ಕುಂದಾಪ್ರ ಡಾಟ್ ಕಾಂ ಸುದ್ದಿ.ಇನ್ನರ್ವೀಲ್ ಕ್ಲಬ್ ಬೈಂದೂರು ಇದರ 2022-23ನೇ ಸಾಲಿನ ಅಧ್ಯಕ್ಷೆಯಾಗಿ ಭಾನುಮತಿ ಜಯಾನಂದ ಬಿ.ಕೆ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಪಿಂಕಿ ಮೋಬಿ ಕರ್ವಾಲೋ, ಉಪಾಧ್ಯಕ್ಷರಾಗಿ ಆಶಾ ಕಿಶೋರ್, ಜೊತೆ ಕಾರ್ಯದರ್ಶಿಯಾಗಿ ಉಷಾ ಹೆಗ್ಡೆ, ಕೋಶಾಧಿಕಾರಿಯಾಗಿ ರಾಜೀವಿ ಗೋವಿಂದ, ಬುಲೆಟಿನ್ ಸಂಪಾದಕಿ ಸುಜಾತ ರಾವ್, ಪೂರ್ವಾಧ್ಯಕ್ಷರಾಗಿ ಶಾಂತಿ ಪಿರೇರಾ ಆಯ್ಕೆಗೊಂಡಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರ ರಾಷ್ಟ್ರೀಯ ಮಾದಕ ವಸ್ತು ವ್ಯಸನ – ವಿರೋಧಿ ದಿನದ ಅಂಗವಾಗಿ ಮಾದಕ ವಸ್ತು- ವ್ಯಸನದ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ನಡೆಯಿತು. “ಮಾದಕ ವಸ್ತು ಸೇವನೆಯು ನಮ್ಮ ಸಮಾಜದ ಯುವಜನತೆಯ ಭವಿಷ್ಯಕ್ಕೆ ಮಾರಕವಾಗಿದೆ. ಈ ವ್ಯಸನದಿಂದ ಸಂಪೂರ್ಣ ದೂರವಿದ್ದು, ಮಾದಕ ವ್ಯಸನ ಸಂಬಂಧಿತ ಪ್ರಬಲ ಕಾನೂನುಗಳ ಬಗ್ಗೆ ಅರಿವು ಹೊಂದಿರಬೇಕು” ಎಂದು ಕುಂದಾಪುರ ಪೋಲೀಸ್ ಠಾಣಾಧಿಕಾರಿ ಸದಾಶಿವ ಗವರೋಜಿಯವರು ಕರೆ ನೀಡಿದರು. ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಂತರ ರಾಷ್ಟ್ರೀಯ ಮಾದಕ ವ್ಯಸನ ವಿರೋಧಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿ ಮಾದಕ ವ್ಯಸನ ಪಿಡುಗಿನ ಗಂಭೀರ ಪರಿಣಾಮಗಳ ಬಗ್ಗೆ ಜಾಗೃತರಾಗಬೇಕೆಂದು ತಿಳಿಸಿದರು. ಹಿಂದಿ ವಿಭಾಗ ಮುಖ್ಯಸ್ಥೆ ಜಯಶೀಲಾ ಪೈಯವರು ಅತಿಥಿಗಳಿಗೆ ಪುಪ್ಪ ನೀಡಿ ಗೌರವಿಸಿದರು. ಕಾಲೇಜಿನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಆಧ್ಯಾತ್ಮ ಲೋಕದ ಹಲವು ಅದ್ಬುತ ದೃಷ್ಟಾಂತಗಳು ನಮ್ಮ ನೆಲದ ಶ್ರೀಮಂತಿಕೆಯನ್ನು ಹೆಚ್ಚಿಸಿದೆ. ನಾವೆಷ್ಟು ಸಬಲರು, ಸಾಧಕರು ಎಂದರೂ ಸಹ ಭಗವಂತನ ಲೀಲೆಯ ಮುಂದೆ ನಾವು ಶೂನ್ಯರು ಎಂದು ಯಳಜಿತ್ ರಾಮಕೃಷ್ಣ ಕುಟೀರದ ಶ್ರೀ ಸತ್ಯಸ್ವರೂಪಾನಂದ ಸ್ವಾಮೀಜಿ ಹೇಳಿದರು. ಅವರು ದಾಸನಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಷ್ಣು ಸಹಸ್ರನಾಮ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿನಾಡಿ ಭಗವಂತನ ಭಕ್ತಿಯಿಂದ ಮಾತ್ರ ನೆಮ್ಮದಿ ಸಾಧ್ಯ. ದೇವರ ನಾಮಸ್ತುತಿಯಿಂದ ಬದುಕಿಗೆ ಶ್ರೇಯಸ್ಸು ಎಂದರು. ಕಾರ್ಯಕ್ರಮದಲ್ಲಿ ಮಾಜಿ ತಾ. ಪಂ. ಸದಸ್ಯ ಪುಷ್ಪರಾಜ್ ಶೆಟ್ಟಿ, ಮಾಜಿ ಗ್ರಾ.ಪಂ ಸದಸ್ಯ ರಘುರಾಮ ಕೆ. ಪೂಜಾರಿ, ದಾಸನಾಡಿ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗಯ್ಯ ಶೆಟ್ಟಿ, ತಿಮ್ಮಪ್ಪ ಬಿಲ್ಲವ, ಅರುಣ ಕುಮಾರ್ ಶೆಟ್ಟಿ ನಾಕಟ್ಟೆ,ಗಣಪತಿ ಗಾಣಿಗ, ಪತ್ರಕರ್ತ ಅರುಣ ಕುಮಾರ್ ಶಿರೂರು ಉಪಸ್ಥಿತರಿದ್ದರು. ಮಾಧವ ಬಿಲ್ಲವ ಸ್ವಾಗತಿಸಿದರು. ಸಂಘಟಕ ಸಾಧನ್ದಾಸ್ ಶಿರೂರು ಕಾರ್ಯಕ್ರಮ ನಿರ್ವಹಿಸಿದರು. ಶಂಕರ ಬಿಲ್ಲವ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಬೈಂದೂರು ಇದರ 2022-23ನೇ ಸಾಲಿನ 40ನೇ ವರ್ಷದ ನೂತನ ಅಧ್ಯಕ್ಷರಾಗಿ ಎಚ್. ಉದಯ ಆಚಾರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಸುಧಾಕರ ಪಿ, ಉಪಾಧ್ಯಕ್ಷರಾಗಿ ನಿತಿನ್ ಶೆಟ್ಟಿ, ಕೋಶಾಧಿಕಾರಿಯಾಗಿ ಯು. ಪ್ರಕಾಶ್ ಭಟ್, ಪೂರ್ವಾಧ್ಯಕ್ಷರಾಗಿ ಡಾ. ಪ್ರವೀಣ್ ಶೆಟ್ಟಿ ಆಯ್ಕೆಯಾಗಿದ್ದಾರೆ ಜುಲೈ 06ರಂದು ಸಂಜೆ 7 ಗಂಟೆಗೆ ಬೈಂದೂರು ರೋಟರಿ ಸಮುದಾಯ ಭವನದಲ್ಲಿ ಪದಪ್ರದಾನ ಸಮಾರಂಭ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭೂಮಂಡಲದಲ್ಲಿ ಅನೇಕ ಜೀವರಾಶಿಯನ್ನು ಸೃಷ್ಠಿಸಿದ ದೇವರು ಮನುಷ್ಯನನ್ನು ಮಾತ್ರ ಶೇಷ್ಠ ಜೀವಿ ಎಂದು ಪರಿಗಣಿಸಿ ಪ್ರಕೃತಿಯ ರಕ್ಷಣೆ ಜತೆಗೆ ವಿವಿಧ ಜೀವಸಂಕುಲಗಳ ರಕ್ಷಣೆಯ ಜವಾಬ್ದಾರಿ ನೀಡಿದ್ದಾನೆ. ಹಾಗಾಗಿ ಮನುಷ್ಯರು ಸನ್ಮಾರ್ಗದಲ್ಲಿ ಸಾಗುವ ಮೂಲಕ ಸತ್ಕಾರ್ಯಗಳನ್ನು ಮಾಡಿ ಜೀವನದ ಸಾರ್ಥಕತೆಯನ್ನು ಕಾಣಬೇಕು ಎಂದು ಜಿಲ್ಲಾ ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು. ಉಪ್ಪುಂದದ ಇಂದಿರಾ ಗಾಣಿಗ ಇವರಿಗೆ ಇಲ್ಲಿನ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿರ್ಮಿಸಿದ ನೂತನ ಗೃಹದ ಕೀಲಿಕೈಯನ್ನು ಫಲಾನುಭವಿಗೆ ಹಸ್ತಾಂತರಿಸಿ ಮಾತನಾಡಿದರು. ಸತ್ಪಾತ್ರರಿಗೆ ಮಾಡಿದ ದಾನ ಪರಿಪೂರ್ಣ ಎಂದೆನಿಕೊಳ್ಳುತ್ತದೆ. ಅದೇ ರೀತಿ ಟ್ರಸ್ಟಿನ ಅಧ್ಯಕ್ಷ, ಉದ್ಯಮಿ ಗೋವಿಂದ ಬಾಬು ಪೂಜಾರಿ ಇವರು ತನ್ನ ಸಂಪಾದನೆಯ ಒಂದು ಭಾಗವನ್ನು ಈ ಭಾಗದ ಬಡವರ ಅಭ್ಯುದಯಕ್ಕಾಗಿ ವಿನಿಯೋಗಿಸುತ್ತಿರುವುದು ದೇವರಿಗೂ ಪ್ರೀಯವಾದ ಕಾರ್ಯವಾಗಿದೆ. ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಕಳಕಳಿ ಹೊಂದಿರುವ ಇವರು ತಮ್ಮ ಸತ್ಕಾರ್ಯಗಳ ಮೂಲಕ ಶ್ರೇಷ್ಠ ಮಾನವರಲ್ಲಿ ಒಬ್ಬರಾಗಿದ್ದಾರೆ ಎಂದರು. ಕೇರಳದ ಶಿವಗಿರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣದಲ್ಲಿ ಮಾಧ್ಯಮ ಮುಖ್ಯವಲ್ಲ. ನಾನು ಸ್ವತಃ ಕನ್ನಡ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದು ಕಠಿಣ ಪರಿಶ್ರಮದಿಂದ ಈಗ ಉನ್ನತ ಸ್ಥಾನಕ್ಕೆ ತಲುಪಲು ಸಾಧ್ಯವಾಯಿತು. ಜೀವನದಲ್ಲಿ ಗುರಿ ಹಾಗೂ ಅದಕ್ಕೆ ಪೂರಕವಾದ ಪರಿಶ್ರಮವಿದ್ದರೆ ಯಾವುದು ಅಸಾಧ್ಯವಲ್ಲ ಎಂದು ಉಡುಪಿ ವೆಂಟನ ಫೌಂಡೇಶನ್ ಸದಸ್ಯೆ ಹಾಗೂ ಉಡುಪಿಯ 99ಗೇಮ್ಸ್ ಆನ್ ಲೈನ್ ಪ್ರೈವೇಟ್ ಲಿಮಿಟೆಡ್ ನ ಉಪಾಧ್ಯಕ್ಷೆ ಶಿಲ್ಪಾ ಭಟ್ ಹೇಳಿದರು. ಅವರು ಕುಂಭಾಶಿ ಕೊರವಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವೆಂಟನ ಫೌಂಡೇಶನ್ ವತಿಯಿಂದ ಸುಮಾರು ರೂಪಾಯಿ 5.5 ಲಕ್ಷದ ವೆಚ್ಚದಲ್ಲಿ ನಿರ್ಮಿಸಲಾದ ಹೆಣ್ಣು ಮಕ್ಕಳ ಶೌಚಾಲಯವನ್ನು ಹಸ್ತಾಂತರಿಸಿ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಅಂತೆಯೇ ಹೆಣ್ಣು ಮಕ್ಕಳು ವೈಯಕ್ತಿಕ ನೈರ್ಮಲ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಹೆಣ್ಣು ಮಕ್ಕಳಿಗೆ ಅನುಕೂಲವಾಗಲೆಂದು ಈ ಶೌಚಾಲಯವನ್ನು ಫೌಂಡೇಶನ್ ಮೂಲಕ ನಿರ್ಮಿಸಲಾಗಿದೆ. ಇದರ ಮುಂದಿನ ನಿರ್ವಹಣೆ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಕುಂಭಾಶಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ವೇತಾ ಎಸ್ ಆರ್ ಅಧ್ಯಕ್ಷತೆ ವಹಿಸಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು, ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರು ಆಗಿದ್ದ ಜಿ.ಎಸ್. ಆಚಾರ್ ಪುಣ್ಯತಿಥಿ ಆಚರಣೆಯನ್ನು ಜೂನ್ ೨೪ರಂದು ಬೈಂದೂರಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ನ ಪ್ರಧಾನ ಕಛೇರಿಯಲ್ಲಿ ಆಚರಿಸಲಾಯಿತು. ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷರು, ಉಡುಪಿ ಜಿ.