂಚೆ ಕಛೇರಿ ಸಮೀಪ ನಡೆದ ಸರಳ ಕಾರ್ಯಕ್ರಮದಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅವರು ಪಾಂಡುರಂಗ ಅವರನ್ನು ಸನ್ಮಾನಿಸಿದರು. ಗುಜ್ಜಾಡಿ ಅಂಚೆ ಕಛೇರಿಯ ಪೋಸ್ಟ್ ಮಾಸ್ಟರ್ ಕುಮಾರ್, ಝೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ಮಾಜಿ ಅಧ್ಯಕ್ಷ ಲಕ್ಷ್ಮೀಕಾಂತ ಮಡಿವಾಳ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿರಿಯ ನಾಗರಿಕ ವೇದಿಕೆಯ ಮಾಸಿಕ ಸಭೆ ಹಾಗೂ ಸನ್ಮಾನ ಕಾಯ೯ಕ್ರಮ ಇಲ್ಲಿನ ಮಹಾಕಾಳಿ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು. ರಾಜ್ಯ ಪ್ರಶಸ್ತಿ ಪುರಸ್ಕೃತ ಎಸ್. ಜನಾರ್ದನ ಮರವಂತೆ, ಪುಂಡಲೀಕ ನಾಯಕ್ ಅವರನ್ನು ಹಿರಿಯ ನಾಗರಿಕ ವೇದಿಕೆಯಿಂದ ಸನ್ಮಾನಿಸಲಾಯಿತು. ಈ ಸಂದಭ೯ ಹಿರಿಯ ನಾಗರಿಕ ವೇದಿಕೆಯ ಗಣ್ಯರಾದ ಎಂ.ಗೋವಿಂದ, ಎ. ಶ್ರೀನಿವಾಸ್, ಸಂಜೀವ ಆಚಾಯ೯, ವಸಂತ ಹಗ್ಡೆ, ರಾಮ ಮಾಸ್ಟರ್, ಎಂ.ಎನ್ ಶೇರಿಗಾರ್, ರತ್ನ ಹೆಬ್ಬಾರ್, ಗೋವಿಂದ ಬಿಲ್ಲವ, ಕೋಣಿ ವೆಂಕಟೇಶ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತನ್ನ ಸಾತ್ವಿಕ ಹಾಗೂ ಧೀಮಂತ ವ್ಯಕ್ತಿತ್ವದ ಮೂಲಕ ಸಾಮಾಜಿಕ ಅಭಿವೃದ್ಧಿ ಯಲ್ಲಿ ತನ್ನನ್ನು ತೊಡಗಿಸಿಕೊಂಡು ಎಲ್ಲರ ಪ್ರೀತಿ, ವಿಶ್ವಾಸ ಗಳಿಸಿದ ಗೋವಿಂದ ಬಿಜೂರ್ ಅವರು ಬಗ್ಗೆ ಅವರು ಪುತ್ರಿ, ನಿವ್ರತ್ತ ಶಿಕ್ಷಕಿ ಶಶಿಕಲಾ ಬಿಜೂರ್ ಪುಸ್ತಕ ಪ್ರಕಟಿಸಿರುವುದು ಅಭಿನಂದನೀಯವಾಗಿದೆ. ಕುಂದಾಪುರದ ಕೆಲವು ಜನಪ್ರಿಯ ವ್ಯಕ್ತಿಗಳ ಬಗ್ಗೆ ಇಂದಿನ ಪೀಳಿಗೆಯವರಿಗೆ ತಿಳಿದಿಲ್ಲ. ಇಂತಹ ಪುಸ್ತಕಗಳು ಪ್ರಕಟವಾದಾಗ ಅವರ ಬಗ್ಗೆ ಅರಿವು ಮೂಡಿಸಲು ಸಾಧ್ಯವಾಗುತ್ತದೆ ಎಂದು ಜನ್ಮಶತಮಾನಂಗಳದಲ್ಲಿ ಗೋವಿಂದ ಬಿಜೂರ್ ಪುಸ್ತಕ ಬಿಡುಗಡೆ ಮಾಡುತ್ತಾ ಖ್ಯಾತ ವಕೀಲರೂ ಸಾಹಿತಿಗಳೂ ಆದ ಎ ಎಸ್.ಎನ್.ಹೆಬ್ಬಾರ್ ಹೇಳಿದರು. ಅವರು ಕುಂದಾಪುರದ ಬಿ ಆರ್ ರಾಯರ ಹಿಂದೂ ಶಾಲೆಯ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುಸ್ತಕ ಬಿಡುಗಡೆಗೊಳಿಸಿ,ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕುಂದಪ್ರಭ ಸಂಪಾದಕ ಯು.ಎಸ್.ಶೆಣೈ ಮಾತನಾಡಿ ಗೋವಿಂದ ಬಿಜೂರ್ ಓರ್ವ ಅಪರೂಪದ ಸಾತ್ವಿಕ ಸ್ವಭಾವದ ಧೀಮಂತ ನಾಯಕ.ತಮ್ಮ ಸರಳತೆ,ಸಜ್ಜನಿಕೆ, ಸಮಾಜಾಭಿವ್ರೃದ್ಧಿಯ ಕಾಳಜಿಯಿಂದ ಜನಮೆಚ್ಚುಗೆ ಗಳಿಸಿದವರು.ಭಾರತೀಯ ಸಂಸ್ಕ್ರತಿ ಉಳಿಸಿ ಬೆಳೆಸುವಲ್ಲಿ ,ಕುಟುಂಬ ಸದಸ್ಯರೊಂದಿಗೆ ಅವರು ನಡೆಸಿದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ನಡೆಯುತ್ತಿರುವ ೪೭ನೇ ವರ್ಷದ ಶ್ರೀ ಶಾರದೋತ್ಸವ ಸಮಾರಂಭ ಶಾರದಾ ಮೂರ್ತಿಯ ವಿಸರ್ಜನೆಯೊಂದಿಗೆ ಸಂಪನ್ನಗೊಂಡಿತು. ಶ್ರೀ ಶಾರದಾ ಮಂಟಪದ ಬಳಿಯಿಂದ ಪ್ರಾರಂಭಗೊಂಡ ಪುರಮೆರವಣಿ ಮೇಲ್ಗಂಗೊಳ್ಳಿ ಬಾವಿಕಟ್ಟೆ ತನಕ ಸಾಗಿ ಮುಖ್ಯರಸ್ತೆಯ ಮೂಲಕ ಬಂದರು ಪೋರ್ಟ್ ಆಫೀಸಿನ ಬಳಿ ಕೊನೆಗೊಂಡಿತು. ಬಂದರು ಪೋರ್ಟ್ ಆಫೀಸಿನ ಸಮೀಪ ಪಂಚಗಂಗಾವಳಿ ನದಿಯಲ್ಲಿ ಶ್ರೀ ಶಾರದಾ ಮೂರ್ತಿಯ ವಿಗ್ರಹವನ್ನು ಜಲಸ್ತಂಭನ ಮಾಡಲಾಯಿತು. ಪುರಮೆರವಣಿಗೆಯಲ್ಲಿ ಚಂಡೆ ವಾದನ, ಹುಲಿವೇಷ ಹಾಗೂ ಇನ್ನಿತರ ಕಲಾತಂಡಗಳು ಮೆರಗು ನೀಡಿದ್ದವು. ಪುರೋಹಿತರಾದ ಜಿ.ರಾಘವೇಂದ್ರ ನಾರಾಯಣ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಮಿತಿಯ ಗೌರವಾಧ್ಯಕ್ಷ ವೇದಮೂರ್ತಿ ಜಿ.ನಾರಾಯಣ ಆಚಾರ್ಯ, ಸಮಿತಿಯ ಅಧ್ಯಕ್ಷ ಸತೀಶ ಜಿ., ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಮಹಿಳಾ ಮಂಡಳಿ ಅಧ್ಯಕ್ಷೆ ಅನಿತಾ ಎನ್.ಶೇಟ್, ಕಾರ್ಯದರ್ಶಿ ಸ್ವಾತಿ ಮಡಿವಾಳ, ಶ್ರೀ ಶಾರದೋತ್ಸವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತೀಯ ಅಂಚೆ ಇಲಾಖೆ ನೀಡುವ ಪ್ರತಿಷ್ಠಿತ ರಾಷ್ಟ್ರ ಪ್ರಶಸ್ತಿಯು ಉಡುಪಿ ಅಂಚೆ ವಿಭಾಗದ ಬೈಂದೂರು ಅಂಚೆ ಕಚೇರಿಯಲ್ಲಿ ಅಂಚೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿರುವ ಸುರೇಂದ್ರ ಡಿ. ಅವರಿಗೆ ಸತತ ಎರಡನೇ ಬಾರಿ ಲಭಿಸಿದೆ. ಅಂಚೆ ಇಲಾಖೆಯ ಗ್ರಾಮೀಣ ಅಂಚೆ ಜೀವ ವಿಮಾ ವಿಭಾಗದಲ್ಲಿ 2020-21ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದಲ್ಲಿ ಅತಿ ಹೆಚ್ಚಿನ ವಹಿವಾಟು ಮಾಡಿದ ಹಿನ್ನೆಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಇತ್ತೀಚೆಗೆ ಅವರನ್ನು ಬೆಂಗಳೂರಿನ ಕರ್ನಾಟಕ ಪೋಸ್ಟಲ್ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಕಛೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅವರು 13 ವರ್ಷಗಳ ಸೇವಾ ಅವಧಿಯಲ್ಲಿ ಒಂಬತ್ತು ಬಾರಿ ವಿಭಾಗೀಯ ಮಟ್ಟದ, ನಾಲ್ಕು ಬಾರಿ ರಾಜ್ಯ ಮಟ್ಟದ ಮತ್ತು ಇದೇ ವರ್ಷ ಫೆಬ್ರವರಿಯಲ್ಲಿ 2019-20ನೇ ಸಾಲಿನ ರಾಷ್ಟ್ರಪ್ರಶಸ್ತಿಯನ್ನು ಇವರು ಪಡೆದಿದ್ದಾರೆ. ನವದೆಹಲಿಯ ಡಾಕ್ ಭವನದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನಿರೂಪಿಸಲ್ಪಟ್ಟ ಸಮಾರಂಭದಲ್ಲಿ ಕರ್ನಾಟಕ ವೃತ್ತದ ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಶಾರದಾ ಸಂಪತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಎಮ್ಎಸ್ಸಿ ಘಟಕ ಯೋಜನೆಯಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಗೋದಾಮು ಕಟ್ಟಡದ ಕಾಮಗಾರಿಗೆ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್ ಬೀಸಿನಪಾರೆಯಲ್ಲಿ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ರಾಜು ಪೂಜಾರಿ, ಸಹಕಾರಿ ಸಂಘಗಳ ವಲಯ ಮೇಲ್ವಿಚಾರಕರಾದ ಶಿವರಾಮ ಪೂಜಾರಿ, ಜಡ್ಕಲ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ದೇವದಾಸ್ ವಿ.ಜೆ. ಜಡ್ಕಲ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಸತ್ಯನಾರಾಯಣ ಅಡಿಗ, ಮುದುರೂ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರು ಹಾಗೂ ಗುತ್ತಿದಾರರಾದ ನಕ್ಷತ್ರ ಬೋವಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವೆಂಕರಮಣ ಶರ್ಮ. ಸಂಘದ ನಿರ್ದೇಶಕರುಗಳಾದ ಸುರೇಂದ್ರ ನಾಯ್ಕ್, ಮನೋಜ್ ಪಿ.ಜೆ, ಜೋಶಿ ಪಿಪಿ. ಜೋಸೆಫ್ ಕೆ.ಎಮ್ ವಿನೋದ್ ಜೋರ್ಜ್ ನಾರಾಯಣ ಶೆಟ್ಟಿ. ಮಹಾಬಲ ಪೂಜಾರಿ. ಗುರುರಾಜ್ ಪೂಜಾರಿ. ಮುತ್ತ. ರೊಸಮ್ಮ, ಸವಿತಾ ಶೆಟ್ಟಿ ಹಾಗೂ…
