Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಜು.19: ಕಳೆದ ಎರಡು ತಿಂಗಳ ಅವಧಿಯಲ್ಲಿ ಕ್ಷಿಪ್ರಗತಿಯಲ್ಲಿ ಪ್ರಕರಣಗಳನ್ನು ಭೇದಿಸಿದ ವೃತ್ತ ನಿರೀಕ್ಷಕ ಸಂತೋಷ್ ಆನಂದ್ ಕಾಯ್ಕಿಣಿ ಮತ್ತು ಉಪನಿರೀಕ್ಷಕ ಪವನ್ ನಾಯಕ್ ಅವರನ್ನು ಬೈಂದೂರು ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಬಂಟರ ಸಂಘದ ಅಧ್ಯಕ್ಷ ನಾಕಟ್ಟೆ ಜಗನ್ನಾಥ ಶೆಟ್ಟಿ ಸನ್ಮಾನಿಸಿ ಮಾತನಾಡಿ ಎರಡು ತಿಂಗಳಲ್ಲಿ ಈ ಭಾಗದಲ್ಲಿ ನಡೆದ ಸರಣಿ ಕಳ್ಳತನ ಹಾಗೂ ಇತ್ತೀಚಿನ ಹೇನಬೇರು ಕೊಲೆ ಪ್ರಕರಣದ ಆರೋಪಿಗಳನ್ನು ಕೇವಲ 24 ಗಂಟೆಗಳಲ್ಲಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಶಿರೂರು ನಿರ್ಗದ್ದೆ ಹತ್ತಿರ ಬಸ್ಸಿನಲ್ಲಿದ್ದ ಪ್ರಯಾಣಿಕರ ಚಿನ್ನವನ್ನು ಕಳ್ಳತನ ಮಾಡಿದ ಅಪರಾಧಿಗಳನ್ನು 15 ದಿನದೊಳಗೆ ಬಂಧಿಸುವಲ್ಲಿ ಸಫಲರಾಗಿದ್ದಾರೆ. ಇಂತಹ ಸಮಾಜ ಘಾತುಕ ಖದೀಮರ ನಿದ್ದೆಗೆಡಿಸಿದ ಬೈಂದೂರು ಪೋಲೀಸ್ ತಂಡದ ಕಾರ್ಯ ಶ್ಲಾಘನೀಯ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ವೃತ್ತ ನೀರಿಕ್ಷಕ ಸಂತೋಷ್ ಆನಂದ್ ಕಾಯ್ಕಿಣಿ, ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಮತ್ತು ಪ್ರೋತ್ಸಾಹವೇ ಈ ಮೂರು ಸವಾಲಿನ ಪ್ರಕರಣಗಳನ್ನು ಪತ್ತೆಹಚ್ಚಲು ಸಹಕಾರಿಯಾಯಿತು. ಠಾಣೆಯ ಎಲ್ಲಾ ಸಿಬ್ಬಂದಿಗಳು ಕೂಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಥಿ ದೆಸೆಯಿಂದಲೇ ಕಾನೂನಿನ ಅರಿವು, ಮಕ್ಕಳ ಹಕ್ಕುಗಳು ಹಾಗೂ ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳುವುದು ಬಹುಮುಖ್ಯವಾಗಿದೆ. ಸಮಸ್ಯೆಗಳು ಎದುರಾದಾಗ ಚೈಲ್ಡ್ಲೈನ್ ಸಹಾಯವಾಣಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಕಾರ ಪಡೆಯುವ ಅವಕಾಶ ಮಕ್ಕಳಿಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಶರ್ಮಿಳಾ ಎಸ್. ಅವರು ಹೇಳಿದರು. ಅವರು ಸೋಮವಾರ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ವಕೀಲರ ಸಂಘ, ಇಂಡಿಯನ್ ಸೀನಿಯರ್ ಚೆಂಚರ್ಸ್ ಬೈಂದೂರು, ಬೈಂದೂರು ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದೊಂದಿಗೆ ಮಾದರಿ ಶಾಲೆಯಲ್ಲಿ ಆಯೋಜಿಸಲಾದ ಕಾನೂನು ಅರಿವು ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ರಕ್ತ ಚಂದನ ಗಿಡ ನೆಟ್ಟು ಉದ್ಘಾಟಿಸಿದರು. ಮಕ್ಕಳಿಗೆ ಸಂವಿಧಾನಾತ್ಮಕವಾಗಿ ಹಲವು ಹಕ್ಕುಗಳನ್ನು ನೀಡಲಾಗಿದ್ದು ಅದರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳು ಪಠ್ಯದ ಓದಿನ ಜೊತೆಗೆ ಪಠ್ಯೇತರ ಚಟುವಟಿಗಳಲ್ಲಿ ತೊಡಗಿಕೊಳ್ಳುವುದು ಬೌದ್ಧಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹೇನಬೇರು ರಸ್ತೆಯಲ್ಲಿ ಕಾರು ಸಹಿತ ಆನಂದ ದೇವಾಡಿಗ ಎಂಬುವವರನ್ನು ಸುಟ್ಟು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಕುಂದಾಪುರ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಧನೇಶ್ ಮುಗಳಿ ಅವರು ಅಗಸ್ಟ್ 1ರ ತನಕ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದಾರೆ. ಪ್ರಾಸಿಕ್ಯೂಶನ್ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ವರ್ಷಾಶ್ರೀ ವಾದಿಸಿದ್ದರು. ಹೇನಬೇರು ರಸ್ತೆ ಬಳಿ ಜುಲೈ 12ರಂದು ನಡೆದ ಘಟನೆಗೆ ಜಾಡು ಹಿಡಿದು ಹೊರಟ ಪೊಲೀಸರು ಜುಲೈ 14ರ ಬೆಳಿಗ್ಗೆ ಪ್ರಕರಣದ ಪ್ರಮುಖ ಆರೋಪಿಗಳಾದ ಕಾರ್ಕಳದ ಮಾಳ ನಿವಾಸಿ ಸದಾನಂದ ಶೇರಿಗಾರ್ (52), ಹಿರ್ಗಾನ ಶಿವನಗರದ ಶಿಲ್ಪಾ ಪೂಜಾರಿ (30) ಹಾಗೂ ಇವರಿಗೆ ಪರಾರಿಯಾಗಲು ಸಹಕಾರ ನೀಡಿದ ಕಾರ್ಕಳ ಸೂಡ ನಿವಾಸಿಗಳಾದ ಸತೀಶ್ ದೇವಾಡಿಗ (49), ನಿತಿನ್ ದೇವಾಡಿಗ (40) ಅವರನ್ನು ಬಂಧಿಸಿತ್ತು. ಜೂ.14 ಹಾಗೂ 15ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಪ್ರಮುಖ ಆರೋಪಿಗಳಿಬ್ಬರ ಕಸ್ಟಡಿ ಅವಧಿ ಸೋಮವಾರಕ್ಕೆ ಮುಗಿದಿದ್ದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಯುಎಇ: ಯತಿಶ್ರೇಷ್ಠ ಶ್ರೀ ರಾಘವೇಂದ್ರ ಗುರುಸಾರ್ವಭೌಮರ 351ನೇ ಆರಾಧನಾ ಮಹೋತ್ಸವವು ಅರಬ್ ರಾಷ್ಟ್ರದಲ್ಲಿ ಮೊದಲ ಬಾರಿಗೆ ನಡೆಯುತ್ತಿದೆ. ಕೆಲವು ಮನೆಗಳಲ್ಲಿ ಸೀಮಿತವಾಗಿ ನಡೆಯುತ್ತಿದ್ದ ಆರಾಧನಾ ಮಹೋತ್ಸವವನ್ನು ಅಗಸ್ಟ್ 14ರ ಭಾನುವಾರ ಯುಎಇ ಅಜ್ಮಾನ್ ಇಂಡಿಯನ್ ಅಸೋಸಿಯೇಷನ್’ನಲ್ಲಿ ಆಯೋಜಿಸಲಾಗಿದೆ. ಧಾರ್ಮಿಕ ವಿಧಿಯಂತೆ ಆರಾಧನೆಯನ್ನು ಪೂರ್ತಿ ದಿವಸ ಅಚ್ಚುಕಟ್ಟಾಗಿ ನಡೆಸಿಕೊಡುವುದಕ್ಕೆ ಶ್ರೀಮಠದ ವತಿಯಿಂದ ದತ್ತಾತ್ರೆಯ ಜೋಶಿ ಗುರುಗಳು ಅವರ ಶಿಷ್ಯ ವೃಂದದ ಜೊತೆಗೆ ಆಗಮಿಸಲಿದ್ದಾರೆ. ರಾಘವೇಂದ್ರ ಗುರುಗಳ ಆರಾಧನಾ ಮಹೋತ್ಸವದ ವಿಶೇಷತೆಯನ್ನು ಹಾಗೂ ಸನಾತನ ಧರ್ಮದ ವಿಚಾರಗಳನ್ನು ಮನಮುಟ್ಟುವಂತೆ ತಿಳಿಸಿಕೊಡಲು ಶತಾವಧಾನಿ ಆರ್. ಗಣೇಶ್ ಅವರ ಪ್ರಿಯ ಶಿಷ್ಯರಾದ ಅರ್ಜುನ್ ಭಾರದ್ವಾಜ್ ಅವರು ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಯರ ಅಭಿಲಾಷೆಯಂತೆ ಆರಾಧನಾ ಮಹೋತ್ಸವವನ್ನು ಯುಎಇ ಯಲ್ಲಿ ಮೊದಲ ಬಾರಿಗೆ ನಡೆಸಿಕೊಡಲು ಪ್ರಮುಖ ಪಾತ್ರವಹಿಸುತ್ತಿರುವ ವಿಜಯ್, ಸದನ್ ದಾಸ್ ಹಾಗೂ ಮಧು ಇವರುಗಳ ಭಕ್ತಿಶ್ರದ್ಧೆಗೆ ಯುಎಇ ಗುರುರಾಯರ ಭಕ್ತ ವೃಂದ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಭಕ್ತಿ ಶ್ರದ್ಧೆಯಿಂದ ನಡೆಯುತ್ತಿರುವ ಆರಾಧನಾ ಮಹೋತ್ಸವಕ್ಕೆ ರಾಯರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಶುಕ್ರವಾರ ಉಪ್ಪುಂದ ಮಾತೃಶ್ರೀ ಸಭಾಭವನಧಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ವೆಂಕಟರಮಣ ಖಾರ್ವಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ಮೀನುಗಾರಿಕಾ ಋತುವು ಸಂಪದ್ಭರಿತವಾಗಿರಲೆಂದು ಹಾರೈಸಿ ಸಂಘದ ಪ್ರತಿಯೊಬ್ಬ ಸದಸ್ಯರು ಸಂಘದ ಕಾರ್ಯಚಟುವಟಿಕೆಯಲ್ಲಿ ಭಾಗವಹಿಸಿ, ಕಾಲಕಾಲಕ್ಕೆ ಸೂಕ್ತ ಸಲಹೆಗಳನ್ನು ನೀಡುವುದರ ಮುಖೇನ ಸಂಘದ ಅಭಿವೃದ್ಧಿಗಾಗಿ ಶ್ರಮಿಸಬೇಕೆಂದು ತಿಳಿಸಿದರು. ಇದೇ ಸಂಧರ್ಭ ಅಕಾಲಿಕ ಮರಣ ಹೊಂದಿದ ಸಂಘದ ಸದಸ್ಯರಾದ ನಾಗರಾಜ ಮೊಗವೀರ, ಜಯರಾಮ ಖಾರ್ವಿ, ರಾಮ ಖಾರ್ವಿ, ಪುರುಷೋತ್ತಮ ಖಾರ್ವಿ ಇವರ ವಾರೀಸುದಾರರಿಗೆ ತಲಾ ರೂ.1,95,000/- ಮೀನುಗಾರಿಕೆ ಸಂಧರ್ಭ ಮೃತರಾದ ಸಂಘದ ಸದಸ್ಯರಾದ ರಾಮದಾಸ ಖಾರ್ವಿ, ಇವರ ವಾರೀಸುದಾರರಿಗೆ ರೂ.1,50,000/- ಮತ್ತು ಪಟ್ಟೆಬಲೆ ದೋಣಿ ಸದಸ್ಯರಾದ ಚರಣ್ ರಾಜ್ ಖಾರ್ವಿ ಮತ್ತು ಅಣ್ಣಪ್ಪ ಮೊಗವೀರ, ಇವರ ವಾರೀಸುದಾರರಿಗೆ ತಲಾ ರೂ.50,000/- ಮರಣೋತ್ತರ ನಿಧಿ ಚೆಕ್ ಹಾಗೂ ಅರೆಹಾಡಿ ಹಿಂದು ರುದ್ರಭೂಮಿ ನಿರ್ವಹಣಾ ಸಮಿತಿ ಅಭಿವೃದ್ದಿಗೆ ರೂ.50,000/-…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ನಾಗುರಿನ ಸಂದೀಪನ್ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವೇಶ್ವರ ಅಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಪಾಲನಾಧಿಕಾರಿ ಡಾ. ಸರೋಜ ಎಂ. ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರೆಡ ಕ್ರಾಸ್ ಘಟಕದ ವತಿಯಿಂದ “ಯಶಸ್ಸಿನಲ್ಲಿ ಗುರುವಿನ ಪಾತ್ರ” ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈಯ ಇಸ್ಕಾನ್ ಸಂಸ್ಥೆಯ ಲೋಕಭವನ ಮಾತಾಜಿ ಆಗಮಿಸಿ ವ್ಯಕ್ತಿಯ ಜೀವನದಲ್ಲಿ ಒಬ್ಬ ಗುರುವಿನ ಪಾತ್ರ ಯಾವ ರೀತಿಯಲ್ಲಿ ಬಹುಮುಖ್ಯ ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಶುಭಕರಾಚಾರಿ ಉಪಸ್ಥಿತರಿದ್ದರು. ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಪ್ರೊ.ಸತ್ಯನಾರಾಯಣ ಸ್ವಾಗತಿಸಿದರು.ಕಾಲೇಜಿನ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಾಕಾರಿಣಿ ವಿದ್ಯಾರಾಣಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು. ಈ ಸಂದರ್ಭದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಉಡುಪಿಯಿಂದ ಕುಂದಾಪುರಕ್ಕೆ ಭಾನುವಾರ ಹೊರಟ ಖಾಸಗಿ ಬಸ್ಸಿನಲ್ಲಿ ಯುವತಿಯರಿಗೆ ಕಿರುಕುಳ ನೀಡಿದ ಯುವಕರನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಪು ನಿವಾಸಿ ಕೀರ್ತಿ, ಉಚ್ಚಿಲ ನಿವಾಸಿಗಳಾದ ನವೀತ ಮತ್ತು ಸಚೀತಾ ಬಂಧಿತರು. ಉಡುಪಿಯಿಂದ ಕುಂದಾಪುರಕ್ಕೆ ಹೊರಟ ಬಸ್ಸಿನಲ್ಲಿ ಮೂರ್ನಾಲ್ಕು ಯುವತಿಯರು ಏರಿ ಬ್ರಹ್ಮಾವರ ಕಡೆ ಹೊರಟಿದ್ದರು. ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಿದ್ದು, ಮೂವರು ಯುವಕರು ಉಡುಪಿಯಲ್ಲೇ ಹತ್ತಿದ್ದರು. ಬಸ್ ಉಡುಪಿ ಬಿಟ್ಟ ನಂತರ ಯುವಕರು ಪುಂಡಾಟ ಶುರು ಮಾಡಿ ಯುವತಿಯರ ಜಡೆ ಎಳೆದು, ಮೈ ಕೈ ಮುಟ್ಟಲು ಪ್ರಯತ್ನಿಸಿ ಕಿರುಕುಳ ನೀಡಲು ಶುರು ಮಾಡಿದ್ದರು. ಬಸ್‌ನಲ್ಲಿ ಅಷ್ಟೇನು ಪ್ರಯಾಣಿಕರು ಇಲ್ಲದ ಕಾರಣ ಭಯಗೊಂಡ ಯುವತಿಯ ಸಂತೆಕಟ್ಟೆಯಲ್ಲಿ ಬಸ್ ಇಳಿದಿದ್ದಾರೆ. ಸಂತೆಕಟ್ಟೆಯಲ್ಲಿ ಮತ್ತೊಂದು ಬಸ್ ಏರಿ ಯುವತಿಯರು ಪ್ರಯಾಣ ಮುಂದುವರಿಸಿದ್ದಾರೆ. ಬಸ್ ನಿರ್ವಾಹಕನಿಗೆ ತಮಗಾದ ಕಿರುಕುಳ ಬಗ್ಗೆ ಮಾಹಿತಿ ನೀಡಿದ್ದಾರೆ. ಯುವತಿಯರು ಪ್ರಯಾಣಿಸುತ್ತಿದ್ದ ಬಸ್ ಕಂಡಕ್ಟರ್ ಅಲ್ಲಿ ಕುಂದಾಪುರ ಬಸ್ ಏಜೆಂಟರಿಗೆ ವಿಷಯ ಮುಟ್ಟಿಸಿ ಕುಂದಾಪುರ ಪೊಲೀಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಆನಗಳ್ಳಿ ಗ್ರಾಮದ ನಿವಾಸಿ ಡಾ. ಸಂಗೀತಾ ಹೊಳ್ಳ ತಾಜ್ ಮಿಸ್ ಯುನಿವರ್ಸ್ 2022 ಸ್ವರ್ಧೆಯಲ್ಲಿ ವಿಜೇತರಾಗಿದ್ದಾರೆ. ಎನ್ಎಂಸಿ ಕಂಪನಿಯಲ್ಲಿ ಡಾಟಾ ಸೈಂಟಿಸ್ಟ್ ಆಗಿರುವ ಡಾ. ಸಂಗೀತಾ ಹೊಳ್ಳ, ಉತ್ತರಪ್ರದೇಶದ ಆಗ್ರಾ ಕ್ರಿಸ್ಟಲ್ ಸರೋವರ್ ಪ್ರೀಮಿಯರ್ ಹೋಟೆಲ್ನಲ್ಲಿ ಕಳೆದ ತಿಂಗಳು ನಡೆದ ತಾಜ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಶ್ವ ಸುಂದರಿ ವಿಭಾಗದಲ್ಲಿ 25 ಮಂದಿ ಭಾಗವಹಿಸಿದ್ದು, ಸಂಗೀತಾ ಅಂತಿಮ ಸುತ್ತುಗೆ ಆಯ್ಕೆಯಾಗಿದ್ದರು. ಅವರು ಮಿಸ್ ಯುನಿವರ್ಸ್ 2022 ಮತ್ತು ಮಿಸ್ ಯುನಿವರ್ಸ್ ಬ್ಯೂಟಿ ವಿತ್ ಬ್ರೈನ್ ಎಂಬ 2 ಪ್ರಶಸ್ತಿ ಗೆದ್ದಿದ್ದರು. ಈಕೆ ಕುಂದಾಪುರ ಆನಗಳ್ಳಿಯ ಕರ್ಣಾಟಕ ಬ್ಯಾಂಕ್ ಬೆಂಗಳೂರು ಉದ್ಯೋಗಿ ಲಕ್ಷ್ಮೀನಾರಾಯಣ ಹೊಳ್ಳ ಮತ್ತು ದಿ. ನಿರ್ಮಲಾ ಹೊಳ್ಳ ಅವರ ಪುತ್ರಿ. ಆಹಾರ, ವಸತಿ ಮತ್ತು ಮುಖ್ಯವಾಗಿ ಶಿಕ್ಷಣವಿಲ್ಲದೆ ಭಿಕ್ಷೆ ಬೇಡುವ ಹಿಂದುಳಿದ ಮಕ್ಕಳಿಗೆ ಶಿಕ್ಷಣ ನೀಡುವ ಬಯಕೆ ಇದೆ. ರಾಷ್ಟ್ರದ ಒಳಿತಿಗಾಗಿ ಕೆಲಸ ಮಾಡಬೇಕು. ಮೂಲಭೂತ ಶಿಕ್ಷಣ ಮುಖ್ಯವಾಗಿದ್ದು, ಅಜ್ಞಾನದ ಗೋಡೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆ ಎನ್.ಹೆಚ್-66ರ ಸೇತುವೆ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು, ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.ಆಂಧ್ರಪ್ರದೇಶ ಮೂಲದ ಆದಿತ್ಯ ರೆಡ್ಡಿ (18) ಹಾಗೂ ಕಲ್ಲೂರು ತರುಣ್ ಕುಮಾರ ರೆಡ್ಡಿ (19) ಮೃತ ದುರ್ದೈವಿಗಳು. ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿಗಳಾದ ಇವರು, ಮಣಿಪಾಲದಲ್ಲಿ ರೆಂಟ್ ಬೈಕ್ ಪಡೆದು ಮುರುಡೇಶ್ವರಕ್ಕೆ ತೆರಳುತ್ತಿದ್ದ ಸಂದರ್ಭ ಕಂಬದಕೋಣೆಯಲ್ಲಿ ಈ ಘಟನೆ ನಡೆದಿದೆ. ಗಂಗೊಳ್ಳಿಯ 24×7 ಆಪತ್ಭಾಂಧವ ಆಂಬುಲೆನ್ಸ್ ಚಾಲಕ ಇಬ್ರಾಹಿಂ ಗಂಗೊಳ್ಳಿ ಸ್ಥಳಕ್ಕೆ ತೆರಳಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವಲ್ಲಿ ನೆರವಾದರು. ಇವರಿಗೆ ಪ್ರದೀಪ್ ಖಾರ್ವಿ ಉಪ್ಪುಂದ, ಚಾಲಕ ಕೃಷ್ಣ, ನದಿಮ್ ಸಹಕರಿಸಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More