ಪಂ. ಮಾಜಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ದಿ.ಜಿ.ಎಸ್ ಆಚಾರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಬಳಿಕ ಮಾತನಾಡಿ ಸಹಕಾರ, ಸಾಮಾಜಿಕ, ರಾಜಕೀಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಜಿ.ಎಸ್ ಆಚಾರ್ ಅವರು ನಮ್ಮೊಡನೆ ಇಲ್ಲದಿದ್ದರೂ ಅವರ ಸಾಧನೆ ನೆನಪಿನಲ್ಲಿಡುವಂತಹದ್ದು. ಅನುಭವಿ ರಾಜಕಾರಣಿಯಾಗಿದ್ದ ಅವರು ಬೈಂದೂರು ಕ್ಷೇತ್ರದಲ್ಲಿ ನಾನು ಸೇರಿದಂತೆ ಹಲವಾರು ಯುವ ನಾಯಕರನ್ನು ಬೆಳೆಸಿದವರು. ಅವರ ಸ್ಪೂರ್ತಿ, ಮಾರ್ಗದರ್ಶನ ಅವರಿಂದ ಕಲಿತ ಎಲ್ಲಾ ನಾಯಕರಲ್ಲಿಯೂ ನೋಡಬಹುದಾಗಿದೆ. ಅವರು ಇಲ್ಲದಿದ್ದರೂ ಅವರ ಆದರ್ಶ ನಮ್ಮೊಡನೆ ಇದೆ. ಅವರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಹೇಳಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಎನ್ಎಫ್ಟಿ ಡಾಟ್ ಎನ್ವೈಸಿ ಸಂಸ್ಥೆ ಅಮೆರಿಕದ ನ್ಯೂಯಾರ್ಕ್ ನಗರದ ಪ್ರತಿಷ್ಠಿತ ಟೈಮ್ಸ್ ಸ್ಪೇರ್ನಲ್ಲಿ ಆಯೋಜಿಸಿದ ನಾಲ್ಕು ದಿನಗಳ ಎನ್ಎಫ್ಟಿ ಕಲಾಕೃತಿಗಳ ಪ್ರದರ್ಶನದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ವ್ಯಂಗ್ಯಚಿತ್ರಕಾರ ಕುಂದಾಪುರದ ಸತೀಶ ಆಚಾರ್ಯ ಅವರ ಕಲಾಕೃತಿ ಪ್ರದರ್ಶನಗೊಂಡಿದೆ. ಅಮೆರಿಕದ ಎನ್ಎಫ್ಟಿ ಡಾಟ್ ಎನ್ವೈಸಿ ಸಂಸ್ಥೆ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿನ ಕಲಾವಿದರಲ್ಲಿ ಸಮನ್ವಯ ಸಾಧಿಸಿ ಅವರನ್ನು ಒಗ್ಗೂಡಿಸುವ ಸದುದ್ದೇಶದಿಂದ ಕಲಾ ಪ್ರದರ್ಶನ ಏರ್ಪಡಿಸಿದ್ದು, ವಿವಿಧ ದೇಶಗಳ ಸಾವಿರಾರು ಕಲಾವಿದರು ಭಾಗವಹಿಸಿದ್ದರು. ಅವುಗಳಲ್ಲಿ 200 ಕಲಾಕೃತಿಗಳನ್ನು ಆಯ್ಕೆ ಮಾಡಿಕೊಂಡು ಟೈಮ್ಸ್ ಸ್ಟೋರ್ ಬಿಲ್ ಬೋರ್ಡ್ನಲ್ಲಿ ಪ್ರದರ್ಶನಕ್ಕೆ ಅವಕಾಶ ನೀಡಲಾಗಿತ್ತು. ಇದರಲ್ಲಿ ಸತೀಶ್ ಆಚಾರ್ಯ ಅವರ ‘ಐ ಕೇರ್’ ಶೀರ್ಷಿಕೆಯ ಎನ್ಎಫ್ಟಿ ಡಿಜಿಟಲ್ ಕಲಾಕೃತಿಯೂ ಒಂದಾಗಿತ್ತು. ಪ್ರದರ್ಶನದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಆರ್ಟ್ಗೆ ಒತ್ತು ನೀಡಲಾಗಿದ್ದು, ತಂತ್ರಜ್ಞಾನದ ಬೆಂಬಲದೊಂದಿಗೆ ಅಧುನಿಕತೆಯತ್ತ ದಾಪುಗಾಲು ಹಾಕುತ್ತಿರುವ ಪ್ರಸ್ತುತ ಕಾಲ ಘಟ್ಟದಲ್ಲಿ ಮಾನವನಗಿಂತ ಯಂತ್ರವೇ ಹೆಚ್ಚು ಮಾನವೀಯತೆ ತೋರಿದರೂ ಆಶ್ಚರ್ಯವಿಲ್ಲ ಎನ್ನುವ ಸಂದೇಶ ಹೊತ್ತಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ 100 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನವದೆಹಲಿಯ ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಲದ ವತಿಯಿಂದ ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ʼನ್ಯಾಷನಲ್ ಕಾನ್ಲೇವ್ʼನಲ್ಲಿ ಬ್ಯಾಂಕಿನ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಲದ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ. ಭಾಗವತ್ ಕಿಸಾನ್ ರಾವ್ ಕರಾಡ್, ಕೇಂದ್ರ ಸಹಕಾರ ಖಾತೆಯ ರಾಜ್ಯ ಸಚಿವ ಬಿ. ಎಲ್ ವರ್ಮ ಪ್ರಶಸ್ತಿ ಪ್ರದಾನ ಮಾಡಿದರು. ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಶೆಟ್ಟಿ ಬ್ಯಾಂಕಿನ ಪರವಾಗಿ ಗೌರವ ಸ್ವೀಕರಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಗ್ರಾಮೀಣ ಹಾಗೂ ಗುಡ್ಡಗಾಡು ಪ್ರದೇಶದಲ್ಲಿನ ರಸ್ತೆ ಹಾಗೂ ತೊರೆಗಳನ್ನು ದಾಟುವ ಸಂದರ್ಭ ಜನ ಮತ್ತು ಜಾನುವಾರುಗಳು ಪ್ರಾಣ ಕಳೆದುಕೊಂಡ ನಿದರ್ಶನಗಳಿವೆ. ಸುತ್ತುಬಳಸಿ ಊರು ಸೇರಬೇಕಾದ ಪರಿಸ್ಥಿತಿಯೂ ಇದ್ದು ಇದನ್ನು ತಡೆಗಟ್ಟಲು ಒಟ್ಟು 634 ಕಾಲು ಸಂಕಗಳನ್ನು ನಿರ್ಮಾಣ ಮಾಡುವ ಅವಶ್ಯಕತೆ ಇದೆ ಎಂದು ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸದಸ್ಯರಾದ ಬಿ. ವೈ. ರಾಘವೇಂದ್ರ ಪ್ರತಿಪಾದಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ನಡೆದ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಸ್ಥಾಯಿ ಸಮಿತಿ ಸಭೆಯಲ್ಲಿ ಬಿ. ವೈ. ರಾಘವೇಂದ್ರ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರವು ಪಶ್ಚಿಮ ಘಟ್ಟಗಳ ಪರ್ವತ ಶ್ರೇಣಿ ಮತ್ತು ಮಲೆನಾಡಿನ ವಿಶಿಷ್ಟ ಭೂಸ್ವರೂಪವನ್ನು ಹೊಂದಿದ್ದು, ಅಂದಾಜು 4,954 ಕುಗ್ರಾಮಗಳಿವೆ. ಮಾನವ ವಾಸವು ಚದುರಿದ ಮತ್ತು ಗುಡ್ಡಗಾಡು ಪರ್ವತಗಳಲ್ಲಿ ಭಾಗದಲ್ಲಿ ಇರುವುದರಿಂದ ಮಳೆಗಾಲದಲ್ಲಿ ತುಂಬಿ ಹರಿಯುವ ಸಣ್ಣ ತೊರೆಗಳನ್ನು ಶಾಲಾ ಮಕ್ಕಳು…
